Subscribe to Updates
Get the latest creative news from FooBar about art, design and business.
Author: kannadanewsnow57
ಬೆಂಗಳೂರು : ರಾಜ್ಯದಲ್ಲಿ ಗರಿಷ್ಠ ತಾಪಮಾನ, ಉಷ್ಣ ವಾತಾವರಣ, ಬಿಸಿಗಾಳಿ ಎಂದೆಲ್ಲಾ ಕರೆಸಿಕೊಳ್ಳುವ ಕಾಲ ಆರಂಭವಾಗಿದೆ. ಸಾಮಾನ್ಯ ಪ್ರದೇಶದಲ್ಲಿ ವಿಪರೀತ ಶಾಖದ ಮಟ್ಟವು ಹೆಚ್ಚಾಗಿ, ಸಾಮಾನ್ಯ ಉಷ್ಣಾಂಶವು ಗರಿಷ್ಠತೆಗೆ ತಲುಪಿ ತೇವಾಂಶ ಇಲ್ಲದಂತೆ ಮಾಡುವ ವಿಪರೀತ ಪರಿಸ್ಥಿತಿ ವಾತಾವರಣದಲ್ಲಿ ಉಂಟಾದಾಗ ಅದನ್ನು ಬಿಸಿಗಾಳಿ, ಉಷ್ಣಗಾಳಿ, ಬೇಸಿಗೆಯ ಝುಳ, ಉಷ್ಣವಾತಾವರಣ ಅಥವಾ ಸಾಮಾನ್ಯ ಭಾಷೆಯಲ್ಲಿ ಬೇಸಿಗೆ ಎಂದು ಕರೆಸಿಕೊಳ್ಳುತ್ತದೆ. ಈ ಬೇಸಿಗೆ ವಾತಾವರಣದಲ್ಲಿ ಬಹುತೇಕ ಎಲ್ಲಾ ಜೀವ ಜಂತುಗಳಿಗೆ ಕಷ್ಟವಾಗುತ್ತದೆ. ಅದರಲ್ಲಿಯೂ ಶಿಶುಗಳಿಗೆ, ವಯಸ್ಸಾದವರಿಗೆ, ಮಕ್ಕಳಿಗೆ, ಗರ್ಭಿಣಿಯರಿಗೆ, ಬೀದಿ ಬದಿಯಲ್ಲಿ ವ್ಯಾಪಾರ ಮಾಡುವವರಿಗೆ, ಬಿಸಿಲಲ್ಲಿ ಕೂಲಿ ಕೆಲಸ ಮಾಡುವ ಬಡ ಮತ್ತು ಸಾಮಾನ್ಯ ವರ್ಗದವರಿಗೆ, ವಿಶೇಷ ಚೇತನ ವ್ಯಕ್ತಿಗಳಿಗೆ, ಧೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿರುವವರಿಗೆ ಈ ಬಿಸಿಲಿನ ಝಳವು ಸಾಕಷ್ಟು ಕಾಡುತ್ತದೆ. ಬಿಸಿಲಿನ ತಾಪದಿಂದ ಮನುಷ್ಯರ ಮೇಲಾಗುವ ಪರಿಣಾಮಗಳು ಈ ಲಕ್ಷಣಗಳನ್ನು ಗಮನಿಸಿ ಶಾಖಾ ಸೆಳೆತ (ಹೀಟ್ ಕ್ರಾಂಪ್) ಜ್ವರ (102 ಡಿಗ್ರಿ ಗಿಂತ ಕಡಿಮೆ) ಹಾಗೂ ಮೈಯಲ್ಲಿ ಊತ ಕಾಣಿಸಿಕೊಳ್ಳುವುದು. ಇವುಗಳನ್ನು ಮಾಡಿ…
ನವದೆಹಲಿ : 2014 ರಿಂದ 2024 ರವರೆಗಿನ ದಶಕದಲ್ಲಿ ದೇಶದೊಳಗೆ 17.1 ಕೋಟಿ ಉದ್ಯೋಗಗಳು ಸೃಷ್ಟಿಯಾಗಿವೆ, ಅದರಲ್ಲಿ ಕಳೆದ ವರ್ಷವೊಂದರಲ್ಲೇ 4.6 ಕೋಟಿ ಉದ್ಯೋಗಗಳು ಸೃಷ್ಟಿಯಾಗಿವೆ ಎಂದು ಕೇಂದ್ರ ಕಾರ್ಮಿಕ ಸಚಿವ ಮನ್ಸುಖ್ ಮಾಂಡವಿಯಾ ಬುಧವಾರ ಹೇಳಿದ್ದಾರೆ. ಬಜೆಟ್ ಕುರಿತು ಆಯೋಜಿಸಲಾದ ವೆಬಿನಾರ್‌ನಲ್ಲಿ ಮಾಂಡವಿಯಾ, ನಿರುದ್ಯೋಗ ದರ ಗಣನೀಯವಾಗಿ ಕಡಿಮೆಯಾಗಿದೆ ಎಂದು ಹೇಳಿದರು. ೨೦೧೭-೧೮ ರಲ್ಲಿ ಶೇ. ೬ ರಷ್ಟಿದ್ದ ಇದು ೨೦೨೩-೨೪ ರಲ್ಲಿ ಶೇ. ೩.೨ ಕ್ಕೆ ಇಳಿಯಲಿದೆ. ಇದೇ ಅವಧಿಯಲ್ಲಿ, ಮಹಿಳಾ ಉದ್ಯೋಗವು ಶೇಕಡಾ 22 ರಿಂದ ಶೇಕಡಾ 40.3 ಕ್ಕೆ ಗಮನಾರ್ಹವಾಗಿ ಹೆಚ್ಚಾಗಿದೆ. ಈ ಸಾಧನೆಗಳಿಗೆ ಸರ್ಕಾರದ ಪ್ರಗತಿಪರ ನೀತಿಗಳೇ ಕಾರಣ ಎಂದು ಕಾರ್ಮಿಕ ಸಚಿವರು ಹೇಳಿದರು ಮತ್ತು ಇದು ದೇಶದ ಕಾರ್ಯಪಡೆಯನ್ನು ಬಲಪಡಿಸಿದೆ ಎಂದು ಹೇಳಿದರು. ಸರ್ಕಾರದ ಸಾಮಾಜಿಕ ಭದ್ರತಾ ಉಪಕ್ರಮಗಳ ಪರಿಣಾಮವನ್ನು ಎತ್ತಿ ತೋರಿಸಲು ಮಾಂಡವಿಯಾ ಅವರು ಅಂತರರಾಷ್ಟ್ರೀಯ ಕಾರ್ಮಿಕ ಸಂಸ್ಥೆಯ (ಐಎಲ್‌ಒ) ವಿಶ್ವ ಸಾಮಾಜಿಕ ಭದ್ರತಾ ವರದಿ 2024-26 ಅನ್ನು ಉಲ್ಲೇಖಿಸಿದರು. ಭಾರತದ…
ಬೆಂಗಳೂರು : ಯಾವುದೇ ಮಾನಸಿಕ ಸಮಸ್ಯೆಗಳಿಗೆ ಹತ್ತಿರದ ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿ. ಟೆಲಿ ಮನಸ್ ಶುಲ್ಕ ರಹಿತ ದೂರವಾಣಿ ಸಂಖ್ಯೆ 14416 ಗೆ ಕರೆ ಮಾಡಿ, ಸಹಾಯ ಪಡೆಯಿರಿ ಎಂದು ರಾಜ್ಯ ಸರ್ಕಾರ ಪ್ರಕಟಣೆ ಹೊರಡಿಸಿದೆ. ಮಾನಸಿಕ ಕಾಯಿಲೆಗಳ ಕುರಿತು ಮಾಹಿತಿಗಳು ದೆವ್ವ ಭೂತಗಳ ಚೇಷ್ಟೆಯಿಂದ, ಮಾಟ ಮಂತ್ರಗಳಿಂದ, ಪೂರ್ವಜನ್ಮದ ಪಾಪಗಳಿಂದ, ಮದ್ದು ಹಾಕುವುದರಿಂದ ಮಾನಸಿಕ ಕಾಯಿಲೆಗಳು ಬರುವುದಿಲ್ಲ. ಮಿದುಳಿನಲ್ಲಿ ಆಗುವ ಕೆಲವು ಬದಲಾವಣೆಗಳು, ಮಿದುಳಿನ ಕಾಯಿಲೆಗಳು, ವಾತಾವರಣದಲ್ಲಿ ಕಂಡು ಬರುವ ತೊಂದರೆಗಳು, ಕಷ್ಟನಷ್ಟಗಳು, ಮೇಲಿಂದ ಮೇಲೆ ಮನಸ್ಸಿಗೆ ಆಗುವ ನೋವು ನಿರಾಶೆಗಳು, ಮದ್ಯಪಾನ ಮತ್ತು ಮಾದಕ ವಸ್ತುಗಳ ಸೇವನೆ ಇವುಗಳಿಂದ ಮಾನಸಿಕ ಕಾಯಿಲೆಗಳು ಬರುತ್ತವೆ. ಮಾನಸಿಕ ಅಸ್ವಸ್ಥರು ತಮ್ಮ ಚಿಕಿತ್ಸೆಗಾಗಿ ಮುಂಚಿತ ನಿರ್ದೇಶನ ನೀಡಬಹುದು ಮತ್ತು ತಮ್ಮ ಪ್ರತಿನಿಧಿಗಳನ್ನು ನಾಮ ನಿರ್ದೇಶನ ಮಾಡಬಹುದು (ಮಾನಸಿಕ ಆರೋಗ್ಯ ಆರೈಕೆ ಕಾಯಿದೆ 2017). ಮಾನಸಿಕ ಆರೋಗ್ಯ ಆರೈಕೆ ಕಾಯಿದೆ 2017 ರ ಅನ್ವಯ ಮಾನಸಿಕ ಆರೋಗ್ಯ ಸಂಸ್ಥೆಗಳು ಮತ್ತು ಮಾನಸಿಕ ಆರೋಗ್ಯ…
ಬೆಂಗಳೂರು : 2024-25 ನೇ ಸಾಲಿನಲ್ಲಿ ಸರ್ಕಾರಿ ಕಾಲೇಜುಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅತಿಥಿ ಉಪನ್ಯಾಸಕರುಗಳಿಗೆ ಫೆಬ್ರವರಿ- 2025 ರ ಮಾಹೆಯ ಗೌರವಧನ ಪಾವತಿಸಲು ಕೊರತೆ ಆಗಿರುವ ಅನುದಾನ ಬಿಡುಗಡೆ ಮಾಡುವ ಬಗ್ಗೆ. 2024-25 ನೇ ಸಾಲಿನಲ್ಲಿ ಇಲಾಖಾ ವ್ಯಾಪ್ತಿಯ ಸರ್ಕಾರಿ ಪ್ರಥಮದರ್ಜೆ ಕಾಲೇಜುಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅತಿಥಿ ಉಪನ್ಯಾಸಕರುಗಳಿಗೆ ಫೆಬ್ರವರಿ-2025 ರ ಮಾಹೆವರೆಗಿನ ಗೌರವಧನ ಪಾವತಿಗಾಗಿ ಈಗಾಗಲೇ ಅನುದಾನ ಬಿಡುಗಡೆ ಮಾಡಲಾಗಿದೆ. ಪ್ರಸ್ತುತ 12 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪ್ರಾಂಶುಪಾಲರುಗಳು ಫೆಬ್ರವರಿ-2025 ರ ಮಾಹೆಯ ಗೌರವಧನ ಪಾವತಿಸಲು ಕೊರತೆ ಆಗಿರುವ ಅನುದಾನ ಬಿಡುಗಡೆ ಮಾಡಬೇಕೆಂದು ಮನವಿ ಸಲ್ಲಿಸಿರುತ್ತಾರೆ. ಅದರಂತೆ ಅನುದಾನ ಬಿಡುಗಡೆ ಮಾಡಲು ಈ ಆದೇಶ ಆದೇಶ ಸಂಖ್ಯೆ: ಕಾಶಿಇ/ಆಯವ್ಯಯ/ಉಗೌಧ/06/2024-25, ಬೆಂಗಳೂರು, ದಿನಾಂಕ: 05.03.2025. 2024-25 ನೇ ಸಾಲಿನಲ್ಲಿ ಇಲಾಖಾ ವ್ಯಾಪ್ತಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅತಿಥಿ ಉಪನ್ಯಾಸಕರುಗಳಿಗೆ ಗೌರವಧನ ಪಾವತಿಸಲು ಲೆ ಶೀ 2202-03-103-2-01 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳು 324 ಅತಿಥಿ ಉಪನ್ಯಾಸಕರ…
ನವದೆಹಲಿ : ಕೇಂದ್ರ ಸರ್ಕಾರವು ರೈತ ಸಮುದಾಯಕ್ಕೆ ಮತ್ತೊಂದು ಸಿಹಿಸುದ್ದಿ ನೀಡಿದ್ದು, ಜನೌಷಧಿ ಮಾದರಿಯಲ್ಲೇ ಪ್ರಾಣಿಗಳಿಗೆ ದನೌಷಧಿ ಯೋಜನೆ ಜಾರಿಗೆ ತರಲು ಮುಂದಾಗಿದೆ. ಹೌದು, ಕೇಂದ್ರ ಸರ್ಕಾರವು ಇದೀಗ ಜಾನುವಾರುಗಳಿಗೆ ಅಗತ್ಯ ಔಷಧಗಳನ್ನು ಜನೆರಿಕ್ ಮಾದರಿಯಲ್ಲಿ ಬಿಡುಗಡೆಗೆ ನಿರ್ಧರಿಸಿದ್ದು, ಈ ಮೂಲಕ ರೈತರಿಗೆ ಅಗ್ಗದ ದರದಲ್ಲಿ ಔಷಧ ಪೂರೈಸಲಿದೆ. ಕೇಂದ್ರ ಸರ್ಕಾರದ ಜಾನುವಾರು ಆರೋಗ್ಯ ಮತ್ತು ರೋಗ ನಿಯಂತ್ರಣ ಕಾರ್ಯಕ್ರಮದ ಅಡಿಯಲ್ಲಿ ಇನ್ಮುಂದೆ ಜಾನುವಾರುಗಳಿಗೆ ಕೊಡುವ ಗುಣಮಟ್ಟದ ಜನೆರಿಕ್ ಔಷಧಗಳನ್ನು ರೈತರಿಗೆ ನೀಡಲು ಸಚಿವ ಸಂಪುಟ ಸಭೆ ಅನುಮೋದಿಸಿದೆ. ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಎಲ್ ಎಚ್ ಡಿಸಿ ಯೋಜನೆಗೆ ಪಶು ಔಷಧಿ ಎಂಬ ಅಂಶವನ್ನು ಹೊಸದಾಗಿ ಸೇರಿಸಲಾಗಿದೆ. ಎಲ್ ಎಚ್ ಡಿಸಿ ಯೋಜನೆಗೆ ಬಜೆಟ್ ನಲ್ಲಿ 3,880 ಕೋಟಿ ರೂ. ಮೀಸಲಿಡಲು ಕೇಂದ್ರ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ.
ಬೆಂಗಳೂರು : ಗ್ರಾಮ ಆಡಳಿತ ಅಧಿಕಾರಿಗಳಿಗೆ ಲ್ಯಾಪ್‌ಟಾಪ್ ವಿತರಿಸಲು ಸರ್ಕಾರ ಮುಂದಾಗಿದ್ದು ಈಗಾಗಲೇ 4 ಸಾವಿರ ಲ್ಯಾಪ್ಟಾಪ್ ಖರೀದಿಸುವ ಪ್ರಕ್ರಿಯೆ ಜಾರಿಯಲ್ಲಿದೆ ಎಂದು ಕಂದಾಯ ಸಚಿವರಾದ ಕೃಷ್ಣಭೈರೇಗೌಡ ಅವರು ವಿಧಾನಪರಿಷತ್ ನಲ್ಲಿ ತಿಳಿಸಿದರು. ಪ್ರಶೋತ್ತರ ವೇಳೆ ಬಿಜೆಪಿಯ ಕೇಶವ ಪ್ರಸಾದ್ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು 2024-25 ನೇ ಸಾಲಿನ ಆಯವ್ಯಯದಲ್ಲಿ ಘೋಷಿಸಿರುವಂತೆ ಲ್ಯಾಪ್ಟಾಪ್ ಖರೀದಿಸುವ ಪ್ರಕ್ರಿಯೆ ಜಾರಿಯಲ್ಲಿದೆ ಎಂದರು. ಗ್ರಾಮ ಆಡಳಿತ ಅಧಿಕಾರಿಗಳಿಗೆ ಒದಗಿಸುವ ಛಾವಡಿಗಳು ಕಂದಾಯ ಇಲಾಖೆಯ ಸುಪರ್ಧಿಗೆ ಸೇರಿರುತ್ತವೆ; ಈ ಛಾವಡಿಗಳು ಶಿಥಿಲಗೊಂಡಿರುವುದು ಸರ್ಕಾರದ ಗಮನಕ್ಕೆ ಬಂದಿದ್ದು, ಅವುಗಳ ಪುನರ್ ನಿರ್ಮಾಣ ಮಾಡಲು ಪರಿಶೀಲಿಸಲಾಗುವುದು ಎಂದು ತಿಳಿಸಿದರು. ವಿಜಯಪುರ ಜಿಲ್ಲೆಯಲ್ಲಿ 82 ಗ್ರಾಮ ಛಾವಡಿಗಳು ಇರುತ್ತವೆ ಹಾಗೂ 126 ಗ್ರಾಮಗಳಲ್ಲಿ ಗ್ರಾಮ ಛಾವಡಿಗಳು ಇರುವುದಿಲ್ಲ; ಗ್ರಾಮ ಛಾವಡಿಗಳನ್ನು ನಿರ್ಮಿಸುವ ಬಗ್ಗೆ ನಿಯಮಾನುಸಾರ ಪರಿಶೀಲಿಸಲಾಗುವುದು ಎಂದರು. ಗ್ರಾಮಪಂಚಾಯ್ತಿಯ ಆಡಳಿತ ಅಧಿಕಾರಿಗಳು ಕರ್ತವ್ಯ ನಿರ್ವಹಿಸುವ ಸ್ಥಳಗಳಲ್ಲಿ ದಾಖಲೆಗಳನ್ನು ಸಂರಕ್ಷಿಸಿಕೊಳ್ಳಲು ಅವರಿಗೆ ಕಪಾಟುಗಳನ್ನು ಒದಗಿಸಲಾಗಿದೆ ಹಾಗೂ ಲೇಖನ ಸಾಮಗ್ರಿಗಳನ್ನು ನೀಡಲಾಗುತ್ತಿದೆ ಮತ್ತು ಪ್ರಯಾಣ…
ಬೆಂಗಳೂರು : ರಾಜ್ಯ ಸರ್ಕಾರವು ಉದ್ಯೋಗಾಕಾಂಕ್ಷಿಗಳಿಗೆ ಸಿಹಿಸುದ್ದಿ ನೀಡಿದ್ದು, ಮುಂದಿನ ಆರ್ಥಿಕ ವರ್ಷದಲ್ಲಿ ಡಿ ವೃಂದದ 700 ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲಾಗುವುದು ಎಂದು ಪಶುಸಂಗೋಪನೆ ಸಚಿವ ಕೆ.ವೆಂಕಟೇಶ್ ತಿಳಿಸಿದ್ದಾರೆ. ವಿಧಾನಪರಿಷತ್ ನಲ್ಲಿ ಕಾಂಗ್ರೆಸ್ ನ ಎಂ.ನಾಗರಾಜ್ ಪ್ರಶ್ನೆಗೆ ಉತ್ತರಿಸಿದ ಸಚಿವರು, ಪಶುಸಂಗೋಪನೆ ಇಲಾಖೆಯಲ್ಲಿ 400 ಪಶು ವೈದ್ಯಾಧಿಕಾರಿಗಳ ಹುದ್ದೆಗಳ ನೇಮಕಾತಿಗೆ ಕೆಪಿಎಸ್‌ಸಿಗೆ ಪ್ರಸ್ತಾವನೆ ಸಲ್ಲಿಸಿದ್ದರೂ ನೇಮಕಾತಿ ಪ್ರಕ್ರಿಯೆ ವಿಳಂಬವಾಗುವ ಹಿನ್ನೆಲೆಯಲ್ಲಿ 360 ಪಶು ವೈದ್ಯಾಧಿಕಾರಿಗಳನ್ನು ಗುತ್ತಿಗೆ ಮೇಲೆ 74 ನೇಮಕ ಮಾಡಿಕೊಳ್ಳಲಾಗಿದೆ ಎಂದರು. 32 ಪಶುವೈದ್ಯಕೀಯ ಪರೀಕ್ಷಕರ ಹುದೆಗಳಿಗೆ ಅಂತಿಮ ಆಯ್ಕೆ ಪಟ್ಟಿ ಪ್ರಕಟಿ ಸಲಾಗಿದೆ. ಈ ಪೈಕಿ 27 ಅರ್ಹ ಅಭ್ಯರ್ಥಿಗಳಿಗೆ ನೇಮ ಕಾತಿ ಆದೇಶ ನೀಡಲಾಗಿದೆ ಎಂದರು. ಪಶುವೈದ್ಯ ಸಂಸ್ಥೆಗಳ ಕಟ್ಟಡಗಳಿಗೆ ಹಂತ ಹಂತವಾಗಿ ಸ್ವಂತ ಜಾಗ ಒದಗಿಸಲಾಗುವುದು ಎಂದು ಸಚಿವರು ತಿಳಿಸಿದರು.
ಬೆಂಗಳೂರು : ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ 2.5 ಲಕ್ಷ ಅಕ್ರಮ ಪಂಪ್ ಸೆಟ್ ಗಳನ್ನು ಸಕ್ರಮಗೊಳಿಸಲಾಗಿದ್ದು, ಬಾಕಿ ಇರುವ 2 ಲಕ್ಷ ಪಂಪ್ ಸೆಟ್ ಗಳನ್ನು ಇನ್ನೊಂದು ವರ್ಷದಲ್ಲಿ ಸಕ್ರಮಗೊಳಿಸಲಾಗುವುದು ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್ ಹೇಳಿದ್ದಾರೆ. ರಾಜ್ಯಪಾಲರ ಭಾಷಣದ ಮೇಲಿನ ಚರ್ಚೆಯಲ್ಲಿ ಬಿಜೆಪಿ ಸದಸ್ಯ ಸಿ.ಟಿ.ರವಿ ಅವರು, ರಾಜ್ಯದ ಆರ್ಥಿಕ ಪರಿಸ್ಥಿತಿ ಸರಿಯಿಲ್ಲ. ಎಲ್ಲೆಡೆ ಭ್ರಷ್ಟಾಚಾರ ಹೆಚ್ಚಾಗಿದೆ. ರೈತರ ಟ್ರಾನ್ಸ್‌ಫಾರ್ಮರ್ ಅಳವಡಿಸಿಕೊಳ್ಳಲು 2ರಿಂದ 3 ಲಕ್ಷ ಲಂಚ ಕೊಡಬೇಕಿದೆ ಎಂದು ದೂರಿದರು. ಇದಕ್ಕೆ ಆಕ್ಷೇಪಿಸಿದ ಜಾರ್ಜ್ 500 ಮೀ.ಗಿಂತ ಒಳಗಿರುವ ಕೃಷಿ ಪಂಪ್‌ಸೆಟ್‌ಗಳಿಗೆ ಉಚಿತ ಸಂಪರ್ಕ ಕೊಡಲಾಗುತ್ತಿದೆ. 500 ಮೀ. ಗಿಂತ ಹೆಚ್ಚು ಅಂತರವಿರುವ ಕೃಷಿ ಪಂಪ್‌ಸೆಟ್ ಗಳಿಗೆ ವಿಶೇಷ ಯೋಜನೆ ನೀಡಲಾಗುತ್ತಿದೆ ಎಂದರು. “ರೈತರಿಗೆ ನಿರಂತರ 7 ಗಂಟೆ ಸೇರಿದಂತೆ ರಾಜ್ಯದ ಜನರಿಗೆ ದಿನದ 24 ಗಂಟೆಗಳ ಕಾಲ ವಿದ್ಯುತ್ ಪೂರೈಸಲಾಗುತ್ತಿದೆ.ವಿಜಯಪುರ ಜಿಲ್ಲೆಯಲ್ಲಿ 353 ಕೃಷಿ ಮಾರ್ಗಗಳಿಗೆ ಹಗಲು ವೇಳೆ 7 ಗಂಟೆ…
ಬೆಂಗಳೂರು : ರಾಜ್ಯದ ಎಲ್ಲಾ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿರುವ ಕ್ರಮ ಬದ್ಧವಲ್ಲದ ನಿವೇಶನ ಹಾಗೂ ಕಟ್ಟಡಗಳನ್ನು ತೆರಿಗೆ ವ್ಯಾಪ್ತಿಗೆ ಒಳಪಡಿಸಲು ಕ್ರಮ ಕೈಗೊಳ್ಳುತ್ತಿದ್ದು, 2013ಕ್ಕೆ ಮೊದಲು ಅಥವಾ ನಂತರ ನೋಂದಣಿಯಾದ ಎಲ್ಲಾ ನಿವೇಶನ ಹಾಗೂ ಕಟ್ಟಡಗಳಿಗೂ ಇ-ಖಾತೆ ನೀಡಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ವಿಧಾನಸಭೆಯಲ್ಲಿ ಪ್ರಶೋತ್ತರ ಅವಧಿಯಲ್ಲಿ ಮೇಲುಕೋಟೆ ಸದಸ್ಯ ದರ್ಶನ್ ಪುಟ್ಟಣ್ಣಯ್ಯ ಅವರು ಈ ಬಗ್ಗೆ ಪ್ರಸ್ತಾಪಿಸಿದ್ದು, ಗ್ರಾಮ ಪಂಚಾಯ್ತಿಗಳ ವ್ಯಾಪ್ತಿಯಲ್ಲಿ 2013ಕ್ಕಿಂತ ಮೊದಲು ನೋಂದಣಿಯಾದ ನಿವೇಶನಗಳಿಗೆ ಇ-ಖಾತಾ ಅಭಿಯಾನ ಮಾಡಲಾಗುತ್ತಿದೆ. ಆದರೆ 2013ರ ನಂತರನೋಂದಣಿಯಾದ ನಿವೇಶನಗಳಿಗೆ ಇ-ಖಾತೆ ಮಾಡದೆ ತಿರಸ್ಕಾರ ಮಾಡುತ್ತಿದ್ದು, ಒಂದೇ ಕಡೆ ಎರಡು ರೀತಿಯ ನಿಯಮ ಅನುಸರಿಸಲಾಗುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಈ ವೇಳೆ ಮಾತನಾಡಿದ ಸಚಿವ ಪ್ರಿಯಾಂಕ್ ಖರ್ಗೆ ಅವರು, ಗ್ರಾಪಂಗಳ ವ್ಯಾಪ್ತಿಯಲ್ಲಿ ಕ್ರಮ ಬದ್ಧವಲ್ಲದ ನಿವೇಶನಗಳು ಮತ್ತು ಕಟ್ಟಡಗಳಿಗೆ ಇ-ಖಾತಾ ನೀಡಲು ಸರ್ಕಾರ ಬದ್ಧವಾಗಿದೆ. ಸರ್ಕಾರಿ, ಸ್ಥಳೀಯ ಸಂಸ್ಥೆ, ಶಾಸನಬದ್ದ ಸಂಸ್ಥೆ, ಅರಣ್ಯ ಭೂಮಿಯನ್ನು ಹೊರತುಪಡಿಸಿ ಉಳಿದ ಖಾಸಗಿ…
ಬೆಂಗಳೂರು : ರಾಜ್ಯದ ಜನತೆಗೆ ಸರ್ಕಾರವು ಮತ್ತೊಂದು ಸಿಹಿಸುದ್ದಿ ನೀಡಿದ್ದು, ವಂಶವೃಕ್ಷ ಪ್ರಮಾಣಪತ್ರ ಪಡೆಯಲು ಈಗಿರುವ ಮಾನದಂಡವನ್ನು ಸರಳೀಕರಣ ಮಾಡಲಾಗುವುದು ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದ್ದಾರೆ. ವಿಧಾನಪರಿಷತ್ ನಲ್ಲಿ ಬಿಜೆಪಿಯ ವೈ.ಎಂ. ಸತೀಶ್ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವ ಕೃಷ್ಣ ಬೈರೇಗೌಡ, ವಂಶವೃಕ್ಷ ಪಡೆಯಲು ಇಡೀ ರಾಜ್ಯದಲ್ಲಿ ಒಂದೇ ಮಾದರಿಯ ಮಾನದಂಡವಿದೆ. ಪಡಿತರ ಚೀಟಿ ಅಥವಾ ಆಧಾರ್ ಕಾರ್ಡ್ ಅಥವಾ ಮತದಾರರ ಗುರುತಿನ ಚೀಟಿ ಹಾಗೂ ಅರ್ಜಿ ನಮೂನೆಯಲ್ಲಿ ಸ್ವಯಂ ಘೋಷಿತ ಪತ್ರ ಸಲ್ಲಿಸಬೇಕು. ಗ್ರಾಮ ಲೆಕ್ಕಿಗರು ಈ ದಾಖಲೆಗಳೊಂದಿಗೆ ಕ್ಷೇತ್ರ ಪರಿಶೀಲಿಸಿ ನೀಡಿದ ವರದಿ ಆಧಾರದ ಮೇಲೆ ಪ್ರಮಾಣಪತ್ರ ವಿತರಿಸಲಾಗುವುದು. ವಂಶವೃಕ್ಷ ಪ್ರಮಾಣಪತ್ರ ಪಡೆಯಲು ಈಗಿರುವ ಮಾನದಂಡವನ್ನು ಸರಳೀಕರಣ ಮಾಡಲಾಗುವುದು, ಈಗಾಗಲೇ ಈ ಸಂಬಂಧ ಪ್ರಕ್ರಿಯೆ ನಡೆಯುತ್ತಿದೆ ಎಂದು ತಿಳಿಸಿದ್ದಾರೆ.













