Subscribe to Updates
Get the latest creative news from FooBar about art, design and business.
Author: kannadanewsnow57
ಬೆಂಗಳೂರು : ಬೆಂಗಳೂರಿನಲ್ಲಿ ನೈಜೇರಿಯಾ ಮೂಲದ ವ್ಯಕ್ತಿಯೊಬ್ಬರನ್ನು ಮರದ ತುಂಡಿನಿಂದ ಹಲ್ಲೆ ನಡೆಸಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ನಿನ್ನೆ ಮಧ್ಯಾಹ್ನ 12 ಗಂಟೆಗೆ ಚಿಕನ್ ತರಲು ಮನೆಯಿಂದ ವಿದೇಶಿ ಪ್ರಜೆ ಹೊರ ಬಂದಿದ್ದರು. ಈ ವೇಳೆ ಸ್ಥಳೀಯ ನಿವಾಸಿ ಜೊತೆಗೆ ಗಲಾಟೆಯಾಗಿದೆ. ಈ ವೇಳೆ ಮರದ ತುಂಡಿನಿಂದ ವಿದೇಶಿ ಪ್ರಜೆ ಮೇಲೆ ಹಲ್ಲೆ ಮಾಡಲಾಗಿದೆ. ಹಲ್ಲೆ ಬಳಿಕ ವಿದೇಶಿ ಪ್ರಜೆ ಸ್ಥಳದಿಂದ ಕೊಂಚ ದೂರು ಒಡಿ ಹೋಗಿ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ. ಘಟನೆ ಸಂಬಂಧ ಪೊಲೀಸರು ಹಲ್ಲೆಮಾಡಿದ ವ್ಯಕ್ತಿಯನ್ನು ಬಂಧಿಸಿದ್ದಾರೆ. ಬಾಗಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ದಾವಣಗೆರೆ : ರಾಜ್ಯದಲ್ಲಿ ಮತ್ತೊಂದು ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಟಾಟಾ ಏಸ್ ವಾಹನ ಪಲ್ಟಿಯಾಗಿ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿದ ಘಟನೆ ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ರಾಜನಹಳ್ಳಿಯಲ್ಲಿ ನಡೆದಿದೆ. ರಾಷ್ಟ್ರೀಯ ಹೆದ್ದಾರಿ 48 ರಲ್ಲಿ ಟಾಟಾ ಏಸ್ ವಾಹನದ ಟೈರ್ ಬ್ಲಾಸ್ಟ್ ಆಗಿ ವಾಹನ ನಿಯಂತ್ರಣ ಕಳೆದುಕೊಂಡು ಪಲ್ಟಿಯಾದ ಪರಿಣಾಮ ಸ್ಥಳದಲ್ಲೇ ಇಬ್ಬರು ಮೃತಪಟ್ಟಿದ್ದು, ಇಬ್ಬರು ಗಾಯಗೊಂಡಿದ್ದಾರೆ. ಮೃತರನ್ನು ಮಹದೇವ್ , ಹನುಮಂತ ಎಂದು ಗುರುತಿಸಲಾಗಿದೆ. ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಹರಿಹರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಅಪಘಾತ ಸಂಭವಿಸಿದೆ.
ದಾವಣಗೆರೆ : ರಾಜ್ಯ ಸರ್ಕಾರವು ರೈತರಿಗೆ ಮತ್ತೊಂದು ಸಿಹಿಸುದ್ದಿ ನೀಡಿದ್ದು, ಅಕ್ರಮ-ಸಕ್ರಮ ಯೋಜನೆಯಡಿ ಶೀಘ್ರವೇ ಪಂಪ್ ಸೆಟ್ ಗಳಿಗೆ ಸಂಪರ್ಕ ಒದಗಿಸಲಾಗುವುದು ಎಂದು ಇಂಧನ ಸಚಿವರಾದ ಕೆ.ಜೆ.ಜಾರ್ಜ್ ತಿಳಿಸಿದ್ದಾರೆ. ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಇಂಧನ ಇಲಾಖೆ ಅಧಿಕಾರಿಗಳು ಹಾಗೂ ಶಾಸಕರೊಂದಿಗೆ ನಡೆಸಿದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು. ರೈತರ ಕೃಷಿ ಪಂಪ್‍ಸೆಟ್‍ಗಳಿಗೆ 2004 ರಿಂದಲೂ ಅಕ್ರಮ-ಸಕ್ರಮ ಎಂಬ ಕಾರ್ಯಕ್ರಮದಡಿ ಅನಧಿಕೃತ ಸಂಪರ್ಕವನ್ನು ಸಕ್ರಮ ಮಾಡುತ್ತಾ ಬರಲಾಗಿದೆ. ಇದರಡಿ ಮೂಲಭೂತ ಸೌಕರ್ಯದಡಿ ಮಾರ್ಗ, ಟಿಸಿ ಅಳವಡಿಕೆ ಮಾಡಲಾಗಿದೆ. ಬಾಕಿ ಇರುವ 4946 ಪಂಪ್‍ಸೆಟ್‍ಗಳಿಗೆ ಮೂಲಭೂತ ಸೌಕರ್ಯ ಕಲ್ಪಿಸಲು ಟೆಂಡರ್ ಕರೆಯಲಾಗಿದೆ. ರೈತರು ಸ್ವಂತವಾಗಿ ಮೂಲಭೂತ ಸೌಕರ್ಯ ಮಾಡಿಕೊಂಡು ಕೃಷಿ ಪಂಪ್‍ಸೆಟ್‍ಗಳಿಗೆ ತಕ್ಷಣವೇ ಸಂಪರ್ಕ ಪಡೆಯಲು ಹಾಗೂ ಇಲಾಖೆಯಿಂದ ಮೂಲಭೂತ ಸೌಕರ್ಯಕ್ಕಾಗಿ ಸರತಿಯಲ್ಲಿ ಕಾಯುವ ಎರಡು ಅವಕಾಶಗಳನ್ನು ಮಾಡಿಕೊಟ್ಟಲ್ಲಿ ಸ್ವಂತವಾಗಿ ಮಾಡಿಕೊಳ್ಳುವ ರೈತರಿಗೆ ಅನುಕೂಲವಾಗುತ್ತದೆ ಎಂಬ ಚಿಂತನೆ ಮಾಡಲಾಗಿದೆ ಎಂದರು. ಕಸುಮ್-ಬಿ; ಕುಸುಮ್ ಬಿ ಯೋಜನೆಯಡಿ ರೈತರ ಪಂಪ್‍ಸೆಟ್‍ಗಳಿಗೆ ಸೋಲಾರ್ ವಿದ್ಯುತ್ ಸಂಪರ್ಕ ಕಲ್ಪಿಸುವುದಾಗಿದೆ.…
ನವದೆಹಲಿ: ಭಾರತ ಸರ್ಕಾರ, ರೈಲ್ವೆ ಸಚಿವಾಲಯ, ರೈಲ್ವೆ ನೇಮಕಾತಿ ಮಂಡಳಿ (ಆರ್ಆರ್ಬಿ) ಪಾಯಿಂಟ್ಸ್ಮನ್, ಅಸಿಸ್ಟೆಂಟ್, ಟ್ರ್ಯಾಕ್ ಮೆಂಟೇನರ್ ಮತ್ತು ಇತರ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ. ಖಾಲಿ ಹುದ್ದೆಯ ವಿವರಗಳಲ್ಲಿ ಆಸಕ್ತಿ ಹೊಂದಿರುವ ಮತ್ತು ಎಲ್ಲಾ ಅರ್ಹತಾ ಮಾನದಂಡಗಳನ್ನು ಪೂರ್ಣಗೊಳಿಸಿದ ಅಭ್ಯರ್ಥಿಗಳು ಅಧಿಸೂಚನೆಯನ್ನು ಓದಿ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ಪ್ರಮುಖ ದಿನಾಂಕಗಳು: ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಆರಂಭ ದಿನಾಂಕ: 23-01-2025 ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 22-02-2025 ರೈಲ್ವೆ ಗ್ರೂಪ್ ಡಿ ಹುದ್ದೆಗಳ ವಿವರ ಹೀಗಿದೆ ಟ್ರ್ಯಾಕ್ ಮೇಂಟೆನರ್ ಗ್ರೇಡ್ IV ತಾಂತ್ರಿಕ ವಿಭಾಗದ ಸಹಾಯಕ ಅಸಿಸ್ಟಂಟ್ ಪಾಯಿಂಟ್ಸ್‌ಮನ್ ಟ್ರ್ಯಾಕ್ ಮನ್ ಅಸಿಸ್ಟಂಟ್ ಬ್ರಿಡ್ಜ್ ಇತರೆ ಹಲವು ವಿಭಾಗಗಳ ಲೆವೆಲ್ 1 ಪೋಸ್ಟ್‌ಗಳು: ಆರ್ಆರ್ಬಿ ಗ್ರೂಪ್ ಡಿ ಅರ್ಹತಾ 2025 ಎನ್ಸಿವಿಟಿ / ಎಸ್ಸಿವಿಟಿಯಿಂದ ಮಾನ್ಯತೆ ಪಡೆದ ಸಂಸ್ಥೆಯಿಂದ ಪ್ರೌಢಶಾಲಾ (10 ನೇ ತರಗತಿ) ಪೂರ್ಣಗೊಳಿಸಿದ ಅಥವಾ ಎನ್ಸಿವಿಟಿ ಒದಗಿಸಿದ ರಾಷ್ಟ್ರೀಯ ಅಪ್ರೆಂಟಿಸ್ಶಿಪ್ ಪ್ರಮಾಣಪತ್ರ (ಎನ್ಎಸಿ) ಹೊಂದಿರುವ…
ಬೆಂಗಳೂರು : ಬೆಂಗಳೂರಲ್ಲಿ ಅತ್ತೆಯನ್ನು ಕೊಲ್ಲಲು ವೈದ್ಯರ ಬಳಿ ಮಾತ್ರೆ ಕೇಳಿದ್ದ ಮಹಿಳೆಯನ್ನು ಇದೀಗ ಪೊಲೀಸರು ಬಂಧಿಸಿದ್ದಾರೆ. ಅತ್ತೆಯನ್ನು ಕೊಲ್ಲಲು ನಿರ್ಧರಿಸಿದ ಸೊಸೆ ಸಹಾನ ವೈದ್ಯರೊಬ್ಬರಿಗೆ ವಾಟ್ಸಾಪ್ ನಲ್ಲಿ ಮೆಸೇಜ್ ಮಾಡಿದ್ದಾರೆ. ನನಗೆ ಅತ್ತೆ ಬಹಳ ಕಿರುಕುಳ, ಹಿಂಸೆ ನೀಡುತ್ತಾರೆ. ಅವರಿಗೆ ವಯಸ್ಸಾಗಿದ್ದು, ಅವರನ್ನು ಸಾಯಿಸಲು ಮಾತ್ರೆ ಇದ್ರೆ ಕೊಡಿ ಎಂದು ವೈದ್ಯರಿಗೆ ಸೊಸೆ ಮೆಸೇಜ್ ಮಾಡಿದ್ದಾರೆ. ಮೆಸೇಜ್ ನೋಡಿ ಶಾಕ್ ಆದ ವೈದ್ಯರು ನಾವು ಜೀವ ತೆಗೆಯುವವರಲ್ಲ, ಜೀವ ಉಳಿಸುವವರು ಎಂದು ಬುದ್ದಿವಾದ ಹೇಳಿ ಪೊಲೀಸರಿಗೆ ಮಾಹಿತಿ ನೀಡಿದ್ದು, ಡಾಕ್ಟರ್ ಬುದ್ದಿವಾದ ಹೇಳುತ್ತಿದ್ದಂತೆ ಸೊಸೆ ಮೆಸೇಜ್ ಡಿಲೀಟ್ ಮಾಡಿದ್ದಾರೆ. ತಕ್ಷಣ ಸ್ಕ್ರೀನ್ ಶಾಟ್ ತೆಗೆದುಕೊಂಡಿದ್ದ ವೈದ್ಯರು ಪೊಲೀಸರಿಗೆ ತಿಳಿಸಿದ್ದಾರೆ. ಸದ್ಯ, ಮಹಿಳೆಯನ್ನು ಪೊಲೀಸರು ಬಂಧಿಸಿದ್ದು, ಕೊಳ್ಳೇಗಾಲ ಮೂಲದ ಸಹನಾ ಸದ್ಯ ಬೆಂಗಳೂರಿನ ಚೌಟ್ರಿಪಾಳ್ಯದಲ್ಲಿದಲ್ಲಿ ವಾಸವಾಗಿದ್ದಾರೆ, ಪತಿ ಕ್ಯಾಬ್ ಚಾಲಕನಾಗಿದ್ದಾರೆ. ಮಹಿಳೆ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದು, ವಿಚಾರಣೆಯಲ್ಲಿ ತಾನು ಆತ್ಮಹತ್ಯೆ ಮಾಡಿಕೊಳ್ಳಲು ಮಾತ್ರೆ ಕೇಳಿದ್ದಾಗಿ ಹೇಳಿದ್ದಾರೆ ಎನ್ನಲಾಗಿದೆ.
ನವದೆಹಲಿ : ಭಾರತದಲ್ಲಿ ಪ್ರತಿದಿನ ಕೋಟ್ಯಂತರ ಜನರು ರೈಲಿನಲ್ಲಿ ಪ್ರಯಾಣಿಸುತ್ತಾರೆ. ಈ ಜನರಲ್ಲಿ ಕೆಲವರು ಕಾಯ್ದಿರಿಸಿದ ಬೋಗಿಗಳಲ್ಲಿ ಪ್ರಯಾಣಿಸುತ್ತಾರೆ. ಅದೇ ಸಮಯದಲ್ಲಿ, ಕೆಲವರು ಕಾಯ್ದಿರಿಸದ ಕೋಚ್‌ಗಳಲ್ಲಿ ಪ್ರಯಾಣಿಸುತ್ತಾರೆ. ಇದರಲ್ಲಿ ನೀವು ಹೆಚ್ಚು ಮುಂಚಿತವಾಗಿ ಟಿಕೆಟ್ ಬುಕ್ ಮಾಡಬೇಕಾಗಿಲ್ಲ. ರೈಲು ನಿಲ್ದಾಣ ತಲುಪಿದ ತಕ್ಷಣ. ನಂತರದ ಸಮಯಕ್ಕೆ ಟಿಕೆಟ್ ತೆಗೆದುಕೊಂಡು ನೀವು ಯಾವುದೇ ರೈಲಿನಲ್ಲಿ ಪ್ರಯಾಣಿಸಬಹುದು. ಪ್ರತಿದಿನ ಕೋಟ್ಯಂತರ ಪ್ರಯಾಣಿಕರು ಸಾಮಾನ್ಯ ಬೋಗಿಗಳಲ್ಲಿ ಪ್ರಯಾಣಿಸುತ್ತಾರೆ. ಆದರೆ ಈಗ ಸಾಮಾನ್ಯ ಟಿಕೆಟ್‌ಗಳಲ್ಲಿ ಪ್ರಯಾಣಿಸುವ ಪ್ರಯಾಣಿಕರಿಗೆ ರೈಲ್ವೆ ನಿಯಮಗಳನ್ನು ಬದಲಾಯಿಸಬಹುದು. ಸಾಮಾನ್ಯ ಟಿಕೆಟ್‌ಗಳೊಂದಿಗೆ ಪ್ರಯಾಣಿಸುವ ಪ್ರಯಾಣಿಕರ ಮೇಲೆ ಇದು ಯಾವ ಪರಿಣಾಮ ಬೀರುತ್ತದೆ ಎಂಬುದನ್ನು ತಿಳಿಯಿರಿ. ಸಾಮಾನ್ಯ ಟಿಕೆಟ್‌ಗಳಲ್ಲಿ ಬದಲಾವಣೆ ಕೆಲವು ದಿನಗಳ ಹಿಂದೆ, ನವದೆಹಲಿ ರೈಲು ನಿಲ್ದಾಣದಲ್ಲಿ ಪ್ರಯಾಣಿಕರ ದಟ್ಟಣೆಯಿಂದಾಗಿ ಕಾಲ್ತುಳಿತದಂತಹ ಪರಿಸ್ಥಿತಿ ಉಂಟಾಗಿತ್ತು. ಈ ಅಪಘಾತದಲ್ಲಿ 18 ಜನರು ಪ್ರಾಣ ಕಳೆದುಕೊಂಡರು. ಈಗ ಈ ಅಪಘಾತದ ತನಿಖೆ ನಡೆಯುತ್ತಿದೆ. ಆದರೆ ಅದೇ ಸಮಯದಲ್ಲಿ, ಸಾಮಾನ್ಯ ಟಿಕೆಟ್‌ಗಳೊಂದಿಗೆ ಪ್ರಯಾಣಿಸುವವರಿಗೆ ರೈಲ್ವೆ ನಿಯಮಗಳನ್ನು ಬದಲಾಯಿಸಲಿದೆ ಎಂಬ…
ಚಿಕ್ಕಮಗಳೂರು : ರಾಜ್ಯದಲ್ಲಿ ಮತ್ತೊಂದು ಘೋರ ಘಟನೆಯೊಂದು ಬೆಳಕಿಗೆ ಬಂದಿದ್ದು, ಪ್ರೇಮಿಗಳಿಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ದಾಸರಹಳ್ಳಿಯಲ್ಲಿ ನಡೆದಿದೆ. ಚಿಕ್ಕಮಗಳೂರು ತಾಲೂಕಿನ ಪೂರ್ಣಿಮಾ, ಭದ್ರಾವತಿಯ ಮಧು ಎಂಬುವರ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಕಾಫಿ ತೋಟದ ರಸ್ತೆಯಲ್ಲಿ ಪ್ರೇಮಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಾರಿನಲ್ಲಿ ಪೂರ್ಣಿಮ ಶವ ಪತ್ತೆಯಾಗಿದ್ದು, ಕಾಫಿ ತೋಟದ ಮರದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಮಧು ಶವ ಪತ್ತೆಯಾಗಿದೆ. ಸದ್ಯ ಚಿಕ್ಕಮಗಳೂರು ಆಸ್ಪತ್ರೆಯ ಶವಗಾರಕ್ಕೆ ಮೃತದೇಹಗಳನ್ನು ರವಾನಿಸಲಾಗಿದೆ. ಸ್ಥಳಕ್ಕೆ ಚಿಕ್ಕಮಗಳೂರು ಗ್ರಾಮಾಂತರ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ನವದೆಹಲಿ :ಕೇಂದ್ರ ಸರ್ಕಾರ ಇತ್ತೀಚೆಗೆ ವಿಧವಾ ಪಿಂಚಣಿ ಯೋಜನೆಯಲ್ಲಿ ದೊಡ್ಡ ಬದಲಾವಣೆಯನ್ನು ಮಾಡಿದೆ, ಇದು ಲಕ್ಷಾಂತರ ಮಹಿಳೆಯರಿಗೆ ಪರಿಹಾರವನ್ನು ತರುತ್ತದೆ. ಈ ಹೆಚ್ಚಳದೊಂದಿಗೆ, ಪಿಂಚಣಿ ಮೊತ್ತವನ್ನು ಗಮನಾರ್ಹವಾಗಿ ಹೆಚ್ಚಿಸಲಾಗಿದ್ದು, ಇದರಿಂದಾಗಿ ಮಹಿಳೆಯರು ಉತ್ತಮ ಆರ್ಥಿಕ ಸಹಾಯವನ್ನು ಪಡೆಯಬಹುದು. ವಿಧವಾ ಪಿಂಚಣಿ ಯೋಜನೆಯಡಿಯಲ್ಲಿ ಪಡೆಯುವ ಮೊತ್ತವನ್ನು ಮಹತ್ತರವಾಗಿ ಹೆಚ್ಚಿಸಲಾಗಿದೆ. ಮೊದಲು ಈ ಯೋಜನೆಯಲ್ಲಿ ತಿಂಗಳಿಗೆ 500 ರಿಂದ 1000 ರೂಪಾಯಿಗಳವರೆಗೆ ಸಿಗುತ್ತಿತ್ತು ಆದರೆ ಈಗ ಅದನ್ನು ತಿಂಗಳಿಗೆ 2000 ರಿಂದ 3000 ಕ್ಕೆ ಹೆಚ್ಚಿಸಲಾಗಿದೆ. ಇದರರ್ಥ ಮಹಿಳೆಯರು ಮೊದಲಿಗಿಂತ ಹೆಚ್ಚಿನ ಆರ್ಥಿಕ ಸಹಾಯವನ್ನು ಪಡೆಯಲು ಸಾಧ್ಯವಾಗುತ್ತದೆ, ಆದರೂ ಪ್ರತಿ ರಾಜ್ಯ ಸರ್ಕಾರವನ್ನು ಅವಲಂಬಿಸಿ ಮೊತ್ತವು ಸ್ವಲ್ಪ ಬದಲಾಗಬಹುದು. ಆದರೆ ಕೇಂದ್ರ ಸರ್ಕಾರದ ಶಿಫಾರಸಿನ ನಂತರ, ಇದನ್ನು ಅನೇಕ ರಾಜ್ಯಗಳಲ್ಲಿ ಜಾರಿಗೆ ತರಲಾಗಿದ್ದು, ಇದು ಮಹಿಳೆಯರ ಜೀವನವನ್ನು ಸ್ವಲ್ಪ ಸುಲಭಗೊಳಿಸುತ್ತದೆ. ಪ್ರಮುಖ ಬದಲಾವಣೆಗಳು ಪಿಂಚಣಿ ಮೊತ್ತ ₹1000 ದಿಂದ ₹2000 ಕ್ಕೆ ಏರಿಕೆ. ಈಗ ನೀವು ಪ್ರತಿ ತಿಂಗಳು ₹2000 ರಿಂದ ₹3000 ಪಡೆಯುತ್ತೀರಿ.…
ಬೆಂಗಳೂರು: ಸುಳ್ಳು ದಾಖಲೆ ನೀಡಿ ಬಿಪಿಎಲ್ ಕಾರ್ಡ್ ಪಡೆದುಕೊಂಡವರಿಗೆ ರಾಜ್ಯ ಸರ್ಕಾರವು ಬಿಗ್ ಶಾಕ್ ನೀಡಿದ್ದು, ಆರ್ಥಿಕವಾಗಿ ಸದೃಢರಾದವರು ಪಡೆದುಕೊಂಡಿರುವ ಬಿಪಿಎಲ್ ಕಾರ್ಡ್ ಗಳನ್ನು ಸ್ವಯಂ ಪ್ರೇರಿತವಾಗಿ ಕೂಡಲೇ ಆಹಾರ ಇಲಾಖೆಗೆ ವಾಪಸ್ ನೀಡಬೇಕು. ಇಲ್ಲವಾದಲ್ಲಿ ಅಧಿಕಾರಿಗಳು ಪತ್ತೆ ಮಾಡಿ ದಂಡ ವಿಧಿಸಲಿದ್ದಾರೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಹೆಚ್. ಮುನಿಯಪ್ಪ ಎಚ್ಚರಿಕೆ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾನದಂಡಗಳ ಅನ್ವಯ ಇಲ್ಲದ ಕಾರ್ಡ್ ಗಳ ಪರಿಶೀಲನೆ ಕಾರ್ಯ ಕೈಗೊಳ್ಳಲಾಗುತ್ತದೆ. ಅದಕ್ಕಾಗಿ ಗ್ರಾಮ ಪಂಚಾಯಿತಿ ಸಿಬ್ಬಂದಿ ವರ್ಗವನ್ನು ಬಳಕೆ ಮಾಡಿಕೊಳ್ಳುವ ಬಗ್ಗೆ ಚಿಂತನೆ ನಡೆದಿದ್ದು, ಮಾರ್ಗಸೂಚಿ ಉಲ್ಲಂಘಿಸಿ ಪಡೆದ ಎಲ್ಲಾ ಬಿಪಿಎಲ್ ಕಾರ್ಡ್ ಗಳನ್ನು ರದ್ದು ಮಾಡಲಾಗುವುದು. ಈ ಹಿಂದೆ ಅನರ್ಹಗೊಂಡಿದ್ದ ಬಿಪಿಎಲ್ ಪಡಿತರ ಚೀಟಿಗಳನ್ನು ಮರು ಸ್ಥಾಪನೆ ಮಾಡಲಾಗಿದೆ. ಹೊಸದಾಗಿ ಬಿಪಿಎಲ್ ಕಾರ್ಡ್ ಗೆ ಅರ್ಜಿ ಸಲ್ಲಿಕೆಯಾಗಿದ್ದು ಇವುಗಳನ್ನು ಪರಿಶೀಲಿಸಲಾಗಿದೆ. ಅನರ್ಹ ಕಾರ್ಡ್ ಗಗಳ ರದ್ದತಿ ಆಧಾರದ ಮೇಲೆ ಹೊಸ ಬಿಪಿಎಲ್ ಕಾರ್ಡ್ ಮಂಜೂರು ಮಾಡಲಾಗುವುದು ಎಂದರು.…
ಬೆಂಗಳೂರು : ರೀಲ್ಸ್ ಹುಚ್ಚಿಗೆ ಮತ್ತೆ ಮೂವರು ಬಲಿಯಾಗಿರುವ ಘಠನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದ ಹೊರವಲಯದ ಸಿದ್ದೆನಾಯನಹಳ್ಳಿ ರೈಲ್ವೆ ಹಳಿ ಬಳಿ ನಡೆದಿದೆ. ಹೌದು, ರೀಲ್ಸ್ ಮಾಡುವಾಗ ರೈಲು ಡಿಕ್ಕಿ ಹೊಡೆದು ಉತ್ತರ ಪ್ರದೇಶ ಮೂಲದ ಮೂವರು ಕಾರ್ಮಿಕರು ಮೃತಪಟ್ಟಿದ್ದಾರೆ. ಮೃತರನ್ನು ರಾಹುಲ್ (18), ಬಿಕೇಶ್ (20) ಮತ್ತು ಲಲನ್ (24) ಎಂದು ಗುರುತಿಸಲಾಗಿದೆ. ಮೃತ ಯುವಕರು ಕಾರ್ಪೆಂಟರ್ ಕೆಲಸ ಮಾಡುತ್ತಿದ್ದರು. ಸಂಜೆ ಕೆಲಸ ಮುಗಿಸಿಕೊಂಡು ರೈಲ್ವೆ ಹಳಿ ಬಳಿ ಬಂದು ರೀಲ್ಸ್ ಮಾಡುತ್ತಿದ್ದಾಗ ರೈಲು ಡಿಕ್ಕಿಯಾಗಿ ಯುವಕರು ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ. ಯಶವಂತಪುರ ರೈಲ್ವೆ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.











