Author: kannadanewsnow57

ವ್ಯಾಟಿಕನ್: ಕ್ಯಾಥೋಲಿಕ್ ಕ್ರಿಶ್ಚಿಯನ್ ನಾಯಕ ಪೋಪ್ ಫ್ರಾನ್ಸಿಸ್ ಅವರ ಅಂತ್ಯಕ್ರಿಯೆ ಏಪ್ರಿಲ್ 26 ರ ಇಂದು ನಡೆಯಲಿದೆ. ವ್ಯಾಟಿಕನ್ ಈ ಮಾಹಿತಿಯನ್ನು ನೀಡಿದೆ. ಅವರ ದೇಹವನ್ನು ಶವಪೆಟ್ಟಿಗೆಯಲ್ಲಿ ಇರಿಸಲಾಗಿದೆ. ಧಾರ್ಮಿಕ ಮುಖಂಡರು ಪಾರ್ಥಿವ ಶರೀರದ ಬಳಿ ಪ್ರಾರ್ಥಿಸಿದರು. ಪೋಪ್ ಫ್ರಾನ್ಸಿಸ್ ಅಂತ್ಯಕ್ರಿಯೆಯ ಸಿದ್ಧತೆಗಳು ಇಂದು ಪ್ರಾರಂಭವಾಗಲಿವೆ. ಕ್ಯಾಥೋಲಿಕ್ ಚರ್ಚ್‌ನ ಕಾರ್ಡಿನಲ್‌ಗಳು (ಪಾದ್ರಿಗಳು) ಇಂದು ವ್ಯಾಟಿಕನ್‌ಗೆ ಆಗಮಿಸಲಿದ್ದಾರೆ. ಅಂತ್ಯಕ್ರಿಯೆಯಲ್ಲಿ ಪ್ರಪಂಚದಾದ್ಯಂತದ ನಾಯಕರು ಮತ್ತು ಸಾಮಾನ್ಯ ಜನರು ಸೇರುತ್ತಾರೆ. ವ್ಯಾಟಿಕನ್ ಸಿಟಿಯಲ್ಲಿ ನಡೆಯಲಿರುವ ಪೋಪ್ ಫ್ರಾನ್ಸಿಸ್ ಅವರ ಅಂತ್ಯಕ್ರಿಯೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಭಾಗವಹಿಸಲಿದ್ದಾರೆ ಎಂದು ವಿದೇಶಾಂಗ ಸಚಿವಾಲಯ (ಎಂಇಎ) ಗುರುವಾರ ತಿಳಿಸಿದೆ. ಮುರ್ಮು ಶುಕ್ರವಾರದಿಂದ ವ್ಯಾಟಿಕನ್ ನಗರಕ್ಕೆ ಎರಡು ದಿನಗಳ ಭೇಟಿ ನೀಡಲಿದ್ದಾರೆ. “ಪೋಪ್ ಫ್ರಾನ್ಸಿಸ್ ಅವರ ಅಂತ್ಯಕ್ರಿಯೆಯಲ್ಲಿ ಭಾಗವಹಿಸಲು ಮತ್ತು ಸರ್ಕಾರ ಮತ್ತು ಭಾರತದ ಜನರ ಪರವಾಗಿ ಸಂತಾಪ ಸೂಚಿಸಲು ರಾಷ್ಟ್ರಪತಿ ದ್ರೌಪದಿ ಮುರ್ಮು ಏಪ್ರಿಲ್ 25 ಮತ್ತು 26 ರಂದು ವ್ಯಾಟಿಕನ್ ಸಿಟಿಗೆ ಭೇಟಿ ನೀಡಲಿದ್ದಾರೆ” ಎಂದು ಎಂಇಎ ತಿಳಿಸಿದೆ.…

Read More

ಮಧ್ಯಪ್ರದೇಶದ ಬಾಲಾಘಾಟ್‌ನಲ್ಲಿ ಮೂವರು ಬುಡಕಟ್ಟು ಹುಡುಗಿಯರ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದೆ. ಕನಿಷ್ಠ 7 ಪುರುಷರು ಅಪ್ರಾಪ್ತ ವಯಸ್ಕರ ಮೇಲೆ ಅತ್ಯಾಚಾರ ನಡೆಸಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಬಾಲಕಿಯರ ಸ್ಥಿತಿ ಗಂಭೀರವಾಗಿದೆ ಎಂದು ವರದಿಯಾಗಿರುವುದರಿಂದ ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಇತ್ತೀಚೆಗೆ ಬೆಳಕಿಗೆ ಬಂದಿರುವ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಘಾಟ್ ಪೊಲೀಸರು ಎಲ್ಲಾ ಏಳು ಆರೋಪಿಗಳನ್ನು ಬಂಧಿಸಿದ್ದಾರೆ. ಭಾರತೀಯ ದಂಡ ಸಂಹಿತೆ (ಐಪಿಸಿ), ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆ ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆಯ ಸಂಬಂಧಿತ ವಿಭಾಗಗಳ ಅಡಿಯಲ್ಲಿ ಪ್ರಕರಣಗಳನ್ನು ದಾಖಲಿಸಲಾಗಿದ್ದು, ಸ್ವಿಫ್ಟ್ ಕ್ರಮ ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ತನಿಖೆ ನಡೆಯುತ್ತಿದೆ ಎಂದು ಅಧಿಕಾರಿಗಳು ದೃಢಪಡಿಸಿದರು ಮತ್ತು ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.

Read More

ಬೆಂಗಳೂರು: 2023 -24ನೇ ಸಾಲಿನ ಗೆಜೆಟೆಡ್ ಪ್ರೊಬೇಷನರಿ ಗ್ರೂಪ್ ಎ ಮತ್ತು ಗ್ರೂಪ್ ಬಿ ವೃಂದದ 384 ಹುದ್ದೆಗಳ ನೇಮಕಾತಿ ಮುಖ್ಯ ಪರೀಕ್ಷೆ ಪ್ರವೇಶ ಪತ್ರವನ್ನು ಕರ್ನಾಟಕ ಲೋಕಸೇವಾ ಆಯೋಗ ಬಿಡುಗಡೆ ಮಾಡಿದ್ದು, ಆಯೋಗದ ಜಾಲತಾಣ http://kpsc.kar.nic.inನಲಿ ಪ್ರವೇಶ ಪತ್ರಗಳನ್ನು ಡೌನ್ಲೋಡ್ ಮಾಡಿಕೊಳ್ಳಬಹುದಾಗಿದೆ. ಮೇ 3, 5, 7 ಮತ್ತು 9 ರಂದು ಮುಖ್ಯ ಪರೀಕ್ಷೆ ನಡೆಯಲಿದೆ. ಪರೀಕ್ಷಾ ವೇಳಾಪಟ್ಟಿಯನ್ನು ಆಯೋಗದ ವೆಬ್ ಸೈಟನ್ ಲ್ಲಿ ಪ್ರಕಟಿಸಲಾಗಿದೆ. ಪೂರ್ವಭಾವಿ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳಲ್ಲಿ ಇದ್ದ ಭಾಷಾಂತರ ದೋಷದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದ 34 ಅಭ್ಯರ್ಥಿಗಳು ಮೇ ತಿಂಗಳಲ್ಲಿ ನಡೆಯುವ ಮುಖ್ಯ ಪರೀಕ್ಷೆಗೆ ಅರ್ಜಿ ಸಲ್ಲಿಸಬಹುದು ಎಂದು ತಿಳಿಸಲಾಗಿದೆ. ಮುಖ್ಯ ಪರೀಕ್ಷೆ ಬರೆಯಲು ಈ ಅಭ್ಯರ್ಥಿಗಳಿಗೆ ಹೈಕೋರ್ಟ್ ಷರತ್ತುಬದ್ಧ ಅವಕಾಶ ಕಲ್ಪಿಸಿದ್ದು, ಅವರು ಆಯೋಗದ ವೆಬ್ಸೈಟ್ ನಲ್ಲಿ ಡೌನ್ಲೋಡ್ ಮಾಡಿಕೊಂಡು ಏ. 28ರೊಳಗೆ ಅರ್ಜಿಯನ್ನು ಭರ್ತಿ ಮಾಡಿ ಮತ್ತು ಮುಖ್ಯ ಪರಿಕ್ಷಾ ಶುಲ್ಕ ಪಾವತಿಸಿ ಅರ್ಜಿ ಸಲ್ಲಿಸುವಂತೆ ತಿಳಿಸಲಾಗಿದೆ. ಮುಖ್ಯ ಪರೀಕ್ಷೆಯ ಅರ್ಜಿ…

Read More

ಕಲಬುರಗಿ : ಕಲಬುರಗಿಯಲ್ಲಿ ಬೆಳ್ಳಂಬೆಳಗ್ಗೆ ಗುಂಡಿನ ದಾಳಿ ನಡೆದಿದ್ದು, ಪೊಲೀಸರು ಇಬ್ಬರು ಅಂತಾರಾಜ್ಯ ದರೋಡೆಕೋರರ ಮೇಲೆ ಫೈರಿಂಗ್ ನಡೆಸಿದ್ದಾರೆ. ಹೌದು, ಕಲಬುರಗಿಯಲ್ಲಿ ಇಬ್ಬರು ಅಂತಾರಾಜ್ಯ ಕಳ್ಳರ ಮೇಲೆ ಪೊಲೀಸರು ಗುಂಡಿನ ದಾಳಿ ನಡೆಸಿ ಬಂಧಿಸಿದ್ದಾರೆ.ಕಲಬುರಗಿಯಲ್ಲಿ ಗ್ಯಾಸ್ ಕಟರ್ ಬಳಸಿ ಎಟಿಎಂನಿಮದ 18 ಲಕ್ಷ ರೂ. ದೋಚಿದ್ದ ಖದೀಮರ ಮೇಲೆ ಪೊಲೀಸರು ಫೈರಿಂಗ್ ನಡೆಸಿದ್ದಾರೆ. ಹರಿಯಾಣ ಮೂಲದ ತಸ್ಲಿಮ್, ಶರೀಫ್ ಬಂಧಿತ ಅಂತಾರಾಜ್ಯ ಕಳ್ಳರಾಗಿದ್ದಾರೆ. ಇಬ್ಬರನ್ನು ಬಂಧಿಸಲು ಹೋಗಿದ್ದ ವೇಳೆ ಕಲಬುರಗಿ ಗ್ರಾಮೀಣ ಪೊಲೀಸರ ಮೇಲೆ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ್ದಾರೆ. ಈ ವೇಳೆ ಪೊಲೀಸರು ಕಳ್ಳರ ಮೊಣಕಾಲಿಗೆ ಫೈರಿಂಗ್ ನಡೆಸಿ ಬಂಧಿಸಿದ್ದಾರೆ. ಘಟನೆಯಲ್ಲಿ ಪಿಎಸ್ ಐ ಬಸವರಾಜ್ ಹಾಗೂ ಇಬ್ಬರು ಪೊಲೀಸರು ಗಾಯಗೊಂಡಿದ್ದಾರೆ.

Read More

ಬೆಂಗಳೂರು : ಸರ್ಕಾರಿ ನೌಕರ ಕ್ರಿಮಿನಲ್ ಕೇಸ್ ನಲ್ಲಿ ದೋಷಿಯಾದ್ರೆ ಪುನಃ ಸೇವೆಯಲ್ಲಿ ಮುಂದುವರೆಯಲು ಅವಕಾಶವಿಲ್ಲ ಎಂದು ಕರ್ನಾಟಕ ಹೈಕೋರ್ಟ್ ಮಹತ್ವದ ತೀರ್ಪು ಪ್ರಕಟಿಸಿದೆ. ಶಿಕ್ಷೆಗೊಳಗಾಗಿದ್ದ ಹಿನ್ನೆಲೆಯಲ್ಲಿ ತನ್ನನ್ನು ಬೆಂಗಳೂರು ನಗರ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯ ಪ್ರಾಂಶುಪಾಲರ ಕಚೇರಿಯಲ್ಲಿ ದ್ವಿತೀಯ ದರ್ಜೆ ಸಹಾಯಕ ಉದ್ಯೋಗದಿಂದ ವಜಾಗೊಳಿಸಿದ ಸರ್ಕಾರದ ಕ್ರಮ ಪ್ರಶ್ನಿಸಿ ನಂಜೇಗೌಡ ಎಂಬಾತ ಸಲ್ಲಿಸಿದ್ದ ಅರ್ಜಿ ತಿರಸ್ಕರಿಸಿದ ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ನೇತೃತ್ವದ ವಿಭಾಗೀಯ ಪೀಠ ಈ ಆದೇಶ ಮಾಡಿದೆ. ನಂಜೇಗೌಡಗೆ 2001ರ ನಡೆದಿದ್ದ ಹಲ್ಲೆ ಪ್ರಕರಣವೊಂದರಲ್ಲಿ 2011ರಲ್ಲಿ 2 ವರ್ಷ ಜೈಲಾಗಿತ್ತು. ಶಿಕ್ಷೆ ಪೂರೈಸಿದ ಬಳಿಕ ಮತ್ತೆ ಸೇವೆಗೆ ಸೇರ್ಪಡೆಗೊಳಿಸುವಂತೆ ನಂಜೇಗೌಡ ಹೈಕೋರ್ಟ್ ಮೊರೆ ಹೋಗಿದ್ದರು. ಕ್ರಿಮಿನಲ್ ಪ್ರಕರಣಗಳಲ್ಲಿ ದೋಷಿಯಾಗಿಜೈಲು ಶಿಕ್ಷೆಗೆ ಒಳಗಾದ ಸರ್ಕಾರಿ ನೌಕರ ಪುನಃ ಸೇವೆಯಲ್ಲಿ ಮುಂದುವರಿಯಲು ಅವಕಾಶವಿಲ್ಲ ಎಂದು ಹೈಕೋರ್ಟ್ ಸ್ಪಷ್ಟಪಡಿಸಿದೆ.

Read More

ಶ್ರೀನಗರ : ಜಮ್ಮುಕಾಶ್ಮೀರದ ಪಹಲ್ಗಾಮ್ ನಲ್ಲಿ ನಡೆದ ಉಗ್ರ ದಾಳಿಗೆ ಪ್ರತೀಕಾರವಾಗಿ ಭಾರತೀಯ ಸೇನೆ ಕಾರ್ಯಾಚರಣೆ ನಡೆಸುತ್ತಿದ್ದು, ಮತ್ತೊಬ್ಬ ಉಗ್ರನ ಮನೆ ಧ್ವಂಸ ಮಾಡಿದೆ. ಹೌದು, ಪಹಲ್ಗಾಮ್ ನರಮೇಧಕ್ಕೆ ಭಾರತೀಯ ಸೇನೆಯಿಂದ ಪ್ರತೀಕಾರ ತೀರಿಸಿಕೊಳ್ಳುತ್ತಿದ್ದು, ಕಾಶ್ಮೀರದಲ್ಲಿ ಸೇನಾ ಕಾರ್ಯಾಚರಣೆ ಮತ್ತಷ್ಟು ತೀವ್ರಗೊಂಡಿದ್ದು, ಜೈಶ್ ಎ ಮೊಹಮ್ಮದ್ ಸಂಘಟನೆಯ ಉಗ್ರನ ಮನೆ ಧ್ವಂಸ ಮಾಡಿದೆ. ಪುಲ್ವಾಮದ ಮುರ್ರಾನ್ ನಲ್ಲಿ ಅಹ್ಸಾನ್ ಮನೆ ಧ್ವಂಸ ಮಾಡಲಾಗಿದೆ. ಈಗಾಗಲೇ ಭಾರತೀಯ ಸೇನೆ ಹಲವು ಉಗ್ರರನ್ನು ಹುಡುಕಿ ಹುಡುಕಿ ಕೊಲ್ಲುತ್ತಿದ್ದು, ಇದೀಗ ಮತ್ತೊಬ್ಬ ಉಗ್ರನ ಮನೆ ಧ್ವಂಸ ಮಾಡಿದೆ.

Read More

ಬೆಂಗಳೂರು: ಇನ್ಮುಂದೆ ರಾಜ್ಯದಲ್ಲಿ ಎಲ್ಲೇ ಅಕ್ರಮ ಹಾಗೂ ಅನಧಿಕೃತ ಬಡಾವಣೆ ನಿರ್ಮಾಣ ಮಾಡಿದ್ದೇ ಆದಲ್ಲಿ, ಅಂತಹ ಬಡಾವಣೆಗಳನ್ನು ಸರ್ಕಾರ ಮುಟ್ಟುಗೋಲು ಹಾಕಿಕೊಳ್ಳುವುದಾಗಿ ಕಂದಾಯ ಸಚಿವ ಕೃಷ್ಣಬೈರೇಗೌಡ ಎಚ್ಚರಿಸಿದ್ದಾರೆ. ವಿಕಾಸಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದಂತ ಅವರು, ರಾಜ್ಯ ಸರ್ಕಾರದಿಂದ ನೋಂದಣಿಯಿಲ್ಲದೇ, ಅನುಮತಿ ಇಲ್ಲದೇ, ಅನಧಿಕೃತ, ಅಕ್ರಮ ಬಡಾವಣೆ ನಿರ್ಮಾಣದ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಿದೆ. ಹೀಗೆ ನಿರ್ಮಾಣ ಮಾಡುತ್ತಿರುವುದು ಸಹಿಸೋದಿಲ್ಲ. ರಾಜ್ಯಾಧ್ಯಂತ ಅನಧಿಕೃತ ಬಡಾವಣೆಗಳಿಗೆ ಕಡಿವಾಣ ಹಾಕುವುದಾಗಿ ತಿಳಿಸಿದರು. ಈಗಾಗಲೇ ಸುಪ್ರೀಂ ಕೋರ್ಟ್ ನಿಂದ ಅನಧಿಕೃತ ಬಡಾವಣೆ ವಿರುದ್ಧ ಕ್ರಮ ಕೈಗೊಳ್ಳಲು ನಿರ್ದೇಶನವಿದೆ. ಈ ಬಗ್ಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಕೂಡ ಕ್ರಮ ಆಗಬೇಕು ಎಂಬುದಾಗಿ ತಿಳಿಸಿದ್ದಾರೆ. ರಾಜ್ಯದ ಅನೇಕ ಕಡೆಯಲ್ಲಿ ಕೃಷಿ ಜಮೀನಿನಲ್ಲೇ ಅನಧಿಕೃತ ಬಡಾವಣೆ ನಿರ್ಮಾಣ ಮಾಡಲಾಗುತ್ತಿದೆ. ಇದನ್ನು ನಾವು ಸಹಿಸೋದಿಲ್ಲ ಎಂದರು. ಇನ್ಮುಂದೆ ಅನಧಿಕೃತ, ಅಕ್ರಮ ಬಡಾವಣೆಗಳನ್ನು ನಿರ್ಮಾಣ ಮಾಡಿದರೇ ಅವುಗಳನ್ನು ಸರ್ಕಾರ ಮುಟ್ಟುಗೋಲು ಹಾಕಿಕೊಳ್ಳೋಲಾಗುತ್ತದೆ. ಈ ಬಗ್ಗೆ ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಯಾರು ಅಕ್ರಮ ಬಡಾವಣೆ ನಿರ್ಮಾಣ…

Read More

ಬೆಂಗಳೂರು : ರಾಜ್ಯದಲ್ಲಿ ಜಾತಿ ಗಣತಿ ಮರು ಸಮೀಕ್ಷೆಗೆ ಆಗ್ರಹಿಸಲು ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪ ನಿವಾಸದಲ್ಲಿ ನಡೆದ ಒಕ್ಕಲಿಗರು, ಲಿಂಗಾಯತ ನಾಯಕರ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದೆ. ಶಾಮನೂರು ಶಿವಶಂಕರಪ್ಪ ನಿವಾಸದಲ್ಲಿ ನಡೆದ ಸಭೆಯಲ್ಲಿ, ಜಾತಿ ಗಣತಿ ಮರು ಸಮೀಕ್ಷೆಗೆ ಆಗ್ರಹಿಸಲಾಗಿದ್ದು, ಲಿಂಗಾಯಿತ, ಒಕ್ಕಲಿಗ ಮಠಾಧೀಶರನ್ನು ಭೇಟಿಯಾಗಿ ಚರ್ಚಿಸುವುದು, ಅವರನ್ನು ವಿಶ್ವಾಸದ ಪಡೆದುಕೊಂಡು ಮುಂದಿನ ಹೆಜ್ಜೆ ಇಡುವುದು, ಕಳೆದ ಬಾರಿ ಮೂಡಿದ್ದ ಗೊಂದಲ ಆಗದಂತೆ ಎಚ್ಚರಿಕೆ ವಹಿಸುವುದು, ಈಗ ಆ ರೀತಿ ಆಗದಂತೆ ಕಾನೂನು ಹೋರಾಟ ಮತ್ತು ಬೀದಿಗಿಳಿದು ಹೋರಾಟ ನಡೆಸಲು ಸಮುದಾಯದ ನಾಯಕರು ಮುಂದಾಗಿದ್ದಾರೆ ಎಂದು ತಿಳಿದುಬಂದಿದೆ. ಲಿಂಗಾಯಿತ, ಒಕ್ಕಲಿಗ ಸಮುದಾಯದ ನಾಯಕರ ಸಭೆಯಲ್ಲಿ ಜಾತಿ ಗಣತಿ ಮರು ಸಮೀಕ್ಷೆಗೆ ಆಗ್ರಹಿಸಲು ನಿರ್ಧಾರ ಕೈಗೊಳ್ಳಲಾಗಿದೆ. ಈ ವಿಚಾರದಲ್ಲಿ ಹಿಂದುಳಿದವರಲ್ಲೂ ಅಸಮಾಧಾನ ಶುರುವಾಗಿದ್ದು, ಅಂಥವರನ್ನು ಒಗ್ಗೂಡಿಸುವ ಜವಾಬ್ದಾರಿಯನ್ನು ಒಕ್ಕಲಿಗ ನಾಯಕರು ವಹಿಸಿಕೊಂಡಿದ್ದಾರೆ. ಅಸಮಾಧಾನಿತ ಎಲ್ಲರನ್ನು ಒಗ್ಗೂಡಿಸಿಕೊಂಡು ಹೋರಾಟ ನಡೆಸಲು ಸಭೆಯಲ್ಲಿ ತೀರ್ಮಾನಿಸಲಾಗಿದೆ.

Read More

ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದಿಂದ 2025-26ನೇ ಸಾಲಿಗೆ ಅರಿವು ಶೈಕ್ಷಣಿಕ ಸಾಲ ಯೋಜನೆಯನ್ನು ಪರಿಣಾಮಕಾರಿಯಾಗಿ ಅನುಷ್ಟಾನಗೊಳಿಸಲು ಮತೀಯ ಅಲ್ಪಸಂಖ್ಯಾತರಾದ ಮುಸ್ಲಿಂ, ಕ್ರಿಶ್ಚಿಯನ್, ಜೈನ್ಸ್, ಬೌದ್ಧರು, ಸಿಖ್ಖರು, ಪಾರ್ಸಿಗಳು ಮತ್ತು ಆಂಗ್ಲೋ ಇಂಡಿಯನ್ ಸಮುದಾಯದ ವಿದ್ಯಾರ್ಥಿಗಳಿಂದ ಸಿಇಟಿ, ನೀಟ್ ಮೂಲಕ ವೃತ್ತಿಪರ ಕೋರ್ಸ್‍ಗಳಿಗೆ ಪ್ರದೇಶ ಪಡೆಯಬಯಸುವ ವಿದ್ಯಾರ್ಥಿಗಳಿಗೆ ನಿಗಮದಿಂದ ಒದಗಿಸುವ ಅರಿವು ಯೋಜನೆಯಡಿ ಸಾಲ ಸೌಲಭ್ಯವನ್ನು ಒದಗಿಸಲು ವಿದ್ಯಾರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಮೇ 23 ಅರ್ಜಿ ಸಲ್ಲಿಸಲು ಕೊನೆಯ ದಿನ. ನಿಗಮದ ವೆಬ್‍ಸೈಟ್ kmdconline.karnataka.gov.in ತೆರೆದು ಲಿಂಕ್‍ಗೆ ಕ್ಲಿಕ್ ಮಾಡಬೇಕು. ನಂತರ ಅರ್ಜಿಯನ್ನು ಭರ್ತಿ ಮಾಡಿ ಪ್ರಿಂಟ್ ಕಾಪಿಯನ್ನು ಜಿಲ್ಲಾ ಕಛೇರಿಗೆ ಸಲ್ಲಿಸಬೇಕು. ಅಂತಹ ವಿದ್ಯಾರ್ಥಿಗಳು ಭರಿಸಬೇಕಾದ ಬೋಧನಾ ಶುಲ್ಕಕ್ಕಾಗಿ ನಿಗಮದಿಂದ ಮಂಜೂರು ಮಾಡುವ ಸಾಲವನ್ನು ಅವರು ವ್ಯಾಸಂಗ ಮಾಡುವ ಕಾಲೇಜಿಗೆ ಮುಂಚಿತವಾಗಿ ನೇರವಾಗಿ ಹಣಪಾವತಿ ಮಾಡಲಾಗುವುದು. ಆನ್‍ಲೈನ್ ಅರ್ಜಿಯನ್ನು ಕಂಪ್ಯೂಟರ್ ನಲ್ಲಿ ಭರ್ತಿ ಮಾಡಿದ ಕೂಡಲೇ ಅರ್ಜಿಯ ಪ್ರಿಂಟೌಟನ್ನು ತೆಗೆದುಕೊಂಡು SSLC, PUC Marks Card, Adhar card,…

Read More

ಬೆಂಗಳೂರು: ಕರ್ನಾಟಕ ಹೈಕೋರ್ಟ್ ಉಬರ್, Rapido ಬೈಕ್ ಟ್ಯಾಕ್ಸಿ ಸೇವೆಯನ್ನು ಸ್ಥಗಿತಗೊಳಿಸುವಂತೆ ಆದೇಶಿಸಿತ್ತು. ಈ ಆದೇಶದಂತೆ ರಾಜ್ಯಾಧ್ಯಂತ ಉಬರ್, Rapido ಬೈಕ್ ಟ್ಯಾಕ್ಸಿ ಸೇವೆಯನ್ನು ಸ್ಥಗಿತಗೊಳಿಸುವಂತೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಆದೇಶಿಸಿದ್ದಾರೆ. ಈ ಸಂಬಂಧ ಇಂದು ಸಾರಿಗೆ ಇಲಾಖೆಯ ಕಾರ್ಯದರ್ಶಿ, ಸಾರಿಗೆ ಮತ್ತು ರಸ್ತೆ, ಸುರಕ್ಷತೆ ಆಯುಕ್ತರಿಗೆ ಪತ್ರ ಬರೆದಿರುವಂತ ಅವರು, ಕರ್ನಾಟಕ ಉಚ್ಚ ನ್ಯಾಯಾಲಯವು WP No.6421/2022 (MV) c/w WP No.14627/2021 (MV), WP No.19869/2021 (MV), WP No.24569/2023 (MV) (Uber India Systems Pvt.Ltd. Mumbi, Gurgaon & Bangalore and others V/S State of Karnataka, Rep.by the Secretary, Department of Transport, Bangalore and others) ಸಂಬಂಧಿಸಿದಂತೆ ದಿನಾಂಕ:02-04-2025 ರಂದು ನೀಡಿದ ಆದೇಶದ ಪುಟ ಸಂಖ್ಯೆ 70 ರಲ್ಲಿ ಕಂಡಿಕೆ (ಬಿ) ನಲ್ಲಿ, ಕೆಳಕಂಡಂತೆ ಆದೇಶ ನೀಡಿರುತ್ತದೆ ಎಂದಿದ್ದಾರೆ. The petitioners (M/s Uber India Systems Pvt.Ltd., M/s Roppen…

Read More