Author: kannadanewsnow57

ಬೆಂಗಳೂರು : ರಾಜ್ಯ ಸರ್ಕಾರವು ಆಡಳಿತ ಯಂತ್ರಕ್ಕೆ ಮತ್ತೆ ಮೇಜರ್ ಸರ್ಜರಿ ಮಾಡಲಾಗಿದ್ದು, ಒಟ್ಟು 35 ಡಿವೈಎಸ್ಪಿ, 88 ಇನ್ಸ್ ಪೆಕ್ಟರ್ ಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ. 2 ವರ್ಷಗಳ ಕಾಲಾವಧಿ ನಿಯಮ ಜಾರಿಯಾದ ನಂತರ ಮೊದಲ ಬಾರಿಗೆ 35 ಡಿವೈಎಸ್ಪಿ ಮತ್ತು 88 ಇನ್ಸ್ಪೆಕ್ಟರ್ ಗಳನ್ನು ಪೊಲೀಸ್ ಇಲಾಖೆ ವರ್ಗಾವಣೆ ಮಾಡಿದೆ. ಇನ್ಸ್ಪೆಕ್ಟರ್ ಮೇಲ್ಪಟ್ಟದ ಅಧಿಕಾರಿಗಳ ಕಾರ್ಯನಿರ್ವಹಣೆಗೆ ರಾಜ್ಯ ಸರ್ಕಾರ 2 ವರ್ಷಗಳ ಕಾಲಾವಧಿ ನಿಗದಿಗೊಳಿಸಿ ನಿಯಮ ಜಾರಿ ಮಾಡಿದೆ. ಈ ಬೆಳವಣಿಗೆ ಬೆನ್ನಲ್ಲೇ ಇನ್ಸ್ ಪೆಕ್ಟರ್ ಮೇಲ್ಮಟ್ಟದ ಅಧಿಕಾರಿಗಳ ಕಾರ್ಯ ನಿರ್ವಹಣೆಗೆ ಎರಡು ವರ್ಷಗಳ ಕಾಲಾವಧಿ ಹೊಸ ನೀತಿ ಅನುಸಾರ ವರ್ಗಾವಣೆಗೆ ಚಾಲನೆ ನೀಡಲಾಗಿದೆ. ಮೊದಲ ಹಂತದಲ್ಲಿ 35 ಡಿವೈಎಸ್ಪಿ, 88 ಇನ್ಸ್ಪೆಕ್ಟರ್ ಗಳನ್ನು ಪೊಲೀಸ್ ಇಲಾಖೆಯಲ್ಲಿ ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ.

Read More

ಆಧುನಿಕ ಯುಗದಲ್ಲಿ ನಮ್ಮ ಜೀವನದ ಪ್ರತಿಯೊಂದು ಅಂಶದಲ್ಲೂ ತಂತ್ರಜ್ಞಾನವು ಅನಿವಾರ್ಯವಾಗಿದೆ, ಭೂಮಿಯನ್ನು ಅಳೆಯಲು ಮತ್ತು ದಿಕ್ಕನ್ನು ನಿರ್ಧರಿಸಲು ಇನ್ನು ಮುಂದೆ ಪಟವಾರಿ ಹೋಗುವ ಅಗತ್ಯವಿಲ್ಲ. ಮನೆ ನಿರ್ಮಿಸಲು ಅಥವಾ ಆಸ್ತಿಯನ್ನು ಖರೀದಿಸುವಾಗ ಆಯಾಮಗಳು ಮತ್ತು ದೃಷ್ಟಿಕೋನವನ್ನು ಅರ್ಥಮಾಡಿಕೊಳ್ಳುವುದು ಮುಖ್ಯವಾಗಿದೆ. ಭವಿಷ್ಯದಲ್ಲಿ ಸಾಮರಸ್ಯ ಮತ್ತು ಸಮೃದ್ಧಿಯನ್ನು ಖಚಿತಪಡಿಸಿಕೊಳ್ಳಲು ದೇವಾಲಯದ ಸ್ಥಳ ಅಥವಾ ಅಡುಗೆಮನೆಯಂತಹ ಅನೇಕ ಅಂಶಗಳು ವಾಸ್ತು ತತ್ವಗಳಿಗೆ ಅನುಗುಣವಾಗಿರುತ್ತವೆ. ತಂತ್ರಜ್ಞಾನದ ಸಹಾಯದಿಂದ, ಈ ಮಾಪನಗಳು ಮತ್ತು ದಿಕ್ಕಿನ ಪರಿಶೀಲನೆಗಳನ್ನು ಈಗ ನಿಮ್ಮ ಮೊಬೈಲ್‌ನೊಂದಿಗೆ ಸ್ವತಂತ್ರವಾಗಿ ಮಾಡಬಹುದು. ಭೂಮಿ ಮಾಪನದ ಸಾಂಪ್ರದಾಯಿಕ ವಿಧಾನಗಳು ಅಸ್ತಿತ್ವದಲ್ಲಿದ್ದರೂ, ಸ್ಮಾರ್ಟ್‌ಫೋನ್ ಅಪ್ಲಿಕೇಶನ್‌ಗಳ ಆಗಮನವು ಪ್ರಕ್ರಿಯೆಯನ್ನು ಸುಗಮಗೊಳಿಸಿದೆ. ಭೂಮಿಯನ್ನು ಅಳೆಯಲು ಅತ್ಯಂತ ಪ್ರತಿಷ್ಠಿತ ಅಪ್ಲಿಕೇಶನ್‌ಗಳಲ್ಲಿ ಒಂದಾಗಿದೆ GPS ಫೀಲ್ಡ್ ಏರಿಯಾ ಮಾಪನ ಅಥವಾ GPS ಪ್ರದೇಶ ಕ್ಯಾಲ್ಕುಲೇಟರ್. ನಿಖರವಾದ ಭೂಮಿ ಮಾಪನಕ್ಕಾಗಿ ಈ ಅಪ್ಲಿಕೇಶನ್ ಅನ್ನು ಹೇಗೆ ಬಳಸುವುದು ಎಂದು ತಿಳಿದುಕೊಳ್ಳಿ ಹಂತ 1: ಅಪ್ಲಿಕೇಶನ್ ಅನ್ನು ಡೌನ್‌ಲೋಡ್ ಮಾಡಿ ಮತ್ತು ತೆರೆಯಿರಿ ನಿಮ್ಮ ಸ್ಮಾರ್ಟ್‌ಫೋನ್‌ನಲ್ಲಿ ನೀವು GPS…

Read More

ಬೆಂಗಳೂರು: ರಾಜ್ಯದಲ್ಲಿ ದಿನೇ ದಿನೇ ಮದ್ಯದ ದರವನ್ನು ಹೆಚ್ಚಳ ಮಾಡಲಾಗಿತ್ತು. ಹೀಗಾಗಿ ಎಣ್ಣೆ ಪ್ರಿಯರಿಗೆ ಶಾಕ್ ಮೇಲೆ ಶಾಕ್ ನೀಡಲಾಗಿತ್ತು. ಆದರೇ ಇದೀಗ ಇಂದಿನಿಂದಲೇ ಕರ್ನಾಟಕದಲ್ಲಿ ಶೇ.15ರಿಂದ 25ರಷ್ಟು ಮದ್ಯದ ದರ ಇಳಿಕೆ ಮಾಡಲಾಗಿದೆ. ಅಬಕಾರಿ ತಿದ್ದುಪಡಿ ನಿಯಮಗಳು 2024ಕಕ್ಕೆ ಜೂನ್ ನಲ್ಲಿ ತಿದ್ದುಪಡಿ ನೀಡಲಾಗಿತ್ತು. ಇಂದಿನಿಂದಲೇ ದುಬಾರಿ ಮದ್ಯದ ದರದಲ್ಲಿ ಇಳಿಕೆ ಮಾಡಲಾಗಿದೆ. ರಾಜ್ಯ ಅಬಕಾರಿ ಇಲಾಖೆಯ ಉನ್ನತ ಮೂಲಗಳ ಮಾಹಿತಿಯಂತೆ ಹೊರ ರಾಜ್ಯಗಳಿಗಿಂತ ಭಾರತೀಯ ನಿರ್ಮಿತ ಮದ್ಯದ ಮೇಲಿನ ಅಬಕಾರಿ ಸುಂಕದ ಸ್ಲ್ಯಾಬ್ ಗಳ ಸಂಖ್ಯೆಯನ್ನು 18 ರಿಂದ 16ಕ್ಕೆ ಇಳಿಸುವ ಸಾಧ್ಯತೆ ಇದೆ. ಈ ಮೂಲಕ ಕರ್ನಾಟಕದಲ್ಲಿ ಮದ್ಯದ ದರ ಇಳಿಕೆಯಾಗಲಿದೆ. ರಾಜ್ಯದಲ್ಲಿ ಈವರೆಗೆ 18 ಫ್ಲ್ಯಾಬ್‌ಗಳಲ್ಲಿ ಮದ್ಯದ ಮೇಲೆ ಅಬಕಾರಿ ತೆರಿಗೆ ವಿಧಿಸಲಾಗುತ್ತಿತ್ತು. ಈಗ ಫ್ಲ್ಯಾಬ್‌ಗಳ ಸಂಖ್ಯೆಯನ್ನು 16ಕ್ಕೆ ಇಳಿಕೆ ಮಾಡಲಾಗಿದೆ. ಪ್ರತಿ ಬಲ್ಕ್ ಲೀಟರ್ ಮದ್ಯದ ಘೋಷಿತ ಉತ್ಪಾದನಾ ದರ 449 ರೂ. ಮೊದಲ ಫ್ಲ್ಯಾಬ್‌ನಲ್ಲಿದ್ದರೆ, 15,001 ರೂ.ನಿಂದ ಮೇಲಿನ ಘೋಷಿತ ದರದ ಎಲ್ಲ…

Read More

ನವದೆಹಲಿ : ನರೇಂದ್ರ ಮೋದಿ ನೃತೃತ್ವದ ಕೇಂದ್ರ ಸರ್ಕಾರ ಶನಿವಾರ (ಆಗಸ್ಟ್ 24, 2024) ಏಕೀಕೃತ ಪಿಂಚಣಿ ಯೋಜನೆಗೆ ಅನುಮೋದನೆ ನೀಡಿದೆ. ಈ ಯೋಜನೆಯಲ್ಲಿ ಸರ್ಕಾರಿ ನೌಕರರು ನಿವೃತ್ತಿಯ ನಂತರ ನಿಶ್ಚಿತ ಪಿಂಚಣಿ ಪಡೆಯುತ್ತಾರೆ. ಈ ಯೋಜನೆಯು ಏಪ್ರಿಲ್ 01, 2025 ರಿಂದ ಜಾರಿಗೆ ಬರಲಿದೆ. ಯುಪಿಎಸ್ ವಿಶೇಷತೆಗಳು – ಉದ್ಯೋಗಿ ಪಾಲು: OPS ನಲ್ಲಿ ಯಾವುದೇ ಉದ್ಯೋಗಿ ಪಾಲು ಇಲ್ಲ – ಸ್ಥಿರ ಪಿಂಚಣಿ: ನಿವೃತ್ತಿಯ ನಂತರ ನೌಕರರು ನಿಶ್ಚಿತ ಪಿಂಚಣಿ ಪಡೆಯುತ್ತಾರೆ. ಈ ಪಿಂಚಣಿಯು ನಿವೃತ್ತಿಯ ಹಿಂದಿನ 12 ತಿಂಗಳ ಸರಾಸರಿ ಮೂಲ ವೇತನದ 50% ಆಗಿದೆ. ಕನಿಷ್ಠ 25 ವರ್ಷಗಳ ಕಾಲ ಕೆಲಸ ಮಾಡಿದ ಉದ್ಯೋಗಿಗಳಿಗೆ ಮಾತ್ರ ಈ ಪ್ರಯೋಜನವಿದೆ. – ಕನಿಷ್ಠ ಪಿಂಚಣಿ: ಕನಿಷ್ಠ 10 ವರ್ಷಗಳ ಕಾಲ ಕೆಲಸ ಮಾಡಿದ ನಂತರ ನೌಕರ ನಿವೃತ್ತಿಯಾದರೆ, ಅವರು ಖಚಿತವಾದ ಕನಿಷ್ಠ ಪಿಂಚಣಿ ರೂ. 10,000 ಸಿಗಲಿದೆ. – ಕುಟುಂಬ ಪಿಂಚಣಿ: ಈ ಯೋಜನೆಯಡಿಯಲ್ಲಿ ಕುಟುಂಬ ಪಿಂಚಣಿ…

Read More

ಬೆಂಗಳೂರು: 20/66/11ಕೆವಿ ಹೆಬ್ಬಾಳ  ಎಂ ಯು ಎಸ್ ಎಸ್ ದಿನಾಂಕ  28.08.2024 ರಂದು 11:00ಗಂಟೆಗಳಿಂದ 04:00ಗಂಟೆಗಳವರೆಗೆ 2*100 MVA ಟ್ರಾನ್ಸ್‌ಫಾರ್ಮರ್, ಟ್ರಾನ್ಸ್‌ಫಾರ್ಮರ್ ಬೇಸ್ ಮತ್ತು ಬ್ರೇಕರ್ ನಿರ್ವಹಣೆ  ಆದ್ದರಿಂದ ಈ ಉಪಕೇಂದ್ರದ ವ್ಯಾಪ್ತಿಯಲ್ಲಿ ಬರುವ ಕೆಳಗಿನ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂಬುದಾಗಿ ಬೆಸ್ಕಾಂ ತಿಳಿಸಿದೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ದಿನಾಂಕ 28-08-2024ರಂದು ಈ ಕೆಳಕಂಡ ಪ್ರದೇಶಗಳಲ್ಲಿ ಪಿದ್ಯುತ್ ನಿರ್ವಹಣಾ ಕಾಮಗಾರಿಯ ಹಿನ್ನಲೆಯಲ್ಲಿ ಪವರ್ ಕಟ್ ಆಗಲಿದೆ ಎಂದು ಹೇಳಿದೆ. ಈ ಏರಿಯಾಗಳಲ್ಲಿ `ವಿದ್ಯುತ್ ವ್ಯತ್ಯಯ’ ಗಂಗಾನಗರ, ಲಕ್ಷ್ಮಯ್ಹ್ ಬ್ಲಾಕ್, ವೀವರ್ ಕಾಲೋನಿ, ಸಿ.ಬಿ.ಐ ಕ್ವಾರ್ಟರ್ಸ್,, ಆರ್.ಬಿ.ಐ ಕಾಲೋನಿ, ಸಿ.ಪಿ.ಯು ಬ್ಲಾಕ್, ಡಿ.ಜಿ.ಕ್ಯೂ ಕ್ವಾಟರ್ಸ್, ಮುನಿರಾಮಯ್ಯ ಬ್ಲಾಕ್, ಯು.ಎ.ಎಸ್ ಕ್ಯಾಂಪಸ್. ದಿನ್ನೂರ್ ಮುಖ್ಯ ರಸ್ತೆ, ಆರ್. ಟಿ ನಗರ, ಪಂಜಾಬ್ ನ್ಯಾಶನಲ್ ಬ್ಯಾಂಕ್, ಮುನನಪ್ಪಾ ಕಾಲೋನಿ, ಎಚ್.ಎಂ.ಟಿ ಬ್ಲಾಕ್,,ಚಾಮುಂಡಿನಗರ, ಮಾಜಿ ಸೈನಿಕರ ಕಾಲೋನಿ, ಆರ್‌ಟಿ ನಗರ ಪೊಲೀಸ್ ಠಾಣಾ ಪ್ರದೇಶ, ಅಶ್ವತ್ನಗರ, ಡಾಲರ್ಸ್ ಕಾಲೋನಿ, ಎಂಎಲ್‌ಎ…

Read More

ಬೆಂಗಳೂರು : ಆಸ್ತಿ ಖರೀದಿ, ಮಾರಾಟಗಾರರಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು, ಎನಿವೇರ್ ಆಸ್ತಿ ನೋಂದಣಿ ಯೋಜನೆಯನ್ನು ಸೆಪ್ಟೆಂಬರ್ . 02 ರಿಂದ ಜಾರಿಗೆ ತರಲು ನಿರ್ಧರಿಸಲಾಗಿದೆ ಎಂದು ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ. ರಾಜ್ಯ ವಿಧಾನಸಭೆಯ ಅಂದಾಜು ಸಮಿತಿಯು ನೋಂದಣಿ ಇಲಾಖೆ ನೀಡುವ ‘ಎನಿವೇರ್ ನೋಂದಣಿ’ ಸೇವೆಯನ್ನು ರಾಜ್ಯ ಮಟ್ಟದ ಕಾರ್ಯವಿಧಾನವಾಗಿ ವಿಸ್ತರಿಸುವುದಕ್ಕೆ ಮುಂದಾಗಿದೆ. ಸಾರ್ವಜನಿಕರು ಸ್ಥಿರಾಸ್ತಿ ನೋಂದಣಿಗಾಗಿ ನಿರ್ದಿಷ್ಟ ಉಪ ನೋಂದಣಿ ಕಚೇರಿಗೆ ಭೇಟಿ ನೀಡದೇ, ಮತ್ತಾವುದೇ ಸಬ್‌ ರಿಜಿಸ್ಟ್ರಾರ್‌ ಕಚೇರಿಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಬಹುದಾದ ‘ಎನಿವೇರ್‌ ನೋಂದಣಿ’ ವ್ಯವಸ್ಥೆ ಸೆಪ್ಟೆಂಬರ್‌ 2 ರಿಂದ ರಾಜಾದ್ಯಂತ ಜಾರಿಯಾಗಲಿದೆ. ಎನಿವೇರ್ ನೋಂದಣಿ ವ್ಯವಸ್ಥೆಯ ಅಡಿ ಯಾವುದೇ ವ್ಯಕ್ತಿಯು ನೋಂದಣಿ ದಸ್ತಾವೇಜನ್ನು ಜಿಲ್ಲೆಯ ವ್ಯಾಪ್ತಿಯ ಯಾವುದಾದರೂ ಉಪನೋಂದಣಿ ಕಚೇರಿಯಲ್ಲಿ ನೋಂದಾಯಿಸಿಕೊಳ್ಳಬಹುದಾಗಿದೆ. ‘ ಎನಿವೇರ್‌ ನೋಂದಣಿ ‘ ವ್ಯವಸ್ಥೆಯಿಂದ ಸಾರ್ವಜನಿಕರಿಗೆ ಬಹು ಕಚೇರಿ ಆಯ್ಕೆ ಸಿಗಲಿದ್ದು, ಒಂದೇ ಕಚೇರಿಯನ್ನು ಅವಲಂಬಿಸಬೇಕಾದ ಅನಿವಾರ್ಯತೆ ಇರುವುದಿಲ್ಲ. ಏನಿದು ಏನಿವೇರ್‌ ರಿಜಿಸ್ಟ್ರೇಷನ್? ಯಾವುದೇ ವ್ಯಕ್ತಿಯು ನೋಂದಣಿ ದಸ್ತಾವೇಜನ್ನು…

Read More

ಬೆಳಗಾವಿ : ನನ್ನ ವ್ಯಕ್ತಿತ್ವದಲ್ಲಿ 40 ವರ್ಷದಿಂದ ಇಲ್ಲದ ಕಪ್ಪುಚುಕ್ಕೆಯನ್ನು ಬಿಜೆಪಿ-ಜೆಡಿಎಸ್ ಈಗ ಹುಡುಕುತ್ತಿವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.   ಗೋಕಾಕ ತಾಲೂಕಿನ ಕಲ್ಲೋಳಿ ಗ್ರಾಮದಲ್ಲಿ ಸಂಗೊಳ್ಳಿ ರಾಯಣ್ಣ ಪ್ರತಿಮೆಯನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ನನ್ನ ವ್ಯಕ್ತಿತ್ವದಲ್ಲಿ 40 ವರ್ಷದಿಂದ ಇಲ್ಲದ ಕಪ್ಪುಚುಕ್ಕೆಯನ್ನು ಬಿಜೆಪಿ-ಜೆಡಿಎಸ್ ಈಗ ಹುಡುಕುತ್ತಿವೆ.  ನಾನು ಮಂತ್ರಿಯಾಗಿ 40 ವರ್ಷ ಆಯ್ತು. ಇಷ್ಟು ವರ್ಷ ಮಾಡದ ತಪ್ಪನ್ನು ಈಗ ಮಾಡ್ತೀನಾ? ನಾನು ಮಾಡದಿರುವ ತಪ್ಪನ್ನು ಷಡ್ಯಂತ್ರದಿಂದ ನನ್ನ ತಲೆಗೆ ಕಟ್ಟುವ ಪ್ರಯತ್ನ ಮಾಡ್ತಿದ್ದಾರೆ. ನಾವು-ನೀವು ಒಟ್ಟಾಗಿ ಈ ಷಡ್ಯಂತ್ರ ಸೋಲಿಸೋಣ. ಎಲ್ಲರೂ ಒಟ್ಟಾಗಿರಿ. 7 ಕೋಟಿ ಜನರ ಆಶೀರ್ವಾದ ನನ್ನ ಮೇಲೆ ಇರುವವರೆಗೂ ನನ್ನನ್ನು ಅಧಿಕಾರದಿಂದ ಇಳಿಸಲು ಸಾಧ್ಯವಿಲ್ಲ ಎಂದಿದ್ದಾರೆ. ಹಿಂದುಳಿದ ಸಮುದಾಯದಿಂದ ಬಂದು ಎರಡು ಬಾರಿ ಸಿಎಂ ಆದೆ ಎಂದು ಬಿಜೆಪಿ-ಜೆಡಿಎಸ್ ಗೆ ಸಹಿಸಲು ಆಗುತ್ತಿಲ್ಲ. ಆದ್ದರಿಂದ ನಮ್ಮ ಸರ್ಕಾರವನ್ನು ಅಸ್ಥಿರಗೊಳಿಸಲು ಯತ್ನಿಸುತ್ತಿದ್ದಾರೆ. ಇದಕ್ಕೆ ನಾವು ಅವಕಾಶ ಕೊಡಬಾರದು. ನಮ್ಮ ಸರ್ಕಾರ ಇರುವವರೆಗೂ ಬಡವರ, ಮಧ್ಯಮ…

Read More

ಬೆಂಗಳೂರು : ಗೃಹಲಕ್ಷ್ಮೀ ಯೋಜನೆಯ ಹಣ ಕೂಡಿಟ್ಟು ಊರಿಗೆಲ್ಲ ಹೋಳಿಗೆ ಊಟ ಹಾಕಿಸಿದ ರಾಯಬಾಗ ತಾಲೂಕಿನ ಸುಟ್ಟಟ್ಟಿಯ ಅಕ್ಕಾತಾಯಿ ಲಂಗೂಟಿ ಅವರನ್ನು ಸಿಎಂ ಸಿದ್ದರಾಮಯ್ಯ ಸನ್ಮಾನಿಸಿದ್ದಾರೆ. ಬೆಳಗಾವಿ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ, ಗೃಹಲಕ್ಷ್ಮೀ ಯೋಜನೆಯ ಹಣ ಕೂಡಿಟ್ಟು ಊರಿಗೆಲ್ಲ ಹೋಳಿಗೆ ಊಟ ಹಾಕಿಸಿದ ರಾಯಬಾಗ ತಾಲೂಕಿನ ಸುಟ್ಟಟ್ಟಿಯ ಅಕ್ಕಾತಾಯಿ ಲಂಗೂಟಿ ಅವರನ್ನು ಸಿಎಂ ಸಿದ್ದರಾಮಯ್ಯ ಸನ್ಮಾನಿಸಿದ್ದಾರೆ. ಇದೇ ವೇಳೆ ಅಜ್ಜಿಯ ಹೋಳಿಗೆ ಊಟಕ್ಕೆ ಸಾತ್ ನೀಡಿದ್ದ ಇನ್ನೂ 6-7 ಮಹಿಳೆಯರಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಪರವಾಗಿ ಸೀರೆ ನೀಡಿ ಗೌರವಿಸಲಾಯಿತು. ಈ ವೇಳೆ ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶಣ್ಣ ಜಾರಕಿಹೊಳಿ ಹಾಗೂ ಜಿಲ್ಲೆಯ ಶಾಸಕರು ಇದ್ದರು.

Read More

ಬೆಂಗಳೂರು : ಕೇಂದ್ರ ಸರ್ಕಾರದ ಅಧೀನದಲ್ಲಿರುವ ಎನ್‌ಸಿಆರ್‌ಬಿಯ 2021ರ ವರದಿ ಪ್ರಕಾರ ದೇಶದಲ್ಲಿ ಪ್ರತಿದಿನ 86 ಮಹಿಳೆಯರ ಮೇಲೆ ಅತ್ಯಾಚಾರ ನಡೆಯುತ್ತಿದೆ, ಪ್ರತಿ ಗಂಟೆಗೆ 49 ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಯುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ, ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಮಹಿಳೆಯರಿಗೆ ರಕ್ಷಣೆ ಇಲ್ಲದಂತಾಗಿದೆ’’ ಎಂದು ಗೋಳಾಡುತ್ತಿರುವ ರಾಜ್ಯದ ಬಿಜೆಪಿ ನಾಯಕರೇ, ಮಹಿಳಾ ಭಕ್ಷಣೆ ಮತ್ತು ಮಹಿಳಾ ಭಕ್ಷಕರಿಗೆ ರಕ್ಷಣೆ ಕೊಡುವುದನ್ನು ನೀವು ನಿಲ್ಲಿಸಿದರೆ ರಾಜ್ಯದಲ್ಲಿ ಮಹಿಳೆಯರು ಮಾತ್ರವಲ್ಲ ಬಾಲಕಿಯರೂ ಸುರಕ್ಷಿತರಾಗಿರುತ್ತಾರೆ. ರಾಜ್ಯವೂ ಮಹಿಳೆಯರ ಪಾಲಿಗೆ ಸುರಕ್ಷಿತವಾಗಿರುತ್ತದೆ. ರಾಜ್ಯದಲ್ಲಿರುವ ನಿಮ್ಮ ಪಕ್ಷದ ಒಬ್ಬ ಸರ್ವೊಚ್ಚ ನಾಯಕರು ಪೋಕ್ಸೊ ಕಾಯ್ದೆಯಡಿ ಜೈಲಿಗೆ ಹೋಗುವ ದಾರಿಯಲ್ಲಿದ್ದಾರೆ. ನಿಮ್ಮ ಮಿತ್ರಪಕ್ಷವಾದ ಜೆಡಿ(ಎಸ್) ನ ಮಾಜಿ ಸಂಸದ ನೂರಾರು ಮಹಿಳೆಯರ ಮೇಲಿನ ಅತ್ಯಾಚಾರದ ಪ್ರಕರಣದಲ್ಲಿ ಜೈಲಿನಲ್ಲಿದ್ದಾನೆ, ಶಾಸಕರಾಗಿರುವ ಅವನ ತಂದೆ ಮೇಲೆ ಆರೋಪ ಪಟ್ಟಿ ಸಲ್ಲಿಕೆಯಾಗಿದೆ, ಅದೇ ಕುಟುಂಬದ ಇನ್ನೊಬ್ಬ ಶಾಸಕ ಲೈಂಗಿಕ…

Read More

ಬೆಂಗಳೂರು : ಮಳೆಗಾಲ ಬಂತೆಂದರೆ ರೋಗಗಳು ಉಲ್ಬಣಗೊಳ್ಳುತ್ತವೆ. ಅದಕ್ಕಿಂತ ಮುಖ್ಯವಾಗಿ ವೈರಲ್ ಜ್ವರಗಳು ಹೆಚ್ಚಾಗುತ್ತವೆ. ಪ್ರಸ್ತುತ, ಈ ಪ್ರಕರಣಗಳಲ್ಲಿ ಹೆಚ್ಚಿನ ಪ್ರಕರಣಗಳು ನಗರದ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ಕಂಡುಬರುತ್ತವೆ. ವೈರಲ್ ಜ್ವರ ಬಾಧಿಸಿದರೆ ಸರಿಯಾದ ಸಮಯಕ್ಕೆ ಸ್ಪಂದಿಸಿ ತಕ್ಷಣ ಚಿಕಿತ್ಸೆ ಪಡೆಯದಿದ್ದರೆ ಪ್ರಾಣ ಕಳೆದುಕೊಳ್ಳಬೇಕಾಗುತ್ತದೆ. ರಾಜ್ಯದಲ್ಲಿ ವೈರಲ್ ಜ್ವರ ಹೆಚ್ಚಾಗುತ್ತಿರುವ ಈ ಹೊತ್ತಿನಲ್ಲಿ.. ಅಸಲಿಗೆ ಏಕೆ ಬರುತ್ತದೆ.. ಲಕ್ಷಣಗಳೇನು.. ಎಷ್ಟು ದಿನ ಇರುತ್ತದೆ.. ಚಿಕಿತ್ಸಾ ವಿಧಾನ ಏನು.. ಯಾವ್ಯಾವ ಔಷಧಗಳನ್ನು ಬಳಸಬೇಕು.. ಕಂಪ್ಲೀಟ್ ಮಾಹಿತಿ ನಿಮಗಾಗಿ. ವೈರಲ್ ಜ್ವರ ಎಂದರೇನು? ವೈರಲ್ ಜ್ವರವು ವಿವಿಧ ರೀತಿಯ ವೈರಲ್ ಸೋಂಕಿನಿಂದ ಉಂಟಾಗುವ ಜ್ವರಕ್ಕೆ ಬಳಸುವ ಪದವಾಗಿದೆ. ಸಾಮಾನ್ಯ ಮಾನವ ದೇಹದ ಉಷ್ಣತೆಯು ಸುಮಾರು 98.4 ° F ಅಥವಾ 37.1 ° C ಆಗಿದೆ. ಈ ಸರಾಸರಿ ಮೌಲ್ಯಕ್ಕಿಂತ ಹೆಚ್ಚಿನ ತಾಪಮಾನವನ್ನು ಜ್ವರ ಎಂದು ಪರಿಗಣಿಸಲಾಗುತ್ತದೆ. ಆದಾಗ್ಯೂ, ವೈರಲ್ ಜ್ವರವು ಕಡಿಮೆ ತಾಪಮಾನವನ್ನು ಉಂಟುಮಾಡಬಹುದು ಅಂದರೆ ಕೆಲವು ಸೋಂಕುಗಳಲ್ಲಿ 100 ಡಿಗ್ರಿಗಿಂತ…

Read More