Subscribe to Updates
Get the latest creative news from FooBar about art, design and business.
Author: kannadanewsnow57
ಬೆಂಗಳೂರು : ಸಾಮಾನ್ಯವಾಗಿ ಪುಟ್ಟ ಮಕ್ಕಳಿಂದ ಹಿಡಿದು ಎಲ್ಲರಿಗೂ ಕರಿದ ಹಸಿರು ಬಟಾಣಿ ಅಂದ್ರೆ ಎಲ್ಲಿಲ್ಲದ ಇಷ್ಟ. ಅದರಲ್ಲೂ ಮದ್ಯಪ್ರಿಯರಿಗೆ ಅಂತೂ ಸ್ನಾಕ್ಸ್ ರೂಪದಲ್ಲಿ ಹಲವು ತಿಂಡಿ ತಿನಿಸುಗಳು ಬೇಕಾಗುತ್ತವೆ. ಅದರಲ್ಲಿ ಕರಿದ ಹಸಿರು ಬಟಾಣಿ ಕೂಡ ಒಂದು. ಆದರೆ ಇದೀಗ ಈ ಒಂದು ಕರಿದ ಹಸಿರು ಬಟಾಣಿಯಲ್ಲಿ ಅಪಾಯಕಾರಿ ಕೃತಕ ಬಣ್ಣ ಪತ್ತೆಯಾಗಿದೆ ಎಂಬ ಶಂಕೆ ವ್ಯಕ್ತವಾಗಿದ್ದು, ಹೀಗಾಗಿ ಮುಖ್ಯಮಂತ್ರಿ ವಿಶೇಷ ಅಧಿಕಾರಿ ರಾಜ್ಯದ 70 ಕರೆದ ಬಟಾಣಿ ಮಾದರಿ ಸಂಗ್ರಹಿಸಿ ಪ್ರಯೋಗಾಲಯಕ್ಕೆ ರವಾನಿಸಿ ವರದಿ ನೀಡುವಂತೆ ಆರೋಗ್ಯ ಇಲಾಖೆಗೆ ಸೂಚಿಸಿದ್ದಾರೆ. ಹೌದು ಕರಿದ ಹಸಿರು ಬಟಾಣಿ ಯಾರಿಗೆ ಇಷ್ಟ ಇಲ್ಲ ಹೇಳಿ. ಆದರೆ ಈಗ ಬಾಯಿ ಚಪ್ಪರಿಸಿ ತಿನ್ನುವ ಕರಿದ ಹಸಿರು ಬಟಾಣಿಯಲ್ಲಿ ಅಪಾಯಕಾರಿ ಕೃತಕ ಬಣ್ಣ ಹಾಕುತ್ತಾರೆ ಎನ್ನುವ ವಿಡಿಯೋ ಸದ್ಯ ಎಲ್ಲೆಡೆ ಹರಿದಾಡುತ್ತಿದೆ. ಹೀಗಾಗಿ ಇದನ್ನು ಗಂಭೀರವಾಗಿ ತೆಗೆದುಕೊಂಡ ಸಿಎಂ ವಿಶೇಷ ಅಧಿಕಾರಿಯ ಸೂಚನೆಯ ಮೇರೆಗೆ ಆಹಾರ ಸುರಕ್ಷತಾ ಇಲಾಖೆಯ ರಾಜ್ಯದಲ್ಲಿ 70 ಮಾದರಿ ಹಸಿರು ಬಟಾಣಿಗಳ…
ಚಿತ್ರದುರ್ಗ : ಕೌಶಲ್ಯ ಅಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಸಂವರ್ಧನ ಸಂಸ್ಥೆ ಜಿಲ್ಲಾಡಳಿತ ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಕೌಶಲ್ಯ ಮಿಷನ್ ಚಿತ್ರದುರ್ಗ ಇವರ ಸಂಯುಕ್ತ ಆಶ್ರಯದಲ್ಲಿ ಮಾ. 01 ರಂದು ಸರ್ಕಾರಿ ವಿಜ್ಞಾನ ಕಾಲೇಜು ಮೈದಾನದಲ್ಲಿ ಬೃಹತ್ ಉದ್ಯೋಗ ಮೇಳ ಆಯೋಜಿಸಲಾಗಿದ್ದು, ಸುಮಾರು 50 ಕ್ಕೂ ಹೆಚ್ಚು ಕಂಪನಿಗಳಲ್ಲಿ 5000 ಕ್ಕೂ ಹೆಚ್ಚು ಉದ್ಯೋಗಗಳು ಲಭ್ಯವಿದೆ. ಹಲವಾರು ಪ್ರತಿಷ್ಠಿತ ಕಂಪನಿಗಳು ಉದ್ಯೋಗ ಮೇಳದಲ್ಲಿ ಭಾಗವಹಿಸಿ ಉದ್ಯೋಗ ನೀಡಲು ಸಮ್ಮತಿಸಿ ನೊಂದಣಿ ಮಾಡಿಕೊಂಡಿವೆ. ಈ ಪೈಕಿ ಕಿರ್ಲೋಸ್ಕರ್, ಎಲ್ ಅಂಡ್ ಟಿ, ನಂತಹ ಬೃಹತ್ ಕಂಪನಿಗಳು ಸೇರಿದಂತೆ ಫೈನಾನ್ಸ್, ಐಟಿ ಕಂಪನಿಗಳು, ಮೊಬೈಲ್ ಕಂಪನಿಗಳು, ಫರ್ಟಿಲೈಜರ್, ಆಟೋಮೊಬೈಲ್, ಗಾರ್ಮೆಂಟ್ಸ್, ಫಾರ್ಮ ಕಂಪನಿಗಳು ಪ್ರಮುಖವಾಗಿವೆ. ಈ ಎಲ್ಲ ಕಂಪನಿಗಳಲ್ಲಿ 5000 ಕ್ಕೂ ಹೆಚ್ಚು ಉದ್ಯೋಗಗಳು ಲಭ್ಯವಿದ್ದು, ಅಭ್ಯರ್ಥಿಗಳು ಈ ಉದ್ಯೋಗ ಮೇಳದಲ್ಲಿ ಭಾಗವಹಿಸಿ, ಉದ್ಯೋಗವನ್ನು ತಮ್ಮದಾಗಿಸಿಕೊಳ್ಳಲು ಸುವರ್ಣಾವಕಾಶ ಒದಗಿಬಂದಿದೆ. ಈಗಾಗಲೆ ಉದ್ಯೋಗ ಮೇಳದಲ್ಲಿ ಭಾಗವಹಿಸಲು ಅಭ್ಯರ್ಥಿಗಳು…
ಬೆಂಗಳೂರು: ಭೂಮಿ ಮತ್ತು ಕಟ್ಟಡಗಳಿಗೆ ಸಂಬಂಧಪಟ್ಟಂತೆ ಇರುವ ವಿವಾದಗಳು ಮತ್ತು ವಿಷಯಗಳಿಗೆ ಸಂಬಂಧಪಟ್ಟಂತೆ ಪೊಲೀಸ್ ಅಧಿಕಾರಿಗಳು ಅನುಸರಿಸಬೇಕಾದ ಮಾರ್ಗದರ್ಶಿ ಸೂತ್ರಗಳನ್ನು ರಾಜ್ಯ ಸರ್ಕಾರ ಪ್ರಕಟಿಸಿದೆ. ಭೂಮಿಗೆ (ಕೃಷಿಭೂಮಿ, ಕೃಷಿಯೇತರ ಭೂಮಿ, ಕಟ್ಟಡಗಳು ಮತ್ತು ನಿವೇಶನ) ಸಂಬಂಧಪಟ್ಟಂತೆ ಬಹು ಸಂಖ್ಯೆಯಲ್ಲಿ ಸಾರ್ವಜನಿಕರು ಪೊಲೀಸ್ ಠಾಣೆಗಳಿಗೆ ಭೇಟಿ ನೀಡಿ ದೂರುಗಳನ್ನು ನೀಡುತ್ತಿರುವುದು ದಿನದಿಂದ ದಿನಕ್ಕೆ ವೃದ್ಧಿಸುತ್ತಿದೆ. ಮಾಧ್ಯಮಗಳು, ಸಾರ್ವಜನಿಕರು ಮತ್ತು ವಿಧಾನ ಮಂಡಲದಲ್ಲಿ ಚುನಾಯಿತ ಪ್ರತಿನಿಧಿಗಳು, ಕರ್ನಾಟಕ ರಾಜ್ಯದಲ್ಲಿ ಪೊಲೀಸ್ ಅಧಿಕಾರಿಗಳು ಪೊಲೀಸ್ ಭೂವಿವಾದವನ್ನು ತೀರ್ಮಾನ ಮಾಡುವ ಮತ್ತು ಈ ಭೂಮಿ ವಿವಾದಕ್ಕೆ ಸಂಬಂಧಪಟ್ಟಂತೆ ದೊಡ್ಡ ಪ್ರಮಾಣ ಅಕ್ರಮ ಸಂಭಾವನೆ ಪಡೆಯುತ್ತಿದ್ದಾರೆಂದು ಆಪಾದನೆಯನ್ನು ಮಾಡುವುದು ಸಾಮಾನ್ಯವಾಗಿದೆ. ಇದು ಪೊಲೀಸ್ ಇಲಾಖೆಯ ವರ್ಚಸ್ಸಿನ ಮೇಲೆ ಮಸಿ ಬಳಿದಂತಾಗುತ್ತಿದೆ. ಆದುದರಿಂದ ಕೃಷಿಭೂಮಿ, ಕೃಷಿಯೇತರ ಭೂಮಿ, ಕಟ್ಟಡಗಳು ಮತ್ತು ನಿವೇಶನಗಳ ಸಂಬಂಧವಾಗಿ ಸ್ವೀಕೃತವಾಗುವ ದೂರುಗಳನ್ನು ಕಟ್ಟುನಿಟ್ಟಾಗಿ ಮತ್ತು ನ್ಯಾಯ ಸಮ್ಮತವಾಗಿ ಇತ್ಯರ್ಥಗೊಳಿಸುವ ಕುರಿತಂತೆ ದೂರುಗಳನ್ನು ಸ್ವೀಕರಿಸಿ ವಿಚಾರಣೆ ಕೈಗೊಳ್ಳುವ ಪೊಲೀಸ್ ಅಧಿಕಾರಿಗಳಿಗೆ ಸೂಕ್ತ ತಿಳುವಳಿಕೆ ಹಾಗೂ ಮಾರ್ಗಸೂಚಿಗಳನ್ನು ನೀಡುವುದು…
ಶಿವಮೊಗ್ಗ : ರಾಜ್ಯದಲ್ಲಿ ಮತ್ತೊಂದು ಅಮಾನವೀಯ ಘಟನೆ ನಡೆದಿದ್ದು, ತೋಟದಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ ನಡೆಸಲಾಗಿದೆ. ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ಈಸೂರು ಗ್ರಾಮದಲ್ಲಿ ನಡೆದಿದೆ. ಕುರಿ ಮೇಯಿಸಲು ಹೋಗಿದ್ದ ವೇಳೆ ಶಿಕಾರಿಪುರ ತಾಲೂಕಿನ ಚಿಕ್ಕಜೋಗಿಹಳ್ಳಿ ಗ್ರಾಮದ 50 ವರ್ಷದ ದಲಿತ ಮಹಿಳೆ ಮೇಲೆ ತೋಟದ ಮಾಲೀಕ ಹಲ್ಲೆ ನಡೆಸಿದ್ದಾನೆ. ಮಹಿಳೆಯನ್ನು ಸ್ಥಳೀಯರು ಶಿಕಾರಿಪುರದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ತೋಟದಲ್ಲಿ ಮಹಿಳೆ ಮೇಕೆಗಳನ್ನ ಮೇಯಿಸುತ್ತಿದ್ದಾಳೆಂದು ಆಕ್ರೋಶಗೊಂಡ ತೋಟದ ಮಾಲೀಕ ರಾಮನಹಳ್ಳಿ ಶಿವಕುಮಾರ್ ಎಂಬುವವರ ಮಗ ಅರುಣ್ ಮಹಿಳೆಯ ಮೇಲೆ ಹಲ್ಲೆ ನಡೆಸಿದ್ದಾನೆ. ಮಹಿಳೆಯ ಸೀರೆ ಬಿಚ್ಚಿ ವಿವಸ್ತ್ರಗೊಳಿಸಿ ಹಲ್ಲೆ ನಡೆಸಿದ್ದಾನೆ ಎಂದು ಆರೋಪಿಸಲಾಗಿದೆ.
ನವದೆಹಲಿ : ಭಾರತದ ಆರ್ಥಿಕ ಬೆಳವಣಿಗೆಗೆ ಮಹಿಳಾ ಉದ್ಯಮಿಗಳು ಪ್ರಮುಖ ಪಾತ್ರ ವಹಿಸುತ್ತಾರೆ. ಆದಾಗ್ಯೂ, ಹಣಕಾಸಿನ ನಿರ್ಬಂಧಗಳು ಹೆಚ್ಚಾಗಿ ವ್ಯವಹಾರಗಳನ್ನು ಪ್ರಾರಂಭಿಸುವ ಅಥವಾ ವಿಸ್ತರಿಸುವ ಅವರ ಸಾಮರ್ಥ್ಯವನ್ನು ಮಿತಿಗೊಳಿಸುತ್ತವೆ. ಉದ್ಯಮಶೀಲತೆಯಲ್ಲಿ ಮಹಿಳೆಯರನ್ನು ಬೆಂಬಲಿಸಲು, ಭಾರತ ಸರ್ಕಾರವು ವಿವಿಧ ಸಾಲ ಯೋಜನೆಗಳನ್ನು ಪರಿಚಯಿಸಿದೆ. ಈ ಸರ್ಕಾರಿ ಯೋಜನೆಗಳು ಕಡಿಮೆ ಬಡ್ಡಿದರಗಳೊಂದಿಗೆ ಹಣವನ್ನು ಸುಲಭವಾಗಿ ಪಡೆಯಲು ಸಹಾಯ ಮಾಡುತ್ತವೆ, ಮಹಿಳೆಯರು ಆರ್ಥಿಕವಾಗಿ ಸ್ವತಂತ್ರರಾಗಲು ಸಹಾಯ ಮಾಡುತ್ತವೆ. 2025 ರಲ್ಲಿ ಮಹಿಳಾ ಉದ್ಯಮಿಗಳಿಗೆ ಲಭ್ಯವಿರುವ ಪ್ರಮುಖ ಆರು ಸರ್ಕಾರಿ ಸಾಲ ಯೋಜನೆಗಳ ಕುರಿತು ಇಲ್ಲಿದೆ ಮಾಹಿತಿ. ಅನ್ನಪೂರ್ಣ ಯೋಜನೆ ಆಹಾರ ಸೇವೆಗಳು ಮತ್ತು ಅಡುಗೆಯಲ್ಲಿ ವ್ಯವಹಾರಗಳನ್ನು ನಡೆಸುವ ಮಹಿಳಾ ಉದ್ಯಮಿಗಳನ್ನು ಅನ್ನಪೂರ್ಣ ಯೋಜನೆ ಬೆಂಬಲಿಸುತ್ತದೆ. ಈ ಯೋಜನೆಯಡಿಯಲ್ಲಿ ತಮ್ಮ ವ್ಯವಹಾರಗಳನ್ನು ನಿರ್ವಹಿಸುವ ಅರ್ಹ ಮಹಿಳಾ ಉದ್ಯಮಿಗಳು ₹50,000 ಕಾರ್ಯನಿರತ ಬಂಡವಾಳ ಸಾಲಗಳಿಗೆ ಪ್ರವೇಶವನ್ನು ಹೊಂದಿರುತ್ತಾರೆ. ಮೇಲಾಧಾರ ಮತ್ತು ಖಾತರಿದಾರರ ಅನುಮೋದನೆಯ ಅವಶ್ಯಕತೆಗಳನ್ನು ಪೂರೈಸಿದ ನಂತರ ಗ್ರಾಹಕರು 36 ಕಂತುಗಳಲ್ಲಿ ಸಾಲವನ್ನು ಮರುಪಾವತಿಸಬೇಕು. ಈ ಕಾರ್ಯಕ್ರಮದ ಅಡಿಯಲ್ಲಿ…
ನಲ್ಲಸೋಪಾರ: ಮಹಾರಾಷ್ಟ್ರದ ಪೊಲೀಸರು ತನ್ನ ಮೂವರು ಹೆಣ್ಣುಮಕ್ಕಳ ಮೇಲೆ ಅತ್ಯಾಚಾರ ಎಸಗಿದ ವ್ಯಕ್ತಿಯನ್ನು ಬಂಧಿಸಿದ್ದಾರೆ. ಸಂತ್ರಸ್ತ ಹುಡುಗಿಯರು ನಲ್ಲಸೋಪಾರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದಾಗ ಘಟನೆ ಬೆಳಕಿಗೆ ಬಂದಿದೆ. ಆರೋಪಿ ತಂದೆಯ ಮೇಲೆ ಸುಲಿಗೆ, ಗುಂಡು ಹಾರಿಸುವುದು ಮತ್ತು ಕೊಲೆಯಂತಹ ಗಂಭೀರ ಅಪರಾಧಗಳ ಆರೋಪವೂ ಇದೆ. ನಲಸೋಪಾರ ಪೊಲೀಸರು ಹುಡುಗಿಯರ ಹೇಳಿಕೆಗಳನ್ನು ದಾಖಲಿಸಿಕೊಂಡು ಆರೋಪಿ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಈ ಕುಟುಂಬ ಮೂಲತಃ ಕೊಂಕಣ ಪ್ರದೇಶದಲ್ಲಿ ವಾಸಿಸುತ್ತಾರೆ. ಆ ಹುಡುಗಿಯರ 56 ವರ್ಷದ ತಂದೆ ಒಬ್ಬ ಕುಖ್ಯಾತ ಅಪರಾಧಿ. ಅವರಿಗೆ ನಾಲ್ಕು ಹೆಣ್ಣು ಮಕ್ಕಳಿದ್ದಾರೆ. ಕೊಂಕಣದ ತನ್ನ ಹಳ್ಳಿಯಲ್ಲಿದ್ದಾಗ ಅವನು ಈ ಹುಡುಗಿಯರ ಮೇಲೆ ಬಲವಂತವಾಗಿ ಅತ್ಯಾಚಾರ ಮಾಡುತ್ತಿದ್ದನು. ಈ ಹುಡುಗಿಯರಲ್ಲಿ ಒಬ್ಬಳು ನಾಲ್ಕು ಬಾರಿ ಗರ್ಭಪಾತಕ್ಕೂ ಒಳಗಾಗಿದ್ದಳು ಎಂದು ಪೊಲೀಸರು ತಿಳಿಸಿದ್ದಾರೆ. ಕೊನೆಗೆ, ತಂದೆಯ ಚಿತ್ರಹಿಂಸೆಯಿಂದ ಬೇಸತ್ತ ತಾಯಿ ತನ್ನ ಹೆಣ್ಣುಮಕ್ಕಳನ್ನು ನಲ್ಲಸೋಪಾರದಲ್ಲಿರುವ ತನ್ನ ಸಂಬಂಧಿಕರೊಬ್ಬರ ಬಳಿ ವಾಸಿಸಲು ಕರೆದುಕೊಂಡು ಹೋದಳು. ಮೂವರು ಹೆಣ್ಣು ಮಕ್ಕಳಲ್ಲಿ,…
ಬೆಳಗಾವಿ : ಇತ್ತೀಚಿಗೆ ಹೃದಯಾಘಾತದ ಪ್ರಕರಣಗಳು ಹೆಚ್ಚಳವಾಗಿದ್ದು, ಶಾಲೆಯಲ್ಲೇ ಶಿಕ್ಷಕರೊಬ್ಬರು ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಬೆಳಗಾವಿ ಜಿಲ್ಲೆಯಲ್ಲಿ ನಡೆದಿದೆ. ಬೆಳಗಾವಿ ಜಿಲ್ಲೆ ಕಾಗವಾಡದ ಮಂಗಸೂಳಿ ಗ್ರಾಮದ ಸರ್ಕಾರಿ ಎಂಆರ್ ಎಂ ಕೆಪಿಎಸ್ ಪ್ರೌಢಶಾಲೆಯಲ್ಲಿ ಹೃದಯಾಘಾತದಿಂದ ಶಿಕ್ಷಕರೊಬ್ಬರು ಮೃತಪಟ್ಟಿದ್ದಾರೆ. ಭರತ್ ಶಿಂದೆ(47) ಮೃತಪಟ್ಟ ಶಿಕ್ಷಕ. ರಾಯಬಾಗ ತಾಲೂಕಿನ ಬಿರಡಿ ಗ್ರಾಮದ ಭರತ ಶಿಂದೆ ಅವರು ಮಂಗಸೂಳಿ ಗ್ರಾಮದ ಸರ್ಕಾರಿ ಎಂಆರ್ ಎಂ ಕೆಪಿಎಸ್ ಪ್ರೌಢಶಾಲೆಯಲ್ಲಿ ಎದೆನೋವಿನಿಂದ ಕುಸಿದು ಬಿದ್ದು ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಮೃತರಿಗೆ ಪತ್ನಿ, ಇಬ್ಬರು ಪುತ್ರರು ಮತ್ತು ಪುತ್ರಿ ಇದ್ದಾರೆ.
ನವದೆಹಲಿ : ಸಾರ್ವಜನಿಕರು ತಮ್ಮ ದೂರುಗಳನ್ನು ಪ್ರಧಾನಿಯವರಿಗೆ ಸುಲಭವಾಗಿ ತಿಳಿಸಬಹುದು. ಯಾವುದೇ ವ್ಯಕ್ತಿ ಪೋರ್ಟಲ್ ಮೂಲಕ ಪ್ರಧಾನಮಂತ್ರಿಯವರೊಂದಿಗೆ ಸಂಪರ್ಕ ಸಾಧಿಸಬಹುದು ಮತ್ತು ಮನೆಯಲ್ಲಿ ಕುಳಿತು ತಮ್ಮ ದೂರನ್ನು ಪ್ರಧಾನ ಮಂತ್ರಿ ಕಚೇರಿಗೆ ಕಳುಹಿಸಬಹುದು. ನಿಮ್ಮ ಯಾವುದೇ ಸರ್ಕಾರಿ ಕೆಲಸವು ದೀರ್ಘಕಾಲದಿಂದ ನಡೆಯದಿದ್ದರೆ, ನೀವು ಎಷ್ಟು ಪ್ರಯತ್ನಿಸಿದರೂ ಆಡಳಿತವು ನಿಮ್ಮ ದೂರನ್ನು ಕೇಳುತ್ತಿಲ್ಲ ಅಥವಾ ಕೇಂದ್ರ ಸರ್ಕಾರದ ಯೋಜನೆಗಳ ಲಾಭವನ್ನು ಪಡೆಯುತ್ತಿಲ್ಲ. ಹಾಗಾಗಿ ಇಂತಹ ಪರಿಸ್ಥಿತಿಯಲ್ಲಿ ನಿರಾಶರಾಗಬೇಡಿ, ನಿಮ್ಮ ದೂರನ್ನು ಪ್ರಧಾನಿ ಕಚೇರಿಗೆ ಕಳುಹಿಸಿ. ಆನ್‌ಲೈನ್ ಮತ್ತು ಆಫ್‌ಲೈನ್ ಮಾಧ್ಯಮದ ಮೂಲಕ ನೀವು ಈ ದೂರನ್ನು ಸುಲಭವಾಗಿ ಸಲ್ಲಿಸಬಹುದು. ಆನ್‌ಲೈನ್‌ನಲ್ಲಿ ದೂರು ಸಲ್ಲಿಸುವುದು ಹೇಗೆ ಪ್ರಧಾನ ಮಂತ್ರಿಗಳ ಕಛೇರಿಗೆ ದೂರು ಸಲ್ಲಿಸಲು, ನೀವು ಕೆಳಗೆ ನೀಡಿರುವ ಲಿಂಕ್‌ಗೆ ಭೇಟಿ ನೀಡಬೇಕು. ಪ್ರಧಾನಮಂತ್ರಿ ಕಾರ್ಯಾಲಯದ ಅಧಿಕೃತ ವೆಬ್‌ಸೈಟ್ ಯಾವುದು. https://www.pmindia.gov.in/hi ಗೆ ಹೋಗುವ ಮೂಲಕ, ನೀವು ಡ್ರಾಪ್ ಡೌನ್ ಮೆನುವನ್ನು ನೋಡುತ್ತೀರಿ, ಅದರಲ್ಲಿ ‘ಪ್ರಧಾನ ಮಂತ್ರಿಗೆ ಬರೆಯಿರಿ’ ಕಾರ್ಯಾಚರಣೆಯು ಗೋಚರಿಸುತ್ತದೆ. ನೀವು ಅದರ ಮೇಲೆ…
ಬೆಂಗಳೂರು: ಬೆಂಗಳೂರಿನಲ್ಲಿ ಬಿಎಂಟಿಸಿ ಬಸ್ ಗೆ ಮತ್ತೊಂದು ಬಲಿಯಾಗಿದ್ದು, ರಸ್ತೆ ದಾಟುತ್ತಿದ್ದ ವೇಳೆ ಬಸ್ ಡಿಕ್ಕಿಯಾಗಿ ಗಂಭೀರವಾಗಿ ಗಾಯಗೊಂಡಿದ್ದ ಮಹಿಳೆ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ. ಬೆಂಗಳೂರಿನ ಹೆಬ್ಬಾಳ ಬಸ್ ನಿಲ್ದಾಣದಲ್ಲಿ ರಸ್ತೆ ದಾಟುತ್ತಿದ್ದಂತ ಮಹಿಳೆಯೊಬ್ಬರ ಮೇಲೆಯೇ ಬಿಎಂಟಿಸಿ ಬಸ್ ಹರಿದು ಗಂಭೀರವಾಗಿ ಗಾಯಗೊಂಡಿದ್ದರು. ಗಾಯಾಳು ಮಹಿಳೆ ಲಿಂಗಮ್ಮ ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಮೃತಪಟ್ಟಿದ್ದಾರೆ. ರಸ್ತೆ ದಾಟುತ್ತಿದ್ದಾಗ ಬಿಎಂಟಿಸಿ ಬಸ್ ಡಿಕ್ಕಿಯಾಗಿ ಈ ಅಪಘಾತ ಸಂಭವಿಸಿದೆ. ಗಂಭೀರವಾಗಿ ಗಾಯಗೊಂಡಿರುವಂತ ಲಿಂಗಮ್ಮ ಅವರನ್ನು ಸಮೀಪದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.
ಬೆಂಗಳೂರು: ರಾಜ್ಯ ಸರ್ಕಾರದಿಂದ ರಾಷ್ಟ್ರೀಯ ಪಿಂಚಣಿ ಯೋಜನೆಯಿಂದ ಡಿಫೈನ್ಡ್ ಪಿಂಚಣಿ ಯೋಜನೆಯ ವ್ಯಾಪ್ತಿಗೆ ಒಳಪಟ್ಟಿರುವಂತ ಸರ್ಕಾರಿ ನೌಕರರ ಎನ್ ಪಿ ಎಸ್ ಪ್ರಾನ್ ಖಾತೆಯಲ್ಲಿನ ಮೊತ್ತವನ್ನು ಹಿಂಪಡೆಯುವ ಕೂರಿತಂತೆ ಮಾರ್ಗಸೂಚಿಯನ್ನು ಹೊರಡಿಸಿದೆ. ಈ ಸಂಬಂಧ ರಾಜ್ಯ ಸರ್ಕಾರದಿಂದ ನಡವಳಿಯನ್ನು ಹೊರಡಿಸಲಾಗಿದ್ದು, ದಿನಾಂಕ: 01.04.2006 ರಂದು ಹಾಗೂ ತದನಂತರ ಸರ್ಕಾರಿ ಸೇವೆಗೆ ಸೇರಿದ ಎಲ್ಲಾ ಸರ್ಕಾರಿ ನೌಕರರಿಗೆ ನೂತನ ಅಂಶದಾಯಿ ಕೊಡುಗೆ ಯೋಜನೆಯನ್ನು (ರಾಷ್ಟ್ರೀಯ ಪಿಂಚಣಿ ಯೋಜನೆ) ಕಡ್ಡಾಯವಾಗಿ ಜಾರಿಗೊಳಿಸಲಾಗಿದೆ ಎಂದು ತಿಳಿಸಿದೆ. ಓದಲಾದ ಕ್ರಮ ಸಂಖ್ಯೆ (2)ರ ಸರ್ಕಾರಿ ಆದೇಶದಲ್ಲಿನ ಸೂಚನೆಗಳನ್ವಯ ರಾಷ್ಟ್ರೀಯ ಪಿಂಚಣಿ ಯೋಜನೆಯನ್ನು ಜಾರಿಗೊಳಿಸುವ ಮಾರ್ಗಸೂಚಿಯನ್ನು ರೂಪಿಸುವುದರೊಂದಿಗೆ ಈ ಯೋಜನೆಯನ್ನು ಕಾರ್ಯಗತಗೊಳಿಸಲಾಗಿದೆ ಎಂದಿದೆ. ಓದಲಾದ ಕ್ರಮ ಸಂಖ್ಯೆ (3)ರ ಸರ್ಕಾರಿ ಆದೇಶದನ್ವಯ ದಿನಾಂಕ: 01.04.2006ರ ಪೂರ್ವದಲ್ಲಿನ ನೇಮಕಾತಿ ಅಧಿಸೂಚನೆಗಳ ಮೂಲಕ ಆಯ್ಕೆ ಹೊಂದಿ ಆ ದಿನಾಂಕದಂದು ಅಥವಾ ತದನಂತರದಲ್ಲಿ ರಾಜ್ಯ ಸರ್ಕಾರದ ಸೇವೆಗೆ ಸೇರಿದ ನೌಕರರನ್ನು ಒಂದು ಬಾರಿಯ ಕ್ರಮವಾಗಿ ಡಿಫೈನ್ಸ್ ಪಿಂಚಣಿ ಯೋಜನೆ ವ್ಯಾಪ್ತಿಗೆ ಒಳಪಡಿಸಲು ಸರ್ಕಾರವು…









