Author: kannadanewsnow57

ಬೆಂಗಳೂರು : ರಾಜ್ಯದ ಮಹಾನಗರಗಳ ಪಾಲಿಕೆ ವ್ಯಾಪ್ತಿಯಲ್ಲಿ ದಿ: 10/09/2024ರ ಅಂತ್ಯದವರೆಗೆ ಅನಧಿಕೃತ ಬಡಾವಣೆಗಳಲ್ಲಿ ನಿರ್ಮಿಸಿಕೊಂಡಿರುವ ನಿವೇಶನ/ಕಟ್ಟಡಗಳಿಗೆ ಬಿ-ಖಾತೆ ನೀಡಲು ಅವಕಾಶ ಕಲ್ಪಿಸಿಕೊಡಲಾಗಿದ್ದು, ಆಸ್ತಿ ಮಾಲೀಕರು ಪಾಲಿಕೆ ಕಚೇರಿಯನ್ನು ಸಂಪರ್ಕಿಸುವಂತೆ ತಿಳಿಸಲಾಗಿದೆ. ಎ-ಖಾತೆ ಪಡೆಯಲು ಈ ದಾಖಲೆಗಳು ಕಡ್ಡಾಯ ಆಸ್ತಿಗೆ ಸಂಬಂಧಿಸಿದ ಸ್ವತ್ತಿನ ಮಾಲೀಕತ್ವ ಸಾಬೀತು ಮಾಡಿಸುವ ನೊಂದಾಯಿತ ಮಾರಾಟ ಪತ್ರಗಳು/ದಾನ ಪತ್ರ/ವಿಭಾಗ ಪತ್ರಗಳು ಸರ್ಕಾರದ ನಿಗಮ ಮಂಡಳಿಗಳಿಂದ ನೀಡಲಾದ ಹಕ್ಕುಪತ್ರಗಳು/ ಮಂಜೂರಾತಿ ಪತ್ರಗಳು ಕಂದಾಯ ಇಲಾಖೆಯಿಂದ 94 ಸಿ.ಸಿ. ಅಡಿ ನೀಡಲಾದ ಹಕ್ಕುಪತ್ರ ಸಕ್ಷಮ ಪ್ರಾಧಿಕಾರದಿಂದ ಅನುಮೋದನೆಯಾದ ದೃಢೀಕೃತ ಪ್ರತಿ ಮತ್ತು ನಿವೇಶನ ಬಿಡುಗಡೆ ಪತ್ರ ಪ್ರಸಕ್ತ ಸಾಲಿನವರೆಗೆ ಋಣಭಾರ ಪ್ರಮಾಣ ಪತ್ರ. ಚಾಲ್ತಿ ಸಾಲಿನ ಆಸ್ತಿ ತೆರಿಗೆ ಪಾವತಿ ರಶೀದಿ ಮಾಲೀಕರ ಫೋಟೋ ಮತ್ತು ಸ್ವತ್ತಿನ ಫೋಟೋ ಮಾಲೀಕರ ಗುರುತಿನ ದಾಖಲೆ ಪ್ರತಿ ಮತ್ತು ಕಟ್ಟಡವಿದ್ದಲ್ಲಿ ವಿದ್ಯುಚ್ಛಕ್ತಿ ಬಿಲ್ ಪ್ರತಿಗಳನ್ನು ಸಲ್ಲಿಸುವುದು. ಬಿ-ಖಾತೆ ಪಡೆಯಲು ಈ ದಾಖಲೆಗಳು ಕಡ್ಡಾಯ ಆಸ್ತಿಗೆ ಸಂಬಂಧಿಸಿದ ಸ್ವತ್ತಿನ ಮಾಲೀಕತ್ವ ಸಾಬೀತು ಪಡಿಸುವ ದಿ:…

Read More

ನವದೆಹಲಿ : ಬೊಜ್ಜು ಸಮಸ್ಯೆಯ ಬಗ್ಗೆ ಎಲ್ಲಾ ಗಮನ ಹರಿಸಬೇಕೆಂದು ಪ್ರಧಾನಿ ನರೇಂದ್ರ ಮೋದಿ ಸೂಚಿಸಿದ್ದಾರೆ. ಬೊಜ್ಜುತನವು ಅನೇಕ ಆರೋಗ್ಯ ಸಮಸ್ಯೆಗಳನ್ನು ಉಂಟುಮಾಡುತ್ತದೆ ಎಂದು ಅವರು ಹೇಳಿದರು. ಕೆಲವು ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳುವುದರಿಂದ ಈ ಸಮಸ್ಯೆಯನ್ನು ನಿವಾರಿಸಬಹುದು ಎಂದು ಹೇಳಲಾಗುತ್ತದೆ. ದೇಶದಲ್ಲಿ ಬೊಜ್ಜುತನವು ಗಂಭೀರ ಆರೋಗ್ಯ ಸಮಸ್ಯೆಯಾಗಿದ್ದು, ಇಂದಿನಿಂದಲೇ ಎಲ್ಲರೂ ಅದರತ್ತ ಗಮನ ಹರಿಸಬೇಕು ಎಂದು ಪ್ರಧಾನಿ ಮೋದಿ ಹೇಳಿದರು. ಇದಕ್ಕಾಗಿ, ಪ್ರತಿ ತಿಂಗಳು ಅಡುಗೆ ಎಣ್ಣೆ ಬಳಕೆಯನ್ನು ಶೇಕಡಾ 10ರಷ್ಟು ಕಡಿಮೆ ಮಾಡಿ ಮತ್ತು ಖರೀದಿಸುವಾಗ ಶೇಕಡಾ 10ರಷ್ಟು ಕಡಿಮೆ ಅಡುಗೆ ಎಣ್ಣೆಯನ್ನು ಖರೀದಿಸುವಂತೆ ಮೋದಿ ಸಲಹೆ ನೀಡಿದರು. ಆಲ್ ಇಂಡಿಯಾ ರೇಡಿಯೋದ ಮಾಸಿಕ ರೇಡಿಯೋ ಕಾರ್ಯಕ್ರಮ ‘ಮನ್ ಕಿ ಬಾತ್’ (119 ನೇ ಸಂಚಿಕೆ) ದ ಇತ್ತೀಚಿನ ಸಂಚಿಕೆಯಲ್ಲಿ, ಪ್ರಧಾನಿ ಮೋದಿ ಬೊಜ್ಜಿನ ಬಗ್ಗೆ ನಿರ್ದಿಷ್ಟವಾಗಿ ಮಾತನಾಡಿದರು. ಈ ಸಂದರ್ಭದಲ್ಲಿ ಅವರು ಒಂದು ಸಂಶೋಧನೆಯನ್ನು ಉಲ್ಲೇಖಿಸಿದರು. ಇಂದು ಪ್ರತಿ ಎಂಟು ಜನರಲ್ಲಿ ಒಬ್ಬರು ಬೊಜ್ಜಿನಿಂದ ಬಳಲುತ್ತಿದ್ದಾರೆ ಮತ್ತು ಕಳೆದ ಕೆಲವು…

Read More

ಬೆಂಗಳೂರು : ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಗೃಹ ಜ್ಯೋತಿಯ ಸಹಾಯಧನವನ್ನು ಎಸ್ಕಾಂಗಳಿಗೆ ಸರ್ಕಾರ ಮುಂಗಡವಾಗಿ ಪಾವತಿಸುತ್ತಿದ್ದು, ಗ್ರಾಹಕರಿಂದ ಹಣ ಪಡೆಯುವ ಯಾವುದೇ ಪ್ರಸ್ತಾಪ ಮುಂದಿಲ್ಲ ಎಂದು ಸರ್ಕಾರ ಸ್ಪಷ್ಟಪಡಿಸಿದೆ. ಬೆಳಕು ಭವನದಲ್ಲಿ ಸೋಮವಾರ ಆಯೋಜಿಸಿದ್ದ ಇಲಾಖೆಯ ಸಭೆಯ ನಂತರ ಇಂಧನ ಸಚಿವ ಕೆ.ಜೆ.ಜಾರ್ಜ್‌ ಅವರು ಈ ಬಗ್ಗೆ ವಿವರಣೆ ನೀಡಿದರು. “ಗೃಹಜ್ಯೋತಿ ಹಣವನ್ನು ಸರ್ಕಾರ ಮುಂಗಡವಾಗಿ ಪಾವತಿಸದಿದ್ದರೆ ಜನರಿಂದ ಪಡೆಯಲು ಕರ್ನಾಟಕ ವಿದ್ಯುತ್‌ಚ್ಛಕ್ತಿ ನಿಯಂತ್ರಣ ಆಯೋಗಕ್ಕೆ (ಕೆಇಆರ್‌ಸಿ)ಎಸ್ಕಾಂಗಳು ಮನವಿ ಮಾಡಿವೆ ಎಂಬ ವಿಚಾರ ತಪ್ಪು ಕಲ್ಪನೆಯಿಂದ ಸೃಷ್ಟಿಯಾಗಿದೆ. ಸರ್ಕಾರಕ್ಕೆ ಅಂತಹ ಯಾವುದೇ ಉದ್ದೇಶ ಇಲ್ಲ,” ಎಂದು ಅವರು ಸ್ಪಷ್ಟಪಡಿಸಿದ್ದಾರೆ. “ಗೃಹಜ್ಯೋತಿ ಯೋಜನೆ ಘೋಷಣೆ ಸಂದರ್ಭದಲ್ಲೇ, ಗೃಹ ಬಳಕೆದಾರರಿಗೆ 200 ಯೂನಿಟ್‌ವರೆಗೆ ಉಚಿತವಾಗಿ ವಿದ್ಯುತ್‌ ಪೂರೈಸುವುದಾಗಿ ಸರ್ಕಾರ ಹೇಳಿತ್ತು. ಸಬ್ಸಿಡಿ ಮೊತ್ತವನ್ನು ಸರ್ಕಾರದಿಂದಲೇ ಪಾವತಿ ಮಾಡುವುದಾಗಿಯೂ ಹೇಳಲಾಗಿತ್ತು. ಅದರಂತೆ ಬಜೆಟ್‌ನಲ್ಲಿ ಅನುದಾನ ಮೀಸಲಿಡಲಾಗುತ್ತಿದೆ. ಫೆಬ್ರವರಿ 2025ರವರೆಗಿನ ಗೃಹಜ್ಯೋತಿ ಯೋಜನೆ ಸಹಾಯಧನವನ್ನು ಮುಂಗಡವಾಗಿ ಎಲ್ಲಾ ಎಸ್ಕಾಂಗಳಿಗೆ ಪಾವತಿಸಲಾಗಿದೆ,”ಎಂದು ಅವರು ವಿವರ ನೀಡಿದರು. “ಕೆಇಆರ್‌…

Read More

ಶಿವಮೊಗ್ಗ : ಮುಂದಿನ ಶೈಕ್ಷಣಿಕ ಸಾಲಿನಿಂದಲೇ ರಾಜ್ಯದಲ್ಲಿ 8 ರಿಂದ 12 ನೇ ತರಗತಿಯ ವರೆಗಿನ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ಪಠ್ಯ ಚಟುವಟಿಕೆಗಳೊಂದಿಗೆ ಕೌಶಲ್ಯಧಾರಿತ ತರಗತಿಗಳನ್ನು ಆರಂಭಿಸಲು ಉದ್ದೇಶಿಸಲಾಗಿದೆ ಎಂದು ರಾಜ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಮಧು ಬಂಗಾರಪ್ಪ ಅವರು ಹೇಳಿದರು. ಇವರು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನಪಾಯ ಇಲಾಖೆ, ಕೌಶಲ್ಯ ಅಭಿವೃದ್ಧಿ ನಿಗಮ, ಜಿಲ್ಲಾ ಗ್ಯಾರೆಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ, ಇವರುಗಳ ಸಂಯುಕ್ತ ಆಶ್ರಯದಲ್ಲಿ ನಗರದ ರಾಷ್ಟ್ರೀಯ ಶಿಕ್ಷಣ ಮಹಾವಿದ್ಯಾಲಯದ ಆವರಣದಲ್ಲಿ ಏರ್ಪಡಿಸಲಾಗಿದ್ದ ಕೌಶಲ್ಯ ಮತ್ತು ರೋಜ್ ಗಾರ್ ಉದ್ಯೋಗಮೇಳವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು. ಮಕ್ಕಳು ಪ್ರಾಥಮಿಕ ಶಿಕ್ಷಣ ಪಡೆಯುವ ಹಂತದಲ್ಲಿಯೇ ಕೌಶಲ್ಯಧಾರಿತ ಶಿಕ್ಷಣ ನೀಡುವುದರಿಂದ ಅವರ ಭವಿಷ್ಯದ ಬದುಕು ಉಜ್ವಲವಾಗಲಿದೆ ಅಲ್ಲದೆ ತಮಗಿಷ್ಟವಾದ ಕ್ಷೇತ್ರದಲ್ಲಿ ನೈಪುಣ್ಯತೆ ಪಡೆದು, ಅಪೇಕ್ಷೆಯ ಉದ್ಯೋಗ ಪಡೆದು ಸ್ವಾವಲಂಬಿ ಜೀವನ ನಡೆಸಬಹುದಾಗಿದೆ ಎಂದರು. ತಾಲೂಕು ಮಟ್ಟದಲ್ಲಿ ಉದ್ಯೋಗ ಮೇಳಗಳನ್ನು ಆಯೋಜಿಸಿದಲ್ಲಿ ಆಗಮಿಸುವ…

Read More

ನವದೆಹಲಿ : ನಮ್ಮ ದೇಹದಲ್ಲಿನ ರೋಗಗಳ ಬಗ್ಗೆ ರಕ್ತ ಪರೀಕ್ಷೆಗಳ ಮೂಲಕ ತಿಳಿದುಕೊಳ್ಳಬಹುದು. ದೀರ್ಘಾಯುಷ್ಯ ಸಾಧಿಸಲು, ನೀವು ಆರೋಗ್ಯಕರ ಜೀವನವನ್ನು ನಡೆಸಬೇಕು. ಕೆಲವು ರಕ್ತ ಪರೀಕ್ಷೆಗಳ ಮೂಲಕ ಅನೇಕ ರೋಗಗಳನ್ನು ಆರಂಭಿಕ ಹಂತದಲ್ಲಿಯೇ ಪತ್ತೆಹಚ್ಚಬಹುದು. ಆದ್ದರಿಂದ, ಮುನ್ನೆಚ್ಚರಿಕೆ ಕ್ರಮವಾಗಿ ಪ್ರತಿ ವರ್ಷ ಕೆಲವು ರಕ್ತ ಪರೀಕ್ಷೆಗಳನ್ನು ಮಾಡಿಸಿಕೊಳ್ಳುವ ಅಭ್ಯಾಸವನ್ನು ಮಾಡಿಕೊಳ್ಳುವುದು ಮುಖ್ಯ. ನಿರ್ದಿಷ್ಟವಾಗಿ ಹೇಳುವುದಾದರೆ, ರಕ್ತ ಪರೀಕ್ಷೆಗಳು ನಮ್ಮ ದೇಹದಲ್ಲಿನ ಅನೇಕ ಆರೋಗ್ಯ ಸಮಸ್ಯೆಗಳನ್ನು ಪತ್ತೆಹಚ್ಚಲು ಸಹಾಯ ಮಾಡುತ್ತವೆ. ನೀವು ಖಂಡಿತವಾಗಿ ಮಾಡಿಸಿಕೊಳ್ಳಬೇಕಾದ 5 ಪ್ರಮುಖ ರಕ್ತ ಪರೀಕ್ಷೆಗಳು ಇಲ್ಲಿವೆ. ಲಿಪಿಡ್ ಪ್ರೊಫೈಲ್ ಲಿಪಿಡ್ ಪ್ರೊಫೈಲ್ ಪರೀಕ್ಷೆಯು ರಕ್ತದಲ್ಲಿನ ಕೊಲೆಸ್ಟ್ರಾಲ್ ಮತ್ತು ಟ್ರೈಗ್ಲಿಸರೈಡ್ ಮಟ್ಟವನ್ನು ಅಳೆಯುತ್ತದೆ. ಎಲ್‌ಡಿಎಲ್ (ಕೆಟ್ಟ ಕೊಲೆಸ್ಟ್ರಾಲ್) ಹೆಚ್ಚಾದರೆ, ಹೃದಯ ಸಮಸ್ಯೆಗಳ ಅಪಾಯ ಹೆಚ್ಚಾಗುತ್ತದೆ. HDL (ಉತ್ತಮ ಕೊಲೆಸ್ಟ್ರಾಲ್) ಕಡಿಮೆಯಾದರೂ, ಹೃದಯ ಕಾಯಿಲೆಯ ಅಪಾಯ ಹೆಚ್ಚಾಗುತ್ತದೆ. ಆದ್ದರಿಂದ ಲಿಪಿಡ್ ಪ್ರೊಫೈಲ್ ಪರೀಕ್ಷೆಯ ಮೂಲಕ, ನೀವು ಹೃದಯ ಸಂಬಂಧಿತ ಕಾಯಿಲೆಗಳನ್ನು ಮೊದಲೇ ಪತ್ತೆಹಚ್ಚಬಹುದು ಮತ್ತು ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳಬಹುದು. ರಕ್ತದಲ್ಲಿನ…

Read More

ಬೆಂಗಳೂರು: ಶಾಲಾ ಶಿಕ್ಷಣ ಇಲಾಖೆಯಿಂದ 2025-26ನೇ ಸಾಲಿನ ಪ್ರಥಮ ಹಾಗೂ ದ್ವಿತೀಯ ಪಿಯುಸಿ ದಾಖಲಾತಿಗೆ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ. ಪ್ರಥಮ ಪಿಯುಸಿಗೆ ಎಸ್ ಎಸ್ ಎಲ್ ಸಿ ಫಲಿತಾಂಶ ಪ್ರಕಟವಾದ ನಂತ್ರ ಮೊದಲ ಕಾರ್ಯನಿರತ ದಿನದಿಂದ ದಾಖಲಾತಿ ಪ್ರಾರಂಭಗೊಳ್ಳಲಿದೆ. ದ್ವಿತೀಯ ಪಿಯುಸಿಗೆ ದಿನಾಂಕ 22-05-2025ರಿಂದ ದಾಖಲಾತಿ ಪ್ರಕ್ರಿಯೆ ಪ್ರಾರಂಭಗೊಳ್ಳಲಿದೆ. ಶಾಲಾ ಶಿಕ್ಷಣ ಇಲಾಖೆಯಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, 2025-26ನೇ ಸಾಲಿನ ಶೈಕ್ಷಣಿಕ ಅವಧಿಗೆ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ. ಮೊದಲನೇ ಅವಧಿ ದಿನಾಂಕ 02-06-2025ರಿಂದ 21-09-2025ರವರೆಗೆ ನಡೆಯಲಿದೆ. ಎರಡನೇ ಅವಧಿಯು ದಿನಾಂಕ 08-10-2025ರಿಂದ 31-03-2026ರವರೆಗೆ ನಡೆಯಲಿದೆ. ಇನ್ನೂ ಪ್ರಥಮ ಮತ್ತು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಸಿದ್ಧಪಡಿಸಿಕೊಂಡ ವೇಳಾಪಟ್ಟಿಯಂತೆ ತರಗಳಿಗಳು ದಿನಾಂಕ 02-06-2025ರಿಂದ ಆರಂಭಗೊಳ್ಳಲಿದೆ. ಮಧ್ಯಂತರ ರಜೆಯು ದಿನಾಂಕ 22-09-2025ರಿಂದ ದಿನಾಂಕ 07-10-2025ರವರೆಗೆ ಇರಲಿದೆ. ಕೊನೆಯ ಕಾರ್ಯನಿರತ ದಿನ ದಿನಾಂಕ 31-03-2026 ಆಗಿದೆ. ಬೇಸಿಗೆ ರಜೆ ದಿನಾಂಕ 01-04-2026ರಿಂದ ಪ್ರಾರಂಭವಾಗಲಿದೆ. ದಿನಾಂಕ 16-06-2025ರಂದು ಪ್ರಥಮ ಮತ್ತು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಪ್ರಾಯೋಗಿಕ ತರಗತಿಗಳು ಪ್ರಾರಂಭವಾಗಲಿವೆ. ಪ್ರಥಮ…

Read More

ಬೆಂಗಳೂರು : ಕರ್ನಾಟಕ ಆರೋಗ್ಯ ಇಲಾಖೆಯು ಆಯುಷ್ಮಾನ್ ಭಾರತ್-ಆರೋಗ್ಯ ಕರ್ನಾಟಕ ಯೋಜನೆಯಡಿಯಲ್ಲಿ ಬೆನ್ನುಮೂಳೆ ಸಂಬಂಧಿತ ಶಸ್ತ್ರಚಿಕಿತ್ಸೆಗಳನ್ನು ಅಳವಡಿಸುವ ಕುರಿತು ಮಹತ್ವದ ಆದೇಶ ಹೊರಡಿಸಿದೆ. ಈ ಕುರಿತು ಸಚಿವ ದಿನೇಶ್ ಗುಂಡೂರಾವ್ ಮಾಹಿತಿ ನೀಡಿದ್ದು, ಮಕ್ಕಳಲ್ಲಿ ಮತ್ತು ಯುವಜನರಲ್ಲಿ ಹೆಚ್ಚಾಗಿ ಕಂಡುಬರುವ ಸ್ಕೋಲಿಯೋಸಿಸ್, ಕೈಫೋಸಿಸ್ ಮತ್ತು ಲಾರ್ಡೋಸಿಸ್ ಮುಂತಾದ ಬೆನ್ನುಮೂಳೆ ಸಂಬಂಧಿತ ಸಮಸ್ಯೆಗಳಿಗೆ ಇದರಿಂದ ಪರಿಹಾರ ದೊರಕಲಿದ್ದು ಅವರು ಎಲ್ಲರಂತೆ ದೈನಂದಿನ ಚಟುವಟಿಕೆಗಳಲ್ಲಿ ತೊಡಗಲು ನೆರವಾಗಲಿದೆ. ಮಕ್ಕಳಲ್ಲಿ ಕಂಡುಬರಬಹುದಾದ ಯಾವುದೇ ಆರೋಗ್ಯ ಸಮಸ್ಯೆಗಳನ್ನೂ ಸಹ ಗಂಭೀರವಾಗಿ ಪರಿಗಣಿಸಿ ಅವರಿಗೂ ಸಮಾನ ಆರೋಗ್ಯಯುತ ಜೀವನ ನಡೆಸಲು ಅವಕಾಶ ಕಲ್ಪಿಸಿಕೊಡಲು ನಮ್ಮ ಆರೋಗ್ಯ ಇಲಾಖೆಯ ಪ್ರಯತ್ನ ನಿರಂತರವಾಗಿದೆ ಎಂದು ತಿಳಿಸಿದ್ದಾರೆ.

Read More

ಮುಂಬೈ : ಬಾಲಿವುಡ್ ಚಲನಚಿತ್ರ ನಿರ್ಮಾಪಕಿ ಮತ್ತು ನೃತ್ಯ ನಿರ್ದೇಶಕಿ ಫರಾ ಖಾನ್ ಹಿಂದೂಗಳ ಹಬ್ಬ ಹೋಳಿ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಹಿನ್ನೆಲೆಯಲ್ಲಿ ಅವರ ವಿರುದ್ಧ ಎಫ್ ಐಆರ್ ದಾಖಲಿಸಲಾಗಿದೆ. ಫರಾಖಾನ್ ಅವರು ಹೋಳಿ ಹಬ್ಬವನ್ನು ಛಪ್ರೀಸ್ ಹಬ್ಬ ಎಂದು ಕರೆದಿದ್ದಾರೆ. ಅದೇ ಸಮಯದಲ್ಲಿ, ಅವರ ಈ ಕಾಮೆಂಟ್ ನಂತರ, ಜನರು ಅವರ ಮೇಲೆ ಆಕ್ರೊಶಗೊಂಡಿದ್ದಾರೆ, ಅವರು ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿದ್ದಾರೆ ಎಂದು ಆರೋಪಿಸಲಾಗಿದೆ ಮತ್ತು ಫರಾ ಖಾನ್ ವಿರುದ್ಧವೂ ದೂರು ದಾಖಲಾಗಿದೆ. ಹಿಂದೂಸ್ತಾನಿ ಭಾವು ಎಂದೇ ಜನಪ್ರಿಯರಾಗಿರುವ ವಿಕಾಸ್ ಫಾಟಕ್ ಅವರು ತಮ್ಮ ವಕೀಲ ಅಲಿ ಕಾಶಿಫ್ ಖಾನ್ ದೇಶಮುಖ್ ಮೂಲಕ ಈ ದೂರು ದಾಖಲಿಸಿದ್ದಾರೆ. ಮಾಧ್ಯಮ ವರದಿಗಳ ಪ್ರಕಾರ, ಫೆಬ್ರವರಿ 20 ರಂದು ನಡೆದ ಸೆಲೆಬ್ರಿಟಿ ಮಾಸ್ಟರ್‌ಶೆಫ್ ದೂರದರ್ಶನ ಕಾರ್ಯಕ್ರಮದ ಸಂದರ್ಭದಲ್ಲಿ ಫರಾ ನೀಡಿದ ವಿವಾದಾತ್ಮಕ ಹೇಳಿಕೆಗಾಗಿ ಕಾನೂನು ಕ್ರಮ ಕೈಗೊಳ್ಳುವಂತೆ ಕೋರಿ ಶುಕ್ರವಾರ ಖಾರ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ದೂರಿನಲ್ಲಿ, ಫರಾ ಖಾನ್…

Read More

ಬೆಳಗಾವಿ : ಬೆಳಗಾವಿಯಲ್ಲಿ ಮರಾಠಿಯಲ್ಲಿ ಟಿಕೆಟ್ ಕೇಳ್ತೀಯಲ್ಲ ಕನ್ನಡ ಬರೋದಿಲ್ವ? ಕನ್ನಡ ಮಾತನಾಡು ಎಂದ ಕೆ ಎಸ್ ಆರ್ ಟಿಸಿ ಕಂಡಕ್ಟರ್ ಮೇಲೆ ಹಲ್ಲೆ ಖಂಡಿಸಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಇಂದು ಪ್ರತಿಭಟನೆ ನಡೆಸಿದ್ದಾರೆ. ಬೆಳಗಾವಿಯಲ್ಲಿ ಕರವೇ ನಾರಾಣಗೌಡ ಬಣದ ಕಾರ್ಯಕರ್ತರು ರಸ್ತೆ ತಡೆ ನಡೆಸಿದ್ದಾರೆ. ಬಾಗಲಕೋಟೆ-ಬೇಳಗಾವಿ ಹೆದ್ದಾರಿ ತಡೆ ನಡೆಸಿದ ಪ್ರತಿಭಟನಾಕಾರರು, ಎಂಇಎಸ್ ಪುಂದರ ಅಣಕುಶವ ಯಾತ್ರೆ ನಡೆಸಿದ್ದಾರೆ. ರಸ್ತೆಯಲ್ಲಿಯೇ ಕುಳಿತು ಧರಣಿ ನಡೆಸಿ ಎಂಇಎಸ್ ವಿರುದ್ಧ ಘೋಷಣೆಗಳನ್ನು ಕೂಗಿದ್ದು, ಎಂಇಎಸ್ ವಿರುದ್ಧ ಕಠಿಅಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ. ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆ ಪೊಲೀಸರು ಹಲವು ಕಾರ್ಯಕರ್ತರನ್ನು ವಶಕ್ಕೆ ಪಡೆದಿದ್ದಾರೆ. ಇನ್ನು ಪ್ರಕರಣಕ್ಕೆ ಸಂಬಂಧಿಸಿದಂತೆ ಎಂಇಸ್ ಕಾರ್ಯಕರ್ತರು ಇಂದು ಕೆಎಸ್ ಆರ್ ಟಿಸಿ ಬಸ್ ಗಳನ್ನು ತಡೆದು ಎಂಇಎಸ್, ಉದ್ಧವ್ ಠಾಕ್ರೆ ಬಣದ ಶಿವಸೇನೆ ಕಾರ್ಯಕರ್ತರು ಕೊಲ್ಲಾಪುರದಿಂದ ಬೆಳಗಾವಿಗೆ ಬರುತ್ತಿದ್ದ ಸಾರಿಗೆ ಬಸ್ ತಡೆದು ಪುಂಡಾಟಿಕೆ ನಡೆಸಿದ್ದಾರೆ. ನಿರ್ವಾಹಕನ ವಿರುದ್ಧ ಪೋಕ್ಸೋ ಕೇಸ್ ದಾಖಲು ಕೆ ಎಸ್…

Read More

ಬೆಳಗಾವಿ : ಮಹಾರಾಷ್ಟ್ರದಲ್ಲಿ ಎಂಇಎಸ್ ಪುಂಡರ ಪುಂಡಾಟಿಕೆ ಮುಂದುವರೆದಿದ್ದು, ಕೊಲ್ಲಾಪುರದಲ್ಲಿ ಕರ್ನಾಟಕದ ಸಾರಿಗೆ ಬಸ್ ತಡೆದ ಭಗವಾಧ್ವಜ ಕಟ್ಟಿ ಪುಂಡಾಟಿಕೆ ನಡೆಸಿದ್ದಾರೆ. ಮರಾಠಿಯಲ್ಲಿ ಟಿಕೆಟ್ ಕೇಳ್ತೀಯಲ್ಲ ಕನ್ನಡ ಬರೋದಿಲ್ವ? ಕನ್ನಡ ಮಾತನಾಡು ಎಂದ ಕೆ ಎಸ್ ಆರ್ ಟಿಸಿ ಕಂಡಕ್ಟರ್ ಪ್ರಕರಣಕ್ಕೆ ಸಂಬಂಧಿಸಿದಂತೆ ಎಂಇಸ್ ಕಾರ್ಯಕರ್ತರು ಇಂದು ಕೆಎಸ್ ಆರ್ ಟಿಸಿ ಬಸ್ ಗಳನ್ನು ತಡೆದು ಎಂಇಎಸ್, ಉದ್ಧವ್ ಠಾಕ್ರೆ ಬಣದ ಶಿವಸೇನೆ ಕಾರ್ಯಕರ್ತರು ಕೊಲ್ಲಾಪುರದಿಂದ ಬೆಳಗಾವಿಗೆ ಬರುತ್ತಿದ್ದ ಸಾರಿಗೆ ಬಸ್ ತಡೆದು ಪುಂಡಾಟಿಕೆ ನಡೆಸಿದ್ದಾರೆ. ನಿರ್ವಾಹಕನ ವಿರುದ್ಧ ಪೋಕ್ಸೋ ಕೇಸ್ ದಾಖಲು ಕೆ ಎಸ್ ಆರ್ ಟಿ ಸಿ ಬಸ್ಸಿನಲ್ಲಿ ಟಿಕೆಟ್ ನೀಡುವಂತೆ ಮರಾಠಿಯಲ್ಲೇ ಕೇಳಿದಂತ ಯುವತಿಗೆ ಕನ್ನಡ ಬರೋದಿಲ್ವ ಕನ್ನಡದಲ್ಲೇ ಕೇಳಿ ಎಂಬುದಾಗಿ ಕಂಡಕ್ಟರ್ ತಿಳಿಸಿದ್ದರು. ಇಷ್ಟಕ್ಕೇ ಮರಾಠಿ ಯುವಕರು ಬಸ್ ನಿಲ್ಲಿಸಿ ಕಂಡಕ್ಟರ್ ಮೇಲೆ ಹಲ್ಲೆ ಮಾಡಿದ್ದರು. ಈ ಸಂಬಂಧ ಮೂವರನ್ನು ಪೊಲೀಸರು ಬಂಧಿಸಿದ್ದರು. ಬೆಳಗಾವಿಯ ಸುಳೇಬಾವಿ ಹಾಗೂ ಬಾಳೆಕುಂದ್ರಿ ಮಾಗ್ರ ಮಧ್ಯದಲ್ಲಿ ಕನ್ನಡ ಮಾತನಾಡಿ ಎಂದಿದ್ದಕ್ಕೆ…

Read More