Author: kannadanewsnow57

ಬೆಂಗಳೂರು: ಪಿಂಚಣಿಯು ಸರ್ಕಾರದಿಂದ ನೇರವಾಗಿ ವೇತನ ಪಡೆಯುವ ಸರ್ಕಾರಿ ನೌಕರರಿಗೆ ಮಾತ್ರ ಅನ್ವಯಿಸುತ್ತದೆ ಎಂದು ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಅಕಾಡೆಮಿ ಮತ್ತು ಮಂಡಳಿಯ ನೌಕರರಿಗೆ ಪಿಂಚಣಿ ಪಾವತಿಸುವಂತೆ ಏಕಸದಸ್ಯ ಪೀಠ ನೀಡಿದ್ದ ಆದೇಶ ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿ ಪುರಸ್ಕರಿಸಿದ ನ್ಯಾಯಮೂರ್ತಿಗಳಾದ ಅನು ಶಿವರಾಮನ್ ಮತ್ತು ವಿಜಯಕುಮಾರ್ ಎ.ಪಾಟೀಲ್ 9 ಅವರಿದ್ದ ವಿಭಾಗೀಯ ಪೀಠವು ಕರ್ನಾಟಕ ಮಾಧ್ಯಮ ಅಕಾಡೆಮಿ ಮತ್ತು ಮದ್ಯಪಾನ ಸಂಯಮ ಮಂಡಳಿಯ ನೌಕರರು ಸರ್ಕಾರಿ ನೌಕರರಲ್ಲದ ಕಾರಣ ಪಿಂಚಣಿಗೆ ಅರ್ಹರಲ್ಲ ಎಂದು ಹೈಕೋರ್ಟ್ ತೀರ್ಪು ನೀಡಿದೆ. ನಿಯಮಗಳ ಪ್ರಕಾರ, ಪಿಂಚಣಿಯು ಸರ್ಕಾರದಿಂದ ನೇರವಾಗಿ ವೇತನ ಪಡೆಯುವ ಸರ್ಕಾರಿ ನೌಕರರಿಗೆ ಮಾತ್ರ ಅನ್ವಯಿಸುತ್ತದೆ. ಆದರೆ, ಇತರ ಸಂಸ್ಥೆಗಳ ನೌಕರರಿಗೆ ಪಿಂಚಣಿ ವಿಸ್ತರಿಸಿದ ಉದಾಹರಣೆಗಳನ್ನು ಗಮನಿಸಿರುವ ನ್ಯಾಯಪೀಠವು ಮಾಧ್ಯಮ ಅಕಾಡೆಮಿ ಮತ್ತು ಮದ್ಯಪಾನ ಸಂಯಮ ಮಂಡಳಿ ನೌಕರರು ಸಲ್ಲಿಸಿದ ಮನವಿಯ ಬಗ್ಗೆ 4 ತಿಂಗಳೊಳಗೆ ಸೂಕ್ತ ನಿರ್ಧಾರ ಕೈಗೊಳ್ಳುವಂತೆ ಸರ್ಕಾರಕ್ಕೆ ಆದೇಶಿಸಿದೆ.

Read More

ಬೆಳಗಾವಿ: ಡಿಸೆಂಬರ್ 9 ರ ಬೆಳಗ್ಗೆ ರೈತರ ಬೃಹತ್ ಪ್ರತಿಭಟನೆ ನಡೆಸಿ, ಸುವರ್ಣಸೌಧಕ್ಕೆ ಮುತ್ತಿಗೆ ಹಾಕಲಿದ್ದೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ತಿಳಿಸಿದ್ದಾರೆ. ಭ್ರಷ್ಟ ಕಾಂಗ್ರೆಸ್ ಸರ್ಕಾರದ ರೈತವಿರೋಧಿ ನೀತಿಯನ್ನು ಖಂಡಿಸಿ ನಡೆಯುವ ಹೋರಾಟದ ಸ್ಥಳ ಮಾಲಿನಿ ಸಿಟಿ ಮೈದಾನಕ್ಕೆ ಭೇಟಿ ನೀಡಿದ ಬಳಿಕ ಅವರು ಮಾಧ್ಯಮಗಳ ಜೊತೆ ಮಾತನಾಡಿದರು. ಬೆಳಗಾವಿ ಜಿಲ್ಲೆಯ ಶಾಸಕರು, ವಿಧಾನಪರಿಷತ್ ಸದಸ್ಯರು, ಬೆಳಗಾವಿ, ಅಕ್ಕಪಕ್ಕದ ಜಿಲ್ಲೆಗಳ ರೈತರು ಭಾಗವಹಿಸುತ್ತಾರೆ ಎಂದರು. ಪ್ರತಿಭಟನೆಯಲ್ಲಿ ಕನಿಷ್ಠ 20-25 ಸಾವಿರ ಜನರು ಸೇರುತ್ತಾರೆ ಎಂದು ಪ್ರಶ್ನೆಗೆ ಉತ್ತರ ಕೊಟ್ಟರು. ಈ ಸರಕಾರ ಕಣ್ಣಿದ್ದೂ ಕುರುಡನಂತೆ, ಕಿವಿಯಿದ್ದೂ ಕಿವುಡನಂತೆ ನಟಿಸುತ್ತಿದೆ ಎಂದು ಅವರು ಟೀಕಿಸಿದರು. ಪರಿಹಾರದ ವಿಚಾರ ಕೇಳಿದರೆ ಕೇಂದ್ರದ ಮೇಲೆ ಆರೋಪಿಸುತ್ತಾರೆ ಎಂದು ಆಕ್ಷೇಪಿಸಿದರು. ರಾಜ್ಯ ಸರಕಾರಕ್ಕೆ ಜವಾಬ್ದಾರಿಯೇ ಇಲ್ಲ ಎಂದು ದೂರಿದರು. ಕಬ್ಬು ಬೆಳೆಗಾರರ ಸಮಸ್ಯೆ ಇನ್ನೂ ಸಂಪೂರ್ಣವಾಗಿ ಇತ್ಯರ್ಥ ಆಗಿಲ್ಲ. ಕೇಂದ್ರವು ಮೆಕ್ಕೆ ಜೋಳಕ್ಕೆ 2400 ರೂ. ಕನಿಷ್ಠ ಬೆಂಬಲ ಬೆಲೆ ನಿಗದಿ…

Read More

ನವದೆಹಲಿ : “₹500 ಕೋಟಿ ಸೂಟ್ಕೇಸ್ ನೀಡುವವರು ಮುಖ್ಯಮಂತ್ರಿಯಾಗುತ್ತಾರೆ” ಎಂಬ ಹೇಳಿಕೆ ನೀಡಿದ ಪಂಜಾಬ್ ನ ಮಾಜಿ ಶಾಸಕಿ ಮತ್ತು ಕ್ರಿಕೆಟಿಗ ಮತ್ತು ರಾಜಕಾರಣಿ ನವಜೋತ್ ಸಿಂಗ್ ಸಿಧು ಅವರ ಪತ್ನಿ ನವಜೋತ್ ಕೌರ್ ಸಿಧು ಅವರನ್ನು ಕಾಂಗ್ರೆಸ್ ಅಮಾನತುಗೊಳಿಸಿದೆ. ಇದನ್ನು ರಾಜ್ಯ ಕಾಂಗ್ರೆಸ್ ಮುಖ್ಯಸ್ಥ ಅಮರಿಂದರ್ ಸಿಂಗ್ ರಾಜಾ ವಾರಿಂಗ್ ಅವರು X ನಲ್ಲಿ ಪೋಸ್ಟ್ ಮಾಡುವ ಮೂಲಕ ಘೋಷಿಸಿದ್ದಾರೆ, ಅದರಲ್ಲಿ ಅವರು ಪಕ್ಷದ ಅಧಿಕೃತ ಪತ್ರವನ್ನು ಹಂಚಿಕೊಂಡಿದ್ದಾರೆ. ಶನಿವಾರ ಆರೋಪಿಸಿದ ನಂತರ ಅವರು ರಾಜಕೀಯ ವಿವಾದವನ್ನು ಹುಟ್ಟುಹಾಕಿದ ನಂತರ ಈ ಕ್ರಮ ಕೈಗೊಳ್ಳಲಾಗಿದೆ. ಅವರ ಹೇಳಿಕೆಗಳು ಬಿಜೆಪಿ ಮತ್ತು ಎಎಪಿಯಿಂದ ತೀವ್ರ ಟೀಕೆಗೆ ಗುರಿಯಾದವು, ಇದು 2027 ರ ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ ಕಾಂಗ್ರೆಸ್ನ ಆಂತರಿಕ ಕಾರ್ಯನಿರ್ವಹಣೆಯ ಬಗ್ಗೆ ಕಾಂಗ್ರೆಸ್ ಅನ್ನು ಗುರಿಯಾಗಿಸಿಕೊಂಡಿತು. ನವಜೋತ್ ಸಿಂಗ್ ಸಿಧು ಸಕ್ರಿಯ ರಾಜಕಾರಣಕ್ಕೆ ಮರಳುವ ಕುರಿತ ಪ್ರಶ್ನೆಗೆ ಉತ್ತರಿಸುತ್ತಾ, ಕಾಂಗ್ರೆಸ್ 2027 ರ ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಅವರನ್ನು ಘೋಷಿಸಿದರೆ ಮಾತ್ರ ಅವರು…

Read More

ಬೆಂಗಳೂರು : ಬೆಂಗಳೂರಿನಲ್ಲಿ ಘೋರ ದುರಂತವೊಂದು ಸಂಭವಿಸಿದ್ದು, ಗ್ಯಾಸ್ ಗೀಸರ್ ನಿಂದ ವಿಷಾನಿಲ ಸೋರಿಕೆಯಾಗಿ ತಾಯಿ ಮಗ ಸಾವನ್ನಪ್ಪಿರುವ ಘಟನೆ ನಡೆದಿದೆ. ಗ್ಯಾಸ್ ಗೀಸರ್ನಿಂದ ವಿಷಾನಿಲ ಸೋರಿಕೆಯಾಗಿ ತಾಯಿ ಮತ್ತು ಮಗ ಸಾವನ್ನಪ್ಪಿರುವಂತಹ ಘಟನೆ ಬೆಂಗಳೂರಿನ ಪಂಚಶೀಲನಗರದಲ್ಲಿ ನಡೆದಿದೆ. ಚಾಂದಿನಿ(26) ಮತ್ತು ಕಿರಣ್(4) ಮೃತ ದುರ್ದೈವಿಗಳು. ಗೋವಿಂದರಾಜನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಗ್ಯಾಸ್ ಗೀಸರ್ ಬಳಸುವವರು ಅಪ್ಪಿ ತಪ್ಪಿಯೂ ಈ ತಪ್ಪುಗಳನ್ನು ಮಾಡಬೇಡಿ.! ವಿಂಡಿ ಬಾತ್ರೂಮ್: ಗ್ಯಾಸ್ ಗೀಸರ್ ಬಳಸುವಾಗ, ಸ್ನಾನಗೃಹದಲ್ಲಿ ವಾತಾವರಣ ಉತ್ತಮವಾಗಿದೆಯೇ ಎಂದು ನೋಡಿ. ಬಾತ್ರೂಮ್ನಲ್ಲಿ ವಾತಾವರಣವು ಉತ್ತಮವಾಗಿಲ್ಲದಿದ್ದರೆ, ಗ್ಯಾಸ್ ಗೀಸರ್ ಅನ್ನು ಬಾತ್ರೂಮ್ನಿಂದ ಹೊರತೆಗೆಯಿರಿ. ಅನಿಲ ಸೋರಿಕೆಯನ್ನು ಪರಿಶೀಲಿಸಿ: ಸಮಯಕ್ಕೆ ಸಮಯಕ್ಕೆ ಗೀಸರ್ಗಳು ಮತ್ತು ಗ್ಯಾಸ್ ಪೈಪ್ಗಳನ್ನು ಚೆನ್ನಾಗಿ ಪರಿಶೀಲಿಸಲಾಗುತ್ತದೆ. ನಿಮಗೆ ಸ್ವಲ್ಪ ಅನುಮಾನವಿದ್ದರೆ, ಉತ್ತಮ ತಂತ್ರಜ್ಞರೊಂದಿಗೆ ಗೀಸರ್ ಚೆಕ್ ಮಾಡಿ. ಬಾತ್ರೂಮ್ನಲ್ಲಿ ದೀರ್ಘಕಾಲ ಉಳಿಯಬೇಡಿ: ಗೀಸರ್ ದೀರ್ಘಕಾಲದವರೆಗೆ ಇದ್ದರೆ, ಬಾತ್ರೂಮ್ನಲ್ಲಿ ಹೆಚ್ಚು ಸಮಯ ಕಳೆಯಬೇಡಿ, ಏಕೆಂದರೆ ಗೀಸರ್ನಿಂದ ಹೊರಬರುವ ಅನಿಲವು ಸಾವಿಗೆ ಕಾರಣವಾಗಬಹುದು. ಸಮಯಕ್ಕೆ…

Read More

ಬೆಳಗಾವಿ : ಹಣಕ್ಕಾಗಿ ಅನಗತ್ಯ ಸಿಸೇರಿಯನ್ ಹೆರಿಗೆ ಮಾಡುವ ಖಾಸಗಿ ಆಸ್ಪತ್ರೆಗಳ ವಿರುದ್ಧ ಕ್ರಮಕೈಗೊಳ್ಳಲಾಗುವುದು ಎಂದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಜೆಡಿಎಸ್ ಸದಸ್ಯ ಗೋವಿಂದರಾಜು ಅವರ ಪ್ರಶ್ನೆಗೆ ಉತ್ತರಿಸಿದ ಅವರು, ಕಳೆದ ಐದು ವರ್ಷಗಳಲ್ಲಿ ಸರ್ಕಾರಿ ಆಸ್ಪತ್ರೆಗಳಲ್ಲಿ ಶೇ. 34-38, ಖಾಸಗಿ ಆಸ್ಪತ್ರೆಗಳಲ್ಲಿ ಶೇ.62ರಷ್ಟು ಹೆರಿಗೆ ನಡೆಯುತ್ತಿದೆ. ದೊಡ್ಡ ನಗರಗಳಲ್ಲಿ ಸಿಸೇರಿಯನ್ ಸಂಖ್ಯೆ ಜಾಸ್ತಿಯಾಗಿದೆ. ಯಾಕೆ ಸಿಸೇರಿಯನ್ ಹೆರಿಗೆ ಜಾಸ್ತಿಯಾಗುತ್ತಿದೆ ಎಂಬುದನ್ನು ತಿಳಿಯಲು ಪ್ರಾಯೋಗಿಕವಾಗಿ ತುಮಕೂರು ಜಿಲ್ಲೆಯಲ್ಲಿ ಆಡಿಟ್ ಮಾಡಲಾಗುತ್ತದೆ ಎಂದರು. ಇತ್ತೀಚಿನ ವರ್ಷಗಳಲ್ಲಿ ಸಿಸೇರಿಯನ್ ಹೆರಿಗೆ ಹೆಚ್ಚಳವಾಗಲು ಗರ್ಭಿಣಿ ಮಹಿಳೆಯರ ಭಯ, ಆತಂಕ ಸೇರಿದಂತೆ ಕುಟುಂಬದ ಸದಸ್ಯರೂ ಕಾರಣರಾಗಿದ್ದಾರೆ.ಈಬಗ್ಗೆ ಅವರಿಗೆ ಅರಿವು ಮೂಡಿಸುವ ಕೆಲಸ ಆಗಬೇಕು ಎಂದು ಹೇಳಿದ್ದಾರೆ. https://twitter.com/KarnatakaVarthe/status/1998040172005658706?s=20

Read More

ಬೆಳಗಾವಿ ಸುವರ್ಣಸೌಧ : ರಾಜ್ಯದಲ್ಲಿನ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ ಮಕ್ಕಳಿಗೆ ಶೂ ಸಾಕ್ಸ್ ವಿತರಣೆ ಮಾಡಲು ರೂ. 111.88 ಕೋಟಿ ಅನುದಾನ ಬಿಡುಗಡೆ ಮಾಡಲಾಗಿದೆ ಎಂದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ತಿಳಿಸಿದರು. ಅವರು ವಿಧಾನ ಪರಿಷತ್ ನಲ್ಲಿ ಸದಸ್ಯ ಜಗದೇವ್ ಗುತ್ತೇದಾರ್ ಮತ್ತು ಕೇಶವ ಪ್ರಸಾದ್ ಅವರ ಚುಕ್ಕೆ ಗುರುತಿನ ಪ್ರಶ್ನೆ ಗೆ ಉತ್ತರಿಸಿ ಮಾತನಾಡಿದರು. ರಾಜ್ಯದಲ್ಲಿನ ಎಲ್ಲಾ ಜಿಲ್ಲೆಗಳ 44525 ಶಾಲೆಗಳಿಗೆ ಶೂ ಸಾಕ್ಸ್ ವಿತರಣೆ ಮಾಡಲು ಅನುದಾನ ಬಿಡುಗಡೆ ಮಾಡಲಾಗಿದೆ ಎಂದರು. ನಮ್ಮ ರಕ್ತದಲ್ಲಿ ಕನ್ನಡವಿದೆ. ಕನ್ನಡ ಮಾಧ್ಯಮದ ಯಾವುದೇ ಶಾಲೆಗಳನ್ನು ಮುಚ್ಚುವುದಿಲ್ಲ. 2025 – 26ನೇ ಸಾಲಿನಲ್ಲಿ 900 ಸರ್ಕಾರಿ ಶಾಲೆಗಳನ್ನು ಕೆಪಿಎಸ್ ಶಾಲೆಗಳನ್ನಾಗಿ ಉನ್ನತೀಕರಿಸಲಾಗುತ್ತಿದೆ. ಮುಂದಿನ ದಿನಗಳಲ್ಲಿ ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲಿ ಒಂದು ಕೆಪಿಎಸ್ ಶಾಲೆಯನ್ನು ಹಂತ ಹಂತವಾಗಿ ಪ್ರಾರಂಭಿಸಲು ಕ್ರಮವಹಿಸಲಾಗುವುದು ಎಂದು ತಿಳಿಸಿದ್ದಾರೆ. https://twitter.com/KarnatakaVarthe/status/1998042145949716617?s=20 https://twitter.com/KarnatakaVarthe/status/1998040964615852467?s=20

Read More

ಬೆಳಗಾವಿ ಸುವರ್ಣಸೌಧ : ಖಾಸಗಿ ಅನುದಾನಿತ ಹಾಗೂ ಅನುದಾನ ರಹಿತ ಶಾಲೆಗಳ ಪ್ರಥಮ ಮಾನ್ಯತೆ ಹಾಗೂ ಮಾನ್ಯತೆ ನವೀಕರಣಕ್ಕೆ ಸಂಬಂಧಿಸಿದ ನಿಯಮಗಳ ಸಡಿಲಿಕೆ ಕುರಿತು ಸದಸ್ಯರ ಮನವಿಗೆ ಸ್ಪಂದಿಸಿದ ಸರಕಾರ ಸದನ ಸಮಿತಿ ರಚಿಸಲು ನಿರ್ಧರಿಸಿದೆ. ನವೀಕರಣ ನಿಯಮಗಳ ಸಡಿಲಿಕೆ ಕುರಿತಂತೆ ಸದರಿ ಸದನ ಸಮಿತಿ ನೀಡುವ ವರದಿ ಆಧರಿಸಿ ಶೀಘ್ರ ತಿರ್ಮಾನ ಕೈಗೊಳ್ಳಲಾಗುವುದು ಎಂದು ಶಾಲಾ ಶಿಕ್ಷಣ ಸಚಿವರಾದ ಎಸ್ ಮಧು ಬಂಗಾರಪ್ಪ ಅವರು ಹೇಳಿದರು. ಸರ್ಕಾರವು ಹೊರಡಿಸಿರುವ ಆದೇಶದಲ್ಲಿ ಉಲ್ಲೇಖಿಸಲಾಗಿರುವ ಶಾಲೆಗಳ ಮಾನ್ಯತೆ ನವೀಕರಣದ ನಿಯಮಗಳನ್ನು ಸಡಿಲಗೊಳಿಸುವ ವಿಷಯದ ಬಗ್ಗೆ ಸಮಗ್ರವಾಗಿ ಚರ್ಚಿಸಿ ನಿರ್ಣಯ ಕೈಗೊಳ್ಳಲು ಸದನ ಸಮಿತಿ ರಚಿಸಲಾಗುತ್ತಿದೆ ಎಂದು ಅವರು ವಿವರಿಸಿದರು. ವಿಧಾನ ಪರಿಷತ್ತಿನಲ್ಲಿ ಸದಸ್ಯರಾದ ಪುಟ್ಟಣ್ಣ, ಶಶೀಲ್ ಜಿ. ನಮೋಶಿ, ಎಸ್.ವಿ. ಸಂಕನೂರ ಮತ್ತು ಎಸ್.ಎಲ್. ಭೋಜೇಗೌಡ ಅವರು ನಿಯಮ 330ರ ಮೇರೆಗೆ ಪ್ರಸ್ತಾಪಿಸಿದ ಖಾಸಗಿ ಅನುದಾನಿತ, ಅನುದಾನ ರಹಿತ ಶಾಲೆಗಳ ಪ್ರಥಮ ಮಾನ್ಯತೆ ಹಾಗೂ ಮಾನ್ಯತೆ ನವೀಕರಣಕ್ಕೆ ಸಂಬಂಧಿಸಿದಂತೆ ಸರ್ಕಾರವು ಹೊರಡಿಸಿರುವ ಆದೇಶದಲ್ಲಿ…

Read More

ಬೆಂಗಳೂರು : ಸರಕಾರದ ಮಾರ್ಗಸೂಚಿಗಳನುಸಾರ ವೈದ್ಯ ವೃತ್ತಿ ನಡೆಸುತ್ತಿರುವವರು ಕೆಎಯುಪಿ ಮಂಡಳಿ ನೋಂದಣಿ ಪ್ರಮಾಣ ಪತ್ರ ಹೊಂದಿರುವುದು ಮತ್ತು ಕ್ಲಿನಿಕ್ ಗಳಿಗೆ ಕೆಪಿಎಮ್ಇ ನೋಂದಣಿ ಹೊಂದಿರುವುದು ಕಡ್ಡಾಯವಾಗಿದೆ.  ಅನಧೀಕೃತ ವೈದ್ಯ ವೃತ್ತಿ ನಡೆಸುತ್ತಿರುವುದು, ಅನಧೀಕೃತವಾಗಿ ಟೆಂಟ್ ಹಾಕಿಕೊಂಡು ನಕಲಿ ಔಷಧಿಗಳನ್ನು ಸಾರ್ವಜನಿಕರಿಗೆ ನೀಡುತ್ತಿರುವವರು ಕಂಡು ಬಂದಲ್ಲಿ ತಕ್ಷಣವೇ ನಿಯಮಾನುಸಾರ ಕಾನೂನು ಕ್ರಮ ಕೈಗೊಳ್ಳಲಾಗುವುದು. ಎಲ್ಲಾ ಸಾರ್ವಜನಿಕರು ನಕಲಿ ವೈದ್ಯರಿಂದ ದೂರವಿರಲು ಮತ್ತು ಅರ್ಹ ನೋಂದಾಯಿತ ವೈದ್ಯರಿಂದಲೇ ವೈದ್ಯಕೀಯ ಸೇವೆಯನ್ನು ಪಡೆಯಬೇಕೆಂದು ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಜಪಾನ್ ಕರಾವಳಿಯಲ್ಲಿ 7.6 ತೀವ್ರತೆಯ ಭೂಕಂಪ ಸಂಭವಿಸಿದ್ದು, ಮೂರು ಮೀಟರ್ ಎತ್ತರದ ಅಲೆಗಳು ಎದ್ದಿದ್ದು, ಸುನಾಮಿ ಎಚ್ಚರಿಕೆ ನೀಡಲಾಗಿದೆ ಎಂದು ಜಪಾನ್ ಹವಾಮಾನ ಸಂಸ್ಥೆ (ಜೆಎಂಎ) ತಿಳಿಸಿದೆ. ಜಪಾನ್ ಉತ್ತರ ಮತ್ತು ಪೂರ್ವದ ಹೆಚ್ಚಿನ ಭಾಗದಲ್ಲಿ ರಾತ್ರಿ 11:15 ಕ್ಕೆ (ಸ್ಥಳೀಯ ಸಮಯ) ಭೂಕಂಪ ಸಂಭವಿಸಿದ ನಂತರ, ಹೊಕ್ಕೈಡೊ, ಅಮೋರಿ ಮತ್ತು ಇವಾಟೆ ಪ್ರಾಂತ್ಯಗಳಿಗೆ ಸುನಾಮಿ ಎಚ್ಚರಿಕೆ ನೀಡಲಾಗಿದೆ ಎಂದು ವರದಿಯಾಗಿದೆ. ಹಲವಾರು ಬಳಕೆದಾರರು ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೊಗಳನ್ನು ಹಂಚಿಕೊಂಡಿದ್ದಾರೆ, ಅದರಲ್ಲಿ ಗೊಂಚಲು ದೀಪಗಳು ಮತ್ತು ವಾಹನಗಳು ಅಲುಗಾಡುತ್ತಿರುವುದನ್ನು ತೋರಿಸಲಾಗಿದೆ. ಅಕ್ಟೋಬರ್ ಆರಂಭದಲ್ಲಿ, ಹೊನ್ಶುವಿನ ಪೂರ್ವ ಕರಾವಳಿಯ ಬಳಿ ರಿಕ್ಟರ್ ಮಾಪಕದಲ್ಲಿ 6.0 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ (NCS) ತಿಳಿಸಿದೆ. ಯಾವುದೇ ಹಾನಿ ಅಥವಾ ಸಾವುನೋವುಗಳ ವರದಿಯಾಗಿಲ್ಲ. ಸೋಮವಾರ ಸಂಜೆ ಜಪಾನ್ನಲ್ಲಿ 7.6 ತೀವ್ರತೆಯ ಭೂಕಂಪ ಸಂಭವಿಸಿದ್ದು, ಪೆಸಿಫಿಕ್ ಕರಾವಳಿ ಸಮುದಾಯಗಳಲ್ಲಿ 50 ಸೆಂಟಿಮೀಟರ್ಗಳವರೆಗೆ ಸುನಾಮಿಯ ಅಲೆಗಳು ಅಲೆಗಳ ಅಲೆಗಳ ಅಲೆಗಳು ಹೆಚ್ಚಾಗುವ ಸಾಧ್ಯತೆ…

Read More

ಬೆಳಗಾವಿ : ರಾಜ್ಯ ಸರ್ಕಾರವು ರೈತರಿಗೆ ಸಿಹಿಸುದ್ದಿ ನೀಡಿದ್ದು, ಮೆಕ್ಕೆಜೋಳ ಪ್ರೋತ್ಸಾಹಧನ ಯೋಜನೆ ಅಡಿಯಲ್ಲಿ ನ.30ರಿಂದ ರಾಜ್ಯದಲ್ಲಿ ಕೆಎಂಎಫ್ ಮೂಲಕ ಮೆಕ್ಕೆಜೋಳ ರೈತರ ನೋಂದಣಿ ಮತ್ತು ಖರೀದಿ ಪ್ರಕ್ರಿಯೆ ಆರಂಭಿಸಲಾಗಿದೆ. ರಾಜ್ಯದಲ್ಲಿ ಈವರೆಗೆ 17,873 ರೈತರು ನೋಂದಣಿ ಮಾಡಿದ್ದು, 7,094 ಕ್ವಿಂಟಲ್ ಮೆಕ್ಕೆಜೋಳ ಖರೀದಿ ಮಾಡಲಾಗಿದೆ. ಮೆಕ್ಕೆಜೋಳ ಬೆಲೆ ಕುಸಿತದಿಂದ ಕಂಗಾಲಾಗಿರುವ ರೈತರ ಅನುಕೂಲಕ್ಕಾಗಿ ರಾಜ್ಯ ಸರ್ಕಾರದ ಸೂಚನೆ ಮೇರೆಗೆ ಕೆಎಂಎಫ್ನಿಂದ ಪಶು ಆಹಾರ ಉತ್ಪಾದನೆಗಾಗಿ ರೈತರಿಂದ ಮೆಕ್ಕೆಜೋಳ ಖರೀದಿ ಪ್ರಕ್ರಿಯೆ ಆರಂಭಿಸಲಾಗಿದೆ. ಕೆಎಂಎಫ್ ನ 5 ಪಶು ಆಹಾರ ಉತ್ಪಾದನಾ ಘಟಕಗಳ ವ್ಯಾಪ್ತಿಯಲ್ಲಿ ನಿಗದಿತ ಪೋರ್ಟಲ್ಗಳಲ್ಲಿ ರೈತರ ನೋಂದಣಿ ಮತ್ತು ಖರೀದಿ ಪ್ರಕ್ರಿಯೆಗೆ ಚಾಲನೆ ನೀಡಲಾಗಿದೆ. ಪ್ರತಿ ರೈತರಿಂದ ತಲಾ 50 ಕ್ವಿಂಟಲ್ ಮೆಕ್ಕೆಜೋಳ ಖರೀದಿ ಮಾಡಲಾಗುತ್ತದೆ ಎಂದು ರಾಜ್ಯ ಸರ್ಕಾರ ಮಾಹಿತಿ ನೀಡಿದೆ.

Read More