Author: kannadanewsnow57

ಬೆಂಗಳೂರು : ಏಪ್ರಿಲ್ 11 ರ ನಾಳೆ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಮಹತ್ವದ ಸಚಿವ ಸಂಪುಟ ಸಭೆ ನಡೆಯಲಿದ್ದು, ಸಬೆಯಲ್ಲಿ ಬಹುನಿರೀಕ್ಷಿತ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷಾ ವರದಿ (ಜಾತಿಗಣತಿ ವರದಿ-2015) ವರದಿ ಮಂಡನೆಯಾಗಲಿದೆ. ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ಬರೋಬ್ಬರಿ 169 ಕೋಟಿ ರೂ.ಗಳ ವೆಚ್ಚದಲ್ಲಿ ಸಿದ್ದಪಡಿಸಿರುವ ಜಾತಿಗಣತಿ ವರದಿಯನ್ನು ಸಚಿವ ಸಂಪುಟ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಮಂಡಿಸಲಿದ್ದಾರೆ. ದತ್ತಾಂಶಗಳ ಅಧ್ಯಯನ ವರದಿ ಪರಿಶೀಲನೆ ಬಳಿಕ ಅನುಷ್ಠಾನ ಕುರಿತು ಸಚಿವ ಸಂಪುಟ ಸಭೆ ಯಾವ ನಿರ್ಧಾರ ಕೈಗೊಲ್ಳಲಿದೆ ಎಂಬುದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ.

Read More

ಹಾವು ಕಡಿತಕ್ಕೊಳಗಾದ ವ್ಯಕ್ತಿಯನ್ನು ಗಾಬರಿಗೊಳಿಸದೆ, ಅವರೊಂದಿಗೆ ಶಾಂತವಾಗಿ ವರ್ತಿಸಿ, ಹತ್ತಿರದ ಆಸ್ಪತ್ರೆಗೆ ತಕ್ಷಣವೇ ಕರೆದುಕೊಂಡು ಬಂದು ಚುಚ್ಚುಮದ್ದು ಕೊಡಿಸುವ ಮೂಲಕ ಜೀವ ಹಾನಿಯಾಗದಂತೆ ಮಾಡಲು ಕೈ ಜೋಡಿಸಿ ಎಂದು ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಮರಿಯಂಬಿ.ವಿ.ಕೆ ಅವರು ಸಾರ್ವಜನಿಕರಲ್ಲಿ ಮನವಿ ಮಾಡಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಸರ್ವೇಕ್ಷಣಾ ಘಟಕ ಹಾಗೂ ಗ್ರಾಮ ಪಂಚಾಯತ್, ಪ್ರಾಥಮಿಕ ಆರೋಗ್ಯ ಕೇಂದ್ರ ಶಿಡಿಗಿನಮೊಳ ಇವರ ಸಂಯುಕ್ತಾಶ್ರಯದಲ್ಲಿ “ಹಾವು ಕಡಿತ ಕುರಿತು ಜಾಗೃತಿ” ಕಾರ್ಯಕ್ರಮದಲ್ಲಿ ಮಾತನಾಡಿದರು. ಹಾವು ಕಚ್ಚಿದಾಗ ಗಾಬರಿಯಾಗುವುದು ಸಾಮಾನ್ಯವಾಗಿದ್ದು, ಇದರಿಂದ ವ್ಯಕ್ತಿಯ ಜೀವಕ್ಕೆ ಅಪಾಯವಾಗುವ ಸಾಧ್ಯತೆ ಇರುತ್ತದೆ. ಅದರಲ್ಲೂ ವಿಷಕಾರಿ ಹಾವು ಕಡಿತದ ಸಂದರ್ಭದಲ್ಲಿ ವ್ಯಕ್ತಿಯನ್ನು ಯಾವುದೇ ವಾಹನ ಅಥವಾ 108 ಅಂಬುಲೆನ್ಸ್ ಮೂಲಕ ಹತ್ತಿರದ ಆಸ್ಪತ್ರೆಗೆ ಕರೆದುಕೊಂಡು ಹೋಗಲು ಮೊದಲ ಆದ್ಯತೆ ನೀಡಬೇಕು ಎಂದರು. ವೈದ್ಯಾಧಿಕಾರಿ ಡಾ.ಸಂತೋಷ್ ಹೆಬ್ಬಾಳ್ ಮಾತನಾಡಿ, ಹಾವು ಕಚ್ಚಿದಾಗ ಕಚ್ಚಿದ ಜಾಗದ ಪಕ್ಕದಲ್ಲಿ ಬಟ್ಟೆಯನ್ನು ಕಟ್ಟುವುದು, ಬ್ಲೇಡ್ ಅಥವಾ ಚಾಕುವಿನಿಂದ…

Read More

ಬೆಂಗಳೂರು: 2025ರ ದ್ವಿತೀಯ ಪಿಯುಸಿ ಪರೀಕ್ಷೆ-1ಕ್ಕೆ ಹಾಜರಾತಿ ಕೊರತೆಯ ಕಾರಣ ಪರೀಕ್ಷೆ ತೆಗೆದುಕೊಳ್ಳಲು ಸಾಧ್ಯವಾಗದ ಅರ್ಹ ವಿದ್ಯಾರ್ಥಿಗಳಿಗೆ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಗುಡ್ ನ್ಯೂಸ್ ನೀಡಲಾಗಿದೆ. ಅದೇ ಖಾಸಗಿ ಅಭ್ಯರ್ಥಿಯಾಗಿ ಪರೀಕ್ಷೆ-2ಕ್ಕೆ ನೋಂದಾಯಿಸಿಕೊಳ್ಳಲು ಅವಕಾಶ ನೀಡಲಾಗಿದೆ. ಈ ಸಂಬಂಧ ಕರ್ನಾಟಕ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯಿಂದ ಸುತ್ತೋಲೆ ಹೊರಡಿಸಲಾಗಿದ್ದು, 2025 ರ ದ್ವಿತೀಯ ಪಿಯುಸಿ ಪರೀಕ್ಷೆ-1 ಕ್ಕೆ ಹಾಜರಾತಿ ಕೊರತೆಯ ಕಾರಣ ಪರೀಕ್ಷೆ ತೆಗೆದುಕೊಳ್ಳಲು ಸಾಧ್ಯವಾಗದ ದಿನಾಂಕ: 31-03-2025 ಕ್ಕೆ 17 ವರ್ಷ ತುಂಬಿದ ಕಲಾ ಮತ್ತು ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳು ಪ್ರಸ್ತುತ ಪಿಯು ಪರೀಕ್ಷೆ – 2 ಕ್ಕೆ ಕಲಾ ಮತ್ತು ವಾಣಿಜ್ಯ ವಿಭಾಗಕ್ಕೆ ಆಯ್ತ ಸಂಯೋಜನೆಗಳೊಂದಿಗೆ ಖಾಸಗಿ ಅಭ್ಯರ್ಥಿಯಾಗಿ ನೋಂದಾಯಿಸಿಕೊಳ್ಳಲು ಅರ್ಹರಿದ್ದು, ಅವರುಗಳು ಮಂಡಲಿಯ ನಿಯಮಾನುಸಾರ ತಾವು ಅಭ್ಯಸಿಸಿದ ಕಾಲೇಜಿನಲ್ಲಿಯೇ ನೋಂದಾಯಿಸಿಕೊಳ್ಳಲು ಉಲ್ಲೇಖಿತ ಇ-ಕಛೇರಿ ಕಡತದಲ್ಲಿ ಸರ್ಕಾರವು ಅನುಮತಿ ನೀಡಿರುತ್ತದೆ ಎಂದಿದೆ. ಈ ಹಿನ್ನೆಲೆಯಲ್ಲಿ ಏಪ್ರಿಲ್ ಹಾಗೂ ಮೇ ಮಾಹೆಯಲ್ಲಿ ಕರ್ನಾಟಕ ಶಾಲಾ…

Read More

ಬೆಂಗಳೂರು : ವಿವಿಧ ಇಲಾಖೆಗಳ ಅಧಿಕೃತ ಪತ್ರ ವ್ಯವಹಾರಗಳಲ್ಲಿ “ಡಾ॥ ಬಿ.ಆರ್. ಅಂಬೇಡ್ಕರ್ ವೀದಿ” ಎಂಬ ವಿಳಾಸವನ್ನು ಬಳಸುವ ಕುರಿತು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಕರ್ನಾಟಕ ಸರ್ಕಾರದ ಸಚಿವಾಲಯವು ವಿಧಾನಸೌಧ, ವಿಕಾಸಸೌಧ ಹಾಗೂ ಬಹುಮಹಡಿ ಕಟ್ಟಡಗಳಲ್ಲಿ ಕಾರ್ಯನಿರ್ವಹಿಸುತ್ತಿದೆ. ಈ ಕಟ್ಟಡಗಳು ಡಾ॥ ಬಿ.ಆರ್. ಅಂಬೇಡ್ಕ‌ರ್ ವೀದಿಯಲ್ಲಿದೆ. ವಿವಿಧ ಇಲಾಖೆಗಳ ಅಧಿಕೃತ ಪತ್ರವ್ಯವಹಾರಗಳಲ್ಲಿ “ಡಾ॥ ಬಿ.ಆರ್. ಅಂಬೇಡ್ಕರ್ ವೀದಿ” ಎಂಬ ವಿಳಾಸವನ್ನು ಬಳಸದೇ ಕೈಬಿಟ್ಟಿರುವುದು ಸರ್ಕಾರದ ಗೆಮನಕ್ಕೆ ಬಂದಿದೆ. ಗೌರವಾನ್ವಿತ ನಾಯಕರು ಹಾಗೂ ಭಾರತದ ಸಂವಿಧಾನ ಶಿಲ್ಪಿ ಆಗಿರುವ ಡಾ|| ಬಿ.ಆ‌ರ್. ಅಂಬೇಡ್ಕರ್ ರವರ ಹೆಸರಿನ ವೀದಿಯನ್ನು ಅಧಿಕೃತ ಪತ್ರ ವ್ಯವಹಾರಗಳ ವಿಳಾಸದಲ್ಲಿ ಬಳಸದಿರುವುದು ಅಪೂರ್ಣ ಹಾಗೂ ಅಸಮಂಜಸವಾಗುತ್ತದೆ. ಆದ್ದರಿಂದ, ಕರ್ನಾಟಕ ಸರ್ಕಾರ ಸಚಿವಾಲಯದ ಎಲ್ಲಾ ಅಧಿಕೃತ ಪತ್ರ ವ್ಯವಹಾರಗಳಲ್ಲಿ “ಡಾ॥ ಬಿ.ಆರ್. ಅಂಬೇಡ್ಕರ್ ವೀದಿ” ಎಂದು ವಿಳಾಸವನ್ನು ನಮೂದಿಸಬೇಕೆಂದು ಈ ಮೂಲಕ ತಿಳಿಸಿದೆ. ಕರ್ನಾಟಕ ಸರ್ಕಾರ ಸಚಿವಾಲಯದ ಎಲ್ಲಾ ಇಲಾಖೆಗಳು ಈ ನಿರ್ದೇಶನವನ್ನು ತಕ್ಷಣದಿಂದ ಜಾರಿಗೆ ಬರುವಂತೆ ಅನುಸರಿಸಲು ಈ…

Read More

ಬೆಂಗಳೂರು : ಸಾರ್ವಜನಿಕರು ಕುಡಿಯುವ ನೀರಿನ ಬಾಟಲಿಗಳನ್ನು ಖರೀದಿಸುವಾಗ ಎಚ್ಚರಿಕೆ ವಹಿಸಬೇಕು. ಹೊರಗಡೆ ದೊರೆಯುವ ನೀರಿನ ಬಾಟಲಿಗಳಲ್ಲಿ ಹಲವು ಅಸುರಕ್ಷಿತವಾಗಿರುವುದು ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆ ನಡೆಸಿದ ವಿಶ್ಲೇಷಣೆಯಲ್ಲಿ ತಿಳಿದುಬಂದಿದೆ. ಇಲಾಖೆಯು ಒಟ್ಟು 296 ಮಾದರಿಗಳನ್ನು ವಿಶ್ಲೇಷಣೆಗಾಗಿ ಸಂಗ್ರಹಿಸಿದ್ದು, ಅವುಗಳಲ್ಲಿ 255 ಮಾದರಿಗಳ ವಿಶ್ಲೇಷಣಾ ಕಾರ್ಯ ಪೂರ್ಣಗೊಳಿಸಿದೆ. ಇದರಲ್ಲಿ 72 ಮಾದರಿಗಳು ಸುರಕ್ಷಿತ, 95 ಮಾದರಿಗಳು ಅಸುರಕ್ಷಿತ ಹಾಗೂ 88 ಮಾದರಿಗಳು ಕಳಪೆ ಗುಣಮಟ್ಟದ್ದು ಎಂದು ವರದಿಯಾಗಿದೆ. ಶೀಘ್ರದಲ್ಲಿಯೇ ಲೀಗಲ್ ಸ್ಯಾಂಪಲ್‌ಗಳ ಪರೀಕ್ಷೆ ಬಳಿಕ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ. ಇಲಾಖೆಯು ಒಟ್ಟು 296 ಮಾದರಿಗಳನ್ನು ವಿಶ್ಲೇಷಣೆಗಾಗಿ ಸಂಗ್ರಹಿಸಿದ್ದು, ಅವುಗಳಲ್ಲಿ 255 ಮಾದರಿಗಳ ವಿಶ್ಲೇಷಣಾ ಕಾರ್ಯ ಪೂರ್ಣಗೊಳಿಸಿದೆ. ಇದರಲ್ಲಿ 72 ಮಾದರಿಗಳು ಸುರಕ್ಷಿತ, 95 ಮಾದರಿಗಳು ಅಸುರಕ್ಷಿತ ಹಾಗೂ 88 ಮಾದರಿಗಳು ಕಳಪೆ ಗುಣಮಟ್ಟದ್ದು ಎಂದು ವರದಿಯಾಗಿದೆ. ಶೀಘ್ರದಲ್ಲಿಯೇ ಲೀಗಲ್ ಸ್ಯಾಂಪಲ್‌ಗಳ ಪರೀಕ್ಷೆ ಬಳಿಕ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

Read More

ಬೆಂಗಳೂರು : ಕರ್ನಾಟಕ ರಾಜ್ಯದಲ್ಲಿ ಹೊಸದಾಗಿ ಸೈಬರ್ ಕಮಾಂಡ್ ಘಟಕವನ್ನು (Cyber Command Unit) ಸ್ಥಾಪಿಸುವ ಕುರಿತು ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಮೇಲೆ ಓದಲಾದ ಪತ್ರಗಳಲ್ಲಿ ಮಹಾ ನಿರ್ದೇಶಕರು ಮತ್ತು ಆರಕ್ಷಕ ಮಹಾ ನಿರೀಕ್ಷಕರು ಇವರು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿ, ವಿಜ್ಞಾನ ಹಾಗೂ ತಂತ್ರಜ್ಞಾನದ ಬಳಕೆಯು ಮಾನವನ ಜೀವನ ಶೈಲಿಯನ್ನು ಅತ್ಯಂತ ಸರಳೀಕರಣಗೊಳಿಸಿದ್ದು, ದೈನಂದಿನ ಜೀವನದಲ್ಲಿ ತಂತ್ರಜ್ಞಾನದ ಅತಿಯಾದ ಬಳಕೆ ಹಾಗೂ ಅವಲಂಬನೆಯಿಂದಾಗಿ ಅತಿ ಹೆಚ್ಚು ಸೈಬರ್ ಅಪರಾಧ ಪ್ರಕರಣಗಳು ದಾಖಲಾಗುತ್ತಿದ್ದು, ಹಳೆಯ ವೃತ್ತಿಪರ ಅಪರಾಧಗಳಾದ ಡಕಾಯಿತಿ, ರಾಬರಿ ಹಾಗೂ ಇತರೆ ಭೌತಿಕ ಕಳ್ಳತನಗಳನ್ನು ಹಿಂದಿಕ್ಕಿ ಅತಿ ಹೆಚ್ಚು ಸೈಬ‌ರ್ ಅಪರಾಧಗಳು ವರದಿಯಾಗುತ್ತಿದ್ದು, ಮಹಾನಗರಗಳಲ್ಲಿ ದಾಖಲಾಗುವ ಅಪರಾಧ ಪ್ರಕರಣಗಳಲ್ಲಿ ಶೇ.20ರಷ್ಟು ಸೈಬರ್ ಪ್ರಕರಣಗಳಾಗಿದ್ದು, ರಾಜ್ಯದಲ್ಲಿ ಕಳೆದ 4 ವರ್ಷಗಳಲ್ಲಿ ಒಟ್ಟಾರೆಯಾಗಿ 52,000 ಸೈಬ‌ರ್ ಅಪರಾಧ ಪ್ರಕರಣಗಳು ವರದಿಯಾಗಿದ್ದು, ಕರ್ನಾಟಕ ರಾಜ್ಯವು ದಕ್ಷಿಣ ಭಾರತದ ಇತರ ರಾಜ್ಯಗಳಲ್ಲಿ ದಾಖಲಾಗುವ ಸೈಬರ್ ಅಪರಾಧಗಳ ಸಂಖ್ಯೆಯಲ್ಲಿ ಮಂಚೂಣಿಯಲ್ಲಿರುವುದರಿಂದ ಕರ್ನಾಟಕ ರಾಜ್ಯದಲ್ಲಿ ಸೈಬರ್ ಅಪರಾಧಗಳನ್ನು…

Read More

ಚಿತ್ರದುರ್ಗ : ಪ್ರತಿವರ್ಷದಂತೆ ಈ ವರ್ಷವೂ ಪ್ರಸಕ್ತ ಸಾಲಿನಲ್ಲಿ ರಾಜ್ಯ ಸರ್ಕಾರಿ ನೌಕರರಿಗೆ ಕ್ರೀಡಾಕೂಟ ಮತ್ತು ಸಾಂಸ್ಕøತಿಕ ಸ್ಪರ್ಧೆಗಳನ್ನು ಜಿಲ್ಲಾಮಟ್ಟದಲ್ಲಿ ಇದೇ ಏಪ್ರಿಲ್ 15 ಮತ್ತು 16ರಂದು ಚಿತ್ರದುರ್ಗ ನಗರದ ವೀರವನಿತೆ ಒನಕೆ ಓಬವ್ವ ಕ್ರೀಡಾಂಗಣದಲ್ಲಿ ಏರ್ಪಡಿಸಲಾಗಿದೆ. ಏಪ್ರಿಲ್ 15 ಮತ್ತು 16ರಂದು ನಡೆಯುವ ಚಿತ್ರದುರ್ಗ ಜಿಲ್ಲಾ ಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟದಲ್ಲಿ ಆಯಾ ಇಲಾಖಾ ಮುಖ್ಯಸ್ಥರು ಶೇ.50ರಷ್ಟು ಸಿಬ್ಬಂದಿಗಳಿಗೆ ಮೀರದಂತೆ ಭಾಗವಹಿಸು ಅನುಮತಿ ನೀಡತಕ್ಕದ್ದು. ಈ ಕ್ರೀಡಾಕೂಟದಲ್ಲಿ ಭಾಗವಹಿಸಿದ ಅಧಿಕಾರಿ, ನೌಕರರು ಕಡ್ಡಾಯವಾಗಿ ಹಾಜರಾತಿ ಪ್ರಮಾಣ ಪತ್ರ ಹಾಜರು ಪಡಿಸುವ ಷರತ್ತಿಗೊಳಪಡಿಸಿ ಎರಡು ದಿನಗಳ ವಿಶೇಷ ಸಾಂದರ್ಭಿಕ ರಜೆ ಮಂಜೂರು ಮಾಡುವುದು ಮತ್ತು ಕ್ರೀಡಾಕೂಟ ನಡೆಯುವ ದಿನಗಳ ಪ್ರಯಾಣಭತ್ಯೆಯನ್ನು ಮಾತೃ ಇಲಾಖೆಯಿಂದಲೇ ಭರಿಸುವಂತೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಸರ್ಕಾರಿ ನೌಕರರ ಕ್ರೀಡಾಕೂಟ ಸಮಿತಿ ಅಧ್ಯಕ್ಷರಾದ ಟಿ.ವೆಂಕಟೇಶ್ ತಿಳಿಸಿದ್ದಾರೆ.

Read More

ವೃತ್ತಿಪರ ಕೋರ್ಸ್‍ಗಳ ಪ್ರವೇಶಕ್ಕಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವತಿಯಿಂದ ಇದೇ ಏಪ್ರಿಲ್ 16 ಮತ್ತು 17ರಂದು ಸಾಮಾನ್ಯ ಪ್ರವೇಶ ಪರೀಕ್ಷೆ ನಡೆಯಲಿದೆ. ಯಾವುದೇ ಪರೀಕ್ಷಾ ಅವ್ಯವಹಾರ ನಡೆಯದಂತೆ ಸೂಕ್ಷ್ಮವಾಗಿ, ಪಾರದರ್ಶಕವಾಗಿ ಪರೀಕ್ಷೆ ನಡೆಸುವಂತೆ ಸೂಚನೆ ನೀಡಲಾಗಿದೆ. ಏಪ್ರಿಲ್ 16ರಂದು ಬೆಳಿಗ್ಗೆ 10.30 ರಿಂದ 11.50 ರವರೆಗೆ ಭೌತಶಾಸ್ತ್ರ, ಮಧ್ಯಾಹ್ನ 2.30 ರಿಂದ 3.50 ರವರೆಗೆ ರಸಾಯನಶಾಸ್ತ್ರ ಹಾಗೂ ಏಪ್ರಿಲ್ 17ರಂದು ಬೆಳಿಗ್ಗೆ 10.30 ರಿಂದ ಮಧ್ಯಾಹ್ನ 11.50 ರವರೆಗೆ ಗಣಿತಶಾಸ್ತ್ರ, ಮಧ್ಯಾಹ್ನ 2.30 ರಿಂದ 3.50 ರವರೆಗೆ ಜೀವಶಾಸ್ತ್ರ ವಿಷಯದ ಪರೀಕ್ಷೆ ನಡೆಯಲಿದೆ. ಪರೀಕ್ಷಾ ಕೇಂದ್ರಗಳಿಗೆ ಪರೀಕ್ಷಾ ಪ್ರಾರಂಭವಾಗುವುದಕ್ಕಿಂತ ಒಂದು ಗಂಟೆ ಮೊದಲು ಹಾಗೂ ಪರೀಕ್ಷಾ ನಂತರ 30 ನಿಮಿಷಗಳು ಪೊಲೀಸ್ ಬಂದೋಬಸ್ತಿನ ಅವಶ್ಯಕತೆ ಇರುತ್ತದೆ. ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾ ಖಜಾನೆಯಿಂದ ಪ್ರಶ್ನೆ ಪತ್ರಿಕೆಗಳನ್ನು ಕೊಂಡ್ಯೊಯುವ ಮತ್ತು ವಿತರಣೆ ಮಾಡುವ ಸಮಯಕ್ಕೆ ಪ್ರತಿ ತಾಲ್ಲೂಕಿನ ಮಾರ್ಗಾಧಿಕಾರಿಗಳ ಜೊತೆಗೆ ಪೊಲೀಸ್ ರಕ್ಷಣೆ ಬೇಕಾಗಿರುತ್ತದೆ. ಪರೀಕ್ಷಾ ಕೇಂದ್ರದ ಸುತ್ತಮುತ್ತಲಿರುವ ಜೆರಾಕ್ಸ್ ಅಂಗಡಿಗಳನ್ನು ಮುಚ್ಚಿಸುವುದು ಮತ್ತು…

Read More

ಬೆಂಗಳೂರು : ಬೆಂಗಳೂರಿನ ಜನತೆಗೆ ಬಿಗ್ ಶಾಕ್. ಕಾವೇರಿ ಕುಡಿಯುವ ನೀರಿನ ದರವನ್ನು ಬೆಂಗಳೂರು ಜಲಮಂಡಳಿಯು ಏರಿಕೆ ಮಾಡಿದೆ. ನೀರಿನ ಸಮರ್ಪಕ ಬಳಕೆಗೆ ಒತ್ತು ನೀಡುವುದನ್ನ ಮನಗಾಣಿಸುವ ಅಂಶಕ್ಕೆ ಒತ್ತು ನೀಡುವ ನಿಟ್ಟಿನಲ್ಲಿ ನೀರಿನ ದರವನ್ನು ಏರಿಕೆ ಮಾಡಲು ಉದ್ದೇಶಿಸಲಾಗಿದೆ. ಬೆಂಗಳೂರು ಜಲಮಂಡಳಿ ಅಧ್ಯಕ್ಷ ಡಾ ರಾಮ್ ಪ್ರಸಾತ್ ಮನೋಹರ್ ಈ ಕುರಿತು ಮಾಹಿತಿ ನೀಡಿದ್ದು, ವಿವಿಧ ಸ್ಲಾಬ್ ಗಳಿಗೆ ಆಧಾರಿತವಾಗಿ ಗೃಹ ಬಳಕೆಗೆ ಪ್ರತಿ ಲೀಟರ್ ನೀರಿಗೆ ಕನಿಷ್ಠ 0.15 ಪೈಸೆ (ಒಂದು ಪೈಸೆಗಿಂತಲೂ ಕಡಿಮೆ) ಹಾಗೂ ಗರಿಷ್ಠ 1 ಪೈಸೆ, ದೊಡ್ಡ ಅಪಾರ್ಟ್‌ಮೆಂಟ್‌ಗಳಿಗೆ ಕನಿಷ್ಠ 0.30 ಪೈಸೆ ಹಾಗೂ ಗರಿಷ್ಠ 1 ಪೈಸೆಯಷ್ಟು ಏರಿಕೆ ಮಾಡಲಾಗಿದೆ ಹಾಗೂ ವಾಣಿಜ್ಯ ಉದ್ದೇಶಕ್ಕೆ ಕನಿಷ್ಠ ದರವನ್ನು ಪ್ರತಿ ಲೀ.0.90 ಪೈಸೆ ಹಾಗೂ ಗರಿಷ್ಠ 1.20 ಪೈಸೆ ಹೆಚ್ಚಳ ಮಾಡಲಾಗಿದ್ದು ಕಾವೇರಿ ನೀರಿನ ಬಳಕೆಗೆ ಅನುಗುಣವಾಗಿ ದರ ಏರಿಕೆ ಮಾಡಲಾಗಿದೆ. ಈ ಬಗ್ಗೆ ಏ.10ರ ಇಂದು ಅಧಿಕೃತವಾಗಿ ಆದೇಶ ಹೊರಡಿಸಲಾಗುವುದು ಎಂದು ತಿಳಿಸಿದ್ದಾರೆ.…

Read More

ಬೆಂಗಳೂರು : ರಾಜ್ಯದಲ್ಲಿ 1ನೇ ತರಗತಿ ಪ್ರವೇಶಕ್ಕೆ ಜೂನ್ 1 ಕ್ಕೆ 6 ವರ್ಷ ತುಂಬಿರಬೇಕು ಎಂಬ ವಯೋಮಿತಿ ನಿಗಿದಿ ಮಾಡಿರುವುದನ್ನು ಸಡಿಲಿಕೆ ಮಾಡುವ ಕುರಿತಂತೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಪ್ರತಿಕ್ರಿಯೆ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಶೈಕ್ಷಣಿಕ ವರ್ಷದಲ್ಲಿ 1ನೇ ತರಗತಿ ಪ್ರವೇಶಕ್ಕೆ ಜೂ.1ಕ್ಕೆ ಆರು ವರ್ಷ ತುಂಬಿರ ಬೇಕು ಎಂಬ ವಯೋಮಿತಿ ನಿಗದಿ ಮಾಡಿರುವುದನ್ನು ಸಡಿಲಿಕೆ ಮಾಡುವಂತೆ ಪಾಲಕರು ಒತ್ತಾಯಿಸಿದ್ದಾರೆ. ಈ ವಿಚಾರವನ್ನು ರಾಜ್ಯ ಶಿಕ್ಷಣ ನೀತಿ ಆಯೋಗಕ್ಕೆ ರವಾನೆ ಮಾಡಿದ್ದೇವೆ. ಅವರೇ ನಿರ್ಧಾರ ಕೈಗೊಳ್ಳಲಿದ್ದಾರೆ ಎಂದರು. ರಾಜ್ಯದಲ್ಲಿ ಕೊರತೆ ಇರುವ ಶಿಕ್ಷಕರ ಪ್ರಮಾಣವನ್ನು ಕಡಿಮೆ ಮಾಡಲು ಶೀಘ್ರದಲ್ಲೇ ನೇಮಕಾತಿ ನಡೆಸುತ್ತೇವೆ. ಅತಿಥಿ ಉಪನ್ಯಾಸಕರಿಂದ ಹೆಚ್ಚಿನ ಗುಣಮಟ್ಟ ಶಿಕ್ಷಣವನ್ನು ಪಡೆಯಲು ಸಾಧ್ಯವಿಲ್ಲ. ಈ ವಿಚಾರವನ್ನು ಮುಖ್ಯಮಂತ್ರಿಗಳ ಗಮನಕ್ಕೂ ತಂದಿದ್ದೇವೆ. ಫಲಿತಾಂಶ ಕುಸಿತಕ್ಕಾಗಿ ಹಿಂದಿನವರನ್ನು ನಾವು ದೂಷಿಸುವುದಿಲ್ಲ. ಬದಲಾಗಿ ನಾವು ಮುಂದಿನ ಪರೀಕ್ಷೆಗಳಲ್ಲಿ ಫಲಿತಾಂಶ ಹೆಚ್ಚಳಕ್ಕೆ ಅಗತ್ಯ ಕ್ರಮವಹಿಸುತ್ತೇವೆ. ಕಲ್ಯಾಣ ಕರ್ನಾಟಕದಲ್ಲಿ ಶಿಕ್ಷ ಣದ ಸುಧಾರಣೆಗೆ ಕ್ರಮ…

Read More