Author: kannadanewsnow57

ಬೆಂಗಳೂರು : ಬಂಗಾಳಕೊಲ್ಲಿಯಲ್ಲಿ ಮಳೆ ಮಾರುತಗಳು ಚುರುಕುಗೊಂಡಿರುವುದರಿಂದ ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಒಡಿಶಾದಿಂದ ರಾಜ್ಯದವರೆಗೆ ಮಳೆ ಮಾರುತಗಳು ವ್ಯಾಪಕವಾಗಿರುವ ಪರಿಣಾಮ ದಕ್ಷಿಣ ಒಳನಾಡಿನ ವಿವಿಧ ಜಿಲ್ಲೆಗಳಲ್ಲಿ ಗುರುವಾರ ಮತ್ತು ಶುಕ್ರವಾರ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿ, ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮುಂದಿನ ಎರಡೂರು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಇಂದು ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಹಾಸನ, ಕೊಡಗು, ಕೋಲಾರ, ಮೈಸೂರು, ರಾಮನಗರ ಹಾಗೂ ತುಮಕೂರು, ಶುಕ್ರವಾರಕ್ಕೆ ಕೋಲಾರ, ಕೊಡಗು, ಹಾಸನ, ಚಿಕ್ಕಮಂಗಳೂರು, ಚಿಕ್ಕಮ ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಎಚ್ಚರಿಕೆ ನೀಡಲಾಗಿದೆ.

Read More

ಬೆಂಗಳೂರು: ಮಹಿಳೆಯರ ಆರೋಗ್ಯದ ದೃಷ್ಟಿಯಿಂದ “ಋತುಚಕ್ರ ರಜೆ” ನೀಡುವ ವಿಚಾರದಲ್ಲಿ ರಾಜ್ಯ ಸರ್ಕಾರ ಚರ್ಚೆ ನಡೆಸುತ್ತಿದ್ದು, ಇಂದು ನಡೆಯುವ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಿದೆ. ಮಹಿಳೆಯರ ಆರೋಗ್ಯದ ದೃಷ್ಟಿಯಿಂದ ರಾಜ್ಯಾದ್ಯಂತ ಸರ್ಕಾರಿ ಕಚೇರಿ, ಖಾಸಗಿ ಕಂಪೆನಿ, ಕೈಗಾರಿಕಾ ವಲಯದಲ್ಲಿ ಕಾರನಿರ್ವಹಿಸುವ ಮಹಿಳೆಯರಿಗೆ ಪ್ರತಿ ತಿಂಗಳು ಒಂದು ದಿನ ವೇತನ ಸಹಿತ ರಜೆ ನೀಡು ವ ‘ಋತು ಚಕ್ರ ರಜೆ ನೀತಿ -2025’ ಜಾರಿಗೆ ತರುವ ಬಗ್ಗೆ ಇಂದು ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸುವ ಸಾಧ್ಯತೆಯಿದೆ. ಇಂದು ಬೆಳಗ್ಗೆ 11.30 ಗಂಟೆಗೆ ಸಿಎಂ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆಯಲಿರುವ ಸಂಪುಟ ಸಭೆಯಲ್ಲಿ ಸರ್ಕಾರಿ, ಖಾಸಗಿ ಕಂಪನಿಯಲ್ಲಿ ಸೇರಿ ಎಲ್ಲಾ ಉದ್ಯೋಗಸ್ಥ ಮಹಿಳೆಯರಿಗೆ ಋತು ಚಕ್ರದ ರಜೆ ನೀಡಲು ತೀರ್ಮಾನಿಸುವ ಸಾಧ್ಯತೆಯಿದೆ. ಬಿಹಾರ, ಕೇರಳ ಮತ್ತು ಒಡಿಶಾದಲ್ಲಿ ಮುಟ್ಟಿನ ರಜೆ ನೀತಿ ಈಗಾಗಲೇ ಇದೆ. ಆ ರಾಜ್ಯಗಳು ಅನುಸರಿಸುತ್ತಿರುವ ನೀತಿಗಳೂ ಸೇರಿದಂತೆ ಮಹಿಳಾಸ್ನೇಹಿ ನಿಯಮ ರೂಪಿಸಲು ಅಗತ್ಯವಾದ ಮಾಹಿತಿ ಸಂಗ್ರಹಿಸಲಾಗಿದೆ. ಸರ್ಕಾರದ ಎಲ್ಲ…

Read More

ಹಾಸನ: ಇತಿಹಾಸ ಪ್ರಸಿದ್ಧ ಹಾಸನಾಂಬ ಹಾಗೂ ಸಿದ್ದೇಶ್ವರ ದರ್ಶನೋತ್ಸವಕ್ಕೆ ಸಿದ್ಧತೆ ನಡೆದಿದ್ದು, ಇಂದು ದೇವಾಲಯದ ಬಾಗಿಲು ತೆರೆಯಲಿದೆ. ಸಾರ್ವಜನಿಕರಿಗೆ ಶುಕ್ರವಾರದಿಂದ (ಅ. 10) ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಶ್ರೀ ಹಾಸನಾಂಬ ದೇವಾಲಯವು ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ಪ್ರಮುಖ ದೇವಾಲಯಗಳಲ್ಲಿ ಒಂದಾಗಿದೆ. ಸದರಿ ದೇವಾಲಯದಲ್ಲಿ ಪ್ರತೀ ವರ್ಷ ಶ್ರೀ ಹಾಸನಾಂಬ ದೇವಿಯ ಜಾತ್ರೋತ್ಸವ ಕಾರ್ಯಕ್ರಮವು ಅಭೂತಪೂರ್ವವಾಗಿ ಮತ್ತು ವಿಜೃಂಭಣೆಯಿಂದ ಆಚರಿಸಲ್ಪಡುತ್ತಿದೆ. ಇತಿಹಾಸ ಪ್ರಸಿದ್ಧ ಹಾಸನಾಂಬ ದೇವಾಲಯದ ಬಾಗಿಲು ತೆರೆಯಲು ಡೇಟ್ ಫಿಕ್ಸ್ ಆಗಿದೆ. ಅಕ್ಟೋಬರ್ 9 ರಂದು ಬಾಗಿಲು ಓಪನ್ ಆಗಲಿದ್ದು, ಅಕ್ಟೋಬರ್ 23ರಂದು ಬಾಗಿಲು ಮುಚ್ಚಲಾಗುವುದು. ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಅಧಿನಿಯಮ 1997 ಸೆಕ್ಷನ್ 58ರಡಿಯಲ್ಲಿ ದೇವಸ್ಥಾನದ ರೂಢಿ, ಸಂಪ್ರದಾಯ ಮತ್ತು ಆಚರಣೆಯಂತೆ ದೇವಾಲಯದ ಗರ್ಭಗುಡಿ, ಒಳಾಂಗಣ ಮತ್ತು ಹೊರಾಂಗಣದಲ್ಲಿ ಕೆಲಸ ನಿರ್ವಹಿಸುತ್ತಿರುವ ದೇವಾಲಯದ ನೌಕರರು ಮತ್ತು ನಿಯೋಜನೆ ಮೇರೆಗೆ ಕರ್ತವ್ಯ ನಿರ್ವಹಿಸುತ್ತಿರುವ ಅಧಿಕಾರಿ ಮತ್ತು ಸಿಬ್ಬಂದಿಗಳು ವಸ್ತ್ರ ಸಂಹಿತೆಯನ್ನು ಪಾಲಿಸುವುದು ಸೂಕ್ತವಾಗಿದ್ದು,…

Read More

ಬೆಂಗಳೂರು: ರಾಜ್ಯ ಸರ್ಕಾರದಿಂದ ಸಿಸಿ, ಓಸಿ ಪಡೆಯದೇ ಕಟ್ಟಿರುವಂತ ಮನೆಯ ಮಾಲೀಕರಿಗೆ ಗುಡ್ ನ್ಯೂಸ್ ನೀಡಲಾಗಿದೆ. ಅದೇ 1200 ಅಡಿಯಲ್ಲಿ ಕಟ್ಟಿರುವ ಮನೆಗೆ ವಿದ್ಯುತ್, ನೀರು ಸರಬರಾಜು ಸಂಪರ್ಕ ನೀಡಲು ನಿರ್ಧರಿಸಿದೆ. ಹೌದು. ಸಿಸಿ, ಓಸಿ ಪಡೆಯದೇ ಮನೆಯನ್ನು ಕಟ್ಟಿರುವಂತ ಮಾಲೀಕರಿಗೆ ನೀರು, ವಿದ್ಯುತ್ ಸಂಪರ್ಕ ನೀಡಲು ನಿರ್ಧರಿಸಲಾಗಿದೆ. 1200 ಅಡಿಯಲ್ಲಿ ಕಟ್ಟಿರುವ ಮನೆಗಳಿಗೆ ಮಾತ್ರ ನೀಡಲು ನಿರ್ಧರಿಸಲಾಗಿದೆ ಎಂದಿದೆ. 30X40 ಸೈಟ್ ನಲ್ಲಿ ಕಟ್ಟಿರುವ ಮನೆಗಳಿಗೆ ಅನುಮತಿ ನೀಡುವ ಸಾಧ್ಯತೆ ಇದೆ. ಅಂತಿಮವಾಗಿ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ಸರ್ಕಾರ ನಿರ್ಧಾರವನ್ನು ಕೈಗೊಳ್ಳಲಿದೆ. 1200 ಅಡಿಗಿಂತ ಮೇಲ್ಪಟ್ಟ ಕಟ್ಟಡಗಳಿಗೆ ಸುಗ್ರೀವಾಜ್ಞೆ ಮೂಲಕ ಅನುಮತಿ ನೀಡುವ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಲಾಗುತ್ತದೆ. ಕಾನೂನು ಅಡೆತಡೆಗಳ ಬಗ್ಗೆಯೂ ಸಭೆಯಲ್ಲಿ ಸಮಾಲೋಚನೆ ನಡೆಸಲಾಗುತ್ತದೆ. ಈ ವೇಳೆ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಸಚಿವರಾದ ಹೆಚ್.ಕೆ. ಪಾಟೀಲ್, ಕೆ.ಜೆ. ಜಾರ್ಜ್, ಕೃಷ್ಣ ಬೈರೇಗೌಡ, ಪ್ರಿಯಾಂಕ್ ಖರ್ಗೆ, ರಹೀಂ ಖಾನ್, ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರ ಬಸವರಾಜ…

Read More

ಬೆಂಗಳೂರು : ಬಿಗ್ ಬಾಸ್ ಮನೆಗೆ ಮತ್ತೆ ಅವಕಾಶ ನೀಡಲಾಗಿದ್ದು, ಬಿಗ್ ಬಾಸ್ ಮನೆಗೆ ಎಲ್ಲಾ 17 ಸ್ಪರ್ಧಿಗಳು ಶಿಫ್ಟ್ ಮಾಡಲಾಗಿದೆ. ಜಾಲಿವುಡ್ ಸ್ಟುಡಿಯೋಸ್ ನ ಗೇಟ್ ಸಿ ಮಾತ್ರ ಓಪನ್ ಗೆ ಅವಕಾಶ ನೀಡಲಾಗಿದ್ದು, ಬಿಗ್ ಬಾಸ್ ಮನೆಗೆ ಸಂಪರ್ಕ ಕಲ್ಪಿಸುವ ಜಾಲಿವುಡ್ ನ ಗೇಟ್ ಸಿ ಜಿಲ್ಲಾಧಿಕಾರಿ ಯಶವಂತ್ ವಿ.ಗುರುಕರ್ ಸಮ್ಮುಖದಲ್ಲಿ ಓಪನ್ ಮಾಡಲಾಗಿದೆ. ಕನ್ನಡ ಕಿರುತೆರೆಯ ಅತಿ ದೊಡ್ಡ ಜನಪ್ರಿಯ ರಿಯಾಲಿಟಿ ಶೋ ಬಿಗ್ ಬಾಸ್ ಸೀಸನ್-12ರ ಜಾಲಿವುಡ್ ಸ್ಟುಡಿಯೋಗೆ ಬೀಗ ಬಿದ್ದ ಹಿನ್ನೆಲೆ ಎಲ್ಲ ಸ್ಪರ್ಧಿಗಳನ್ನ ಈಗಲ್ಟನ್ ರೆಸಾರ್ಟ್ಗೆ ಶಿಫ್ಟ್ ಮಾಡಲಾಗಿತ್ತು. ಇದೀಗ ಈಗಲ್ಟನ್ ರೆಸಾರ್ಟ್ನಿಂದ ಎಲ್ಲಾ 17 ಸ್ಪರ್ಧಿಗಳನ್ನು ಶಿಫ್ಟ್ ಮಾಡಲಾಗಿದೆ. ಈಗಲ್ ಟನ್ ರೆಸಾರ್ಟ್ ನಿಂದ ಮುಂಜಾನೆ 4 ಗಂಟೆ ಸುಮಾರಿಗೆ ಎಲ್ಲಾ ಸ್ಪರ್ಧಿಗಳನ್ನು ಕಾರಿನ ಗಾಜಿಗೆ ಕಪ್ಪುಬಟ್ಟೆ ಸುತ್ತಿ ಸಿಬ್ಬಂದಿಗಳು ಬಿಗ್ ಬಾಸ್ ಮನೆಗೆ ಕರೆತಂದಿದ್ದಾರೆ.

Read More

ಹೈದರಾಬಾದ್ : ಆಂಧ್ರಪ್ರದೇಶದ ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಪೋಟ ಸಂಭವಿಸಿದ್ದು, 6 ಮಂದಿ ಸಜೀವ ದಹನವಾಗಿದ್ದಾರೆ. ಆಂಧ್ರಪ್ರದೇಶದ ಅಂಬೇಡ್ಕರ್ ಕೊನಸೀಮಾ ಜಿಲ್ಲೆಯಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿದೆ. ರಾಯವರಂ ಮಂಡಲದ ರಾಯವರಂ ಲಕ್ಷ್ಮಿ ಗಣಪತಿ ಪಟಾಕಿ ತಯಾರಿಕಾ ಕೇಂದ್ರದಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಈ ಘಟನೆಯಲ್ಲಿ ಆರು ಜನರು ಸಜೀವ ದಹನವಾಗಿದ್ದಾರೆ. ಇತರ ಎಂಟು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಪಟಾಕಿ ತಯಾರಿಸುತ್ತಿದ್ದಾಗ ಅಪಘಾತ ಸಂಭವಿಸಿದೆ ಎಂದು ವರದಿಯಾಗಿದೆ. ಮಾಹಿತಿಯ ಮೇರೆಗೆ ಸ್ಥಳಕ್ಕೆ ತಲುಪಿದ ಪೊಲೀಸರು ಮತ್ತು ಪಿಯರ್ ಅಧಿಕಾರಿಗಳು ರಕ್ಷಣಾ ಕ್ರಮಗಳನ್ನು ಕೈಗೊಂಡಿದ್ದಾರೆ. ಪ್ರಸ್ತುತ, ಪಿಯರ್ ಸಿಬ್ಬಂದಿ ಅಲ್ಲಿ ಬೆಂಕಿಯನ್ನು ನಿಯಂತ್ರಿಸುತ್ತಿದ್ದಾರೆ. ಎಲ್ಲಾ ಮೃತರು ಮತ್ತು ಗಾಯಗೊಂಡವರನ್ನು ಅಲ್ಲಿ ಕೆಲಸ ಮಾಡುವ ಕಾರ್ಮಿಕರು ಎಂದು ಗುರುತಿಸಲಾಗಿದೆ. ಇದರ ಬಗ್ಗೆ ಸಂಪೂರ್ಣ ವಿವರಗಳು ಇನ್ನೂ ತಿಳಿದುಬಂದಿಲ್ಲ.

Read More

ಬೆಂಗಳೂರು : ಇಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಇಲಾಖೆ ಆಯೋಜಿಸಿದ್ದ ಮುಖ್ಯಮಂತ್ರಿಗಳ ಪದಕ ಪ್ರಧಾನ ಸಮಾರಂಭ ಮತ್ತು 71ನೇ ವನ್ಯಜೀವಿ ಸಪ್ತಾಹದ ಸಮಾರೋಪ ಸಮಾರಂಭದಲ್ಲಿ ಪಾಲ್ಗೊಂಡು, ಅಮೋಘ ಸೇವೆ ಸಲ್ಲಿಸಿದ ಅರಣ್ಯ ಸಿಬ್ಬಂದಿಗಳಿಗೆ ಪದಕ ನೀಡಿ ಸಿಎಂ ಸಿದ್ದರಾಮಯ್ಯ ಗೌರವಿಸಿದ್ದಾರೆ.  ಇಂದು ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ನಡೆದ 71ನೇ ವನ್ಯಜೀವಿ ಸಪ್ತಾಹದ ಸಮಾರೋಪ ಸಮಾರಂಭದಲ್ಲಿ ಪರಿಸರ, ಅರಣ್ಯ ಸಂರಕ್ಷಕರಿಗೆ ಮುಖ್ಯಮಂತ್ರಿಗಳ ಪದಕ ವಿತರಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಸಾಕಿದ ಹಸುವನ್ನು ಹುಲಿ ತಿಂದಿದೆ ಎನ್ನುವ ಕಾರಣಕ್ಕೆ ಹುಲಿಗಳಿಗೆ ವಿಷ ಹಾಕುವುದನ್ನು ಸಹಿಸಲು ಸಾಧ್ಯವಿಲ್ಲ. ಯಾರೇ ಅರಣ್ಯ ಮತ್ತು ಪ್ರಾಣಿ ಸಂಪತ್ತನ್ನು ಕೊಲ್ಲಲು ಮುಂದಾದರೆ ಅಂಥವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು. ಅವರು ಎಷ್ಟೇ ದೊಡ್ಡವರಾಗಿದ್ದರೂ ಮುಲಾಜು ನೋಡದೆ ಕಾನೂನು ಕ್ರಮ ಕೈಗೊಳ್ಳಲಾಗುವುದು. ಮಾನವ-ವನ್ಯಜೀವಿ ಸಹಬಾಳ್ವೆಯ ಪರಿಸರ ಪೂರಕವಾದ ಆಶಯಕ್ಕಾಗಿ ವನ್ಯಜೀವಿ ಸಪ್ತಾಹವನ್ನು ಆಚರಿಸಲಾಗುತ್ತಿದೆ. ಅರಣ್ಯ ಪರಿಸರ ಆರೋಗ್ಯಕರವಾಗಿ ವಿಸ್ತರಣೆ ಆದಷ್ಟೂ ಮನುಷ್ಯ ಪರಿಸರ ಹೆಚ್ಚು ಆರೋಗ್ಯಕರವಾಗಿರುತ್ತದೆ. ಅರಣ್ಯದ…

Read More

ಬೆಂಗಳೂರು : ಪ್ರಾಣಿ ಸಂಪತ್ತು ಇಲ್ಲದೆ ಅರಣ್ಯ ಸಂಪತ್ತಿಗೆ ಮೌಲ್ಯವೇ ಇಲ್ಲ. ಹೀಗಾಗಿ ಪ್ರಾಣಿ ಸಂಪತ್ತನ್ನು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ ಎಂದು ಸಿಎಂ ಸಿದ್ದರಾಮಯ್ಯ ಖಡಕ್ ಎಚ್ಚರಿಕೆ ನೀಡಿದ್ದಾರೆ. ಇಂದು ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ನಡೆದ 71ನೇ ವನ್ಯಜೀವಿ ಸಪ್ತಾಹದ ಸಮಾರೋಪ ಸಮಾರಂಭದಲ್ಲಿ ಪರಿಸರ, ಅರಣ್ಯ ಸಂರಕ್ಷಕರಿಗೆ ಮುಖ್ಯಮಂತ್ರಿಗಳ ಪದಕ ವಿತರಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಸಾಕಿದ ಹಸುವನ್ನು ಹುಲಿ ತಿಂದಿದೆ ಎನ್ನುವ ಕಾರಣಕ್ಕೆ ಹುಲಿಗಳಿಗೆ ವಿಷ ಹಾಕುವುದನ್ನು ಸಹಿಸಲು ಸಾಧ್ಯವಿಲ್ಲ. ಯಾರೇ ಅರಣ್ಯ ಮತ್ತು ಪ್ರಾಣಿ ಸಂಪತ್ತನ್ನು ಕೊಲ್ಲಲು ಮುಂದಾದರೆ ಅಂಥವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು. ಅವರು ಎಷ್ಟೇ ದೊಡ್ಡವರಾಗಿದ್ದರೂ ಮುಲಾಜು ನೋಡದೆ ಕಾನೂನು ಕ್ರಮ ಕೈಗೊಳ್ಳಲಾಗುವುದು. ಮಾನವ-ವನ್ಯಜೀವಿ ಸಹಬಾಳ್ವೆಯ ಪರಿಸರ ಪೂರಕವಾದ ಆಶಯಕ್ಕಾಗಿ ವನ್ಯಜೀವಿ ಸಪ್ತಾಹವನ್ನು ಆಚರಿಸಲಾಗುತ್ತಿದೆ. ಅರಣ್ಯ ಪರಿಸರ ಆರೋಗ್ಯಕರವಾಗಿ ವಿಸ್ತರಣೆ ಆದಷ್ಟೂ ಮನುಷ್ಯ ಪರಿಸರ ಹೆಚ್ಚು ಆರೋಗ್ಯಕರವಾಗಿರುತ್ತದೆ. ಅರಣ್ಯದ ಉಳಿವು ಭೂಮಿಯ ಉಳಿವು ಎನ್ನುವುದನ್ನು ಮರೆಯಬಾರದು. ಆನೆ ಮತ್ತು…

Read More

ಬೆಂಗಳೂರು : ಓ ಆರ್ ಆರ್ ರಸ್ತೆಯ 9ನೇ ಮೈನ್ ಜಂಕ್ಷನ್ ನಿಂದ 5ನೇ ಮೈನ್ ವರೆಗಿನ ಸರ್ವಿಸ್ ರಸ್ತೆಯನ್ನು ಮೆಟ್ರೋ ಸ್ಟೇಷನ್ ಕಾಮಗಾರಿಗಾಗಿ ಮುಂದಿನ 45 ದಿನಗಳ ಕಾಲ ಓ ಆರ್ ಆರ್ ರಸ್ತೆಯಲ್ಲಿ ಸಂಚಾರ ದಟ್ಟಣೆ ಉಂಟಾಗುವ ಸಾಧ್ಯತೆಗಳಿದ್ದು, ಓ ಆರ್ ಆರ್ ರಸ್ತೆಯಲ್ಲಿ ಸಂಚರಿಸುವ  ವಾಹನ ಸವಾರರು ಬದಲಿ ಮಾರ್ಗದಲ್ಲಿ ಚಲಿಸಲು ಕೋರಿದೆ. ಹೆಚ್.ಎಸ್.ಆರ್. ಲೇಔಟ್ ಸಂಚಾರ ಪೊಲೀಸ್ ಠಾಣಾ ಸರಹದ್ದಿನ ಹೊರವರ್ತುಲ ರಸ್ತೆ 9ನೇಮುಖ್ಯರಸ್ತೆ ಜಂಕ್ಷನ್ ನಿಂದ 5ನೇಮುಖ್ಯ ರಸ್ತೆ ಜಂಕ್ಷನ್ ವರೆಗೆ ಸರ್ವಿಸ್ ರಸ್ತೆಯಲ್ಲಿ ಮೇಟ್ರೋ ಸ್ಟೇಷನ್ ಕಾಮಗಾರಿ ಪ್ರಗತಿಯಲ್ಲಿದ್ದು, ದಿ. 06.10.2025 ರಿಂದ 45 ದಿನಗಳ ಕಾಲ ಕಾಮಗಾರಿ ನಡೆಯುವುದರಿಂದ, 9ನೇ ಮುಖ್ಯ ರಸ್ತೆ ಜಂಕ್ಷನ್ ನಿಂದ 5ನೇ ಮುಖ್ಯ ರಸ್ತೆ ಜಂಕ್ಷನ್ ವರೆಗಿನ ಹೊರವರ್ತುಲ ರಸ್ತೆ ಸರ್ವಿಸ್ ರಸ್ತೆಯನ್ನು ಕಾಮಗಾರಿಗಾಗಿ ಉಪಯೋಗಿಸಿಕೊಳ್ಳಲಿದ್ದು, ಕಾಮಗಾರಿ ಮುಗಿಯುವ ವರೆಗೆ ಇಬ್ಬಲೂರ್ ಕಡೆಯಿಂದ ಬಂದು ಸಿಲ್ಕ್ ಬೋರ್ಡ್ ಜಂಕ್ಷನ್ ಕಡೆಗೆ ಸಂಚರಿಸುವ ವಾಹನ ಸವಾರರು 14ನೇ…

Read More

ಸಿಕಾರ್ : ರಾಜಸ್ಥಾನದ ಸಿಕಾರ್ ಜಿಲ್ಲೆಯಲ್ಲಿ, ಶ್ರೀ ಮಾಧೋಪುರದ ಹೊಸ ರೈಲು ನಿಲ್ದಾಣದ ಬಳಿ ಫುಲೇರಾದಿಂದ ರೆವಾರಿಗೆ ಪ್ರಯಾಣಿಸುತ್ತಿದ್ದ ಸರಕು ರೈಲಿನ 36 ಬೋಗಿಗಳು ಹಳಿತಪ್ಪಿದವು. ಹಲವಾರು ಬೋಗಿಗಳು ಒಂದರ ಮೇಲೊಂದು ಡಿಕ್ಕಿ ಹೊಡೆದ ಪರಿಣಾಮ ದೆಹಲಿ-ಮುಂಬೈ ಮೀಸಲಾದ ಸರಕು ಕಾರಿಡಾರ್ ಸಂಪೂರ್ಣವಾಗಿ ಸ್ಥಗಿತಗೊಂಡಿತು. ಹಳಿಯಲ್ಲಿ ರೈಲು ಸಂಚಾರ ಸ್ಥಗಿತಗೊಂಡಿದ್ದು, ಪರಿಹಾರ ಕಾರ್ಯಾಚರಣೆ ಆರಂಭಿಸಲಾಗಿದೆ. ಅಪಘಾತದ ಬಗ್ಗೆ ಮಾಹಿತಿ ಪಡೆದ ನಂತರ, ರೈಲ್ವೆ ಅಧಿಕಾರಿಗಳು, ಪೊಲೀಸರು ಮತ್ತು ತಾಂತ್ರಿಕ ತಂಡಗಳು ಸ್ಥಳಕ್ಕೆ ಧಾವಿಸಿದವು. ಇದಕ್ಕೂ ಮೊದಲು, ಮಂಗಳವಾರ, ಬಿಕಾನೇರ್ ನಿಂದ ಜೈಸಲ್ಮೇರ್ಗೆ ಪ್ರಯಾಣಿಸುತ್ತಿದ್ದ ಮತ್ತೊಂದು ಸರಕು ರೈಲು ಕೂಡ ಹಳಿತಪ್ಪಿತ್ತು, ಇದರಲ್ಲಿ 37 ಬೋಗಿಗಳು ಹಳಿ ತಪ್ಪಿದ್ದವು, ಆದರೂ ಯಾವುದೇ ಗಾಯಗಳಾಗಿಲ್ಲ ಎಂದು ವರದಿಯಾಗಿದೆ. https://twitter.com/ANI/status/1975801893122433183?ref_src=twsrc%5Egoogle%7Ctwcamp%5Eserp%7Ctwgr%5Etweet

Read More