Author: kannadanewsnow57

ಬೆಂಗಳೂರು : ಸರ್ಕಾರಿ ಶಾಲಾ ಮಕ್ಕಳ ಹಾಜರಾತಿಗೆ ಫೇಸ್ ರೆಕಗ್ನಿಷನ್, ಮತ್ತೆ 550 ಕರ್ನಾಟಕ ಪಬ್ಲಿಕ್ ಶಾಲೆ ಸ್ಥಾಪನೆ ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಬಜೆಟ್ ನಲ್ಲಿ ಘೋಷಿಸಿದ್ದಾರೆ. ಅತಿಥಿ ಶಿಕ್ಷಕರು, ಉಪನ್ಯಾಸಕರ ಗೌರವಧನ 2000 ರು ಹೆಚ್ಚಳ, ಬಿಸಿಯೂಟ ನೌಕರರ ಗೌರವಧನ 1000 ರು. ಏರಿಕೆ, 10,267 ಶಾಲಾ ಶಿಕ್ಷಕರ ನೇಮಕ, ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಕೋಡಿಂಗ್ ಕಲಿಕೆಗೆ ಅಗಸ್ತ್ರ ಫೌಂಡೇಶನ್ ಸಹಯೋಗದೊಂದಿಗೆ ಐ-ಕೋಡ್ ಲ್ಯಾಬ್ ಸ್ಥಾಪನೆ ಮಾಡಲಾಗುವುದು ಎಂದು ತಿಳಿಸಿದ್ದಾರೆ. ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ಹಾಜರಾತಿ ಖಚಿತ ಪಡಿಸಲು ‘ನಿರಂತರ’ ಕಾರ್ಯಕ್ರಮದಡಿ ಫೇಸ್ ರೆಕಗ್ನಿಷನ್ ವ್ಯವಸ್ಥೆ ಜಾರಿಗೊಳಿಸಲಾಗುವುದು. ಪ್ರೌಢಶಾಲಾ, ಪಿಯು ಕಾಲೇಜು ಹಂತದಲ್ಲೇ ವಿದ್ಯಾರ್ಥಿಗಳಿಗೆ ಕೌಶಲ್ಯ ತರಬೇತಿಗೆ ‘ಸ್ಕಿಲ್ ಆಟ್ ಸ್ಕೂಲ್’ ಕಾರ್ಯಕ್ರಮ ರೂಪಿಸಲಾಗಿದೆ. ಇದರಡಿ, ಆಯ್ದ 7,500 ವಿದ್ಯಾರ್ಥಿಗಳಿಗೆ ಉನ್ನತೀಕರಿಸಿದ 150 ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಗಳಲ್ಲಿ ತರಬೇತಿ ನೀಡಲಾಗುವುದು ಎಂದು ಹೇಳಿದ್ದಾರೆ.

Read More

ಪಡಿತರ ಚೀಟಿದಾರರಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು, ಫೆಬ್ರವರಿ ಮತ್ತು ಮಾರ್ಚ್-2025ರ ಮಾಹೆಗೆ ರಾಜ್ಯದ ಅಂತ್ಯೋದಯ ಮತ್ತು ಆದತ್ಯಾ ಫಲಾನುಭವಿಗಳಿಗೆ ಅನ್ನಭಾಗ್ಯ ಯೋಜನೆಯಡಿ ನೇರ ನಗದು ವರ್ಗಾವಣೆ ಬದಲಾಗಿ ಹೆಚ್ಚುವರಿ 5 ಕೆಜಿ ಓ.ಎಂ.ಎಸ್.ಎಸ್.ಡಿ ಅಕ್ಕಿ ಹಂಚಿಕೆ ಮಾಡಲಾಗುತ್ತದೆ. ಅಂತ್ಯೋದಯ ಅನ್ನ ಯೋಜನೆ ಮತ್ತು ಆದ್ಯತಾ ಪಡಿತರ ಚೀಟಿಗಳ ಪ್ರತಿ ಫಲಾನುಭವಿಗೆ ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯನ್ವಯ ವಿತರಿಸಲಾಗುವ 5 ಕೆ.ಜಿ ಆಹಾರಧಾನ್ಯದೊಂದಿಗೆ ರಾಜ್ಯ ಸರ್ಕಾರದ ವತಿಯಿಂದ ಹೆಚ್ಚುವರಿಯಾಗಿ 5 ಕೆ.ಜಿ ಆಹಾರಧಾನ್ಯದ ಬದಲಾಗಿ ಪ್ರತಿ ಕೆ.ಜಿ.ಗೆ 34 ರೂ.ರಂತೆ ಪಡಿತರ ಚೀಟಿಯಲ್ಲಿನ ಕುಟುಂಬದ ಮುಖ್ಯಸ್ಥರ ಬ್ಯಾಂಕ್ ಖಾತೆಗೆ ಡಿಬಿಟಿ ಮೂಲಕ 170 ರೂ.ರಂತೆ ಹಣವನ್ನು ವರ್ಗಾಯಿಸಲಾಗುತ್ತಿತ್ತು. ಆದರೆ ನಗದು ಬದಲಾಗಿ 2025 ರ ಫೆಬ್ರವರಿ ಮಾಹೆಯಲ್ಲಿ ಅನ್ನಭಾಗ್ಯ ಯೋಜನೆಯಡಿ ಹೆಚ್ಚುವರಿ 5 ಕೆ.ಜಿ ಅಕ್ಕಿಯನ್ನು ಹಂಚಿಕೆ ಮಾಡಲಾಗಿರುತ್ತದೆ. ಹೆಚ್ಚುವರಿ ಹಂಚಿಕೆಯನ್ನು ಏಕ-ಸದಸ್ಯ, ದ್ವಿ-ಸದಸ್ಯ ಮತ್ತು ತ್ರಿ-ಸದಸ್ಯ ಎಎವೈ ಪಡಿತರ ಚೀಟಿಗಳನ್ನು ಹೊರತುಪಡಿಸಿ ನಾಲ್ಕು ಮತ್ತು ನಾಲ್ಕಕ್ಕಿಂತ ಹೆಚ್ಚಿನ ಸದಸ್ಯರುಳ್ಳ ಎಎವೈ…

Read More

ಬೆಂಗಳೂರು : ರಾಜ್ಯ ಸರ್ಕಾರವು ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ರಾಜ್ಯದ 37 ಲಕ್ಷ ಮಕ್ಕಳ ಆರೈಕೆ ಮತ್ತು ಕಲಿಕೆಯಲ್ಲಿ ಮಹತ್ತರ ಪಾತ್ರವಹಿಸುತ್ತಿರುವ ಅಂಗನವಾಡಿ ಕಾರ್ಯಕರ್ತರ ಗೌರವಧನ 1,000 ರೂ. ಹಾಗೂ ಸಹಾಯಕಿಯರ ಗೌರವಧನವನ್ನು 700 ರೂ.ಗೆ ಹೆಚ್ಚಳ ಮಾಡಲಾಗುವುದು ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ. ಆಶಾ ಕಾರ್ಯಕರ್ತೆಯರಿಗೆ ತಂಡ ಆಧಾರಿತ ಪ್ರೋತ್ಸಾಹಧನ ನೀಡುವುದರ ಮೂಲಕ ಗೌರವಧನವನ್ನು 1,000 ರೂ. ಹೆಚ್ಚಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ. ಇನ್ನು ಪರಿಶಿಷ್ಟ ಜಾತಿ\ ಪರಿಶಿಷ್ಟ ಪಂಗಡದ ಮಹಿಳಾ ಸ್ವಸಹಾಯ ಸಂಘಗಳಿಗೆ ನೀಡುತ್ತಿರುವ 1 ಲಕ್ಷ ರೂ. ಸಾಲ ಹಾಗೂ 1.50 ಲಕ್ಷ ರೂ. ಸಹಾಯಧನವನ್ನು ಕ್ರಮವಾಗಿ 2.50 ಲಕ್ಷಕ್ಕೆ ಹೆಚ್ಚಿಸಲಾಗಿದೆ.

Read More

ಕೆಲವರು ತಾವು ತೆಗೆದುಕೊಳ್ಳುವ ಕಾಫಿ, ಟೀ, ಕೂಲ್ ಡ್ರಿಂಕ್ಸ್ ಇನ್ನಿತರ ಪಾನೀಯಗಳ ಜೊತೆಗೆ ಔಷಧಿಗಳನ್ನು ತೆಗೆದುಕೊಳ್ಳಬೇಕು ಎಂದುಕೊಳ್ಳುತ್ತಾರೆ. ಇದೆಲ್ಲಾ ಎಷ್ಟು ಸರಿ. ನಿಜಕ್ಕೂ ಹೀಗೆಲ್ಲಾ ಔಷಧಿಗಳನ್ನು ತೆಗೆದು ಕೊಳ್ಳಬಹುದಾ? ನೋಡೋಣ ಬನ್ನಿ. ನೀವು ಯಾವುದೇ ಸಾಫ್ಟ್ ಡ್ರಿಂಕ್ಸ್ ಅಥವಾ ಕೂಲ್ ಡ್ರಿಂಕ್ಸ್ ತೆಗೆದುಕೊಂಡರೆ, ಅವುಗಳು ಕಾರ್ಬೊನೇಟೆಡ್ ಆಗಿರುತ್ತವೆ, ಅವುಗಳಲ್ಲಿ ಕೆಲವು ಆಮ್ಲಿಯತೆ ಸಹ ಹೊಂದಿರುತ್ತವೆ. ಇವುಗಳು ಸಾಧಾರಣವಾಗಿ ಆಂಟಿ ಬ್ಯಾಕ್ಟೀರಿಯಲ್ ಗುಣ ಲಕ್ಷಣಗಳನ್ನು ಒಳಗೊಂಡಿರುವ ಔಷಧಿಗಳ ಪ್ರಭಾವಗಳನ್ನು ಕಡಿಮೆ ಮಾಡುತ್ತವೆ. ಅದರಲ್ಲೂ ಕೆಲವೊಂದು ಕಾರ್ಬೊನೇಟೆಡ್ ಪಾನೀಯಗಳು ನೀವು ತೆಗೆದುಕೊಳ್ಳುವ ಔಷಧ ಮಾತ್ರೆಗಳ ಮೇಲೆ ಅಡ್ಡ ಪರಿಣಾಮಗಳನ್ನು ಉಂಟುಮಾಡುತ್ತವೆ. ಹೀಗಾಗಿ ಯಾವುದೇ ಕಾರಣಕ್ಕೂ ಸಾಫ್ಟ್ ಡ್ರಿಂಕ್ಸ್ ಜೊತೆಗೆ ಮಾತ್ರೆಗಳನ್ನು ತೆಗೆದುಕೊಳ್ಳುವುದು ಅಥವಾ ಔಷಧಿಗಳನ್ನು ಸೇವಿಸುವುದನ್ನು ಬಿಡಬೇಕು. ಔಷಧಿಗಳನ್ನು ತೆಗೆದುಕೊಂಡ ನಂತರವೂ ಕೂಡ ಸಾಫ್ಟ್ ಡ್ರಿಂಕ್ಸ್ ಸೇವನೆ ಬೇಡ. ಏಕೆಂದರೆ ಇವುಗಳು ದೇಹದಲ್ಲಿ ಕಬ್ಬಿಣದ ಅಂಶ ಹೀರಿಕೊಳ್ಳಲು ಬಿಡುವುದಿಲ್ಲ. ಒಂದು ವೇಳೆ ನೀವು ಕಬ್ಬಿಣದ ಪೂರಕಗಳನ್ನು ವೈದ್ಯರ ಅಣತಿ ಮೇರೆಗೆ ತೆಗೆದುಕೊಳ್ಳುತ್ತಿದ್ದೀರಾ ಎಂದಾದರೆ ಯಾವುದೇ…

Read More

ಬೆಂಗಳೂರು : ಜಮೀನುಗಳ ಪಹಣಿಗಳನ್ನು ವಾರಸುದಾರರಿಗೆ ಖಾತೆ ಮಾಡಲು ಪ್ರಸಕ್ತ ಸಾಲಿನಲ್ಲಿ ಇ-ಪೌತಿ ಆಂಧೋಲನ ಜಾರಿಗೊಳಿಸಲು ಉದ್ದೇಶಿಸಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಪಹಣಿಗಳಿಗೆ ಆಧಾರ್ ಜೋಡಣೆ ಮಾಡುವಾಗ ಪೌತಿ ಎಂದು ಗುರುತಿಸಿದ ಜಮೀನುಗಳ ಪಹಣಿಗಳನ್ನು ವಾರಸುದಾರರಿಗೆ ಖಾತೆ ಮಾಡಲು ಪ್ರಸಕ್ತ ಸಾರಿನಲ್ಲಿ ಇ-ಪೌತಿ ಆಂದೋಲನ ಜಾರಿಗೊಳಿಸಲಾಗುವುದು. ಗ್ರಾಮ, ತಾಲೂಕು ಮಟ್ಟದ ಭೂ ದಾಖಲೆಗಳನ್ನು ತಾಳೆ ಮಾಡಿ ಕ್ರಮಬದ್ಧಗೊಳಿಸುವ ವಿಧಾನವಾಗಿರುವ ಜಮಾಬಂದಿ ಪ್ರಕ್ರಿಯೆಯನ್ನು ತ್ವರಿತಗೊಳಿಸಲು ಇ- ಜಮಾಬಂದಿ ತಂತ್ರಾಂಶ ಅಭಿವೃದ್ದಿಪಡಿಸಲಾಗುತ್ತದೆ. ಕರ್ನಾಟಕ ಭೂ ಕಂದಾಯ ಹಳೆಯದಾಗಿದ್ದು, ಪರಿಣಾಮಕಾರಿಯಾಗಿ ಜಾರಿಗೊಳಿಸಲು ಮತ್ತು ಹೆಚ್ಚಿನ ಸ್ಪಷ್ಟತೆ ಹಿನ್ನೆಲೆಯಲ್ಲಿ ಸಮಗ್ರ ಅಧ್ಯಯನ ನಡೆಸಿ ಹೊಸ ಭೂ ಕಂದಾಯ ಕಾಯ್ದೆ ತರಲಾಗುವುದು. ರೈತರು, ಸಾರ್ವಜನಿಕರ ಅನುಕೂಲಕ್ಕಾಗಿ 100 ಹೊಸ ನಾಡಕಛೇರಿಗಳ ನಿರ್ಮಾಣ ಮಾಡಲಾಗುವುದು. ಭೂ ಮಾಪನ ಇಲಾಖೆಯ ದೈನಂದಿನ ಸಾಂಪ್ರದಾಯಿಕ ಸರ್ವೆ ಕಾರ್ಯಗಳನ್ನು ಸಂಪೂರ್ಣ ಆಧುನಿಕ ತಂತ್ರಜ್ಞಾನ ಬಳಕೆ ಮಾಡಿ ಡಿಜಿಟಲೀಕರಿಸಿ ಸಾರ್ವಜನಿಕರಿಗೆ ಪಾರದರ್ಶಕ ಸೇವೆ ನೀಡಲಾಗುವುದು. ಕೇಂದ್ರದ ಸಹಯೋಗದಲ್ಲಿ ನಕ್ಷಾ ಯೋಜನೆಯಡಿ ಪ್ರಾರಂಭಿಕವಾಗಿ ರಾಜ್ಯದ 10…

Read More

ಭಾಗ್ಯಲಕ್ಷ್ಮೀ (ಸುಕನ್ಯ ಸಮೃದ್ಧಿ ಯೋಜನೆ) ಯೋಜನೆಯು 2006-07ನೇ ಸಾಲಿನಿಂದ ಜಾರಿಯಾಗಿದ್ದು, ಪ್ರಸ್ತುತ ನೋಂದಣಿ ಜಾರಿಯಲ್ಲಿದ್ದು, ಈಗಾಗಲೇ ನೋಂದಣಿಯಾಗಿ ಸೌಲಭ್ಯ ಪಡೆದಿರುವ ಫಲಾನುಭವಿಗಳಿಗೆ 2024-25ನೇ ಸಾಲಿನಿಂದ ಪರಿಪಕ್ವ ಮೊತ್ತ ಒದಗಿಸಬೇಕಾಗಿರುತ್ತದೆ. ಪರಿಪಕ್ವ ಮೊತ್ತ ಒದಗಿಸಲು ಹಾಗೂ ಹೊಸದಾಗಿ ಭಾಗ್ಯಲಕ್ಷ್ಮೀ ಬಾಂಡ್ (ಸುಕನ್ಯ ಸಮೃದ್ಧಿ ಯೋಜನೆ) ಪಡೆಯುವ ಕ್ರಮಗಳ ಬಗ್ಗೆ ತಾಲ್ಲೂಕು ಮಟ್ಟದ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಛೇರಿ ಹಾಗೂ ಆಯಾ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಂಗನವಾಡಿ ಕೇಂದ್ರಗಳ ಕಾರ್ಯಕರ್ತೆಯರನ್ನು ಸಂಪರ್ಕಿಸಬಹುದಾಗಿದೆ. ಭಾಗ್ಯಲಕ್ಷ್ಮೀ (ಸುಕನ್ಯ ಸಮೃದ್ಧಿ ಯೋಜನೆ) ಯೋಜನೆಯಡಿ ನೋಂದಣಿಯಾಗಿರುವ ಎಲ್ಲಾ ಫಲಾನುಭವಿಗಳಿಗೆ, ಸಾರ್ವಜನಿಕರ ಗಮನಕ್ಕೆ ತರಬಯಸುವುದೆನೆಂದರೆ ಈ ಯೋಜನೆಯು ಕರ್ನಾಟಕ ಸರ್ಕಾರದ ಮಹಾತ್ವಾಕಾಂಕ್ಷಿ ಯೋಜನೆಯಾಗಿದ್ದು, ನೋಂದಣಿ ಹಾಗೂ ಪರಿಪಕ್ವ ಮೊತ್ತ ಪಾವತಿಯು ಸಂಪೂರ್ಣವಾಗಿ ಉಚಿತವಾಗಿರುತ್ತದೆ. ಯಾವುದೇ ತಾಲ್ಲೂಕು ಕಛೇರಿಗಳಲ್ಲಿ ಮದ್ಯವರ್ತಿಗಳಾಗಲೀ ಅಥವಾ ಸಿಬ್ಬಂದಿಗಳಾಗಲೀ ಹಣ ಕೇಳಿದಲ್ಲಿ ನೇರವಾಗಿ ಸಂಬಂಧಪಟ್ಟ ತಾಲ್ಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಹಾಗೂ ಜಿಲ್ಲಾ ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಚಿತ್ರದುರ್ಗ ಇವರನ್ನು ಸಂಪರ್ಕಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ…

Read More

ನಿದ್ರೆ ನಮ್ಮ ಜೀವನಶೈಲಿಯ ಪ್ರಮುಖ ಭಾಗವಾಗಿದೆ. ಅದು ಇಲ್ಲದೆ ಉತ್ತಮ ಆರೋಗ್ಯವನ್ನು ಕಲ್ಪಿಸಿಕೊಳ್ಳಲಾಗುವುದಿಲ್ಲ. ಇಡೀ ದಿನದ ಆಯಾಸದ ನಂತರ, ರಾತ್ರಿಯಲ್ಲಿ 7-8 ಗಂಟೆಗಳ ನಿದ್ರೆ ಬಹಳ ಮುಖ್ಯ, ಇದರಿಂದ ದೇಹ ಮತ್ತು ಮನಸ್ಸು ವಿಶ್ರಾಂತಿ ಪಡೆಯುತ್ತದೆ. ಆದರೆ ಅನೇಕ ಜನರಿಗೆ ನಿದ್ರಾಹೀನತೆಯ ಸಮಸ್ಯೆ ಇದೆ. ಇದರಿಂದಾಗಿ ಮಾನಸಿಕ ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ. ಅಂತಹ ಪರಿಸ್ಥಿತಿಯಲ್ಲಿ, ಉತ್ತಮ ನಿದ್ರೆಯನ್ನು ತೆಗೆದುಕೊಳ್ಳುವುದು ಅವಶ್ಯಕ ಮತ್ತು ಇದಕ್ಕಾಗಿ ನಿಮ್ಮ ಆಹಾರದಲ್ಲಿಯೂ ಕೆಲವು ಬದಲಾವಣೆಗಳನ್ನು ಮಾಡಬೇಕಾಗುತ್ತದೆ. ಕೆಲವು ತಪ್ಪು ಆಹಾರ ಪದ್ಧತಿಯಿಂದಲೂ ನಿದ್ರಾಹೀನತೆಯ ಸಮಸ್ಯೆ ಉದ್ಭವಿಸುತ್ತದೆ. ಹಾಗಾಗಿ ಈ ಸಮಸ್ಯೆಯಿಂದ ಬಳಲತ್ತಿರುವವರು ಈ ಆಹಾರಗಳನ್ನು ಸೇವಿಸಬಾರದು. ಕೊಬ್ಬು ಭರಿತ ಆಹಾರ ಕೊಬ್ಬು ಭರಿತ ಆಹಾರಗಳು ನಿಮ್ಮ ನಿದ್ರೆಯ ಮೇಲೆ ಪರಿಣಾಮ ಬೀರುತ್ತವೆ. ವಾಸ್ತವವಾಗಿ, ಕೊಬ್ಬು ಭರಿತ ಆಹಾರಗಳು ಜೀರ್ಣಕ್ರಿಯೆಯಲ್ಲಿ ಸಮಸ್ಯೆಗಳನ್ನು ಉಂಟುಮಾಡುತ್ತವೆ. ಆದ್ದರಿಂದ, ರಾತ್ರಿಯಲ್ಲಿ ಈ ಆಹಾರಗಳನ್ನು ತೆಗೆದುಕೊಳ್ಳುವುದು ಸರಿಯಲ್ಲ. ಚಿಪ್ಸ್ ಮತ್ತು ತಿಂಡಿಗಳು ನೀವು ರಾತ್ರಿ ಚಿಪ್ಸ್ ಮತ್ತು ನಮ್ಕೀನ್ ತಿನ್ನುತ್ತಿದ್ದರೆ ಇಂದೇ…

Read More

ಕೃಷಿ ಇಲಾಖೆಯಿಂದ ಸೂಕ್ಷ್ಮ ನೀರಾವರಿ ಯೋಜನೆಯಲ್ಲಿ ಪರಿಶಿಷ್ಠ ಜಾತಿ ವರ್ಗದ ರೈತರಿಗೆ ತುಂತುರು ನೀರಾವರಿ ಘಟಕಗಳ ವಿತರಣೆಯಡಿ ಅರ್ಜಿ ಆಹ್ವಾನಿಸಲಾಗಿದೆ. 2024-25ನೇ ಸಾಲಿನ ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆಯಲ್ಲಿ ತುಂತುರು ನೀರಾವರಿ ಘಟಕಗಳ ವಿತರಣೆಗೆ ಕೊಪ್ಪಳ ತಾಲ್ಲೂಕಿಗೆ ಪರಿಶಿಷ್ಠ ಜಾತಿ ವರ್ಗದ ರೈತರಿಗೆ 651 ಹೆಕ್ಟರ್‌ಗಳಿಗೆ ಗುರಿಯನ್ನು ನಿಗದಿಪಡಿಸಿದ್ದು, ಇಲ್ಲಿಯವರೆಗೆ 192 ಹೆಕ್ಟರ್ ಘಟಕಗಳನ್ನು ವಿತರಣೆ ಮಾಡಲಾಗಿದೆ. ರೈತರು 2 ಹೆಕ್ಟರ್‌ಗಳವರೆಗೆ ತುಂತುರು ನೀರಾವರಿ ಘಟಕಗಳನ್ನು ಪಡೆಯಲು ಅವಕಾಶವಿರುತ್ತದೆ. ಈ ರೈತರು 75 ಎಂ.ಎಂ.ಗೆ 1 ಹೆಕ್ಟರ್‌ಗೆ ರೈತ ವಂತಿಕೆ 4667 ರೂ. ಹಾಗೂ ಸಹಯಧನ 21,775 ಇದ್ದು ರೂ., 2 ಹೆಕ್ಟರ್‌ಗೆ ರೈತ ವಂತಿಕೆ 6540 ರೂ. ಮತ್ತು ಸಹಾಯಧನ 31,191 ರೂ.ಇದೆ. 63 ಎಂ.ಎಂ.ಗೆ 1 ಹೆಕ್ಟರ್‌ಗೆ ರೈತ ವಂತಿಕೆ 4139 ರೂ. ಹಾಗೂ ಸಹಾಯಧನ 19429 ರೂ. ಇದ್ದು, 2 ಹೆಕ್ಟರ್‌ಗೆ ರೈತ ವಂತಿಕೆ 5772 ಮತ್ತು ಸಹಾಯಧನ 28050 ರೂ.ಇರುತ್ತದೆ. ರೈತರು ಈ ಯೋಜನೆಯ…

Read More

ಬೆಂಗಳೂರು: ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದ ಮೇರೆಗೆ ರಾಜ್ಯಾಧ್ಯಂತ ಎಲ್ಲಾ ನ್ಯಾಯಾಲಯಗಳಲ್ಲಿ ಮಾರ್ಚ್ 8ರ ಇಂದು  ರಾಷ್ಟ್ರೀಯ ಲೋಕ್ ಅದಾಲತ್ ಆಯೋಜಿಸಲಾಗಿದೆ.  ಸಾರ್ವಜನಿಕರು ತಮ್ಮ ವ್ಯಾಜ್ಯ ಪೂರ್ವ ಮತ್ತು ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳಿಗೆ ತಕ್ಷಣ ಪರಿಹಾರ ಪಡೆದುಕೊಳ್ಳಲು ರಾಷ್ಟ್ರೀಯ ಲೋಕ ಅದಾಲತ್ ಸುವರ್ಣ ಅವಕಾಶವಾಗಿದೆ. ವ್ಯಾಜ್ಯ ಪೂರ್ವ ಪ್ರಕರಣಗಳು: ಚೆಕ್ ಅಮಾನ್ಯದ ಪ್ರಕರಣಗಳು, ಬ್ಯಾಂಕ್ ವಸೂಲಾತಿ ಪ್ರಕರಣಗಳು, ಉದ್ಯೋಗದಲ್ಲಿ ಪುನರ್ ಸ್ಥಾಪಿಸಲ್ಪಡುವ ಪ್ರಕರಣಗಳು, ವಿದ್ಯುತ್ ಹಾಗೂ ನೀರಿನ ಶುಲ್ಕಗಳು, ಇತರೆ ಪ್ರಕರಣಗಳು(ರಾಜೀಯಾಗಬಲ್ಲ ಅಪರಾಧಿಕ ಪ್ರಕರಣಗಳು, ವೈವಾಹಿಕ ಪ್ರಕರಣಗಳು ಮತ್ತು ಇತರೆ ಸಿವಿಲ್ ಪ್ರಕರಣಗಳು) ಕರ್ನಾಟಕ ರಿಯಲ್ ಎಸ್ಟೇಟ್ ಪ್ರಾಧಿಕಾರಕ್ಕೆ ಸಂಬಂಧಪಟ್ಟ ಪ್ರಕರಣಗಳು, ಜಿಲ್ಲಾ ಗ್ರಾಹಕರ ವೇದಿಕೆಯಲ್ಲಿನ ಪ್ರಕರಣಗಳು, ಸಾಲ ವಸೂಲಾತಿ ನ್ಯಾಯಾಧೀಕರಣದ ಪ್ರಕರಣಗಳು, ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗ, ಖಾಯಂ ಜನತಾ ನ್ಯಾಯಾಲಯದಲ್ಲಿನ ಪ್ರಕರಣಗಳು. ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳು ರಾಜಿಯಾಗಬಲ್ಲ ಅಪರಾಧಿಕ ಪ್ರಕರಣಗಳು, ಚೆಕ್ ಅಮಾನ್ಯದ ಪ್ರಕರಣಗಳು, ಬ್ಯಾಂಕ್ ವಸೂಲಾತಿ…

Read More

ನವದೆಹಲಿ : ಇಂದು 2025 ರ ಮಹಿಳಾ ದಿನವನ್ನು ವಿಶ್ವಾದ್ಯಂತ ಆಚರಿಸಲಾಗುತ್ತದೆ. ಮಹಿಳಾ ಸಬಲೀಕರಣವನ್ನು ಆಚರಿಸಲು 2025 ರ ಅಂತರರಾಷ್ಟ್ರೀಯ ಮಹಿಳಾ ದಿನವನ್ನು ಮಾರ್ಚ್ 8 ರಂದು ಆಚರಿಸಲಾಗುತ್ತದೆ. ಈ ವಿಶೇಷ ದಿನವನ್ನು ಏಕೆ ಆಚರಿಸಲಾಗುತ್ತದೆ? ಇದರ ಹಿಂದಿನ ಮಹತ್ವ ಮತ್ತು ಇತಿಹಾಸವೇನು? ಈ ವರ್ಷದ ಥೀಮ್ ಏನು ಮತ್ತು ಅದನ್ನು ಹೇಗೆ ಆಚರಿಸುವುದು ಎಂದು ಈಗ ನೋಡೋಣ. ಪ್ರತಿ ವರ್ಷ ಮಾರ್ಚ್ 8 ರಂದು ನಾವು ಅಂತರರಾಷ್ಟ್ರೀಯ ಮಹಿಳಾ ದಿನವನ್ನು ಆಚರಿಸುತ್ತೇವೆ. ಮಹಿಳೆಯರ ಸಾಧನೆಗಳನ್ನು ಗುರುತಿಸಲು, ಲಿಂಗ ಸಮಾನತೆಯ ಬಗ್ಗೆ ಜಾಗೃತಿ ಮೂಡಿಸಲು ಮತ್ತು ಮಹಿಳಾ ಸಬಲೀಕರಣವನ್ನು ಬೆಂಬಲಿಸಲು ಇದನ್ನು ಪ್ರತಿ ವರ್ಷ ಆಚರಿಸಲಾಗುತ್ತದೆ. ವಿಶ್ವಾದ್ಯಂತ ಮಹಿಳೆಯರ ಹಕ್ಕುಗಳು ಮತ್ತು ಸಾಮಾಜಿಕ, ಆರ್ಥಿಕ, ಸಾಂಸ್ಕೃತಿಕ ಮತ್ತು ರಾಜಕೀಯ ಕೊಡುಗೆಗಳ ಬಗ್ಗೆ ಜಾಗೃತಿ ಮೂಡಿಸುವುದು ಇದರ ಗುರಿಯಾಗಿದೆ. ಮಹಿಳಾ ದಿನದ ಇತಿಹಾಸ.. 1908 ರಲ್ಲಿ, ಮಹಿಳಾ ಗಾರ್ಮೆಂಟ್ ಕಾರ್ಮಿಕರು ಕೆಲಸದ ಸಮಯ ಮತ್ತು ವೇತನಕ್ಕಾಗಿ ಪ್ರತಿಭಟಿಸಲು ನ್ಯೂಯಾರ್ಕ್‌ನ ಬೀದಿಗಳಲ್ಲಿ ಮೆರವಣಿಗೆ ನಡೆಸಿದರು.…

Read More