Subscribe to Updates
Get the latest creative news from FooBar about art, design and business.
Author: kannadanewsnow57
ಬೆಂಗಳೂರು: 2024 ರ ನವೆಂಬರ್ ತಿಂಗಳಲ್ಲಿ ಬಳ್ಳಾರಿಯಲ್ಲಿ ಸಂಭವಿಸಿದ ತಾಯಂದಿರ ಮರಣಗಳಲ್ಲಿ ಹಠಾತ್ ಏರಿಕೆಯ ನಂತರ, ಸರ್ಕಾರವು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ನಿರ್ದೇಶಕರ ಅಧ್ಯಕ್ಷತೆಯಲ್ಲಿ ತಜ್ಞರ ತಾಂತ್ರಿಕ ತಂಡವನ್ನು ರಚಿಸಿತು. ಅವರು ಏಪ್ರಿಲ್ 1, 2024 ರಿಂದ ಸಂಭವಿಸಿದ ಎಲ್ಲಾ ತಾಯಂದಿರ ಮರಣಗಳನ್ನು ಪರೀಕ್ಷಿಸಲು ಮತ್ತು ತಾಯಂದಿರ ಮರಣಗಳ ಕುರಿತು ಆಡಿಟ್ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಿದ್ದರು. ಆ ವರದಿಯನ್ನು ಸರ್ಕಾರ ಬಿಡುಗಡೆ ಮಾಡಿದೆ. ಈ ಸಮಿತಿಯು ಏಪ್ರಿಲ್ 1, 2024 ರಿಂದ ಡಿಸೆಂಬರ್ 31, 2024 ರವರೆಗೆ ರಾಜ್ಯದಲ್ಲಿ ಸಂಭವಿಸಿದ ಖಾಸಗಿ ಸೌಲಭ್ಯಗಳಲ್ಲಿನ ಸಾವುಗಳು ಸೇರಿದಂತೆ ಎಲ್ಲಾ ತಾಯಂದಿರ ಮರಣಗಳನ್ನು ಪರಿಶೀಲಿಸಿತು. ದಾಖಲೆಗಳು, ಮರಣ ಹೊಂದಿದ ಗರ್ಭಿಣಿಯರ ಆರೈಕೆಯಲ್ಲಿ ತೊಡಗಿರುವ ವೈದ್ಯಕೀಯ ಅಧಿಕಾರಿಗಳು ಮತ್ತು ತಜ್ಞರ ಮೌಖಿಕ ಸಲ್ಲಿಕೆಗಳ ಆಧಾರದ ಮೇಲೆ ಆರೋಗ್ಯ ರಕ್ಷಣಾ ಪ್ರಕ್ರಿಯೆಯನ್ನು ಪರಿಶೀಲಿಸುವ ಮೂಲಕ ಸಾವುಗಳನ್ನು ಲೆಕ್ಕಪರಿಶೋಧಿಸಲಾಗಿದೆ. ತಾಯಂದಿರ ಮರಣವು ಎಲ್ಲಾ ಜಿಲ್ಲೆಗಳನ್ನು ಒಳಗೊಂಡಿತ್ತು. ಖಾಸಗಿ ಆಸ್ಪತ್ರೆಗಳು ಮತ್ತು ವೈದ್ಯಕೀಯ ಕಾಲೇಜು ಆಸ್ಪತ್ರೆಗಳು ಸೇರಿದಂತೆ ಸರ್ಕಾರಿ ಮತ್ತು…
BIG NEWS : ನೇಮಕಾತಿ ಪರೀಕ್ಷೆಗಳಲ್ಲಿ ಭ್ರಷ್ಟಾಚಾರ ತಡೆಗೆ ಮಹತ್ವದ ಕ್ರಮ : ಅನುಚ್ಛೇದ-371-ಜೆ ಅನುಷ್ಠಾನಕ್ಕೆ ಸೂಚನೆ.!
ಬೆಂಗಳೂರು : ವಿವಿಧ ಇಲಾಖೆಗಳಲ್ಲಿರುವ ಎಲ್ಲಾ ಪರೀಕ್ಷಾ ಪ್ರಾಧಿಕಾರಗಳ ಕರ್ನಾಟಕ ಸಾರ್ವಜನಿಕ ಪರೀಕ್ಷೆ (ನೇಮಕಾತಿಯಲ್ಲಿನ ಭ್ರಷ್ಟಾಚಾರ ಮತ್ತು ಅನುಚಿತ ವಿಧಾನಗಳ ಪ್ರತಿಬಂಧಕ ಕ್ರಮಗಳು) ಅಧಿನಿಯಮ, 2023ರ ನಿಬಂಧನೆಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲು ಎಲ್ಲಾ ನೇಮಕಾತಿ ಮತ್ತು ಪರೀಕ್ಷಾ ಪ್ರಾಧಿಕಾರಗಳು ಹಾಗೂ ಕಾನೂನು ಜಾರಿ ಸಂಸ್ಥೆಗಳಿಗೆ ನಿರ್ದೇಶನ ನೀಡುವಂತೆ ಸೂಚಿಸಿ, ಅನುಚ್ಛೇದ-371-ಜೆ ಅನುಷ್ಠಾನ ಕುರಿತು ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿದ್ದೇನೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ. ಅಧಿನಿಯಮದ ನಿಬಂಧನೆಗಳು ಮತ್ತು ಅವುಗಳನ್ನು ಪಾಲಿಸುವ ಮಹತ್ವದ ಬಗ್ಗೆ ಸಿಬ್ಬಂದಿ ಹಾಗೂ ಪರೀಕ್ಷಾರ್ಥಿಗಳು ಸೇರಿದಂತೆ ಎಲ್ಲಾ ಪಾಲುದಾರರಿಗೆ ಅರಿವು ಮೂಡಿಸಲು ಅಭಿಯಾನ ಪ್ರಾರಂಭಿಸುವುದು, ಅಧಿನಿಯಮದ ನಿಬಂಧನೆಗಳಿಗೆ ಹೊಂದಿಕೊಂಡಂತೆ ಮೇಲ್ವಿಚಾರಣೆ ನಡೆಸಲು, ವರದಿ ಮಾಡಲು ಸ್ಪಷ್ಟವಾದ ಪ್ರಮಾಣಿತ ಕಾರ್ಯವಿಧಾನ ಮಾರ್ಗಸೂಚಿಗಳನ್ನು ಹೊರಡಿಸುವುದು, ಪರೀಕ್ಷಾ ಪ್ರಕ್ರಿಯೆಯಲ್ಲಿ ತೊಡಗುವ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ಕಾಲ ಕಾಲಕ್ಕೆ ತರಬೇತಿ ಕಾರ್ಯಕ್ರಮಗಳನ್ನು ಆಯೋಜಿಸುವ ಸಂಬಂಧದಲ್ಲಿ ಕ್ರಮವಹಿಸುವಂತೆ ಸೂಚಿಸಿದ್ದೇನೆ ಎಂದು ಹೇಳಿದ್ದಾರೆ. ಪರೀಕ್ಷೆಗಳ ಸಮಯದಲ್ಲಿ ಅಕ್ರಮಗಳನ್ನು ಪತ್ತೆಹಚ್ಚಲು ಮತ್ತು ತಡೆಯಲು ಬಲವಾದ ಮೇಲ್ವಿಚಾರಣಾ ವ್ಯವಸ್ಥೆಗಳನ್ನು…
ಸರ್ಕಾರಿ ಕಚೇರಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅಧಿಕಾರಿ, ಸಿಬ್ಬಂದಿಗಳು ತಮ್ಮ ಸ್ಯಾಲರಿ ಅಕೌಂಟ್ ಅನ್ನು ಸ್ಯಾಲರಿ ಪ್ಯಾಕೇಜ್ ಅಕೌಂಟ್ ಆಗಿ ಪರಿವರ್ತಿಸಬೇಕು ಹಾಗೂ ಆ್ಯಕ್ಸಿಡೆಂಟಲ್ ಮತ್ತು ಟರ್ಮ್ ಇನ್ಸೂರೆನ್ಸ್ ಯೋಜನೆಗಳ ಅಡಿಯಲ್ಲಿ ನೋಂದಾಯಿಸಿಕೊಳ್ಳಬೇಕು ಎಂದು ಕೊಪ್ಪಳ ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ ಅವರು ತಿಳಿಸಿದ್ದಾರೆ. ಸರ್ಕಾರವು ಸರ್ಕಾರಿ ಕಚೇರಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ನೌಕರರ ಮತ್ತು ಅವಲಂಬಿತ ಕುಟುಂಬ ಸದಸ್ಯರ ಹಿತಾಸಕ್ತಿಗಳನ್ನು ರಕ್ಷಿಸುವ ಸಲುವಾಗಿ ಕೆಲ ಅಂಶಗಳಲ್ಲಿ ಆದೇಶಿಸಲಾಗಿದ್ದು, ವಿವಿಧ ಬ್ಯಾಂಕುಗಳು ಒದಗಿಸುವ “ಸಂಬಳ ಪ್ಯಾಕೇಜ್‌ಗಳ” ಅಡಿಯಲ್ಲಿ ಖಾತೆಗಳನ್ನು ತೆರೆಯುವುದು, ಆಯ್ಕೆ ಮಾಡಿಕೊಳ್ಳುವುದನ್ನು ಎಲ್ಲಾ ಅಧಿಕಾರಿ, ನೌಕರರಿಗೆ (ಸರ್ಕಾರಿ, ಸರ್ಕಾರಿ ಸಂಸ್ಥೆಗಳು, ಇತ್ಯಾದಿ) ಈ ಆದೇಶದಲ್ಲಿ ಕಡ್ಡಾಯಗೊಳಿಸಿದೆ. ಅಧಿಕಾರಿ ಮತ್ತು ನೌಕರರ ಸಾಮಾಜಿಕ ಭದ್ರತೆ ಹಿತದೃಷ್ಠಿಯಿಂದ ಬ್ಯಾಂಕ್‌ಗಳು, ಅಂಚೆ ಕಚೇರಿಗಳು ನೀಡುವ ಪಿ.ಎಂ.ಜೆ.ಜೆ.ಬಿ.ವೈ ಮತ್ತು ಪಿ.ಎಂ.ಎಸ್.ಬಿ.ವೈ ಯೋಜನೆಗಳ ಅಡಿಯಲ್ಲಿ ಸ್ವಯಂಪ್ರೇರಿತ ಆಧಾರದ ಮೇಲೆ ವಿಮಾ ರಕ್ಷಣೆಯನ್ನು ಪಡೆಯಲು ಅಧಿಕಾರಿ, ನೌಕರರನ್ನು ಸಂಬಂಧಪಟ್ಟ ಇಲಾಖೆ ಪ್ರೋತ್ಸಾಹಿಸಬೇಕು. ಬ್ಯಾಂಕ್‌ಗಳು ನೀಡುವ ವಿವಿಧ ಯೋಜನೆಗಳ ಅಡಿಯಲ್ಲಿ ಸ್ವಯಂಪ್ರೇರಿತ ಆಧಾರದ ಮೇಲೆ ವೈಯಕ್ತಿಕ ಅಪಘಾತ…
ಬೆಂಗಳೂರು : ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರವು ಗುಡುಗು ಮತ್ತು ಸಿಡಿಲು ಬಡಿತ ಪ್ರತಿಕೂಲ ಪರಿಣಾಮಗಳನ್ನು ತಗ್ಗಿಸಲು ಸನ್ನದ್ಧತೆಗಾಗಿ ಸಲಹೆ/ಸೂಚನೆಗಳನ್ನು ಪ್ರಕಟಿಸಿದೆ. ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರವು ಗುಡುಗು ಮತ್ತು ಸಿಡಿಲು ಬಡಿತದಿಂದ ಉಂಟಾಗುವ ಪ್ರತಿಕೂಲ ಪರಿಣಾಮಗಳನ್ನು ತಗ್ಗಿಸಲು ಸಲಹೆ/ಸೂಚನೆಗಳನ್ನು ಉಲ್ಲೇಖಿತ ಪತ್ರದಲ್ಲಿ ನೀಡಿರುತ್ತದೆ. ಕರ್ನಾಟಕದ ಹಲವು ಭಾಗಗಳಲ್ಲಿ ಗುಡುಗು – ಸಿಡಿಲು ಸಾಮಾನ್ಯವಾಗಿ ಮುಂಗಾರು ಪೂರ್ವದಲ್ಲಿ ಹಾಗೂ ಮುಂಗಾರಿನಲ್ಲಿ ಕಾಣಿಸಿಕೊಳ್ಳುತ್ತದೆ. ಸಿಡಿಲು ಸಾಮಾನ್ಯವಾಗಿ ಮಧ್ಯಾಹ್ನ ಅಥವಾ ಸಂಜೆಯಲ್ಲಿ ಸಂಭವಿಸುವ ಸಾಧ್ಯತೆ ಹೆಚ್ಚಾಗಿರುತ್ತದೆ. ಗುಡುಗು ಸಿಡಿಲಿನಿಂದಾಗುವ ಅಪಾಯಗಳನ್ನು ತಗ್ಗಿಸಲು ಈ ಕೆಳಕಂಡ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಲಾಗಿದೆ: ಗುಡುಗು ಮತ್ತು ಸಿಡಿಲಿನ ಅಪಾಯಗಳನ್ನು ತಗ್ಗಿಸಲು ಅಗತ್ಯವಿರುವ ಉಪಶಮನ ಮತ್ತು ಸನ್ನದ್ಧತೆ ಕ್ರಮಗಳು : ಸಿಡಿಲಿಗೆ ಸಾಮಾನ್ಯವಾಗಿ ತುತ್ತಾಗುವಂತಹ ಸ್ಥಳಗಳನ್ನು ಗುರುತಿಸಿ ಸಾರ್ವಜನಿಕ ಆಸ್ತಿ / ಮೂಲಸೌಕರ್ಯಗಳ ರಕ್ಷಣೆಗೆ ಕ್ರಮ ವಹಿಸುವುದು. ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ (KSNMDC) ಹಾಗೂ Indian Meteorological Department (IMD) ಸಿಡಿಲಿನ ಮುನ್ಸೂಚನೆಗಳನ್ನು ಸ್ಥಳೀಯ…
ಬೆಂಗಳೂರು : ರಾಜ್ಯದಲ್ಲಿ ಬೆಲೆ ಏರಿಕೆ ಪರಿಣಾಮ ಜನರು ಹೊರಡಿ ಸರ್ಕಾರದ ವಿರುದ್ಧ ಆಕ್ರೋಶ ಹೊರ ಹಾಕುತ್ತಿದ್ದು ನಂದಿನಿ ಹಾಲಿನ ದರ, ವಿದ್ಯುತ್ ದರ ಸೇರಿದಂತೆ ಹಲವು ವಸ್ತುಗಳ ಬೆಲೆ ಏರಿಕೆ ಖಂಡಿಸಿ ಸರ್ಕಾರದ ವಿರುದ್ಧ ಕಿಡಿ ಕಾರುತ್ತಿದ್ದಾರೆ. ಇದೀಗ ಡೀಸೆಲ್ ಬೆಲೆ ಏರಿಕೆ ಆಗುತ್ತಿದ್ದಂತೆ ಲಾರಿ ಮಾಲೀಕರು ಸರ್ಕಾರದ ವಿರುದ್ಧ ಕಿಡಿ ಕಾರಿದ್ದು, ಮುಷ್ಕರ ನಡೆಸಲು ನಿರ್ಧರಿಸಿದ್ದಾರೆ. ಹೌದು ಬೆಲೆ ಏರಿಕೆ ಹೊಡೆತದಿಂದ ಜನ ಕಂಗಾಲಾಗಿದ್ದಾರೆ. ಹಾಲು, ಮೊಸರು ದರ ಏರಿಕೆ ಹಾಗೂ ಕಸ ತೆರಿಗೆ ಇತ್ಯಾದಿಗಳಿಂದ ಕಂಗಟ್ಟಿರುವ ಜನರಿಗೆ ಇದೀಗ ಡೀಸೆಲ್ ಬೆಲೆ ಹೆಚ್ಚಳದ ಬಿಸಿ ಪರೋಕ್ಷವಾಗಿ ತಟ್ಟಲಿದೆ. ಆದರೆ ಲಾರಿ ಮಾಲೀಕರಿಗೆ ನೇರವಾಗಿ ಹೊಡೆತ ಬೀಳಲಿದೆ. ಡಿಸೆಲ್ ದರ ಏರಿಕೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ಅವರು ಮುಷ್ಕರ ನಡೆಸಲು ಮುಂದಾಗಿದ್ದಾರೆ. ಮುಷ್ಕರ ಕುರಿತಂತೆ ಇಂದು ಲಾರಿ ಮಾಲೀಕರ ಸಂಘ ಸಭೆ ನಡೆಸಲಿದೆ. ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದ ಬಳಿಕ ಎರಡು ಬಾರಿ ಡೀಸೆಲ್ ಬೆಲೆ ಹೆಚ್ಚಳ ಮಾಡಲಾಗಿದೆ.…
ಬೆಂಗಳೂರು : ರಾಜ್ಯ ಚುನಾವಣಾ ಆಯೋಗವು ಗ್ರಾಮ ಪಂಚಾಯಿತಿ ಉಪಚುನಾವಣೆಯ ದಿನಾಂಕ ಘೋಷಣೆ ಮಾಡಿದ್ದು ಈ ಕುರಿತು ಏಪ್ರಿಲ್ 22ರಂದು ರಾಜ್ಯ ಚುನಾವಣಾ ಆಯೋಗ ಚುನಾವಣಾ ಅಧಿಸೂಚನೆ ಪ್ರಕಟಿಸಲಿದೆ. ಮೇ 11ರಂದು ಮತದಾನ ನಡೆಯಲಿದ್ದು ಮೇ 14ರಂದು ಫಲಿತಾಂಶ ಹೊರಬೀಳಲಿದೆ. ಹೌದು ಗ್ರಾಮ ಪಂಚಾಯತಿ ಉಪಚುನಾವಣೆಗೆ ಇದೀಗ ದಿನಾಂಕ ಘೋಷಣೆಯಾಗಿದ್ದು, ರಾಜ್ಯ ಚುನಾವಣಾ ಆಯೋಗದಿಂದ ದಿನಾಂಕ ಘೋಷಣೆಯಾಗಿದೆ. ಏಪ್ರಿಲ್ 22 ರಂದು ಚುನಾವಣಾ ಅಧಿಸೂಚನೆ ಪ್ರಕಟಿಸಲಿದ್ದು, ಮೇ 11 ರಂದು ಮತದಾನ ಮತ್ತು ಮೇ 14 ರಂದು ಫಲಿತಾಂಶ ಪ್ರಕಟವಾಗಲಿದೆ. ರಾಜ್ಯದ ಒಟ್ಟು 222 ಗ್ರಾಮ ಪಂಚಾಯತಿಗಳ, 260 ಸ್ಥಾನಗಳಿಗೆ ಉಪಚುನಾವಣೆ ನಡೆಯಲಿದೆ. ವಿವಿಧ ಕಾರಣಗಳಿಂದಾಗಿ ತೆರವಾಗಿರುವ ಸ್ಥಾನಗಳಿಗೆ ಉಪಚುನಾವಣೆ ನಡೆಯಲಿದೆ. ಈ ಹಿನ್ನೆಲೆ ಮೇ 11 ರಂದು ಮತದಾನ ನಡೆಯಲಿದ್ದು, ಮೇ 14ರಂದು ಗ್ರಾಮ ಪಂಚಾಯಿತಿ ಉಪಚುನಾವಣೆಯ ಫಲಿತಾಂಶ ಹೊರಬೀಳಲಿದೆ.
ಬೆಂಗಳೂರು: ಏಪ್ರಿಲ್ 6ರಂದು ಶ್ರೀರಾಮ ನವಮಿ ಹಬ್ಬ”ದ ಪ್ರಯುಕ್ತ ಪ್ರಾಣಿವಧೆ ಹಾಗೂ ಮಾಂಸ ಮಾರಾಟ ನಿಷೇಧಿಸಿ ಬಿಬಿಎಂಪಿ ಆದೇಶಿಸಿದೆ. ದಿನಾಂಕ: 06-04-2025 ಭಾನುವಾರದಂದು “ಶ್ರೀರಾಮ ನವಮಿ ಹಬ್ಬ”ದ ಪ್ರಯುಕ್ತ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಕಸಾಯಿಖಾನೆಯಲ್ಲಿ ಪ್ರಾಣಿವಧೆ ಹಾಗೂ ಮಾರಾಟ ಮಳಿಗೆಗಳಲ್ಲಿ ಮಾಂಸ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ಬಿಬಿಎಂಪಿ ಪಶುಪಾಲನೆ ವಿಭಾಗದ ಜಂಟಿ ನಿರ್ದೇಶಕರು ರವರು ತಿಳಿಸಿದ್ದಾರೆ. ಹೀಗಾಗಿ ಬೆಂಗಳೂರು ನಗರದ ಬಿಬಿಎಂಪಿ ವ್ಯಾಪ್ತಿಯಲ್ಲಿ ಈ ವೀಕೆಂಡ್ ನಲ್ಲಿ ನಾನ್ ವೆಜ್ ಪ್ರಿಯರಿಗೆ ಮಟನ್, ಚಿಕನ್ ಸಿಗೋದಿಲ್ಲ. ಏಪ್ರಿಲ್.6ರ ನಂತ್ರ ಬೆಂಗಳೂರಲ್ಲಿ ಮಾಂಸ ಮಾರಾಟವಾಗಲಿದೆ.
ಬೆಂಗಳೂರು : ರಾಜ್ಯದಲ್ಲಿ ಇನ್ನೂ ಒಂದು ವಾರ ಮುಂಗಾರು ಪೂರ್ವ ಮಳೆ ಅಬ್ಬರ ಮುಂದುವರೆಯಲಿದ್ದು, ದಕ್ಷಿಣ ಒಳನಾಡಿನ 9 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಇಂದಿನಿಂದ ಒಂದು ಹಲವು ಜಿಲ್ಲೆಗಳಲ್ಲಿ ವಿಪರೀತ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಶಿವಮೊಗ್ಗ, ಕೊಡಗು, ಹಾಸನ, ಚಿಕ್ಕಮಗಳೂರು, ಹಾವೇರಿ, ಗದಗ, ಧಾರವಾಡ, ಬೆಳಗಾವಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಇನ್ನು ಅದೇ ರೀತಿಯಾಗಿ ಧಾರವಾಡ, ಕಲಘಟಗಿ, ಬೆಳಗಾವಿಯಲ್ಲಿ ಮಳೆಯಾಗಿದೆ. ಕಲಬುರಗಿಯಲ್ಲಿ 40 ಡಿಗ್ರಿ ಸೆಲ್ಸಿಯಸ್ ಅತ್ಯಂತ ಗರಿಷ್ಠ ಉಷ್ಣಾಂಶ ದಾಖಲಾಗಿದೆ. ಬಂಗಾಳಕೊಲ್ಲಿಯಲ್ಲಿ ಚಂಡಮಾರುತ ಪರಿಚಲನೆಯುಂಟಾಗುತ್ತಿದ್ದು, ಇದರ ಪರಿಣಾಮ ಮಹಾರಾಷ್ಟ್ರ, ಕರ್ನಾಟಕ, ತಮಿಳುನಾಡಿನ ಮೇಲಾಗಲಿದೆ. ಇಂದು ಧಾರವಾಡ, ಕಲಬುರಗಿ, ಬಾಗಲಕೋಟೆ, ಗದಗ ಮತ್ತು ಹಾವೇರಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ.
ರಾಜ್ಯ ಸರಕಾರಿ ನೌಕರರಿಗೆ ಆಪತ್ಕಾಲದಲ್ಲಿ ಆರ್ಥಿಕವಾಗಿ ಸಹಾಯವಾಗಲು ಮತ್ತು ಬ್ಯಾಂಕಿನ ವಿವಿಧ ಸೌಲಭ್ಯಗಳನ್ನು ಉಚಿತವಾಗಿ ಪಡೆಯಲು ಅನುಕೂಲವಾಗುವಂತೆ ಎಸ್.ಬಿ.ಐ, ಕೆನರಾ ಮತ್ತು ಬ್ಯಾಂಕ್ ಆಫ್ ಬರೋಡಾ ಬ್ಯಾಂಕಗಳಲ್ಲಿ ರಾಜ್ಯ ಸರ್ಕಾರಿ ಸಂಬಳ ಪ್ಯಾಕೇಜ್ ಖಾತೆ ಹೊಂದಲು ಅವಕಾಶ ಮಾಡಿದ್ದು, ಜಿಲ್ಲೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಎಲ್ಲ ಇಲಾಖೆಗಳ ಸರಕಾರಿ ನೌಕರರು ತಮಗೆ ಹಾಗೂ ತಮ್ಮ ಕುಟುಂಬ ಸದಸ್ಯರಿಗೆ ಪ್ರಯೋಜನವಾಗುವ ಸಂಬಳ ಪ್ಯಾಕೇಜ್ ಖಾತೆ ಹೊಂದಬೇಕು. ಈ ಕುರಿತು ಆಯಾ ಇಲಾಖೆಯ ಜಿಲ್ಲಾ ಮುಖ್ಯಸ್ಥರು ಖಾತೆಯ ಕ್ರಮ ವಹಿಸಿ, ಏಪ್ರಿಲ್ ಅಂತ್ಯದೊಳಗೆ ಜಿಲ್ಲಾಡಳಿತಕ್ಕೆ ವರದಿ ಸಲ್ಲಿಸಬೇಕೆಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಹೇಳಿದರು. ಅವರು ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ರಾಜ್ಯ ಸರ್ಕಾರಿ ನೌಕರರ ಸಂಬಳ ಪ್ಯಾಕೇಜ್ ಖಾತೆ ಹಾಗೂ ಸರಕಾರಿ ನೌಕರರ ಸಾಮಾಜಿಕ ಭದ್ರತಾ ಯೋಜನೆಗಳ ಕುರಿತು ಬ್ಯಾಂಕರ್ಸ್ ಮತ್ತು ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಹಾಗೂ ತಾಲೂಕ ಮಟ್ಟದ ಅಧಿಕಾರಿಗಳ ವಿಶೇಷ ಸಭೆ ಜರುಗಿಸಿ, ಮಾತನಾಡಿದರು. ಸರಕಾರದಿಂದ ನೇರವಾಗಿ ಮತ್ತು ಪರೋಕ್ಷವಾಗಿ ನೇಮಕಗೊಂಡಿರುವ…
2025-26 ನೇ ಸಾಲಿನಲ್ಲಿ ಹಸಿರು ಕ್ರಾತಿಯ ಹರಿಕಾರ ಹಾಗೂ ಭಾರತದ ಉಪಪ್ರಧಾನಿ ಡಾ. ಜಗಜೀವನ ರಾಂ ರವರ 118ನೇ ಜನ್ಮ ದಿನಾಚರಣೆ ಕಾರ್ಯಕ್ರಮಗಳನ್ನು ಸರ್ಕಾರದಿಂದ ಏಪ್ರಿಲ್ 5, 2025 ರಂದು ಆಚರಿಸಲಾಗುತ್ತಿದೆ. ಅದರಂತೆ ಈ ವರ್ಷವೂ ಸಹ ಜನ್ಮ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಅದ್ದೂರಿಯಾಗಿ ಸದರಿ ಜಯಂತಿಯನ್ನು ಏಪ್ರಿಲ್ 5, 2025 ರಂದು ಬೆಳಿಗ್ಗೆ 8 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಹಾಜರಿದ್ದು ಮೆರವಣಿಗೆಯಲ್ಲಿ ಪಾಲ್ಗೊಳ್ಳುವುದು ಹಾಗೂ ಜಿಲ್ಲೆಯ ಎಲ್ಲಾ ಜಿಲ್ಲಾ ಮಟ್ಟದ ಅಧಿಕಾರಿಗಳು ಏಪ್ರಿಲ್ 5, 2025 ರಂದು ಬೆಳಿಗ್ಗೆ 10 ಗಂಟೆಗೆ ತಮ್ಮ ಅಧೀನದಲ್ಲಿ ಬರುವ ಎಲ್ಲಾ ಕಚೇರಿ, ಸಂಸ್ಥೆಗಳಲ್ಲಿ ಹಸಿರು ಕ್ರಾಂತಿಯ ಹರಿಕಾರ ಹಾಗೂ ಭಾರತದ ಮಾಜಿ ಉಪಪ್ರಧಾನಿ ಡಾ. ಬಾಬು ಜಗಜೀವನ ರಾಂ ಅವರ ಜಯಂತಿಯನ್ನು ಕಡ್ಡಾಯವಾಗಿ ಆಚರಿಸಲು ನಿರ್ಧರಿಸಲಾಗಿದೆ. ಪ್ರಯುಕ್ತ ಏಪ್ರಿಲ್ 5, 2025 ರಂದು ಜ್ಯುಬ್ಲಿ ವೃತ್ತದಲ್ಲಿರುವ ಭಾರತ ರತ್ನ ಸಂವಿಧಾನ ಶಿಲ್ಪಿ ಡಾ. ಬಿ.ಆರ್.ಅಂಬೇಡ್ಕರ ಅವರ ಪುತ್ಥಳಿಗೆ ಬೆಳಿಗ್ಗೆ 11 ಗಂಟೆಗೆ ಜಿಲ್ಲಾಡಳಿತ…














