Subscribe to Updates
Get the latest creative news from FooBar about art, design and business.
Author: kannadanewsnow57
ಬೆಂಗಳೂರು : ಮಾ.21 ರಿಂದ ಏ.04 ರವರೆಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ವತಿಯಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1 ನಡೆಯಲಿದ್ದು, ಪರೀಕ್ಷಾ ಕೇಂದ್ರಗಳ ಸುತ್ತಲೂ 200 ಮೀಟರ್ ಆವರಣವನ್ನು ಭಾರತೀಯ ನಾಗರಿಕ ಸುರಕ್ಷಾ ಸಂಹಿತಾ 2023 ರ ಕಲಂ 163 ಮೇರೆಗೆ ನಿರ್ಬಂಧಿತ ಪ್ರದೇಶವೆಂದು ಘೋಷಿಸಲಾಗಿದೆ. ವಿದ್ಯಾರ್ಥಿಗಳಿಗೆ ಈ ನಿಯಮಗಳ ಪಾಲನೆ ಕಡ್ಡಾಯ ವಿದ್ಯಾರ್ಥಿಗಳು, ಸರಳ ಕ್ಯಾಲ್ಕುಲೇಟರ್ಗಳನ್ನು ಮಾತ್ರ ಬಳಸಲು ಅವಕಾಶ ಸ್ಟ್ರಾಟಿಸ್ಟಿಕ್ಸ್ ವಿಷಯದಲ್ಲಿ ಮಾತ್ರ ಸೈಂಟಿಫಿಕ್ ಕ್ಯಾಲ್ಕುಲೇಟರ್ ಬಳಸಲು ಅನುಮತಿ ಪರೀಕ್ಷೆಯ ಅಂತಿಮ ಬೆಲ್ ಹೊಡೆಯುವ ಮುನ್ನ ಪರೀಕ್ಷಾ ಕೊಠಡಿಯಿಂದ ಹೊರಡುವ ವಿದ್ಯಾರ್ಥಿಗಳಿಂದ ಉತ್ತರ ಪತ್ರಿಕೆ ಮತ್ತು ಪ್ರಶ್ನೆ ಪತ್ರಿಕೆಗಳನ್ನು ಕಡ್ಡಾಯವಾಗಿ ಪಡೆಯಲಾಗುತ್ತದೆ. ಗುರುತಿನ ಚೀಟಿ ಹಾಗೂ ಹಾಲ್ ಟಿಕೆಟ್ ಕಡ್ಡಾಯ ಮೊಬೈಲ್ ಫೋನ್ , ಎಲೆಕ್ಟ್ರಿಕಲ್ ಉಪಕರಣಗಳ ಬಳಕೆ ನಿಷೇಧ ಪರೀಕ್ಷಾ ಅವಧಿಗಿಂತ ಮುಂಚೆ ಹೊರಕ್ಕೆ ಹೋಗುವ ವಿದ್ಯಾರ್ಥಿಗಳಿಗೆ ಪ್ರಶ್ನೆ ಪತ್ರಿಕೆ ನೀಡಲಾಗುವುದಿಲ್ಲ. ಪರೀಕ್ಷಾ ಕೇಂದ್ರಗಳ ಸುತ್ತಲಿನ 200 ಮೀಟರ್ ವ್ಯಾಪ್ತಿಯಲ್ಲಿ ಯಾವುದೇ ರೀತಿಯ ಎಸ್.ಟಿ.ಡಿ.,…
ಬೆಂಗಳೂರು: ಹವಾಮಾನ ಇಲಾಖೆ ಹಾಗೂ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಜಿಲ್ಲೆಗೆ ಬಿಸಿಗಾಳಿ ಎಚ್ಚರಿಕೆ (ಹೀಟ್ ವೇವ್) ನೀಡಿದೆ. ಹೀಟ್ ವೇವ್ ಸ್ಟ್ರೋಕ್ (ಶಾಖದ ಅಲೆ) ನಿಂದಾಗಿ ಜನರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವ ಸಾಧ್ಯತೆ ಇರುತ್ತದೆ. ಈ ಹಿನ್ನಲೆಯಲ್ಲಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಸಾರ್ವಜನಿಕರ ಹಿತದೃಷ್ಟಿಯಿಂದ ಮನ್ನೆಚ್ಚರಿಕೆ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ. ಹೀಟ್ ವೇವ್ ಸ್ಟ್ರೋಕ್ ತಪ್ಪಿಸಲು ಅನುಸರಿಸಬೇಕಾದ ಕ್ರಮಗಳು: ಸಾರ್ವಜನಿಕರು ಹೀಟ್ ವೇವ್ ಕುರಿತು ಸದಾ ಎಚ್ಚರಿಕೆಯಿಂದ ಇರಬೇಕು. ರೇಡಿಯೋ,ಟಿವಿ,ದಿನ ಪತ್ರಿಕೆಗಳಲ್ಲಿ ಬರುವ ಮುನ್ಸೂಚನೆಗಳನ್ನು ತಿಳಿದುಕೊಂಡು ಅವುಗಳನ್ನು ಪಾಲಿಸಬೇಕು. ಬಾಯಾರಿಕೆಯಿಲ್ಲದಿದ್ದರೂ ಹೆಚ್ಚಾಗಿ ನೀರನ್ನು ಕುಡಿಯುಬೇಕು. ಹಗುರ, ತಿಳಿ-ಬಣ್ಣದ, ಸಡಿಲವಾದ ಮತ್ತು ರಂಧ್ರವುಳ್ಳ ಹತ್ತಿ ಬಟ್ಟೆಗಳನ್ನು ರಕ್ಷಣಾತ್ಮಕ ಕನ್ನಡಕಗಳು, ಛತ್ರಿ,ಟೋಪಿ, ಬೂಟುಗಳು ಅಥವಾ ಚಪ್ಪಲಿಗಳನ್ನು ಧರಿಸಿಬೇಕು. ರಾತ್ರಿ ವೇಳೆ ಬಸ್ಸಿನಲ್ಲಿ ದೂರದ ಪ್ರಯಾಣ ಉತ್ತಮ, ಒಂದು ವೇಳೆ ಹಗಲಿನಲ್ಲಿ ಪ್ರಯಾಣ ಮಾಡುವ ಸಂದರ್ಭ ಬಂದರೆ, ನಿಮ್ಮೊಂದಿಗೆ ನೀರನ್ನು ತೆಗೆದುಕೊಂಡು ಹೋಗಿ ಕುಡಿಯಬೇಕು. ಬಿಸಿನಲ್ಲಿ ಹೊರಗೆ ಕೆಲಸ ಮಾಡುವವರು,…
ಬೆಂಗಳೂರು : ರಾಷ್ಟ್ರಲಾಂಛನವನ್ನು “ಸತ್ಯಮೇವ ಜಯತೆ” ಧೈಯವಾಕ್ಯದೊಂದಿಗೆ ಸಂಪೂರ್ಣವಾಗಿ ಪ್ರದರ್ಶಿಸುವ ಕುರಿತು ರಾಜ್ಯ ಸರ್ಕಾರವು ಮಹತ್ವದ ಆದೇಶ ಹೊರಡಿಸಿದೆ. ಭಾರತದ ರಾಷ್ಟ್ರಲಾಂಛನವನ್ನು ಅಧಿಕೃತ ಉದ್ದೇಶಗಳಿಗೆ ಬಳಸಲು ಅಧಿಕಾರ ಹೊಂದಿರುವ ಕೆಲವು ಸರ್ಕಾರಿ ಏಜೆನ್ಸಿಗಳು ರಾಷ್ಟ್ರ ಲಾಂಛನದ ಸಿಂಹ ಮುಕುಟದ ಚಿತ್ರದ ಕೆಳಗೆ ದೇವನಾಗರಿ ಲಿಪಿಯಲ್ಲಿ ಬರೆದಿರುವ ಸತ್ಯಮೇವ ಜಯತೆ’ ಧೈಯ ವಾಕ್ಯವನ್ನು ಬಳಸದಿರುವುದು ಕಂಡುಬಂದಿರುತ್ತದೆ. ಇದು ರಾಷ್ಟ್ರಲಾಂಛನದ ಅಪೂರ್ಣ ಪ್ರದರ್ಶನವಾಗಿದ್ದು, ಭಾರತದ ರಾಷ್ಟ್ರಲಾಂಛನ (ಅನುಚಿತ ಬಳಕೆ ನಿಷೇಧ) ಅಧಿನಿಯಮ, 2005 ಮತ್ತು ಭಾರತದ ರಾಷ್ಟ್ರ ಲಾಂಛನ (ಬಳಕೆಯ ನಿಯಂತ್ರಣ) ನಿಯಮಗಳು, 2007ರ ಉಲ್ಲಂಘನೆಯಾಗುತ್ತದೆಯೆಂದು ಉಲ್ಲೇಖಿತ ಪತ್ರದಲ್ಲಿ ತಿಳಿಸಲಾಗಿದೆ. ಆದ್ದರಿಂದ, “ಸತ್ಯಮೇವ ಜಯತೆ” ಧೈಯವಾಕ್ಯವನ್ನು ಹೊಂದಿರುವ ರಾಷ್ಟ್ರಲಾಂಛನದ ಪೂರ್ಣ ಚಿತ್ರವನ್ನು ಬಳಸಬೇಕೆಂದು ಈ ಮೂಲಕ ಮತ್ತೊಮ್ಮೆ ತಿಳಿಸಲಾಗಿದೆ. ಮುಂದುವರೆದು, ಹಲವು ಕಡೆಗಳಲ್ಲಿ ಅನಧಿಕೃತ ವ್ಯಕ್ತಿಗಳು / ಸಂಸ್ಥೆಗಳು ರಾಷ್ಟ್ರಲಾಂಛನವನ್ನು ಮುದ್ರಣ ಸಾಮಗ್ರಿ ಹಾಗೂ ವಾಹನಗಳ ಮೇಲೆ ಬಳಸುತ್ತಿರುವುದು ಕಂಡು ಬಂದಿರುತ್ತದೆ. ಭಾರತದ ರಾಷ್ಟ್ರ ಲಾಂಛನ (ಅನುಚಿತ ಬಳಕೆ ನಿಷೇಧ) ಅಧಿನಿಯಮ, 2005 ಮತ್ತು…
ಬೆಂಗಳೂರು : ಈ ವರ್ಷದ ಆರಂಭದಲ್ಲಿ ರಾಜ್ಯದ ಜನತೆಗೆ ಸರ್ಕಾರ ಬಿಗ್ ಶಾಕ್ ನೀಡಿತ್ತು. ಕೆಎಸ್ಆರ್ಟಿಸಿ ಬಸ್ ಪ್ರಯಾಣದ ಟಿಕೆಟ್ ದರ ಹೆಚ್ಚಳ ಮಾಡಿತ್ತು. ಅದಾದ ಬಳಿಕ ಮೆಟ್ರೋ ಪ್ರಯಾಣದ ಟಿಕೆಟ್ ದರ ಕೂಡ ಹೆಚ್ಚಳ ಮಾಡಿ ಜನತೆಯ ಕೆಂಗಣ್ಣಿಗೆ ಸರ್ಕಾರ ಗುರಿಯಾಗಿತ್ತು. ಇದೀಗ ಬೆಂಗಳೂರು ಜನತೆಗೆ ಮತ್ತೊಂದು ಶಾಕ್ ಎದುರಾಗಿದ್ದು, ಶೀಘ್ರದಲ್ಲಿ ಆಟೋ ಪ್ರಯಾಣದ ದರ ಹೆಚ್ಚಳ ಆಗುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ. ನಗರದಲ್ಲಿನ ಆಟೋರಿಕ್ಷಾ ಚಾಲಕರ ಸಂಘಗಳ ಬೇಡಿಕೆಗಳಿಗೆ ಸ್ಪಂದಿಸಿ, ಬೆಂಗಳೂರು ನಗರ ಜಿಲ್ಲಾ ಪ್ರಾದೇಶಿಕ ಸಾರಿಗೆ ಪ್ರಾಧಿಕಾರವು ಬುಧವಾರ ಸಭೆ ಕರೆದು, ಸಂಭಾವ್ಯ ದರ ಪರಿಷ್ಕರಣೆ ಕುರಿತು ಚರ್ಚಿಸಿದೆ. ಸಾರಿಗೆ ಇಲಾಖೆಯ ಮೂಲಗಳ ಪ್ರಕಾರ, ಪ್ರಸ್ತುತ ಕನಿಷ್ಠ ದರ 30 ರೂ.ಗಳಾಗಿದ್ದು, ಎರಡು ಕಿಲೋಮೀಟರ್‌ಗಿಂತ ಹೆಚ್ಚಿನ ದೂರಕ್ಕೆ ಪ್ರತಿ ಕಿಲೋಮೀಟರ್‌ಗೆ 15 ರೂ.ಗಳ ಹೆಚ್ಚುವರಿ ಶುಲ್ಕ ವಿಧಿಸಲಾಗಿದೆ. ಆಟೋರಿಕ್ಷಾ ಚಾಲಕರು ಕನಿಷ್ಠ ದರವನ್ನು 50 ರೂ.ಗಳಿಗೆ ಹೆಚ್ಚಿಸಿ ಎರಡು ಕಿಲೋಮೀಟರ್‌ಗಿಂತ ಹೆಚ್ಚಿನ ದೂರಕ್ಕೆ ಪ್ರತಿ…
ಬೆಂಗಳೂರು : : ಬೆಂಗಳೂರಿನಲ್ಲಿ ಅಂತಾರಾಷ್ಟ್ರೀಯ ಪುಷ್ಪ ಮಾರುಕಟ್ಟೆ ನಿರ್ಮಿಸಲಾಗುವುದು ಎಂದು ಸಚಿವ ಶಿವಾನಂದ್ ಪಾಟೀಲ್ ಹೇಳಿದ್ದಾರೆ. ರಾಜ್ಯದಲ್ಲಿ ಸುಮಾರು 40 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಪುಷ್ಪೋದ್ಯಮವಿದ್ದು, ಮಾರಾಟ ಮತ್ತು ರಫ್ತು ಉತ್ತೇಜಿಸಲು ಬೆಂಗಳೂರಿನಲ್ಲಿ ಸುಸಜ್ಜಿತವಾದ ಅಂತಾರಾಷ್ಟ್ರೀಯ ಮಟ್ಟದ ವಾಣಿಜ್ಯ ಪುಷ್ಪ ಮಾರುಕಟ್ಟೆ ನಿರ್ಮಾಣ ಮಾಡಲಾಗುವುದು ಎಂದು ಕೃಷಿ ಮಾರುಕಟ್ಟೆ ಸಚಿವರಾದ ಶಿವಾನಂದ ಪಾಟೀಲ್ ಅವರು ವಿಧಾನ ಮಂಡಲದ ಬಜೆಟ್ ಅಧಿವೇಶನದಲ್ಲಿ ಪ್ರಶ್ನೋತ್ತರ ಕಲಾಪದ ವೇಳೆ ತಿಳಿಸಿದರು.
ಬೆಂಗಳೂರು : ರಾಜ್ಯ ರಾಜಕೀಯದಲ್ಲಿ ಭಾರೀ ಬೆಳವಣಿಗೆ ನಡೆದಿದ್ದು, ಔತಣಕೂಟದ ನೆಪದಲ್ಲಿ ಕಾಂಗ್ರೆಸ್, ಬಿಜೆಪಿ,ಜೆಡಿಎಸ್ ನ 56 ಕ್ಕೂ ಹೆಚ್ಚು ಶಾಸಕರು ಮಹತ್ವದ ಸಭೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ. ಔತಣಕೂಟದ ನೆಪದಲ್ಲಿ ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಮೂರು ಪಕ್ಷಗಳ 56 ಕ್ಕೂ ಹೆಚ್ಚು ಶಾಸಕರು ಮಹತ್ವದ ಚರ್ಚೆ ನಡೆಸಿದ್ದಾರೆ ಎನ್ನಲಾಗಿದ್ದು, ರಾಜ್ಯ ರಾಜಕೀಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಈ ಸಭೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ಸಚಿವ ಸಂತೋಷ್ ಲಾಡ್ ಸೇರಿದಂತೆ ಹಲವು ಘಟಾನುಘಟಿ ನಾಯಕರು ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಔತಣಕೂಡದಲ್ಲಿ ಭಾಗಿಯಾಗಿದ್ದರು ಎಂದು ತಿಳಿದುಬಂದಿದೆ. ಈ ಸಭೆಯಲ್ಲಿ ಒಕ್ಕಲಿಗ ಹಾಗೂ ಲಿಂಗಾಯತ ಶಾಸಕರೇ ಹೆಚ್ಚು ಇದ್ದರು ಎಂದು ಹೇಳಲಾಗಿದೆ.
ನವದೆಹಲಿ : ಅನಾರೋಗ್ಯದ ಕಾರಣದಿಂದ ದೆಹಲಿ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದ ಉಪರಾಷ್ಟ್ರಪತಿ ಜಗದೀಪ್ ಧನ್ಕರ್ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದ್ದು, ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಉಪರಾಷ್ಟ್ರಪತಿ ಜಗದೀಪ್ ಧಂಕರ್ ಅವರು ಚೇತರಿಸಿಕೊಂಡ ನಂತರ ದೆಹಲಿಯ ಏಮ್ಸ್ ನಿಂದ ಇಂದು ಡಿಸ್ಚಾರ್ಜ್ ಮಾಡಲಾಗಿದೆ ಎಂದು ಪ್ರಧಾನ ಆಸ್ಪತ್ರೆ ತಿಳಿಸಿದೆ. ಹೃದಯ ಸಂಬಂಧಿತ ಕಾಯಿಲೆಗಳಿಂದಾಗಿ ಅವರನ್ನು ಮಾರ್ಚ್ 9 ರಂದು ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ (ಏಮ್ಸ್) ಗೆ ದಾಖಲಿಸಲಾಗಿತ್ತು. ಏಮ್ಸ್ನಲ್ಲಿ ವೈದ್ಯಕೀಯ ತಂಡದಿಂದ ಅಗತ್ಯ ಆರೈಕೆ ಪಡೆದ ನಂತರ, ಅವರು ತೃಪ್ತಿಕರವಾಗಿ ಚೇತರಿಸಿಕೊಂಡರು ಮತ್ತು ಮಾರ್ಚ್ 12 ರಂದು ಅವರನ್ನು ಬಿಡುಗಡೆ ಮಾಡಲಾಯಿತು” ಎಂದು ಏಮ್ಸ್-ದೆಹಲಿ ತಿಳಿಸಿದೆ.
ಬೆಂಗಳೂರು : ಈ ವರ್ಷದ ಆರಂಭದಲ್ಲಿ ರಾಜ್ಯದ ಜನತೆಗೆ ಸರ್ಕಾರ ಬಿಗ್ ಶಾಕ್ ನೀಡಿತ್ತು. ಕೆಎಸ್ಆರ್ಟಿಸಿ ಬಸ್ ಪ್ರಯಾಣದ ಟಿಕೆಟ್ ದರ ಹೆಚ್ಚಳ ಮಾಡಿತ್ತು. ಅದಾದ ಬಳಿಕ ಮೆಟ್ರೋ ಪ್ರಯಾಣದ ಟಿಕೆಟ್ ದರ ಕೂಡ ಹೆಚ್ಚಳ ಮಾಡಿ ಜನತೆಯ ಕೆಂಗಣ್ಣಿಗೆ ಸರ್ಕಾರ ಗುರಿಯಾಗಿತ್ತು. ಇದೀಗ ಬೆಂಗಳೂರು ಜನತೆಗೆ ಮತ್ತೊಂದು ಶಾಕ್ ಎದುರಾಗಿದ್ದು, ಶೀಘ್ರದಲ್ಲಿ ಆಟೋ ಪ್ರಯಾಣದ ದರ ಹೆಚ್ಚಳ ಆಗುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ. ನಗರದಲ್ಲಿನ ಆಟೋರಿಕ್ಷಾ ಚಾಲಕರ ಸಂಘಗಳ ಬೇಡಿಕೆಗಳಿಗೆ ಸ್ಪಂದಿಸಿ, ಬೆಂಗಳೂರು ನಗರ ಜಿಲ್ಲಾ ಪ್ರಾದೇಶಿಕ ಸಾರಿಗೆ ಪ್ರಾಧಿಕಾರವು ಬುಧವಾರ ಸಭೆ ಕರೆದು, ಸಂಭಾವ್ಯ ದರ ಪರಿಷ್ಕರಣೆ ಕುರಿತು ಚರ್ಚಿಸಿದೆ. ಸಾರಿಗೆ ಇಲಾಖೆಯ ಮೂಲಗಳ ಪ್ರಕಾರ, ಪ್ರಸ್ತುತ ಕನಿಷ್ಠ ದರ 30 ರೂ.ಗಳಾಗಿದ್ದು, ಎರಡು ಕಿಲೋಮೀಟರ್‌ಗಿಂತ ಹೆಚ್ಚಿನ ದೂರಕ್ಕೆ ಪ್ರತಿ ಕಿಲೋಮೀಟರ್‌ಗೆ 15 ರೂ.ಗಳ ಹೆಚ್ಚುವರಿ ಶುಲ್ಕ ವಿಧಿಸಲಾಗಿದೆ. ಆಟೋರಿಕ್ಷಾ ಚಾಲಕರು ಕನಿಷ್ಠ ದರವನ್ನು 50 ರೂ.ಗಳಿಗೆ ಹೆಚ್ಚಿಸಿ ಎರಡು ಕಿಲೋಮೀಟರ್‌ಗಿಂತ ಹೆಚ್ಚಿನ ದೂರಕ್ಕೆ ಪ್ರತಿ…
ಬೆಂಗಳೂರು : ತಮಿಳುನಾಡಿನ ಅರಣ್ಯ ಸಚಿವರಾದ ಡಾ.ಕೆ.ಪೊನ್ನುಮುಡಿ ಮತ್ತು ರಾಜ್ಯಸಭಾ ಸದಸ್ಯರಾದ ಮೊಹಮದ್ ಅಬ್ದುಲ್ಲಾ ಇಸ್ಮಾಯಿಲ್ ಅವರು ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿದ್ದಾರೆ. ಈ ಕುರಿತು ಸಿಎಂ ಸಿದ್ದರಾಮಯ್ಯ ಮಾಹಿತಿ ಹಂಚಿಕೊಂಡಿದ್ದು, ತಮಿಳುನಾಡಿನ ಅರಣ್ಯ ಸಚಿವರಾದ ಡಾ.ಕೆ.ಪೊನ್ನುಮುಡಿ ಮತ್ತು ರಾಜ್ಯಸಭಾ ಸದಸ್ಯರಾದ ಮೊಹಮದ್ ಅಬ್ದುಲ್ಲಾ ಇಸ್ಮಾಯಿಲ್ ಅವರು ಇಂದು ನನ್ನನ್ನು ಭೇಟಿಯಾಗಿ ಕೇಂದ್ರ ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ಮತ್ತು ದಕ್ಷಿಣ ರಾಜ್ಯಗಳ ವಿರೋಧಿ ನಿಲುವನ್ನು ವಿರೋಧಿಸಿ ನಡೆಯುತ್ತಿರುವ ಪ್ರತಿಭಟನೆ ಕುರಿತು ಚರ್ಚಿಸಿದರು. ಸಚಿವರ ನಿಯೋಗದ ಭೇಟಿಗೂ ಮೊದಲು ತಮಿಳುನಾಡು ಮುಖ್ಯಮಂತ್ರಿ ಸ್ಟಾಲಿನ್ ಅವರ ಜೊತೆ ದೂರವಾಣಿ ಮೂಲಕ ಮಾತನಾಡಿ, ಹೋರಾಟದ ಬಗ್ಗೆ ಚರ್ಚಿಸಿದೆ. ದಕ್ಷಿಣ ರಾಜ್ಯಗಳ ಪ್ರತಿರೋಧಕ್ಕೆ ನನ್ನ ಬೆಂಬಲ ಸದಾ ಇರಲಿದೆ. ರಾಜ್ಯಗಳ ಹಿತಾಸಕ್ತಿಗೆ ವಿರುದ್ಧವಾದ, ಪ್ರಜಾಪ್ರಭುತ್ವವನ್ನು ದುರ್ಬಲಗೊಳಿಸುವ, ಸಂವಿಧಾನದ ಒಕ್ಕೂಟ ತತ್ವಕ್ಕೆ ವಿರುದ್ಧವಾದ ಕೇಂದ್ರ ಸರ್ಕಾರದ ಎಲ್ಲಾ ನಡೆಗಳನ್ನೂ ನಾವು ಮುಲಾಜಿಲ್ಲದೆ ಖಂಡಿಸುತ್ತೇವೆ. ಈ ವಿಚಾರದಲ್ಲಿ ತಮಿಳುನಾಡಿನಂತೆ ಕರ್ನಾಟಕ ಕೂಡ ಸಮಾನ ಅಭಿಪ್ರಾಯ ಹೊಂದಿದೆ ಎಂದು ಹೇಳಿದ್ದಾರೆ. https://twitter.com/siddaramaiah/status/1899718690796655029?ref_src=twsrc%5Egoogle%7Ctwcamp%5Eserp%7Ctwgr%5Etweet
ಬೆಂಗಳೂರು: ಸ್ಯಾಂಡಲ್ ವುಡ್ ನಟಿ ರನ್ಯಾ ರಾವ್ ಅವರನ್ನು ಚಿನ್ನ ಕಳ್ಳಸಾಗಾಣಿಕೆ ಪ್ರಕರಣದಲ್ಲಿ ಬಂಧಿಸಲಾಗಿದೆ. ಅವರು ಜಾಮೀನು ಕೋರಿ ಸಲ್ಲಿಸಿದ್ದಂತ ಅರ್ಜಿಯನ್ನು ಮಧ್ಯಾಹ್ನ 3 ಗಂಟೆಗೆ ಮುಂದೂಡಿಕೆ ಮಾಡಲಾಗಿದೆ. ಬೆಂಗಳೂರಿನ ಆರ್ಥಿಕ ಅಪರಾಧಗಳ ನ್ಯಾಯಾಲಯಕ್ಕೆ ಚಿನ್ನ ಕಳ್ಳ ಸಾಗಾಣಿಕೆ ಪ್ರಕರಣ ಸಂಬಂಧ ನಟಿ ರನ್ಯಾ ರಾವ್ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆಯನ್ನು ಕೋರ್ಟ್ ನಡೆಸದ್ದು, ಜಾಮೀನು ಅರ್ಜಿಯನ್ನು ಮಧ್ಯಾಹ್ನ 3 ಗಂಟೆಗೆ ಮುಂದೂಡಿಕೆ ಮಾಡಲಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ಬಳಿ ಇರುವ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಆರೋಪಿ ರನ್ಯಾ ರಾವ್ ಅವರನ್ನು ಬಂಧಿಸಲಾಗಿತ್ತು. ಅವರನ್ನು ಡಿ.ಆರ್.ಐ. ಅಧಿಕಾರಿಗಳು ವಶಕ್ಕೆ ಕೇಳದ ಹಿನ್ನೆಲೆಯಲ್ಲಿ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ನೀಡಿ ನ್ಯಾಯಾಧೀಶರು ಆದೇಶಿಸಿದ್ದರು..ರನ್ಯಾ ರಾವ್ ಬಳಿ ಒಟ್ಟು 14.8 ಕೆಜಿ ಚಿನ್ನ ಸಿಕ್ಕಿರುವ ಮಾಹಿತಿ ಇದೆ.











