Subscribe to Updates
Get the latest creative news from FooBar about art, design and business.
Author: kannadanewsnow57
ಬೆಂಗಳೂರು: ಬೆಂಗಳೂರು ನಗರ ಜಿಲ್ಲೆಯಲ್ಲಿ ತಾಯಿ ಮತ್ತು ಮಕ್ಕಳ ಆರೋಗ್ಯ ಸೇವೆಯನ್ನು ನೀಡುವ ಉದ್ದೇಶದಿಂದ ಆರೋಗ್ಯ ಇಲಾಖೆಯು, ತಾಯಂದಿರು ಹಾಗೂ ಮಕ್ಕಳು ತೆಗೆದುಕೊಳ್ಳಬೇಕಾದ ಲಸಿಕೆ, ಆರೋಗ್ಯ ಕ್ರಮಗಳ ಬಗ್ಗೆ ಕರೆ ಮಾಡಿ ಮಾಹಿತಿ ನೀಡುವ “ಕಿಲ್ಕಾರಿ ಎಂಬ ಉಚಿತ ಮೊಬೈಲ್” ಆರೋಗ್ಯ ಸೇವೆಯನ್ನು ಜಾರಿಗೆ ತಂದಿದೆ. ಜಿಲ್ಲೆಯಲ್ಲಿ ಅಂದಾಜು 29,000 ಗರ್ಭಿಣಿಯರು ಹಾಗೂ ಅಂದಾಜು 26,500 ಮಕ್ಕಳಿಗೆ ಇದರಿಂದ ಅನುಕೂಲವಾಗಲಿದೆ. ಪ್ರತಿ ವರ್ಷ ಬೆಂಗಳೂರು ನಗರ ಜಿಲ್ಲೆಯಲ್ಲಿ 29 ರಿಂದ 30 ಸಾವಿರ ಗರ್ಭಿಣಿಯರು ದಾಖಲಾಗುತ್ತಾರೆ. ಈ ವೇಳೆ ನಾನಾ ಕಾರಣಗಳಿಗೆ ತಾಯಿ ಮತ್ತು ನವಜಾತ ಶಿಶುಗಳ ಮರಣ ಸಂಭವಿಸುವ ಸಾಧ್ಯತೆಯಿರುತ್ತದೆ. ಅದನ್ನು ತಪ್ಪಿಸಲು ಕೇಂದ್ರ ಸರ್ಕಾರ ಕಿಲ್ಕಾರಿ ಎಂಬ ಉಚಿತ ಮೊಬೈಲ್ ಆರೋಗ್ಯ ಸೇವೆಯನ್ನು ಜಾರಿಗೆ ತಂದಿದೆ. ಈ ಮೂಲಕ ಗರ್ಭದಾರಣೆ, ಗರ್ಭಿಣಿ ತಾಯಿ ಮತ್ತು ಮಗುವಿನ ಆರೋಗ್ಯದ ಮಾಹಿತಿಯನ್ನು ನೇರವಾಗಿ ಕುಟುಂಬಗಳ ಮೊಬೈಲ್ ಪೋನ್ಗೆ 01244451660 ಕಿಲ್ಕಾರಿ ಮೊಬೈಲ್ ಸಂಖ್ಯೆಯ ಮೂಲಕ ಮಾಹಿತಿಯನ್ನು ತಲುಪಿಸಲಾಗುತ್ತದೆ. ಈ ಕರೆಯನ್ನು ಸ್ವೀಕರಿಸಲು…
ಶಿಗ್ಗಾಂವಿ : ಪ್ರಸಕ್ತ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಶಿಗ್ಗಾಂವಿ ವಿಧಾನಸಭಾ ಕ್ಷೇತ್ರದ ಸರ್ಕಾರಿ ಅಥವಾ ಖಾಸಗಿ ಶಾಲೆ ವಿದ್ಯಾರ್ಥಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದರೆ 100 ಗ್ರಾಂ ಚಿನ್ನದ ಪದಕ ನೀಡುವುದಾಗಿ ಶಿಕ್ಷಣಪ್ರೇಮಿ, ಹಂಪಿ ವಿಶ್ವ ವಿದ್ಯಾಲಯದ ಸಿಂಡಿಕೇಟ್ ಮಾಜಿ ಸದಸ್ಯ ಡಾ| ಫಕೀರ ಗೌಡ್ರ ಪಾಟೀಲ ಘೋಷಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಿಗ್ಗಾಂವಿ ವಿಧಾನಸಭಾ ಕ್ಷೇತ್ರದ ಸರ್ಕಾರಿ ಅಥವಾ ಖಾಸಗಿ ಶಾಲೆ ವಿದ್ಯಾರ್ಥಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದರೆ 100 ಗ್ರಾಂ ಚಿನ್ನದ ಪದಕ, ಜಿಲ್ಲೆಗೆ ಪ್ರಥಮ ಸ್ಥಾನ ಗಳಿಸಿದ ಕ್ಷೇತ್ರದ ವಿದ್ಯಾರ್ಥಿಗೆ 15 ಗ್ರಾಂ ಚಿನ್ನದ ಪದಕ ಹಾಗೂ ವಿಧಾನಸಭಾ ಕ್ಷೇತ್ರಕ್ಕೆ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿಗೆ 20 ಗ್ರಾಂ ಬೆಳ್ಳಿ ಪದಕ ನೀಡಲಾಗುತ್ತದೆ. ವಿದ್ಯಾರ್ಥಿ ಶಿಗ್ಗಾಂವಿ ವಿಧಾನಸಭಾ ಕ್ಷೇತ್ರದಲ್ಲಿ8, 9ನೇ ತರಗತಿ ಓದಿರಬೇಕು. ಶಿಗ್ಗಾಂವಿ ಕ್ಷೇತ್ರದ ವಿದ್ಯಾರ್ಥಿಗಳು ಜಿಲ್ಲೆ ಮತ್ತು ರಾಜ್ಯ ಮಟ್ಟಕ್ಕೆ ಹೆಚ್ಚು ಅಂಕಗಳಿಸಲಿ ಎಂಬ ಸದುದ್ದೇಶದಿಂದ ಈ ಬಹುಮಾನ ನೀಡುವುದಾಗಿ ಹೇಳಿದ್ದಾರೆ.
ಚಿತ್ರದುರ್ಗ : ರಾಜ್ಯದಲ್ಲಿ ಮತ್ತೊಂದು ಹೇಯ ಕೃತ್ಯವೊಂದು ಬೆಳಕಿಗೆ ಬಂದಿದ್ದು, ಐಸ್ ಕ್ರೀಂ ಆಸೆ ತೋರಿಸಿ 9 ವರ್ಷದ ಬಾಲಕಿ ಮೇಲೆ ವೃದ್ದನೊಬ್ಬ ಅತ್ಯಾಚಾರ ಎಸಗಿರುವ ಘಟನೆ ನಡೆದಿದೆ. ಚಿತ್ರದುರ್ಗದ ಅಗಸನಹಳ್ಳಿ ಬಡಾವಣೆಯಲ್ಲಿ ಈ ಘಟನೆ ನಡೆದಿದ್ದು, ಮನೆ ಬಳಿ ಆಟವಾಡುತ್ತಿದ್ದ 9 ವರ್ಷದ ಬಾಲಕಿಗೆ ವೃದ್ಧನೊಬ್ಬ ಐಸ್‌ಕ್ರೀಂ ಕೊಡಿಸುತ್ತೇನೆಂದು ಹೇಳಿ ಗುಡ್ಡಕ್ಕೆ ಕರೆದೊಯ್ದು ಅತ್ಯಾಚಾರವೆಸಗಿರುವ ಅಮಾನವೀಯ ಘಟನೆ ಬೆಳಕಿಗೆ ಬಂದಿದೆ. ಅಗಸನಹಳ್ಳಿ ಬಡಾವಣೆಯ ಸಾಧಿಕ್ (56) ಬಾಲಕಿ ಮೇಲೆ ಅತ್ಯಚಾರ ಎಸಗಿದ ಆರೋಪಿಯಾಗಿದ್ದು, ಸದ್ಯ ಆರೋಪಿಯನ್ನು ಬಂಧಿಸಲಾಗಿದೆ. ಬಾಲಕಿ 3ನೇ ತರಗತಿಯಲ್ಲಿ ಓದುತ್ತಿದ್ದಳು. ಸಂತ್ರಸ್ತ ಬಾಲಕಿಯನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆ ಸಂಬಂಧ ಆರೋಪಿಯನ್ನು ಪೋಕ್ಸ ಕಾಯ್ದೆಯಡಿ ಬಂಧಿಸಲಾಗಿದೆ.
ಬೆಂಗಳೂರು : ರಾಜ್ಯಾದ್ಯಂತ ಯಾವುದೇ ವಾಣಿಜ್ಯ, ವಸತಿ ಕಟ್ಟಡಗಳು ಸ್ವಾಧೀನಾನುಭವ ಪತ್ರ (OC) ಹೊಂದಿಲ್ಲದಿದ್ದರೆ ವಿದ್ಯುತ್ ಸಂಪರ್ಕ ನೀಡಬಾರದು ಎಂದು ಬೆಸ್ಕಾಂ ಸೇರಿ ಎಲ್ಲಾ ಎಸ್ಕಾಂಗಳಿಗೂ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ (KERC) ಸೂಚನೆ ನೀಡಿದೆ. ಸುಪ್ರೀಂ ಕೋರ್ಟ್ ನ ಆದೇಶದಲ್ಲಿ ಅನಧಿಕೃತವಾಗಿ ಕಟ್ಟಡ ಹಾಗೂ ನಕ್ಷೆ ಉಲ್ಲಂಘಿಸಿ ನಿರ್ಮಾಣವಾಗುತ್ತಿರುವ ಕಟ್ಟಡಗಳ ಮೇಲೆ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ತಿಳಿಸಿದ್ದು. ಅದರಂತೆ ಬೆಂಗಳೂರಿನ ಬೆಸ್ಕಾಂ, ಮಂಗಳೂರು, ಹುಬ್ಬಳ್ಳಿ, ಚಾಮುಂಡೇಶ್ವರಿ (ಮೈಸೂರು), ಕಲಬುರಗಿ, ಹುಕ್ಕೇರಿ ಗ್ರಾಮೀಣ ವಿದ್ಯುತ್ ಸರಬರಾಜು ಸಹಕಾರ ಸೊಸೈಟಿ ಸೇರಿ ಆರೂ ಎಸ್ಕಾಂಗಳು ಒಸಿ ಪ್ರಮಾಣಪತ್ರ ಇಲ್ಲದಿದ್ದರೆ ವಿದ್ಯುತ್ ಸಂಪರ್ಕ ನೀಡಬಾರದು ಎಂದು ತಿಳಿಸಿದೆ. 2022ರಲ್ಲಿ ನಗರಾಭಿವೃದ್ಧಿ ಇಲಾಖೆ ಈ ನಿಯಮ ಸಡಿಲಿಸಿ ವಿದ್ಯುತ್ ಸಂಪರ್ಕ ಪಡೆಯಲು ಇನ್ನು ಮುಂದೆ ಗುರುತಿನ ಚೀಟಿ ಹಾಗೂ ಸ್ವತ್ತಿನ ದಾಖಲೆ ಇದ್ದರೆ ಸಾಕು ಎಂದು ಮಾಡಿತ್ತು. ಇದೀಗ ಸುಪ್ರೀಂ ಕೋರ್ಟ್ ನಕ್ಷೆ ಮಂಜೂರಾತಿ ಉಲ್ಲಂಘಿಸಿ ಅಕ್ರಮವಾಗಿ ಕಟ್ಟಡಗಳನ್ನು ನಿರ್ಮಿಸುತ್ತಿರುವ ಬಗ್ಗೆ ಹಾಗೂ ಕಾನೂನು ಬಾಹಿರವಾಗಿ…
ಬೆಂಗಳೂರು: ಇ-ಖಾತಾ ನಿರೀಕ್ಷೆಯಲ್ಲಿದ್ದವರಿಗೆ ರಾಜ್ಯ ಸರ್ಕಾರದಿಂದ ಸಿಹಿಸುದ್ದಿಯೊಂದು ಹೊರಬಿದ್ದಿದೆ. ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ವಿಧೇಯಕಕ್ಕೆ ಅನುಮೋದನೆ ನೀಡಲಾಗಿದ್ದು, ಸದನದಲ್ಲಿ ವಿಧೇಯಕಕ್ಕೆ ಅಂಗೀಕಾರ ದೊರೆತಿದ್ದೇ ಆದರೇ ಗ್ರಾಮೀಣ ಭಾಗದ ಇ-ಖಾತಾ ಸಮಸ್ಯೆಯೇ ತೀರಲಿದೆ. ಶುಕ್ರವಾರದಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದಲ್ಲಿ ಮಹತ್ವದ ರಾಜ್ಯ ಸಚಿವ ಸಂಪುಟ ಸಭೆ ನಡೆಯಿತು. ಈ ಸಂಪುಟ ಸಭೆಯಲ್ಲಿ ಇ-ಖಾತಾ ಸಮಸ್ಯೆ ಸರಿ ಪಡಿಸೋ ಸಂಬಂಧ ತಿದ್ದುಪಡಿ ವಿಧೇಯಕ ಕುರಿತಂತೆ ಚರ್ಚೆ ನಡೆಸಲಾಯಿತು. ಅಂತಿಮವಾಗಿ ರಾಜ್ಯ ಸಚಿವ ಸಂಪುಟ ಸಭೆಯು ವಿಧೇಯಕಕ್ಕೆ ಅಂಗೀಕಾರ ನೀಡಿದೆ. ಶುಕ್ರವಾರದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆಗೊಂಡಿರುವಂತ ಇ-ಖಾತಾ ಸಮಸ್ಯೆ ಸರಿ ಪಡಿಸುವಂತ ತಿದ್ದುಪಡಿ ವಿಧೇಯಕವನ್ನು ರಾಜ್ಯದ ಉಭಯ ಸದನಗಳಲ್ಲಿ ಈ ಬಾರಿಯೇ ಮಂಡನೆ ಮಾಡೋ ಸಾಧ್ಯತೆ ಇದೆ. ಇದಕ್ಕೆ ವಿಧಾನಸಭೆ, ವಿಧಾನ ಪರಿಷತ್ತಿನಲ್ಲಿ ಅಂಗೀಕಾರ ದೊರೆತರೇ ಗ್ರಾಮೀಣ ಭಾಗದ ಇ-ಖಾತಾ ಸಮಸ್ಯೆ ಕ್ಲಿಯರ್ ಆಗಲಿದೆ. ಗ್ರಾಮೀಣ ಭಾಗದ ಕಂದಾಯ ಭೂಮಿಯಲ್ಲಿನ ನಿವೇಶ, ಮನೆ ಸಕ್ರಮಕ್ಕೆ ಅವಕಾಶ ಸಿಗಲಿದೆ. ಆ ನಂತ್ರ ಇ-ಖಾತಾವೂ…
ನವದೆಹಲಿ : ಮಾರ್ಚ್ 24 ಮತ್ತು 25 ರಂದು ಎರಡು ದಿನಗಳ ರಾಷ್ಟ್ರವ್ಯಾಪಿ ಮುಷ್ಕರ ನಡೆಸಲು ನಿರ್ಧರಿಸಲಾಗಿದ್ದು, ಪೂರ್ವ ನಿಗದಿತ ವೇಳಾಪಟ್ಟಿಯಂತೆಯೇ ಮುಷ್ಕರ ನಡೆಯಲಿದೆ ಎಂದು ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ತಿಳಿಸಿದೆ. ಉದ್ಯೋಗಿ ಸಂಘಟನೆಯ ಪ್ರಮುಖ ಬೇಡಿಕೆಗಳ ಕುರಿತು ಭಾರತೀಯ ಬ್ಯಾಂಕುಗಳ ಸಂಘ (ಐಬಿಐ) ಜೊತೆ ನಡೆದ ಮಾತುಕತೆಯಲ್ಲಿ ಯಾವುದೇ ಸಕಾರಾತ್ಮಕ ಫಲಿತಾಂಶವನ್ನು ಸಾಧಿಸಲಾಗಿಲ್ಲ ಎಂದು ಯುಎಫ್‌ಬಿಯು ತಿಳಿಸಿದೆ. ಐಬಿಎ ಜೊತೆಗಿನ ಸಭೆಯಲ್ಲಿ, ಯುಎಫ್‌ಬಿಯು ಸದಸ್ಯರು ಎಲ್ಲಾ ಕೇಡರ್‌ಗಳಲ್ಲಿ ನೇಮಕಾತಿ ಮತ್ತು ಐದು ದಿನಗಳ ಕೆಲಸದ ವಾರ ಸೇರಿದಂತೆ ಹಲವಾರು ಸಮಸ್ಯೆಗಳನ್ನು ಎತ್ತಿದರು. ಸಭೆಯ ಹೊರತಾಗಿಯೂ ಪ್ರಮುಖ ಸಮಸ್ಯೆಗಳು ಬಗೆಹರಿಯದೆ ಉಳಿದಿವೆ ಎಂದು ರಾಷ್ಟ್ರೀಯ ಬ್ಯಾಂಕ್ ನೌಕರರ ಒಕ್ಕೂಟದ (ಎನ್‌ಸಿಬಿಇ) ಪ್ರಧಾನ ಕಾರ್ಯದರ್ಶಿ ಎಲ್ ಚಂದ್ರಶೇಖರ್ ಹೇಳಿದ್ದಾರೆ. ಉದ್ಯೋಗ ಭದ್ರತೆಗೆ ಬೆದರಿಕೆ ಹಾಕುವ ಮತ್ತು ಉದ್ಯೋಗಿಗಳಲ್ಲಿ ವಿಭಜನೆಯನ್ನು ಸೃಷ್ಟಿಸುವ ಕಾರ್ಯಕ್ಷಮತೆ ಪರಿಶೀಲನೆ ಮತ್ತು ಕಾರ್ಯಕ್ಷಮತೆ-ಸಂಬಂಧಿತ ಪ್ರೋತ್ಸಾಹಕಗಳ ಕುರಿತು ಹಣಕಾಸು ಸೇವೆಗಳ ಇಲಾಖೆ (DFS) ಇತ್ತೀಚೆಗೆ ಹೊರಡಿಸಿರುವ ನಿರ್ದೇಶನಗಳನ್ನು…
ಕೆನಡಾ: ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅಧಿಕಾರಕ್ಕೆ ಮರಳಿದ ನಂತರ ಅಮೆರಿಕದ ಸಂಬಂಧಗಳಲ್ಲಿನ ಕುಸಿತದಿಂದ ನಲುಗಿಹೋಗಿದ್ದ ದೇಶದ ಉಸ್ತುವಾರಿಯನ್ನು ಮಾರ್ಕ್ ಕಾರ್ನಿ ಶುಕ್ರವಾರ ಕೆನಡಾದ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. 2015 ರಿಂದ ಕೆನಡಾವನ್ನು ಮುನ್ನಡೆಸುತ್ತಿದ್ದ ಜಸ್ಟಿನ್ ಟ್ರುಡೊ ಅವರ ಬದಲಿಗೆ ಕಾರ್ನಿ ಒಟ್ಟಾವಾದಲ್ಲಿ ನಡೆದ ಸಮಾರಂಭದಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ಕೆನಡಾದ ಆಡಳಿತಾರೂಢ ಲಿಬರಲ್ ಪಕ್ಷದ ನಾಯಕರಾಗಿ ಆಯ್ಕೆಯಾದ ಕೆಲವೇ ದಿನಗಳ ನಂತರ ಅರ್ಥಶಾಸ್ತ್ರಜ್ಞ ಮತ್ತು ರಾಜಕೀಯ ಹೊಸಬ ಮಾರ್ಕ್ ಕಾರ್ನೆ ಶುಕ್ರವಾರ ಕೆನಡಾದ ಹೊಸ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ದೇಶದ ಕೇಂದ್ರ ಬ್ಯಾಂಕ್ ಬ್ಯಾಂಕ್ ಆಫ್ ಕೆನಡಾ ಮತ್ತು ಬ್ಯಾಂಕ್ ಆಫ್ ಇಂಗ್ಲೆಂಡ್ನ ಗವರ್ನರ್ ಆಗಿ ಕಾರ್ನೆ ಈ ಹಿಂದೆ ಎರಡೂ ದೇಶಗಳಿಗೆ ಪ್ರಮುಖ ಆರ್ಥಿಕ ಅಡಚಣೆಯನ್ನು ಎದುರಿಸಲು ಸಹಾಯ ಮಾಡಿದ್ದರು. ಯುಎಸ್ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗೆ ನಡೆಯುತ್ತಿರುವ ವ್ಯಾಪಾರ ಯುದ್ಧದ ಬಗ್ಗೆ ಕಾರ್ನೆ ಮಾತುಕತೆ ನಡೆಸುತ್ತಿರುವಾಗ ಆ ಅನುಭವವು ಉಪಯುಕ್ತವಾಗುವ ನಿರೀಕ್ಷೆಯಿದೆ. ಕಳೆದ ವಾರ ನಡೆದ…
ಬೆಂಗಳೂರು : ರಾಷ್ಟ್ರಲಾಂಛನವನ್ನು “ಸತ್ಯಮೇವ ಜಯತೆ” ಧೈಯವಾಕ್ಯದೊಂದಿಗೆ ಸಂಪೂರ್ಣವಾಗಿ ಪ್ರದರ್ಶಿಸುವ ಕುರಿತು ರಾಜ್ಯ ಸರ್ಕಾರವು ಮಹತ್ವದ ಆದೇಶ ಹೊರಡಿಸಿದೆ. ಭಾರತದ ರಾಷ್ಟ್ರಲಾಂಛನವನ್ನು ಅಧಿಕೃತ ಉದ್ದೇಶಗಳಿಗೆ ಬಳಸಲು ಅಧಿಕಾರ ಹೊಂದಿರುವ ಕೆಲವು ಸರ್ಕಾರಿ ಏಜೆನ್ಸಿಗಳು ರಾಷ್ಟ್ರ ಲಾಂಛನದ ಸಿಂಹ ಮುಕುಟದ ಚಿತ್ರದ ಕೆಳಗೆ ದೇವನಾಗರಿ ಲಿಪಿಯಲ್ಲಿ ಬರೆದಿರುವ ಸತ್ಯಮೇವ ಜಯತೆ’ ಧೈಯ ವಾಕ್ಯವನ್ನು ಬಳಸದಿರುವುದು ಕಂಡುಬಂದಿರುತ್ತದೆ. ಇದು ರಾಷ್ಟ್ರಲಾಂಛನದ ಅಪೂರ್ಣ ಪ್ರದರ್ಶನವಾಗಿದ್ದು, ಭಾರತದ ರಾಷ್ಟ್ರಲಾಂಛನ (ಅನುಚಿತ ಬಳಕೆ ನಿಷೇಧ) ಅಧಿನಿಯಮ, 2005 ಮತ್ತು ಭಾರತದ ರಾಷ್ಟ್ರ ಲಾಂಛನ (ಬಳಕೆಯ ನಿಯಂತ್ರಣ) ನಿಯಮಗಳು, 2007ರ ಉಲ್ಲಂಘನೆಯಾಗುತ್ತದೆಯೆಂದು ಉಲ್ಲೇಖಿತ ಪತ್ರದಲ್ಲಿ ತಿಳಿಸಲಾಗಿದೆ. ಆದ್ದರಿಂದ, “ಸತ್ಯಮೇವ ಜಯತೆ” ಧೈಯವಾಕ್ಯವನ್ನು ಹೊಂದಿರುವ ರಾಷ್ಟ್ರಲಾಂಛನದ ಪೂರ್ಣ ಚಿತ್ರವನ್ನು ಬಳಸಬೇಕೆಂದು ಈ ಮೂಲಕ ಮತ್ತೊಮ್ಮೆ ತಿಳಿಸಲಾಗಿದೆ. ಮುಂದುವರೆದು, ಹಲವು ಕಡೆಗಳಲ್ಲಿ ಅನಧಿಕೃತ ವ್ಯಕ್ತಿಗಳು / ಸಂಸ್ಥೆಗಳು ರಾಷ್ಟ್ರಲಾಂಛನವನ್ನು ಮುದ್ರಣ ಸಾಮಗ್ರಿ ಹಾಗೂ ವಾಹನಗಳ ಮೇಲೆ ಬಳಸುತ್ತಿರುವುದು ಕಂಡು ಬಂದಿರುತ್ತದೆ. ಭಾರತದ ರಾಷ್ಟ್ರ ಲಾಂಛನ (ಅನುಚಿತ ಬಳಕೆ ನಿಷೇಧ) ಅಧಿನಿಯಮ, 2005 ಮತ್ತು…
ಬೆಂಗಳೂರು : ರಾಜ್ಯದ ಗ್ರಾಮೀಣ ಆಸ್ತಿ ಮಾಲೀಕರೇ ಗಮನಿಸಿ, 2024-25ನೇ ಸಾಲಿನ ಸಕಾಲದಲ್ಲಿ ತೆರಿಗೆ ಪಾವತಿಸಿ, ದಂಡನೆಯಿಂದ ತಪ್ಪಿಸಿಕೊಳ್ಳಿ. ಇದುವರೆಗೂ ಗ್ರಾಮ ಪಂಚಾಯತಿ ಆಸ್ತಿ ತೆರಿಗೆ ಪಾವತಿಸಿಲ್ಲವೇ, ಮಾರ್ಚ್ 31, 2025 ರೊಳಗೆ ತೆರಿಗೆ ಪಾವತಿಸುವಂತೆ ಸೂಚನೆ ನೀಡಲಾಗಿದೆ. 2024 -25ನೇ ಸಾಲಿನ ಗ್ರಾಮ ಪಂಚಾಯತಿ ತೆರಿಗೆಯನ್ನು 31ನೇ ಮಾರ್ಚ್ 2025 ರೊಳಗೆ ಪಾವತಿಸಿ, ದಂಡದಿಂದ ತಪ್ಪಿಸಿಕೊಳ್ಳಿ. ಮಾರ್ಚ್31ರ ನಂತರದ ಪಾವತಿಗೆ ಶೇ.5ರಷ್ಟು ದಂಡ ಶುಲ್ಕ ತೆರಬೇಕಾಗುತ್ತದೆ. ತೆರಿಗೆ ಪಾವತಿಸಲು ಗ್ರಾಮ ಪಂಚಾಯತಿಗೆ ಭೇಟಿ ನೀಡಿ ಅಥವಾ https://bsk.karnataka.gov.in/ ಅಥವಾ ಯುಪಿಐ ಮುಖಾಂತರ ಪಾವತಿಸುವಂತೆ ಸೂಚನೆ ನೀಡಲಾಗಿದೆ.
ಬೆಂಗಳೂರು : ಗುತ್ತಿಗೆಯಲ್ಲಿ ಮುಸ್ಲೀಮರಿಗೆ ಮೀಸಲಾತಿ ವಿಚಾರ ಬಜೆಟ್ ಘೋಷಣೆಯಂತೆ ವಿಧೇಯಕ ತರಲು ಸಚಿವ ಸಂಪುಟ ಸಭೆಯಲ್ಲಿ ಸಮ್ಮತಿ ಸಿಕ್ಕಿದೆ. ಮುಸ್ಲಿಮರಿಗೆ ಗುತ್ತಿಗೆಯಲ್ಲಿ ಮೀಸಲಾತಿ ನೀಡಲು ಮುಖ್ಯಮಂತ್ರಿ ಸಿದ್ಧರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ. ಈ ಕುರಿತಾಗಿ ವಿಧೇಯಕ ತರಲು ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ. ಇದೇ ಅಧಿವೇಶನದಲ್ಲಿ ಬಿಲ್ ಮಂಡಿಸಲು ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ. ಒಂದು ಕೋಟಿಯವರೆಗಿನ ಕಾಮಗಾರಿಗಳಲ್ಲಿ ಮುಸ್ಲೀಮರಿಗೆ ಮೀಸಲಾತಿ, ಹಿಂದುಳಿದ, ಇತರೇ ಹಿಂದುಳಿದ ವರ್ಗಗಳಿಗೆ ಮಾತ್ರ ಇದ್ದ ಕಾಮಗಾರಿ ಮೀಸಲಾತಿ, ಮುಸ್ಲೀಂ ಸಮುದಾಯಕ್ಕೂ ಮೀಸಲಾತಿ ವಿಸ್ತರಿಸಿ ಗುತ್ತಿಗೆ ನೀಡಲು ಅವಕಾಶ ನೀಡಲಾಗಿದೆ. ಎಸ್.ಸಿ ಎಸ್.ಟಿ ಸಮುದಾಯಕ್ಕೆ ಈ ಹಿಂದೆ ಇದ್ದ 1 ಕೋಟಿಯವರೆಗಿನ ಮೊತ್ತ ವಿಸ್ತರಿಸಿ 2 ಕೋಟಿಯವರೆಗೆ ಮೀಸಲಾತಿ ಅವಕಾಶ ನೀಡಲಾಗಿದೆ. ವಿಧೇಯಕವನ್ನು ಇದೇ ಅಧಿವೇಶನದಲ್ಲಿ ಮಂಡಿಸಲು ಸಂಪುಟ ಅನುಮೋದನೆ ನೀಡಿದೆ.













