Author: kannadanewsnow57

ಬೆಳಗಾವಿ : ಎಲ್ಲಾ ಪೌರ ಕಾರ್ಮಿಕರ ಸೇವೆಯನ್ನು ಕಾಯಂಗೊಳಿಸುವ ಕಾರ್ಯ ನಡೆಯುತ್ತಿದೆ ಎಂದು ಸಿ.ಎಂ ಸಿದ್ದರಾಮಯ್ಯ ಅವರು ನುಡಿದರು. ಸ್ಮಾರ್ಟ್ ಸಿಟಿ ಅನುದಾನದ ಅಡಿಯಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಬೆಳಗಾವಿಯ ಟಿಳಕವಾಡಿಯಲ್ಲಿ ಆಧುನಿಕ‌ ಸೌಲಭ್ಯಗಳುಳ್ಳ ಬಹುಮಹಡಿ ಕಲಾ ಮಂದಿರವನ್ನು ಲೋಕಾರ್ಪಣೆಗೊಳಿಸಿದ ಬಳಿಕ ಮಾತನಾಡಿದರು. ಈಗಾಗಲೇ ಗುತ್ತಿಗೆ ನೌಕರರನ್ನು ಕನಿಷ್ಠ ವೇತನ ಅಡಿಯಲ್ಲಿ ತರಲಾಗಿದೆ. ಇದನ್ನು ಮಾಡಿದ್ದು ನಮ್ಮ ಸರ್ಕಾರವೇ, ಈಗ ಕಾಯಂ ಮಾಡುವುದೂ ಕೂಡ ನಮ್ಮ ಸರ್ಕಾರವೇ ಎಂದು ತಿಳಿಸಿದರು. ಬೆಳಗಾವಿಯಲ್ಲಿ ಸ್ಮಾರ್ಟ್ ಸಿಟಿ ಯೋಜನೆ ಅಡಿಯಲ್ಲಿ 150 ಕಾರ್ಯಕ್ರಮಗಳನ್ನು ಕೈಗೆತ್ತಿಕೊಂಡು ಇದರಲ್ಲಿ 102 ಪೂರ್ಣಗೊಂಡಿವೆ. ಉಳಿದವು ಸದ್ಯದಲ್ಲೇ ಪೂರ್ಣಗೊಳ್ಳಲಿವೆ ಎಂದರು. ಕೇಂದ್ರ ಮತ್ತು ರಾಜ್ಯ ಸರಕಾರದ ಸಹಭಾಗಿತ್ವದಲ್ಲಿ ಸ್ಮಾರ್ಟ್ ಸಿಟಿ ಯೋಜನೆ ಜಾರಿಗೊಳಿಸಲಾಗಿದೆ. ಈ ಯೋಜನೆಗಳ ಅನುಷ್ಠಾನಕ್ಕೆ ರಾಜ್ಯ-ಕೇಂದ್ರ ಸರಕಾರಗಳು ತಲಾ ಶೇ.50 ರಷ್ಟು ಅನುದಾನವನ್ನು ಒದಗಿಸಿವೆ. ಬೆಳಗಾವಿ ನಗರದಲ್ಲಿ ಇನ್ನು ಬಾಕಿ ಉಳಿದ ಕೆಲ ಕಾಮಗಾರಿಗಳು ಕೆಲವೇ ದಿನಗಳಲ್ಲಿ ಪೂರ್ಣಗೊಳಿಸಿ ಲೋಕಾರ್ಪಣೆಗೊಳಿಸಲಾಗುವುದು. ಹಿಂದಿನ ಸರಕಾರದ ಅವಧಿಯಲ್ಲಿಯೇ ಪೌರಕಾರ್ಮಿಕರನ್ನು ಖಾಯಂ ಮಾಡಲು…

Read More

ಬೆಂಗಳೂರು : ನಿವೃತ್ತಿ ಹೊಂದಲಿರುವ ಸರ್ಕಾರಿ ನೌಕರರ ವಿರುದ್ಧ ಸಕಾಲದಲ್ಲಿ ಇಲಾಖಾ ವಿಚಾರಣೆ ಆರಂಭಿಸುವ ಬಗ್ಗೆ ರಾಜ್ಯ ಸರ್ಕಾರವು ಮಹತ್ವದ ಸೂಚನೆಗಳನ್ನು ಹೊರಡಿಸಿದೆ. ನಿವೃತ್ತಿ ಹೊಂದಲಿರುವ ಸರ್ಕಾರಿ ನೌಕರರ ವಿರುದ್ಧ ಅವರು ಸೇವೆಯಲ್ಲಿರುವಾಗ ಎಸಗಿದ ದುರ್ನಡತೆಗಾಗಿ ಕ್ಷುಪ್ತ ಸಮಯದಲ್ಲಿ ಅಂದರೆ ಅಂತಹ ನೌಕರ ಸೇವೆಯಿಂದ ನಿವೃತ್ತಿ ಹೊಂದುವ ಸಾಕಷ್ಟು ಪೂರ್ವದಲ್ಲಿಯೇ ಶಿಸ್ತಿನ ಕ್ರಮ ಆರಂಭಿಸುವಂತೆ ಹಾಗೂ ಇತ್ಯರ್ಥಪಡಿಸುವಂತೆ ಮೇಲೆ ಉಲ್ಲೇಖಿಸಿರುವ ಹಲವಾರು ಸುತ್ತೋಲೆ ಹಾಗೂ ಅಧಿಕೃತ ಜ್ಞಾಪನಗಳಲ್ಲಿ ಸರ್ಕಾರದಿಂದ ಕಾಲ ಕಾಲಕ್ಕೆ ಸೂಚನೆಗಳನ್ನು ನೀಡಲಾಗಿದೆ. ಸರ್ಕಾರಿ ನೌಕರನ ನಿವೃತ್ತಿ ನಂತರದ ಶಿಸ್ತು ಕ್ರಮಗಳನ್ನು ಕರ್ನಾಟಕ ನಾಗರಿಕ ಸೇವಾ (ವರ್ಗೀಕರಣ, ನಿಯಂತ್ರಣ ಹಾಗೂ ಮೇಲ್ಮನವಿ) ನಿಯಮಗಳು 1957 ರಡಿ ಕೈಗೊಳ್ಳಲು ಅವಕಾಶವಿರುವುದಿಲ್ಲ. ಅಂತಹ ಶಿಸ್ತಿನ ಕ್ರಮವನ್ನು ಕರ್ನಾಟಕ ನಾಗರಿಕ ಸೇವಾ ನಿಯಮಗಳ ನಿಯಮ 214 ರಡಿ ಮಾತ್ರ ಕೈಗೊಳ್ಳಲು ಅವಕಾಶವಿರುತ್ತದೆ. ಸರ್ಕಾರಿ ನೌಕರನು ನಿವೃತ್ತಿಯಾದ ನಂತರ ಅವನ ಮೇಲೆ ಹೂಡಲಾಗಿದ್ದ ಇಲಾಖಾ ವಿಚಾರಣೆಗಳನ್ನು ಸರ್ಕಾರಕ್ಕೆ ಆತನಿಂದ ಆರ್ಥಿಕ ಹಾನಿ ಉಂಟಾಗಿಲ್ಲವೆಂಬ ಕಾರಣದ ಮೇಲೆ…

Read More

ಬೆಂಗಳೂರು : ರಾಜ್ಯದ ಪ್ರಾಥಮಿಕ ಶಾಲಾ ವೃಂದದಿಂದ ಪ್ರೌಢ ಶಾಲಾ ಸಹ ಶಿಕ್ಷಕರ ಗ್ರೇಡ್-2 ವೃಂದಕ್ಕೆ ಮುಂಬಡ್ತಿ ನೀಡುವ ಕುರಿತು ಶಿಕ್ಷಣ ಇಲಾಖೆ ಮಹತ್ವದ ಆದೇಶ ಹೊರಡಿಸಿದೆ. ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ 6 ರಿಂದ 8ನೇ ತರಗತಿಯ ಪದವೀಧರ ಪ್ರಾಥಮಿಕ ಶಿಕ್ಷಕರಿಗೆ ಪ್ರೌಢ ಶಾಲಾ ಸಹ ಶಿಕ್ಷಕರು ಗ್ರೇಡ್-2 ಹುದ್ದೆಗೆ ಬಡ್ತಿ ನೀಡುವ ಕುರಿತು ಉಲ್ಲೇಖ (3) ರ ಪತ್ರದಲ್ಲಿ ಉಲ್ಲೇಖ(1) ರಲ್ಲಿ ರಾಜ್ಯ ಪತ್ರದಲ್ಲಿ ಪ್ರಕಟಿತವಾದ ವೃಂದ ಮತ್ತು ನೇಮಕಾತಿ ನಿಯಮದಂತೆ ಸರ್ಕಾರಿ ಪ್ರಾಥಮಿಕ ಶಾಲಾ ವೃಂದದ ಶಿಕ್ಷಕರಿಂದ ಪ್ರೌಢಶಾಲಾ ಸಹ ಶಿಕ್ಷಕರು ಗ್ರೇಡ್-2 ವೃಂದಕ್ಕೆ ಬಡ್ತಿ ನೀಡುವ ಕುರಿತು ಕಲಬುರಗಿ ವಿಭಾಗದ ಜಿಲ್ಲಾ ಉಪನಿರ್ದೇಶಕರು(ಆಡಳಿತ) ಇವರುಗಳಿಗೆ ವೇಳಾ ಪಟ್ಟಿಯೊಂದಿಗೆ ಬಡ್ತಿಗೆ ಕ್ರಮವಹಿಸಲು ಸೂಚಿಸಿರುತ್ತೀರಿ. ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ 6 ರಿಂದ 8 ನೇ ತರಗತಿ ಪದವೀಧರ ಶಿಕ್ಷಕರಿಗೆ ಪ್ರೌಢ ಶಾಲಾ ಶಿಕ್ಷಕರು ಗ್ರೇಡ್-2 ಹುದ್ದೆಗೆ ಬಡ್ತಿ ನೀಡುವ ಕುರಿತು ಮಾನ್ಯ…

Read More

ಬೆಂಗಳೂರು : ಇದೇ ಏಪ್ರಿಲ್ 24 ರಿಂದ ಮೇ 08 ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ-2 ನಡೆಯಲಿದೆ. ಪರೀಕ್ಷಾ ಕಾರ್ಯವನ್ನು ಯಾವುದೇ ಸಮಸ್ಯೆಯಾಗದಂತೆ ವ್ಯವಸ್ಥಿತವಾಗಿ ಕಾರ್ಯನಿರ್ವಹಿಸಬೇಕು ಎಂದು ಸೂಚನೆ ನೀಡಲಾಗಿದೆ. ಈಗಾಗಲೇ ದ್ವಿತೀಯ ಪಿಯುಸಿ ಪರೀಕ್ಷೆಯನ್ನು ಯಶಸ್ವಿಯಾಗಿ ನಿರ್ವಹಿಸಲಾಗಿದೆ. ಅದೇ ರೀತಿಯಾಗಿ ದ್ವಿತೀಯ ಪಿಯುಸಿ ಪರೀಕ್ಷೆ-2ನ್ನು ಸಹ ಗಂಭೀರವಾಗಿ ಪರಿಗಣಿಸಿ, ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿ ನೀಡಿರುವ ಮಾರ್ಗಸೂಚಿಗಳನ್ನು ಎಲ್ಲ ಹಂತದ ಅಧಿಕಾರಿಗಳು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ತಿಳಿಸಿದ ಅವರು, ಮುಕ್ತ ಹಾಗೂ ನ್ಯಾಯಸಮ್ಮತವಾಗಿ ಪರೀಕ್ಷಾ ಪಾವಿತ್ರತೆ ಕಾಪಾಡಿ ಪರೀಕ್ಷಾ ಕಾರ್ಯವನ್ನು ಯಶಸ್ವಿಗೊಳಿಸಬೇಕು ಎಂದು ಹೇಳಲಾಗಿದೆ. ವಿದ್ಯಾರ್ಥಿಗಳು ಪರೀಕ್ಷೆ ಪ್ರಾರಂಭವಾಗುವುದಕ್ಕಿಂತ ಒಂದು ಗಂಟೆ ಮುಂಚಿತವಾಗಿ ಹಾಗೂ ಪರೀಕ್ಷಾ ನಂತರ 30 ನಿಮಿಷಗಳು ಪೊಲೀಸ್ ಬಂದೋಬಸ್ತಿನ ಅವಶ್ಯಕತೆ ಇದೆ. ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾ ಖಜಾನೆಯಿಂದ ಪ್ರಶ್ನೆಪತ್ರಿಕೆಗಳನ್ನು ಕೊಂಡೊಯ್ಯುವ ಮತ್ತು ವಿತರಣೆ ಮಾಡುವ ಸಮಯಕ್ಕೆ 06 ಮಾರ್ಗಗಳ ತಂಡಕ್ಕೆ ಪ್ರತಿ ತಾಲ್ಲೂಕಿನ ಮಾರ್ಗಾಧಿಕಾರಿಗಳ ಜೊತೆಗೆ ಪೊಲೀಸ್ ರಕ್ಷಣೆ ಬೇಕಾಗಿರುತ್ತದೆ. ಜಿಲ್ಲಾ…

Read More

ಬೆಂಗಳೂರು: ರಾಜ್ಯ ಸರ್ಕಾರದಿಂದ ಕರ್ನಾಟಕ ಸಂಜೀವನಿ ಯೋಜನೆಗೆ ಕುಟುಂಬಸ್ಥರ ನೋಂದಣಿಗೆ ಮಾರ್ಗಸೂಚಿಯನ್ನು ಪ್ರಕಟಿಸಲಾಗಿದೆ. ಅದು ಹೇಗೆ ಎನ್ನುವ ಬಗ್ಗೆ ಮುಂದೆ ಓದಿ. ಈ ಕುರಿತಂತೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ವಿಶೇಷ ಕಾರ್ಯದರ್ಶಿ ಸುತ್ತೋಲೆ ಹೊರಡಿಸಿದ್ದು, ರಾಜ್ಯ ಆಯವ್ಯಯದಲ್ಲಿ ಘೋಷಿಸಿದಂತೆ ರಾಜ್ಯ ಸರ್ಕಾರವು ರಾಜ್ಯ ಸರ್ಕಾರಿ ನೌಕರರಿಗೆ ಹಾಗೂ ಅವರ ಕುಟುಂಬದ ಅವಲಂಬಿತ ಸದಸ್ಯರಿಗೆ ಕರ್ನಾಟಕ ಆರೋಗ್ಯ ಸಂಜೀವಿನಿ (KASS) ಯೋಜನೆಯ ಮೂಲಕ ನಗದು ರಹಿತ ಆರೋಗ್ಯ ಸೇವೆಗಳನ್ನು ಒದಗಿಸುವ ವಿನೂತನ ಯೋಜನೆಯನ್ನು ರೂಪಿಸಿದ್ದು, ಈ ಯೋಜನೆಯು ಶೀಘ್ರದಲ್ಲಿ ಅನುಷ್ಠಾನಗೊಳ್ಳಲಿದೆ. ಈ ಯೋಜನೆಯನ್ನು ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ಮೂಲಕ ಅನುಷ್ಠಾನಗೊಳಿಸಲಾಗುತ್ತಿದೆ ಎಂದಿದ್ದಾರೆ. ಈ ಯೋಜನೆಯ ಕಾರ್ಯನೀತಿ ಸೂಚನೆಗಳನ್ನು ಸರ್ಕಾರದ ಆದೇಶ ಸಂಖ್ಯೆ:ಸಿಆಸುಇ 16 ಎಸ್ ಎಂಆರ್ 2020 ರ ದಿನಾಂಕ:17.08.2021, 05.09.2022, 09.03.2023 ಹಾಗೂ ದಿನಾಂಕ: 02.04.2025 ಗಳಲ್ಲಿ ನೀಡಲಾಗಿದೆ. KASS ಯೋಜನೆಯು ರಾಜ್ಯ ಸರ್ಕಾರದ ನೌಕರರಿಗೆ ಐಚ್ಛಿಕವಾಗಿದ್ದು, ಯೋಜನೆಯಡಿ ಸರ್ಕಾರಿ ನೌಕರರು ವೈದ್ಯಕೀಯ ಸೌಲಭ್ಯ ಪಡೆಯಲು…

Read More

ದಾವಣಗೆರೆ : ಅಪ್ರಾಪ್ತ ಪುತ್ರನಿಗೆ ಬೈಕ್ ನೀಡಿದ್ದ ತಂದೆಗೆ ದಾವಣಗೆರೆ ಸಂಚಾರಿ ಪೊಲೀಸರು 25 ಸಾವಿರ ರೂ. ದಂಡ ವಿಧಿಸಿದ್ದಾರೆ. ದಾವಣಗೆರೆ ನಗರದ ಉತ್ತಮ್ ಚಂದ್ ಬಡಾವಣೆ ನಿವಾಸಿಗೆ ದಾವಣಗೆರೆ ದಕ್ಷಿಣ ಸಂಚಾರಿ ಠಾಣೆ ಪೊಲೀಸರು ಬರೋಬ್ಬರಿ 25 ಸಾವಿರ ರೂ. ದಂಡ ವಿಧಿಸಿದ್ದಾರೆ. ದಾವಣಗೆರೆ ನಗರದ ಎಆರ್ ಜಿ ಕಾಲೇಜ್ ಬಳಿ ಮಗ ಬೈಕ್ ಚಾಲನೆ ಮಾಡಿದ್ದಾನೆ. ತಪಾಸಣೆ ವೆಳೆ ಅಪ್ರಾಪ್ತನಿಗೆ ಬೈಕ್ ಚಲಾಯಿಸುತ್ತಿರುವುದು ಪತ್ತೆಯಾಗಿದೆ. ಹೀಗಾಗಿ ಅಪ್ರಾಪ್ತ ಬಾಲಕನ ತಂದೆಗೆ 25 ಸಾವಿರ ರೂ. ದಂಡ ವಿಧಿಸಿದ್ದು, ಪುನರಾವರ್ತೆಯಾದ್ರೆ ಎಫ್ ಐಆರ್ ದಾಖಲಿಸುವುದಾಗಿ ಪೊಲೀಸರು ಎಚ್ಚರಿಕೆ ನೀಡಿದ್ದಾರೆ.

Read More

ನವದೆಹಲಿ : ಏಪ್ರಿಲ್ 22 ರಂದು ವಿಶ್ವದಾದ್ಯಂತ ಭೂ ದಿನವನ್ನು ಆಚರಿಸಲಾಗುತ್ತಿದೆ. ಪರಿಸರ ಸಂರಕ್ಷಣೆಗಾಗಿ ಜಾಗೃತಿ ಮೂಡಿಸಲು ಪ್ರತಿವರ್ಷ ಭೂ ದಿನವನ್ನು ಆಚರಿಸಲಾಗುತ್ತದೆ. ಪರಿಸರ ಸಂರಕ್ಷಣೆ ಮತ್ತು ಸುಸ್ಥಿರತೆಯ ಪ್ರಾಮುಖ್ಯತೆಯ ಬಗ್ಗೆ ನಮಗೆ ತಿಳಿಸಲು ಭೂ ದಿನವನ್ನು ಆಚರಿಸಲಾಗುತ್ತದೆ. ಭೂಮಿಯ ದಿನವು ಜಾಗೃತಿಯನ್ನು ಹೆಚ್ಚಿಸುತ್ತದೆ ಮತ್ತು ಪರಿಸರವನ್ನು ಉಳಿಸುವ ನಿಟ್ಟಿನಲ್ಲಿ ಕೆಲಸ ಮಾಡಲು ಪ್ರೇರೇಪಿಸುತ್ತದೆ. ಪ್ರಕೃತಿಯೊಂದಿಗಿನ ನಮ್ಮ ಸಂಪರ್ಕ ಎಷ್ಟು ಆಳವಾಗಿದೆ ಮತ್ತು ಅದು ಇಲ್ಲದೆ ಮಾನವ ಜೀವನ ಸಾಧ್ಯವಿಲ್ಲ ಎಂದು ಈ ದಿನ ನಮಗೆ ನೆನಪಿಸುತ್ತದೆ. ವಿಶ್ವ ಭೂ ದಿನ 2025 ದಿನಾಂಕ ಮತ್ತು ಥೀಮ್ ಪ್ರತಿ ವರ್ಷ ಏಪ್ರಿಲ್ 22 ರಂದು ವಿಶ್ವ ಭೂ ದಿನವನ್ನು ಆಚರಿಸಲಾಗುತ್ತದೆ. ಇಂದು 192 ಕ್ಕೂ ಹೆಚ್ಚು ದೇಶಗಳಲ್ಲಿ ಭೂ ದಿನವನ್ನು ಆಚರಿಸಲಾಗುತ್ತದೆ. ಈ ದಿನಾಂಕವು ಉತ್ತರ ಗೋಳಾರ್ಧದಲ್ಲಿ ವಸಂತಕಾಲದಲ್ಲಿ ಮತ್ತು ದಕ್ಷಿಣ ಗೋಳಾರ್ಧದಲ್ಲಿ ಶರತ್ಕಾಲದಲ್ಲಿ ಬರುತ್ತದೆ. 2025 ರ ವಿಶ್ವ ಭೂ ದಿನದ ಥೀಮ್ ಪ್ಲಾನೆಟ್ ವರ್ಸಸ್ ಪ್ಲಾಸ್ಟಿಕ್ಸ್. ಪ್ಲಾಸ್ಟಿಕ್ ಮಾಲಿನ್ಯದ…

Read More

ಬೆಂಗಳೂರು: ರಾಜ್ಯ ಸರ್ಕಾರದಿಂದ ಕರ್ನಾಟಕ ಸಂಜೀವನಿ ಯೋಜನೆಗೆ ಕುಟುಂಬಸ್ಥರ ನೋಂದಣಿಗೆ ಮಾರ್ಗಸೂಚಿಯನ್ನು ಪ್ರಕಟಿಸಲಾಗಿದೆ. ಅದು ಹೇಗೆ ಎನ್ನುವ ಬಗ್ಗೆ ಮುಂದೆ ಓದಿ. ಈ ಕುರಿತಂತೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ವಿಶೇಷ ಕಾರ್ಯದರ್ಶಿ ಸುತ್ತೋಲೆ ಹೊರಡಿಸಿದ್ದು, ರಾಜ್ಯ ಆಯವ್ಯಯದಲ್ಲಿ ಘೋಷಿಸಿದಂತೆ ರಾಜ್ಯ ಸರ್ಕಾರವು ರಾಜ್ಯ ಸರ್ಕಾರಿ ನೌಕರರಿಗೆ ಹಾಗೂ ಅವರ ಕುಟುಂಬದ ಅವಲಂಬಿತ ಸದಸ್ಯರಿಗೆ ಕರ್ನಾಟಕ ಆರೋಗ್ಯ ಸಂಜೀವಿನಿ (KASS) ಯೋಜನೆಯ ಮೂಲಕ ನಗದು ರಹಿತ ಆರೋಗ್ಯ ಸೇವೆಗಳನ್ನು ಒದಗಿಸುವ ವಿನೂತನ ಯೋಜನೆಯನ್ನು ರೂಪಿಸಿದ್ದು, ಈ ಯೋಜನೆಯು ಶೀಘ್ರದಲ್ಲಿ ಅನುಷ್ಠಾನಗೊಳ್ಳಲಿದೆ. ಈ ಯೋಜನೆಯನ್ನು ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ಮೂಲಕ ಅನುಷ್ಠಾನಗೊಳಿಸಲಾಗುತ್ತಿದೆ ಎಂದಿದ್ದಾರೆ. ಈ ಯೋಜನೆಯ ಕಾರ್ಯನೀತಿ ಸೂಚನೆಗಳನ್ನು ಸರ್ಕಾರದ ಆದೇಶ ಸಂಖ್ಯೆ:ಸಿಆಸುಇ 16 ಎಸ್ ಎಂಆರ್ 2020 ರ ದಿನಾಂಕ:17.08.2021, 05.09.2022, 09.03.2023 ಹಾಗೂ ದಿನಾಂಕ: 02.04.2025 ಗಳಲ್ಲಿ ನೀಡಲಾಗಿದೆ. KASS ಯೋಜನೆಯು ರಾಜ್ಯ ಸರ್ಕಾರದ ನೌಕರರಿಗೆ ಐಚ್ಛಿಕವಾಗಿದ್ದು, ಯೋಜನೆಯಡಿ ಸರ್ಕಾರಿ ನೌಕರರು ವೈದ್ಯಕೀಯ ಸೌಲಭ್ಯ ಪಡೆಯಲು…

Read More

ಬೆಂಗಳೂರು : ರಾಜ್ಯದಲ್ಲಿ ರಾಜ್ಯ ಪಠ್ಯಕ್ರಮದ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಪ್ರಾಥಮಿಕ, ಪ್ರೌಢ ಶಾಲೆಗಳಿಗೆ 2025-26 ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಶೈಕ್ಷಣಿಕ ಅವಧಿಗಳು ಮತ್ತು ರಜಾ ಅವಧಿಗಳನ್ನು ನಿಗದಿಪಡಿಸುವ ಬಗ್ಗೆ ಶಾಲಾ ಶಿಕ್ಷಣ ಇಲಾಖೆ ಮಹತ್ವದ ಆದೇಶ ಹೊರಡಿಸಿದೆ. ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ, 2024-25ನೇ ಸಾಲಿನ ಚಟುವಟಿಕೆಗಳು ಮುಕ್ತಾಯವಾಗುತ್ತಲಿದ್ದು, ಮುಂದಿನ 2025-26ನೇ ಸಾಲಿನ ಶೈಕ್ಷಣಿಕ ಸಾಲಿನ ಚಟುವಟಿಕೆಗಳನ್ನು ಪ್ರಾರಂಭಿಸಲು ಸದರಿ ಸಾಲಿನಲ್ಲಿ ಎಂದಿನಂತೆ ಅಗತ್ಯ ಪೂರ್ವಸಿದ್ದತೆಗಾಗಿ ದಿನಾಂಕ: 29.05.2025 ರಿಂದ ಶಾಲೆ ಪ್ರಾರಂಭಿಸಲು ಸೂಚಿಸಲಾಗಿದೆ. ಅದರಂತೆ ವಾರ್ಷಿಕ ಶೈಕ್ಷಣಿಕ ಕ್ರಿಯಾಯೋಜನೆಯ ವೇಳಾಪಟ್ಟಿಯನ್ನು ನಿಗಧಿಪಡಿಸಲಾಗಿದೆ. ಪ್ರಯುಕ್ತ ರಾಜ್ಯದ ಎಲ್ಲಾ ರಾಜ್ಯ ಪಠ್ಯಕ್ರಮದ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 2025-26ನೇ ಶೈಕ್ಷಣಿಕ ಸಾಲಿನಲ್ಲಿ, ಏಕರೂಪದ ಶೈಕ್ಷಣಿಕ ಚಟುವಟಿಕೆಗಳನ್ನು ಅನುಷ್ಠಾನಗೊಳಿಸಲು ಸಹಾಯವಾಗುವಂತೆ ಒಟ್ಟು ವಾರ್ಷಿಕ ದಿನಗಳಲ್ಲಿ ಲಭ್ಯವಾಗುವ ಶೈಕ್ಷಣಿಕ ಚಟುವಟಿಕೆ ಅವಧಿಗಳು ಕರ್ತವ್ಯದ ದಿನಗಳು ಮತ್ತು ರಜಾ ದಿನಗಳನ್ನಾಧರಿಸಿ ಅದಕ್ಕನುಗುಣವಾಗಿ ವಾರ್ಷಿಕ ಕಾರ್ಯಸೂಚಿಯನ್ನು ಈ ಕೆಳಕಂಡಂತೆ…

Read More

ನವದೆಹಲಿ: ಸಿಬ್ಬಂದಿ ಆಯ್ಕೆ ಆಯೋಗ (SSC) ಮೇ 2025 ರಿಂದ ಪ್ರಾರಂಭವಾಗುವ ಎಲ್ಲಾ ನೇಮಕಾತಿ ಪರೀಕ್ಷೆಗಳಿಗೆ ಆಧಾರ್ ಆಧಾರಿತ ಬಯೋಮೆಟ್ರಿಕ್ ದೃಢೀಕರಣವನ್ನು ಬಳಸಲು ಪ್ರಾರಂಭಿಸುತ್ತದೆ ಎಂದು ಅಧಿಕಾರಿಗಳು ಭಾನುವಾರ ಘೋಷಿಸಿದ್ದಾರೆ. ಗುರುತಿನ ಪರಿಶೀಲನೆಯನ್ನು ಬಲಪಡಿಸುವ ಮತ್ತು ವಂಚನೆಯ ಅಭ್ಯಾಸಗಳನ್ನು ತಡೆಯುವ ಗುರಿಯನ್ನು ಹೊಂದಿರುವ ಈ ಕ್ರಮವನ್ನು ಸ್ವಯಂಪ್ರೇರಿತ ಆಧಾರದ ಮೇಲೆ ಜಾರಿಗೆ ತರಲಾಗುವುದು. ಕೇಂದ್ರ ಸರ್ಕಾರದ ಅತಿದೊಡ್ಡ ನೇಮಕಾತಿ ಸಂಸ್ಥೆಗಳಲ್ಲಿ ಒಂದಾದ SSC, ವಿವಿಧ ಸಚಿವಾಲಯಗಳು ಮತ್ತು ಇಲಾಖೆಗಳಲ್ಲಿ ಗೆಜೆಟೆಡ್ ಅಲ್ಲದ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಜವಾಬ್ದಾರಿಯನ್ನು ಹೊಂದಿದೆ. ಇತ್ತೀಚಿನ ಸಾರ್ವಜನಿಕ ಸೂಚನೆಯ ಪ್ರಕಾರ, SSC ಪರೀಕ್ಷೆಗಳಿಗೆ ಹಾಜರಾಗುವ ಅಭ್ಯರ್ಥಿಗಳು ಈಗ ಮೂರು ಹಂತಗಳಲ್ಲಿ ಆಧಾರ್ ಬಳಸಿ ತಮ್ಮ ಗುರುತನ್ನು ಪರಿಶೀಲಿಸುವ ಆಯ್ಕೆಯನ್ನು ಹೊಂದಿರುತ್ತಾರೆ. ಆನ್‌ಲೈನ್ ನೋಂದಣಿ ಸಮಯದಲ್ಲಿ, ಅರ್ಜಿ ನಮೂನೆಯನ್ನು ಭರ್ತಿ ಮಾಡುವಾಗ ಮತ್ತು ಪರೀಕ್ಷಾ ಕೇಂದ್ರದಲ್ಲಿ ಆಗಿದೆ. ಆಯೋಗವು ತನ್ನ ಮುಂಬರುವ ಪರೀಕ್ಷೆಗಳಲ್ಲಿ ಆಧಾರ್ ಆಧಾರಿತ ಬಯೋಮೆಟ್ರಿಕ್ ದೃಢೀಕರಣವನ್ನು ಜಾರಿಗೆ ತರಲು ನಿರ್ಧರಿಸಿದೆ ಎಂದು ಸೂಚನೆಯಲ್ಲಿ ತಿಳಿಸಲಾಗಿದೆ.…

Read More