Subscribe to Updates
Get the latest creative news from FooBar about art, design and business.
Author: kannadanewsnow57
ಬೆಂಗಳೂರು : ಸರ್ಕಾರಿ ನೌಕರರು ಕಟ್ಟಡ ನಿರ್ಮಾಣಕ್ಕಾಗಿ ಅಥವಾ ಮನೆ ನಿರ್ಮಾಣಕ್ಕಾಗಿ ಅನುಮತಿ ನೀಡುವ ಆದೇಶ ಹಾಗೂ ಚೆಕ್ ಲಿಸ್ಟ್ ಬಗ್ಗೆ ಇಲ್ಲಿದೆ ಸಂಪೂರ್ಣ ಮಾಹಿತಿ. 1. ಕರ್ನಾಟಕ ರಾಜ್ಯ ನಾಗರಿಕ ಸೇವಾ (ನಡತೆ) ನಿಯಮಗಳು, 2021 (ಸಂಕ್ಷಿಪ್ತವಾಗಿ ‘2021ರ ನಿಯಮಗಳು), ದಿನಾಂಕ: 07-01-2021 ರಿಂದ ಜಾರಿಗೆ ಬಂದಿರುತ್ತದೆ. 2. 2021ರ ನಿಯಮಗಳ ನಿಯಮ 24(3) ರ ಅನುಸಾರ ತನ್ನೊಂದಿಗೆ ಅಧಿಕೃತ ವ್ಯವಹಾರವನ್ನು ಹೊಂದಿರುವ ವ್ಯಕ್ತಿಯನ್ನು ಹೊರತುಪಡಿಸಿ. ಬೇರೆ ಮೂಲಗಳಿಂದ ತನ್ನ ಹೆಸರಿನಲ್ಲಾಗಲಿ ಅಥವಾ ತನ್ನ ಕುಟುಂಬದ ಯಾವುದೇ ಸದಸ್ಯನ ಹೆಸರಿನಲ್ಲಾಗಲಿ ಗುತ್ತಿಗೆಯ, ಅಡಮಾನದ, ಖರೀದಿಯ, ಮಾರಾಟದ, ಉಡುಗೊರೆಯ ಮೂಲಕ ಅಥವಾ ಅನ್ಯಥಾ ಸ್ಥಿರ ಸ್ವತ್ತನ್ನು ಅರ್ಜಿಸುವ ಅಥವಾ ವಿಲೇ ಮಾಡುವ ಬಗೆ, ನಿಯಮಿಸಲಾದ ಪ್ರಾಧಿಕಾರಕ್ಕೆ ಮೊದಲೇ ತಿಳಿಸಬೇಕಾಗುತ್ತದೆ. ಒಂದು ವೇಳೆ ಸಮರ್ಥನೀಯ ಕಾರಣಗಳಿಂದಾಗಿ ನಿಯಮಿತ ಪ್ರಾಧಿಕಾರಿಗೆ ಮೊದಲೇ ತಿಳಿಸದೇ ಯಾವುದೇ ಸ್ಥಿರ ಸ್ವತ್ತನ್ನು ಅರ್ಜಿಸಿದಲ್ಲಿ ಅಥವಾ ಎಲೇ ಮಾಡಿದ್ದಲ್ಲಿ ಅಂತಹ ವ್ಯವಹಾರ ಕೈಗೊಂಡ ಎರಡು ತಿಂಗಳೊಳಗಾಗಿ ವಿವರಗಳು ಹಾಗೂ ಪೂರಕ…
ಹುಬ್ಬಳ್ಳಿ : ರಾಜ್ಯದಲ್ಲಿ ಬೆಚ್ಚಿ ಬೀಳಿಸುವ ಘಟನೆ ನಡೆದಿದ್ದು, ಬಿಹಾರ ಮೂಲದ ಯುವಕನೊಬ್ಬ ಹುಬ್ಬಳ್ಳಿಯಲ್ಲಿ 5 ವರ್ಷದ ಬಾಲಕಿಗೆಯನ್ನು ಕಿಡ್ನ್ಯಾಪ್ ಮಾಡಿ ಬಳಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. ನಂತರ ಕತ್ತು ಹಿಸುಕಿ ಕೊಲೆ ಮಾಡಿರುವ ಘಟನೆ ನಡೆದಿತ್ತು. ಇದೀಗ ಘಟನೆಗೆ ಸಂಬಂಧಿಸಿದಂತೆ ಬಾಲಕಿಯ ಕುಟುಂಬಕ್ಕೆ ಸರ್ಕಾರದಿಂದ 10 ಲಕ್ಷ ಪರಿಹಾರ ನೀಡಲಾಗುವುದು ಎಂದು ವಿಧಾನ ಪರಿಷತ್ ಮುಖ್ಯ ಸಚೇತಕ ಸಲೀಂ ಅಹಮದ್ ಘೋಷಿಸಿದ್ದಾರೆ. ಸರ್ಕಾರದ ಪರಿಹಾರದ ಬಗ್ಗೆ ಸಲೀಂ ಅಹಮದ್ ಮಾಹಿತಿ ನೀಡಿದ್ದಾರೆ. ವಿಧಾನ ಪರಿಷತ್ ಕಾಂಗ್ರೆಸ್ ಮುಖ್ಯ ಸಚೇತಕ ಸಲೀಂ ಅಹಮದ್ ಮೃತ ಬಾಲಕಿಯ ಕುಟುಂಬಕ್ಕೆ 10 ಲಕ್ಷ ಪರಿಹಾರ ನೀಡಲಾಗುತ್ತದೆ ಎಂದು ತಿಳಿಸಿದ್ದಾರೆ. ಇನ್ನು ಆರೋಪಿಯನ್ನು ಅರೆಸ್ಟ್ ಮಾಡಲು ತೆರಳಿದಾಗ ಪಿಎಸ್ಐ ಅನ್ನಪೂರ್ಣ ಹಾಗೂ ಇಬ್ಬರು ಕಾನ್ಸ್ಟೇಬಲ್ ಮೇಲೆ ಆರೋಪಿ ಹಲ್ಲೆ ಮಾಡಿದ್ದಾನೆ. ಕೂಡಲೇ ಪಿಎಸ್ಐ ಅನ್ನಪೂರ್ಣ ಅವರು ಆರೋಪಿ ಮೇಲೆ ತಮ್ಮ ಆತ್ಮ ರಕ್ಷಣೆಗಾಗಿ ಗುಂಡು ಹಾರಿಸಿದ್ದಾರೆ. ಈ ವೇಳೆ ತಕ್ಷಣ ಆತನನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಯಿತು.…
ಬೆಂಗಳೂರು : ಭಾರತೀಯ ರೈಲ್ವೆಯಲ್ಲಿ ಖಾಲಿ ಇರುವ 9,970 ಸಹಾಯಕ ಲೋಕೋ ಪೈಲಟ್ (ALP) ಹುದ್ದೆಗಳಿಗೆ ಅರ್ಜಿ ನೋಂದಣಿ ಪ್ರಾರಂಭವಾಗಿದೆ. 9,970 ಸಹಾಯಕ ಲೋಕೋ ಪೈಲಟ್ (ALP) ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ ಮತ್ತು ಅಭ್ಯರ್ಥಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ವಿವರಗಳನ್ನು ನೀವು ಇಲ್ಲಿ ತಿಳಿದುಕೊಳ್ಳಬಹುದು. ಭಾರತೀಯ ರೈಲ್ವೆ 9,970 ಸಹಾಯಕ ಲೋಕೋ ಪೈಲಟ್ (ALP) ಹುದ್ದೆಗಳನ್ನು ಭರ್ತಿ ಮಾಡಲು ಅಧಿಸೂಚನೆ ಹೊರಡಿಸಿದೆ. ಕೇಂದ್ರ ಸರ್ಕಾರದ ಪ್ರತ್ಯೇಕ ಸಚಿವಾಲಯದ ಅಡಿಯಲ್ಲಿ ಕಾರ್ಯನಿರ್ವಹಿಸುವ ರೈಲ್ವೆ ವಲಯದಲ್ಲಿ ಕೆಲಸ ಮಾಡುವುದು ಲಕ್ಷಾಂತರ ಉದ್ಯೋಗಿಗಳ ಕನಸಾಗಿದೆ. ಹೀಗಾಗಿ, ರೈಲ್ವೆ ಹೊರಡಿಸಿದ ಪರೀಕ್ಷಾ ಅಧಿಸೂಚನೆಗಾಗಿ ಅಭ್ಯರ್ಥಿಗಳು ಕಾತುರದಿಂದ ಕಾಯುತ್ತಿದ್ದಾಗಲೇ, ರೈಲ್ವೆ ನೇಮಕಾತಿ ಮಂಡಳಿಯ ಪ್ರಕಟಣೆ ಹೊರಬಿದ್ದಿದ್ದು, ಅಭ್ಯರ್ಥಿಗಳ ಸಂತಸಕ್ಕೆ ಕಾರಣವಾಗಿದೆ. ತಮಿಳುನಾಡು ಸೇರಿದಂತೆ ಪ್ರದೇಶಗಳನ್ನು ಒಳಗೊಂಡಿರುವ ದಕ್ಷಿಣ ರೈಲ್ವೆಯೊಂದರಲ್ಲೇ ಸಹಾಯಕ ಲೋಕೋ ಪೈಲಟ್ ಹುದ್ದೆಗಳು 510 ಖಾಲಿ ಇವೆ. ಈ ಹುದ್ದೆಗಳಿಗೆ ಅರ್ಜಿ ನೋಂದಣಿ ಈಗ ಆರಂಭವಾಗಿದೆ. ಅರ್ಜಿ ಸಲ್ಲಿಸುವುದು ಹೇಗೆ ಮತ್ತು…
ಬೆಂಗಳೂರು : ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್, (ಗ್ರಾಮ ಸಭೆ ಕರೆಯುವ ಮತ್ತು ನಡೆಸುವ) ನಿಯಮಗಳು- 2024ರನ್ವಯ ಗ್ರಾಮ ಪಂಚಾಯತಿಗಳು ಗ್ರಾಮ ಸಭೆಗಳನ್ನು ಕರೆಯುವ ಮತ್ತು ನಡೆಸುವ ವಿಧಾನಗಳು ಕುರಿತು ಮಾಹಿತಿ ಇಲ್ಲಿದೆ. ಗ್ರಾಮ ಪಂಚಾಯತಿಗಳು ಗ್ರಾಮ ಸಭೆಗಳನ್ನು ಕರೆಯುವ ಮತ್ತು ನಡೆಸುವ ವಿಧಾನಗಳು ಗ್ರಾಮ ಸಭೆ ದಿನಾಂಕದಿಂದ 7 ದಿನಗಳಿಗೆ ಮೊದಲು ಗ್ರಾಮ ಸಭಾ ನೋಟಿಸ್ ಹೊರಡಿಸಬೇಕು. ಪ್ರತಿ ಕಂದಾಯ ಗ್ರಾಮ ಹಾಗೂ ಅದರ ಉಪಗ್ರಾಮಗಳ ಗ್ರಾಮ ಸಭೆಯನ್ನು ವರ್ಷದಲ್ಲಿ 4 ಬಾರಿ ಕರೆಯಬೇಕು. ಗ್ರಾಮ ಸಭೆಯ ಕರಪತ್ರ / ನೋಟಿಸ್ ನಲ್ಲಿ ಸಭೆಯ ದಿನಾಂಕ, ಸ್ಥಳ, ವೇಳೆ, ಅಧ್ಯಕ್ಷತೆ, ಸಭೆಯಲ್ಲಿ ಚರ್ಚಿಸುವ ವಿಷಯಗಳ (ಅಜೆಂಡಾ) ಪಟ್ಟಿಯನ್ನು ಕಡ್ಡಾಯವಾಗಿ ನಮೂದಿಸಬೇಕು. ಸಾಮಾನ್ಯ ಗ್ರಾಮ ಸಭೆಗಳು ಏಪ್ರಿಲ್ 24 ಮತ್ತು ಅಕ್ಟೋಬರ್ 02ನ್ನು ಹೊರತುಪಡಿಸಿ, ತದನಂತರ ಏಳು ದಿನಗಳೊಳಗೆ ಪ್ರತಿ ಕಂದಾಯ ಗ್ರಾಮದಲ್ಲಿ ಗ್ರಾಮ ಸಭೆಯ ದಿನಾಂಕ ನಿಗದಿಪಡಿಸಬೇಕು. ವಿಶೇಷ ಗ್ರಾಮ ಸಭೆಗಳು ಆಗಸ್ಟ್-15 ಮತ್ತು ಜನವರಿ 26ನ್ನು…
ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ 2024-25ನೇ ಸಾಲಿನ ಆಯವ್ಯಯದಡಿ ಅನುಷ್ಠಾನಗೊಳ್ಳುವ ಕಲ್ಯಾಣ ಕಾರ್ಯಕ್ರಮಗಳಿಗೆ ಪಾಲಿಕೆ ವ್ಯಾಪ್ತಿಯ ಪೌರ ಕಾರ್ಮಿಕರು, ಪರಿಶಿಷ್ಟ ಜಾತಿ / ಪಂಗಡಗಳು, ಆರ್ಥಿಕವಾಗಿ ಹಿಂದುಳಿದವರು, ಅಲ್ಪಸಂಖ್ಯಾತರು, ವಿಶೇಷ ಚೇತನರು, ತೃತೀಯ ಲಿಂಗಿಗಳು ಹಾಗೂ ಮಹಿಳೆಯರು ಅರ್ಜಿ ಸಲ್ಲಿಸಬಹುದು. ಅನುಷ್ಠಾನಗೊಳ್ಳುವ ಕಲ್ಯಾಣ ಕಾರ್ಯಕ್ರಮಗಳು ಒಂಟಿ ಮನೆ ನಿರ್ಮಾಣ ಮತ್ತು ಅಮೃತ ಮಹೋತ್ಸವ ಯೋಜನೆಯಡಿ ಫ್ಲಾಟ್ ಖರೀದಿಗೆ ಧನ ಸಹಾಯ ಹೊಲಿಗೆ ತರಬೇತಿ ಪಡೆದ ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರ ವಿತರಣೆ ಪೌರ ಕಾರ್ಮಿಕರು ಹಾಗೂ ಉದ್ಯೋಗಸ್ಥ ಮಹಿಳೆಯರಿಗೆ ಎಲೆಕ್ನಿಕ್ ದ್ವಿಚಕ್ರ ವಾಹನ ವಿತರಣೆ (ಗಾರ್ಮೆಂಟ್ಸ್ ಉದ್ಯೋಗಿಗಳಿಗೆ ಪ್ರಥಮ ಆದ್ಯತೆ) ವಿಶೇಷ ಚೇತನರಿಗೆ ಹೆಚ್ಚುವರಿ ಚಕ್ರ ಅಳವಡಿಸಿದ ಎಲೆಕ್ನಿಕ್ ತ್ರಿಚಕ್ರ ವಾಹನ ಮತ್ತು ವೀಲ್‌ಚೇರ್ ವಿತರಣೆ ಗಂಭೀರ ಕಾಯಿಲೆ, ಹಿರಿಯ ನಾಗರಿಕರ ಆರೋಗ್ಯ ತಪಾಸಣೆ, ಅಂಗ ವೈಫಲ್ಯ ಶಸ್ತ್ರ ಚಿಕಿತ್ಸೆಗೆ ಧನಸಹಾಯ ಬೀದಿಬದಿ ವ್ಯಾಪಾರಸ್ಥರಿಗೆ ಎಲೆಕ್ನಿಕ್ ವೆಂಡಿಂಗ್ ಮೆಷಿನ್ ವಿತರಣೆ ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ ವರ್ಗಗಳ ಪೌರಕಾರ್ಮಿಕ…
ನವದೆಹಲಿ: ಕೇಂದ್ರ ಸರ್ಕಾರ ಶುಕ್ರವಾರ ಡಾ. ಭೀಮರಾವ್ ರಾಮ್‌ಜಿ ಅಂಬೇಡ್ಕರ್ ಅವರ ಜನ್ಮ ದಿನಾಚರಣೆಯಾದ ಏಪ್ರಿಲ್ 14 ಅನ್ನು ಸಾರ್ವಜನಿಕ ರಜಾದಿನವೆಂದು ಘೋಷಿಸಿದೆ. ಸಾಮಾಜಿಕ ಮಾಧ್ಯಮ ವೇದಿಕೆ X ನಲ್ಲಿ ಈ ಘೋಷಣೆ ಮಾಡಿದ ಕೇಂದ್ರ ಸಂಸ್ಕೃತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್, “ಸಂವಿಧಾನದ ಶಿಲ್ಪಿ, ಸಮಾಜದಲ್ಲಿ ಸಮಾನತೆಯ ಹೊಸ ಯುಗವನ್ನು ಸ್ಥಾಪಿಸಿದವರು, ನಮ್ಮ ಗೌರವಾನ್ವಿತ ಬಾಬಾ ಸಾಹೇಬ್ ಡಾ. ಭೀಮರಾವ್ ಅಂಬೇಡ್ಕರ್ ಜಿ ಅವರ ಜನ್ಮ ದಿನಾಚರಣೆಯಂದು ಈಗ ಸಾರ್ವಜನಿಕ ರಜಾದಿನವನ್ನು ಆಚರಿಸಲಾಗುವುದು” ಎಂದು ಹೇಳಿದ್ದಾರೆ. https://twitter.com/gssjodhpur/status/1905594963775373803 “ಈ ನಿರ್ಧಾರವನ್ನು ತೆಗೆದುಕೊಳ್ಳುವ ಮೂಲಕ, ಬಾಬಾ ಸಾಹೇಬ್ ಅವರ ನಿಷ್ಠಾವಂತ ಅನುಯಾಯಿ, ಗೌರವಾನ್ವಿತ ಪ್ರಧಾನಿ ನರೇಂದ್ರ ಮೋದಿ ಅವರು ರಾಷ್ಟ್ರದ ಭಾವನೆಗಳನ್ನು ಗೌರವಿಸಿದ್ದಾರೆ” ಎಂದು ಶೇಖಾವತ್ ಹೇಳಿದರು. ಡಾ. ಭೀಮರಾವ್ ಅಂಬೇಡ್ಕರ್ ಯಾರು? ಬಾಬಾಸಾಹೇಬ್ ಅಂಬೇಡ್ಕರ್ ಎಂದು ವ್ಯಾಪಕವಾಗಿ ಕರೆಯಲ್ಪಡುವ ಡಾ. ಭೀಮರಾವ್ ರಾಮ್‌ಜಿ ಅಂಬೇಡ್ಕರ್ ಅವರು ಏಪ್ರಿಲ್ 14, 1891 ರಂದು ಮಧ್ಯಪ್ರದೇಶದ ಮಾವ್‌ನಲ್ಲಿ ಜನಿಸಿದರು. ಅವರು ಆಧುನಿಕ ಭಾರತವನ್ನು…
ಬೆಂಗಳೂರು : ಡೀಸೆಲ್ ದರ ಹಾಗೂ ಟೋಲ್ ಶುಲ್ಕ ಹೆಚ್ಚಳ ವಿರೋಧಿಸಿ, ಪರಿಷ್ಕರಣೆ ಮಾಡುವಂತೆ ಆಗ್ರಹಿಸಿ ಎ.14 ಅಂದರೆ ಇಂದು ಮಧ್ಯರಾತ್ರಿಯಿಂದಲೇ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ರಾಜ್ಯ ಲಾರಿ ಮಾಲೀಕರ ಸಂಘ ಸಜ್ಜಾಗಿದೆ. ಈ ಕುರಿತು ಜಿ.ಆರ್. ಷಣ್ಮುಖಪ್ಪ ಮಾತನಾಡಿ, ಏ.14 ರಿಂದ ಅನಿರ್ದಿಷ್ಟಾವಧಿ ಲಾರಿ ಮುಷ್ಕರಕ್ಕೆ ಈಗಾಗಲೇ ಕರೆ ನೀಡಲಾಗಿದೆ. ಹೊರ ರಾಜ್ಯಗಳ ಲಾರಿ ಮಾಲೀಕರು ಸೇರಿದಂತೆ ರಾಜ್ಯವ್ಯಾಪಿ ಬೆಂಬಲಿಸಿದ್ದಾರೆ. ಯಾವುದೇ ಕಾರಣಕ್ಕೂ ಮುಷ್ಕರ ಹಿಂಪಡೆಯುವುದಿಲ್ಲ. ಕೆಲ ಬಣದ ನಾಯಕರು ಸರ್ಕಾರದೊಟ್ಟಿಗೆ ಕೈಜೋಡಿಸಿದ್ದು ವಿರೋಧ ಮಾಡುತ್ತಿದ್ದಾರೆ. ಈಗಾಗಲೇ ಹಲವು ಪೆಟ್ರೋಲ್ ಬಂಕ್ ಸಂಘಟನೆಗಳು ಸೇರಿದಂತೆ ರಾಜ್ಯವ್ಯಾಪಿ ಮುಷ್ಕರಕ್ಕೆ ಬೆಂಬಲ ಸೂಚಿಸಿವೆ. ಹಾಗಾಗಿ ಮುಷ್ಕರ ನಡೆಸುವುದು ನಿಶ್ಚಿತ ಎಂದು ಹೇಳಿದರು. ಅಲ್ಲದೇ ನಾಳೆಯಿಂದ ರಾಜ್ಯದಲ್ಲಿ 6 ಲಕ್ಷಕ್ಕೂ ಹೆಚ್ಚು ಲಾರಿಗಳಿದ್ದು ಮುಷ್ಕರಕ್ಕೆ ಬೆಂಬಲಿಸುವ ಮೂಲಕ ಸಂಚಾರವನ್ನು ಸ್ಥಗಿತಗೊಳಿಸಲಿವೆ. ಹೊರರಾಜ್ಯಗಳಿಂದಲೂ ಲಾರಿಗಳು ಬರಲು ಬಿಡುವುದಿಲ್ಲ ಅಂದು ವಾಣಿಜ್ಯ ಸೇರಿದಂತೆ ಎಲ್ಲ ಮಾದರಿಯ ಸರಕು ಸೇವೆಗಳು ಸ್ತಬ್ಧಗೊಳ್ಳಲಿವೆ ಎಂದರು. ಪೆಟ್ರೋಲಿಯಂ ಅಸೋಸಿಯೇಷನ್, ಗ್ಯಾಸ್ ವಾಹನಗಳು ಹಾಗೂ…
ಬೆಂಗಳೂರು: ಸಂವಿಧಾನ ಶಿಲ್ಪಿ ಡಾ.ಬಿಆರ್ ಅಂಬೇಡ್ಕರ್ ಅವರ ಜಯಂತಿಯನ್ನು ರಾಜ್ಯದಲ್ಲಿ ಎಲ್ಲಾ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಲ್ಲಿ ಏಪ್ರಿಲ್.14, 2025ರಂದು ಕಡ್ಡಾಯವಾಗಿ ಆಚರಿಸುವಂತೆ ಸರ್ಕಾರ ಆದೇಶಿಸಿದೆ. ಈ ಕುರಿತಂತೆ ಶಾಲಾ ಶಿಕ್ಷಣ ಇಲಾಖೆಯಯ ಆಯುಕ್ತರು ಸುತ್ತೋಲೆ ಹೊರಡಿಸಿದ್ದು, ರಾಜ್ಯದಲ್ಲಿ 2024-25ನೇ ಶೈಕ್ಷಣಿಕ ವರ್ಷ ದಿನಾಂಕ: 10.04.2025ರಂದು ಮುಕ್ತಾಯವಾಗುತ್ತದೆ ದಿನಾಂಕ :14.04.2025 ರಂದು ಸಂವಿಧಾನ ಶಿಲ್ಪಿ ಡಾ|| ಬಿ. ಆರ್. ಅಂಬೇಡ್ಕರ್‌ರವರ ಜಯಂತಿಯನ್ನು ರಾಜ್ಯದ ಎಲ್ಲಾ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಆಚರಿಸಲು ಕ್ರಮವಹಿಸುವಂತೆ ಉಲ್ಲೇಖಿತ ಸುತ್ತೋಲೆಯಲ್ಲಿ ಈಗಾಗಲೇ ಸೂಚಿಸಲಾಗಿದೆ.ದ ಮುಂದುವರೆದು, ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಮುಖ್ಯ ಶಿಕ್ಷಕರು, ಸಹ ಶಿಕ್ಷಕರು, ಸಿಬ್ಬಂದಿಗಳು, ಎಸ್.ಡಿ.ಎಂ.ಸಿ ಅಧ್ಯಕ್ಷರು, ಮತ್ತು ಸದಸ್ಯರು ಹಾಗೂ ವಿದ್ಯಾರ್ಥಿಗಳ ಸಹಭಾಗಿತ್ವದಲ್ಲಿ DOT: 14.04.20250 ಸೋಮವಾರದಂದು ಸಂವಿಧಾನ ಶಿಲ್ಪಿ ಡಾ|| ಬಿ. ಆರ್. ಅಂಬೇಡ್ಕರ್‌ವರ ಜಯಂತಿಯನ್ನು ಪ್ರತಿ ವರ್ಷದಂತೆ ಕಡ್ಡಾಯವಾಗಿ ಆಚರಿಸಲು ನಿಯಮಾನುಸಾರ ಅಗತ್ಯ ಕ್ರಮಗಳನ್ನು ವಹಿಸುವಂತೆ ರಾಜ್ಯದ ಎಲ್ಲಾ ಉಪನಿರ್ದೇಶಕರು (ಆಡಳಿತ) ಹಾಗೂ…
ಹುಬ್ಬಳ್ಳಿ : ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ ಬೆಳಕಿಗೆ ಬಂದಿದ್ದು, 5 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಹುಬ್ಬಳ್ಳಿಯ ಅಶೋಕ್ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ಬೆಳಕಿಗೆ ಬಂದಿದ್ದು, ಬಿಹಾರ ಮೂಲದ ವ್ಯಕ್ತಿಯೊಬ್ಬ 5 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿರುವ ಆರೋಪ ಕೇಳಿಬಂದಿದೆ. ಸದ್ಯ ಬಾಲಕಿಯ ಶವವನ್ನು ಮರಣೋತ್ತರ ಪರೀಕ್ಷೆಗೆ ಕಿಮ್ಸ್ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
ಬಳ್ಳಾರಿ : ರಾತ್ರಿ ಮಲಗಿದ್ದ ವೇಳೆಯೇ ಹಾಲು ಕಚ್ಚಿ ಬಾಲಕಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬಳ್ಳಾರಿ ಜಿಲ್ಲೆಯಲ್ಲಿ ನಡೆದಿದೆ. ಬಳ್ಳಾರಿಯ ಹೊಸ ಮೋಕಾದಲ್ಲಿ ಹಾವು ಕಚ್ಚಿ ಬಾಲಕಿ ಮಲಗಿದ್ದಲ್ಲೇ ಸಾವನ್ನಪ್ಪಿದ್ದಾಳೆ. 13 ವರ್ಷದ ಶ್ರಾವಣಿ ಮೃತ ವಿದ್ಯಾರ್ಥಿನಿ. ಬೆಳಿಗ್ಗೆ ಬಾಲಕಿ ಏಳದಿದ್ದಾಗ ಕುಟುಂಬದವರು ಗಮನಿಸಿದಾಗ ಬಾಲಕಿಗೆ ಮೂರು ಕಡೆಗಳಲ್ಲಿ ಹಾವು ಕಚ್ಚಿರುವುದು ಕಂಡುಬಂದಿದೆ. ಬಾಲಕಿಯ ಕೈ, ಕಾಲುಗಳಿಗೆ ಮೂರು ಕಡೆ ಹಾವು ಕಡಿದಿದ್ದು, ವಿಷವೇರಿ ಬಾಲಕಿ ಮಲಗಿದ್ದಲ್ಲಿಯೇ ಸಾವನ್ನಪ್ಪಿದ್ದಾಳೆ.














