Subscribe to Updates
Get the latest creative news from FooBar about art, design and business.
Author: kannadanewsnow57
ಬೆಂಗಳೂರು: ಬಿಸಿಲಿನ ತಾಪಮಾನ ಹೆಚ್ಚಾಗುತ್ತಿದ್ದು, ಜನರ ಆರೋಗ್ಯದ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದ್ದು, ಸಾರ್ವಜನಿಕ ಆರೋಗ್ಯ ಸಲಹೆಯನ್ನು ಅನುಸರಿಸುವ ಮೂಲಕ ತಮ್ಮ ಆರೋಗ್ಯದ ಕಾಳಜಿ ವಹಿಸವಂತೆ ಹವಾಮಾನ ಇಲಾಖೆ ತಿಳಿಸಿದೆ. ಈ ಬಾರಿ ಬಿಸಿಲಿನ ತಾಪಮಾನ ಹೆಚ್ಚಾಗಿದೆ. ಅಲ್ಲದೆ ಮಾರ್ಚ್ ಯಿಂದ ಮೇ ವರೆಗೆ ವಾತಾರವಣದಲ್ಲಿ ಬಿಸಿಗಾಳಿ ಬೀಸಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ವರದಿ ನೀಡಿದೆ. ಇದರಿಂದಾಗಿ ವಾತಾವರಣದಲ್ಲಿ ಅನೇಕ ರೀತಿಯ ಬದಲಾವಣೆ ಉಂಟಾಗಿ ಆರೋಗ್ಯದ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದ್ದು, ಜಿಲ್ಲೆಯ ಜನರು ತಮ್ಮ ಆರೋಗ್ಯದÀ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕು. ಜಿಲ್ಲೆಯಲ್ಲಿ ಬಿಸಿಲು ಹೆಚ್ಚಾಗಿದೆ. ದಿನೇ ದಿನೇ ಸಾರ್ವಜನಿಕರು ಕೆಲಸದ ಒತ್ತಡದ ಜೊತೆಗೆ ಬಿಸಿಲಿನ ಬೇಗೆಯನ್ನು ಸಹಿಸಿಕೊಳ್ಳದ ಸ್ಥಿತಿಗೆ ತಲುಪಿದ್ದಾರೆ. ಇದರಿಂದ ಮಾನಸಿಕವಾಗಿ ಹಾಗೂ ದೈಹಿಕವಾಗಿ ಕುಗ್ಗುತ್ತಿದ್ದಾರೆ. ಈ ಸಂದರ್ಭದಲ್ಲಿ ಸಾಮಾನ್ಯವಾಗಿ ಮನುಷ್ಯನ ದೇಹದ ಉಷ್ಣತೆಯು 36.4 ಡಿಗ್ರಿ ಸೆ ನಿಂದ 37.2 ಡಿಗ್ರಿ ಸೆ( 97.5 ಡಿಗ್ರಿ ಸೆ ಎಫ್ ನಿಂದ 98.9…
ದಾವಣಗೆರೆ : ನ್ಯಾಮತಿ ಎಸ್ ಬಿಐ ಬ್ಯಾಂಕ್ ನಲ್ಲಿ 13 ಕೋಟಿ ರೂ. ಮೌಲ್ಯದ ಚಿನ್ನ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಉತ್ತರ ಪ್ರದೇಶದ 8 ಮಂದಿ ದರೋಡೆಕೋರರ ಮೇಲೆ ನ್ಯಾಮತಿ ಪೊಲೀಸರು ಗುಂಡಿನ ದಾಳಿ ನಡೆಸಿದ್ದಾರೆ. ಹೌದು, ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ಅರಬಘಟ್ಟ ಕ್ರಾಸ್ ಬಳಿ ತಡರಾತ್ರಿ ಎರಡು ಕಾರುಗಳಲ್ಲಿ ಪ್ರಯಾಣಿಸುತ್ತಿದ್ದ 8 ದರೋಡೆಕೋರರ ಗ್ಯಾಂಗ್ ಮೇಲೆ ಪೊಲೀಸರು ಗುಂಡಿನ ದಾಳಿ ನಡೆಸಿದ್ದಾರೆ. ಉತ್ತರ ಪ್ರದೇಶ ಮೂಲದ 8 ಮಂದಿ ದರೋಡೆಕೋರರು ಎರಡು ಕಾರುಗಳಲ್ಲಿ ಸವಳಂಗ ಸೇರಿ ಕೆಲ ಕಡೆ ಬ್ಯಾಂಕ್ ದರೋಡೆಗೆ ಬಂದಿರುವ ಶಂಕೆ ಹಿನ್ನೆಲೆಯಲ್ಲಿ ಕಾರುಗಳ ಪರಿಶೀಲನೆ ನಡೆಸಲಾಗಿದೆ. ಈ ವೇಳೆ ಅವರು ತಪ್ಪಿಸಿಕೊಂಡು ಹೋಗುತ್ತಿದ್ದ ಹಿನ್ನೆಲೆ ನ್ಯಾಮತಿ ಪೊಲೀಸರು ಗುಂಡಿನ ದಾಳಿ ನಡೆಸಿದ್ದಾರೆ. ಗುಂಡಿನ ದಾಳಿ ನಡೆಸಿ ನಾಲ್ವರನ್ನು ಪೊಲೀಸರು ಬಂಧಿಸಿದ್ದು, ನಾಲ್ವರು ಪರಾರಿಯಾಗಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
ಬೆಂಗಳೂರು : ತೊಗರಿ ಬೇಳೆಯಲ್ಲೂ ರಾಸಾಯನಿಕ ಬಣ್ಣಮಿಶ್ರಿತ ಕೇಸರಿ ಬೇಳೆ ಮಿಶ್ರಣ ಆಗುತ್ತಿರುವುದು ಪತ್ತೆಯಾಗಿದೆ. ಈ ಕೇಸರಿ ಬೇಳೆ ಸೇವನೆಯಿಂದ ಲ್ಯಾಥರಿಸಂಎಂಬ ಅಂಗವೈಕಲ್ಯತೆಗೆ ಕಾರಣವಾಗಬಲ್ಲ ಗಂಭೀರ ನರರೋಗ, ಕ್ಯಾನ್ಸರ್ ಉಂಟಾಗುವ ಸಾಧ್ಯತೆಯಿದೆ ಎಂದು ಆಹಾರ ಸುರಕ್ಷತಾ ಇಲಾಖೆ ಅಧಿಕಾರಿಗಳು ಎಚ್ಚರಿಸಿದ್ದಾರೆ. ಹೌದು, ಮಹಾರಾಷ್ಟ್ರದ ಗುಡ್ಡಗಾಡು ಪ್ರದೇಶ ಹಾಗೂ ಉತ್ತರ ಭಾರತದ ಕೆಲಕಡೆ ಹೇರಳವಾಗಿ ಬೆಳೆವ ಕೇಸರಿ ಬೇಳೆಯನ್ನು ನಾಟಿ ಬೇಳೆ ಎಂದು ಅಗ್ಗದ ಬೆಲೆಗೆ ಮಾರಲಾಗುತ್ತಿದೆ. ಜತೆಗೆ ತೊಗರಿ ಬೇಳೆಯಲ್ಲೂ ಬೆರೆಸಲಾಗುತ್ತಿದೆ. ಈ ವೇಳೆ ಅಸಲಿ ಬೇಳೆಗೂ, ಕಲಬೆರಕೆ ಬೇಳೆಗೂ ಇರುವ ವ್ಯತ್ಯಾಸ ಗೊತ್ತಾಗದಂತೆ ಕೇಸರಿ ಬೇಳೆಗೆ ಹಳದಿ ಬಣ್ಣ ಬರುವಂತೆ ಟಾಟ್ರಾಜಿನ್ (ಇ-102) ಬಣ್ಣ ಮಿಶ್ರಣ ಮಾಡಲಾಗುತ್ತಿದ್ದು, ಇದರಿಂದ ಗಂಭೀರ ಆರೋಗ್ಯ ಸಮಸ್ಯೆಗಳು ಎದುರಾಗುವ ಸಾಧ್ಯತೆ ಇದೆ ಎಂದು ಆಹಾರ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ. ಮಹಾರಾಷ್ಟ್ರ, ಉತ್ತರ ಭಾರತದ ಕೆಲ ವೆಡೆ ಹೇರಳವಾಗಿ ಕೇಸರಿ ಬೆಳೆಯನ್ನು ಮಾರಾಟ ಮಾಡಲಾಗುತ್ತದೆ. ಬಣ್ಣ, ಆಕಾರದಲ್ಲಿ ತೊಗರಿ ಬೇಳೆ ಯನ್ನೇ ಹೋಲುತ್ತಿದ್ದರೂ ಅದು ವಿಷಕಾರಿ…
ಬೆಂಗಳೂರು : ಪಡಿತರ ಚೀಟಿದಾರರು ತಮಗೆ ಹಂಚಿಕೆ ಮಾಡಿದ ಆಹಾರಧಾನ್ಯವನ್ನು ಕಾಳಸಂತೆಯಲ್ಲಿ ಮಾರಾಟ ಮಾಡಿದರೆ ಅಂತಹವರ ಪಡಿತರ ಚೀಟಿಯನ್ನು ರದ್ದುಪಡಿಸಲು ಕ್ರಮವಹಿಸಲಾಗುವುದು ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಪಡಿತರ ಚೀಟಿದಾರರು ತಮಗೆ ಹಂಚಿಕೆ ಮಾಡಿದ ಆಹಾರಧಾನ್ಯವನ್ನು ಕಾಳಸಂತೆಯಲ್ಲಿ ಮಾರಾಟ ಮಾಡಿದರೆ ಅಂತಹವರ ಪಡಿತರ ಚೀಟಿಯನ್ನು ರದ್ದುಪಡಿಸಲು ಕ್ರಮವಹಿಸಲಾಗುವುದು. ಒಂದು ವೇಳೆ ನ್ಯಾಯಬೆಲೆ ಅಂಗಡಿಯವರು ಕಡಿಮೆ ಪ್ರಮಾಣ ವಿತರಿಸಿದಲ್ಲಿ ಉಚಿತ ದೂರವಾಣಿ ಸಂಖ್ಯೆ: 1967 ಅಥವಾ ತಹಶೀಲದಾರ ಕಛೇರಿ ಅಥವಾ ಜಂಟಿ ನಿರ್ದೇಶಕರ ಕಛೇರಿ ಆಹಾರ ಇಲಾಖೆ ಇವರಿಗೆ ದೂರು ಸಲ್ಲಿಸಬಹುದು ಎಂದು ಎಚ್ಚರಿಕೆ ನೀಡಿದ್ದಾರೆ. ಅಂತ್ಯೋದಯ ಅನ್ನ ಯೋಜನೆ ಮತ್ತು ಆದ್ಯತಾ ಪಡಿತರ ಚೀಟಿಗಳ (ಬಿಪಿಎಲ್) ಪ್ರತಿ ಫಲಾನುಭವಿಗೆ ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯನ್ವಯ (ಎನ್‍ಎಫ್‍ಎಸ್‍ಎ) ಯಡಿ ವಿತರಿಸಲಾಗುವ 5 ಕೆಜಿ ಆಹಾರಧಾನ್ಯದೊಂದಿಗೆ ರಾಜ್ಯ ಸರ್ಕಾರದಿಂದ ಹೆಚ್ಚುವರಿಯಾಗಿ 5 ಕೆಜಿ ಆಹಾರಧಾನ್ಯದ ಬದಲಾಗಿ ಪ್ರತಿ ಕೆಜಿಗೆ ರೂ.34 ರಂತೆ ಪಡಿತರ…
ಬೆಂಗಳೂರು : ಅನ್ನಭಾಗ್ಯ ಯೋಜನೆ ಫಲಾನುಭವಿಗಳಿಗೆ ರಾಜ್ಯ ಸರ್ಕಾರವು ಭರ್ಜರಿ ಸಿಹಿಸುದ್ದಿ ನೀಡಿದ್ದು, ಬಾಕಿ ಸೇರಿ 15 ಕೆಜಿ ಅಕ್ಕಿ ಪ್ರತಿ ಫಲಾನುಭವಿಗಳಿಗೆ ವಿತರಣೆ ಮಾಡಲಾಗುತ್ತಿದೆ. ಹೌದು, ಫೆಬ್ರವರಿ ತಿಂಗಳಲ್ಲಿ ಬಾಕಿಯಿದ್ದ ಹೆಚ್ಚುವರಿ 5 ಕೆಜಿ ಅಕ್ಕಿಯನ್ನು ಸೇರಿಸಿ ಈ ತಿಂಗಳು 15 ಕೆಜಿ ಅಕ್ಕಿಯನ್ನು ವಿತರಣೆ ಮಾಡಲಾಗುತ್ತಿದೆ. ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಯಾದ ಅನ್ನಭಾಗ್ಯ ಯೋಜನೆಯಡಿ ಪ್ರಸ್ತುತ ರಾಜ್ಯದಲ್ಲಿರುವ ಅಂತ್ಯೋದಯ ಅನ್ನಯೋಜನೆ ಮತ್ತು ಆದ್ಯತಾ ಪಡಿತರ ಚೀಟಿ ಪ್ರತಿ ಫಲಾನುಭವಿಗಳಿಗೆ ಪ್ರತಿ ತಿಂಗಳು ಪಡಿತರ ಚೀಟಿಯಲ್ಲಿನ ಕುಟುಂಬದ ಮುಖ್ಯಸ್ಥರ ಬ್ಯಾಂಕ್ ಖಾತೆಗೆ ನೇರ ನಗದು ವರ್ಗಾವಣೆ ಮುಖಾಂತರ ಹಣವನ್ನು ವರ್ಗಾಹಿಸುವ ಪ್ರಕ್ರಿಯೆಯ ಬದಲಾಗಿ ಫೆಬ್ರುವರಿ-2025ರ ಮಾಹೆಯಿಂದ ಜಾರಿಗೆ ಬರುವಂತೆ ಅರ್ಹ ಫಲಾನುಭವಿಗಳಿಗೆ 5 ಕೆಜಿ ಅಕ್ಕಿಯನ್ನು ಸಾರ್ವಜನಿಕರ ವಿತರಣಾ ಪದ್ಧತಿಯಲ್ಲಿ ವಿತರಿಸಲು ಸರ್ಕಾರವು ಆದೇಶಿಸಿರುತ್ತದೆ. ಅದರಂತೆ ಪಡಿತರ ಚೀಟಿಯಲ್ಲಿನ ಫಲಾನುಭವಿಗಳಿಗೆ ಮಾರ್ಚ್-2025ರ ಮಾಹೆಗೆ ಫೆಬ್ರುವರಿ-2025ರ 5 ಕೆ.ಜಿ ಅಕ್ಕಿ ಸೇರಿಸಿ, ಹಂಚಿಕೆ ಮಾಡಲಾದ ಪಡಿತರ ಪ್ರಮಾಣದಂತೆ ಅದ್ಯತಾ ಪಡಿತರ ಚೀಟಿಯಲ್ಲಿನ…
ಬೆಂಗಳೂರು : ಮಾ.21 ರಿಂದ ಏ.04 ರವರೆಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ವತಿಯಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1 ನಡೆಯಲಿದ್ದು, ಪರೀಕ್ಷಾ ಕೇಂದ್ರಗಳ ಸುತ್ತಲೂ 200 ಮೀಟರ್ ಆವರಣವನ್ನು ಭಾರತೀಯ ನಾಗರಿಕ ಸುರಕ್ಷಾ ಸಂಹಿತಾ 2023 ರ ಕಲಂ 163 ಮೇರೆಗೆ ನಿರ್ಬಂಧಿತ ಪ್ರದೇಶವೆಂದು ಘೋಷಿಸಲಾಗಿದೆ. ವಿದ್ಯಾರ್ಥಿಗಳಿಗೆ ಈ ನಿಯಮಗಳ ಪಾಲನೆ ಕಡ್ಡಾಯ ವಿದ್ಯಾರ್ಥಿಗಳು, ಸರಳ ಕ್ಯಾಲ್ಕುಲೇಟರ್ಗಳನ್ನು ಮಾತ್ರ ಬಳಸಲು ಅವಕಾಶ ಸ್ಟ್ರಾಟಿಸ್ಟಿಕ್ಸ್ ವಿಷಯದಲ್ಲಿ ಮಾತ್ರ ಸೈಂಟಿಫಿಕ್ ಕ್ಯಾಲ್ಕುಲೇಟರ್ ಬಳಸಲು ಅನುಮತಿ ಪರೀಕ್ಷೆಯ ಅಂತಿಮ ಬೆಲ್ ಹೊಡೆಯುವ ಮುನ್ನ ಪರೀಕ್ಷಾ ಕೊಠಡಿಯಿಂದ ಹೊರಡುವ ವಿದ್ಯಾರ್ಥಿಗಳಿಂದ ಉತ್ತರ ಪತ್ರಿಕೆ ಮತ್ತು ಪ್ರಶ್ನೆ ಪತ್ರಿಕೆಗಳನ್ನು ಕಡ್ಡಾಯವಾಗಿ ಪಡೆಯಲಾಗುತ್ತದೆ. ಗುರುತಿನ ಚೀಟಿ ಹಾಗೂ ಹಾಲ್ ಟಿಕೆಟ್ ಕಡ್ಡಾಯ ಮೊಬೈಲ್ ಫೋನ್ , ಎಲೆಕ್ಟ್ರಿಕಲ್ ಉಪಕರಣಗಳ ಬಳಕೆ ನಿಷೇಧ ಪರೀಕ್ಷಾ ಅವಧಿಗಿಂತ ಮುಂಚೆ ಹೊರಕ್ಕೆ ಹೋಗುವ ವಿದ್ಯಾರ್ಥಿಗಳಿಗೆ ಪ್ರಶ್ನೆ ಪತ್ರಿಕೆ ನೀಡಲಾಗುವುದಿಲ್ಲ. ಪರೀಕ್ಷಾ ಕೇಂದ್ರಗಳ ಸುತ್ತಲಿನ 200 ಮೀಟರ್ ವ್ಯಾಪ್ತಿಯಲ್ಲಿ ಯಾವುದೇ ರೀತಿಯ ಎಸ್.ಟಿ.ಡಿ.,…
ಬೆಂಗಳೂರು: ಬೆಂಗಳೂರಿನ ಆಸ್ತಿ ಮಾಲೀಕರೇ ಗಮನಿಸಿ ಬಿಬಿಎಂಪಿಯಿಂದ ಆಸ್ತಿ ನೋಂದಣಿಗೆ ಹೊಸ ನಿಯಮ ಜಾರಿಯಾಗಿದ್ದು, ಮುದ್ರಾಂಕ ಮತ್ತು ನೋಂದಣಿ ಇಲಾಖೆ ಎಲ್ಲಾ ಉಪ ನೋಂದಣಾಧಿಕಾರಿಗಳಿಗೆ ಇ-ಆಸ್ತಿ ಮತ್ತು ಇ-ಖಾತಾ ಸಾಫ್ಟ್‌ವೇರ್ ಬಳಸಿ ಆಸ್ತಿಗಳನ್ನು ನೋಂದಾಯಿಸುವಂತೆ ಸೂಚನೆ ನೀಡಲಾಗಿದೆ. ಹೌದು, ಈ ಬಗ್ಗೆ ಸುತ್ತೋಲೆ ಹೊರಡಿಸಲಾಗಿದ್ದು, ನೋಂದಣಿ ಮಹಾ ನಿರೀಕ್ಷಕರು ಮತ್ತು ಮುದ್ರಾಂಕ ಆಯುಕ್ತರಾದ ದಯಾನಂದ ಕೆ.ಎ. ಅವರು, ಆಸ್ತಿ ನೋಂದಣಿ ಸಮಯದಲ್ಲಿ ಉಪ ನೋಂದಣಾಧಿಕಾರಿಗಳು ನಿಯಮಗಳನ್ನು ಉಲ್ಲಂಘಿಸಬಾರದು. ಕರ್ನಾಟಕ ನಾಗರಿಕ ಸೇವಾ ನಿಯಮಗಳ (KCSR) ಅಡಿಯಲ್ಲಿ ನಿಯಮಗಳನ್ನು ಉಲ್ಲಂಘಿಸಿರುವುದು ಕಂಡುಬಂದವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು” ಎಂದು ಅವರು ಎಚ್ಚರಿಸಿದ್ದಾರೆ. ಈ ಸುತ್ತೋಲೆಯು ಮಹಾನಗರ ಪಾಲಿಕೆಗಳು, ಪುರಸಭೆಗಳು ಮತ್ತು ಗ್ರಾಮ ಪಂಚಾಯಿತಿಗಳ ವ್ಯಾಪ್ತಿಗೆ ಬರುವ ಎಲ್ಲಾ ಆಸ್ತಿಗಳಿಗೆ ಅನ್ವಯಿಸುತ್ತದೆ. ಇ ಖಾತಾ ಇಲ್ಲದೆ ಆಸ್ತಿ ನೋಂದಣಿ ಮಾಡುವಂತಿಲ್ಲ. ಬೆಂಗಳೂರಿನಲ್ಲಿ ಕೆಲವು ನಿವಾಸಿಗಳಿಗೆ ಇ-ಖಾತಾ ದುಬಾರಿಯಾಗಿದೆ. ಆದರೂ ಈ ಹೊಸ ನಿಯಮ ಜಾರಿಯಲ್ಲಿದೆ. ಅಗತ್ಯವಿರುವ ದಾಖಲೆಗಳು: (1) ಮಾಲೀಕರ ಆಧಾರ್ ಕಾರ್ಡ್ (2) ಆಸ್ತಿ…
ಬೆಂಗಳೂರು : ತುಳು-ಕನ್ನಡ ವಿದ್ವಾಂಸರಾಗಿದ್ದ ಡಾ.ವಾಮನ ನಂದಾವರ ನಿಧನರಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಂತಾಪ ಸೂಚಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ, ತುಳು-ಕನ್ನಡ ವಿದ್ವಾಂಸರಾಗಿದ್ದ ಡಾ.ವಾಮನ ನಂದಾವರ ನಿಧನದಿಂದ ದು:ಖವಾಗಿದೆ ತುಳು ಅಕಾಡೆಮಿಯ ಅಧ್ಯಕ್ಷತೆಯೂ ಸೇರಿದಂತೆ ಹಲವಾರು ಸಾಹಿತ್ಯ ಮತ್ತು ಸಾಂಸ್ಕೃತಿಕ ಸಂಘಟನೆಗಳ ಜವಾಬ್ದಾರಿಯನ್ನು ಸಮರ್ಥವಾಗಿ ನಿರ್ವಹಿಸಿದ್ದ ಡಾ.ನಂದಾವರ ಅವರು ತುಳು ಮತ್ತು ಕನ್ನಡ ಜಾನಪದ ಕ್ಷೇತ್ರಗಳಿಗೆ ಸಂಬಂಧಿಸಿದಂತೆ ಹಲವಾರು ಗ್ರಂಥಗಳನ್ನು ರಚಿಸಿದ್ದಾರೆ. ಡಾ.ವಾಮನ ನಂದಾವರ ಅವರ ಕುಟುಂಬ ಮತ್ತು ಬಂಧುಮಿತ್ರರ ಶೋಕದಲ್ಲಿ ನಾನೂ ಭಾಗಿ. ಮೃತರ ಆತ್ಮಕ್ಕೆ ಶಾಂತಿ ಕೋರುವೆ ಎಂದು ಟ್ವೀಟ್ ಮಾಡಿದ್ದಾರೆ. https://twitter.com/siddaramaiah/status/1900814744380207142
ಬೆಂಗಳೂರು: ರಾಜ್ಯದಲ್ಲಿನ ಬಡತನ ರೇಖೆಗಿಂತ ಕೆಳಗಿರುವಂತ ಜನರಿಗೆ ತುರ್ತು ಸಂದರ್ಭ ಸೇರಿದಂತೆ ಅನಾರೋಗ್ಯ ಸಮಸ್ಯೆಗೆ, ಚಿಕಿತ್ಸೆಗೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಆರ್ಥಿಕ ನೆರವು ಪಡೆಯಬಹುದಾಗಿದೆ. ಈ ಮೊದಲು ಅಫ್ ಲೈನ್ ಮೂಲಕ ಅರ್ಜಿಯೊಂದಿಗೆ ಅಲೆಯ ಬೇಕಿದ್ದಂತ ಪ್ರಕ್ರಿಯೆಯು, ಈಗ ಮತ್ತಷ್ಟು ಸರಳಗೊಳಿಸಲಾಗಿದೆ. ಜಸ್ಟ್ ಕುಳಿತಲ್ಲಿಯೇ ಆನ್ ಲೈನ್ ಮೂಲಕ ಸಲ್ಲಿಕೆ ಮಾಡಬಹುದಾಗಿದೆ. ಮುಖ್ಯಮಂತ್ರಿಗಳ ಪರಿಹಾರ ನಿಧಿ ಬಗ್ಗೆ ಮುಖ್ಯಮಂತ್ರಿಗಳ ಪರಿಹಾರ ನಿಧಿಯು ಸರ್ಕಾರದ ಆದೇಶ ಸಂಖ್ಯೆ ಎಫ್.ಡಿ. 103 ಎ.ಸಿ.ಪಿ 58ರಂತೆ ದಿನಾಂಕ: 3ನೇ ಡಿಸೆಂಬರ್ 1958ರಂತೆ ಸ್ಥಾಪಿತಗೊಂಡಿದ್ದು, ನಿಯಮಗಳು ಸರ್ಕಾರದ ಆದೇಶ ಸಂಖ್ಯೆ: ಎಫ್.ಡಿ. 35 ಬಿ.ಎಂ.ಎಸ್. 78 ದಿನಾಂಕ: 12ನೇ ಸೆಪ್ಟಂಬರ್ 1978 ರಂದು ರಚನೆಗೊಂಡಿರುತ್ತದೆ. ಮುಖ್ಯಮಂತ್ರಿಗಳಿಗೆ ಪ್ರದತ್ತವಾಗಿರುವ ವಿವೇಚನ ಅಧಿಕಾರದಂತೆ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ಪರಿಹಾರ ಮಂಜೂರು ಮಾಡಲಾಗುತ್ತಿದೆ. ಸಾರ್ವಜನಿಕರು, ಸಂಘ-ಸಂಸ್ಥೆಗಳು, ನಿಗಮ-ಮಂಡಳಿಗಳು ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಸಲ್ಲಿಸುವ ದೇಣಿಗೆಯ ಮೊತ್ತವೇ ಮುಖ್ಯಮಂತ್ರಿಗಳ ಪರಿಹಾರ ನಿಧಿಯ ಆದಾಯ ಮೂಲವಾಗಿದ್ದು, ಸರ್ಕಾರದ ವಾರ್ಷಿಕ ಆಯ-ವ್ಯಯದಲ್ಲಿ ಯಾವುದೇ ಅನುದಾನವು ನಿಗಧಿಯಾಗಿರುವುದಿಲ್ಲ…
ಕರಾಚಿ : ಬಲೂಚ್ ಲಿಬರೇಶನ್ ಆರ್ಮಿ ರೈಲು ಅಪಹರಣದ ಕುರಿತು ಪಾಕಿಸ್ತಾನಿ ಮಿಲಿಟರಿಯ ಪತ್ರಿಕಾಗೋಷ್ಠಿ ಕೊನೆಗೊಂಡಿತ್ತು. ರೈಲು ಅಪಹರಣದಲ್ಲಿ 31 ಜನರು ಸಾವನ್ನಪ್ಪಿದ್ದಾರೆ, ಅದರಲ್ಲಿ 18 ಜನರು ಸೈನಿಕರು ಎಂದು ಪಾಕಿಸ್ತಾನ ಸೇನೆ ಹೇಳಿತ್ತು. ಈಗ ಬಲೂಚ್ ಬಂಡುಕೋರರು ಎಲ್ಲಾ 214 ಒತ್ತೆಯಾಳುಗಳನ್ನು ಕೊಂದಿದ್ದೇವೆ ಎಂದು ಹೇಳಿಕೊಂಡಿದ್ದಾರೆ. ಅವರಲ್ಲಿ ಹೆಚ್ಚಿನವರು ಪಾಕಿಸ್ತಾನಿ ಸೇನಾ ಸೈನಿಕರು ಸೇರಿದ್ದಾರೆ ಎಂದು ಹೇಳಿಕೆ ಬಿಡುಗಡೆ ಮಾಡಿದೆ. ಬಲೂಚ್ ಬಂಡುಕೋರರು, ಯುದ್ಧ ಕೈದಿಗಳನ್ನು ವಿನಿಮಯ ಮಾಡಿಕೊಳ್ಳಲು ನಾವು ಪಾಕಿಸ್ತಾನಿ ಸೇನೆಗೆ 48 ಗಂಟೆಗಳ ಗಡುವು ನೀಡಿದ್ದೇವೆ ಎಂದು ಹೇಳಿದರು. ಇದು ಅವರ ಜೀವ ಉಳಿಸಿಕೊಳ್ಳಲು ಕೊನೆಯ ಅವಕಾಶವಾಗಿತ್ತು. ಆದರೆ ಯಾವಾಗಲೂ ಹಾಗೆ, ಅವನು ದುರಹಂಕಾರವನ್ನು ಪ್ರದರ್ಶಿಸಿದರು ಮತ್ತು ಅಚಲವಾಗಿಯೇ ಇದ್ದರು. ಯಾವುದೇ ಸಂಭಾಷಣೆ ನಡೆಯಲಿಲ್ಲ ಮತ್ತು ವಾಸ್ತವದ ಅರಿವು ಇದ್ದರೂ ಅವರು ಕಣ್ಣುಮುಚ್ಚಿ ಕುಳಿತರು. ಪಾಕಿಸ್ತಾನಿ ಸೇನೆ ಮತ್ತು ಸರ್ಕಾರದ ಈ ಹಠಮಾರಿತನದಿಂದಾಗಿ, ನಾವು ಎಲ್ಲಾ 214 ಒತ್ತೆಯಾಳುಗಳನ್ನು ಕೊಂದಿದ್ದೇವೆ ಎಂದು ಬಲೂಚ್ ಬಂಡುಕೋರರು ತಿಳಿಸಿದ್ದಾರೆ. ಬಲೂಚಿಸ್ತಾನ್…













