Subscribe to Updates
Get the latest creative news from FooBar about art, design and business.
Author: kannadanewsnow57
ಸ್ಮಾರ್ಟ್ಫೋನ್ ಚಟವು ನಮ್ಮ ಆಧುನಿಕ ಜೀವನಶೈಲಿಗೆ ಸದ್ದಿಲ್ಲದೆ ಸವಾಲಾಗಿ ಪರಿಣಮಿಸಿದೆ. ಇದು ನಾವು ಸಂಪರ್ಕಿಸುವ, ಕೆಲಸ ಮಾಡುವ ಮತ್ತು ವಿಶ್ರಾಂತಿ ಪಡೆಯುವ ವಿಧಾನವನ್ನು ಬದಲಾಯಿಸಿದೆ. ಫೋನ್ನಲ್ಲಿ ನಿರಂತರವಾಗಿ ಸಕ್ರಿಯವಾಗಿರುವ ಕಾರಣ, ನಾವು ಅದರ ಬೆಲೆಯನ್ನು ಪಾವತಿಸಬೇಕಾಗುತ್ತದೆ. ಹೌದು, ಹೆಚ್ಚು ಮೊಬೈಲ್ ಬಳಕೆ ನಿದ್ರೆ, ಮಾನಸಿಕ ಆರೋಗ್ಯ ಮತ್ತು ವೈಯಕ್ತಿಕ ಸಂಬಂಧಗಳ ಮೇಲೂ ಪರಿಣಾಮ ಬೀರುತ್ತದೆ. ವಿಶೇಷವಾಗಿ ಯುವಕರು ಮತ್ತು ಯುವ ವಯಸ್ಕರಲ್ಲಿ. ಸ್ಮಾರ್ಟ್ಫೋನ್ ಚಟವನ್ನು ಸಾರ್ವಜನಿಕ ಆರೋಗ್ಯ ಸಾಂಕ್ರಾಮಿಕ ಎಂದು ಕರೆಯಲಾಗುತ್ತದೆ. ಸ್ಪೇನ್ ದಿಟ್ಟ ಹೆಜ್ಜೆ ಇಡಲು ಮುಂದಾಗಿದೆ. ಸಿಗರೇಟ್ ಪ್ಯಾಕೆಟ್ಗಳಂತೆ ದೇಶದಲ್ಲಿ ಮಾರಾಟವಾಗುವ ಎಲ್ಲಾ ಸ್ಮಾರ್ಟ್ಫೋನ್ಗಳಲ್ಲಿ ಆರೋಗ್ಯ ಎಚ್ಚರಿಕೆಗಳನ್ನು ಕಡ್ಡಾಯಗೊಳಿಸುವುದು. ಈ ಕ್ರಮವು ಮಿತಿಮೀರಿದ ಪರದೆಯ ಸಮಯದ ಅಪಾಯಗಳ ಬಗ್ಗೆ ಅರಿವು ಮೂಡಿಸಲು ಮತ್ತು ಎಚ್ಚರಿಕೆಯಿಂದ ಬಳಸುವುದನ್ನು ಉತ್ತೇಜಿಸುವ ಗುರಿಯನ್ನು ಹೊಂದಿದೆ. ಹೆಚ್ಚು ಸಕ್ರಿಯವಾಗಿಲ್ಲದ ಮತ್ತು ದೀರ್ಘಕಾಲದವರೆಗೆ ಸ್ಮಾರ್ಟ್ಫೋನ್ಗಳನ್ನು ಬಳಸುವ ಜನರು ಹೃದಯ ಮತ್ತು ಪಾರ್ಶ್ವವಾಯು ಅಪಾಯವನ್ನು ಗಮನಾರ್ಹವಾಗಿ ಹೆಚ್ಚಿಸುತ್ತಾರೆ. ತೂಕ ಮತ್ತು ಒತ್ತಡವು ನಿಯಂತ್ರಣದಲ್ಲಿದ್ದರೂ ಸಹ, ಹೃದಯಾಘಾತದ ಅಪಾಯವು…
ಬೆಂಗಳೂರು: ಬಳ್ಳಾರಿಯ ಜಿಲ್ಲಾಸ್ಪತ್ರೆಯಲ್ಲಿ ಬಾಣಂತಿಯರ ಸಾವು ಪ್ರಕರಣ ಸಂಬಂಧ ಐಎಎಸ್ ಅಧಿಕಾರಿ ಎಂ.ಕನಗವಲ್ಲಿ ನೇತೃತ್ವದಲ್ಲಿ ಸಮಿತಿಯನ್ನು ರಚಿಸಿ ರಾಜ್ಯ ಸರ್ಕಾರ ಆದೇಶಿಸಿದೆ. ಈ ಕುರಿತಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದದಾರೆ. ಅದರಲ್ಲಿ ಬಳ್ಳಾರಿ ಜಿಲ್ಲೆಯಲ್ಲಿ ಬಾಣಂತಿಯರ ಸರಣಿ ಸಾವಿನ ಕುರಿತಂತೆ ಹಾಗೂ ರಾಜ್ಯದಲ್ಲಿ ಇದೇ ತರಹದ ಪಕರಣಗಳು ಮರು ಕಳಿಸದಂತೆ ಮೂಲ ವ್ಯವಸ್ಥೆ ಸುಧಾರಣೆಗಳನ್ನು ತರಲು (Basic System reforms) ತರಲು ಸೂಕ್ತ ಶಿಫಾರಸ್ಸಿನೊಂದಿಗೆ ವಿವರವಾದ ವರದಿಯನ್ನು ಸರ್ಕಾರಕ್ಕೆ ಸಲ್ಲಿಸುವ ಸಂಬಂಧ ಸರ್ಕಾರದ ಅವರ ಮುಖ್ಯ ಕಾರ್ಯದರ್ಶಿ ಮತ್ತು ಅಭಿವೃದ್ಧಿ ಆಯುಕ್ತರ ಅಧ್ಯಕ್ಷತೆಯಲ್ಲಿ ಸಮಿತಿಯನ್ನು ರಚಿಸಲಾಗಿರುತ್ತದೆ ಎಂದಿದ್ದಾರೆ. ಕೆಎಸ್ಎಂಎಸ್ಸಿಎಲ್ ರವರು ಟೆಂಡರ್ ಮೂಲಕ ಔಷಧಿಗಳ ಖರೀದಿ ಮತ್ತು ಎಂಪ್ಯಾನಲ್ ಲ್ಯಾಬೋರೇಟರಿಗಳಿಗೆ ಔಷಧಗಳ ಮಾದರಿಗಳನ್ನು ಒಳಪಡಿಸುವಲ್ಲಿ ಆಗಿರುವ ನಿಯಮಗಳ ಉಲ್ಲಂಘನೆಗಳ ಬಗ್ಗೆ ಕೆಎಸ್ಎಂಎಸ್ಸಿಎಲ್ ಅಧಿಕಾರಿಗಳ ಪಾತ್ರ ಮತ್ತು ಲೋಪಗಳನ್ನು ಎಸಗಿದ ಅಧಿಕಾರಿಗಳ ಮೇಲೆ ಜವಾಬ್ದಾರಿಗಳನ್ನು ನಿಗದಿ ಮಾಡುವ ಬಗ್ಗೆ ಮತ್ತು ಕೆಎಸ್ಎಂಎಸ್ಸಿಎಲ್ ನಲ್ಲಿ existing…
ಬೆಂಗಳೂರು : ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ, ಬೆನ್ನು ನೋವಿನ ಸಮಸ್ಯೆ ತಿಳಿಸಿ ನಟ ದರ್ಶನವರು ಮಧ್ಯಂತರ ಜಾಮೀನು ಪಡೆದುಕೊಂಡಿದ್ದಾರೆ. ಆದರೆ 5 ವಾರ ಕಳೆದರೂ ಕೂಡ ಇದುವರೆಗೂ ದರ್ಶನ್ ಸರ್ಜರಿ ಮಾಡಿಸಿಲ್ಲ. ಹಾಗಾಗಿ ಇಂದು ಹೈಕೋರ್ಟ್ ನಲ್ಲಿ ನಟ ದರ್ಶನ್ ಅವರ ಜಾಮೀನು ಭವಿಷ್ಯ ನಿರ್ಧಾರವಾಗಲಿದೆ. ಹೌದು, ಇಂದು ಹೈ ಕೋರ್ಟ್ ನಲ್ಲಿ ನಟ ದರ್ಶನ್ ಅವರ ಜಾಮೀನು ಅರ್ಜಿ ವಿಚಾರಣೆ ನಡೆಯಲಿದೆ. ಸರ್ಜರಿ ಕಾರಣ ನೀಡಿ ದರ್ಶನ್ ಅವರು ಮಧ್ಯಂತರ ಜಾಮೀನು ಪಡೆದುಕೊಂಡಿದ್ದಾರೆ. ಆದರೆ 5 ವಾರಗಳು ಕಳೆದರೂ ಕೂಡ ನಟ ದರ್ಶನವರು ಶಸ್ತ್ರಚಿಕಿತ್ಸೆ ಇದುವರೆಗೂ ಮಾಡಿಸಿಲ್ಲ. ಡಿಸೆಂಬರ್ 11ಕ್ಕೆ ಅವರ ಮಧ್ಯಂತರ ಜಾಮೀನು ಅವಧಿ ಅಂತ್ಯವಾಗಲಿದೆ. ಹಾಗಾಗಿ ಮಧ್ಯಂತರ ಜಾಮೀನು ವಿಸ್ತರಣೆಗೆ ಅರ್ಜಿ ಸಲ್ಲಿಸುವ ಸಾಧ್ಯತೆ ಇದೆ ಎನ್ನಲಾಗಿದೆ. ಕಳೆದ ವಿಚಾರಣೆಯ ವೇಳೆ ನಟ ದರ್ಶನ್ ಪರ ಹಿರಿಯ ವಕೀಲರಾದಂತಹ ಸಿವಿ ನಾಗೇಶ್ ಅವರು, ಸುಧೀರ್ಘವಾದ ಅಂತಹ ವಾದ ಮಂಡನೆ ಮಾಡಿದ್ದರು. ಬಳಿಕ ಸರ್ಕಾರದ…
ಬೆಂಗಳೂರು : ಸಾರಿಗೆ ಸಿಬ್ಬಂದಿಗಳ ಬಗ್ಗೆ ಅಪಾರವಾದ ಕಾಳಜಿಯಿದ್ದು, ಅವರ ಹಲವು ವರ್ಷಗಳ ಬೇಡಿಕೆಯಾದ ನಗದು ರಹಿತ ಆರೋಗ್ಯ ಸೇವೆಗೂ ಶೀಘ್ರದಲ್ಲಿಯೇ ಚಾಲನೆ ನೀಡಲಾಗುತ್ತಿದೆ ಎಂದು ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ಅವರು ತಿಳಿಸಿದ್ದಾರೆ. ಈಗಾಗಲೇ ಸಾರಿಗೆ ಸಚಿವರು ನೌಕರರ ಸಂಘಟನೆಗಳೊಂದಿಗೆ ಅವರ ಬೇಡಿಕೆಗಳಿಗೆ ಸಂಬಂಧಿಸಿ ದಂತೆ ಮಾತುಕತೆ ನಡೆಸಿದ್ದು, ಅವುಗಳಲ್ಲಿ ಕೆಲವೊಂದು ಬೇಡಿಕೆಗಳನ್ನು ಈಡೇರಿಸುವ ನಿಟ್ಟಿನಲ್ಲಿ ಈಗಾಗಲೇ ಕ್ರಮ ಜರುಗಿದೆ. ಅದರಲ್ಲಿ ಪ್ರಮುಖವಾಗಿ 1. ಪರಿಷ್ಕೃತ ವೇತನ ಶ್ರೇಣಿಯಲ್ಲಿ ಸೇವಾ ವಿಮುಕ್ತಿ ಹೊಂದಿದ ನೌಕರರ ಉಪಧನ ಮತ್ತು ಗಳಿಕೆ ರಜೆ ನಗದೀಕರಣ ವ್ಯತ್ಯಾಸದ ಮೊತ್ತ ಪಾವತಿಸಲು ರೂ.224 ಕೋಟಿ ಗಳನ್ನು ನೀಡಲು ಸರ್ಕಾರವು ದಿನಾಂಕ: 07.12 2024 ರಂದು ಸರ್ಕಾರಿ ಆದೇಶ ಹೊರಡಿಸಿದೆ. ಅಧಿವೇಶನದ ನಂತರ ಹಣ ಬಿಡುಗಡೆಯಾಗಲಿದೆ 2. ಸಿಬ್ಬಂದಿಗಳ ಅಂತರ ನಿಗಮ ವರ್ಗಾವಣೆಯ ಪಟ್ಟಿ ಬಿಡುಗಡೆ ಮಾಡಲಾಗಿದೆ. 2. ಭವಿಷ್ಯನಿಧಿ ಮತ್ತು ಡೀಸೆಲ್ ಬಾಕಿ ಹಣ ಪಾವತಿಗಾಗಿ ಸರ್ಕಾರವೇ ಗ್ಯಾರೆಂಟಿ ನೀಡಿ ರೂ.2000 ಕೋಟಿ ಲೋನ್ ನೀಡಿದೆ.…
ಕರ್ನಾಟಕ ವಿಧಾನಸಭೆಯ ಸಭಾಧ್ಯಕ್ಷರಾದ ಸನ್ಮಾನ್ಯ ಯು. ಟಿ. ಖಾದರ್ ಅವರ ನೇತೃತ್ವದಲ್ಲಿ, ಜನಮಾನಸದಲ್ಲಿ ಸದಾ ಸ್ಮರಣೀಯವಾಗಿ ಉಳಿಯುವ ಮತ್ತೊಂದು ಐತಿಹಾಸಿಕ ಕ್ಷಣವು, ಬೆಳಗಾವಿಯ ಸುವರ್ಣ ಸೌಧದಲ್ಲಿ ದಾಖಲಾಗಲಿದೆ. ವಿಶ್ವಗುರು ಶ್ರೀ ಬಸವಣ್ಣನವರು ಸ್ಥಾಪಿಸಿದ, “ವಿಶ್ವದ ಮೊದಲ ಸಂಸತ್ತು” ಎಂಬ ಖ್ಯಾತಿಯ, “ಅನುಭವ ಮಂಟಪದ” ಬೃಹತ್ ತೈಲವರ್ಣ ಚಿತ್ರ ಅನಾವರಣವು ಶ್ರೀ ಯು. ಟಿ. ಖಾದರ್ ಅವರ ಅಧ್ಯಕ್ಷತೆಯಲ್ಲಿ, ಚಳಿಗಾಲ ಅಧಿವೇಶನದ ಮೊದಲ ದಿನದಂದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಮೃತ ಹಸ್ತದಿಂದ ಅನಾವರಣಗೊಳ್ಳಲಿರುವುದು. ಇದು ಕೇವಲ ಒಂದು ತೈಲವರ್ಣ ಚಿತ್ರ ಅನಾವರಣ ಕಾರ್ಯಕ್ರಮವಲ್ಲ, ಬದಲಾಗಿ ನಮ್ಮ ಪ್ರಜಾಪ್ರಭುತ್ವದ ಮೂಲ ಆಶಯಗಳು, ಸಮಾನತೆ, ಮಾನವೀಯ ಸಂದೇಶಗಳನ್ನು ಜಗತ್ತಿಗೆ ಮತ್ತೊಮ್ಮೆ ಪರಿಚಯಿಸುವ ಹಾಗೂ ಶ್ರೀ ಮಹಾತ್ಮಾ ಗಾಂಧೀಜಿಯವರು ಅಧಿವೇಶನದಲ್ಲಿ ಪಾಲ್ಗೊಂಡ ಶತಮಾನೋತ್ಸವದ, ಸ್ಮರಣಾರ್ಥವಾಗಿ ನಡಯುವ ಒಂದು ಮಹತ್ವದ ಐತಿಹಾಸಿಕ ಕ್ಷಣವಾಗಿದೆ. ಕ್ಯಾನ್ವಾಸ್ ಮೇಲೆ ತೈಲ ಮಾಧ್ಯಮದ ಮೂಲಕ ರಚಿಸಲ್ಪಟ್ಟ 20 ಅಡಿ ಉದ್ದ ಮತ್ತು 10 ಅಡಿ ಅಗಲದ ಈ ವಿಶೇಷ ಚಿತ್ರಕ್ಕೆ ಜೀವಂತಿಗೆ ಮತ್ತು…
ಬೆಂಗಳೂರು : ವಸತಿ ಯೋಜನೆ ಫಲಾನುಭವಿಗಳಿಗೆ ಸಿಹಿಸುದ್ದಿಯೊಂದು ಸಿಕ್ಕಿದ್ದು, ಮುಖ್ಯಮಂತ್ರಿಯವರ 1 ಲಕ್ಷ ಮನೆ ಯೋಜನೆ ಫಲಾನುಭವಿಗಳಿಗೆ ಬ್ಯಾಂಕ್ ಸಾಲ ನೀಡುವ ಬಗ್ಗೆ ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಅವರು ಬ್ಯಾಂಕ್ ಮುಖ್ಯಸ್ಥರೊಂದಿಗೆ ನಡೆಸಿದ ಸಭೆ ಫಲಪ್ರದವಾಗಿದೆ. ಈ ಕುರಿತು ಮಾಹಿತಿ ನೀಡಿರುವ ಸಚಿವ ಜಮೀರ್ ಅಹ್ಮದ್ ಖಾನ್, ಮೊದಲ ಹಂತದಲ್ಲಿ 3000 ಫಲಾನುಭವಿಗಳಿಗೆ ತಲಾ 5 ಲಕ್ಷ ರೂ. ನೀಡಲು ಬ್ಯಾಂಕುಗಳ ಮುಖ್ಯಸ್ಥರು ಸಮ್ಮತಿ ಸೂಚಿಸಿದ್ದಾರೆ. ಮೊದಲ ಹಂತದಲ್ಲಿ ಸಾಲಕ್ಕಾಗಿ 3 ಸಾವಿರ ಅರ್ಜಿಗಳು ಸಲ್ಲಿಕೆಯಾಗಿದ್ದು, 316 ಮಂದಿಗೆ ಸಾಲ ಮಂಜೂರಾಗಿದೆ. ಬ್ಯಾಂಕ್ ಆಫ್ ಬರೋಡಾ, ಕೆನರಾ ಬ್ಯಾಂಕ್, ಎಸ್ ಬ್ಯಾಂಕ್, ಇಂಡಿಯನ್ ಓವರ್ಸೀಸ್ ಬ್ಯಾಂಕ್, ಐಐಎಫ್ಎಲ್ ಬ್ಯಾಂಕ್ ವತಿಯಿಂದ 15.80 ಕೋಟಿ ರೂಪಾಯಿ ಮೊತ್ತದ ಚೆಕ್ ಗಳನ್ನು ಹಸ್ತಾಂತರ ಮಾಡಲಾಗಿದೆ ಎಂದು ತಿಳಿಸಿದ್ದಾರೆ. ಇನ್ನು 1 ಲಕ್ಷ ಮನೆ ಯೋಜನೆಯಡಿ ಹಂತ ಹಂತವಾಗಿ 45,125 ಫಲಾನುಭವಿಗಳಿಗೆ ಸಾಲ ಮಂಜೂರಾದಲ್ಲಿ ಯೋಜನೆಯನ್ನು ಶೀಘ್ರವಾಗಿ ಪೂರ್ಣಗೊಳಿಸಿ ಮನೆಗಳ ಹಂಚಿಕೆ ಮಾಡಲಾಗುವುದು,…
ಬೆಂಗಳೂರು : ಫ್ಲೈಓವರ್ ಮೇಲೆ ಮಲಗಿದ್ದ ವ್ಯಕ್ತಿ ಮೇಲೆ ಮಾನಸಿಕ ಅಸ್ವಸ್ಥೆಯೊಬ್ಬಳು ಕಲ್ಲಿನಿಂದ ಹೊಡೆದು ಕೊಲೆ ಮಾಡಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದಾಬಸ್ ಪೇಟೆಯಲ್ಲಿ ನಡೆದಿದೆ. ದೊಡ್ಡಬಳ್ಲಾಪುರ ತಾಲೂಕಿನ ದೊಡ್ಡ ಹೆಜ್ಜಾಜಿ ಗ್ರಾಮದ ನರಸಿಂಹಮೂರ್ತಿ ಎಂಬ ವ್ಯಕ್ತಿಯನ್ನು ಮಾನಸಿಕ ಅಸ್ವಸ್ಥೆ ಉಮಾದೇವಿ ಕೊಲೆ ಮಾಡಿದ್ದು, ಪೊಲೀಸರು ಮಾನಸಿಕ ಅಸ್ವಸ್ಥೆಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ನರಸಿಂಹಮೂರ್ತಿ ಹಲವು ವರ್ಷಗಳಿಂದ ದಾಬಸ್ ಪೇಟೆಯಲ್ಲೇ ಸಣ್ಣಪುಟ್ಟ ಕೆಲಸ ಮಾಡಿಕೊಂಡಿದ್ರು. ಶನಿವಾರ ಉದ್ದಾನೇಶ್ವರ ದೇಗುಲದ ಪಕ್ಕದ ಫ್ಲೈಓವರ್ ಬಳಿ ಮಲಗಿದ್ದ ವೇಳೆ ಅತನ ಮೇಲೆ ರಾಮನಗರ ಜಿಲ್ಲೆಯ ಕುದೂರು ಮೂಲದ ಉಮಾದೇವಿ ಎಂಬಾಕಿ ಏಕಾಏಕಿ ಕಲ್ಲಿನಿಂದ ಹಲ್ಲೆ ನಡೆಸಿದ್ದಾಳೆ. ತೀವ್ರ ರಕ್ತಸ್ರಾವದಿಂದ ಒದ್ದಾಡುತ್ತಿದ್ದ ನರಸಿಂಹಮೂರ್ತಿಯನ್ನು ಸ್ಥಳೀಯರು ಆ್ಯಂಬುಲೆನ್ಸ್ ಸಹಾಯದಿಂದ ಆಸ್ಪತ್ರೆಗೆ ಸಾಗಿಸಿದರೂ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಘಟನೆ ಸಂಬಂಧ ದಾಬಸ್ ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ತುಮಕೂರು : ಪಿಡಿಒ ಹುದ್ದೆ ನೇಮಕಾತಿ ಪರೀಕ್ಷೆ ವೇಳೆ ಬ್ಲೂಟೂತ್ ಸಾಧನ ಬಳಸಿ ಅಕ್ರಮದಲ್ಲಿ ಭಾಗಿಯಾಗಿದ್ದ ಅಭ್ಯರ್ಥಿಯೊಬ್ಬನನ್ನು ಬಂಧಿಸಿರುವ ಘಟನೆ ತುಮಕೂರಿನಲ್ಲಿ ನಡೆದಿದೆ. ತುಮಕೂರಿನ ಲಾ ಕಾಲೇಜಿನ ಕೇಂದ್ರವೊಂದರಲ್ಲಿ ಪಿಡಿಒ ಪರೀಕ್ಷೆಯಲ್ಲಿ ಬ್ಲೂಟೂತ್ ಸಾಧನ ಬಳಸಿ ಅಕ್ರಮದಲ್ಲಿ ಭಾಗಿಯಾಗಿದ್ದ ಓರ್ವ ಅಭ್ಯರ್ಥಿಯನ್ನು ತುಮಕೂರಿನ ಪೊಲೀಸರು ಬಂಧಿಸಿದ್ದಾರೆ. ನಿನ್ನೆ ನಡೆಯುತ್ತಿದ್ದ ಸ್ಪರ್ಧಾತ್ಮಕ ಪರೀಕ್ಷೆ ವೇಳೆ ಬೆಂಗಳೂರಿನ ರಾಮಮೂರ್ತಿ ನಗರದ ಅಭ್ಯರ್ಥಿಯೊಬ್ಬ ಬ್ಲೂಟೂತ್ ಸಾಧನ ಬಳಸಿ ಅಕ್ರಮ ಮಾಡುತ್ತಿರುವುದು ಸಿಸಿ ಕ್ಯಾಮರಾ ಕಂಟ್ರೋಲ್ ರೂಮ್ ನಲ್ಲಿ ಕೂತು ವೀಕ್ಷಿಸುತ್ತಿದ್ದ ಸಿಬ್ಬಂದಿ ಗಮನಿಸಿದ್ದಾರೆ. ಕೂಡಲೇ ಕೊಠಡಿಗೆ ತೆರಳಿ ಆತನನ್ನು ವಿಚಾರಣೆ ನಡೆಸಲು ಮುಂದಾದಾಗ, ಆತ ನೆಪ ಹೇಳಿ ಪರಾರಿಯಾಗಲು ಯತ್ನಿಸಿದ್ದಾನೆ. ಆಗ ಆತನನ್ನು ಹಿಡಿದುಕೊಂಡ ಸಿಬ್ಬಂದಿ, ಭದ್ರತೆಗೆ ನಿಯೋಜನೆಗೊಂಡ ಪೊಲೀಸರ ವಶಕ್ಕೆ ನೀಡಲಾಗಿದೆ. ಸದ್ಯ ಘಟನೆ ಸಂಬಂಧ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಬೆಳಗಾವಿ : ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಬಾಣಂತಿಯರ ಸಾವಿನ ದುರಂತದ ಬೆನ್ನಲ್ಲೇ ಇದೀಗ ಬೆಳಗಾವಿಯ ಬಿಮ್ಸ್ ಸೇರಿದಂತೆ ಜಿಲ್ಲೆಯ ವಿವಿಧ ಸರ್ಕಾರಿ ಆಸ್ಪತ್ರೆಗಳಲ್ಲಿ 6 ತಿಂಗಳ ಅವಧಿಯಲ್ಲಿ 29 ಬಾಣಂತಿಯರು ಸಾವನ್ನಪ್ಪಿರುವ ಆತಂಕಕಾರಿ ಮಾಹಿತಿ ಹೊರಬಿದ್ದಿದೆ. ಬೆಳಗಾವಿಯಲ್ಲಿ ಕಳೆದ 6 ತಿಂಗಳ ಅವಧಿಯಲ್ಲಿ 29 ಬಾಣಂತಿಯರು ಹಾಗೂ ಒಂದು ವರ್ಷದ ಅವಧಿಯಲ್ಲಿ 322 ಶಿಶುಗಳು ಮೃತಪಟ್ಟಿದ್ದು, ಜನರಲ್ಲಿ ತೀವ್ರ ಆತಂಕ ಮೂಡಿಸಿದೆ. 2024 ರ ಏಪ್ರೀಲ್ ನಿಂದ ಅಕ್ಟೋಬರ್ ವರೆಗೆ ಜಿಲ್ಲೆಯಲ್ಲಿ 29 ಬಾಣಂತಿಯರ ಸಾವಾಗಿದೆ. ಹೆರಿಗೆಯ ಸಮಯದಲ್ಲಿ ತೀವ್ರ ರಕ್ತಸ್ರಾವ, ವೈದ್ಯರ ನಿರ್ಲಕ್ಷ್ಯ ಸೇರಿ ಹಲವು ಕಾರಣಗಳಿಂದ ಬೆಳಗಾವಿ ಜಿಲ್ಲೆಯಲ್ಲಿ 6 ತಿಂಗಳಲ್ಲಿ 29 ಬಾಣಂತಿಯರ ಸಾವು ಸಂಭವಿಸಿದೆ ಎಂದು ಆರೋಗ್ಯ ಇಲಾಖೆ ಹೇಳಿಕೊಂಡಿದೆ. ಹೀಗಾಗಿ ಬೆಳಗಾವಿ ಜಿಲ್ಲೆಯ ವಿವಿಧ ಆಸ್ಪತ್ರೆಗಳಲ್ಲಿ ಬಾಣಂತಿಯರು ಹಾಗೂ ನವಜಾತ ಶಿಶುಗಳ ಸರಣಿ ಸಾವಿನ ಪ್ರಕರಣವನ್ನು ಇಲಾಖಾ ತನಿಖೆಗೆ ರಾಜ್ಯ ಸರ್ಕಾರ ಆದೇಶಿಸಿದೆ.
ಬೆಳಗಾವಿ : ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಡಿಸೆಂಬರ್ 9 ರಿಂದ 20ರವರೆಗೆ ಚಳಿಗಾಲ ಅಧಿವೇಶನ ನಡೆಯಲಿದೆ. ಇಂದು ಬೆಳಗ್ಗೆ 11 ಗಂಟೆಗೆ ಅಧಿವೇಶನ ಆರಂಭವಾಗಲಿದೆ. ಈ ಬಾರಿಯ ಚಳಿಗಾಲ ಅಧಿವೇಶನ ಬಿಸಿ ಬಿಸಿ ಚರ್ಚೆ, ವಾಕ್ಸಮರಕ್ಕೆ ಸಾಕ್ಷಿಯಾಗುವ ಸಾಧ್ಯತೆ ಇದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಕೇಳಿಬಂದಿರುವ ಮುಡಾ ಹಗರಣದ ಆರೋಪ, ವಕ್ಫ್ ಆಸ್ತಿ ವಿವಾದ ಚರ್ಚೆಗೆ ಪ್ರಮುಖ ಬಿಂದುಗಳಾಗಬಹದು. ವಕ್ಫ್ ವಿವಾದ, ಪಡಿತರ ಚೀಟಿ ಗೊಂದಲ, ಮುಡಾ ಹಗರಣ ಸೇರಿ ಸಾಲು ಸಾಲು ವಿಚಾರಗಳನ್ನು ಮುಂದಿಟ್ಟುಕೊಂಡು ಸರ್ಕಾರದ ವಿರುದ್ಧ ಮುಗಿ ಬೀಳು ವಿಪಕ್ಷಗಳು ಸಜ್ಜಾಗಿವೆ. ಈ ಎರಡೂ ವಿಚಾರಗಳನ್ನು ಮುಂದಿಟ್ಟುಕೊಂಡು ಸರ್ಕಾರದ ವಿರುದ್ಧ ಚಾಟಿ ಬೀಸಲು ವಿಪಕ್ಷಗಳು ತಯಾರಿ ನಡೆಸಿವೆ. ಹಾಗೇ ಉತ್ತರ ಕರ್ನಾಟಕದ ಜಲ್ವಂತರ ಸಮಸ್ಯೆಗಳಾದ ಮೂಲಭೂತ ಸೌಕರ್ಯದ ವಿಚಾರಕ್ಕೆ ಈ ಬಾರಿಯಾದರೂ ಪರಿಹಾರ ಸಿಗುತ್ತಾ ಕಾದು ನೋಡಬೇಕಿದೆ.