Author: kannadanewsnow57

ಬೆಂಗಳೂರು : ಬಿಸಿಲಿನ ಬೇಗೆಗೆ ತತ್ತರಿಸಿರುವ ಜನತೆಗೆ ಹವಾಮಾನ ಇಲಾಖೆ ನೆಮ್ಮದಿ ಸುದ್ದಿ ನೀಡಿದ್ದು, ಮಾರ್ಚ್ 11 ರಿಂದ ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆ ಆರಂಭವಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದೆ. ಹವಾಮಾನ ಇಲಾಖೆಯ ಪ್ರಕಾರ, ಮಾರ್ಚ್ ನಿಂದ ಮೇ ವರೆಗೆ ಮುಂಗಾರು ಪೂರ್ವ ಮಳೆಯ ಅವಧಿಯಾಗಿದ್ದು, ಈ ಅವಧಿಯಲ್ಲಿ ಬಿಸಿಲಿನ ತಾಪಕ್ಕೆ ಮಳೆಯಾಗಲಿದೆ. ಮಾರ್ಚ್ 12 ರಿಂದ ರಾಜ್ಯದಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿಯ ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಮಾರ್ಚ್ 12 ರಿಂದ 14 ರವರೆಗೆ ಮೂರು ದಿನ ಮಳೆಯಾಗಲಿದೆ. ದಕ್ಷಿಣ ಒಳನಾಡಿನ ಬಹುತೇಕ ಎಲ್ಲಾ ಜಿಲ್ಲೆಗಳಲ್ಲಿ ಮಾ.11 ರಿಂದ ಮಾರ್ಚ್ 14 ರವರೆಗೆ ಗುಡುಗು ಸಹಿತ ಹಗುರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Read More

ಬೆಂಗಳೂರು : ರಾಜ್ಯದ ವಾಹನ ಸವಾರರಿಗೇ ಮತ್ತೆ ಬಿಗ್ ರಿಲೀಫ್ ಸಿಕ್ಕಿದ್ದು, HSRP ನಂಬರ್ ಪ್ಲೇಟ್‌ ಅಳವಡಿಕೆಗೆ ಈಗಾಗಲೇ ಹಲವು ಬಾರಿ ಗಡುವು ವಿಸ್ತರಣೆ ಮಾಡಲಾಗಿದೆ. ಇದೀಗ ಮತ್ತೆ ಗುಡುವನ್ನು ವಿಸ್ತರಣೆ ಮಾಡಲಾಗಿದೆ. ಇನ್ನೂ ತುಂಬಾ ಜನರ ವಾಹನ ಸವಾರರು ತಮ್ಮ ವಾಹನಗಳಿಗೆ ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಅನ್ನು ಅಳವಡಿಕೆ ಮಾಡಿಲ್ಲ. ಮತ್ತೆ ಗಡುವು ವಿಸ್ತರಿಸುವಂತೆ ಮನವಿ ಮಾಡಿದ ಹಿನ್ನೆಲೆ ಮಾರ್ಚ್‌ 31, 2025ರ ವರೆಗೆ ಅವಧಿಯನ್ನು ವಿಸ್ತರಣೆ ಮಾಡಲಾಗಿದೆ. ಉಳಿದಂತೆ ದಿನಾಂಕ 17-08-2023ರಲ್ಲಿ ಹೊರಡಿಸಿ ಆದೇಶದಲ್ಲಿ ಬೇರೆ ಯಾವುದೇ ಬದಲಾವಣೆ ಇರುವುದಿಲ್ಲ ಎಂದು ತಿಳಿಸಿದೆ. ಇದರ ಮೇಲೂ ಎಚ್‌ಎಸ್‌ಆರ್‌ಪಿ ನಂಬರ್‌ ಪ್ಲೇಟ್‌ ಅಳವಡಿಕೆ ಮಾಡದಿದ್ದರೆ ಮಾಲೀಕತ್ವದ ಬದಲಾವಣೆ, ವಿಳಾಸ ಬದಲಾವಣೆ, ನಕಲಿ ಆರ್‌ಸಿ, ವಿಮೆ ಹಾಗೂ ಇನ್ನಿತರ ಕೆಲಸಗಳನ್ನು ಮಾಡಲಾಗುವುದಿಲ್ಲ. ಸಾರಿಗೆ ಇಲಾಖೆ ಹೊರಡಿಸಿರುವ ಈ ಸೂಚನೆಯಿಂದ ಅಧಿಕೃತ ಆಗಿಲ್ಲದ ವಾಹನಗಳು ರಸ್ತೆಯಲ್ಲಿ ಸಂಚರಿಸುವುದನ್ನು ಸುಲಭವಾಗಿ ಪತ್ತೆ ಹಚ್ಚಲು ಸಹಾಯಕ ಆಗಲಿದೆ. 2019ರ ಏಪ್ರಿಲ್ 1ಕ್ಕಿಂತ ಹಿಂದಿನ ವಾಹನಗಳು ಎಚ್‌ಎಸ್‌ಆರ್ಪಿ…

Read More

ಬೆಂಗಳೂರು : ಕರ್ನಾಟಕ ಸಾಹಿತ್ಯ ಅಕಾಡೆಮಿಯ 2023 ನೇ ಸಾಲಿನ ವಾರ್ಷಿಕ ಗೌರವ ಪ್ರಶಸ್ತಿ ಮತ್ತು ಸಾಹಿತ್ಯ ಶ್ರೀ ಪ್ರಶಸ್ತಿಗಳು ಪ್ರಕಟಗೊಂಡಿವೆ. ಡಾ.ಸಿ. ವೀರಣ್ಣ, ಡಾ. ಶ್ರೀರಾಮ ಇಟ್ಟಣ್ಣವರ, ಜಾಣಗೆರೆ ವೆಂಕಟರಾಮಯ್ಯ, ಎ.ಎಂ. ಮದರಿ, ಡಾ. ಸಬಿಹಾ ಭೂಮಿ ಗೌಡ ಅವರಿಗೆ ವಾರ್ಷಿಕ ಗೌರವ ಪ್ರಶಸ್ತಿ ನೀಡಲಾಗಿದೆ. ಪ್ರಶಸ್ತಿ 50,000 ರೂ. ನಗದು, ಪ್ರಶಸ್ತಿ ಫಲಕ, ಪ್ರಮಾಣ ಪತ್ರ ಒಳಗೊಂಡಿರುತ್ತದೆ. ಮಾರ್ಚ್ 24ರಂದು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ. ಸಾಹಿತ್ಯ ಕ್ಷೇತ್ರಕ್ಕೆ ನೀಡಿದ ಅಮೂಲ್ಯ ಸೇವೆ ಪರಿಗಣಿಸಿ 50 ರಿಂದ 60ರ ವಯೋಮಾನದ 10 ಮಂದಿಗೆ ಸಾಹಿತಿಗಳಿಗೆ ಸಾಹಿತ್ಯ ಶ್ರೀ ಪ್ರಶಸ್ತಿ ನೀಡಲು ನಿರ್ಧರಿಸಲಾಗಿದೆ. ಪ್ರಶಸ್ತಿಯು 25 ಸಾವಿರ ರೂ. ನಗದು, ಪ್ರಶಸ್ತಿ ಫಲಕ, ಪ್ರಮಾಣ ಪತ್ರ ಒಳಗೊಂಡಿದೆ. ಡಾ. ಎಂ.ಎಸ್. ಶೇಖರ್, ಜಿ.ಎನ್. ಮೋಹನ್, ಟಿ.ಎಸ್. ವಿವೇಕಾನಂದ, ಜಯಶ್ರೀ ಕಂಬಾರ ನಿಜಲಿಂಗಪ್ಪ ಯಮನಪ್ಪ ಮಟ್ಟಿಹಾಳ, ಬಾಲಗುರುಮೂರ್ತಿ, ಶಿವಗಂಗಾ ರುಮ್ಮಾ, ರೀಟಾ ರೀನಿ, ಕಲೀಮ್ ಉಲ್ಲಾ, ವೆಂಕಟಗಿರಿ…

Read More

ಬೆಂಗಳೂರು : ಇ.ಇ.ಡಿ.ಎಸ್. ತಂತ್ರಾಂಶದಲ್ಲಿ ಶಿಕ್ಷಕರ ಅಧಿಕಾರಿಗಳ/ಬೋಧಕೇತರ ನೌಕರರ ಸೇವಾ ವಿವರಗಳನ್ನು ಗಣಕೀಕರಿಸಿ ಅಂತಿಮಗೊಳಿಸುವ ಬಗ್ಗೆ ಶಿಕ್ಷಣ ಇಲಾಖೆ ಮಹತ್ವದ ಆದೇಶ ಹೊರಡಿಸಿದೆ. ವಿಷಯಕ್ಕೆ ಸಂಬಂದಿಸಿದಂತೆ ಈಗಾಗಲೇ ರಾಜ್ಯದಲ್ಲಿನ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲಾ ಸಹಶಿಕ್ಷಕರ ಮತ್ತು ಮುಖ್ಯ ಶಿಕ್ಷಕರ ಹಾಗೂ ತತ್ಸಮಾನ ವೃಂದದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವವರ ಎಲ್ಲಾ ಅಧಿಕಾರಿಗಳ ಮಾಹಿತಿಯ ಇಂದೀಕರಣಕ್ಕೆ ಸಂಬಂಧಿಸಿದಂತೆ. ಉಲ್ಲೇಖಿತ ಪತ್ರದಲ್ಲಿ ತಿಳಿಸಲಾಗಿತ್ತು. ಶಿಕ್ಷಕರ ವರ್ಗಾವಣೆ ಪ್ರಕ್ರಿಯೆಗೆ ಇಇಡಿ.ಎಸ್ ನಲ್ಲಿ ಇರುವ ಸೇವಾ ಮಾಹಿತಿಯು ಅಂತಿಮವಾಗಿರುವುದರಿಂದ ಈ ಕೆಳಕಂಡ ಅಂಶಗಳ ಸೇವಾ ವಿವರಗಳನ್ನು ನಿಖರವಾಗಿ ಇ ಇಡಿ.ಎಸ್ ತಂತ್ರಾಂಶದಲ್ಲಿ ಗಣಕೀಕರಣ ಮಾಡಿ ದಿನಾಂಕ:15/03/2025 ರೊಳಗೆ ಅಂತಿಮಗೊಳಿಸಲು ಆಯಾ ಬಟವಾಡೆ ಅಧಿಕಾರಿಗಳಿಗೆ ತಿಳಿಸಲಾಗಿದೆ. ಶಿಕ್ಷಕರ ಕ್ರಮಬದ್ಧವಾದ ಪ್ರಥಮ ಕೆ.ಜಿ.ಐ.ಡಿ ಸಂಖ್ಯೆ ನಮೂದಾಗಿರುವ ಬಗ್ಗೆ ಪರಿಶೀಲಿಸುವುದು. ತಂತ್ರಾಂಶದ ವರದಿಗಳನ್ನು ಗಮನಿಸಿದಂತೆ ಕೆಲವು ಪ್ರಕರಣಗಳಲ್ಲಿ ಎರಡೆರಡು ಕೆ.ಜಿ.ಐ.ಡಿ ಸಂಖ್ಯೆಗಳನ್ನು ನಮೂದಿಸಿ ಸೇವಾ ವಿವರಗಳನ್ನು ಅಂತಿಮಗೊಳಿಸಿರುವುದು ಕಂಡುಬಂದಿರುತ್ತದೆ. ಇದು ಸಾಕಷ್ಟು ಗೊಂದಲಗಳಿಗೆ ಅವಕಾಶ ಮಾಡಿಕೊಡುವುದರಿಂದ ಪ್ರತಿಯೊಬ್ಬ ಶಿಕ್ಷಕರ ಮೊದಲನೇ ಕೆ.ಜಿ.ಐ.ಡಿ ಸಂಖ್ಯೆಯಡಿ…

Read More

ತುಮಕೂರು : ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಮಾಗೋಡು ಗ್ರಾಮದಲ್ಲಿ ಲಸಿಕೆ ಹಾಕಿಸಿಕೊಂಡ 5 ತಿಂಗಳ ಹೆಣ್ಣು ಮಗುವೊಂದು ಕೆಲವೇ ಗಂಟೆಯಲ್ಲಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಮಾಗೋಡು ಗ್ರಾಮದ ಕೀರ್ತನಾ ಹಾಗೂ ಲಕ್ಷ್ಮೀಕಾಂತ್ ದಂಪತಿಯ 5 ತಿಂಗಳ ಹೆಣ್ಣು ಮಗುವಿಗೆ ರೋಟ್ -2 ಲಸಿಕೆಯನ್ನು ಕಳೆದ ಗುರುವಾರ ಬೆಳಗ್ಗೆ ಸುಮಾರು 11.30ರ ಸುಮಾರಿಗೆ ಹಾಕಿಸಲಾಗಿತ್ತು. ಲಸಿಕೆ ಹಾಕಿದ ಕೂಡಲೇ ಮಗು ನಿದ್ದೆಗೆ ಜಾರಿತ್ತು. ಆದರೆ ಮಗುವಿಗೆ ಮಧ್ಯಾಹ್ನ 3.30ರ ಸುಮಾರಿಗೆ ಭೇದಿಯಿಂದ ಮಗು ಅಸ್ವಸ್ಥಗೊಂಡಿತು. ಕೂಡಲೇ ಶಿರಾ ಸರ್ಕಾರಿ ಆಸ್ಪತ್ರೆ ಗೆ ಹೋದಾಗ ಪರಿಶೀಲಿಸಿದ ವೈದ್ಯರು ತುಮಕೂರು ಆಸ್ಪತ್ರೆಗೆ ಕರೆದುಕೊಂಡು ಹೋಗುವಂತೆ ಸೂಚಿಸಿದರು. ಆದರೆ, ಮಗು ತುಮಕೂರಿನ ಖಾಸಗಿ ಆಸ್ಪತ್ರೆಗೆ ಬರುವಷ್ಟರಲ್ಲಿ ಸಾವನ್ನಪ್ಪಿತ್ತು ಎನ್ನಲಾಗಿದ್ದು, ಪೋಷಕರು ಈ ಬಗ್ಗೆ ಶಿರಾ ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

Read More

ಕಲಬುರಗಿ : ರಾಜ್ಯದ ಗ್ರಾಮೀಣ ಜನತೆಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು, ಕಲ್ಯಾಣ ಕರ್ನಾಟಕ ಪ್ರದೇಶದ 38 ಗ್ರಾಮೀಣ ವಿಧಾನಸಭಾ ಕ್ಷೇತ್ರಗಳಲ್ಲಿ ಪ್ರಧಾನಮಂತ್ರಿ ಗ್ರಾಮ ಸಡಕ್ ಯೋಜನೆಯ ಮಾದರಿಯಲ್ಲಿ 1,000 ಕೋಟಿ ರು. ವೆಚ್ಚದಲ್ಲಿ 1,166 ಕಿ.ಮೀ. ಉದ್ದದ ರಸ್ತೆಗಳನ್ನು ಅಭಿವೃದ್ಧಿಪಡಿಸುವ ಕಲ್ಯಾಣ ಪಥ ಯೋಜನೆಗೆ ರಾಜ್ಯಸಭೆ ವಿಪಕ್ಷ ನಾಯಕ ಡಾ. ಮಲ್ಲಿಕಾರ್ಜುನ ಖರ್ಗೆ ಚಾಲನೆ ನೀಡಿದ್ದಾರೆ. ಶನಿವಾರ ಕಲಬುರಗಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಕರ್ನಾಟಕ ಗ್ರಾಮೀಣ ರಸ್ತೆ ಅಭಿವೃದ್ಧಿ ಸಂಸ್ಥೆಯ ಆಶ್ರಯದಲ್ಲಿ ಜೇವರ್ಗಿ ತಾಲೂಕಿನ ಕಟ್ಟಿಸಂಗಾವಿಯಲ್ಲಿ ಕಲ್ಯಾಣ ಪಥ ಯೋಜನೆಯ ಚಾಲನಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಕಲ್ಯಾಣ ಹಿಂದುಳಿಯಲು ಇಲ್ಲಿನ ನಾಯಕರೇ ಕಾರಣ: ಹಳೇ ಮೈಸೂರು, ಬೆಂಗಳೂರು ಪ್ರದೇಶಕ್ಕೆ ಹೋಲಿಕೆ ಮಾಡಿದಲ್ಲಿ ಹೈದ್ರಾಬಾದ್ ಕರ್ನಾಟಕ ಪ್ರದೇಶ ಹಿಂದುಳಿದಿರುವುದು ಕಟು ಸತ್ಯ. ಇಲ್ಲಿನ ನಾಯಕರ ಇಚ್ಛಾಸಕ್ತಿ ಕೊರತೆಯೇ ಇದಕ್ಕೆ ಕಾರಣ. ಹಿಂದಿನ ಸರ್ಕಾರದ ಯೋಜನೆಗಳು ಬೆಂಗಳೂರಿನಿಂದ ಶುರುವಾಗಿ ದಾವಣಗೆರೆ ದಾಟುತ್ತಿರಲಿಲ್ಲ. ಅದಕ್ಕೇ ಕಲ್ಯಾಣ ಹಿಂದುಳಿದು ಹೈರಾಣಾಗಿದೆ. ಕೆಕೆಆರ್‌ಡಿಬಿಗೆ 5…

Read More

ಬೆಂಗಳೂರು : ಬಿಸಿಲಿನ ಬೇಗೆಗೆ ತತ್ತರಿಸಿರುವ ಜನತೆಗೆ ಹವಾಮಾನ ಇಲಾಖೆ ನೆಮ್ಮದಿ ಸುದ್ದಿ ನೀಡಿದ್ದು, ಮಾರ್ಚ್ 11 ರಿಂದ ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆ ಆರಂಭವಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದೆ. ಹವಾಮಾನ ಇಲಾಖೆಯ ಪ್ರಕಾರ, ಮಾರ್ಚ್ ನಿಂದ ಮೇ ವರೆಗೆ ಮುಂಗಾರು ಪೂರ್ವ ಮಳೆಯ ಅವಧಿಯಾಗಿದ್ದು, ಈ ಅವಧಿಯಲ್ಲಿ ಬಿಸಿಲಿನ ತಾಪಕ್ಕೆ ಮಳೆಯಾಗಲಿದೆ. ಮಾರ್ಚ್ 12 ರಿಂದ ರಾಜ್ಯದಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿಯ ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಮಾರ್ಚ್ 12 ರಿಂದ 14 ರವರೆಗೆ ಮೂರು ದಿನ ಮಳೆಯಾಗಲಿದೆ. ದಕ್ಷಿಣ ಒಳನಾಡಿನ ಬಹುತೇಕ ಎಲ್ಲಾ ಜಿಲ್ಲೆಗಳಲ್ಲಿ ಮಾ.11 ರಿಂದ ಮಾರ್ಚ್ 14 ರವರೆಗೆ ಗುಡುಗು ಸಹಿತ ಹಗುರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Read More

ಬೆಂಗಳೂರು : ಇಂದು ನಮ್ಮ ಮೆಟ್ರೋ ಪ್ರಯಾಣದ ನೇರಳೆ ಮಾರ್ಗದ ನಿಲ್ದಾಣಗಳಲ್ಲಿ ಮೆಟ್ರೋ ಸಂಚಾರ ವ್ಯತ್ಯಯ ಉಂಟಾಗಲಿದ್ದು, ನೇರಳೆ ಮಾರ್ಗದ ಮಾಗಡಿ ರಸ್ತೆ ಮತ್ತು ಎಂಜಿ ರಸ್ತೆ ಮೆಟ್ರೋ ನಿಲ್ದಾಣಗಳ ನಡುವೆ ನಮ್ಮ ಮೆಟ್ರೋ ಸಂಚಾರ ಬೆಳಗ್ಗೆ 7 ಗಂಟೆಯಿಂದ 10ಗಂಟೆಯವರೆಗೆ ಸಂಚಾರ ಸ್ಥಗಿತಗೊಳ್ಳಲಿದೆ ಎಂದು BMRCL ತಿಳಿಸಿದೆ. ಈ ಅವಧಿಯಲ್ಲಿ ಕಬ್ಬನ್ ಪಾರ್ಕ್, ಡಾ. ಬಿ.ಆರ್. ಅಂಬೇಡ್ಕರ್ ನಿಲ್ದಾಣ, ವಿಧಾನಸೌಧ, ಸ‌ರ್.ಎಂ ವಿಶ್ವೇಶ್ವರಯ್ಯ ನಿಲ್ದಾಣ, ಸೆಂಟ್ರಲ್ ಕಾಲೇಜು, ನಾಡಪ್ರಭು ಕೆಂಪೇಗೌಡ ನಿಲ್ದಾಣ, ಮೆಜೆಸ್ಟಿಕ್ (ನೇರಳೆ ಮಾರ್ಗ) ಮತ್ತು ಕ್ರಾಂತಿವೀರ ಸಂಗೋಳಿ ರಾಯಣ್ಣ ರೈಲು ನಿಲ್ದಾಣಗಳು ಮುಚ್ಚಲಾಗಿರುತ್ತದೆ ಎಂದು ಮಾಹಿತಿ ನೀಡಿದೆ. ಅಲೆ ನಮ್ಮ ಮೆಟ್ರೋ ನಿಗಮವು ನೇರಳ ಮಾರ್ಗದಲ್ಲಿ ಮಾಗಡಿ ರಸ್ತೆ ಮತ್ತು ಎಂಜಿ ರಸ್ತೆ ಮೆಟ್ರೋ ನಿಲ್ದಾಣಗಳ ನಡುವೆ ಹಳಿ ನಿರ್ವಹಣಾ ಕಾಮಗಾರಿಯನ್ನು ಬೆಳಿಗೆ 07:00 ರಿಂದ 10:00 ಗಂಟೆಯವರೆಗೆ ಕೈಗೊಳ್ಳಲಿದೆ. ಈ ಹಿನ್ನೆಲೆಯಲ್ಲಿ ಮಾಗಡಿ ರಸ್ತೆ ಮತ್ತು ಎಂಜಿ ರಸ್ತೆ ಮೆಟ್ರೋ ನಿಲ್ಯಾಣಗಳ ನಡುವಿನ ಮೆಟ್ರೋ ಸೇವೆಗಳನ್ನು…

Read More

ನವದೆಹಲಿ : ನೌಕರರ ಭವಿಷ್ಯ ನಿಧಿ ಸಂಸ್ಥೆ (ಇಪಿಎಫ್‌ಒ)ಯಲ್ಲಿ ಹೊಸ ಬದಲಾವಣೆ ಬರಲಿದೆ. ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಸಚಿವ ಮನ್ಸುಖ್ ಮಾಂಡವಿಯಾ ಇತ್ತೀಚೆಗೆ ಇಪಿಎಫ್‌ಒ ಶೀಘ್ರದಲ್ಲೇ ಇಪಿಎಫ್‌ಒ 3.0 ಆವೃತ್ತಿಯನ್ನು ಪ್ರಾರಂಭಿಸಲಿದೆ ಎಂದು ತಿಳಿಸಿದ್ದು, ಇದು ಉದ್ಯೋಗಿಗಳಿಗೆ ಒಂದು ದೊಡ್ಡ ಹೆಜ್ಜೆಯಾಗಿದೆ. ಈ ಹೊಸ ವ್ಯವಸ್ಥೆಯಡಿಯಲ್ಲಿ, ಇಪಿಎಫ್‌ಒ ಸದಸ್ಯರು ಅನೇಕ ಪ್ರಮುಖ ಪ್ರಯೋಜನಗಳನ್ನು ಪಡೆಯುತ್ತಾರೆ ಮತ್ತು ಸರ್ಕಾರಿ ಕಚೇರಿಗಳಿಗೆ ಭೇಟಿ ನೀಡುವ ತೊಂದರೆಯಿಂದ ಮುಕ್ತರಾಗುತ್ತಾರೆ. EPFO 3.0 ಒಂದು ಡಿಜಿಟಲ್ ವ್ಯವಸ್ಥೆಯಾಗಿದ್ದು, ಬ್ಯಾಂಕ್ ಖಾತೆಯಂತೆ ಕಾರ್ಯನಿರ್ವಹಿಸಲು ವಿನ್ಯಾಸಗೊಳಿಸಲಾಗಿದೆ. ಇದರರ್ಥ ಈಗ ನೌಕರರು ತಮ್ಮ ಪಿಎಫ್ ಖಾತೆಯನ್ನು ಬ್ಯಾಂಕ್ ಖಾತೆಯಂತೆ ನಿರ್ವಹಿಸಲು ಸಾಧ್ಯವಾಗುತ್ತದೆ. ಈ ಹೊಸ ವ್ಯವಸ್ಥೆಯಡಿಯಲ್ಲಿ, ನೌಕರರು ತಮ್ಮ ಸಾರ್ವತ್ರಿಕ ಖಾತೆ ಸಂಖ್ಯೆ (UAN) ಮೂಲಕ ಎಲ್ಲಾ ಕೆಲಸಗಳನ್ನು ಮಾಡಲು ಸಾಧ್ಯವಾಗುತ್ತದೆ ಎಂದು ಕೇಂದ್ರ ಸಚಿವರು ಹೇಳಿದರು. ಇದು ಅವರಿಗೆ ಇಪಿಎಫ್‌ಒ ಕಚೇರಿಗಳಿಗೆ ಭೇಟಿ ನೀಡುವ ಅಗತ್ಯವನ್ನು ತಪ್ಪಿಸುತ್ತದೆ ಮತ್ತು ಉದ್ಯೋಗದಾತರಿಂದ ಯಾವುದೇ ದಾಖಲೆಗೆ ಸಹಿ ಹಾಕುವ ಅಗತ್ಯವನ್ನು ನಿವಾರಿಸುತ್ತದೆ.…

Read More

ಬೆಂಗಳೂರು : ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ 2.5 ಲಕ್ಷ ಅಕ್ರಮ ಪಂಪ್ ಸೆಟ್ ಗಳನ್ನು ಸಕ್ರಮಗೊಳಿಸಲಾಗಿದ್ದು, ಬಾಕಿ ಇರುವ 2 ಲಕ್ಷ ಪಂಪ್ ಸೆಟ್ ಗಳನ್ನು ಇನ್ನೊಂದು ವರ್ಷದಲ್ಲಿ ಸಕ್ರಮಗೊಳಿಸಲಾಗುವುದು ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್ ಹೇಳಿದ್ದಾರೆ. 500 ಮೀ.ಗಿಂತ ಒಳಗಿರುವ ಕೃಷಿ ಪಂಪ್‌ಸೆಟ್‌ಗಳಿಗೆ ಉಚಿತ ಸಂಪರ್ಕ ಕೊಡಲಾಗುತ್ತಿದೆ. 500 ಮೀ. ಗಿಂತ ಹೆಚ್ಚು ಅಂತರವಿರುವ ಕೃಷಿ ಪಂಪ್‌ಸೆಟ್‌ ಗಳಿಗೆ ವಿಶೇಷ ಯೋಜನೆ ನೀಡಲಾಗುತ್ತಿದೆ ಎಂದರು. “ರೈತರಿಗೆ ನಿರಂತರ 7 ಗಂಟೆ ಸೇರಿದಂತೆ ರಾಜ್ಯದ ಜನರಿಗೆ ದಿನದ 24 ಗಂಟೆಗಳ ಕಾಲ ವಿದ್ಯುತ್‌ ಪೂರೈಸಲಾಗುತ್ತಿದೆ.ವಿಜಯಪುರ ಜಿಲ್ಲೆಯಲ್ಲಿ 353 ಕೃಷಿ ಮಾರ್ಗಗಳಿಗೆ ಹಗಲು ವೇಳೆ 7 ಗಂಟೆ 3 ಫೇಸ್, 165 ಮಾರ್ಗಗಳಲ್ಲಿ ಹಗಲು 4 ಗಂಟೆ ರಾತ್ರಿ 3 ಮೂರು ಗಂಟೆಗಳ ಕಾಲ , 42 ಕೃಷಿ ಮಾರ್ಗದಲ್ಲಿ ಹಗಲು 3 ಮತ್ತು ರಾತ್ರಿ 4 ಗಂಟೆಗಳ ಕಾಲ ತ್ರೀ ಫೇಸ್ ಹಾಗೂ 43 ಕೃಷಿ…

Read More