Author: kannadanewsnow57

ಬೆಂಗಳೂರು: ಉಪ ನೋಂದಣಾಧಿಕಾರಿಗಳು ಮತ್ತು ಸಿಬ್ಬಂದಿಗಳು ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಫೆಬ್ರವರಿ 27 ರಿಂದ ರಾಜ್ಯಾದ್ಯಂತ ಆಸ್ತಿ ನೋಂದಣಿ ಸೇರಿ ಎಲ್ಲ ಸೇವೆಯನ್ನು ಬಹಿಷ್ಕರಿಸಿ ಅನಿರ್ಧಿಷ್ಟಾವಧಿ ಮುಷ್ಕರ ನಡೆಸಲು ನಿರ್ಧರಿಸಿದ್ದು, ರಾಜ್ಯಾದ್ಯಂತ ಆಸ್ತಿ ನೋಂದಣಿ ಸ್ಥಗಿತವಾಗುವ ಸಾಧ್ಯತೆ ಇದೆ. ಕರ್ನಾಟಕ ರಾಜ್ಯ ನೋಂದಣಿ ಮತ್ತು ಮುದ್ರಾಂಕ ಇಲಾಖೆ ನೌಕರರ ಸಂಘ ಶುಕ್ರವಾರ ಕಂದಾಯ ಸಚಿವ ಕೃಷ್ಣ ಬೈರೇಗೌಡ, ಸರ್ಕಾರದ ಮುಖ್ಯ ಕಾರ್ಯದರ್ಶಿ ಹಾಗೂ ಇಲಾಖೆಯ ಕಾರ್ಯದರ್ಶಿಗಳಿಗೆ ಈ ಸಂಬಂಧ ಪತ್ರ ಸಲ್ಲಿಸಿದ್ದು, ಬೇಡಿಕೆಗಳನ್ನು ಈಡೇರಿಸದಿದ್ದರೆ ಫೆಬ್ರವರಿ 27ರಿಂದ ರಾಜ್ಯಾದ್ಯಂತ ಆಸ್ತಿ ದಸ್ತಾವೇಜು ನೋಂದಣಿ ಸೇರಿ ಎಲ್ಲಾ ಸೇವೆಗಳನ್ನು ಬಹಿಷ್ಕರಿಸಿ ಮುಷ್ಕರ ಹೂಡಲು ನಿರ್ಧಾರ ಕೈಗೊಂಡಿರುವುದಾಗಿ ಹೇಳಿದ್ದಾರೆ. ಈ ಮೂಲಕ ರಾಜ್ಯಾದ್ಯಂತ ಫೆ.27 ರಿಂದ ಆಸ್ತಿ ನೋಂದಣಿ ಸ್ಥಗಿತವಾಗುವ ಸಾಧ್ಯತೆ ಇದೆ. ಕಾವೇರಿ-2 ತಂತ್ರಾಂಶದಲ್ಲಿನ ಸಮಸ್ಯೆ, ಇಸಿ, ಸಿಸಿ ವಿತರಿಸಲು ಉಂಟಾಗುತ್ತಿರುವ, ಸರ್ವರ್ ಸಮಸ್ಯೆ, ಐಟಿ ಅಧಿಕಾರಿಗಳು ಮಾಹಿತಿ ಹೆಸರಲ್ಲಿ ಉಪ ನೋಂದಣಾಧಿಕಾರಿಗಳಿಗೆ ನೀಡುತ್ತಿರುವ ಕಿರುಕುಳದ ವಿರುದ್ಧ ಹಾಗೂ ವರ್ಗಾವಣೆಯ ಪ್ರತ್ಯೇಕ…

Read More

ಬೆಂಗಳೂರು : ರಾಜ್ಯ ಸರ್ಕಾರಿ ಪ್ರಯೋಗಾಲಯದ ಪರೀಕ್ಷೆಯಲ್ಲಿ ಅಸುರಕ್ಷಿತ ಎಂದು ಸಾಬೀತಾದ ಹಾಗೂ ಗುಣಮಟ್ಟ ಪರೀಕ್ಷೆಯಲ್ಲಿ ವಿಫಲವಾಗಿರುವ ವಿವಿಧ ಕಂಪನಿಗಳ 9 ಔಷಧಿಗಳ ಮಾರಾಟವನ್ನು ದೇಶಾದ್ಯಂತ ನಿರ್ಬಂಧಿಸಬೇಕು ಎಂದು ಸಚಿವ ದಿನೇಶ್ ಗುಂಡೂರಾವ್ ಅವರು ಕೇಂದ್ರ ಆರೋಗ್ಯ ಸಚಿವ ಜೆ.ಪಿ. ನಡ್ಡಾ ಅವರಿಗೆ ಪತ್ರ ಬರೆದಿದ್ದಾರೆ. ಈ ವರ್ಷದ ಆರಂಭದಿಂದ ಫೆಬ್ರವರಿ 16ರ ನಡುವೆ, ಇತರ ರಾಜ್ಯಗಳಲ್ಲಿ ತಯಾರಾಗಿರುವ ಒಂಬತ್ತು ಔಷಧಗಳು ನಮ್ಮ ರಾಜ್ಯ ಸರ್ಕಾರದ ಪ್ರಯೋಗಾಲಯಗಳಲ್ಲಿ ಗುಣಮಟ್ಟ ಪರೀಕ್ಷೆಗಳಲ್ಲಿ ವಿಫಲವಾಗಿವೆ. ಈಗಾಗಲೇ ಪಶ್ಚಿಮ ಬಂಗಾಳ ಮೂಲದ ಪಶ್ಚಿಮ್ ಬಂಗಾ ಫಾರ್ಮಾಸ್ಯುಟಿಕಲ್ಸ್ ತಯಾರಿಸಿದ ಔಷಧಿಯನ್ನು ಬಳಸಿದ್ದ ಪರಿಣಾಮ ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಐವರು ತಾಯಂದಿರು ಮೃತಪಟ್ಟಿದ್ದಾರೆ. ಮುಂದೆ ಇಂತಹ ಘಟನೆಗಳಾಗದಂತೆ ತಡೆಗಟ್ಟುವ ಮುನ್ನೆಚ್ಷರಿಕೆಯಲ್ಲಿ ನಾವು ಕಾರ್ಯ ನಿರ್ವಹಿಸುತ್ತಿದ್ದು, ಈ ಔಷಧಿಗಳು ರಾಜ್ಯದಲ್ಲಿ ಮಾರಾಟವಾಗದಂತೆ ಸಾಕಷ್ಟು ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ. ಈ ಸಮಯದಲ್ಲಿ ಇತರ ಕಂಪನಿಗಳು ತಯಾರಿಸಿದ ಬಳಕೆಗೆ ಯೋಗ್ಯವಲ್ಲದ ಔಷಧಿಗಳ ಮಾರಾಟವನ್ನು ನಾವು ಸಹಿಸುವುದಿಲ್ಲ ಎಂದು ಹೇಳಿದ್ದಾರೆ. ಈ ಹಿನ್ನೆಲೆಯಲ್ಲಿ ಈ ಕಂಪನಿಗಳು ಮಾರಾಟ…

Read More

ಬೆಳಗಾವಿ : ಇನ್ನೊಂದು ವಾರದಲ್ಲಿ ಗೃಹಲಕ್ಷ್ಮೀ ಯೋಜನೆಯ ಫಲಾನುಭವಿಗಳ ಖಾತೆಗೆ ಹಣ ಸಂದಾಯವಾಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ. ‌ ಬೆಳಗಾವಿಯ ಗೃಹ ಕಚೇರಿಯಲ್ಲಿ ಮಾತನಾಡಿದ ಸಚಿವರು, ತಾಲೂಕು ಪಂಚಾಯಿತಿ ಮುಖಾಂತರ ಫಲಾನುಭವಿಗಳ ಬ್ಯಾಂಕ್ ಖಾತೆಗೆ ಹಣ ಬಿಡುಗಡೆ ಮಾಡಲಾಗುವುದು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ರಸ್ತೆ ಅಪಘಾತದಿಂದಾಗಿ ವಿಶ್ರಾಂತಿಯಲ್ಲಿದ್ದುದರಿಂದಾಗಿ ಹಣ ಸಂದಾಯವಾಗಲು ಸ್ವಲ್ಪ ವಿಳಂಬ ಆಯಿತು. ಈಗಾಗಲೇ ಅಧಿಕಾರಿಗಳಿಗೆ ಆದೇಶ ನೀಡಿದ್ದು, ಶೀಘ್ರದಲ್ಲೇ ಹಣ ಸಂದಾಯವಾಗಲಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ಇದುವರೆಗೆ ಬೆಂಗಳೂರಿನ ಕೇಂದ್ರ ಕಚೇರಿ ಮೂಲಕ ಹಣ‌ ಬಿಡುಗಡೆ ಮಾಡಲಾಗುತ್ತಿತ್ತು. ಇದನ್ನು ವಿಕೇಂದ್ರೀಕರಣ ಮಾಡುವ ನಿಟ್ಟಿನಲ್ಲಿ ತಾಲೂಕು ಪಂಚಾಯಿತಿ ಮೂಲಕ ಹಣ ಬಿಡುಗಡೆ ಮಾಡಿ, ನಂತರ ನಮ್ಮ ಇಲಾಖೆಯ ಶಿಶು ಯೋಜನಾಭಿವೃದ್ಧಿ ಅಧಿಕಾರಿಗಳ (ಸಿಡಿಪಿಓ) ಖಾತೆಗೆ ಹಣವನ್ನು ವರ್ಗಾವಣೆ ಮಾಡಲಾಗುತ್ತದೆ. ಇನ್ನೊಂದು ವಾರದಲ್ಲಿ ಹಣ ಬಿಡುಗಡೆ ಮಾಡುವಂತೆ ಸೂಚಿಸಿದ್ದೇನೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ತಿಳಿಸಿದರು.…

Read More

ನವದೆಹಲಿ: ರೈಲ್ವೆಯಲ್ಲಿ 32,438 ಗ್ರೂಪ್ ಡಿ ಹುದ್ದೆಗಳಿಗೆ ಅರ್ಜಿ ಪ್ರಕ್ರಿಯೆ ನಡೆಯುತ್ತಿದೆ. ಈಗ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವನ್ನು ಮಾರ್ಚ್ 1, 2025 ರವರೆಗೆ ವಿಸ್ತರಿಸಲಾಗಿದೆ. ಇನ್ನೂ ಅರ್ಜಿ ಸಲ್ಲಿಸದ ಅಭ್ಯರ್ಥಿಗಳು ತಮ್ಮ ಅರ್ಜಿ ಪ್ರಕ್ರಿಯೆಯನ್ನು ಸಾಧ್ಯವಾದಷ್ಟು ಬೇಗ ಪೂರ್ಣಗೊಳಿಸಬೇಕು ಏಕೆಂದರೆ ಕೊನೆಯ ದಿನಾಂಕದ ನಂತರ ರೈಲ್ವೆ ನೇಮಕಾತಿ ಮಂಡಳಿಯು ಅರ್ಜಿ ವಿಂಡೋವನ್ನು ಮುಚ್ಚುತ್ತದೆ. ಪ್ರಮುಖ ದಿನಾಂಕಗಳು: ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಆರಂಭ ದಿನಾಂಕ: 23-01-2025 ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 01-03-2025 ರೈಲ್ವೆ ಗ್ರೂಪ್‌ ಡಿ ಹುದ್ದೆಗಳ ವಿವರ ಹೀಗಿದೆ ಟ್ರ್ಯಾಕ್ ಮೇಂಟೆನರ್ ಗ್ರೇಡ್‌ IV ತಾಂತ್ರಿಕ ವಿಭಾಗದ ಸಹಾಯಕ ಅಸಿಸ್ಟಂಟ್‌ ಪಾಯಿಂಟ್ಸ್‌ಮನ್ ಟ್ರ್ಯಾಕ್‌ ಮನ್ ಅಸಿಸ್ಟಂಟ್ ಬ್ರಿಡ್ಜ್‌ ಇತರೆ ಹಲವು ವಿಭಾಗಗಳ ಲೆವೆಲ್‌ 1 ಪೋಸ್ಟ್‌ಗಳು: ಆರ್ಆರ್ಬಿ ಗ್ರೂಪ್ ಡಿ ಅರ್ಹತಾ 2025 ಎನ್ಸಿವಿಟಿ / ಎಸ್ಸಿವಿಟಿಯಿಂದ ಮಾನ್ಯತೆ ಪಡೆದ ಸಂಸ್ಥೆಯಿಂದ ಪ್ರೌಢಶಾಲಾ (10 ನೇ ತರಗತಿ) ಪೂರ್ಣಗೊಳಿಸಿದ ಅಥವಾ ಎನ್ಸಿವಿಟಿ…

Read More

ಬೆಂಗಳೂರು : ರಾಜ್ಯದಲ್ಲಿ ಬಾಣಂತಿಯರ ಸಾವು ತಡೆಗೆ ರಾಜ್ಯ ಸರ್ಕಾರವು ಮಹತ್ವದ ಕ್ರಮ ಕೈಗೊಂಡಿದ್ದು, ಇನ್ಮುಂದೆ ಆಸ್ಪತ್ರೆಗಳಲ್ಲಿ ಈ ಮಹತ್ವದ ನಿಯಮಗಳನ್ನು ಪಾಲಿಸುವಂತೆ ಮಹತ್ವದ ಆದೇಶ ಹೊರಡಿಸಲಾಗಿದೆ. ತಾಯಿ ಆರೋಗ್ಯ ಕಾರ್ಯಕ್ರಮದ ಅಡಿಯಲ್ಲಿ ಸರ್ಕಾರಿ ಆರೋಗ್ಯ ಸಂಸ್ಥೆಗಳಲ್ಲಿ ಸಹಜ ಮತ್ತು ಸಿಜೇರಿಯನ್ ಶಸ್ತ್ರ ಚಿಕಿತ್ಸೆಗಳು ಜರಗುತ್ತಿವೆ. ತಾಯಿ ಆರೋಗ್ಯ ಕಾರ್ಯಕ್ರಮದ ಮಾರ್ಗಸೂಚಿಯಂತೆ ಸಹಜ ಹೆರಿಗೆಯಾದ ಬಾಣಂತಿಯನ್ನು ಕನಿಷ್ಠ 3 ದಿವಸಗಳು ಹಾಗೂ ಸಿಜೇರಿಯನ್ ಶಸ್ತ್ರ, ಚಿಕಿತ್ಸೆ ಬಳಿಕ 7 ದಿವಸಗಳ ವರೆಗೂ ಸರ್ಕಾರಿ ಆಸ್ಪತ್ರೆಯಲ್ಲಿ ಕಡ್ಡಾಯವಾಗಿ ಒಳರೋಗಿಯಾಗಿ ಚಿಕಿತ್ಸೆಯನ್ನು ನೀಡುವುದು. ಒಂದು ವೇಳೆ, ಜಿಲ್ಲಾ ಆಸ್ಪತ್ರೆಯಲ್ಲಿ ಹಾಸಿಗೆಗಳ ಕೊರತೆ ಇದ್ದಲ್ಲಿ ಹಾಗೂ ಬಾಣಂತಿ ಮತ್ತು ನವಜಾತ ಶಿಶುವಿನ ಆರೋಗ್ಯವು ತೃಪ್ತಿಕರವಾಗಿದಲ್ಲಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಸಮನ್ವಯದೊಂದಿಗೆ ಹತ್ತಿರದ ತಾಲ್ಲೂಕು ಅಥವಾ CemONC ಸಮುದಾಯ ಆರೋಗ್ಯ ಕೇಂದ್ರಕ್ಕೆ ಶಸ್ತ್ರ ಚಿಕಿತ್ಸೆಗೊಂಡ 5 ದಿವಸಗಳ ಬಳಿಕ ಮಾರ್ಗಸೂಚಿಯಂತೆ ನಗು-ಮಗು ವಾಹನದಲ್ಲಿ ವರ್ಗಾಯಿಸಿ ಒಳರೋಗಿಯಾಗಿ ದಾಖಲಿಸಿ ಚೇತರಿಸಿಕೊಳ್ಳಲು ಅನುವು ಮಾಡಿಕೊಡುವುದು. ಬಾಣಂತಿಗೆ…

Read More

ನಿಮ್ಮಲ್ಲಿರುವ ಎಲ್ಲಾ ದಾಖಲೆಗಳಲ್ಲಿ, ಆಧಾರ್ ಕಾರ್ಡ್ ನಿಮ್ಮ ಬಳಿ ಇಲ್ಲದಿದ್ದರೆ ನಿಮ್ಮ ಅನೇಕ ಕೆಲಸಗಳು ಸ್ಥಗಿತಗೊಳ್ಳಬಹುದು. ಇಂದಿನ ಕಾಲದಲ್ಲಿ, ಬಹುತೇಕ ಪ್ರತಿಯೊಂದು ಕೆಲಸಕ್ಕೂ ಆಧಾರ್ ಕಾರ್ಡ್ ಅಗತ್ಯವಿದೆ. ಸಿಮ್ ಕಾರ್ಡ್, ಬ್ಯಾಂಕಿನಲ್ಲಿ ಖಾತೆ ಸೇರಿದಂತೆ ಸರ್ಕಾರಿ ಯೋಜನೆಗೆ ಅರ್ಜಿ ಸಲ್ಲಿಸಲು ಆಧಾರ್ ಕಾರ್ಡ್ ಪ್ರಮುಖವಾದ ದಾಖಲೆಯಾಗಿದೆ. ಆದರೆ ನಿಮ್ಮ ಆಧಾರ್ ಕಾರ್ಡ್ ಮೂಲಕವೂ ವಂಚನೆ ಸಂಭವಿಸಬಹುದು ಎಂದು ನಿಮಗೆ ತಿಳಿದಿದೆಯೇ? ಆಧಾರ್ ಕಾರ್ಡ್ ಹೊಂದಿರುವವರ ಯಾವ ತಪ್ಪುಗಳು ವಂಚನೆಗೆ ಬಲಿಪಶುವಾಗಿಸಬಹುದು ಎಂದು ತಿಳಿಯೋಣ. ಆಧಾರ್ ಕಾರ್ಡ್ ಹೊಂದಿರುವವರು ಈ ತಪ್ಪುಗಳನ್ನು ಮಾಡಬೇಡಿ 1 ಅನೇಕ ಜನರು ತಮ್ಮ ಇ-ಆಧಾರ್ ಕಾರ್ಡ್ ಡೌನ್ಲೋಡ್ ಮಾಡಲು ತಮ್ಮ ಕಚೇರಿ ಕಂಪ್ಯೂಟರ್, ಸ್ನೇಹಿತರ ಕಂಪ್ಯೂಟರ್ ಅಥವಾ ಸೈಬರ್ ಕೆಫೆಯಲ್ಲಿ ಸ್ಥಾಪಿಸಲಾದ ವ್ಯವಸ್ಥೆಯನ್ನು ಬಳಸುತ್ತಾರೆ. ಇದನ್ನು ಎಂದಿಗೂ ಮಾಡಬೇಡಿ, ಇಲ್ಲದಿದ್ದರೆ ನಿಮ್ಮ ಇ-ಆಧಾರ್ ಮತ್ತು ಇತರ ಮಾಹಿತಿ ಸೋರಿಕೆಯಾಗಬಹುದು. ಅಲ್ಲದೆ, ಈ ಇ-ಆಧಾರ್ ಅನ್ನು ಬೇರೆ ಯಾರಾದರೂ ಡೌನ್ಲೋಡ್ ಮಾಡಬಹುದು. ಆದ್ದರಿಂದ ಯಾವಾಗಲೂ ಈ ಕೆಲಸವನ್ನು ನಿಮ್ಮ…

Read More

ಹಾವೇರಿ : ಮದುವೆಯಾಗಲು ಹೆಣ್ಣು ಸಿಗಲಿಲ್ಲ ಎಂದು ಮನನೊಂದು ಯುವ ರೈತ ಆತ್ಮಹತ್ಯೆ ಮಾಡಿಕೊಂಡ ಘಟನೆ ಹಾವೇರಿ ಜಿಲ್ಲೆಯಲ್ಲಿ ನಡೆದಿದೆ. ತಾಲೂಕಿನ ಕಳ್ಳಿಹಾಳ ಗ್ರಾಮದಲ್ಲಿ 35 ವರ್ಷದ ಯುವಕನೊಬ್ಬ ತನಗೆ ಮದುವೆಯಾಗಲು ಹೆಣ್ಣು ಸಿಗಲಿಲ್ಲ ಎಂದು ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವ ಬೇಸರದ ಘಟನೆ ನಡೆದಿದೆ. ಮೃತರನ್ನು ಗ್ರಾಮದ ಪ್ರಕಾಶ ಬಸವರಾಜ ಹೂಗಾರ (35) ಎಂದು ಗುರುತಿಸಲಾಗಿದೆ. ಮೃತ ಯುವಕನಿಗೆ ಕಳೆದ ಕೆಲ ವರ್ಷಗಳಿಂದ ಮದುವೆಯಾಗಲು ಬೇರೆ ಬೇರೆ ಭಾಗಗಳಲ್ಲಿ ಹುಡುಗಿ ಹುಡುಕುತ್ತಿದ್ದರು. ಆದರೆ ಎಲ್ಲೂ ಕೂಡ ಹುಡುಗಿ ಸೆಟ್ ಆಗಿರಲಿಲ್ಲ. ಸುಮಾರು 10-12 ವರ್ಷಗಳಿಂದ ಹುಡುಗಿ ಹುಡುಕುತ್ತಿದ್ದ ಬಸವರಾಜ ಬಹಳ ಬೇಸತ್ತಿದ್ದರು. ಆದರೆ ಇಷ್ಟು ವರ್ಷವಾದರೂ ಹೆಣ್ಣು ಸಿಗಲಿಲ್ಲ ಅಂತ ಮನೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಸಂಬಂಧ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಬೆಂಗಳೂರು : ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದಲ್ಲಿ ಮಹತ್ವ ರಾಜ್ಯ ಸಚಿವ ಸಂಪುಟ ಸಭೆ ನಡೆಯಿತು. ಈ ಸಂಪುಟ ಸಭೆಯಲ್ಲಿ ಬಜೆಟ್ ಅಧಿವೇಶನಕ್ಕೆ ಅನುಮೋದನೆ ಸೇರಿದಂತೆ ಮಹತ್ವದ ನಿರ್ಧಾರಗಳನ್ನು ಕೈಗೊಳ್ಳಲಾಗಿದೆ. ಆ ಪ್ರಮುಖ ಹೈಲೈಟ್ಸ್ ಮುಂದಿದೆ ಓದಿ. ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು • ಬೆಳಗಾವಿ ಜಿಲ್ಲೆಯ ಅಥಣಿ ತಾಲ್ಲೂಕು ಮತ್ತು ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲ್ಲೂಕಿನಲ್ಲಿ 50 ಹಾಸಿಗೆಗಳ ಸಾಮರ್ಥ್ಯದ ತಾಯಿ ಮತ್ತು ಮಕ್ಕಳ ಆಸ್ಪತ್ರೆಗಳನ್ನು ರೂ.37.98 ಕೋಟಿಗಳ ಅಂದಾಜು ಮೊತ್ತದಲ್ಲಿ ನಿರ್ಮಿಸಲು ಆಡಳಿತಾತ್ಮಕ ಅನುಮೋದನೆ • ರೂ.75 ಕೋಟಿಗಳ ಅಂದಾಜು ವೆಚ್ಚದಲ್ಲಿ ನವೋದ್ಯಮಗಳಿಗಾಗಿ ಒಂದು ಸಂಯೋಜಿತ ಬಿಯಾ೦ಡ್ ಬೆಂಗಳೂರು ಕ್ಲಸ್ಟರ್ ಸೀಡ್ ಫಂಡ್ ಅನ್ನು ಸ್ಥಾಪಿಸಲು ನಿರ್ಧಾರ • ಕೋಮು-ಸೌಹಾರ್ದದ ಪ್ರತೀಕದಂತಿರುವ ಚಿಕ್ಕಬಳ್ಳಾಪುರ ಜಿಲ್ಲೆ ಚಿ೦ತಾಮಣಿ ತಾಲ್ಲೂಕು ಮುರಗಮಲ್ಲ ಗ್ರಾಮದ ಹಜರತ್ ಫಖೀ-ಷಾ-ವಲಿ ದರ್ಗಾ (ಅಮ್ಮಜಾನ್-ಬಾವ್‌ಜಾನ್ ದರ್ಗಾ)ವನ್ನು ರೂ.31.99 ಕೋಟಿ ವೆಚ್ಚದಲ್ಲಿ ಅಭಿವೃದ್ಧಿ ಪಡಿಸುವುದು ಹಾಗೂ ಮೂಲಭೂತ ಸೌಕರ್ಯಗಳನ್ನು ಒದಗಿಸಲು ತೀರ್ಮಾನ • ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲ್ಲೂಕಿನ…

Read More

ಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಸಾರ್ವಜನಿಕರು ತಮ್ಮ ಆಸ್ತಿಗಳಿಗೆ ತೆರಿಗೆ ಪಾವತಿಸಿ ಬಿ-ಖಾತಾ ಪಡೆದುಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ತಿಳಿಸಿದ್ದಾರೆ. ಸರ್ಕಾರಿ ಹಾಗೂ ಸರ್ಕಾರದ ಅಧೀನ ಇಲಾಖೆ, ನಿಗಮ, ಮಂಡಳಿಗಳ ಜಾಗಗಳನ್ನು ಹೊರತುಪಡಿಸಿ, ಅನಧಿಕೃತ ಬಡಾವಣೆ, ಭೂ ಪರಿವರ್ತನೆ ಹೊಂದದೆ ಸ್ವಂತವಾಗಿ ತಮ್ಮದೇ ಮಾಲೀಕತ್ವ ಹೊಂದಿದ ನಿವೇಶನ/ಜಾಗಗಳಲ್ಲಿ ನಿರ್ಮಿಸಿಕೊಂಡಿರುವ ಅನಧಿಕೃತ ನಿವೇಶನ/ಕಟ್ಟಡಗಳನ್ನು 2024 ಸೆ.10 ರ ಒಳಗಾಗಿ ನೋಂದಾವಣೆ ಮೂಲಕ ಖರೀದಿ ಮಾಡಿದಂತಹ ಆಸ್ತಿಗಳನ್ನು ಮಹಾನಗರ ಪಾಲಿಕೆ, ನಗರಸಭೆ, ಪುರಸಭೆ ಮತ್ತು ಪಟ್ಟಣ ಪಂಚಾಯಿತಿಗಳಲ್ಲಿ ಬಿ-ಖಾತೆ ಪಡೆಯಬಹುದಾಗಿದೆ. ಒಂದು ಬಾರಿ ಮಾತ್ರ ಮೇ 10 ರೊಳಗಾಗಿ ಅರ್ಜಿ ಸಲ್ಲಿಸಿ 2024-25ನೇ ಸಾಲಿನ ಆಸ್ತಿ ತೆರಿಗೆಯ 02 ಪಟ್ಟು ದಂಡ ಪಾವತಿಸಿ, ಮಹಾನಗರ ಪಾಲಿಕೆಯಲ್ಲಿ ನಮೂನೆ-2ಎ ಮತ್ತು ಇತರೇ ನಗರ ಸ್ಥಳೀಯ ಸಂಸ್ಥೆಗಳಲ್ಲಿ ನಮೂನೆ-3ಎ ಪಡೆಯಲು ಅವಕಾಶ ನೀಡಲಾಗಿದೆ. ಬಿ’ ರಿಜಿಸ್ಟರ್ ನಲ್ಲಿ ದಾಖಲಿಸಬೇಕಾದ ಆಸ್ತಿಗಳಿಗೆ ಇ-ಖಾತಾ ನೀಡಲು ಪಡೆಯಬೇಕಾದ ದಾಖಲೆ ಆಸ್ತಿಗೆ   ಸಂಬಂಧಿಸಿದಂತೆ  ಸ್ವತ್ತಿನ ಮಾಲೀಕತ್ವ ಸಾಬೀತುಪಡಿಸುವ…

Read More

ದಕ್ಷಿಣ ಕನ್ನಡ : ಮನೆಯಲ್ಲೇ ಸೀಲಿಂಗ್ ಫ್ಯಾನ್ ಗೆ ನೇಣು ಬಿಗಿದುಕೊಂಡು 7 ನೇ ತರಗತಿ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ತಣ್ಣೀರುಪಂತ ಗ್ರಾಮದಲ್ಲಿ 7 ನೇ ತರಗತಿ ವಿದ್ಯಾರ್ಥಿ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಉಪ್ಪಿನಂಗಡಿಯ ಖಾಸಗಿ ಶಾಲೆಯಲ್ಲಿ 7 ನೇ ತರಗತಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿ ಮನೆಯಲ್ಲಿ ಊಟ ಮಾಡಿದ ನಂತರ ಮಲಗಲು ಹೋಗುತ್ತೇನೆ ಎಂದು ಹೇಳಿ ರೂಮ್ ಗೆ ಹೋಗಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ.

Read More