Author: kannadanewsnow57

ಬೆಂಗಳೂರು : ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಅಧೀನದಲ್ಲಿ ಬರುವ ವಸತಿ ಶಾಲೆಗಳಿಗೆ 6 ನೇ ತರಗತಿಗೆ ತಂದೆ ತಾಯಿ ಇಲ್ಲದ ಮಕ್ಕಳಿಗೆ ಪ್ರವೇಶಾತಿ ಕಲ್ಪಿಸುವ ಬಗ್ಗೆ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ, ತಂದೆ ತಾಯಿ ಇಲ್ಲದ ಮಕ್ಕಳನ್ನು ಭಿಕ್ಷಾಟಣೆ ಮತ್ತು ಇತರೆ ಚಟುವಟಿಕೆಗಳಿಗೆ ಬಳಸಿಕೊಳ್ಳುವ ಸಾಧ್ಯತೆಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಅಧೀನದಲ್ಲಿ ಬರುವ ವಸತಿ ಶಾಲೆಗಳಿಗೆ 6 ನೇ ತರಗತಿಗೆ ತಂದೆ ತಾಯಿ ಇಲ್ಲದ ಮಕ್ಕಳಿಗೆ ನೇರ ಪ್ರವೇಶಾತಿ ಕಲ್ಪಿಸಲು ಕೂಡಲೇ ಅಗತ್ಯ ಕ್ರಮವಹಿಸುವಂತೆ ನಿರ್ದೇಶಿಸಲಾಗಿದೆ.

Read More

ಹೈದರಾಬಾದ್ : ದೇಶದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ ನಡೆದಿದ್ದು, ಅಪ್ರಾಪ್ತ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ನಡೆದಿದೆ. ತೆಲಂಗಾಣದ ಸಂಗಾರೆಡ್ಡಿ ಜಿಲ್ಲೆಯಲ್ಲಿ ಎಂಟು ವರ್ಷದ ಬಾಲಕಿಯ ಮೇಲೆ ಮೂವರು ಕಾಮುಕರು ಸಾಮೂಹಿಕ ಅತ್ಯಾಚಾರ ನಡೆಸಿ ಸ್ಥಳದಿಂದ ಪರಾರಿಯಾಗಲು ಯತ್ನಿಸಿದ್ದು, ಕೂಡಲೇ ಸ್ಥಳೀಯರು ಓರ್ವ ಆರೋಪಿಯನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಈ ಘಟನೆ .ಫೆಬ್ರವರಿ 20 ರ ರಾತ್ರಿ ಬಾಲಕಿ ವಸತಿ ಸಂಕೀರ್ಣದಲ್ಲಿ ತನ್ನ ಮನೆಯ ಹೊರಗೆ ಆಟವಾಡುತ್ತಿದ್ದಾಗ ನಡೆದಿದೆ. ಅಪ್ರಾಪ್ತ ಬಾಲಕಿಯನ್ನು ಚಾಕೊಲೇಟ್ ನೀಡಿ ಹತ್ತಿರದ ಪೊದೆಗಳಿಗೆ ಕರೆದೊಯ್ದು ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎನ್ನಲಾಗಿದ್ದು, ಬಾಲಕಿಯ ಕಿರುಚಾಟ ಕೇಳಿ ಸ್ಥಳೀಯರು ಸ್ಥಳಕ್ಕೆ ಓಡಿ ಹೋಗಿ ನೋಡಿದ್ದಾರೆ. ಈ ವೇಳೆ ಬಾಲಕಿಗೆ ತೀವ್ರ ಅಸ್ವಸ್ಥರಾಗಿರುವುದು ಕಂಡುಬಂದಿದೆ.ಸ್ಥಳಕ್ಕೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಉಳಿದ ಆರೋಪಿಗಳಿಗಾಗಿ ಬಲೆ ಬೀಸಿದ್ದಾರೆ.

Read More

ಬೆಂಗಳೂರು: ಸುಳ್ಳು ದಾಖಲೆ ನೀಡಿ ಬಿಪಿಎಲ್ ಕಾರ್ಡ್ ಪಡೆದುಕೊಂಡವರಿಗೆ ರಾಜ್ಯ ಸರ್ಕಾರವು ಬಿಗ್ ಶಾಕ್ ನೀಡಿದ್ದು, ಆರ್ಥಿಕವಾಗಿ ಸದೃಢರಾದವರು ಪಡೆದುಕೊಂಡಿರುವ ಬಿಪಿಎಲ್ ಕಾರ್ಡ್ ಗಳನ್ನು ಸ್ವಯಂ ಪ್ರೇರಿತವಾಗಿ ಕೂಡಲೇ ಆಹಾರ ಇಲಾಖೆಗೆ ವಾಪಸ್ ನೀಡಬೇಕು. ಇಲ್ಲವಾದಲ್ಲಿ ಅಧಿಕಾರಿಗಳು ಪತ್ತೆ ಮಾಡಿ ದಂಡ ವಿಧಿಸಲಿದ್ದಾರೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಹೆಚ್. ಮುನಿಯಪ್ಪ ಎಚ್ಚರಿಕೆ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾನದಂಡಗಳ ಅನ್ವಯ ಇಲ್ಲದ ಕಾರ್ಡ್ ಗಳ ಪರಿಶೀಲನೆ ಕಾರ್ಯ ಕೈಗೊಳ್ಳಲಾಗುತ್ತದೆ. ಅದಕ್ಕಾಗಿ ಗ್ರಾಮ ಪಂಚಾಯಿತಿ ಸಿಬ್ಬಂದಿ ವರ್ಗವನ್ನು ಬಳಕೆ ಮಾಡಿಕೊಳ್ಳುವ ಬಗ್ಗೆ ಚಿಂತನೆ ನಡೆದಿದ್ದು, ಮಾರ್ಗಸೂಚಿ ಉಲ್ಲಂಘಿಸಿ ಪಡೆದ ಎಲ್ಲಾ ಬಿಪಿಎಲ್ ಕಾರ್ಡ್ ಗಳನ್ನು ರದ್ದು ಮಾಡಲಾಗುವುದು. ಈ ಹಿಂದೆ ಅನರ್ಹಗೊಂಡಿದ್ದ ಬಿಪಿಎಲ್ ಪಡಿತರ ಚೀಟಿಗಳನ್ನು ಮರು ಸ್ಥಾಪನೆ ಮಾಡಲಾಗಿದೆ. ಹೊಸದಾಗಿ ಬಿಪಿಎಲ್ ಕಾರ್ಡ್ ಗೆ ಅರ್ಜಿ ಸಲ್ಲಿಕೆಯಾಗಿದ್ದು ಇವುಗಳನ್ನು ಪರಿಶೀಲಿಸಲಾಗಿದೆ. ಅನರ್ಹ ಕಾರ್ಡ್ ಗಗಳ ರದ್ದತಿ ಆಧಾರದ ಮೇಲೆ ಹೊಸ ಬಿಪಿಎಲ್ ಕಾರ್ಡ್ ಮಂಜೂರು ಮಾಡಲಾಗುವುದು ಎಂದರು.…

Read More

ಬೆಂಗಳೂರು : ರಾಜ್ಯ ಸರ್ಕಾರವು ಜಮೀನು ಸರ್ವೆ ಕುರಿತಂತೆ ಮಹತ್ವದ ಕ್ರಮ ಕೈಗೊಂಡಿದ್ದು, ಇನ್ಮುಂದೆ ಕೇವಲ 10 ನಿಮಿಷಗಳಲ್ಲೇ ಆಧುನಿಕ ತಂತ್ರಜ್ಞಾನದ ಮೂಲಕ ಜಮೀನು ಸರ್ವೆ ಮಾಡಬಹುದು.  ಸರ್ವೇ ಆಯುಕ್ತರ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ 465 ಭೂ ಮಾಪಕರಿಗೆ ಈ ಆಧುನಿಕ ತಂತ್ರಜ್ಞಾನವುಳ್ಳ ರೋವರ್ ಅನ್ನು ಕಂದಾಯ ಸಚಿವ ಕೃಷ್ಣಬೈರೇಗೌಡ ವಿತರಿಸಿದ್ದಾರೆ. ಈ ಮೂಲಕ  ಕಂದಾಯ ಇಲಾಖೆಯು ಜಮೀನು ಸರ್ವೇ ಮಾಡುವ ವಿಧಾನದಲ್ಲಿ ಐತಿಹಾಸಿಕ ಬದಲಾವಣೆ ತಂದಿದ್ದು, ಚೈನ್‌ ಬದಲಿಗೆ ಆಧುನಿಕ ತಂತ್ರಜ್ಞಾನ ಆಧಾರಿತ ರೋವರ್‌ ಉಪಕರಣದ ಮೂಲಕ ಸರ್ವೆ ಮಾಡಲಾಗುತ್ತದೆ. ಸರ್ವೇ ಮಾಡಲು ಕನಿಷ್ಟ 70 ನಿಮಿಷ ಅದನ್ನು ನಕ್ಷೆ ಮಾಡಲು 3 ಗಂಟೆ ಸಮಯ ವ್ಯರ್ಥವಾಗುತ್ತಿತ್ತು. ಆದರೆ, ಆಧುನಿಕ ತಂತ್ರಜ್ಞಾನ ಆಧಾರಿತ ರೋವರ್ ಈ ಕೆಲಸವನ್ನು ಕೇವಲ 10 ನಿಮಿಷಕ್ಕೆ ಮುಗಿಸಲಿದೆ. ಕಳೆದ 200 ವರ್ಷದಲ್ಲಿ ಪ್ರಪಂಚ ಇಷ್ಟು ಬದಲಾದರೂ ನಮ್ಮ ವಿಧಿ-ವಿಧಾನ ಹಾಗೆ ಇದೆ. ಆದರೆ ಇದೀಗ ಸರ್ವೇ ಕೆಲಸವನ್ನು ತಾಂತ್ರಿಕಗೊಳಿಸದೆ ಕೆಲಸ ಮಾಡಲು ಜನ ಇದ್ದಾರೆ…

Read More

ಬೆಂಗಳೂರು : ಅವಳೇ ನನ್ ಹೆಂಡ್ತಿ ಸಿನಿಮಾ ಖ್ಯಾತಿಯ ನಿರ್ದೇಶಕ ಎಸ್ ಉಮೇಶ್ ಅವರು ಅನಾರೋಗ್ಯದಿಂದ ನಿಧನರಾಗಿದ್ದಾರೆ. ಸ್ಯಾಂಡಲ್ ವುಡ್ ನಲ್ಲಿ ಹಲವು ಸಿನಿಮಾಗಳನ್ನು ನಿರ್ದೇಶನ ಮಾಡಿದ್ದ ಉಮೇಶ್ ಅವರು ಕನ್ನಡ ಚಿತ್ರರಂಗದಲ್ಲಿ ಹಲವು ವರ್ಷಗಳ ಕಾಲ ಸಕ್ರಿಯರಾಗಿದ್ದರು. ಆದರೆ. ಅನಾರೋಗ್ಯದಿಂದ ಬಳಲುತ್ತಿ ಅವರು ಇಂದು ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ ಎಂದು ಕುಟುಂಬಸ್ಥರು ಮಾಹಿತಿ ನೀಡಿದ್ದಾರೆ. ಉಮೇಶ್ ಅವರ ನಿರ್ದೇಶನದ ಕಾಶಿನಾಥ್ ನಟನೆಯ ‘ಅವಳೇ ನನ್ ಹೆಂಡ್ತಿ’ ಚಿತ್ರದ ಮೂಲಕ ಖ್ಯಾತಿ ಗಳಿಸಿದ್ದ ಅವರು , ನಂತ ಹಲವು ಸಿನಿಮಾಗಳನ್ನು ನಿರ್ದೇಶನ ಮಾಡಿದ್ದರು.

Read More

ಬೆಂಗಳೂರು : ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲೊಂದಾದ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳ ಖಾತೆಗೆ ಶಿವರಾತ್ರಿಗೆ ಮುನ್ನ ಹಣ ಜಮಾ ಮಾಡುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಗೃಹ ಲಕ್ಷ್ಮಿ ಹಣ ಬಿಡುಗಡೆಯಾಗದ ಹಿನ್ನೆಲೆಯಲ್ಲಿ ಮಹಿಳೆಯರ ಆಕ್ರೋಶ ವ್ಯಕ್ತಪಡಿಸಿದ ಬೆನ್ನಲ್ಲೇ ಗೃಹಲಕ್ಷ್ಮಿ ಯೋಜನೆಯ ಬಾಕಿ ಹಣ ಬಿಡುಗಡೆ ಮಾಡಲು ರಾಜ್ಯ ಸರ್ಕಾರವು ಮುಂದಾಗಿದೆ. ಇಂದು ನವೆಂಬರ್ ತಿಂಗಳ ಹಣ ಫಲಾನುಭವಿಗಳ ಖಾತೆಗೆ ಜಮೆ ಮಾಡಲಾಗುತ್ತದೆ. ಡಿಸೆಂಬರ್ ತಿಂಗಳ ಹಣವನ್ನು ಮುಂದಿನ ಮುಂದಿನವಾರ ಬಿಡುಗಡೆಗೆ ಸಿದ್ಧತೆ ನಡೆಸಲಾಗಿದೆ ಅಧಿಕಾರಿಗಳು ತಿಳಿಸಿದ್ದಾರೆ. ಗೃಹ ಲಕ್ಷ್ಮಿಹಣ ಬಿಡುಗಡೆ ಕುರಿತು ಮಾಹಿತಿ ನೀಡಿರುವ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು, ಗೃಹಲಕ್ಷ್ಮಿ ಯೋಜನೆಗೆ ತಾಲೂಕು ಪಂಚಾಯಿತಿ ಮೂಲಕ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗೆ ಹಣ ವರ್ಗಾವಣೆ ವಿಳಂಬವಾಗಿದೆ. ಶೀಘ್ರವೇ ಗೃಹಲಕ್ಷ್ಮಿ ಯೋಜನೆ ಎಲ್ಲಾ ಫಲಾನುಭವಿಗಳ ಖಾತೆಗೆ ಹಣ ಜಮಾ ಆಗಲಿದೆ . ಈ ಹಿಂದಿನಂತೆ ಜಿಲ್ಲಾ ಉಪನಿರ್ದೇಶಕರ ಮೂಲಕ ಗೃಹಲಕ್ಷ್ಮಿ ಯೋಜನೆ, ಹಣ ಫಲಾನುಭವಿಗಳ ಖಾತೆಗೆ ಜಮಾ ಆಗಲಿದೆ.…

Read More

ಬೆಂಗಳೂರು : ರಾಜ್ಯದ ಶಾಲಾ ಮುಖ್ಯ ಶಿಕ್ಷಕರು ಶಾಲೆಯಿಂದ ಅನ್ಯ ಕಾರ್ಯಕ್ಕೆ ತೆರಳುವಾಗ ದಾಖಲೆಯನ್ನು ನಿರ್ವಹಿಸುವುದು ಕಡ್ಡಾಯ ಎಂದು ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. ಶಿಕ್ಷಣ ಇಲಾಖೆಯ ಆದೇಶದಲ್ಲಿ ಏನಿದೆ? ಮೇಲಿನ ವಿಷಯ ಸಂಬಂಧಿಸಿದಂತೆ ಉಲ್ಲೇಖಿತ ಟಿಪ್ಪಣಿ ದಿನಾಂಕ: 21-09-2024 ರಲ್ಲಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ, ಮುಖ್ಯ ಶಿಕ್ಷಕರು ಶಾಲೆಯ ಸಮಯದಲ್ಲಿ ಶಾಲೆಯಲ್ಲಿ ಉಪಸ್ಥಿತರಿಲ್ಲದೇ ಸಭೆ ಮತ್ತು ಸಮಾರಂಭಕ್ಕೆ ತೆರಳಿರುವುದಾಗಿ ತಿಳಿದುಬಂದಿದ್ದು, ವಿದ್ಯಾರ್ಥಿಗಳಿಗೆ ಗುಣಾತ್ಮಕ ಶಿಕ್ಷಣ ನೀಡುವುದು ಸಾಧ್ಯವಾಗುತ್ತಿರುವುದಿಲ್ಲ. ಪ್ರಯುಕ್ತ ಮುಖ್ಯ ಶಿಕ್ಷಕರು ಇನ್ನು ಮುಂದೆ ಸಭೆ/ಸಮಾರಂಭಗಳಿಗೆ ತೆರಳುವ ನಮಯದಲ್ಲಿ ಚಲನ ವಲನ ವಹಿಯಲ್ಲಿ ನಮೂದಿಸಿ ಸಮಾರಂಭದ ಆಹ್ವಾನ ಪತ್ರಿಕೆ/ಸಭಾ ಸೂಚನಾ ಪತ್ರವನ್ನು ಲಗತ್ತಿಸುವಂತೆ ಎಲ್ಲಾ ಮುಖ್ಯ ಶಿಕ್ಷಕರುಗಳಿಗೆ ನಿರ್ದೇಶಿಸುವಂತೆ ಸೂಚಿಸಿರುತ್ತಾರೆ. ಮುಖ್ಯ ಶಿಕ್ಷಕರು ಇನ್ನು ಮುಂದೆ ಸಭೆ/ ಸಮಾರಂಭಗಳಿಗೆ ತೆರಳುವ ಸಮಯದಲ್ಲಿ ಚಲನ ವಲನ ವಹಿಯಲ್ಲಿ ಕಡ್ಡಾಯವಾಗಿ ನಮೂದಿಸಿ ಸಮಾರಂಭದ ಆಹ್ವಾನ ಪತ್ರಿಕೆ/ ಸಭಾ ಸೂಚನಾ ಪತ್ರವನ್ನು ಲಗತ್ತಿಸುವಂತೆ ಎಲ್ಲಾ ಮುಖ್ಯ ಶಿಕ್ಷಕರುಗಳಿಗೆ ಅಗತ್ಯ ಸೂಚನೆಗಳನ್ನು ನೀಡುವಂತೆ ರಾಜ್ಯದ ಎಲ್ಲಾ…

Read More

ಬೆಂಗಳೂರು : ರಾಜ್ಯದ ಮಹಾನಗರಗಳ ಪಾಲಿಕೆ ವ್ಯಾಪ್ತಿಯಲ್ಲಿ ದಿ: 10/09/2024ರ ಅಂತ್ಯದವರೆಗೆ ಅನಧಿಕೃತ ಬಡಾವಣೆಗಳಲ್ಲಿ ನಿರ್ಮಿಸಿಕೊಂಡಿರುವ ನಿವೇಶನ/ಕಟ್ಟಡಗಳಿಗೆ ಬಿ-ಖಾತೆ ನೀಡಲು ಅವಕಾಶ ಕಲ್ಪಿಸಿಕೊಡಲಾಗಿದ್ದು, ಆಸ್ತಿ ಮಾಲೀಕರು ಪಾಲಿಕೆ ಕಚೇರಿಯನ್ನು ಸಂಪರ್ಕಿಸುವಂತೆ ತಿಳಿಸಲಾಗಿದೆ. ಎ-ಖಾತೆ ಪಡೆಯಲು ಆಸ್ತಿಗೆ ಸಂಬಂಧಿಸಿದ ಸ್ವತ್ತಿನ ಮಾಲೀಕತ್ವ ಸಾಬೀತು ಮಾಡಿಸುವ ನೊಂದಾಯಿತ ಮಾರಾಟ ಪತ್ರಗಳು/ದಾನ ಪತ್ರ/ವಿಭಾಗ ಪತ್ರಗಳು ಅಥವಾ ಸರ್ಕಾರದ ನಿಗಮ ಮಂಡಳಿಗಳಿAದ ನೀಡಲಾದ ಹಕ್ಕುಪತ್ರಗಳು/ ಮಂಜೂರಾತಿ ಪತ್ರಗಳು, ಕಂದಾಯ ಇಲಾಖೆಯಿಂದ 94 ಸಿ.ಸಿ. ಅಡಿ ನೀಡಲಾದ ಹಕ್ಕುಪತ್ರ. ಸಕ್ಷಮ ಪ್ರಾಧಿಕಾರದಿಂದ ಅನುಮೋದನೆಯಾದ ದೃಢೀಕೃತ ಪ್ರತಿ ಮತ್ತು ನಿವೇಶನ ಬಿಡುಗಡೆ ಪತ್ರ. ಪ್ರಸಕ್ತ ಸಾಲಿನವರೆಗೆ ಋಣಭಾರ ಪ್ರಮಾಣ ಪತ್ರ. ಚಾಲ್ತಿ ಸಾಲಿನ ಆಸ್ತಿ ತೆರಿಗೆ ಪಾವತಿ ರಶೀದಿ. ಮಾಲೀಕರ ಫೋಟೋ ಮತ್ತು ಸ್ವತ್ತಿನ ಫೋಟೋ. ಮಾಲೀಕರ ಗುರುತಿನ ದಾಖಲೆ ಪ್ರತಿ ಮತ್ತು ಕಟ್ಟಡವಿದ್ದಲ್ಲಿ ವಿದ್ಯುಚ್ಛಕ್ತಿ ಬಿಲ್ ಪ್ರತಿಗಳನ್ನು ಸಲ್ಲಿಸುವುದು. ಬಿ-ಖಾತೆ ಪಡೆಯಲು ಆಸ್ತಿಗೆ ಸಂಬಂಧಿಸಿದ ಸ್ವತ್ತಿನ ಮಾಲೀಕತ್ವ ಸಾಬೀತು ಪಡಿಸುವ ದಿ: 10/09/2024ರ ಪೂರ್ವದಲ್ಲಿ ನೊಂದಾಯಿತ ಮಾರಾಟ ಪತ್ರಗಳು/…

Read More

ಹೈದರಾಬಾದ್ : ವಿಪರೀತ ಕೆಮ್ಮಿನಿಂದ ಬಳಲುತ್ತಿದ್ದ ಯುವಕನೊಬ್ಬ ಆಸ್ಪತ್ರೆಗೆ ಹೋಗಿ ಸ್ಕ್ಯಾನ್ ಮಾಡಿಸಿದಾಗ ಹೊಟ್ಟೆಯಲ್ಲಿ ಪೆನ್ ಕ್ಯಾಪ್ ಇರುವುದು ಪತ್ತೆಯಾಗಿದೆ. ಹೌದು, ತೆಲಂಗಾಣದ ಕರೀಂನಗರ ಪ್ರದೇಶದ 26 ವರ್ಷದ ಯುವಕನೊಬ್ಬ ಐದು ವರ್ಷದವನಿದ್ದಾಗ ಆಟವಾಡುವಾಗ ಪೆನ್ ಕ್ಯಾಪ್ ನುಂಗಿದ್ದ. ಅವರು ಕಳೆದ ಒಂದು ತಿಂಗಳಿನಿಂದ ಕೆಮ್ಮು ಮತ್ತು ತೂಕ ಇಳಿಕೆಯಂತಹ ಲಕ್ಷಣಗಳಿಂದ ಬಳಲುತ್ತಿದ್ದಾನೆ. ಹತ್ತು ದಿನಗಳಿಂದ ಕೆಮ್ಮು ಉಲ್ಬಣಗೊಳ್ಳುತ್ತಿತ್ತು ಮತ್ತು ಅವನಿಗೆ ನಿದ್ರೆ ಕೂಡ ಬರುತ್ತಿರಲಿಲ್ಲ, ಆದ್ದರಿಂದ ಅವನು ವೈದ್ಯರ ಬಳಿಗೆ ಹೋದನು ವೈದ್ಯರು CT ಸ್ಕ್ಯಾನ್ ಮಾಡಿದರು. ನಂತರ ಎದೆಯ ಕೆಳಗಿನ ಎಡಭಾಗದಲ್ಲಿ ಸೋಂಕು ಇರುವುದು ಪತ್ತೆಯಾಗಿದೆ. ಆದ್ದರಿಂದ ಅವರು ಅವನನ್ನು ಹೈದರಾಬಾದ್‌ಗೆ ಕಳುಹಿಸಿದರು. ಕೊಂಡಾಪುರದ ಕಿಮ್ಸ್ ಆಸ್ಪತ್ರೆಯಲ್ಲಿ ಯುವಕನಿಗೆ ಸಿಟಿ ಸ್ಕ್ಯಾನ್ ಮಾಡಿ, ರೋಗನಿರ್ಣಯ ಮಾಡಿ ಚಿಕಿತ್ಸೆ ನೀಡಿದ ಕನ್ಸಲ್ಟೆಂಟ್ ಕ್ಲಿನಿಕಲ್ ಮತ್ತು ಇಂಟರ್ವೆನ್ಷನಲ್ ಪಲ್ಮನಾಲಜಿಸ್ಟ್ ಡಾ. ಶುಭಕರ್ ನಾಡೆಲ್ಲಾ ವಿವರಗಳನ್ನು ಹಂಚಿಕೊಂಡರು. “ಆ ಯುವಕ ಇಲ್ಲಿಗೆ ಬಂದಾಗ, ನಾವು ಮೊದಲು CT ಸ್ಕ್ಯಾನ್ ಮಾಡಿದೆವು. ನಂತರ ಒಳಗೆ…

Read More

ನವದೆಹಲಿ : ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ (ಸಿಬಿಎಸ್‌ಇ) ವಿದ್ಯಾರ್ಥಿಗಳಿಗೆ ಸಿಹಿಸುದ್ದಿ ನೀಡಿದ್ದು, 2026 ರಿಂದ ವರ್ಷಕ್ಕೆ ಎರಡು ಬಾರಿ ಬೋರ್ಡ್ ಪರೀಕ್ಷೆಗಳನ್ನು ನಡೆಸಲಾಗುವುದು ಎಂದು ತಿಳಿಸಿದೆ. ಮುಂದಿನ ವರ್ಷದಿಂದ ಹತ್ತನೇ ತರಗತಿ ಪರೀಕ್ಷೆಗಳನ್ನು ವರ್ಷಕ್ಕೆ ಎರಡು ಬಾರಿ ನಡೆಸಲಾಗುವುದು ಎಂದು ಘೋಷಿಸಲಾಗಿದೆ. ಹೊಸ ರಾಷ್ಟ್ರೀಯ ನೀತಿ 2020 ರ ಪ್ರಕಾರ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಅದು ಹೇಳಿದೆ. ವಿದ್ಯಾರ್ಥಿಗಳು ಪರೀಕ್ಷೆಗಳಲ್ಲಿ ಉತ್ತಮ ಅಂಕಗಳನ್ನು ಗಳಿಸಲು ಈ ನೀತಿಯನ್ನು ಪರಿಚಯಿಸಲಾಗುತ್ತಿದೆ ಎಂದು ಹೇಳಲಾಗಿದೆ. ಈ ನಿಟ್ಟಿನಲ್ಲಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಷ್ಟ್ರೀಯ ಶೈಕ್ಷಣಿಕ ಸಂಶೋಧನಾ ಮಂಡಳಿ, ನವೋದಯ ವಿದ್ಯಾಲಯ ಸಮಿತಿ ಮತ್ತು ಕೇಂದ್ರೀಯ ವಿದ್ಯಾಲಯ ಸಂಘಟನೆಯ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ತರುವಾಯ, ಈ ಸಭೆಯಲ್ಲಿ ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ (ಸಿಬಿಎಸ್‌ಇ) ವರ್ಷಕ್ಕೆ ಎರಡು ಬಾರಿ ಬೋರ್ಡ್ ಪರೀಕ್ಷೆಗಳನ್ನು ನಡೆಸುವುದಾಗಿ ನಿರ್ಧರಿಸಲಾಯಿತು. ಈ ಮಟ್ಟಿಗೆ ಕರಡಿಗೆ ಸಹಿ ಹಾಕಲಾಯಿತು. ವರ್ಷಕ್ಕೆ ಎರಡು ಬಾರಿ ಪರೀಕ್ಷೆ..…

Read More