Author: kannadanewsnow57

ಬೆಂಗಳೂರು : ಸಾರ್ವತ್ರಿಕ ರಜಾ ದಿನಗಳೂ ಒಳಗೊಂಡಂತೆ ಎಲ್ಲ ದಿನಗಳಲ್ಲಿಯೂ ಅಧಿಕಾರಿಗಳು ತಪ್ಪದೆ ಕೇಂದ್ರ ಸ್ಥಾನದಲ್ಲಿರಬೇಕು ಎಂದು ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಜಿಲ್ಲಾಧಿಕಾರಿಗಳು ಕೆಲವು ಬಾರಿ ಜಿಲ್ಲಾ ಮತ್ತು ತಾಲ್ಲೂಕು ಸ್ಥಳಗಳಲ್ಲಿ ಅನಿರೀಕ್ಷಿತ ಭೇಟಿ ನೀಡಿದ  ಸಂದರ್ಭದಲ್ಲಿ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು ಕೇಂದ್ರ ಸ್ಥಾನದಲ್ಲಿರದೆ, ಕೇಂದ್ರ ಬಿಟ್ಟು ತೆರಳುತ್ತಿರುವುದು ಜಿಲ್ಲಾಡಳಿತದ ಗಮನಕ್ಕೆ ಬಂದಿರುತ್ತದೆ.  ಒಂದು ವೇಳೆ ಸರ್ಕಾರಿ ಕೆಲಸ ಕಾರ್ಯ ನಿಮಿತ್ತ ಅಥವಾ ತುರ್ತು ವೈಯಕ್ತಿಕ ಕಾರ್ಯಗಳಿಗೆ ಕೇಂದ್ರ ಸ್ಥಾನ ಬಿಡುವ ಸಂದರ್ಭಗಳಿದ್ದಲ್ಲಿ ಜಿಲ್ಲಾಧಿಕಾರಿಗಳ ಪೂರ್ವಾನುಮತಿ ಪಡೆಯಬೇಕು, ತಪ್ಪಿದಲ್ಲಿ ಅಂತಹವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು ರಾಜ್ಯ ಸರ್ಕಾರ ತಿಳಿಸಿದೆ.

Read More

ಬೆಂಗಳೂರು : ರಾಜ್ಯ ಸರ್ಕಾರದ 2026ನೇ ಸಾಲಿನ ಸಾರ್ವತ್ರಿಕರಜಾದಿನಗಳ ಪಟ್ಟಿಗೆ ಗುರುವಾರ ನಡೆದ ಸಚಿವ ಸಂಪುಟ ಸಭೆ ಮಂಜೂರಾತಿ ನೀಡಿದ್ದು, 20 ಸಾರ್ವತ್ರಿಕ ರಜಾ ದಿನಗಳ ಪಟ್ಟಿಯನ್ನು ರಾಜ್ಯ ಸರ್ಕಾರ ಪ್ರಕಟಿಸಿದೆ. ಒಟ್ಟು 20 ಸಾರ್ವತ್ರಿಕ ರಜೆ ದಿನ ಹಾಗೂ 21 ಪರಿಮಿತ ರಜಾ ದಿನಗಳ ಪಟ್ಟಿಗೆ ಮಂಜೂರಾತಿ ನೀಡಿದ್ದು, ಭಾನುವಾರ ಬರುವ ಮಹಾ ಶಿವರಾತ್ರಿ (ಫೆ.15), ಮಹರ್ಷಿ ವಾಲ್ಮೀಕಿ ಜಯಂತಿ (ಅ.25), ಕನ್ನಡ ರಾಜ್ಯೋತ್ಸವ (ನ.1) ಹಾಗೂ ನರಕ ಚತುರ್ದಶಿ (ನ.8) ಮತ್ತು ಎರಡನೇ ಶನಿವಾರದಂದು ಬರುವ ಮಹಾಲಯ ಅಮವಾಸ್ಯೆಯನ್ನು (ಅ.10) ಸಾರ್ವತ್ರಿಕ ರಜೆ ದಿನಗಳ ಪಟ್ಟಿಯಲ್ಲಿ ನಮೂದಿಸಿಲ್ಲ. ಸಾರ್ವತ್ರಿಕ ರಜಾ ದಿನಗಳಲ್ಲಿ ರಾಜ್ಯಾದ್ಯಂತ ಸರ್ಕಾರಿ ಕಛೇರಿಗಳು ಮುಚ್ಚಲ್ಪಡುತ್ತವೆ. ಕಛೇರಿಯ ಜರೂರು ಕೆಲಸವನ್ನು ವಿಲೇವಾರಿ ಮಾಡುವ ಬಗ್ಗೆ ಇಲಾಖಾ ಮುಖ್ಯಸ್ತರುಗಳು ಸೂಕ್ತ ವ್ಯವಸ್ಥೆ ಮಾಡತಕ್ಕದ್ದು. ಈ ಪಟ್ಟಿಯಲ್ಲಿ ಸೇರಿಸಲಾಗಿರುವ ಮುಸಲ್ಮಾನ ಬಾಂಧವರ ಹಬ್ಬಗಳು ನಿಗಧಿತ ದಿನಾಂಕದಂದು ಬೀಳದಿದ್ದರೆ ಸರ್ಕಾರಿ ಸೇವೆಯಲ್ಲಿರುವ ಮುಸಲ್ಮಾನ ಬಾಂಧವರಿಗೆ ನಿಗಧಿತ ರಜೆಗೆ ಬದಲಾಗಿ ಹಬ್ಬದ ದಿವಸ…

Read More

ನವದೆಹಲಿ : ಮೇಕೆದಾಟು ಯೋಜನೇ ಸಂಬಂಧ ಕರ್ನಾಟಕಕ್ಕೆ ಸುಪ್ರೀಂ ಕೋರ್ಟ್ ನಲ್ಲಿ ಗೆಲುವು ಸಿಕ್ಕಿದೆ. ತಮಿಳುನಾಡು ಸಲ್ಲಿಸಿದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಇದೀಗ ವಜಾಗೊಳಿಸಿದೆ. ಹೌದು ಕಳೆದ 7 ವರ್ಷಗಳಿಂದ ತಮಿಳುನಾಡು ಮೆಕೇದಾಟು ಯೋಜನೆಗೆ ಅಡ್ಡಗಾಲು ಹಾಕಿತ್ತು. ಸುಪ್ರೀಂಕೋರ್ಟ್ ನಲ್ಲಿ ತಮಿಳುನಾಡು ಅರ್ಜಿ ಸಲ್ಲಿಸಿ ಅಡ್ಡಗಾಲು ಹಾಕಿತ್ತು. ಇದೀಗ ತಮಿಳುನಾಡು ಸಲ್ಲಿಸಿದ ರಿಟ್ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ. ಈ ಮೂಲಕ ಕರ್ನಾಟಕಕ್ಕೆ ಸುಪ್ರೀಂ ಕೋರ್ಟ್ ನಲ್ಲಿ ಜಯ ದೊರೆತಿದೆ. ಇದರಲ್ಲಿ ಮಧ್ಯ ಪ್ರವೇಶ ಮಾಡಲ್ಲ ಅಂತ ಸುಪ್ರೀಂ ಕೋರ್ಟ್ ವಿಚಾರಣೆ ವೇಳೆ ತಿಳಿಸಿದೆ. ಮೇಕೆದಾಟು ಯೋಜನೆ ಇನ್ನು ಆರಂಭಿಕ ಹಂತದಲ್ಲಿ ಇದೆ. ಯಾವುದೇ ನಿರ್ಮಾಣ ಕಾರ್ಯ ಪ್ರಾರಂಭವಾಗಿಲ್ಲ. ಈ ಯೋಜನೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಮತ್ತು ಕೇಂದ್ರ ಜಲ ಆಯೋಗದಂತಹ ತಜ್ಞ ಸಂಸ್ಥೆಗಳ ಪರಿಶೀಲನೆಯಲ್ಲಿದೆ. ಹೀಗಾಗಿ ಮಧ್ಯಪ್ರವೇಶ ಮಾಡಲ್ಲ ಎಂದು ಸುಪ್ರೀಂಕೋರ್ಟ್ ತಮಿಳುನಾಡು ಸಲ್ಲಿಸಿದ್ದ ಪರಿಟ್ ಅರ್ಜಿ ವಜಾ ಗೊಳಿಸಿ ಆದೇಶ ಹೊರಡಿಸಿದೆ.

Read More

ಬೆಂಗಳೂರು : ರಾಜ್ಯದ ಎಲ್ಲ ಸರ್ಕಾರಿ ಶಾಲಾ ಕಾಲೇಜುಗಳ ಎಲ್ಲ ಪ್ರಮುಖ ಪಾಲುದಾರರನ್ನು ತಲುಪಲು ನವೆಂಬರ್ 14 ರಂದು ಮಕ್ಕಳ ದಿನಾಚರಣೆಯ ಪ್ರಯುಕ್ತ ಜಿಲ್ಲೆಯಾದ್ಯಂತ ಏಕಕಾಲದಲ್ಲಿ 2025-26 ನೇ ಸಾಲಿನ ಪೋಷಕ-ಶಿಕ್ಷಕರ ಮಹಾಸಭೆಯನ್ನು ಎಲ್ಲಾ ಸರ್ಕಾರಿ ಪ್ರಾಥಮಿಕ, ಪ್ರೌಢಶಾಲೆಗಳು ಮತ್ತು ಪದವಿ ಪೂರ್ವ ಕಾಲೇಜುಗಳಲ್ಲಿ ಆಯೋಜಿಸಲು ಉದ್ದೇಶಿಸಲಾಗಿದೆ. ಸರ್ಕಾರಿ ಶಾಲೆಗಳು ಮತ್ತು ಕಾಲೇಜುಗಳು ಎಲ್ಲಾ ಅರ್ಹ ವಯಸ್ಸಿನ ಮಕ್ಕಳಿಗೆ ಒಳಗೊಳ್ಳುವಿಕೆ, ಪ್ರವೇಶಾವಕಾಶ ಮತ್ತು ಸಮಾನತೆಯ ಮೂಲಕ ಶಿಕ್ಷಣವನ್ನು ಒದಗಿಸುತ್ತಿವೆ. ಸರ್ಕಾರಿ ಶಾಲೆ, ಕಾಲೇಜುಗಳು ಎಸ್.ಡಿ.ಎಂ.ಸಿ., ಸಿ.ಡಿ.ಸಿ. ಮತ್ತು ಒಟ್ಟಾರೆ ಸಮುದಾಯದ ಹಿತಾಸಕ್ತಿಗಳ ಫಲಶ್ರುತಿಯಾಗಿವೆ. ಈ ನಿಟ್ಟಿನಲ್ಲಿ ಶಾಲಾ ಕಾಲೇಜುಗಳಲ್ಲಿ ದಾಖಲಾತಿಯನ್ನು ಹೆಚ್ಚಿಸುವ ಮೂಲಕ ಸರ್ಕಾರಿ ಶಾಲಾ-ಕಾಲೇಜುಗಳ ಬಗ್ಗೆ ಪೋಷಕರಲ್ಲಿ ಭರವಸೆಯನ್ನು ಹೆಚ್ಚಿಸಲು ಉದ್ದೇಶಿಸಲಾಗಿದೆ. ಮಕ್ಕಳ ಕಲಿಕೆಯು ಶಾಲೆ, ಮನೆ ಮತ್ತು ಸಮಾಜಗಳ ನಡುವೆ ನಿರಂತರ ಸಂಪರ್ಕವನ್ನು ಕಲ್ಪಿಸುತ್ತದೆ. ಮಕ್ಕಳ ಸವಾರ್ಂಗೀಣ ಅಭಿವೃದ್ಧಿಯಲ್ಲಿ ಪೆÇೀಷಕರ ಪಾತ್ರ ಅತ್ಯಂತ ಪ್ರಮುಖವಾಗಿದ್ದು ಅವರನ್ನು ಈ ಪ್ರಕ್ರಿಯೆಯಲ್ಲಿ ತೊಡಗಿಸಿಕೊಳ್ಳುವುದು ಈ ಕಾರ್ಯಕ್ರಮದ ಪ್ರಮುಖ ಉದ್ದೇಶವಾಗಿದೆ ಎಂದು ಎಸ್.ಎಸ್.ಕೆಳದಿಮಠ…

Read More

ಬೆಂಗಳೂರು : ರಾಜ್ಯದ ಎಸ್ ಎಸ್ ಎಲ್ ಸಿ ಹಾಗೂ ಪಿಯುಸಿ ವಿದ್ಯಾರ್ಥಿಗಳ ತೇರ್ಗಡೆಗೆ ನಿಗದಿಪಡಿಸಿರುವ ಶೇ.33 ರಷ್ಟು ಅಂಕ ಈ ಶೈಕ್ಷಣಿಕ ವರ್ಷದಿಂದಲೇ ಅನ್ವಯವಾಗಲಿದೆ ಎಂದು ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಎಸ್ ಎಸ್ ಎಲ್ ಸಿ ಹಾಗೂ ಪಿಯುಸಿಯ ಉತ್ತೀರ್ಣತೆಯ ಕನಿಷ್ಠ ಅಂಕವನ್ನು ಶೇ.33 ಕ್ಕೆ ನಿಗದಿ ಮಾಡಿ ಸರ್ಕಾರ ಅಧಿಕೃತ ಆದೇಶ ಹೊರಡಿಸಿದ ನಂತರವೂ ಕೆಲವರು ವಿರೋಧಿಸುತ್ತಿದ್ದಾರೆ. ಆದರೆ ಲಕ್ಷಾಂತರ ಮಕ್ಕಳಿಗೆ ಕೆಲವೊಮ್ಮೆ ಎರಡು ಅಂಕಗಳೇ ನಿರ್ಣಾಯಕವಾಗಿರುತ್ತವೆ. ಒಬ್ಬ ವ್ಯಕ್ತಿ ಇಂದು ಚಾಲನಾ ಪರವಾನಗಿ ಪಡೆಯಲು ಎಸ್ ಎಸ್ ಎಲ್ ಸಿ ಅಂಕಪಟ್ಟಿ ನೀಡಬೇಕಾಗುತ್ತದೆ ಎಂದರು. ರಾಜ್ಯದಲ್ಲಿ ಮೂರು ಪರೀಕ್ಷೆಗಳನ್ನು ಪರಿಚಯಿಸಿದ್ದರಿಂದ ವಿದ್ಯಾರ್ಥಿಗಳ ಭವಿಷ್ಯ ಹಸನಾಗುತ್ತಿದೆ. ಎಸ್ಎಸ್ಎಲ್ಸಿ ನಂತರ ಶಿಕ್ಷಣ ತೊರೆಯುವವರ ಸಂಖ್ಯೆ ಗಣನೀಯವಾಗಿ ಕಡಿಮೆಯಾಗಿದೆ ಎಂದು ಹೇಳಿದರು. 6,000 KPS ಶಾಲೆ ತೆರೆಯಲು ಚಿಂತನೆ- ಸಚಿವ ಮಧು ಬಂಗಾರಪ್ಪ ರಾಜ್ಯದಲ್ಲಿ 6,000 ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ತಲಾ ಒಂದರಂತೆ 6…

Read More

ಬೆಂಗಳೂರು : 2024-25 ನೇ ಸಾಲಿನ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕ ವೃಂದ/ತತ್ಸಮಾನ ವೃಂದದ ಶಿಕ್ಷಕರು ಹಾಗೂ ಮುಖ್ಯೋಪಾಧ್ಯಾಯರು ಮತ್ತು ಸರ್ಕಾರಿ ಪ್ರೌಢಶಾಲಾ ಸಹ ಶಿಕ್ಷಕರು/ ತತ್ಸಮಾನ ವೃಂದ, ದೈಹಿಕ ಶಿಕ್ಷಣ ಶಿಕ್ಷಕರು ಮತ್ತು ವಿಶೇಷ ಶಿಕ್ಷಕರು ಹಾಗೂ ತತ್ಸಮಾನ ವೃಂದದ ಶಿಕ್ಷಕರುಗಳ ವಿಭಾಗ ಮಟ್ಟದ ಸಾಮಾನ್ಯ ವರ್ಗಾವಣೆಗಳನ್ನು ಹಮ್ಮಿಕೊಳ್ಳುವ ಕುರಿತು ಶಿಕ್ಷಣ ಇಲಾಖೆ ಮಹತ್ವದ ಆದೇಶ ಹೊರಡಿಸಿದೆ. ಮೇಲಿನ ವಿಷಯ ಹಾಗೂ ಉಲ್ಲೇಖಗಳಿಗೆ ಸಂಬಂಧಿಸಿದಂತೆ, 2024-25 ನೇ ಸಾಲಿನ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ಹಾಗೂ ಮುಖ್ಯೋಪಾಧ್ಯಾಯರ ಮತ್ತು ಸರ್ಕಾರಿ ಪ್ರೌಢ ಶಾಲಾ ಶಿಕ್ಷಕರ/ತತ್ಸಮಾನ ವೃಂದದ ಶಿಕ್ಷಕರ ಹಾಗೂ ಸರ್ಕಾರಿ ಪ್ರೌಢ ಶಾಲಾ ಮುಖ್ಯೋಪಾಧ್ಯಾಯರ/ತತ್ಸಮಾನ ವೃಂದದ ಅಧಿಕಾರಿಗಳ ವಿಭಾಗ ಮಟ್ಟದ ಸಾಮಾನ್ಯ ವರ್ಗಾವಣೆ ಪ್ರಕ್ರಿಯೆಯನ್ನು ವಿಭಾಗೀಯ ಹಂತದಲ್ಲಿ ಗಣಕೀಕೃತ ಕೌನ್ಸಿಲಿಂಗ್ ಮೂಲಕ ಹಮ್ಮಿಕೊಳ್ಳುವಂತೆ ಉಲ್ಲೇಖಗಳನ್ವಯ ಆದೇಶಿಸಲಾಗಿ, ದಿನಾಂಕ : 17.11.2025 ರಿಂದ ದಿನಾಂಕ : 26.11.2025 ರವರೆಗೆ ವೇಳಾಪಟ್ಟಿಯಂತೆ ಸದರಿ ಕೌನ್ಸಿಲಿಂಗ್ ಪ್ರಕ್ರಿಯೆಯನ್ನು ಶಿಕ್ಷಕರ ಹಿತದೃಷ್ಟಿಯಿಂದ ರೌಂಡ್ ರಾಬಿನ್ (Round…

Read More

ನವದೆಹಲಿ: ಮೇಕೆದಾಟು ಯೋಜನೆಗೆ ವಿರೋಧಿಸಿ ತಮಿಳುನಾಡು ಸರ್ಕಾರ ಸಲ್ಲಿಸಿದ್ದ ಅರ್ಜಿಯನ್ನು ಇಂದು ಸುಪ್ರೀಂಕೋರ್ಟ್ ವಜಾಗೊಳಿಸಿದೆ. ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ಕರ್ನಾಟಕ ಸರ್ಕಾರದ ಕ್ರಮ ಪ್ರಶ್ನಿಸಿ ತಮಿಳುನಾಡು ಸರ್ಕಾರ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಬಿ.ಆರ್ ಗವಾಯಿ ನೇತೃತ್ವದ ಪೀಠ ಇಂದು ವಜಾಗೊಳಿಸಿದೆ.

Read More

ಮಾಂಸ ತಿನ್ನುವವರೇ ಎಚ್ಚರ, ಕುರಿಮಾಂಸ ಸಾರು ತಿನ್ನುವಾಗ ಮಾಂಸದ ತುಂಡು ಗಂಟಲಲ್ಲಿ ಸಿಲುಕಿ ವ್ಯಕ್ತಿಯೊಬ್ಬರು ಸಾವನ್ನಪ್ಪಿರುವ ಘಟನೆ ತೆಲಂಗಾಣದಲ್ಲಿ ನಡೆದಿದೆ. ತೆಲಂಗಾಣದ ನಾಗರ್ಕರ್ನೂಲ್ ಜಿಲ್ಲೆಯಲ್ಲಿ ಕುರಿಮಾಂಸದ ತುಂಡು ವ್ಯಕ್ತಿಯೊಬ್ಬರ ಪ್ರಾಣವನ್ನೇ ಬಲಿ ತೆಗೆದುಕೊಂಡಿದೆ. ಸ್ಥಳೀಯರು ನೀಡಿದ ವಿವರಗಳ ಪ್ರಕಾರ.. ಬೊಂಡಲಪಲ್ಲಿ ಗ್ರಾಮದಲ್ಲಿ ವ್ಯಕ್ತಿಯೊಬ್ಬರು ಹೊಸ ಮನೆ ನಿರ್ಮಿಸಿದ್ದರು. ಮೇಸ್ತ್ರಿ ಬಹಳ ಶ್ರಮವಹಿಸಿ ಮನೆಯ ನಿರ್ಮಾಣವನ್ನು ಪೂರ್ಣಗೊಳಿಸಿದ ನಂತರ, ಅವರು ತಮ್ಮ ಕೆಲಸಗಾರರನ್ನು ಆಹ್ವಾನಿಸಿದರು. ಪಕ್ಕದ ಮನೆಯಲ್ಲಿ ವಾಸಿಸುತ್ತಿದ್ದ ಲಕ್ಷ್ಮಯ್ಯ ಅವರನ್ನು ಸಹ ಆಹ್ವಾನಕ್ಕೆ ಆಹ್ವಾನಿಸಿದರು. ಮದ್ಯ ಸೇವಿಸಿದ ನಂತರ ಕುರಿಮಾಂಸದ ತುಂಡು ತಿನ್ನುತ್ತಿದ್ದ ಲಕ್ಷ್ಮಯ್ಯ ಅವರ ಗಂಟಲಿನಲ್ಲಿ ಮಟನ್ ಪೀಸ್ ಸಿಲುಕಿಕೊಂಡಿದೆ. ಉಸಿರುಗಟ್ಟುವಿಕೆಯಿಂದಾಗಿ ಅವರು ಪ್ರಜ್ಞೆ ತಪ್ಪಿದರು. ಅವರನ್ನು ತಕ್ಷಣ ಸ್ಥಳೀಯ ಆಸ್ಪತ್ರೆಗೆ ಸಾಗಿಸಲಾಯಿತು. ಅವರನ್ನು ಪರೀಕ್ಷಿಸಿದ ವೈದ್ಯರು ಅವರು ಮೃತಪಟ್ಟಿದ್ದಾರೆ ಎಂದು ಘೋಷಿಸಿದರು. ಇದು ಗ್ರಾಮದಲ್ಲಿ ದುಃಖದ ವಾತಾವರಣ ಮೂಡಿಸಿದೆ. ಲಕ್ಷ್ಮಯ್ಯ ಅವರ ಕುಟುಂಬ ಸದಸ್ಯರು ಶೋಕದಲ್ಲಿ ಮುಳುಗಿದ್ದಾರೆ.

Read More

ನವದೆಹಲಿ : 12,000 ಕೋಟಿ ರೂ. ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜೇಪೀ ಇನ್ಫ್ರಾಟೆಕ್ ವ್ಯವಸ್ಥಾಪಕ ನಿರ್ದೇಶಕ ಮನೋಜ್ ಗೌರ್ ಅವರನ್ನು ಇಡಿ ಬಂಧಿಸಿದೆ ಎಂದು ತಿಳಿದುಬಂದಿದೆ.

Read More

ಚಳಿಗಾಲದಲ್ಲಿ ಚರ್ಮವು ಸಂಪೂರ್ಣವಾಗಿ ಹಾನಿಗೊಳಗಾಗುತ್ತದೆ. ನೀವು ಮಾಯಿಶ್ಚರೈಸರ್ ಬಳಸಿದರೂ ಸಹ, ಚರ್ಮದ ಮೇಲೆ ಬಿರುಕುಗಳು ಕಾಣಿಸಿಕೊಳ್ಳುತ್ತವೆ. ಇದು ನಿಮ್ಮನ್ನು ಆಕರ್ಷಕವಾಗಿ ಕಾಣದಂತೆ ಮಾಡುತ್ತದೆ. ಆದಾಗ್ಯೂ, ಈ ಅವಧಿಯಲ್ಲಿ ಚರ್ಮದ ಮೇಲೆ ಯಾವುದೇ ಬಿರುಕುಗಳು ಕಾಣಿಸಿಕೊಳ್ಳದಂತೆ ತಡೆಯಲು ಯಾವ ಸಲಹೆಗಳನ್ನು ಅನುಸರಿಸಬೇಕು ಎಂದು ತಿಳಿಯೋಣ. ಮಾಯಿಶ್ಚರೈಸರ್ ಈ ಋತುವಿನಲ್ಲಿ ಉತ್ತಮ ಗುಣಮಟ್ಟದ ಮಾಯಿಶ್ಚರೈಸರ್ ಅನ್ನು ಬಳಸಬೇಕು. ದಿನಕ್ಕೆ ಒಮ್ಮೆ ಮಾಡುವ ಬದಲು ಎರಡು ಅಥವಾ ಮೂರು ಬಾರಿ ಈ ಲೋಷನ್ ಅನ್ನು ಹಚ್ಚಿ. ಇದು ಚರ್ಮವು ಬಿರುಕು ಬಿಡುವುದನ್ನು ತಡೆಯುತ್ತದೆ. ಸ್ನಾನದ ನಂತರ, ಚರ್ಮವು ಸ್ವಲ್ಪ ತೇವವಾಗಿರುವಾಗ ನೀವು ಇದನ್ನು ಹಚ್ಚಿದರೆ ಇದು ಹೆಚ್ಚು ಪರಿಣಾಮಕಾರಿಯಾಗಿರುತ್ತದೆ. ತುಟಿಗಳು ಸಹ ಬಿರುಕು ಬಿಡುತ್ತವೆ. ನೀವು ತುಪ್ಪ, ಬೆಣ್ಣೆ ಅಥವಾ ಲಿಪ್ ಬಾಮ್ ಅನ್ನು ಬಳಸಬೇಕು. ಸ್ನಾನ ಮಾಡುವಾಗ ಮುನ್ನೆಚ್ಚರಿಕೆಗಳು ಸ್ನಾನದ ದಿನಚರಿಯಲ್ಲಿ ಸಣ್ಣ ಬದಲಾವಣೆಗಳನ್ನು ಮಾಡುವುದರಿಂದ ಚರ್ಮವು ಒಣಗುವುದನ್ನು ತಡೆಯಬಹುದು. ತುಂಬಾ ಬಿಸಿನೀರಿನ ಬದಲಿಗೆ ಉಗುರು ಬೆಚ್ಚಗಿನ ನೀರಿನಿಂದ ಸ್ನಾನ ಮಾಡಬೇಕು ಎಂದು ತಜ್ಞರು…

Read More