Subscribe to Updates
Get the latest creative news from FooBar about art, design and business.
Author: kannadanewsnow57
ಕಲಬುರಗಿ : ಪರಿಶಿಷ್ಟ ಜಾತಿಗಳ ಸಮೀಕ್ಷೆ ಕಾರ್ಯ ನಡೆಸುತ್ತಿದ್ದ ಶಿಕ್ಷಕರೊಬ್ಬರು ಹೃದಯಾಘಾತದಿಂದ ಮೃತಪಟ್ಟ ಘಟನೆ ಚಿಂಚೋಳಿ ತಾಲೂಕಿನ ಚತ್ರಸಾಲ ಗ್ರಾಮದಲ್ಲಿ ಗುರುವಾರ ನಡೆದಿದೆ. ಶಿಕ್ಷಕ ನಾಗಶೆಟ್ಟಿ ಅಮೃತಪ್ಪ ಬಾಸಪಳ್ಳಿ(50) ಮೃತಪಟ್ಟವರು. ಗುರುವಾರ ಸಮೀಕ್ಷೆಗಾಗಿ ಚತ್ರಸಾಲ ಗ್ರಾಮದಲ್ಲಿ ಮನೆಗಳಿಗೆ ಭೇಟಿ ನೀಡಿದ ವೇಳೆ ಬೆಳಗ್ಗೆ 11.30 ಕ್ಕೆ ಘಟನೆ ನಡೆದಿದೆ. ತಕ್ಷಣವೇ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗುತ್ತಿತ್ತು. ಆದರೆ ಮಾರ್ಗಮಧ್ಯೆಯೇ ಮೃತಪಟ್ಟಿದ್ದಾರೆ. ನಾಗಶೆಟ್ಟಿ ಅವರು ಬುರಗಪಳ್ಳಿ ಗ್ರಾಮದವರು. 1998 ರಲ್ಲಿ ಶಿಕ್ಷಕರಾಗಿ ನೇಮಕಗೊಂಡಿದ್ದರು. ಮೃತರಿಗೆ ಪತ್ನಿ ಹಾಗೂ ಮೂವರು ಪುತ್ರರು ಇದ್ದಾರೆ. ಅಂತ್ಯಕ್ರಿಯೆ ಶುಕ್ರವಾರ ಸ್ವಗ್ರಾಮದಲ್ಲಿ ನೆರವೇರಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಬೆಂಗಳೂರು: ಪದವಿ ಪೂರ್ವ ಶಿಕ್ಷಣ ಇಲಾಖೆ 2025-26ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿಯನ್ನು ಬುಧವಾರ ಬಿಡುಗಡೆ ಮಾಡಿದ್ದು, ಜೂನ್ 2ರಿಂದಲೇ ಪ್ರಥಮ ಮತ್ತು ದ್ವಿತೀಯ ಪಿಯುಸಿ ತರಗತಿಗಳು ಆರಂಭವಾಗಲಿವೆ. ಪ್ರಥಮ ಹಾಗೂ ದ್ವಿತೀಯ ಪಿಯು ಶೈಕ್ಷಣಿಕ ವೇಳಾಪಟ್ಟಿ ಬಿಡುಗಡೆ ಮಾಡಿ ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ನಿರ್ದೇಶಕರು ಆದೇಶಿಸಿದ್ದಾರೆ. ವೇಳಾಪಟ್ಟಿ ಪ್ರಕಾರ, ಜೂನ್ 2ರಂದು ಪ್ರಥಮ ಹಾಗೂ ದ್ವಿತೀಯ ಪಿಯು ತರಗತಿಗಳು ಆರಂಭವಾಗಲಿದೆ. ಇದರ ಮೊದಲ ಅವಧಿ ಜೂನ್ 2ರಿಂದ ಆರಂಭವಾಗಿ ಸೆ. 21ರವರೆಗೆ ಹಾಗೂ ಎರಡನೇ ಅವಧಿ ಅ.8 ರಿಂದ 2026ರ ಮಾರ್ಚ್ 31ರವರೆಗೆ ಇರಲಿದ್ದು, ಸೆ. 22ರಿಂದ ಅ. 7ರವರೆಗೆ ಮಧ್ಯಂತರ ರಜೆ ಘೋಷಿಸಲಾಗಿದೆ.
ಬೆಂಗಳೂರು: ಮೇ.17, 23ರಂದು ಬೆಂಗಳೂರಲ್ಲಿ ಐಪಿಎಲ್ ಪಂದ್ಯಾವಳಿ ನಿಗದಿಯಾಗಿದೆ. ಈ ಪಂದ್ಯಾವಳಿ ವೀಕ್ಷಣೆಗೆ ತೆರಳುವಂತ ವೀಕ್ಷಕರ ಅನುಕೂಲಕ್ಕಾಗಿ ನಮ್ಮ ಮೆಟ್ರೋ ಮಧ್ಯರಾತ್ರಿಯವರೆಗೆ ವಿಸ್ತರಣೆ ಮಾಡಲಾಗಿದೆ. ಬೆಂಗಳೂರಿನಲ್ಲಿ ನಡೆಯುವ ಐಪಿಎಲ್ 2025 ಪಂದ್ಯಗಳಿಗೆ ಮೆಟ್ರೋ ಸೇವೆ ವಿಸ್ತರಣೆ TATA IPL T-20 ಕ್ರಿಕೆಟ್ ಪಂದ್ಯಗಳು ದಿನಾಂಕ 17 ಮತ್ತು 23ನೇ ಮೇ, 2025 ರಂದು ಬೆಂಗಳೂರಿನಲ್ಲಿ ನಡೆಯಲಿದ್ದು, ಸದರಿ ದಿನಗಳಲ್ಲಿ ನಮ್ಮ ಮೆಟ್ರೋ ಎಲ್ಲಾ ನಾಲ್ಕು ಟರ್ಮಿನಲ್ ಅಂದರೆ ವೈಟ್‌ಫೀಲ್ಡ್ (ಕಾಡುಗೋಡಿ), ಚಲ್ಲಘಟ್ಟ, ರೇಷ್ಮೆ ಸಂಸ್ಥೆ ಮತ್ತು ಮಾದವರ ಮೆಟ್ರೋ ನಿಲ್ದಾಣಗಳಿಂದ ಕೊನೆಯ ಮೆಟ್ರೋ ರೈಲು ಸೇವೆಯನ್ನು ಮಧ್ಯರಾತ್ರಿ 01.00ರ ವರೆಗೆ ವಿಸ್ತರಿಸಿದೆ. ನಾಡಪ್ರಭು ಕೆಂಪೇಗೌಡ ನಿಲ್ದಾಣ ಮೆಜೆಸ್ಟಿಕ್‌ನಿಂದ ಎಲ್ಲಾ ನಾಲ್ಕು ದಿಕ್ಕುಗಳ ಕಡೆಗೆ ಕೊನೆಯ ರೈಲು ಮಧ್ಯರಾತ್ರಿ 01.35 ಕ್ಕೆ ಹೊರಡಲಿದೆ. ಪ್ರಯಾಣಿಕರು ಈ ಸೌಲಭ್ಯವನ್ನು ಬಳಸಿಕೊಳ್ಳಲು ಕೋರಿದೆ. https://twitter.com/officialbmrcl/status/1923013575339085964
ಚಿತ್ರದುರ್ಗ : ರಾಜ್ಯದಲ್ಲಿ ಮತ್ತೊಂದು ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾಲೂಕಿನ ಚಿತ್ರಹಳ್ಳಿ ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರು ಮತ್ತು ಟ್ರ್ಯಾಕ್ಟರ್ ಮಧ್ಯೆ ಡಿಕ್ಕಿಯಾಗಿ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರನ್ನು ಹೊಳಲ್ಕರೆ ಮೂಲದವರು ಎಂದು ಗುರುತಿಸಲಾಗಿದ್ದು, ಈ ಪೈಕಿ ಪುಟಾಣಿ ಕಂದಮ್ಮ ಸೇರಿ ಇಬ್ಬರು ಮಕ್ಕಳು ಕೂಡ ಮೃತಪಟ್ಟಿವೆ.ಒಬ್ಬರ ಸ್ಥಿತಿ ಗಂಭೀರವಾಗಿದ್ದು, ಕೂಡಲೇ ಹೊಳಲ್ಕೆರೆ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಕೊಡಿಸಲಾಗಿದೆ. ಅರೇಹಳ್ಳಿಯ ಉದ್ಯಮಿ ಯಶವಂತ್ ಅವರ ಪತ್ನಿ ಕಾವ್ಯಾ (30), ಅತ್ತೆ ಗಂಗಮ್ಮ (50) ಹಾಗೂ ಪುತ್ರಿಯರಾದ ಹನ್ಸಿಕಾ (4), ಮನಸ್ವಿ (2) ಮೃತ ದುರ್ದೈವಿಗಳು. ಯಶವಂತ್ ಹಾಗೂ ಕುಟುಂಬ ಸದಸ್ಯರು ಕಾರಿನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಕಾರು-ಟ್ರ್ಯಾಕ್ಟರ್ ನಡುವೆ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ. ಚಿತ್ರಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ. ಸ್ಥಳಕ್ಕೆ ಎಸ್ಪಿ ರಂಜಿತ್ ಕುಮಾರ್ ಬಂಡಾರು, ಡಿವೈಎಸ್ಪಿ ದಿನಕರ್ ಭೇಟಿ ನೀಡಿ ಪರಿಶೀಲಿಸಿದ್ದಾರೆ.
ನವದೆಹಲಿ : ದೋಹಾ ಡೈಮಂಡ್ ಲೀಗ್‌ನಲ್ಲಿ ಶುಕ್ರವಾರ ಭಾರತದ ನೀರಜ್ ಚೋಪ್ರಾ ತಮ್ಮ ವೃತ್ತಿಜೀವನದಲ್ಲಿ ಮೊದಲ ಬಾರಿಗೆ 90 ಮೀಟರ್ ಗಡಿ ದಾಟಿದರು. ಪುರುಷರ ಜಾವೆಲಿನ್ ಥ್ರೋ ಫೈನಲ್‌ನಲ್ಲಿ ತಮ್ಮ ಮೂರನೇ ಪ್ರಯತ್ನದಲ್ಲಿ, 27 ವರ್ಷದ ನೀರಜ್ ಚೋಪ್ರಾ 90.23 ಮೀಟರ್ ದೂರ ಎಸೆದರು. ಆದಾಗ್ಯೂ, ನೀರಜ್ ಚೋಪ್ರಾ ಅವರ 90.23 ಮೀಟರ್ ಎಸೆತವು ಸಾಕಾಗಲಿಲ್ಲ, ಏಕೆಂದರೆ ಜರ್ಮನಿಯ ಜೂಲಿಯನ್ ವೆಬರ್ ತಮ್ಮ ಅಂತಿಮ ಪ್ರಯತ್ನದಲ್ಲಿ 91.06 ಮೀಟರ್ ದೂರ ಎಸೆದರು. ಕೊನೆಯಲ್ಲಿ, ಪುರುಷರ ಜಾವೆಲಿನ್ ಥ್ರೋ ಸ್ಪರ್ಧೆಯಲ್ಲಿ ನೀರಜ್ ಚೋಪ್ರಾ ಎರಡನೇ ಸ್ಥಾನ ಪಡೆದರು.ಗ್ರೆನಡಾದ ಆಂಡರ್ಸನ್ ಪೀಟರ್ಸ್ ಮೂರನೇ ಸ್ಥಾನ ಪಡೆದರು, ಆದರೆ ಭಾರತದ ಕಿಶೋರ್ ಜೆನಾ ಎಂಟನೇ ಸ್ಥಾನದಲ್ಲಿ ಕೊನೆಗೊಂಡರು. https://twitter.com/nnis_sports/status/1923430292213432463?ref_src=twsrc%5Etfw%7Ctwcamp%5Etweetembed%7Ctwterm%5E1923430292213432463%7Ctwgr%5E4cae0a8a20593d47e22391876516ff22dd48fcbd%7Ctwcon%5Es1_c10&ref_url=https%3A%2F%2Fm.dailyhunt.in%2Fnews%2Findia%2Fenglish%2Fhindustantimes-epaper-dh6a1e8229c99f4403a520ea1f381dcb4f%2Fneerajchoprascales90mmarkforthefirsttimeinhiscareerfinishes2ndindohadiamondleague-newsid-n664619097 ಜಾವೆಲಿನ್ ಥ್ರೋ ಸ್ಪರ್ಧೆಯಲ್ಲಿ ಜೂಲಿಯನ್ ವೆಬರ್ 90 ಮೀಟರ್ ದೂರ ದಾಟಿದ್ದು ಇದೇ ಮೊದಲು ಎಂದು ಹೇಳಲೇಬೇಕು. ಇದಕ್ಕೂ ಮೊದಲು, ನೀರಜ್ ಚೋಪ್ರಾ ಈ ಸ್ಪರ್ಧೆಯನ್ನು 88.44 ಮೀಟರ್ ದೂರದಿಂದ ಪ್ರಾರಂಭಿಸಿದರು. ಅವರ ಎರಡನೇ ಪ್ರಯತ್ನವನ್ನು…
ಗೃಹಜ್ಯೋತಿ ಯೋಜನೆಯಡಿ ರಾಜ್ಯದಲ್ಲಿನ ಪ್ರತಿ ಮನೆಗೆ ತಿಂಗಳಿಗೆ ಗರಿಷ್ಠ 200 ಯೂನಿಟ್‌ಗಳವರೆಗೆ ಬಳಕೆಯ ಮಿತಿಯಲ್ಲಿ ಪ್ರತಿ ಗೃಹಬಳಕೆ ಗ್ರಾಹಕರ ಮಾಸಿಕ ಸರಾಸರಿ ಬಳಕೆಯ(ಆರ್ಥಿಕ ವರ್ಷ 2022-23 ರ ಬಳಕೆಯ ಆಧಾರದನ್ವಯ) ಯೂನಿಟ್‌ಗಳ ಮೇಲೆ ಶೇ.10 ರಷ್ಟು ಹೆಚ್ಚಿನ ಬಳಕೆಯ ಮಿತಿಗೆ ಅನುಮತಿಸಿ, ಅದಕ್ಕನುಗುಣವಾಗಿ ವಿದ್ಯುತ್ ಬಿಲ್ಲಿನ ಮೊತ್ತವನ್ನು ಉಚಿತವಾಗಿ ಒದಗಿಸಲು ಹಾಗೂ 200 ಯೂನಿಟ್‌ಗಳ ಬಳಕೆ ಮೀರಿದ ಗ್ರಾಹಕರು ಪೂರ್ಣ ವಿದ್ಯುತ್ ಬಿಲ್ಲನ್ನು ಪಾವತಿಸಲು ಸರ್ಕಾರ ಆದೇಶಿಸಿದೆ. ಈ ಯೋಜನೆಯಡಿ ಗ್ರಾಹಕರು https://sevasindhugs.Karnataka.gov.in/ ನಲ್ಲಿ ನೋಂದಾಯಿಸಿಕೊಳ್ಳಬೇಕು. 200 ಯೂನಿಟ್‌ಗಳ ಬಳಕೆಯನ್ನು ಮೀರಿದ ಗ್ರಾಹಕರು ಸಂಪೂರ್ಣ ವಿದ್ಯುತ್ ಬಿಲ್ಲನ್ನು ಪಾವತಿಸಬೇಕು. ಗ್ರಾಹಕರು ಮಂಜೂರಾದ ಲೋಡ್‌ಗಿಂತ ಅಧಿಕ ವಿದ್ಯುತ್ ಬಳಕೆ ಮಾಡಿದಲ್ಲಿ ಜೆಸ್ಕಾಂನಿAದ ನಿಯಮಾನುಸಾರ ದಂಡ ವಿಧಿಸಲಾಗುವುದು. ಆದ್ದರಿಂದ ಗ್ರಾಹಕರು ಹೆಚ್ಚಿನ ಲೋಡ್ ಅನ್ನು ಸಕ್ರಮಗೊಳಿಸಲು ಸಂಬAಧಪಟ್ಟ ಜೆಸ್ಕಾಂ ಉಪ ವಿಭಾಗ ಕಚೇರಿಗಳಲ್ಲಿ ನೋಂದಾಯಿಸಿಕೊಳ್ಳಬೇಕೆAದು ಜೆಸ್ಕಾಂ ಕೊಪ್ಪಳ ಕಾರ್ಯ ಮತ್ತು ಪಾಲನಾ ವಿಭಾಗದ ಕಾರ್ಯನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೆಂಗಳೂರು: ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಮೇ 21ರ ವರೆಗೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿಯ 3 ಜಿಲ್ಲೆಗಳು, ಉತ್ತರ ಒಳ ನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರ್ಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ದಕ್ಷಿಣ ಒಳ ನಾಡಿನ, ಬಳ್ಳಾರಿ, ಬೆಂಗಳೂರು ನಗರ ಮತ್ತು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಚಿತ್ರದುರ್ಗ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತಮಕೂರು, ವಿಜಯನಗರ ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಎಚ್ಚರಿಕೆ ನೀಡಲಾಗಿದೆ. ಇಂದು ಭಾರಿ ಮಳೆ ಸಾಧ್ಯತೆ ಇದ್ದು,ತುಮಕೂರು, ಮಂಡ್ಯ, ಚಿಕ್ಕಬಳ್ಳಾಪುರ,ಹಾಸನ, ದಾವಣಗೆರೆ, ಕೋಲಾರ, ಬಾಗಲಕೋಟೆ, ಬಳ್ಳಾರಿ, ಧಾರವಾಡ, ವಿಜಯಪುರ, ಹಾವೇರಿ, ಗದಗ, ವಿಜಯನಗರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ಉತ್ತರ ಒಳನಾಡಿನ ಮಧ್ಯ ಭಾಗದಲ್ಲಿ ಟ್ರಫ್ ಇರುವ ಹಿನ್ನೆಲೆಯಲ್ಲಿ ಶನಿವಾರ ಕೂಡ ಭಾರಿ ಮಳೆಯಾಗುವ ಸಂಭವವಿದೆ ಎಂದು ಹವಾಮಾನ ಇಲಾಖೆ ಮನ್ಸೂಚನೆ…
ಬೆಂಗಳೂರು: ರಾಜ್ಯ ಸರ್ಕಾರದಿಂದ ಆಶಾ ಕಾರ್ಯಕರ್ತೆಯರು, ಆರೋಗ್ಯ ಸಿಬ್ಬಂದಿಗೆ ಸಿಹಿಸುದ್ದಿ ನೀಡಲಾಗಿದೆ. ಸಿಎಂ ಸಿದ್ಧರಾಮಯ್ಯ ಹೇಳಿದಂತೆ ಗೌರವಧನವನ್ನು ಹೆಚ್ಚಳ ಮಾಡಿ ಅಧಿಕೃತ ಆದೇಶ ಹೊರಡಿಸಿದ್ದಾರೆ. ಈ ಕುರಿತಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಮ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದು, 2025-26 ನೇ ಸಾಲಿನ ಆಯವ್ಯಯ ಭಾಷಣದ ಖಂಡಿಕೆ 148 ರಲ್ಲಿ “ ಆಶಾ ಕಾರ್ಯಕರ್ತೆಯರಿಗೆ ತಂಡ ಆಧಾರಿತ ಪ್ರೋತ್ಸಾಹಧನ ನೀಡುವುದರ ಮೂಲಕ ಗೌರವಧನವನ್ನು 1000 ರೂ. ಹೆಚ್ಚಿಸಲಾಗುವುದು” ಎಂದು ಘೋಷಿಸಲಾಗಿದೆ ಎಂದಿದ್ದಾರೆ. ಅಭಿಯಾನ ನಿರ್ದೇಶಕರು, ರಾಷ್ಟ್ರೀಯ ಆರೋಗ್ಯ ಅಭಿಯಾನ ಇವರಿಂದ ಸ್ವೀಕೃತವಾದ ಏಕಕಡತದಲ್ಲಿ ಆಶಾ ಕಾಯಕರ್ತೆಯು ಮಾನ್ಯತೆ ಪಡೆದ ಸಾಮಾಜಿಕ ಆರೋಗ್ಯ ಕಾರ್ಯಕರ್ತೆಯಾಗಿದ್ದು, ಸ್ಥಳೀಯ ಸಮುದಾಯದಿಂದ ಗುರುತಿಸಿ, ಆಯ್ಕೆ ಮಾಡಲಾಗಿದ್ದು, ಅವರ ಗ್ರಾಮ/ಪ್ರದೇಶದ ವ್ಯಾಪ್ತಿಯಲ್ಲಿ ಸಮುದಾಯದ ಆರೋಗ್ಯ ಸ್ಥಿತಿಯ ಸುಧಾರಣೆಗೆ ಆರೋಗ್ಯ ಸೇವೆಗಳನ್ನು ಪಡೆಯಲು ಮತ್ತು ಆರೋಗ್ಯ ಆರೈಕೆ ಚಟುವಟಿಕೆಗಳು ಹಾಗೂ ನಡವಳಿಕೆಗಳನ್ನು ಉತ್ತೇಜಿಸುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸಲು ಅವಕಾಶ ಕಲ್ಪಿಸಲಾಗಿದೆ. ರಾಜ್ಯದ ಗ್ರಾಮೀಣ ಪ್ರದೇಶದಲ್ಲಿ ಪ್ರತಿ 1000 ಜನಸಂಖ್ಯೆಗೆ…
ಬೆಂಗಳೂರು : ರಾಜ್ಯ ಸರ್ಕಾರವು ಆಸ್ತಿ ಖರೀದಿ, ಮಾರಾಟಗಾರರಿಗೆ ಶಾಕ್ ನೀಡಿದೆ. ಇನ್ಮುಂದೆ 30 ಲಕ್ಷ ರೂ. ಮೇಲಿನ ಆಸ್ತಿ ಖರೀದಿಗೆ ಐಟಿಗೆ ವಿವರ ಸಲ್ಲಿಕೆ ಕಡ್ಡಾಯಗೊಳಿಸಲಾಗಿದೆ. ಹೌದು, ನೋಂದಣಿ ಮಹಾಪರಿವೀಕ್ಷಕರು ಹಾಗೂ ಮುದ್ರಾಂಕ ಇಲಾಖೆ ಆಯುಕ್ತರಾದ ಕೆ.ಎ. ದಯಾನಂದ್ ಅವರು ಈ ಕುರಿತಾಗಿ ಮೇ 16ರಂದು ಎಲ್ಲಾ ಜಿಲ್ಲಾ ನೋಂದಣಿ ಅಧಿಕಾರಿ ಹಾಗೂ ಉಪ ನೋಂದಣಿ ಅಧಿಕಾರಿಗಳಿಗೆ ಸುತ್ತೋಲೆ ಹೊರಡಿಸಿದ್ದಾರೆ. ರಾಜ್ಯದಲ್ಲಿ ಇನ್ನು 30 ಲಕ್ಷ ರೂಪಾಯಿ ಮತ್ತು ಅದಕ್ಕಿಂತ ಹೆಚ್ಚಿನ ಬೆಲೆಯ ಯಾವುದೇ ಸ್ಥಿರಾಸ್ತಿ ನೋಂದಣಿ ವೇಳೆ ಖರೀದಿ ಹಾಗೂ ಮಾರಾಟಗಾರರ ಪಾನ್ ಸಂಖ್ಯೆ ಸೇರಿದಂತೆ ಸಂಪೂರ್ಣ ವಿವರಗಳನ್ನು ಪ್ರತ್ಯೇಕ ನಮೂನೆಯಲ್ಲಿ ಸಹಿ ಸಹಿತ ಪಡೆದು ಆದಾಯ ತೆರಿಗೆ ಇಲಾಖೆಗೆ ಕಡ್ಡಾಯವಾಗಿ ಸಲ್ಲಿಸಬೇಕು. ಮಾಹಿತಿಯನ್ನು ಸಲ್ಲಿಸದಿದ್ದರೆ ಅಂತಹ ದಸ್ತಾವೇಜುಗಳು ನೋಂದಣಿಯಾಗುವುದಿಲ್ಲ. ಖರೀದಿದಾರ ಹಾಗೂ ಮಾರಾಟಗಾರನಿಂದ ಪಡೆದ ಆಸ್ತಿ ವಿವರ, ಪಾನ್ ಕಾರ್ಡ್, ಆಧಾರ್ ಕಾರ್ಡ್, ವಿಳಾಸ ಸೇರಿದಂತೆ ಪ್ರಮಾಣ ಪತ್ರವನ್ನು ದಸ್ತಾವೇಜು ಹಾಳೆಯ ಜೊತೆಗೆ ಸ್ಕ್ಯಾನ್ ಮಾಡಬೇಕು. ಈ…
ಬೆಂಗಳೂರು: ಹೆಣ್ಣು ಮಕ್ಕಳ ಶಿಕ್ಷಣ ಉತ್ತೇಜಿಸುವ ಉದ್ದೇಶದಿಂದ ಅಜೀಂ ಪ್ರೇಮ್ ಜಿ ಫೌಂಡೇಶನ್ ಉನ್ನತ ಶಿಕ್ಷಣ ವ್ಯಾಸಂಗ ಮಾಡುಉವ ವಿದ್ಯಾರ್ಥಿನಿಯರಿಗೆ ಪ್ರತಿ ವರ್ಷ 30 ಸಾವಿರ ರೂ. ಅಜೀಂ ಪ್ರೇಮ್ ಜಿ ಹೆಸರಿನಲ್ಲಿ ವಿದ್ಯಾರ್ಥಿ ವೇತನ ನೀಡುವುದಾಗಿ ಘೋಷಿಸಿದೆ. ಹೌದು, ಉನ್ನತ ಶಿಕ್ಷಣಕ್ಕೆ ಹೆಣ್ಣುಮಕ್ಕಳನ್ನು ಉತ್ತೇಜಿಸಲು ಅಜೀಂ ಪ್ರೇಮ್ ಜಿ ಫೌಂಡೇಶನ್ ಕರ್ನಾಟಕ ಸೇರಿದಂತೆ 18 ರಾಜ್ಯಗಳಲ್ಲಿ 2025- 26 ನೇ ಸಾಲಿನಲ್ಲಿ ಪದವಿ, ಡಿಪ್ಲೋಮಾ ಗೆ ಪ್ರವೇಶ ಪಡೆಯುವ 2.5 ಲಕ್ಷ ವಿದ್ಯಾರ್ಥಿನಿಯರಿಗೆ ವ್ಯಾಸಂಗದ ಅವಧಿಯಲ್ಲಿ ಪ್ರತಿವರ್ಷ ತಲಾ 30 ಸಾವಿರ ರೂ. ವಿದ್ಯಾರ್ಥಿ ವೇತನ ನೀಡುವುದಾಗಿ ಘೋಷಿಸಿದೆ. ಪ್ರತಿಷ್ಠಾನದ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯ ಅನುರಾಗ್ ಬೆಹರ ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ್ದು, ವಿದ್ಯಾರ್ಥಿ ವೇತನಕ್ಕೆ ಸರ್ಕಾರಿ ಶಾಲೆಗಳಲ್ಲಿ 10 ಮತ್ತು 12ನೇ ತರಗತಿ ಓದಿ ಉತ್ತೀರ್ಣರಾಗಿ ಪ್ರಸ್ತುತ ಸರ್ಕಾರಿ/ ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲಿ ಪದವಿ/ ಡಿಪ್ಲೋಮಾ ವ್ಯಾಸಂಗಕ್ಕೆ ಪ್ರವೇಶ ಪಡೆದ ಹೆಣ್ಣು ಮಕ್ಕಳು ಅರ್ಜಿ ಸಲ್ಲಿಸಬಹುದು. ಸೆಪ್ಟೆಂಬರ್…














