Author: kannadanewsnow57

ಬೆಂಗಳೂರು : ಮಾನವ-ವನ್ಯಪ್ರಾಣಿ ಸಂಘರ್ಷ ತಪ್ಪಿಸಲು ಡ್ರೋನ್ ಕ್ಯಾಮರಾಗಳ ನಿಗಾ ಹೆಚ್ಚಿಸಿ, ಕೃಪಾಕರ ಸೇನಾನಿ-ಸಂಜಯ್ ಗುಬ್ಬಿ ಸೇರಿದಂತೆ ತಜ್ಞರ ಜೊತೆ ಚರ್ಚಿಸಿ ವೈಜ್ಞಾನಿಕ ಮಾರ್ಗಗಳನ್ನು ರೂಪಿಸಿ. ಇದಕ್ಕಾಗಿ ಅಗತ್ಯ ಸಿಬ್ಬಂದಿ, ಅನುದಾನ ಸೇರಿ ಸರ್ಕಾರದಿಂದ ಎಲ್ಲಾ ನೆರವು ನೀಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ರಾಜ್ಯ ಮಟ್ಟದ ಸಮಗ್ರ ಮಾನವ- ವನ್ಯಜೀವಿ ಸಂಘರ್ಷ ನಿರ್ವಹಣಾ ಕಾರ್ಯತಂತ್ರಗಳನ್ನು ರೂಪಿಸುವುದು ಹಾಗೂ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವ ಸಂಬಂಧ ನಡೆದ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ನೀಡಿದ ಸೂಚನೆಗಳು. ವಯಸ್ಸಾದ ಕಾರಣಕ್ಕೆ ಮತ್ತು ಹೊಸ ಯುವ ಹುಲಿಗಳ ದಾಳಿಯಿಂದ ಗಾಯಗೊಂಡ ಹಾಗೂ ಇನ್ನಿತರೆ ಕಾರಣಗಳಿಂದ ಅರಣ್ಯ ಪ್ರದೇಶದಿಂದ ಹೊರಗೆ ಸಂಚರಿಸುತ್ತಿರುವ 15-20 ಹುಲಿಗಳನ್ನು ಡ್ರೋನ್ ಕ್ಯಾಮರಾ ನೆರವಿನಿಂದ ತಕ್ಷಣ ಹಿಡಿಯಲು ಕ್ರಮ ಜರುಗಿಸಬೇಕು. ಈಗಾಗಲೇ ಎಂಟು ಕುಮ್ಕಿ ಆನೆಗಳನ್ನು ಕಾರ್ಯಾಚರಣೆಗೆ ಬಳಸಲಾಗುತ್ತಿದ್ದು, ಅಗತ್ಯಕ್ಕೆ ತಕ್ಕಂತೆ ಸಿಬ್ಬಂದಿ ಮತ್ತು ಸ್ಕ್ವಾಡ್ ಗಳ ಸಂಖ್ಯೆಯನ್ನು ಸಂಘರ್ಷ ಪೀಡಿತ ಅರಣ್ಯ ಪ್ರದೇಶದಲ್ಲಿ ಬಳಸಬೇಕು. ಮಾನವ ವನ್ಯಜೀವಿ ಸಂಘರ್ಷ ಇರುವ ಪ್ರದೇಶಗಳನ್ನು ಗುರುತಿಸುವುದು…

Read More

ಯಾವುದೇ ವೈದ್ಯಕೀಯ ಪದವಿ ಪಡೆಯದೇ ಜನತೆಗೆ ತಾನು ವೈದ್ಯನೆಂದು ಸುಳ್ಳು ಹೇಳಿ ವೈದ್ಯ ವೃತ್ತಿ ಮಾಡುತ್ತಿದ್ದ ಸಂಡೂರಿನ ತೋರಣಗಲ್ಲು ಗ್ರಾಮದ ಅಭಿಲಾಷ್ ಕ್ಲಿನಿಕ್ ನ ಬಿ.ಎನ್.ವೀರೇಶ್ ಎಂಬುವನ ಕ್ಲಿನಿಕ್ ನ್ನು ಸೀಜ್ ಮಾಡಲಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಯಲ್ಲಾ ರಮೇಶ್ ಬಾಬು ಹೇಳಿದ್ದಾರೆ. ಬಿ.ಎನ್.ವೀರೇಶ್ ಯಾವುದೇ ವೈದ್ಯಕೀಯ ಪದವಿ ಪಡೆಯದೇ ಕೇವಲ 10ನೇ ತರಗತಿಯವರೆಗೆÀ ವಿದ್ಯಾಭ್ಯಾಸ ಮಾಡಿ ಔಷಧಿಗಳ ಬಗ್ಗೆ ಮಾಹಿತಿ ಪಡೆದುಕೊಂಡು ಸಾರ್ವಜನಿಕರಿಗೆ ತಾವು ವೈದ್ಯರೆಂದು ಬಿಂಬಿಸಿ ರೋಗಿಗಳಿಗೆ ಚಿಕಿತ್ಸೆ ನೀಡುತ್ತಿದ್ದನು. ಸಾರ್ವಜನಿಕರಿಂದ ದೂರು ಬಂದ ಹಿನ್ನಲೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಯವರ ಆದೇಶದ ಮೇರೆಗೆ ಸಂಡೂರು ತಾಲ್ಲೂಕು ನೋಡಲ್ ಅಧಿಕಾರಿಯೂ ಆಗಿರುವ ಜಿಲ್ಲಾ ಕ್ಷಯರೋಗ ನಿರ್ಮೂನಾಧಿಕಾರಿ ಡಾ.ಇಂದ್ರಾಣಿ ಮತ್ತು ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಭರತ್ ನೇತೃತ್ವದ ತಂಡವು ದಾಳಿ ನಡೆಸಿ, ಕ್ಲಿನಿಕ್ ನ್ನು ಸೀಜ್ ಮಾಡಿ ಜಿಲ್ಲಾಧಿಕಾರಿಗಳ ಮುಂದಿನ ಕ್ರಮಕ್ಕಾಗಿ ವರದಿ ನೀಡಲಾಗಿದೆ ಎಂದು ತಿಳಿಸಿದ್ದಾರೆ. ಆರೋಗ್ಯದ ದೃಷ್ಟಿಯಿಂದ ಅಧಿಕೃತ ವೈದ್ಯ ಪದವಿ…

Read More

ಪ್ರತಿ ವರ್ಷದಂತೆ, ನವೆಂಬರ್ 14 ರಂದು ಭಾರತದಾದ್ಯಂತ ಮಕ್ಕಳ ದಿನವನ್ನು ಬಹಳ ಉತ್ಸಾಹ ಮತ್ತು ಉತ್ಸಾಹದಿಂದ ಆಚರಿಸಲಾಗುತ್ತಿದೆ. ಈ ದಿನವು ದೇಶದ ಮೊದಲ ಪ್ರಧಾನಿ ಪಂಡಿತ್ ಜವಾಹರಲಾಲ್ ನೆಹರು ಅವರ ಜನ್ಮ ದಿನಾಚರಣೆಯನ್ನು ಸೂಚಿಸುತ್ತದೆ. ಮಕ್ಕಳ ಮೇಲಿನ ಪ್ರೀತಿ ಮತ್ತು ವಾತ್ಸಲ್ಯದಿಂದಾಗಿ ಅವರನ್ನು ಪ್ರೀತಿಯಿಂದ “ಚಾಚಾ ನೆಹರು” ಎಂದು ಕರೆಯಲಾಗುತ್ತಿತ್ತು. ಪಂಡಿತ್ ಜವಾಹರಲಾಲ್ ನೆಹರು ಅವರು ನವೆಂಬರ್ 14, 1889 ರಂದು ಅಲಹಾಬಾದ್ನಲ್ಲಿ (ಈಗ ಪ್ರಯಾಗ್ರಾಜ್) ಜನಿಸಿದರು. ಅವರು ಮಕ್ಕಳ ಹಕ್ಕುಗಳು, ಶಿಕ್ಷಣ ಮತ್ತು ಕಲ್ಯಾಣಕ್ಕಾಗಿ ಪ್ರಬಲ ವಕೀಲರಾಗಿದ್ದರು. ಮಕ್ಕಳ ಅಭಿವೃದ್ಧಿಯು ದೇಶದ ಉಜ್ವಲ ಭವಿಷ್ಯಕ್ಕೆ ಅಡಿಪಾಯ ಎಂದು ಅವರು ನಂಬಿದ್ದರು. ಭಾರತದಲ್ಲಿ ಮಕ್ಕಳ ದಿನಾಚರಣೆಯ ಇತಿಹಾಸ ಆರಂಭದಲ್ಲಿ, ಭಾರತವು ನವೆಂಬರ್ 20 ರಂದು ವಿಶ್ವಸಂಸ್ಥೆಯಿಂದ ಘೋಷಿಸಲ್ಪಟ್ಟ ಸಾರ್ವತ್ರಿಕ ಮಕ್ಕಳ ದಿನವನ್ನು ಆಚರಿಸಿತು. 1964 ರಲ್ಲಿ ನೆಹರು ಅವರ ಮರಣದ ನಂತರ, ಅವರ ಆದರ್ಶಗಳು ಮತ್ತು ಮಕ್ಕಳ ಮೇಲಿನ ಸಮರ್ಪಣೆಯನ್ನು ಸ್ಮರಿಸಲು ಅವರ ಜನ್ಮದಿನವನ್ನು ಮಕ್ಕಳ ದಿನವನ್ನಾಗಿ ಆಚರಿಸಲು ರಾಷ್ಟ್ರೀಯ ಸಮಿತಿಯು…

Read More

ಒಂದು ಸಣ್ಣ ಸೋಂಕು ಕೆಲವೊಮ್ಮೆ ಜೀವಕ್ಕೆ ಅಪಾಯಕಾರಿಯಾದ ರಕ್ತದ ಸೋಂಕಾಗಿ (ಸೆಪ್ಸಿಸ್) ಬದಲಾಗಬಹುದು. ಇದು ಬಹಳ ಬೇಗನೆ ಹರಡುವ ಮತ್ತು ಜೀವಕ್ಕೆ ಅಪಾಯಕಾರಿಯಾಗುವ ಗಂಭೀರ ಸ್ಥಿತಿಯಾಗಿದೆ. ಸೆಪ್ಸಿಸ್ ಇತ್ಯಾದಿಗಳ ಆರಂಭಿಕ ಚಿಹ್ನೆಗಳನ್ನು ಗುರುತಿಸುವುದು ಮುಖ್ಯ, ಏಕೆಂದರೆ ಚಿಕಿತ್ಸೆಯಲ್ಲಿ ಸ್ವಲ್ಪ ವಿಳಂಬವಾದರೂ ಸಹ ಪ್ರಮುಖ ಅಂಗಗಳನ್ನು ಹಾನಿಗೊಳಿಸಬಹುದು ಮತ್ತು ಜೀವಕ್ಕೆ ಅಪಾಯಕಾರಿಯಾಗಬಹುದು. ಈ ಸೋಂಕಿನ ಬಗ್ಗೆ ತಿಳಿದುಕೊಳ್ಳೋಣ. ದೇಹದಲ್ಲಿ ಎಲ್ಲಿಯಾದರೂ ಸೋಂಕು ಇದ್ದಾಗ (ಉದಾಹರಣೆಗೆ, ನ್ಯುಮೋನಿಯಾ, ಮೂತ್ರನಾಳದ ಸೋಂಕು) ಸೆಪ್ಸಿಸ್ ಸಂಭವಿಸುತ್ತದೆ ಮತ್ತು ಪ್ರತಿರಕ್ಷಣಾ ವ್ಯವಸ್ಥೆಯು ಸೋಂಕಿನ ವಿರುದ್ಧ ಹೋರಾಡಲು ಅತಿಯಾಗಿ ಪ್ರತಿಕ್ರಿಯಿಸುತ್ತದೆ. ಇದನ್ನು ಸಾಮಾನ್ಯವಾಗಿ ರಕ್ತ ವಿಷ ಎಂದೂ ಕರೆಯುತ್ತಾರೆ. ಸೆಪ್ಸಿಸ್ನ ಆರಂಭಿಕ ಚಿಹ್ನೆಗಳು ಸಾಮಾನ್ಯ ಜ್ವರ ಲಕ್ಷಣಗಳಿಗೆ ಹೋಲುತ್ತವೆ, ಆದರೆ ಅವು ಹೆಚ್ಚು ತೀವ್ರವಾಗಿರುತ್ತವೆ. ಗಮನಿಸಬೇಕಾದ ಮೊದಲ ಚಿಹ್ನೆ ಅಶೀತ ಅಥವಾ ಅಸಾಮಾನ್ಯವಾಗಿ ಕಡಿಮೆ ದೇಹದ ಉಷ್ಣತೆಯೊಂದಿಗೆ ಹೆಚ್ಚಿನ ಜ್ವರ. ರಕ್ತದ ಸೋಂಕು ಎಚ್ಚರಿಕೆ: ನೀವು ಎಂದಿಗೂ ನಿರ್ಲಕ್ಷಿಸದ ಲಕ್ಷಣಗಳು ಎರಡನೆಯದು ಹೆಚ್ಚಿದ ಹೃದಯ ಬಡಿತ ಮತ್ತು ತ್ವರಿತ ಉಸಿರಾಟ.…

Read More

ನವದೆಹಲಿ : ನರೇಂದ್ರ ಮೋದಿ ಸರ್ಕಾರವು ಸಾರ್ವಜನಿಕ ಖಾಸಗಿ ಸಹಭಾಗಿತ್ವ (ಪಿಪಿಪಿ) ಮಾದರಿಯಲ್ಲಿ ದೇಶಾದ್ಯಂತ 100 ಸೈನಿಕ ಶಾಲೆಗಳನ್ನು ಸ್ಥಾಪಿಸಲು ನಿರ್ಧರಿಸಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದರು. ಶ್ರೀ ಮೋತಿಭಾಯಿ ಆರ್. ಚೌಧರಿ ಸಾಗರ್ ಸೈನಿಕ ಶಾಲೆ (ಎಂಆರ್ಸಿಎಸ್ಎಸ್) ಮತ್ತು ಸಾಗರ್ ಸಾವಯವ ಸ್ಥಾವರದ ಉದ್ಘಾಟನಾ ಸಮಾರಂಭವನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ಉದ್ದೇಶಿಸಿ ಮಾತನಾಡಿದ ಅಮಿತ್ ಶಾ, ಈ ಶಾಲೆಗಳು ಗುಜರಾತ್ನ ಹಲವಾರು ಜಿಲ್ಲೆಗಳ ಮಕ್ಕಳು ಸಶಸ್ತ್ರ ಪಡೆಗಳಲ್ಲಿ ಸೇವೆ ಸಲ್ಲಿಸಲು ದಾರಿ ತೆರೆಯುತ್ತವೆ ಎಂದು ಹೇಳಿದರು. ಶ್ರೀ ಮೋತಿಭಾಯಿ ಆರ್. ಚೌಧರಿ ಸಾಗರ್ ಸೈನಿಕ ಶಾಲೆ (ಎಂಆರ್ಸಿಎಸ್ಎಸ್) ಅನ್ನು ₹50 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗಿದೆ ಮತ್ತು ಸ್ಮಾರ್ಟ್ ತರಗತಿ ಕೊಠಡಿಗಳು, ಹಾಸ್ಟೆಲ್ಗಳು, ಗ್ರಂಥಾಲಯ ಮತ್ತು ಕ್ಯಾಂಟೀನ್ನಂತಹ ಸೌಲಭ್ಯಗಳನ್ನು ಹೊಂದಿದೆ ಎಂದು ಸರ್ಕಾರಿ ಪ್ರಕಟಣೆ ತಿಳಿಸಿದೆ. 100 ಹೊಸ ಸೈನಿಕ ಶಾಲೆಗಳನ್ನು ಸ್ಥಾಪಿಸುವ ನಿರ್ಧಾರ ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ, ಕೇಂದ್ರ ಸರ್ಕಾರವು ಪಿಪಿಪಿ ಮಾದರಿಯಲ್ಲಿ…

Read More

ಬೆಂಗಳೂರು : ಕಾಲೇಜು ಶಿಕ್ಷಣ ಇಲಾಖೆಯ ಸರ್ಕಾರಿ ಕಾಲೇಜುಗಳಲ್ಲಿ 310 ಪ್ರಾಂಶುಪಾಲರು (ಯು.ಜಿ.) ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡುವ ಬಗ್ಗೆ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಕರ್ನಾಟಕ ಶಿಕ್ಷಣ ಇಲಾಖಾ ಸೇವೆಗಳ (ಕಾಲೇಜು ಶಿಕ್ಷಣ ಇಲಾಖೆ) (ಪ್ರಾಂಶುಪಾಲರ ಹುದ್ದೆಗಳ ನೇಮಕಾತಿ) (ಸ್ನಾತಕ ಶಿಕ್ಷಣ) (ವಿಶೇಷ) ನಿಯಮಗಳು 2020 ಮತ್ತು ತಿದ್ದುಪಡಿ ನಿಯಮಗಳು 2022 ರನ್ವಯ 310 ಪ್ರಾಂಶುಪಾಲರು (ಯು.ಜಿ) ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡುವ ಸಂಬಂಧದಲ್ಲಿ ಒಟ್ಟು 779 ಅಭ್ಯರ್ಥಿಗಳಿಂದ ಸ್ವೀಕೃತಗೊಂಡ ದಾಖಲೆಗಳಲ್ಲಿ ಶೈಕ್ಷಣಿಕ ಅರ್ಹತೆಗೆ ಸಂಬಂಧಿಸಿದಂತೆ ಸಲ್ಲಿಸಿರುವ ದಾಖಲೆಗಳನ್ನು ಕರ್ನಾಟಕ ಶಿಕ್ಷಣ ಇಲಾಖಾ ಸೇವೆಗಳ (ಕಾಲೇಜು ಶಿಕ್ಷಣ ಇಲಾಖೆ) (ಪ್ರಾಂಶುಪಾಲರ ಹುದ್ದೆಗಳ ನೇಮಕಾತಿ) (ಸ್ನಾತಕ ಶಿಕ್ಷಣ) (ವಿಶೇಷ) ನಿಯಮಗಳು 2020 ರ ನಿಯಮ 3(1) ರಲ್ಲಿ ತಿಳಿಸಿರುವಂತೆ ಪರಿಶೀಲಿಸಿ, ಈ ಕಛೇರಿಯ ದಿನಾಂಕ:18-06-2025 ರ ಅಧಿಕೃತ ಜ್ಞಾಪನದಲ್ಲಿ ಶೈಕ್ಷಣಿಕವಾಗಿ ಅರ್ಹರಾಗಿರುವ ಅಭ್ಯರ್ಥಿಗಳ ಪಟ್ಟಿಯನ್ನು ಅನುಬಂಧ-1 ರಂತೆ ಹಾಗೂ ಶೈಕ್ಷಣಿಕವಾಗಿ ಅನರ್ಹರಾಗಿರುವ ಅಭ್ಯರ್ಥಿಗಳ ಪಟ್ಟಿಯನ್ನು…

Read More

ಬೆಂಗಳೂರು : ರಾಜ್ಯ ಸರ್ಕಾರದ 2026ನೇ ಸಾಲಿನ ಸಾರ್ವತ್ರಿಕರಜಾದಿನಗಳ ಪಟ್ಟಿಗೆ ಗುರುವಾರ ನಡೆದ ಸಚಿವ ಸಂಪುಟ ಸಭೆ ಮಂಜೂರಾತಿ ನೀಡಿದ್ದು, 20 ಸಾರ್ವತ್ರಿಕ ರಜಾ ದಿನಗಳ ಪಟ್ಟಿಯನ್ನು ರಾಜ್ಯ ಸರ್ಕಾರ ಪ್ರಕಟಿಸಿದೆ. ಒಟ್ಟು 20 ಸಾರ್ವತ್ರಿಕ ರಜೆ ದಿನ ಹಾಗೂ 21 ಪರಿಮಿತ ರಜಾ ದಿನಗಳ ಪಟ್ಟಿಗೆ ಮಂಜೂರಾತಿ ನೀಡಿದ್ದು, ಭಾನುವಾರ ಬರುವ ಮಹಾ ಶಿವರಾತ್ರಿ (ಫೆ.15), ಮಹರ್ಷಿ ವಾಲ್ಮೀಕಿ ಜಯಂತಿ (ಅ.25), ಕನ್ನಡ ರಾಜ್ಯೋತ್ಸವ (ನ.1) ಹಾಗೂ ನರಕ ಚತುರ್ದಶಿ (ನ.8) ಮತ್ತು ಎರಡನೇ ಶನಿವಾರದಂದು ಬರುವ ಮಹಾಲಯ ಅಮವಾಸ್ಯೆಯನ್ನು (ಅ.10) ಸಾರ್ವತ್ರಿಕ ರಜೆ ದಿನಗಳ ಪಟ್ಟಿಯಲ್ಲಿ ನಮೂದಿಸಿಲ್ಲ. ಸಾರ್ವತ್ರಿಕ ರಜಾ ದಿನಗಳಲ್ಲಿ ರಾಜ್ಯಾದ್ಯಂತ ಸರ್ಕಾರಿ ಕಛೇರಿಗಳು ಮುಚ್ಚಲ್ಪಡುತ್ತವೆ. ಕಛೇರಿಯ ಜರೂರು ಕೆಲಸವನ್ನು ವಿಲೇವಾರಿ ಮಾಡುವ ಬಗ್ಗೆ ಇಲಾಖಾ ಮುಖ್ಯಸ್ತರುಗಳು ಸೂಕ್ತ ವ್ಯವಸ್ಥೆ ಮಾಡತಕ್ಕದ್ದು. ಈ ಪಟ್ಟಿಯಲ್ಲಿ ಸೇರಿಸಲಾಗಿರುವ ಮುಸಲ್ಮಾನ ಬಾಂಧವರ ಹಬ್ಬಗಳು ನಿಗಧಿತ ದಿನಾಂಕದಂದು ಬೀಳದಿದ್ದರೆ ಸರ್ಕಾರಿ ಸೇವೆಯಲ್ಲಿರುವ ಮುಸಲ್ಮಾನ ಬಾಂಧವರಿಗೆ ನಿಗಧಿತ ರಜೆಗೆ ಬದಲಾಗಿ ಹಬ್ಬದ ದಿವಸ…

Read More

ಬೆಳಗಾವಿ: ಜಿಲ್ಲೆಯಲ್ಲಿ ಕಬ್ಬು ಬೆಳೆಗಾರರ ಆಕ್ರೋಶದ ಕಿಚ್ಚು ಜ್ವಲಿಸಿದೆ. ರೂ.3,500 ಪ್ರತಿ ಟನ್ ಕಬ್ಬಿಗೆ ಬೆಲೆ ನಿಗದಿ ಪಡಿಸುವಂತೆ ಆಗ್ರಹಿಸಿ ನಡೆಸುತ್ತಿದ್ದಂತ ಹೋರಾಟ ತೀವ್ರ ಸ್ವರೂಪಕ್ಕೆ ತಿರುಗಿದೆ. ಸಕ್ಕರೆ ಕಾರ್ಖಾನೆಯ ಮುಂದೆ ನಿಲ್ಲಿಸಿದ್ದಂತ ಬೈಕ್, ಟ್ರ್ಯಾಕ್ಟರ್, ಟ್ರ್ಯಾಕ್ಟರ್ ಟ್ರಾಲಿ ಸೇರಿದಂತೆ 50 ಕ್ಕೂ ಹೆಚ್ಚು ವಾಹನಗಳಿಗೆ ಬೆಂಕಿ ಹಚ್ಚಿ ಆಕ್ರೋಶವನ್ನು ಹೊರ ಹಾಕಿದ್ದಾರೆ. ಬೆಳಗಾವಿ ಜಿಲ್ಲೆಯ ಮುಧೋಳದ ಸೈದಾಪುರದಲ್ಲಿ ಕಬ್ಬು ಬೆಳೆಗಾರರ ಆಕ್ರೋಶವು ಕಟ್ಟೆ ಹೊಡೆದಿದೆ. ಸೈದಾಪುರದ ಸಕ್ಕರೆ ಕಾರ್ಖಾನೆಯ ಬಳಿಯಲ್ಲಿ ನಿಲ್ಲಿಸಿದ್ದಂತ ವಾಹನಗಳಿಗೆ ಪ್ರತಿಭಟನಾ ನಿರತ ರೈತರು ಬೆಂಕಿ ಹಚ್ಚಿದ್ದಾರೆ. ಬೈಕ್, ಟ್ರ್ಯಾಕ್ಟರ್ ಗೆ ಇಟ್ಟಂತ ಬೆಂಕಿಯು ಕ್ಷಣಾರ್ಥದಲ್ಲಿ ಸಕ್ಕರೆ ಕಾರ್ಖಾನೆ ಮುಂದೆ ನಿಲ್ಲಿಸಿದ್ದಂತ ಟ್ರ್ಯಾಕ್ಟರ್ ಟ್ರಾಲಿಗಳಿಗೆ ತಗುಲಿದ ಪರಿಣಾಮ ಧಗಧಗಿಸಿ ಹೊತ್ತಿ  ಉರಿದಿವೆ. ಬೆಂಕಿಯ ಕೆನ್ನಾಲಿಗೆ ಮುಗಿಲೆತ್ತರಕ್ಕೆ ತಾಗುವಂತೆ ಉರಿದಿವೆ, 50ಕ್ಕೂ ಹೆಚ್ಚು ಟ್ರಾಲಿಗಳು ಬೆಂಕಿಗೆ ಆಹುತಿಯಾಗಿವೆ. ಬೆಂಕಿಯನ್ನು ನಂದಿಸಲು ಅಗ್ನಿಶಾಮಕ ಸಿಬ್ಬಂದಿಗಳು ಹರಸಾಹಸ ಪಟ್ಟಿದ್ದಾರೆ. ಬೆಳಗಾವಿಯ ಸೈದಾಪುರದಲ್ಲಿ ಸಕ್ಕರೆ ಕಾರ್ಖಾನೆ ಮುಂದೆ ನಿಲ್ಲಿಸಿದ್ದಂತ ಕಬ್ಬು ತುಂಬಿದ್ದಂತ ಟ್ರ್ಯಾಕ್ಟರ್…

Read More

ಇಂದಿನ ಅನಾರೋಗ್ಯಕರ ಜೀವನಶೈಲಿಯು ಅನೇಕ ಗಂಭೀರ ಕಾಯಿಲೆಗಳಿಗೆ ಕಾರಣವಾಗುತ್ತಿದೆ. ಕಾಲು ನೋವು ಅವುಗಳಲ್ಲಿ ಒಂದು. ಅನೇಕ ಜನರು ರಾತ್ರಿ ಮಲಗಿದಾಗ ತುರಿಕೆ, ನೋವು, ಜುಮ್ಮೆನಿಸುವಿಕೆ ಅಥವಾ ಕಾಲುಗಳಲ್ಲಿ ಏನಾದರೂ ತೆವಳುವ ಅನುಭವವನ್ನು ಅನುಭವಿಸುತ್ತಾರೆ. ಕೆಲವೊಮ್ಮೆ ಈ ಸಮಸ್ಯೆ ತುಂಬಾ ತೀವ್ರವಾದ ನೋವಾಗಿ ಪರಿಣಮಿಸುತ್ತದೆ. ಇದು ನಿದ್ರೆ ಮಾಡಲು ಕಷ್ಟವಾಗುತ್ತದೆ. ಇದನ್ನು ನರವೈಜ್ಞಾನಿಕ ಸಮಸ್ಯೆ ಎಂದು ಹೇಳಲಾಗುತ್ತದೆ. ಯಾವ ವಿಟಮಿನ್ ಕೊರತೆಯು ಕಾಲು ನೋವಿಗೆ ಕಾರಣವಾಗುತ್ತದೆ? ಕಾಲು ನೋವು ಬರುವ ಸಾಧ್ಯತೆಗಳು ವಯಸ್ಸಾದಂತೆ ಹೆಚ್ಚಾಗುತ್ತವೆ. ನಾವು ವಯಸ್ಸಾದಂತೆ, ಸ್ನಾಯುಗಳು ನೈಸರ್ಗಿಕವಾಗಿ ಕುಗ್ಗುತ್ತವೆ, ಇದು ಈ ಸಮಸ್ಯೆಯನ್ನು ಹೆಚ್ಚಿಸುತ್ತದೆ. ಮಹಿಳೆಯರು ಈ ಸಮಸ್ಯೆಯನ್ನು ಹೆಚ್ಚಾಗಿ ಎದುರಿಸುತ್ತಾರೆ. ವಿಟಮಿನ್ ಡಿ, ಬಿ 12, ಬಿ 1, ಕಬ್ಬಿಣ, ಮೆಗ್ನೀಸಿಯಮ್ ಮತ್ತು ಪೊಟ್ಯಾಸಿಯಮ್ ಕೊರತೆಯಿಂದ ಕಾಲು ನೋವು ಉಂಟಾಗುತ್ತದೆ. ಈ ವಿಟಮಿನ್ಗಳ ಕೊರತೆಯು ಕಾಲುಗಳಲ್ಲಿ ಮರಗಟ್ಟುವಿಕೆ, ಜುಮ್ಮೆನಿಸುವಿಕೆ ಅಥವಾ ಆಯಾಸಕ್ಕೆ ಕಾರಣವಾಗಬಹುದು. ಏನು ತಿನ್ನಬೇಕು? ವಿಟಮಿನ್ ಬಿ 12 ಕೊರತೆಯನ್ನು ನೀಗಿಸಲು, ಕಿತ್ತಳೆ, ದ್ರಾಕ್ಷಿಹಣ್ಣು, ಸೇಬು, ಕಿವಿ,…

Read More

ಬೆಂಗಳೂರು : ಗ್ರಾಮ ಪಂಚಾಯತಿಗಳ ಸಮಗ್ರ ಅಭಿವೃದ್ಧಿಗಾಗಿ ‘ಕಾಯಕ ಗ್ರಾಮ’ ಕಾರ್ಯಕ್ರಮ ಜಾರಿಯಾಗಿದ್ದು,ಈ ಕಾರ್ಯಕ್ರಮದಡಿ ಅಧಿಕಾರಿಗಳು ಪಂಚಾಯತಿಗಳನ್ನು ದತ್ತು ಪಡೆದು ಅಭಿವೃದ್ಧಿಪಡಿಸಲಿದ್ದಾರೆ. ಅತ್ಯುತ್ತಮವಾಗಿ ಅಭಿವೃದ್ಧಿಪಡಿಸಿದ ಅಧಿಕಾರಿಗಳಿಗೆ ಪುರಸ್ಕಾರ ಲಭಿಸಲಿದೆ. ಕಾಯಕ ಗ್ರಾಮ ಎಂದರೇನು? ಅಧಿಕಾರಿಗಳಿಂದ ಅಭಿವೃದ್ಧಿಯಲ್ಲಿ ಹಿಂದುಳಿದ ಗ್ರಾಮ ಪಂಚಾಯತಿಗಳ ದತ್ತು ನಿಯಮಿತ ಭೇಟಿ, ಅಭಿವೃದ್ಧಿ ಯೋಜನೆಗಳ ಅನುಷ್ಠಾನ, ಪರಿಶೀಲನೆ ಅತ್ಯುತ್ತಮವಾಗಿ ಅಭಿವೃದ್ಧಿಪಡಿಸಿದ ಅಧಿಕಾರಿಗಳಿಗೆ ಪುರಸ್ಕಾರ ‘ಕಾಯಕ ಗ್ರಾಮ’ ‘ಕೂಸಿನ ಮನೆ’ ಕೂಸಿನ ಮನೆ ನಿಯಮಿತವಾಗಿ ಕಾರ್ಯಾಚರಣೆಯಲ್ಲಿರುವಂತೆ ನೋಡಿಕೊಳ್ಳುವುದು ಕೂಸಿನ ಮನೆಗೆ ಪ್ರತ್ಯೇಕ ಅಡುಗೆಕೋಣೆ, ಮಕ್ಕಳ ಶೌಚಾಲಯ ಸೇರಿದಂತೆ ಅಗತ್ಯ ಮೂಲ ಸೌಕರ್ಯಗಳನ್ನು ಒದಗಿಸುವುದು ಮಕ್ಕಳಿಗೆ ಪೌಷ್ಟಿಕ ಆಹಾರ ನೀಡುವುದು ಹಾಗು ಆರೋಗ್ಯ ತಪಾಸಣೆ ಮಾಡುವುದು ಗ್ರಾಮೀಣ ಭಾಗದ ಮಕ್ಕಳ ಸಬಲೀಕರಣಕ್ಕೆ ವಿಶೇಷ ಕಾರ್ಯಕ್ರಮ ‘ಕಾಯಕ ಗ್ರಾಮ’ ‘ಶಿಕ್ಷಣ’ ನರೇಗಾ ಯೋಜನೆ ಮೂಲಕ ಸರ್ಕಾರಿ ಶಾಲೆಗಳನ್ನು ಅಭಿವೃದ್ಧಿ ಪಡಿಸುವುದು ಶಾಲೆಯಿಂದ ಹೊರಗುಳಿದ ಎಲ್ಲಾ ಮಕ್ಕಳನ್ನು ಶಾಲೆಗೆ ಮರಳಿ ಕರೆತರುವುದು ಶಾಲೆಗಳಲ್ಲಿ ಸ್ಮಾರ್ಟ್ ಕ್ಲಾಸ್ ಮತ್ತು ಗ್ರಂಥಾಲಯದ ವ್ಯವಸ್ಥೆ ಮಾಡುವುದು, ಫಲಿತಾಂಶದಲ್ಲಿ ಸುಧಾರಣೆ…

Read More