Subscribe to Updates
Get the latest creative news from FooBar about art, design and business.
Author: kannadanewsnow57
ಬೆಂಗಳೂರು: ರಾಜ್ಯದ ಅನಧಿಕೃತ ಸ್ವತ್ತುಗಳ ಮಾಲೀಕರಿಗೆ ಗುಡ್ ನ್ಯೂಸ್ ಎನ್ನುವಂತೆ ಆಸ್ತಿ ತೆರಿಗೆ ವ್ಯಾಪ್ತಿಗೆ ತರಲು ಸರ್ಕಾರ ಇ-ಖಾತಾವನ್ನು ನಿಮ್ಮ ಆಸ್ತಿಗಳಿಗೂ ನೀಡಲು ಕ್ರಮವಹಿಸಿದೆ. ಪ್ರಸ್ತುತ ಅನಧಿಕೃತ ಸ್ವತ್ತುಗಳನ್ನು ಆಸ್ತಿ ತೆರಿಗೆ ವ್ಯಾಪ್ತಿಗೆ ಒಳಪಡಿಸಿ ಇ-ಖಾತಾ ನೀಡಲು ಕ್ರಮ ವಹಿಸಲಾಗಿರುತ್ತದೆ ಎಂದು ಪೌರಾಡಳಿತ ಮತ್ತು ಹಜ್ ಸಚಿವ ರಹೀಂಖಾನ್ ಅವರು ತಿಳಿಸಿದರು. ವಿಧಾನ ಮಂಡಲದ ಬಜೆಟ್ ಅಧಿವೇಶನದಲ್ಲಿ ಪ್ರಶ್ನೋತ್ತರ ಕಲಾಪದ ವೇಳೆ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್. ಕೆ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದ ಸಚಿವರು, ಕರ್ನಾಟಕ ಮುನ್ಸಿಪಲ್ ಕಾಯ್ದೆಗಳ ತಿದ್ದುಪಡಿಯಂತೆ ಕರ್ನಾಟಕ ಪೌರಸಭೆಗಳ (ತೆರಿಗೆ) ನಿಯಮಗಳು 1995 ಮತ್ತು ಕರ್ನಾಟಕ ಪೌರನಿಗಮಗಳ ಅಧಿನಿಯಮ 1976 ಶೆಡ್ಯೂಲ್ 3ರ ತೆರಿಗೆ ನಿಯಮಗಳಿಗೆ ತಿದ್ದುಪಡಿ ತರಲಾಗಿದೆ. ಅದರಂತೆ ಅನಧಿಕೃತ ಸ್ವತ್ತುಗಳನ್ನು ತೆರಿಗೆ ವ್ಯಾಪ್ತಿಗೆ ತಂದು ಇ-ಖಾತಾ ವಿತರಿಸಲು ಈಗಾಗಲೇ ಕ್ರಮ ವಹಿಸಲಾಗಿರುತ್ತದೆ ಎಂದು ತಿಳಿಸಿದರು. ಇ-ಆಸ್ತಿ ತಂತ್ರಾಂಶದಲ್ಲಿ ಖಾತಾ ಸೃಜನೆ ಮಾಡಲು ಅನುಸರಿಸಬೇಕಾದ ಕ್ರಮಗಳು ಮತ್ತು ತೆಗೆದುಕೊಳ್ಳಬೇಕಾದ ದಾಖಲೆಗಳ ಕುರಿತು…
ಮಹಾನಗರಪಾಲಿಕೆ ಮತ್ತು ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಬರುವ ಅಧಿಕೃತ, ಅನಧಿಕೃತ ಹಾಗೂ ರೆವಿನ್ಯೂ ಜಾಗದಲ್ಲಿ ನಿರ್ಮಿಸಿರುವ ಕಟ್ಟಡ, ನಿವೇಶನಗಳ ಸ್ವತ್ತುಗಳಿಗೆ ಇ-ಆಸ್ತಿ ನೀಡುವ ಅಭಿಯಾನ ಹಮ್ಮಿಕೊಳ್ಳಲಾಗಿದ್ದು ಸಾರ್ವಜನಿಕರು ಇದರ ಸದುಪಯೋಗ ಪಡೆಯಬೇಕೆಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ತಿಳಿಸಿದರು. ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಇ-ಆಸ್ತಿ ಅಭಿಯಾನ ಕುರಿತು ಚರ್ಚಿಸಲು ಮಹಾನಗರಪಾಲಿಕೆ, ಡಿಯುಡಿಸಿ ಮತ್ತು ನಗರ ಸ್ಥಳೀಯ ಸಂಸ್ಥೆಗಳ ಮುಖ್ಯ ಅಧಿಕಾರಿಗಳೊಂದಿಗೆ ಏರ್ಪಡಿಸಲಾಗಿದ್ದ ಸಭೆಯ ಅಧ್ಯಕ್ಷತೆಯಲ್ಲಿ ಅವರು ಮಾತನಾಡಿದರು. ಕರ್ನಾಟಕ ಪೌರಸಭೆಗಳ ತೆರಿಗೆ ನಿಯಮ 2025 ಮತ್ತು ಕರ್ನಾಟಕ ಮಹಾನಗರಪಾಲಿಕೆ ತೆರಿಗೆ ನಿಯಮ 2025 ನ್ನು ಜಾರಿಗೆ ತಂದಿದ್ದು ಇದರಂತೆ ಪಾಲಿಕೆ ಮತ್ತು ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಎ-ಖಾತಾ ಮತ್ತು ಬಿ-ಖಾತೆ ಪಡೆಯಲು ಅವಕಾಶ ಕಲ್ಪಿಸಲಾಗಿದೆ. ದಿ: 10-09-2024 ರ ಅಂತ್ಯದವರೆಗೆ ಅನಧಿಕೃತ ಬಡಾವಣೆಗಳಲ್ಲಿ ನಿವೇಶನ/ಕಟ್ಟಡಗಳಿಗೆ ಬಿ-ಖಾತೆ ನೀಡಲು ಅವಕಾಶ ಕಲ್ಪಿಸಲಿದ್ದು ಇಂತಹ ಪ್ರಕರಣಗಳ ವ್ಯಾಪ್ರಿಗೆ ಬರುವ ಆಸ್ತಿ ಮಾಲೀಕರು ತಮ್ಮ ವ್ಯಾಪ್ತಿಯ ಪಾಲಿಕೆ, ನಗರಸಭೆ, ಪುರಸಭೆ ಮತ್ತು ಪಟ್ಟಣ…
ರಾಜಸ್ಥಾನ ರಾಜ್ಯ ಕ್ಯಾನ್ಸರ್ ಸಂಸ್ಥೆಯ ಹಿರಿಯ ನರ್ಸಿಂಗ್ ಅಧಿಕಾರಿಯ ಮೇಲೆ ಮಹಿಳಾ ಭದ್ರತಾ ಸಿಬ್ಬಂದಿ ಮತ್ತು ಇತರ ಮಹಿಳೆಯರು ಹಲ್ಲೆ ನಡೆಸಿದ್ದಾರೆ. ಮಹಿಳೆಯರು ಅವನ ಮೇಲೆ ಕಿರುಕುಳದ ಆರೋಪವನ್ನೂ ಹೊರಿಸಿದರು. ಅಧಿಕಾರಿಯೊಬ್ಬರು ಸೋಮವಾರ ಈ ಮಾಹಿತಿ ನೀಡಿದ್ದಾರೆ. ಶನಿವಾರ ಈ ಘಟನೆ ನಡೆದಿದ್ದು, ಹಿರಿಯ ನರ್ಸಿಂಗ್ ಅಧಿಕಾರಿ ಮಹೇಶ್ ಗುಪ್ತಾ ಅವರ ಕಾಲರ್ ಹಿಡಿದು ಕೊಠಡಿಯಿಂದ ಹೊರಗೆ ಎಳೆದೊಯ್ದರು.ಇದಾದ ನಂತರ ಕೆಲವು ಮಹಿಳಾ ಉದ್ಯೋಗಿಗಳು ತಮ್ಮನ್ನು ಸುತ್ತುವರೆದು ಹೊರಗೆ ಕರೆದೊಯ್ದರು, ಅಲ್ಲಿ ಅವರು ಗುಪ್ತಾಗೆ ಕಪಾಳಮೋಕ್ಷ ಮಾಡಿದ್ದಾರೆ. . ನರ್ಸಿಂಗ್ ಅಧಿಕಾರಿ ಮಹಿಳಾ ಉದ್ಯೋಗಿಗಳನ್ನು ಕೆಲವೊಮ್ಮೆ ಹೋಟೆಲ್‌ನಲ್ಲಿ ಮತ್ತು ಕೆಲವೊಮ್ಮೆ ಫ್ಲಾಟ್‌ಗೆ ಭೇಟಿಯಾಗಲು ಕೇಳಿಕೊಳ್ಳುತ್ತಿದ್ದರು ಎಂದು ಮಹಿಳೆಯರು ಆರೋಪಿಸಿದ್ದಾರೆ. ಆಸ್ಪತ್ರೆಯ ಸೂಪರಿಂಟೆಂಡೆಂಟ್ ಡಾ. ಸಂದೀಪ್ ಜಸುಜಾ ಮಾತನಾಡಿ, ಸೋಮವಾರ ಎರಡೂ ಕಡೆಯವರು ಪರಸ್ಪರ ದೂರು ದಾಖಲಿಸಿಕೊಂಡಿದ್ದು, ನಂತರ ಇಡೀ ವಿಷಯದ ತನಿಖೆಗಾಗಿ ಸಮಿತಿಯನ್ನು ರಚಿಸಲಾಗಿದೆ. ಈ ಸಂಬಂಧ ಪ್ರತಾಪ್ ನಗರ ಪೊಲೀಸ್ ಠಾಣೆಯಲ್ಲಿ ಪೊಲೀಸ್ ದೂರು ದಾಖಲಾಗಿದೆ ಎಂದು ಅವರು ಮಾಹಿತಿ…
ಬೆಂಗಳೂರು : ಗೃಹಲಕ್ಷ್ಮೀ ಯೋಜನೆಗೆ ಅಕ್ಟೋಬರ್ ಹಾಗೂ ನವೆಂಬರ್ ತಿಂಗಳಲ್ಲಿ ಅರ್ಜಿ ಸಲ್ಲಿಸಿದ ಮಹಿಳೆಯರ ಖಾತೆಗೆ ಗೃಹಲಕ್ಷ್ಮೀ ಯೋಜನೆಯ ಮೊತ್ತ ಜಮೆಯಾಗಿದೆ. ರಾಜ್ಯದ ಯಜಮಾನಿ ಮಹಿಳೆಯರು ನಿರೀಕ್ಷೆ ಮಾಡುತ್ತಿದ್ದಂತ ಗೃಹ ಲಕ್ಷ್ಮೀ ಯೋಜನೆಯ ಬಾಕಿ ಹಣವನ್ನು ಬ್ಯಾಂಕ್ ಖಾತೆಗೆ ಜಮಾ ಮಾಡಲಾಗುತ್ತಿದೆ. ಇಂದು ಅನೇಕ ಯಜಮಾನಿ ಮಹಿಳೆಯರಿಗೆ ರೂ.2000 ಬಾಕಿ ಹಣವನ್ನು ಬ್ಯಾಂಕ್ ಖಾತೆಗೆ ಜಮಾ ಮಾಡಲಾಗಿದೆ. ರಾಜ್ಯ ಸರ್ಕಾರವು ಎರಡು ತಿಂಗಳಿನಿಂದ ಯಜಮಾನಿಯರಿಗೆ ಗೃಹ ಲಕ್ಷ್ಮೀ ಯೋಜನೆಯ ಹಣವನ್ನು ಜಮಾ ಮಾಡಿರಲಿಲ್ಲ. ಒಟ್ಟಿಗೆ ಮುಂದಿನ ವಾರ ಹಣ ವರ್ಗಾವಣೆ ಮಾಡುವುದಾಗಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕೂಡ ತಿಳಿಸಿದ್ದರು. ಅದರಂತೆ ಇಂದು ಅನೇಕ ಯಜಮಾನಿಯರ ಬ್ಯಾಂಕ್ ಖಾತೆಗೆ ರೂ.2000 ಬಾಕಿ ಹಣ ಜಮಾಗೊಂಡಿದೆ. ನಿಮಗೆ ಗೃಹ ಲಕ್ಷ್ಮೀ ಯೋಜನೆ ಹಣ ( Gruhalkahsmi Scheme ) ಬಂದಿದ್ಯಾ ಅಂತ ಹೀಗೆ ಚೆಕ್ ಮಾಡಿ ಹಂತ 1: ನಿಮ್ಮ ಪೋನಿನಲ್ಲಿ ಗೂಗಲ್ ಪ್ಲೇ ಸ್ಟೋರ್ ಗೆ ಹೋಗಿ, DBT Karnataka application ಅಂತ…
ಬೆಂಗಳೂರು : ರಾಜ್ಯ ಸರ್ಕಾರವು ಮಹಿಳೆಯರಿಗೆ ಮತ್ತೊಂದು ಗುಡ್ ನ್ಯೂಸ್ ನೀಡಿದ್ದು, ಕೇರಳ ಮಾದರಿಯಲ್ಲಿ ಎಂ.ಎಸ್.ಐ.ಎಲ್ ಮೂಲಕ ಚಿಟ್ ಫಂಡ್ ವ್ಯವಸ್ಥೆ ಜಾರಿಗೆ ಚಿಂತನೆ ನಡೆಸಲಾಗಿದೆ. ಈ ಕುರಿತು ಕೈಗಾರಿಕಾ ಸಚಿವರಾದ ಎಂ.ಬಿ.ಪಾಟೀಲ್ ಅವರು ಮಾಹಿತಿ ನೀಡಿದ್ದು, ಕೇರಳ ಮಾದರಿಯಲ್ಲಿ ಎಂ.ಎಸ್.ಐ.ಎಲ್. ಮೂಲಕ ಚಿಟ್ ಫಂಡ್ ವ್ಯವಸ್ಥೆ ಜಾರಿ ಮಾಡಿ ಮಹಿಳಾ ಸ್ವ ಸಹಾಯ ಗುಂಪುಗಳಿಗೆ ಶಕ್ತಿ ತುಂಬಲು ಚಿಂತನೆ ನಡೆಸಲಾಗುತ್ತಿದೆ. ಸರ್ಕಾರದ ಬೆಂಬಲವಿರುವ ಈ ಚಿಟ್ ಫಂಡ್ ವ್ಯವಸ್ಥೆ ಸಂಪೂರ್ಣ ಸುರಕ್ಷಿತ ಮತ್ತು ವಿಶ್ವಾಸಾರ್ಹವಾಗಿದ್ದು, ಮಹಿಳಾ ಶಕ್ತಿ ಮತ್ತು ಆತ್ಮವಿಶ್ವಾಸವನ್ನು ಉತ್ತೇಜಿಸುವಲ್ಲಿ ಮಹತ್ವದ ಹೆಜ್ಜೆಯಾಗಲಿದೆ ಎಂದು ತಿಳಿಸಿದ್ದಾರೆ.
ನವದೆಹಲಿ : ಸಾರ್ವಜನಿಕ ಸ್ಥಳಗಳಲ್ಲಿ ತಾಯಂದಿರು ತಮ್ಮ ನವಜಾತ ಶಿಶುಗಳಿಗೆ ಹಾಲುಣಿಸುವುದನ್ನು ನಿರುತ್ಸಾಹಗೊಳಿಸುವ ಯಾವುದೇ ಮಾತನ್ನು ಹೇಳಬೇಡಿ ಎಂದು ಸುಪ್ರೀಂ ಕೋರ್ಟ್ ಸರ್ಕಾರಕ್ಕೆ ತಿಳಿಸಿದ್ದು, ಮುಗ್ಧ ಮಕ್ಕಳು ಮತ್ತು ಮಹಿಳೆಯರ ಕಡೆಗೆ ಜನರಿಗೆ ತಮ್ಮ ಕರ್ತವ್ಯವನ್ನು ನೆನಪಿಸುತ್ತಾ, ಸಾರ್ವಜನಿಕ ಸ್ಥಳಗಳಲ್ಲಿ ಶಿಶು ಆರೈಕೆ ಕೊಠಡಿಗಳನ್ನು ನಿರ್ಮಿಸುವಂತೆ ನ್ಯಾಯಾಲಯವು ಸರ್ಕಾರಕ್ಕೆ ಸೂಚಿಸಿದೆ. ‘ಮಾತೃ ಸ್ಪರ್ಶ’ ಎಂಬ ಸಂಘಟನೆ ಸಲ್ಲಿಸಿದ ಅರ್ಜಿಯಲ್ಲಿ, ಕೆಲವು ಅಪವಾದಗಳನ್ನು ಹೊರತುಪಡಿಸಿ, ವಿಮಾನ ನಿಲ್ದಾಣಗಳು ಮತ್ತು ರೈಲು ನಿಲ್ದಾಣಗಳಂತಹ ಪ್ರಮುಖ ಕಟ್ಟಡಗಳಲ್ಲಿಯೂ ನವಜಾತ ಶಿಶುಗಳ ಆರೈಕೆಗೆ ಅಗತ್ಯವಾದ ಕೊಠಡಿಗಳನ್ನು ಒದಗಿಸಲಾಗಿಲ್ಲ ಎಂದು ಹೇಳಲಾಗಿದೆ. ಈ ಕಟ್ಟಡಗಳ ಹೊರತಾಗಿ, ಈ ಸೌಲಭ್ಯವು ಎಲ್ಲಾ ಸಾರ್ವಜನಿಕ ಸ್ಥಳಗಳಲ್ಲಿ ಲಭ್ಯವಾಗುವಂತೆ ಮಾಡಬೇಕು. ಇದರಿಂದ ಮಗುವಿಗೆ ತಾಯಿಯ ಹಾಲು ಆರಾಮವಾಗಿ ಕುಡಿಯಲು ಸಾಧ್ಯವಾಗುತ್ತದೆ ಮತ್ತು ತಾಯಿಯೂ ಯಾವುದೇ ಅಹಿತಕರ ಪರಿಸ್ಥಿತಿಯನ್ನು ಎದುರಿಸಬೇಕಾಗಿಲ್ಲ. 2022 ರಲ್ಲಿ, ಈ ಅರ್ಜಿಯ ಕುರಿತು ಸುಪ್ರೀಂ ಕೋರ್ಟ್ ಕೇಂದ್ರ ಮತ್ತು ಎಲ್ಲಾ ರಾಜ್ಯಗಳಿಗೆ ನೋಟಿಸ್ ಜಾರಿ ಮಾಡಿತ್ತು. ನ್ಯಾಯಾಧೀಶರು ಇದನ್ನು ಒಂದು…
ಶತಮಾನಗಳಿಂದ, ಮಾನವರು ಆಹಾರದ ಕೊರತೆ ಮತ್ತು ರೋಗಗಳನ್ನು ನಿಭಾಯಿಸಲು ಮತ್ತು ಅದಕ್ಕೆ ಸಂಬಂಧಿಸಿದ ಸಮಸ್ಯೆಗಳನ್ನು ನಿವಾರಿಸಲು ಹೆಣಗಾಡುತ್ತಿದ್ದಾರೆ. ಆಗ ಜಗತ್ತಿನ ಎಲ್ಲೆಡೆ ಜನರು ಕಡಿಮೆ ತೂಕ ಹೊಂದಿದ್ದರು. ಸುಮಾರು 100 ವರ್ಷಗಳ ಹಿಂದೆ, ಅನೇಕ ಸಂಸ್ಕೃತಿಗಳಲ್ಲಿ, ಅಧಿಕ ತೂಕವಿರುವುದನ್ನು ಸಂಪತ್ತು ಮತ್ತು ಸಮೃದ್ಧಿಯ ಸಂಕೇತವೆಂದು ಪರಿಗಣಿಸಲಾಗುತ್ತಿತ್ತು ಮತ್ತು ಅದರ ಬಗ್ಗೆ ಚಿಂತಿಸುತ್ತಿರಲಿಲ್ಲ. ಆದರೆ ಇದೇ ಮೊದಲ ಬಾರಿಗೆ ವಿಮಾ ಕಂಪನಿಗಳು ಬೊಜ್ಜುತನವನ್ನು ಮರಣ ಅಂಕಿಅಂಶಗಳೊಂದಿಗೆ ಜೋಡಿಸಲು ಪ್ರಾರಂಭಿಸಿದ ಸಮಯ. 1960 ರ ದಶಕವು ಬೊಜ್ಜುತನಕ್ಕೆ ನಿರ್ಣಾಯಕ ಸಮಯವಾಗಿತ್ತು. ಈಗ ಆಹಾರ ಮತ್ತು ಪಾನೀಯಗಳಲ್ಲಿ ಸ್ವಲ್ಪ ಸುಧಾರಣೆ ಕಂಡುಬಂದಿದೆ ಮತ್ತು ಕಠಿಣ ಪರಿಶ್ರಮದಲ್ಲಿಯೂ ಇಳಿಕೆ ಕಂಡುಬಂದಿದೆ. ಮುಂದಿನ ಶತಮಾನದ ಹೊತ್ತಿಗೆ, ಅಂದರೆ 2000ನೇ ಇಸವಿಯ ಹೊತ್ತಿಗೆ, ಮಾನವ ವಿಕಾಸದ ಹಾದಿಯಲ್ಲಿ ಮೊದಲ ಬಾರಿಗೆ, ಅಧಿಕ ತೂಕ ಹೊಂದಿರುವ ಜನರ ಸಂಖ್ಯೆ ಕಡಿಮೆ ತೂಕ ಹೊಂದಿರುವ ಜನರ ಸಂಖ್ಯೆಯನ್ನು ಮೀರಿಸಿತು. 19 ನೇ ಶತಮಾನ ಮುಗಿಯುವ ಮೊದಲೇ ಬೊಜ್ಜುತನವನ್ನು ಒಂದು ಸಮಸ್ಯೆಯಾಗಿ ನೋಡಲಾಗುತ್ತಿತ್ತು. ಈ…
ಬೆಂಗಳೂರು : ರಾಜ್ಯದ ಸರ್ಕಾರಿ ಕಛೇರಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಮಹಿಳಾ ಸಿಬ್ಬಂದಿಗಳಿಗೆ ಪ್ರತ್ಯೇಕ ವಿಶ್ರಾಂತಿ ಕೊಠಡಿ ವ್ಯವಸ್ಥೆ ಒದಗಿಸುವ ಬಗ್ಗೆ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ, ಉಲ್ಲೇಖಿತ ಮನವಿಯನ್ನು ಇದರೊಂದಿಗೆ ಲಗತ್ತಿಸಿದೆ. ಸದರಿ ಮನವಿಯಲ್ಲಿ ರಾಜ್ಯದ ಸರ್ಕಾರಿ ಕಛೇರಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಮಹಿಳಾ ಸಿಬ್ಬಂದಿಗಳಿಗೆ ಪ್ರತ್ಯೇಕ ವಿಶ್ರಾಂತಿ ಕೊಠಡಿಯನ್ನು ಕಲ್ಪಿಸುವಂತೆ ಕೋರಲಾಗಿದೆ. ಬೆಂಗಳೂರು ನಗರ ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳ ಸರ್ಕಾರಿ ಕಛೇರಿಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳಾ ಸಿಬ್ಬಂದಿಗಳು ಕಾರ್ಯನಿರ್ವಹಿಸುತ್ತಿರುವುದು ಹಾಗೂ ಮಹಿಳಾ ಸಿಬ್ಬಂದಿಗಳಿಗೆ ಪ್ರತ್ಯೇಕ ವಿಶ್ರಾಂತಿ ಕೊಠಡಿ ಇಲ್ಲದಿರುವುದು ಕಂಡು ಬಂದಿರುತ್ತದೆ. ಈ ಕುರಿತು ತಮ್ಮ ಅಧೀನದಲ್ಲಿ ಬರುವ ಸರ್ಕಾರಿ ಕಛೇರಿಗಳಲ್ಲಿ ಮಹಿಳಾ ಸಿಬ್ಬಂದಿಗಳಿಗೆ ಪ್ರತ್ಯೇಕ ವಿಶ್ರಾಂತಿ ಕೊಠಡಿ ವ್ಯವಸ್ಥೆ ಇರುವ ಕುರಿತ ಮಾಹಿತಿಯನ್ನು “ದಿನಾಂಕ: 10.03.2025 ರೊಳಗೆ ಅತೀ ತುರ್ತಾಗಿ” ಒದಗಿಸುವಂತೆ ಕೋರಿದೆ.
ಬೆಂಗಳೂರು : ರಾಜ್ಯದ ಸರ್ಕಾರಿ ಕಛೇರಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಮಹಿಳಾ ಸಿಬ್ಬಂದಿಗಳಿಗೆ ಪ್ರತ್ಯೇಕ ವಿಶ್ರಾಂತಿ ಕೊಠಡಿ ವ್ಯವಸ್ಥೆ ಒದಗಿಸುವ ಬಗ್ಗೆ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ, ಉಲ್ಲೇಖಿತ ಮನವಿಯನ್ನು ಇದರೊಂದಿಗೆ ಲಗತ್ತಿಸಿದೆ. ಸದರಿ ಮನವಿಯಲ್ಲಿ ರಾಜ್ಯದ ಸರ್ಕಾರಿ ಕಛೇರಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಮಹಿಳಾ ಸಿಬ್ಬಂದಿಗಳಿಗೆ ಪ್ರತ್ಯೇಕ ವಿಶ್ರಾಂತಿ ಕೊಠಡಿಯನ್ನು ಕಲ್ಪಿಸುವಂತೆ ಕೋರಲಾಗಿದೆ. ಬೆಂಗಳೂರು ನಗರ ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳ ಸರ್ಕಾರಿ ಕಛೇರಿಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳಾ ಸಿಬ್ಬಂದಿಗಳು ಕಾರ್ಯನಿರ್ವಹಿಸುತ್ತಿರುವುದು ಹಾಗೂ ಮಹಿಳಾ ಸಿಬ್ಬಂದಿಗಳಿಗೆ ಪ್ರತ್ಯೇಕ ವಿಶ್ರಾಂತಿ ಕೊಠಡಿ ಇಲ್ಲದಿರುವುದು ಕಂಡು ಬಂದಿರುತ್ತದೆ. ಈ ಕುರಿತು ತಮ್ಮ ಅಧೀನದಲ್ಲಿ ಬರುವ ಸರ್ಕಾರಿ ಕಛೇರಿಗಳಲ್ಲಿ ಮಹಿಳಾ ಸಿಬ್ಬಂದಿಗಳಿಗೆ ಪ್ರತ್ಯೇಕ ವಿಶ್ರಾಂತಿ ಕೊಠಡಿ ವ್ಯವಸ್ಥೆ ಇರುವ ಕುರಿತ ಮಾಹಿತಿಯನ್ನು “ದಿನಾಂಕ: 10.03.2025 ರೊಳಗೆ ಅತೀ ತುರ್ತಾಗಿ” ಒದಗಿಸುವಂತೆ ಕೋರಿದೆ.
ಬೆಂಗಳೂರು : ಬೆಂಗಳೂರಿನಲ್ಲಿ ಸರ್ಕಾರಿ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿ ಆರೋಪದ ಹಿನ್ನೆಲೆ ಯೂಟ್ಯೂಬರ್ ಶಬಾಜ್ ಖಾನ್ ನನ್ನು ಪೊಲೀಸರು ಬಂಧಿಸಿದ್ದಾರೆ. ಯೂಟ್ಯೂಬರ್ ಶಬಾಜ್ ಖಾನ್ ಉಪ ಔಷಧ ನಿಯಂತ್ರಣ ಅಧಿಕಾರಿ ಕಚೇರಿಗೆ ನುಗ್ಗಿ ಬೆದರಿಕೆ ಹಾಕಿದ ಆರೋಪದ ಹಿನ್ನೆಲೆಯಲ್ಲಿ ಬೆಂಗಳೂರಿನ ಹೈಗ್ರೌಂಡ್ಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಫಾರ್ಮಸಿಗಳಿಗೂ ನುಗ್ಗಿ ಬೆದರಿಕೆ ಹಾಕಿ ಹಣಕ್ಕೆ ಬೇಡಿಕೆಯಿಡ್ಡಿ ದಾಂಧಲೆ ನಡೆಸಲಾಗಿತ್ತು ಎನ್ನುವ ಆರೋಪದ ಹಿನ್ನೆಲೆಯಲ್ಲಿ ಹೈಗ್ರೌಂಡ್ಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಆರೋಪಿಯನ್ನು ಬಂಧಿಸಿ ತನಿಖೆ ನಡೆಸುತ್ತಿದ್ದಾರೆ.











