Author: kannadanewsnow57

ಬಳ್ಳಾರಿ : ರಾಜ್ಯದ ಕೆಲವು ಸ್ಥಳಗಳಲ್ಲಿ ವರದಿಯಾಗಿರುವ ಹಕ್ಕಿ ಜ್ವರ (ಬರ್ಡ್ ಫ್ಲೂ) ಪ್ರಕರಣದ ಹಿನ್ನಲೆಯಲ್ಲಿ ಜಿಲ್ಲೆಯಲ್ಲಿ ವ್ಯಾಪಕ ಮುಂಜಾಗ್ರತೆ ವಹಿಸಲಾಗಿದ್ದು, ಸಾರ್ವಜನಿಕರು ಯಾವುದೇ ಆತಂಕಕ್ಕೆ ಒಳಗಾಗಬೇಡಿ ಎಂದು ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಹೇಳಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಪಶುಸಂಗೋಪನ ಇಲಾಖೆ, ಬಿಎಮ್‌ಆರ್‌ಸಿ, ಮಹಾನಗರ ಪಾಲಿಕೆ, ಜಿಲ್ಲಾ ಸರ್ವೇಕ್ಷಣಾ ಘಟಕ ಹಾಗೂ ಮಾಹಿತಿ ಶಿಕ್ಷಣ ಸಂವಹನ ವಿಭಾಗದ ಸಹಯೋಗದಲ್ಲಿ ಶುಕ್ರವಾರ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಆಯೋಜಿಸಿದ್ದ ಹಕ್ಕಿಜ್ವರ ಕುರಿತು ಸೇರಿದಂತೆ ಅಂತರ ಇಲಾಖೆ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಹಕ್ಕಿ ಜ್ವರವು (ಹಕ್ಕಿಗಳಿಗೆ ಸಂಬAಧಿಸಿದ) ವೈರಾಣುಗಳಿಂದ (ವೈರಸ್) ಉಂಟಾಗಿದ್ದು, ಸೋಂಕು ತಗುಲಿದ ಹಕ್ಕಿಗಳಿಂದಾಗುವ ವಿಸರ್ಜನೆ, ಶ್ವಾಸೋಚ್ಛಾಸ ಕ್ರಿಯೆ ಮತ್ತು ರಕ್ತದಿಂದ ಹರಡುತ್ತದೆ. ಸೋಂಕು ತಗುಲಿದ ಕೋಳಿ ಮರಿಗಳ ಪುಕ್ಕಗಳನ್ನು ತರಿಯುವ ಮತ್ತು ವಧೆಗೈಯುವ ಕಾರ್ಯಗಳಲ್ಲಿ ನಿರತರಾದ ವಯಸ್ಕರಲ್ಲಿ ಹೆಚ್ಚಾಗಿ ಈ ಸೋಂಕು ಸಂಭವಿಸುತ್ತದೆ ಎಂದರು. ಸೋAಕು ತಗಲಿದ ಅಥವಾ…

Read More

ಬೆಂಗಳೂರು : ಸರ್ಕಾರಿ ಪ್ರೌಡ ಶಾಲೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಗ್ರೇಡ್-2 ಪ್ರೌಢ ಶಾಲಾ ಸಹ ಶಿಕ್ಷಕರಿಗೆ ಸರ್ಕಾರಿ ಪ್ರೌಢ ಶಾಲಾ ಮುಖ್ಯ ಶಿಕ್ಷಕರು/ತತ್ಸಮಾನ ಗ್ರೂಪ್-ಬಿ ವೃಂದಕ್ಕೆ ಸ್ಥಾನಪನ್ನ ಬಡ್ತಿ ನೀಡುವ ಸಂಬಂದ ಪ್ರಸ್ತಾವನೆ ಪಡೆಯುವ ಕುರಿತು ಶಿಕ್ಷಣ ಇಲಾಖೆ ಮಹತ್ವದ ಸುತ್ತೋಲೆ ಹೊರಡಿಸಿದೆ. ಶಾಲಾ ಶಿಕ್ಷಣ ಇಲಾಖೆಯ ಬೆಂಗಳೂರು ಹಾಗೂ ಮೈಸೂರು ವಿಭಾಗದಲ್ಲಿನ ಮುಖ್ಯ ಶಿಕ್ಷಕರು ಹಾಗೂ ಉಪ ಪ್ರಾಂಶುಪಾಲರ ವೃಂದದ ಗ್ರೂಪ್-ಬಿ ಖಾಲಿ ಹುದ್ದೆಗಳಿಗೆ ದಿನಾಂಕ:01.01.2023ರಲ್ಲಿದ್ದಂತೆ ಪ್ರಕಟಿಸಲಾದ ಸರ್ಕಾರಿ ಪ್ರೌಢಶಾಲಾ ಸಹ ಶಿಕ್ಷಕರ ಜೇಷ್ಟತಾ ಪಟ್ಟಿಯನ್ನಾದರಿಸಿ ಸ್ಥಾನಪನ್ನ ಬಡ್ತಿ ನೀಡಲು ಉದ್ದೇಶಿಸಲಾಗಿದೆ. ಪ್ರಕಟಿಸಿರುವ ಜೇಷ್ಟತಾ ಪಟ್ಟಿಯನ್ನು ಅನುಸರಿಸಿ ಬೆಂಗಳೂರು /ಮೈಸೂರು ವಿಭಾಗದಲ್ಲಿ ಖಾಲಿ ಇರುವ ಮುಖ್ಯ ಶಿಕ್ಷಕರು/ಉಪ ಪ್ರಾಂಶುಪಾಲರ ಹುದ್ದೆಗಳಿಗೆ ಬಡ್ತಿ ನೀಡುವ ಪ್ರಕ್ರಿಯೆ ಪ್ರಾರಂಭಿಸಲಾಗಿದೆ.ಈ ಪತ್ರದೊಂದಿಗೆ ಸರ್ಕಾರಿ ಸರ್ಕಾರಿ ಪ್ರೌಢಶಾಲಾ ಸಹ ಶಿಕ್ಷಕರ ವೃಂದದಿಂದ ಮುಖ್ಯ ಶಿಕ್ಷಕರು/ಉಪ ಪ್ರಾಂಶುಪಾಲರ ಹುದ್ದೆಗಳಿಗೆ ನೀಡಬಹುದಾದ ಪಟ್ಟಿಯನ್ನು ಇಲಾಖಾ ವೆಬ್‌ಸೈಟ್ ನಲ್ಲಿ ಪ್ರಕಟಿಸಲಾಗಿದೆ. ಮುಂದುವರೆದು ಡೋಸಿಯರ್ ಸಲ್ಲಿಸುವ ಪೂರ್ವದಲ್ಲಿ ಈ ಕೆಳಕಂಡ ಅಂಶಗಳನ್ನು…

Read More

ಬೆಂಗಳೂರು : ಉಪಹಾರ ಕೇಂದ್ರಗಳು ಮತ್ತು ಹೋಟೆಲ್​ಗಳಲ್ಲಿ ಇಡ್ಲಿ ಬೇಯಿಸಲು ಪ್ಲಾಸ್ಟಿಕ್ ಬಳಕೆ ಮಾಡಲಾಗುತ್ತಿದ್ದು, ಇದನ್ನು ನಿಷೇಧಿಸಲಾಗಿದೆ. ಇನ್ನೇರಡು ದಿನಗಳಲ್ಲಿ ಅಧಿಕೃತ ಸುತ್ತೊಲೆ ನೀಡಲಾಗುವುದು. ಈ ಮೊದಲು ಇಡ್ಲಿ ತಯಾರಿಕೆಗೆ ಹತ್ತಿ ಬಟ್ಟೆ ಬಳಕೆ ಮಾಡಲಾಗುತ್ತಿತ್ತು. ಆದರೆ, ಇತ್ತೀಚೆಗೆ ಹೆಚ್ಚಿನ ಹೋಟೆಲ್​ಗಳಲ್ಲಿ ಪ್ಲಾಸ್ಟಿಕ್ ಬಳಸುತ್ತಿದ್ದಾರೆ. ಪ್ಲಾಸ್ಟಿಕ್ ಬಳಕೆಯಿಂದ ಸಾರ್ವಜನಿಕರು ಸೇವಿಸುವ ಇಡ್ಲಿಯಲ್ಲಿ ಕಾರ್ಸಿನೋಜೆನಿಕ್ ಅಂಶ ಮಿಶ್ರಣವಾಗುತ್ತಿದೆ. ಇದು ಆರೋಗ್ಯಕ್ಕೆ ಮಾರಕ ಎಂದು ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇಡ್ಲಿ ತಯಾರಿಕೆಗೆ ಪ್ಲಾಸ್ಟಿಕ್ ಬಳಕೆ ಮಾಡುತ್ತಿದ್ದ 52 ಆಹಾರ ಉತ್ಪಾದಕರಿಗೆ ನೋಟಿಸ್‌ ನೀಡಲಾಗಿದ್ದು, ರಾಜ್ಯದಲ್ಲಿ ಆಹಾರ ಬೇಯಿಸಲು ಪ್ಲಾಸ್ಟಿಕ್ ಬಳಕೆಯನ್ನು ನಿಷೇಧಿಸಲಾಗುವುದು. ಅಲ್ಲದೆ, ಹಸಿರು ಬಟಾಣಿಗಳಲ್ಲಿ ರಾಸಾಯನಿಕ ಬಳಕೆ ಕುರಿತು 31 ಮಾದರಿ ಪರೀಕ್ಷೆ ನಡೆಸಲಾಗಿದೆ. ಈ ಪೈಕಿ 26 ಅಸುರಕ್ಷಿತ ಎಂದು ದೃಢಪಟ್ಟಿದೆ ಎಂದರು. ಈ ವರ್ಷದ ಜನವರಿಯಿಂದ ವಿವಿಧ ಹೋಟೆಲ್, ಮಳಿಗೆ ಹಾಗೂ ಬೀದಿ ಬದಿ ವ್ಯಾಪಾರಿಗಳ ಬಳಿಯಿಂದ ಒಟ್ಟು 3608 ಆಹಾರ ಪದಾರ್ಥಗಳ ಮಾದರಿ…

Read More

ಬೆಂಗಳೂರು : ವೇತನ ಹೆಚ್ಚಳದ ನಿರೀಕ್ಷೆಯಲ್ಲಿರುವ ನರ್ಸ್ ಗಳಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು, ಶೀಘ್ರವೇ ನರ್ಸ್ ಗಳ ವೇತನ ಹೆಚ್ಚಳ ಮಾಡಲಾಗುವುದು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಭರವಸೆ ನೀಡಿದ್ದಾರೆ. ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆ ನಡೆಸುತ್ತಿರುವ NHM ಯೋಜನೆಯಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ನರ್ಸ್ ಸಿಬ್ಬಂದಿ ಪ್ರತಿನಿಧಿಗಳು ಆರೋಗ್ಯ ಸೌಧದಲ್ಲಿ ಭೇಟಿಯಾಗಿ ಮನವಿ ಪತ್ರ ಸಲ್ಲಿಸಿದರು. ಈ ವೇಳೆ ಸಚಿವ ದಿನೇಶ್ ಗುಂಡೂರಾವ್ ಅವರು, ನರ್ಸ್ ಸಂಘಟನೆಯ ಪ್ರತಿನಿಧಿಗಳ ಅಹವಾಲುಗಳನ್ನ ಆಲಿಸಿ ವೇತನ ಹೆಚ್ಚಳ ಕುರಿತು ಪರಿಶೀಲನೆ ನಡೆಸುವುದಾಗಿ ಭರವಸೆ ನೀಡಿದ್ದಾರೆ. NHM ಯೋಜನೆ ರಾಜ್ಯ ಹಾಗೂ ಕೇಂದ್ರ ಸರ್ಕಾರದ ಪಾಲುದಾರಿಕೆಯಿಂದ ನಡೆಯುತ್ತಿದ್ದು, ವೇತನ ಹೆಚ್ಚಳ ಕುರಿತಂತೆ ಕೇಂದ್ರ ಸರ್ಕಾರಕ್ಕೂ ಪ್ರಸ್ತಾವನೆ ಸಲ್ಲಿಸಿ ಅನುಮೋದನೆ ಪಡೆಯಬೇಕಾಗುತ್ತದೆ. ಈ ಬಗ್ಗೆ ಸಭೆ ಕರೆದು ಅಧಿಕಾರಿಗಳೊಂದಿಗೆ ಚರ್ಚಿಸಲಾಗುವುದು ಎಂದು ತಿಳಿಸಿದ್ದಾರೆ. ನರ್ಸ್ ನೇಮಕಾತಿ ವೇಳೆ NHM ಅಡಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಗೆ ಕೃಪಾಂಕ ನೀಡುವ ಬಗ್ಗೆ ತೀರ್ಮಾನಿಸಲಾಗುವುದು. ಇದರೊಂದಿಗೆ…

Read More

ಬೆಂಗಳೂರು : ಮಾರ್ಚ್ 1 ರ ಇಂದಿನಿಂದ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಆರಂಭವಾಗಲಿದ್ದು, ಈ ಬಾರಿ 400 ಸಿನಿಮಾ ಪ್ರದರ್ಶನಗೊಳ್ಳಲಿದೆ. ಇಂದು ಸಂಜೆ 5 ಗಂಟೆಗೆ ವಿಧಾನಸೌಧದ ಮುಂಭಾಗದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟಿಸಲಿದ್ದಾರೆ. ಡಿಸಿಎಂ ಡಿ.ಕೆ. ಶಿವಕುಮಾರ್ ಭಾಗವಹಿಸಲಿದ್ದು, ಚಿತ್ರೋತ್ಸವಕ್ಕೆ ಸಂಬಂಧಿಸಿದ ಐದು ಪುಸ್ತಕಗಳನ್ನು ನಟ ಶಿವರಾಜ್ ಕುಮಾರ್ ಬಿಡುಗಡೆ ಮಾಡಲಿದ್ದಾರೆ. ಅಂತರಾಷ್ಟ್ರೀಯ ಚಲನಚಿತ್ರೋತ್ಸವದ ರಾಯಭಾರಿ ಕಿಶೋರ್ ಕುಮಾರ್ ವಿಶೇಷ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಸಂಜೆ 5 ಖ್ಯಾತ ಸಂಗೀತ ಸಂಯೋಜಕ ಹಾಗೂ ಪಿಟೀಲು ವಾದಕ ಪದ್ಮಭೂಷಣ ಡಾ. ಎಲ್. ಸುಬ್ರಮಣ್ಯಂ ಹಾಗೂ ಖ್ಯಾತ ಕಾಯಕಿ ಪದ್ಮಶ್ರೀ ಕವಿತಾ ಸುಬ್ರಮಣ್ಯಂ ಅವರಿಂದ ಸಂಗೀತ ರಸ ಸಂಜೆ ನಡೆಯಲಿದೆ. ಈ ಬಾರಿ ಮಹಿಳಾ ಚಲನಚಿತ್ರದ ಬಗ್ಗೆ ನಟಿ ರಮ್ಯಾ, ನಂದಿನಿ ರೆಡ್ಡಿ ಸಂವಾದ ನಡೆಸಲಿದ್ದಾರೆ. ಸಂಗೀತ ನಿರ್ದೇಶಕ ದೇವಿಶ್ರೀ ಪ್ರಸಾದ್ ವಿಶೇಷ ಉಪನ್ಯಾಸ ನೀಡಲಿದ್ದಾರೆ. 2024 ರ ಜನಪ್ರಿಯ ಸಿನಿಮಾ ‘ಅಮರನ್’ ಚಿತ್ರದ ನಿರ್ದೇಶಕರು ಚರ್ಚೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಈ ವರ್ಷದ ಚಲನಚಿತ್ರೋತ್ಸವದ…

Read More

ಚಿತ್ರದುರ್ಗ: ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯು 2025-6 ನೇ ಸಾಲಿನ ಒಂದು ವರ್ಷದ ಅವಧಿಗೆ ಹಿರಿಯೂರು ತಾಲ್ಲೂಕು ದೇವರಕೊಟ್ಟದಲ್ಲಿನ ಏಕಲವ್ಯ ಮಾದರಿ ವಸತಿ ಶಾಲೆಯಲ್ಲಿ ಖಾಲಿ ಇರುವ ಗುತ್ತಿಗೆ ಆಧಾರದ ಮೇರೆಗೆ ಅತಿಥಿ ಶಿಕ್ಷಕರು ಮತ್ತು ಇತರೆ ಹುದ್ದೆಗಳಿಗೆ ನೇರ ಸಂದರ್ಶನವನ್ನು ಮಾ. 8 ರಂದು ದೇವರಕೊಟ್ಟದಲ್ಲಿನ ಏಕಲವ್ಯ ಮಾದರಿ ವಸತಿ ಶಾಲೆಯಲ್ಲಿ ಏರ್ಪಡಿಸಲಾಗಿದೆ. ತರಬೇತಿ ಪಡೆದ ಪದವೀಧರ ಶಿಕ್ಷಕರ ಹುದ್ದೆಗಳಲ್ಲಿ ಇಂಗ್ಲೀಷ್, ಕನ್ನಡ, ಹಿಂದಿ, ಗಣಿತ, ವಿಜ್ಞಾನ, ಸಮಾಜ ವಿಜ್ಞಾನ, ಸಂಗೀತ, ಕ್ರೀಡಾ ತರಬೇತುದಾರ(ಹೆಣ್ಣು), ಕಲೆ. ಸ್ನಾತಕೋತ್ತರ ಪದವೀಧರ ಶಿಕ್ಷಕರ ಹುದ್ದೆಗಳಲ್ಲಿ ಇಂಗ್ಲೀಷ್, ಭೌತಶಾಸ್ತ್ರ, ಕನ್ನಡ, ಗಣಿತ, ರಸಾಯನ ಶಾಸ್ತ್ರ, ಜೀವಶಾಸ್ತ್ರ, ಅರ್ಥಶಾಸ್ತ್ರ, ಕಂಪ್ಯೂಟರ್ ವಿಜ್ಞಾನ ವಿಷಯಗಳ ಶಿಕ್ಷಕರು. ವಸತಿ ನಿಲಯ ಮೇಲ್ವಿಚಾರಕರು(ಮಹಿಳೆ) ಕೌನ್ಸಿಲರ್ ಹುದ್ದೆಗೆ ಗುತ್ತಿಗೆ ಆಧಾರದಲ್ಲಿ ನೇಮಕ ಮಾಡಲಾಗುತ್ತದೆ. ಪ್ರತಿ ವಿಷಯಕ್ಕೆ ಒಂದು ಹುದ್ದೆ ಮಾತ್ರ ಲಭ್ಯವಿರುತ್ತದೆ. ಆಸಕ್ತ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯನ್ನು ವಸತಿ ಶಾಲೆಯಿಂದ ಪಡೆದು, ಭರ್ತಿ ಮಾಡಿದ ಅರ್ಜಿ ನಮೂನೆಯೊಂದಿಗೆ ಮೂಲ ಪ್ರಮಾಣ…

Read More

ಬಳ್ಳಾರಿ : ಚಿಕ್ಕಬಳ್ಳಾಪುರ, ರಾಯಚೂರು ಜಿಲ್ಲೆಗಳ ಬಳಿಕ ಇದೀಗ ಬಳ್ಳಾರಿ ಜಿಲ್ಲೆಯಲ್ಲೂ ಹಕ್ಕಿಜ್ವರ ಆತಂಕ ಮನೆ ಮಾಡಿದ್ದು, ಜಿಲ್ಲೆಯಲ್ಲಿ 4,000 ಕ್ಕೂ ಹೆಚ್ಚು ಕೋಳಿಗಳು ಸಾವನ್ನಪ್ಪಿದ್ದು, ಹಕ್ಕಿಜ್ವರದ ಶಂಕೆ ಮೂಡಿದೆ. ಕೋಳಿ ಜ್ವರ ಪತ್ತೆಯಾದ ಚಿಕ್ಕಬಳ್ಳಾಪುರ ತಾಲೂಕಿನ ವರದಹಳ್ಳಿಯಲ್ಲಿ ಮತ್ತೆ 8 ಕೋಳಿಗಳು ಸಾವನ್ನಪ್ಪಿದ್ದು, ಗ್ರಾಮವನ್ನು ಹಕ್ಕಿಜ್ವರ ಬಾಧಿತ ಪ್ರದೇಶವೆಂದು ಘೋಷಣೆ ಮಾಡಲಾಗಿದೆ. ರಾಜ್ಯದ ಕೆಲವು ಸ್ಥಳಗಳಲ್ಲಿ ವರದಿಯಾಗಿರುವ ಹಕ್ಕಿ ಜ್ವರ (ಬರ್ಡ್ ಫ್ಲೂ) ಪ್ರಕರಣದ ಹಿನ್ನಲೆಯಲ್ಲಿ ಜಿಲ್ಲೆಯಲ್ಲಿ ವ್ಯಾಪಕ ಮುಂಜಾಗ್ರತೆ ವಹಿಸಲಾಗಿದ್ದು, ಸಾರ್ವಜನಿಕರು ಯಾವುದೇ ಆತಂಕಕ್ಕೆ ಒಳಗಾಗಬೇಡಿ ಎಂದು ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಹೇಳಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಪಶುಸಂಗೋಪನ ಇಲಾಖೆ, ಬಿಎಮ್‌ಆರ್‌ಸಿ, ಮಹಾನಗರ ಪಾಲಿಕೆ, ಜಿಲ್ಲಾ ಸರ್ವೇಕ್ಷಣಾ ಘಟಕ ಹಾಗೂ ಮಾಹಿತಿ ಶಿಕ್ಷಣ ಸಂವಹನ ವಿಭಾಗದ ಸಹಯೋಗದಲ್ಲಿ ಶುಕ್ರವಾರ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಆಯೋಜಿಸಿದ್ದ ಹಕ್ಕಿಜ್ವರ ಕುರಿತು ಸೇರಿದಂತೆ ಅಂತರ ಇಲಾಖೆ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು…

Read More

ಬೆಂಗಳೂರು : ಬೇಸಿಗೆಯಲ್ಲಿ 19,000 ಮೆಗಾ ವ್ಯಾಟ್‌ನಷ್ಟು ವಿದ್ಯುತ್ ಬೇಡಿಕೆಯನ್ನು ಈಡೇರಿಸಲು ಇಂಧನ ಇಲಾಖೆ ಸಿದ್ಧವಾಗಿದ್ದು, ಯಾವುದೇ ಸಂದರ್ಭದಲ್ಲೂ ಲೋಡ್ ಶೆಡ್ಡಿಂಗ್ ಮಾಡುವುದಿಲ್ಲ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದ್ದಾರೆ. ಬೇಸಿಗೆಯಲ್ಲಿ ವಿದ್ಯುತ್ ಪೂರೈಕೆಗೆ ಸಂಬಂಧಿಸಿದಂತೆ ಎಸ್ಕಾಂಗಳ ಅಧ್ಯಕ್ಷರು ಸೇರಿದಂತೆ ಇಂಧನ ಇಲಾಖೆ ಹಿರಿಯ ಅಧಿಕಾರಿಗಳೊಂದಿಗಿನ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಬೇಸಿಗೆಯಲ್ಲಿ ರೈತರ ಕೃಷಿ ಪಂಪ್ ಸೆಟ್‌ಗಳಿಗೆ ದಿನ 7 ಗಂಟೆ ಮತ್ತು ಇತರ ಉದ್ದೇಶಗಳಿಗೆ ದಿನದ 24 ಗಂಟೆ ವಿದ್ಯುತ್ ಪೂರೈಸುವ ವಾಗ್ಧಾನವನ್ನು ಈಡೇರಿಸಲು ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ತಿಳಿಸಿದರು. “ರಾಜ್ಯದಲ್ಲಿ ಬೇಡಿಕೆ ಇರುವಷ್ಟು ವಿದ್ಯುತ್ ಲಭ್ಯವಿದೆ. ಸ್ಥಳೀಯವಾಗಿ ತಾಂತ್ರಿಕ ಕಾರಣಗಳಿಂದ ವಿದ್ಯುತ್ ಪೂರೈಕೆ ಸ್ಥಗಿತಗೊಳ್ಳಬಹುದೇ ಹೊರತು ಲೋಡ್ ಶೆಡ್ಡಿಂಗ್ ಮಾಡುವ ಸಂದರ್ಭ ಉದ್ಭವವಾಗುವುದಿಲ್ಲ. ವಿದ್ಯುತ್ ಬೇಡಿಕೆ ಹೆಚ್ಚುತ್ತಿದೆ ಎಂದರೆ, ರಾಜ್ಯವು ಅಭಿವೃದ್ಧಿ ಪಥದಲ್ಲಿ ಮುಂದುವರಿಯುತ್ತಿದೆ. ಹೆಚ್ಚಿನ ಅಭಿವೃದ್ಧಿ ಕೆಲಸಗಳು ನಡೆಯುತ್ತಿವೆ ಎಂದು ಅರ್ಥ ಎಂದು ತಿಳಿಸಿದರು. ಇಂಧನ ಭದ್ರತೆಗೆ ಪಂಪ್ಡ್‌ ಸ್ಟೋರೇಜ್‌, ಬ್ಯಾಟರಿ…

Read More

ಚಿತ್ರದುರ್ಗ : ಕೌಶಲ್ಯ ಅಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಸಂವರ್ಧನ ಸಂಸ್ಥೆ ಜಿಲ್ಲಾಡಳಿತ ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಕೌಶಲ್ಯ ಮಿಷನ್ ಚಿತ್ರದುರ್ಗ ಇವರ ಸಂಯುಕ್ತ ಆಶ್ರಯದಲ್ಲಿ ಮಾ. 01 ರಂದು ಸರ್ಕಾರಿ ವಿಜ್ಞಾನ ಕಾಲೇಜು ಮೈದಾನದಲ್ಲಿ ಬೃಹತ್ ಉದ್ಯೋಗ ಮೇಳ ಆಯೋಜಿಸಲಾಗಿದ್ದು, ಸುಮಾರು 50 ಕ್ಕೂ ಹೆಚ್ಚು ಕಂಪನಿಗಳಲ್ಲಿ 5000 ಕ್ಕೂ ಹೆಚ್ಚು ಉದ್ಯೋಗಗಳು ಲಭ್ಯವಿದೆ. ಹಲವಾರು ಪ್ರತಿಷ್ಠಿತ ಕಂಪನಿಗಳು ಉದ್ಯೋಗ ಮೇಳದಲ್ಲಿ ಭಾಗವಹಿಸಿ ಉದ್ಯೋಗ ನೀಡಲು ಸಮ್ಮತಿಸಿ ನೊಂದಣಿ ಮಾಡಿಕೊಂಡಿವೆ. ಈ ಪೈಕಿ ಕಿರ್ಲೋಸ್ಕರ್, ಎಲ್ ಅಂಡ್ ಟಿ, ನಂತಹ ಬೃಹತ್ ಕಂಪನಿಗಳು ಸೇರಿದಂತೆ ಫೈನಾನ್ಸ್, ಐಟಿ ಕಂಪನಿಗಳು, ಮೊಬೈಲ್ ಕಂಪನಿಗಳು, ಫರ್ಟಿಲೈಜರ್, ಆಟೋಮೊಬೈಲ್, ಗಾರ್ಮೆಂಟ್ಸ್, ಫಾರ್ಮ ಕಂಪನಿಗಳು ಪ್ರಮುಖವಾಗಿವೆ. ಈ ಎಲ್ಲ ಕಂಪನಿಗಳಲ್ಲಿ 5000 ಕ್ಕೂ ಹೆಚ್ಚು ಉದ್ಯೋಗಗಳು ಲಭ್ಯವಿದ್ದು, ಅಭ್ಯರ್ಥಿಗಳು ಈ ಉದ್ಯೋಗ ಮೇಳದಲ್ಲಿ ಭಾಗವಹಿಸಿ, ಉದ್ಯೋಗವನ್ನು ತಮ್ಮದಾಗಿಸಿಕೊಳ್ಳಲು ಸುವರ್ಣಾವಕಾಶ ಒದಗಿಬಂದಿದೆ. ಈಗಾಗಲೆ ಉದ್ಯೋಗ ಮೇಳದಲ್ಲಿ ಭಾಗವಹಿಸಲು ಅಭ್ಯರ್ಥಿಗಳು…

Read More

ನವದೆಹಲಿ: ರೈಲ್ವೆಯಲ್ಲಿ 32,438 ಗ್ರೂಪ್ ಡಿ ಹುದ್ದೆಗಳಿಗೆ ಅರ್ಜಿ ಪ್ರಕ್ರಿಯೆ ನಡೆಯುತ್ತಿದೆ. ಈಗ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಮಾರ್ಚ್ 1 ರ ಇಂದು ಕೊನೆಯ ದಿನವಾಗಿದೆ. ಇನ್ನೂ ಅರ್ಜಿ ಸಲ್ಲಿಸದ ಅಭ್ಯರ್ಥಿಗಳು ತಮ್ಮ ಅರ್ಜಿ ಪ್ರಕ್ರಿಯೆಯನ್ನು ಸಾಧ್ಯವಾದಷ್ಟು ಬೇಗ ಪೂರ್ಣಗೊಳಿಸಬೇಕು ಏಕೆಂದರೆ ಕೊನೆಯ ದಿನಾಂಕದ ನಂತರ ರೈಲ್ವೆ ನೇಮಕಾತಿ ಮಂಡಳಿಯು ಅರ್ಜಿ ವಿಂಡೋವನ್ನು ಮುಚ್ಚುತ್ತದೆ. ಪ್ರಮುಖ ದಿನಾಂಕಗಳು: ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಆರಂಭ ದಿನಾಂಕ: 23-01-2025 ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 01-03-2025 ರೈಲ್ವೆ ಗ್ರೂಪ್‌ ಡಿ ಹುದ್ದೆಗಳ ವಿವರ ಹೀಗಿದೆ ಟ್ರ್ಯಾಕ್ ಮೇಂಟೆನರ್ ಗ್ರೇಡ್‌ IV ತಾಂತ್ರಿಕ ವಿಭಾಗದ ಸಹಾಯಕ ಅಸಿಸ್ಟಂಟ್‌ ಪಾಯಿಂಟ್ಸ್‌ಮನ್ ಟ್ರ್ಯಾಕ್‌ ಮನ್ ಅಸಿಸ್ಟಂಟ್ ಬ್ರಿಡ್ಜ್‌ ಇತರೆ ಹಲವು ವಿಭಾಗಗಳ ಲೆವೆಲ್‌ 1 ಪೋಸ್ಟ್‌ಗಳು: ಆರ್ಆರ್ಬಿ ಗ್ರೂಪ್ ಡಿ ಅರ್ಹತಾ 2025 ಎನ್ಸಿವಿಟಿ / ಎಸ್ಸಿವಿಟಿಯಿಂದ ಮಾನ್ಯತೆ ಪಡೆದ ಸಂಸ್ಥೆಯಿಂದ ಪ್ರೌಢಶಾಲಾ (10 ನೇ ತರಗತಿ) ಪೂರ್ಣಗೊಳಿಸಿದ ಅಥವಾ ಎನ್ಸಿವಿಟಿ ಒದಗಿಸಿದ…

Read More