Subscribe to Updates
Get the latest creative news from FooBar about art, design and business.
Author: kannadanewsnow57
ಬೆಂಗಳೂರು: ಏಪ್ರಿಲ್ ಹಾಗೂ ಮೇ ತಿಂಗಳಲ್ಲಿ ಬಿಸಿಲಿನ ತಾಪಮಾನ ಹೆಚ್ಚಾಗಿರುವ ಬೆಳಗಾವಿ ವಿಭಾಗದ ವಿಜಯಪುರ ಹಾಗೂ ಬಾಗಲಕೋಟೆ, ಬೆಂಗಳೂರು ವಿಭಾಗದ ಚಿತ್ರದುರ್ಗ ಜಿಲ್ಲೆ ಹಾಗೂ ಕಲಬುರಗಿ ವಿಭಾಗದ ಎಲ್ಲಾ ಜಿಲ್ಲೆಗಳಲ್ಲಿ ಅಂಗನವಾಡಿ ಕೇಂದ್ರಗಳ ಅವಧಿಯನ್ನು ಬೆಳಗ್ಗೆ 8 ರಿಂದ ಮಧ್ಯಾಹ್ನ 1.30 ರವರೆಗೆ ನಿಗದಿಪಡಿಸಲಾಗಿದೆ. ಈ ಸಂಬಂಧ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಜಂಟಿ ನಿರ್ದೇಶಕರು ಸುತ್ತೋಲೆ ಹೊರಡಿಸಿದ್ದು, ಬೆಳಗಾವಿ ವಿಭಾಗದ ವಿಜಯಪುರ ಮತ್ತು ಬಾಗಲಕೋಟೆ, ಬೆಂಗಳೂರು ವಿಭಾಗದ – ಚಿತ್ರದುರ್ಗ ಜಿಲ್ಲೆ ಹಾಗೂ ಕಲ್ಬುರ್ಗಿ ವಿಭಾಗದ ಎಲ್ಲಾ ಜಿಲ್ಲೆಗಳಲ್ಲಿ ಏಪ್ರಿಲ್ ಮತ್ತು ಮೇ ಮಾಹೆಯಲ್ಲಿ ಬಿಸಿಲಿನ ತಾಪಮಾನ ತೀವ್ರವಾಗಿರುತ್ತದೆ ಎಂದಿದ್ದಾರೆ. ಈ ಹಿನ್ನೆಲೆಯಲ್ಲಿ ಅಂಗನವಾಡಿ ಕೇಂದ್ರಗಳ ಕಾರ್ಯನಿರ್ವಹಣಾ ಅವಧಿಯನ್ನು ಬೆಳಗ್ಗೆ 8.00 ಗಂಟೆಯಿಂದ ಮಧ್ಯಾಹ್ನ 01.30 ಗಂಟೆವರೆಗೆ ಸಮಯವನ್ನು ನಿಗಧಿಪಡಿಸಿ ಪ್ರತಿ ವರ್ಷ ಏಪ್ರಿಲ್ ಮತ್ತು ಮೇ ಮಾಹಗಳಿಗೆ ಅನ್ವಯಿಸುವಂತೆ ಉಲ್ಲೇಖಿತ ಪತ್ರದಲ್ಲಿ ಈಗಾಗಲೇ ಆದೇಶಿಸಲಾಗಿದೆ ಎಂದು ಹೇಳಿದ್ದಾರೆ. ಅದರಂತೆ ಇನ್ನು ಮುಂದೆ ಪುತಿ ವರ್ಷ ಕ್ರಮ ವಹಿಸಲು ಸೂಚಿಸಿದೆ.…
ಬೆಂಗಳೂರು: ರಾಜ್ಯದ ಎಲ್ಲಾ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಲ್ಲಿ ಶೌಚಾಲಯ ಸ್ವಚ್ಛತೆಯನ್ನು ನಿರ್ವಹಿಸಲು ವಿದ್ಯಾರ್ಥಿಗಳನ್ನು ಬಳಸುವಂತಿಲ್ಲ. ಒಂದು ವೇಳೆ ಇಂತಹ ಘಟನೆಗಳು ನಡೆದರೇ ಅಂತಹ ಶಿಕ್ಷಕರ ವಿರುದ್ಧ ಎಫ್ಐಆರ್ ದಾಖಲಿಸಿ, ಕಾನೂನು ಕ್ರಮ ಕೈಗೊಳ್ಳೋದಾಗಿ ರಾಜ್ಯ ಸರ್ಕಾರ ಖಡಕ್ ಆದೇಶ ಮಾಡಿದೆ. ಈ ಸಂಬಂಧ ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರು ಸುತ್ತೋಲೆ ಹೊರಡಿಸಿದ್ದು, ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳಿಂದ ಶೌಚಾಲಯಗಳ ಸ್ವಚ್ಛತೆಯನ್ನು ಕಡ್ಡಾಯವಾಗಿ ಮಾಡಿಸಬಾರದೆಂದು ಸಂಬಂಧಿಸಿದ ಶಾಲಾ ಶಿಕ್ಷಣ ಇಲಾಖಾಧಿಕಾರಿಗಳು ಮತ್ತು ಸರ್ಕಾರಿ ಪ್ರಾಥಮಿಕ/ಪ್ರೌಢಶಾಲಾ ಮುಖ್ಯ ಶಿಕ್ಷಕರುಗಳಿಗೆ ಈಗಾಗಲೇ ಉಲ್ಲೇಖಿತ ಸುತ್ತೋಲೆಯ ಮೂಲಕ ತಿಳಿಸಲಾಗಿದ್ದರೂ ಸಹ ವಿದ್ಯಾರ್ಥಿಗಳಿಂದ ಶೌಚಾಲಯಗಳ ಸ್ವಚ್ಛತೆಯಲ್ಲಿ ತೊಡಗಿಸಿಕೊಳ್ಳುತ್ತಿರುವ ಬಗ್ಗೆ ಇತ್ತೀಚೆಗೆ ಕೆಲವು ಪ್ರಕರಣಗಳು ಬೆಳಕಿಗೆ ಬಂದಿರುವುದನ್ನು ಇಲಾಖೆಯು ಗಮನಿಸಿದೆ ಎಂದಿದೆ. ಸರ್ಕಾರದಿಂದ ಮತ್ತು ಇಲಾಖೆಯಿಂದ ಕಾಲ-ಕಾಲಕ್ಕೆ ಹೊರಡಿಸಲಾಗುವ ಸೂಚನೆಗಳನ್ನು ಮತ್ತು ನಿರ್ದೇಶನಗಳನ್ನು ಚಾಚೂ ತಪ್ಪದೆ ಪಾಲಿಸುವಂತೆ ಸೂಚನೆಗಳನ್ನು ನೀಡಲಾಗುತ್ತಿದ್ದರೂ ಸಹ ಇಂತಹ ಸೂಚನೆಗಳನ್ನು ಉಲ್ಲಂಘಿಸುತ್ತಿರುವುದು ಗಂಭೀರವಾಗಿ ಪರಿಗಣಿಸಿ, ಆಕ್ಷೇಪಿಸಿದೆ ಎಂಬುದಾಗಿ ತಿಳಿಸಿದೆ. ಈ ಹಿನ್ನೆಲೆಯಲ್ಲಿ…
ಪಾಕಿಸ್ತಾನ ಕ್ರಿಕೆಟ್ ತಂಡವು ನ್ಯೂಜಿಲೆಂಡ್ ಪ್ರವಾಸ ಕೈಗೊಂಡಿದ್ದು, ಮೌಂಟ್ ಮೌಂಗನುಯಿಯಲ್ಲಿ ನಡೆದ ಅಂತಿಮ ODI ನಂತರ, ಪಾಕಿಸ್ತಾನ ಆಲ್‌ರೌಂಡರ್ ಖುಷ್ದಿಲ್ ಶಾ ಅವರ ತಾಳ್ಮೆ ಕಳೆದುಕೊಂಡ ಆಘಾತಕಾರಿ ಕ್ಷಣವು ಈಗ ವೈರಲ್ ಆಗಿದೆ. ನ್ಯೂಜಿಲೆಂಡ್ ವಿರುದ್ಧ 43 ರನ್‌ಗಳ ಸೋಲಿನ ನಂತರ ನಿರಾಶೆಗೊಂಡ ಪಾಕಿಸ್ತಾನ ರಾಷ್ಟ್ರೀಯ ಕ್ರಿಕೆಟ್ ತಂಡವು ಮೈದಾನದಿಂದ ಹೊರನಡೆದಾಗ, ಖುಷ್ದಿಲ್ ಶಾ ತಾಳ್ಮೆ ಕಳೆದುಕೊಂಡು ಅಭಿಮಾನಿಗಳೊಂದಿಗೆ ತೀವ್ರ ವಾಗ್ವಾದಕ್ಕೆ ಇಳಿದರು. ಅವರು ಪ್ರೇಕ್ಷಕರ ಒಂದು ಭಾಗದ ಕಡೆಗೆ ದಾಳಿ ಮಾಡುತ್ತಿರುವುದು ಕಂಡುಬಂದಿತು, ಅವರು ವೈಯಕ್ತಿಕ ನಿಂದನೆಗಳನ್ನು ಎಸೆದರು. https://twitter.com/i/status/1908470061666349119 ನ್ಯೂಜಿಲೆಂಡ್ ವಿರುದ್ಧ ಪಾಕಿಸ್ತಾನ 3-0 ವೈಟ್‌ವಾಶ್ ನಂತರ ಖುಷ್ದಿಲ್ ಶಾ ಪ್ರೇಕ್ಷಕರನ್ನು ಎದುರಿಸಿದರು. ಖುಷ್ದಿಲ್ ಅವರನ್ನು ಹಿಡಿದಿಡಲು ಭದ್ರತಾ ಸಿಬ್ಬಂದಿ ಮತ್ತು ತಂಡದ ಸದಸ್ಯರು ಧಾವಿಸಿದಾಗ ಪರಿಸ್ಥಿತಿ ಕೊಳಕು ಆಯಿತು. ಅವರ ಪ್ರಯತ್ನಗಳ ಹೊರತಾಗಿಯೂ, ಖುಷ್ದಿಲ್ ಅಭಿಮಾನಿಗಳೊಂದಿಗೆ ತಮ್ಮ ಬಿಸಿ ವಾಗ್ವಾದವನ್ನು ಮುಂದುವರಿಸುವುದನ್ನು ಕಾಣಬಹುದು, ಅವರು ಪಾಕಿಸ್ತಾನಿ ಆಟಗಾರರ ಪ್ರದರ್ಶನ ಮತ್ತು ಪಾತ್ರವನ್ನು ಗುರಿಯಾಗಿಸಿಕೊಂಡು ಆಕ್ರಮಣಕಾರಿ ಹೇಳಿಕೆಗಳನ್ನು ನೀಡಿದ್ದಾರೆ…
ಕಡುಬಡತನದಲ್ಲಿ ಇರುವವರೂ ಈ ದೀಪವನ್ನು ಸತತ 48 ದಿನಗಳ ಕಾಲ ಹಚ್ಚಿ ಪೂಜಿಸಬಹುದು. ಹಣದ ಹರಿವಿನಲ್ಲಿನ ಅಡೆತಡೆಗಳು ನಿವಾರಣೆಯಾಗುತ್ತವೆ ಮತ್ತು ಅನಿರೀಕ್ಷಿತ ಹಣದ ಹರಿವು ಉಂಟಾಗುತ್ತದೆ. ಹಣದ ಹರಿವಿಗೆ ಹಚ್ಚಲು ಒಂದು ದೀಪ ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರ ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ. ನಿಮ್ಮ ಸಮಸ್ಯೆಗಳಾದ ಆರೋಗ್ಯ, ಸಂತಾನ, ಸಾಲದ ಬಾಧೆ, ಪ್ರೀತಿಯಲ್ಲಿ ನಂಬಿ ಮೋಸ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ, ದೃಷ್ಟಿ ದೋಷ, ಮನೆಯಲ್ಲಿ ದಟ್ಟದರಿದ್ರ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬದ ಕಷ್ಟ,…
ಶಿವಮೊಗ್ಗ : ಹೊಸ ಪಿಂಚಣಿ ವ್ಯವಸ್ಥೆಯನ್ನು ರದ್ದುಗೊಳಿಸಿ, ಹಳೆ ಪಿಂಚಣಿ ವ್ಯವಸ್ಥೆಯನ್ನು ಜಾರಿಗೊಳಿಸಲು ಸರ್ಕಾರ ಸಕಾರಾತ್ಮಕವಾಗಿ ಸ್ಪಂದಿಸಿದೆ ಎಂದು ರಾಜ್ಯ ಸರ್ಕಾರ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್. ಷಡಾಕ್ಷರಿ ಹೇಳಿದ್ದಾರೆ. ನಗರದ ನೆಹರೂ ಕ್ರೀಡಾಂಗಣದಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರಪಾಲಿಕೆ ಹಾಗೂ ರಾಜ್ಯ ಸರ್ಕಾರಿ ನೌಕರರ ಸಂಘ ಜಿಲ್ಲಾ ಘಟಕ ಶಿವಮೊಗ್ಗ ಇವರ ಸಂಯುಕ್ತಾಶ್ರಯದಲ್ಲಿ ಏರ್ಪಡಿಸಲಾಗಿದ್ದ ರಾಜ್ಯ ಸರ್ಕಾರಿ ನೌಕರರ ಜಿಲ್ಲಾ ಮಟ್ಟದ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರಿ ನೌಕರರು ವೇತನಾಧಾರಿತ ಬ್ಯಾಂಕ್ಖಾತೆ ತೆರೆದು, 1.20ಕೋಟಿ ಮೊತ್ತದ ವಿಮಾ ಸೌಲಭ್ಯ ಮತ್ತು ಮಕ್ಕಳ ಶೈಕ್ಷಣಿಕ ಸೌಲಭ್ಯ, ಆಕಸ್ಮಿಕ ಅಪಘಾತ ಮುಂತಾದ ಸೌಲಭ್ಯಗಳ ಲಾಭ ಪಡೆದುಕೊಳ್ಳಬೇಕು. ಈಗಾಗಲೇ ಸಂಘವು ಕೈಗೊಂಡು ನಿರ್ಣಯದಂತೆ ಹೊಸ ಪಿಂಚಣಿ ವ್ಯವಸ್ಥೆಯನ್ನು ರದ್ದುಗೊಳಿಸಿ, ಹಳೆ ಪಿಂಚಣಿ ವ್ಯವಸ್ಥೆಯನ್ನು ಜಾರಿಗೊಳಿಸಲು ಸರ್ಕಾರ ಸಕಾರಾತ್ಮಕವಾಗಿ ಸ್ಪಂದಿಸಿದ್ದು, ಅದರ ಅಧ್ಯಯನಕ್ಕಾಗಿ ಹಿರಿಯ ಅಧಿಕಾರಿ ಅಂಜುಂ ಫರ್ವೇಜ್ಅವರ ನೇತೃತ್ವದಲ್ಲಿ…
ವಿಶ್ವವಿದ್ಯಾನಿಲಯ ಧನಸಹಾಯ ಆಯೋಗ (ಯುಜಿಸಿ) ವಿದೇಶಿ ಶೈಕ್ಷಣಿಕ ಅರ್ಹತೆಗಳಿಗೆ ಸಮಾನತೆಯನ್ನು ನೀಡುವ ಹೊಸ ನಿಯಮಗಳನ್ನು ಪರಿಚಯಿಸಿದೆ, ಹಿಂದಿರುಗುವ ವಿದ್ಯಾರ್ಥಿಗಳು ಎದುರಿಸುತ್ತಿರುವ ತಿಂಗಳುಗಳ ವಿಳಂಬವನ್ನು ಕೊನೆಗೊಳಿಸುವ ಗುರಿಯನ್ನು ಹೊಂದಿರುವ 15 ದಿನಗಳ ಸಂಸ್ಕರಣಾ ಕಾಲಮಿತಿಯನ್ನು ಭರವಸೆ ನೀಡಿದೆ. ಶುಕ್ರವಾರ ಭಾರತದ ಗೆಜೆಟ್‌ನಲ್ಲಿ ಅಧಿಸೂಚನೆಗೊಂಡ “ವಿಶ್ವವಿದ್ಯಾಲಯ ಅನುದಾನ ಆಯೋಗ (ವಿದೇಶಿ ಶಿಕ್ಷಣ ಸಂಸ್ಥೆಗಳಿಂದ ಪಡೆದ ಅರ್ಹತೆಗಳಿಗೆ ಸಮಾನತೆಯ ಮಾನ್ಯತೆ ಮತ್ತು ಅನುದಾನ) ನಿಯಮಗಳು, 2025”, ಆನ್‌ಲೈನ್ ಪೋರ್ಟಲ್ ಮೂಲಕ ವಿದೇಶಿ ಪದವಿಗಳನ್ನು ಗುರುತಿಸಲು ಪ್ರಮಾಣೀಕೃತ ಚೌಕಟ್ಟನ್ನು ಸ್ಥಾಪಿಸುತ್ತದೆ. ನಿಯಮಗಳ ಪ್ರಕಾರ, ಅರ್ಜಿದಾರರು ತಮ್ಮ ದಾಖಲೆಗಳನ್ನು ಯುಜಿಸಿಯ ಮೀಸಲಾದ ಪೋರ್ಟಲ್ ಮೂಲಕ ಅಗತ್ಯ ಶುಲ್ಕದೊಂದಿಗೆ ಸಲ್ಲಿಸಬೇಕು. ಸ್ಥಾಯಿ ಸಮಿತಿಯು ಪ್ರತಿ ಪ್ರಕರಣವನ್ನು 10 ಕೆಲಸದ ದಿನಗಳಲ್ಲಿ ಪರಿಶೀಲಿಸುತ್ತದೆ. ವಿದೇಶಿ ಪದವಿಗಳನ್ನು ಹೊಂದಿರುವ ವಿದ್ಯಾರ್ಥಿಗಳು ಭಾರತದ ಶಿಕ್ಷಣ ವ್ಯವಸ್ಥೆ ಅಥವಾ ಕಾರ್ಯಪಡೆಗೆ ಸಂಯೋಜಿಸುವಾಗ ವಿಳಂಬವನ್ನು ಎದುರಿಸುತ್ತಿದ್ದಾರೆ ಎಂಬ “ದೀರ್ಘಕಾಲದ ಸಮಸ್ಯೆಯನ್ನು” ಈ ಕ್ರಮವು ಪರಿಹರಿಸುತ್ತದೆ ಎಂದು ಯುಜಿಸಿ ಅಧ್ಯಕ್ಷ ಎಂ ಜಗದೇಶ್ ಕುಮಾರ್ ಹೇಳಿದರು. ವಿದೇಶಿ ಅರ್ಹತೆಗಳನ್ನು…
ಅಯೋಧ್ಯೆ : ಅಯೋಧ್ಯೆಯಲ್ಲಿ ರಾಮ ದೇವಾಲಯ ನಿರ್ಮಾಣದ ನಂತರ ಎರಡನೇ ಶ್ರೀ ರಾಮ ನವಮಿ ಆಚರಣೆಗಳು ಅದ್ಧೂರಿಯಾಗಿ ನಡೆಯುತ್ತಿವೆ. ವಸಂತ ನವರಾತ್ರಿ ಆಚರಣೆಗಳು ಮಾರ್ಚ್ 29 ರಂದು ಪ್ರಾರಂಭವಾದವು. ಇಂದು ಮಧ್ಯಾಹ್ನ 12 ಗಂಟೆಗೆ ರಾಮನಿಗೆ ಅಭಿಷೇಕ ನಡೆಯಲಿದೆ. ಈ ಸಂದರ್ಭದಲ್ಲಿ, ಸೂರ್ಯನ ಕಿರಣಗಳೊಂದಿಗೆ ತಿಲಕವನ್ನು ಹಚ್ಚಲಾಗುತ್ತದೆ. ಮಧ್ಯಾಹ್ನ 12 ಗಂಟೆಗೆ ಸರಿಯಾಗಿ ಸೂರ್ಯನ ಕಿರಣಗಳು ರಾಮನ ಹಣೆಯ ಮೇಲೆ ನಾಲ್ಕು ನಿಮಿಷಗಳ ಕಾಲ ಹೊಳೆಯುತ್ತವೆ. ದೇವಾಲಯದ ಮೂರನೇ ಮಹಡಿಯಿಂದ ಗರ್ಭಗುಡಿಯಲ್ಲಿರುವ ಬಾಲ ರಾಮನ ಹಣೆಯ ಮೇಲೆ ಸೂರ್ಯನ ಕಿರಣಗಳು ಬೀಳುವಂತೆ ವ್ಯವಸ್ಥೆ ಮಾಡಲಾಗಿತ್ತು. ಸನಾತನ ಧರ್ಮದಲ್ಲಿ, ಸೂರ್ಯನನ್ನು ಶಕ್ತಿಯ ಮೂಲವೆಂದು ಪರಿಗಣಿಸಲಾಗಿದೆ. ಸೂರ್ಯನು ತನ್ನ ಕಿರಣಗಳಿಂದ ರಾಮನಿಗೆ ತಿಲಕವನ್ನು ಹಚ್ಚಿದಾಗ ಅವನೊಳಗಿನ ದೈವತ್ವ ಜಾಗೃತಗೊಳ್ಳುತ್ತದೆ ಎಂದು ನಂಬಲಾಗಿದೆ. ಈ ಅದ್ಭುತ ದೃಶ್ಯವನ್ನು ಕಣ್ತುಂಬಿಕೊಳ್ಳಲು ಅಪಾರ ಸಂಖ್ಯೆಯ ಭಕ್ತರು ಅಯೋಧ್ಯೆಗೆ ಆಗಮಿಸುತ್ತಿದ್ದಾರೆ. ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಈ ಕಾರ್ಯಕ್ರಮವನ್ನು ನೇರ ಪ್ರಸಾರ ಮಾಡಲಿದೆ. ಆದ್ದರಿಂದ ಪ್ರಪಂಚದಾದ್ಯಂತದ ಭಕ್ತರು…
ದಾವಣಗೆರೆ : ಮಕ್ಕಳನ್ನು ಒಬ್ಬಂಟಿಯಾಗಿ ಆಟವಾಡಲು ಬಿಡುವ ಪೋಷಕರೇ ಎಚ್ಚರ, ಮನೆಯ ಬಳಿಯ ಆಟವಾಡುವಾಗಲೇ ಮಗು ನೀರಿನ ಸಂಪ್ ಗೆ ಬಿದ್ದು ಮೃತಪಟ್ಟಿರುವ ಘಟನೆ ದಾವಣಗೆರೆ ಜಿಲ್ಲೆಯಲ್ಲಿ ನಡೆದಿದೆ. ದಾವಣಗೆರೆ ಜಿಲ್ಲೆಯ ನ್ಯಾಮತಿ ತಾಲೂಕಿನ ಸುರಹೊನ್ನೆ ಶಾಂತಿನಗರದಲ್ಲಿ ಮಂಜುನಾಥ್ ಎಂಬುವರ ಮನೆಯಲ್ಲಿ ನೀರಿನ ಸಂಪ್ ಗೆ ಬಿದ್ದು ಒಂದೂವರೆ ವರ್ಷದ ಹೆಣ್ಣು ಮಗು ಮೃತಪಟ್ಟಿದೆ. ನಲ್ಲಿ ನೀರು ಬಿಟ್ಟಿದ್ದರಿಂದ ಸಂಪ್ ಗೆ ಮುಚ್ಚಿದ್ದ ಮುಚ್ಚಳವನ್ನು ತೆಗೆದಿಡಲಾಗಿದ್ದು, ಆಟವಾಡುತ್ತಾ ಅಲ್ಲಿಗೆ ಬಂದ ಮಂಜುನಾಥ್ ಅವರ ಪುತ್ರಿ ಆಕಸ್ಮಿಕವಾಗಿ ಸಂಪ್ ಗೆ ಬಿದ್ದಿದ್ದಾಳೆ. ಆದರೆ ಪೋಷಕರು ಗಮನಿಸದೇ ಮುಚ್ಚಳ ಮುಚ್ಚಿದ್ದಾರೆ. ಬಳಿಕ ಮಗು ಕಾಣಿಸದಿದ್ದಾಗ ಎಲ್ಲಾ ಕಡೆ ಹುಡುಕಿದ್ದಾರೆ. ಅನುಮಾನದಿಂದ ಸಂಪ್ ಮುಚ್ಚಳ ತೆಗೆದು ನೋಡಿದಾಗ ಮಗು ಪತ್ತೆಯಾಗಿದೆ. ಕೂಡಲೇ ಮಗುವನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಆದರೆ ಈ ವೇಳೆಗಾಗಲೇ ಮಗು ಮೃತಪಟ್ಟಿತ್ತು ಎಂದು ಹೇಳಲಾಗಿದೆ.
ಬೆಂಗಳೂರು : ಒಳ ಮೀಸಲಾತಿ ಬಗ್ಗೆ ಅನುಮಾನ ಬೇಡ. ಜಾರಿ ಮಾಡೇ ಮಾಡುತ್ತೇವೆ. ನೀವು ಬೇಡ ಅಂದರೂ ನಾವು ಜಾರಿ ಮಾಡುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ವಿಧಾನಸೌಧದ ಆವರಣದಲ್ಲಿ ಸಮಾಜ ಕಲ್ಯಾಣ ಇಲಾಖೆ ಶನಿವಾರ ಆಯೋಜಿಸಿದ್ದ ಬಾಬೂ ಜಗಜೀವನ್ ರಾಮ್ ಅವರ 118ನೇ ಜನ್ಮದಿನೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಅವರ ಮಾತನಾಡಿದ ಅವರು,ಒಳ ಮೀಸಲಾತಿ ಬಗ್ಗೆ ಅನುಮಾನ ಬೇಡ. ಜಾರಿ ಮಾಡೇ ಮಾಡುತ್ತೇವೆ. ನೀವು ಬೇಡ ಅಂದರೂ ನಾವು ಜಾರಿ ಮಾಡುತ್ತೇವೆ. ಸುಪ್ರೀಂಕೋರ್ಟ್ ಆದೇಶವನ್ನು ನಾವು ಶತಪ್ರತಿಶತ ಪಾಲಿಸುತ್ತೇವೆ. ನಾಗಮೋಹನ್ ದಾಸ್ ಅವರು ಎರಡು ತಿಂಗಳ ಕಾಲಾವಧಿ ಕೇಳಿದ್ದಾರೆ, ನಾವು ಕೊಟ್ಟಿದ್ದೇವೆ. ಬಳಿಕ ಯಾರಿಗೂ ಅನ್ಯಾಯ ಆಗದಂತೆ ಜಾರಿ ಮಾಡುತ್ತೇವೆ ಎಂದು ಭರವಸೆ ನೀಡಿದ್ದಾರೆ. ಬಾಬು ಜಗಜೀವನ್ ರಾಮ್ ಸ್ವಾತಂತ್ರ್ಯ ಪ್ರೇಮಿ, ಸಾಮಾಜಿಕ ನ್ಯಾಯದ ಪರವಾಗಿದ್ದವರು. ಜಾತಿ ವ್ಯವಸ್ಥೆ ಕಾರಣದಿಂದ ಸಮಾಜದಲ್ಲಿ ಅಸಮಾನತೆ ಇದೆ. ಜಾತಿ ಇರುವವರೆಗೂ ಮೀಸಲಾತಿ ಇರಬೇಕು ಎಂದು ಸ್ಪಷ್ಟವಾದ ನಿಲುವು ಹೊಂದಿದ್ದರು. ನರೇಂದ್ರ ಮೋದಿಯವರು EWS ಹೆಸರಲ್ಲಿ…
ಬೆಂಗಳೂರು : ರಾಜ್ಯದಲ್ಲಿ ಇಂದಿನಿಂದ 5 ದಿನ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಇಂದಿನಿಂದ 5 ದಿನ ಹಲವು ಜಿಲ್ಲೆಗಳಲ್ಲಿ ವಿಪರೀತ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಶಿವಮೊಗ್ಗ, ಕೊಡಗು, ಹಾಸನ, ಚಿಕ್ಕಮಗಳೂರು, ಹಾವೇರಿ, ಗದಗ, ಧಾರವಾಡ, ಬೆಳಗಾವಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಕರಾವಳಿಯ ಉಡುಪಿ, ದಕ್ಷಿಣ ಕನ್ನಡ ಜಿಲ್ಲೆ, ಉತ್ತರ ಒಳನಾಡಿನ ಧಾರವಾಡ, ಗದಗ, ಹಾವೇರಿ ಹಾಗೂ ದಕ್ಷಿಣ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಚಾಮರಾಜನಗರ, ಮೈಸೂರು ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಇನ್ನು ಅದೇ ರೀತಿಯಾಗಿ ಧಾರವಾಡ, ಕಲಘಟಗಿ, ಬೆಳಗಾವಿಯಲ್ಲಿ ಮಳೆಯಾಗಿದೆ. ಕಲಬುರಗಿಯಲ್ಲಿ 40 ಡಿಗ್ರಿ ಸೆಲ್ಸಿಯಸ್ ಅತ್ಯಂತ ಗರಿಷ್ಠ ಉಷ್ಣಾಂಶ ದಾಖಲಾಗಿದೆ. ಬಂಗಾಳಕೊಲ್ಲಿಯಲ್ಲಿ ಚಂಡಮಾರುತ ಪರಿಚಲನೆಯುಂಟಾಗುತ್ತಿದ್ದು, ಇದರ ಪರಿಣಾಮ ಮಹಾರಾಷ್ಟ್ರ, ಕರ್ನಾಟಕ, ತಮಿಳುನಾಡಿನ ಮೇಲಾಗಲಿದೆ.













