Subscribe to Updates
Get the latest creative news from FooBar about art, design and business.
Author: kannadanewsnow57
ನವದೆಹಲಿ : ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ (PM-KISAN) ಯೋಜನೆಯ 19 ನೇ ಕಂತುಗಾಗಿ ಕಾತರದಿಂದ ಕಾಯುತ್ತಿರುವ ರೈತರಿಗೆ ಸಿಹಿ ಸುದ್ದಿಯೊಂದು ಬಂದಿದೆ. ಈ ಕಂತು ಫೆಬ್ರವರಿ 24 ರಂದು ಪ್ರಧಾನಿ ಮೋದಿ ಅವರು ಬಿಡುಗಡೆ ಮಾಡಲಿದ್ದಾರೆ. ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ, ಅರ್ಹ ರೈತರಿಗೆ ಪ್ರತಿ ನಾಲ್ಕು ತಿಂಗಳಿಗೊಮ್ಮೆ 2,000 ರೂ. ಅಂದರೆ ವಾರ್ಷಿಕ ರೂ. 6,000 ಆರ್ಥಿಕ ನೆರವು ನೀಡಲಾಗುತ್ತದೆ. ಈ ಮೊತ್ತವನ್ನು ಮೂರು ಕಂತುಗಳಲ್ಲಿ ನೀಡಲಾಗುತ್ತದೆ – ಏಪ್ರಿಲ್-ಜುಲೈ, ಆಗಸ್ಟ್-ನವೆಂಬರ್ ಮತ್ತು ಡಿಸೆಂಬರ್-ಮಾರ್ಚ್. ಈ ಮೊತ್ತವನ್ನು ನೇರವಾಗಿ ಫಲಾನುಭವಿಗಳ ಬ್ಯಾಂಕ್ ಖಾತೆಗೆ ವರ್ಗಾಯಿಸಲಾಗುತ್ತದೆ. ಈ ಯೋಜನೆಯನ್ನು 2019 ರ ಮಧ್ಯಂತರ ಬಜೆಟ್‌ನಲ್ಲಿ ಆಗಿನ ಹಣಕಾಸು ಸಚಿವ ಪಿಯೂಷ್ ಗೋಯಲ್ ಅವರು ಘೋಷಿಸಿದರು ಮತ್ತು ನಂತರ ಪ್ರಧಾನಿ ನರೇಂದ್ರ ಮೋದಿ ಅವರು ಪ್ರಾರಂಭಿಸಿದರು. ಪ್ರಧಾನ ಮಂತ್ರಿ ಕಿಸಾನ್ ಯೋಜನೆ ಫಲಾನುಭವಿಯ ಸ್ಥಿತಿ ಅಧಿಕೃತ ವೆಬ್‌ಸೈಟ್ pmkisan.gov.in ಗೆ ಭೇಟಿ ನೀಡಿ. ‘ನೋ ಯುವರ್ ಸ್ಟೇಟಸ್’…
SHOCKING : ರಾಜ್ಯದಲ್ಲಿ ಅಮಾನವೀಯ ಘಟನೆ : ಹೃದಯಾಘಾತದಿಂದ ಮೃತಪಟ್ಟ ಕಾರ್ಮಿಕನ ಶವ ಪ್ರಾಣಿಯಂತೆ ಎಳೆದೊಯ್ದ ಸಿಬ್ಬಂದಿ.!
ಕಲಬುರಗಿ : ರಾಜ್ಯದಲ್ಲಿ ಮತ್ತೊಂದು ಅಮಾನವೀಯ ಘಟನೆಯೊಂದು ನಡೆದಿದ್ದು, ಹೃದಯಾಘಾತದಿಂದ ಮೃತಪಟ್ಟಿದ್ದ ಕಾರ್ಮಿಕನ ಮೃತದೇಹವನ್ನು ಪ್ರಾಣಿಯಂತೆ ಎಳೆದೊಯ್ದ ಘಟನೆ ಕಲಬುರಗಿ ಜಿಲ್ಲೆಯಲ್ಲಿ ನಡೆದಿದೆ. ಕಲಬುರಗಿ ಜಿಲ್ಲೆ ಸೇಡಂ ತಾಲೂಕಿನ ಕೊಡ್ಲಾ ಗ್ರಾಮದಲ್ಲಿನ ಶ್ರೀ ಸಿಮೆಂಟ್ ಕಂಪನಿಯಲ್ಲಿ ಕರ್ತವ್ಯ ನಿರತ ಸಿಬ್ಬಂದಿಯೊಬ್ಬರು ಹೃದಯಾಘಾತದಿಂದ ಮೃತಪಟ್ಟಿದ್ದು, ಸಿಬ್ಬಂದಿಗಳು ಕಾರ್ಮಿಕನ ಮೃತದೇಹವನ್ನು ಪ್ರಾಣಿ ತರ ಎಳೆದೊಯ್ದ ಘಟನೆ ಶ್ರೀ ಸಿಮೆಂಟ್ ಕಂಪನಿಯಲ್ಲಿ ನಡೆದಿದೆ. ಮೃತರನ್ನು ಬಿಹಾರ ಮೂಲದ ಚಂದನ್ ಸಿಂಗ್ (35) ಎಂದು ಗುರುತಿಸಲಾಗಿದೆ. ಚಂದನ್ ಸಿಂಗ್ ಶ್ರೀ ಸಿಮೆಂಟ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು. ಆದರೆ ಕೆಲಸ ಮಾಡುವಾಗ ಅವರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಚಂದನ್ ಸಿಂಗ್ ಮೃತದೇಹವನ್ನು ಸಿಬ್ಬಂದಿಗಳು ಪ್ರಾಣಿ ತರ ಎಳೆದುಕೊಂಡು ಹೋಗಿದ್ದಾರೆ. ಸದ್ಯ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ನೋಡಿದ ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ದಾವಣಗೆರೆ: : ರಾಜ್ಯ ಸರ್ಕಾರದ ಬದ್ದತೆಯಂತೆ ಕೃಷಿಗೆ 7 ಗಂಟೆ ವಿದ್ಯುತ್ ಪೂರೈಕೆ ಮಾಡಲು ಕಟ್ಟುನಿಟ್ಟಿನ ಸೂಚನೆ ನೀಡಲಾಗಿದ್ದು, ಈ ಬಾರಿ ಲೋಡ್‍ಶೆಡ್ಡಿಂಗ್ ಜಾರಿಯಲ್ಲಿರುವುದಿಲ್ಲ ಎಂದು ಇಂಧನ ಸಚಿವರಾದ ಕೆ.ಜೆ.ಜಾರ್ಜ್ ತಿಳಿಸಿದರು. ಅವರು ಮಂಗಳವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಇಂಧನ ಇಲಾಖೆ ಅಧಿಕಾರಿಗಳು ಹಾಗೂ ಶಾಸಕರೊಂದಿಗೆ ನಡೆಸಿದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು. ರಾಜ್ಯದಲ್ಲಿ ವಿದ್ಯುತ್ ಕೊರತೆ ಇಲ್ಲ, ಆದರೆ ಕೆಲವೊಂದು ತಾಂತ್ರಿಕ ಸಮಸ್ಯೆಯಿಂದ ಕೆಲವೇ ಸ್ಥಳಗಳಲ್ಲಿ ಮಾತ್ರ ನಿರ್ವಹಣೆಗಾಗಿ ಕಡಿತ ಮಾಡಲಾಗುತ್ತದೆ. ಆದರೆ ಸರ್ಕಾರದ ಬದ್ದತೆಯಂತೆ ಕೃಷಿಗೆ 7 ಗಂಟೆ ವಿದ್ಯುತ್ ಪೂರೈಕೆ ಮಾಡಲು ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ, ಆದರೆ ಲೋಡ್‍ಶೆಡ್ಡಿಂಗ್ ಜಾರಿಯಲ್ಲಿರುವುದಿಲ್ಲ ಎಂದರು. ರಾಜ್ಯದಲ್ಲಿ ಪ್ರತಿನಿತ್ಯ 18500 ಮೆಗಾವ್ಯಾಟ್ ಬೇಡಿಕೆ ಇದ್ದು ಬೇಸಿಗೆ ಆರಂಭವಾಗಿರುವುದರಿಂದ ಸರಾಸರಿಗಿಂತ ಶೇ 10 ರಷ್ಟು ವಿದ್ಯುತ್ ಬೇಡಿಕೆ ಹೆಚ್ಚಿದೆ. ಬೇಸಿಗೆಯಲ್ಲಿ ವಿದ್ಯುತ್ ಬೇಡಿಕೆ ಹೆಚ್ಚುವುದರಿಂದ ಪಂಜಾಬ್ ಮತ್ತು ಉತ್ತರ ಪ್ರದೇಶದಲ್ಲಿ ವಿದ್ಯುತ್ ಬ್ಯಾಂಕಿಂಗ್ ಮಾಡಿಕೊಂಡು ಜೂನ್‍ನಿಂದ ಆ ರಾಜ್ಯಗಳಿಗೆ ಕರ್ನಾಟಕದಿಂದ ವಿದ್ಯುತ್ ನೀಡಿ…
ಬೆಂಗಳೂರು : ರಾಜ್ಯದ ವಿದ್ಯಾರ್ಥಿಗಳಿಗೆ ಸಿಹಿಸುದ್ದಿಯೊಂದು ಸಿಕ್ಕಿದ್ದು, ವಿದ್ಯಾರ್ಥಿಗಳ ಕೌಶಲ ಆಧಾರಿತ ಶಿಕ್ಷಣ ನೀಡಲು 8 ನೇ ತರಗತಿಯಿಂದಲೇ ಸ್ಕಿಲ್ ಅಟ್ ಸ್ಕೂಲ್ ಆರಂಭಿಸಲಾಗುವುದು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. ಮುಂಬರುವ ಶೈಕ್ಷಣಿಕ ವರ್ಷದಿಂದ ಸ್ಕಿಲ್ ಅಟ್ ಸ್ಕೂಲ್ ಹೆಸರಲ್ಲಿ 8ನೇ ತರಗತಿಯಿಂದಲೇ ವಿದ್ಯಾರ್ಥಿಗಳಿಗೆ ಕೌಶಲ ಆಧಾರಿತ ಶಿಕ್ಷಣ ನೀಡಲು ಸರ್ಕಾರ ನಿರ್ಧರಿಸಿದೆ. ವಿದ್ಯಾರ್ಥಿಗಳು ಈವರೆಗೂ ಪಿಯುಸಿ ಹಂತದಲ್ಲಿ ಕಲೆ, ವಾಣಿಜ್ಯ ಮತ್ತು ವಿಜ್ಞಾನ ವಿಷಯದ ಕೋರ್ಸ್‌ಗಳನ್ನು ಮಾತ್ರ ಕಲಿಯುತ್ತಿದ್ದರು. ಈಗ 25 ಕೋರ್ಸ್ ಕಲಿಯಲು ಅವಕಾಶವಿದೆ. ಅದರಲ್ಲಿ ಕೆಲವು ಕೌಶಲ ಆಧಾರಿತ ಕೋರ್ಸ್‌ಗಳಿದ್ದು, ಸ್ಕಿಲ್ ಅಟ್ ಸ್ಕೂಲ್ ಕಾರ್ಯಕ್ರಮ ರೂಪಿಸಲಾಗಿದೆ. ಸರ್ಕಾರದ ಸಂಪನ್ಮೂಲ ಬಳಸಿ ಯೋಜನೆ ಅನುಷ್ಠಾನಕ್ಕೆ ತರಲಾಗುತ್ತಿದೆ ಎಂದು ಹೇಳಿದ್ದಾರೆ.
ನವದೆಹಲಿ : ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ) ಮಂಗಳವಾರ ‘ಆರ್‌ಬಿಐಡೇಟಾ’ ಮೊಬೈಲ್ ಅಪ್ಲಿಕೇಶನ್ ಅನ್ನು ಬಿಡುಗಡೆ ಮಾಡಿದೆ. ಈ ಅಪ್ಲಿಕೇಶನ್ ಭಾರತೀಯ ಆರ್ಥಿಕತೆಗೆ ಸಂಬಂಧಿಸಿದ ಆರ್ಥಿಕ ಮತ್ತು ಆರ್ಥಿಕ ಡೇಟಾವನ್ನು ಸುಲಭ ಮತ್ತು ಆಕರ್ಷಕ ರೀತಿಯಲ್ಲಿ ಒದಗಿಸುತ್ತದೆ. ಈ ಮೊಬೈಲ್ ಅಪ್ಲಿಕೇಶನ್ ಭಾರತೀಯ ಆರ್ಥಿಕತೆಯ ಸಮಗ್ರ ನೋಟವನ್ನು ಒದಗಿಸಲು 11,000 ಕ್ಕೂ ಹೆಚ್ಚು ವಿಭಿನ್ನ ಆರ್ಥಿಕ ದತ್ತಾಂಶಗಳಿಗೆ ಪ್ರವೇಶವನ್ನು ಒದಗಿಸುತ್ತದೆ ಎಂದು ಆರ್‌ಬಿಐ ಹೇಳಿಕೆಯಲ್ಲಿ ತಿಳಿಸಿದೆ. ಬಳಕೆದಾರರು ‘ಸಮಯ ಸರಣಿ’ ಡೇಟಾವನ್ನು ಗ್ರಾಫ್‌ಗಳು/ಚಾರ್ಟ್‌ಗಳಲ್ಲಿ ವೀಕ್ಷಿಸಲು ಮತ್ತು ವಿಶ್ಲೇಷಣೆಗಾಗಿ ಡೇಟಾವನ್ನು ಡೌನ್‌ಲೋಡ್ ಮಾಡಲು ಸಾಧ್ಯವಾಗುತ್ತದೆ. ಇದು ದತ್ತಾಂಶದ ಮೂಲ, ಅಳತೆಯ ಘಟಕ, ಆವರ್ತನ ಮತ್ತು ಇತ್ತೀಚೆಗೆ ನವೀಕರಿಸಿದ ಮಾಹಿತಿಯನ್ನು ಸಹ ಒಳಗೊಂಡಿರುತ್ತದೆ. ಹೆಚ್ಚುವರಿಯಾಗಿ, ಅಪ್ಲಿಕೇಶನ್‌ನ ‘ಬ್ಯಾಂಕಿಂಗ್ ಔಟ್‌ಲೆಟ್‌ಗಳು’ ವಿಭಾಗವು ಬಳಕೆದಾರರು ತಮ್ಮ ಸ್ಥಳದಿಂದ 20 ಕಿಲೋಮೀಟರ್‌ಗಳ ಒಳಗೆ ಬ್ಯಾಂಕ್ ಸೌಲಭ್ಯಗಳನ್ನು ಹುಡುಕಲು ಸಹಾಯ ಮಾಡುತ್ತದೆ. ಅವರು ‘ಸಾರ್ಕ್ ಹಣಕಾಸು’ ಮೂಲಕ ಸಾರ್ಕ್ (ದಕ್ಷಿಣ ಏಷ್ಯಾ ಪ್ರಾದೇಶಿಕ ಸಹಕಾರ ಸಂಘ) ದೇಶಗಳ ಬಗ್ಗೆ ಡೇಟಾವನ್ನು…
ಪ್ರಯಾಗ್ ರಾಜ್ : ಮಹಾಕುಂಭಮೇಳದ ಸಮಯದಲ್ಲಿ ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನ ವಿವಿಧ ಸ್ಥಳಗಳಲ್ಲಿ ನದಿ ನೀರಿನಲ್ಲಿ ಮಲ ಕೋಲಿಫಾರ್ಮ್‌ನ ಮಟ್ಟವು ಸ್ನಾನದ ಗುಣಮಟ್ಟದ ಮಾನದಂಡಗಳನ್ನು ಪೂರೈಸುತ್ತಿಲ್ಲ ಎಂದು ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿ (ಸಿಪಿಸಿಬಿ) ರಾಷ್ಟ್ರೀಯ ಹಸಿರು ನ್ಯಾಯಮಂಡಳಿಗೆ (ಎನ್‌ಜಿಟಿ) ವರದಿಯಲ್ಲಿ ತಿಳಿಸಿದೆ. ಉತ್ತರ ಪ್ರದೇಶದ ಪ್ರಯಾಗ್ ರಾಜ್ ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ ಮಾಡಿದವರ ಸಂಖ್ಯೆ 50 ಕೋಟಿ ದಾಟಿ ಹೊಸ ದಾಖಲೆ ನಿರ್ಮಾಣವಾಗಿದೆ. ಇದರ ಬೆನ್ನಲ್ಲೇ ಕುಂಭಮೇಳ ನಡೆಯುತ್ತಿರುವ ಪ್ರಯಾಗ್ ರಾಜ್ ನ ತ್ರಿವೇಣಿ ಸಂಗಮದಲ್ಲಿ ನದಿಯ ನೀರು ಅತ್ಯಂತ ಕಲುಷಿತವಾಗಿದ್ದು, ಸ್ನಾನಕ್ಕೂ ಯೋಗ್ಯವಲ್ಲ ಎನ್ನುವ ಆಘಾತಕಾರಿ ವರದಿ ಬಹಿರಂಗವಾಗಿದೆ. ಸಿಪಿಸಿಬಿ ವರದಿಯನ್ನು ಉಲ್ಲೇಖಿಸಿ, ಪ್ರಯಾಗ್‌ರಾಜ್‌ನಲ್ಲಿ ಹೆಚ್ಚಿನ ಸಂಖ್ಯೆಯ ಜನರು ಸ್ನಾನ ಮಾಡುವುದರಿಂದ ಮಲದ ಪ್ರಮಾಣ ಹೆಚ್ಚಾಗಿದೆ ಎಂದು ಎನ್‌ಜಿಟಿ ತನ್ನ ಆದೇಶದಲ್ಲಿ ತಿಳಿಸಿದೆ. ಮಹಾ ಕುಂಭಮೇಳ ನಡೆಯುತ್ತಿರುವುದರಿಂದ ಮತ್ತು ಕೋಟ್ಯಂತರ ಭಕ್ತರು ಪ್ರಯಾಗರಾಜ್‌ಗೆ ತ್ರಿವೇಣಿ ಸಂಗಮದಲ್ಲಿ ಪವಿತ್ರ ಸ್ನಾನ ಮಾಡಲು ಆಗಮಿಸುತ್ತಿರುವುದರಿಂದ ಈ ಸಲ್ಲಿಕೆ ಮಹತ್ವದ್ದಾಗಿದೆ. ಮಲ…
ದಾವಣಗೆರೆ: : ಗೃಹಜ್ಯೋತಿ ಯೋಜನೆ ಫಲಾನುಭವಿಗಳಿಗೆ ಇಂಧನ ಸಚಿವರಾದ ಕೆ.ಜೆ.ಜಾರ್ಜ್ ಮಹತ್ವದ ಮಾಹಿತಿ ನೀಡಿದ್ದು, 200 ಯುನಿಟ್ ನಂತರ 1 ಯುನಿಟ್ ಹೆಚ್ಚಾದರೂ ವಿದ್ಯುತ್ ದರದಂತೆ ಬಿಲ್ ಪಾವತಿಸಬೇಕಾಗುತ್ತದೆ ಎಂದು ತಿಳಿಸಿದ್ದಾರೆ. ಅವರು ಮಂಗಳವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಇಂಧನ ಇಲಾಖೆ ಅಧಿಕಾರಿಗಳು ಹಾಗೂ ಶಾಸಕರೊಂದಿಗೆ ನಡೆಸಿದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು. ಸರ್ಕಾರದ ಗ್ಯಾರಂಟಿ ಯೋಜನೆಗಳೊಂದಾದ ಗೃಹಜ್ಯೋತಿ ಯೋಜನೆ ಎಲ್ಲಾ ವರ್ಗದ ಜನರಿಗೂ ಅನ್ವಯಿಸಲಿದ್ದು 200 ಯುನಿಟ್ ವರೆಗೆ ವಿದ್ಯುತ್ ಬಳಕೆಗೆ ಶೂನ್ಯ ಬಿಲ್ ನೀಡಲಾಗುತ್ತದೆ. ಇದನ್ನು ಅವರು ವರ್ಷದಲ್ಲಿ ಉಪಯೋಗಿಸುವ ಯುನಿಟ್‍ಗಳನ್ನಾಧರಿಸಿ ಹೆಚ್ಚುವರಿಯಾಗಿ ಶೇ 10 ರಷ್ಟು ಸೇರಿಸಿ ಬಳಕೆಯ ಯುನಿಟ್ ನಿಗದಿಯಾಗುತ್ತದೆ. ಆದರೆ 200 ಯುನಿಟ್ ನಂತರ 1 ಯುನಿಟ್ ಹೆಚ್ಚಾದರೂ ವಿದ್ಯುತ್ ದರದಂತೆ ಬಿಲ್ ಪಾವತಿಸಬೇಕಾಗುತ್ತದೆ ಎಂದರು. ರಾಜ್ಯದಲ್ಲಿ ವಿದ್ಯುತ್ ಕೊರತೆ ಇಲ್ಲ, ಆದರೆ ಕೆಲವೊಂದು ತಾಂತ್ರಿಕ ಸಮಸ್ಯೆಯಿಂದ ಕೆಲವೇ ಸ್ಥಳಗಳಲ್ಲಿ ಮಾತ್ರ ನಿರ್ವಹಣೆಗಾಗಿ ಕಡಿತ ಮಾಡಲಾಗುತ್ತದೆ. ಆದರೆ ಸರ್ಕಾರದ ಬದ್ದತೆಯಂತೆ ಕೃಷಿಗೆ 7 ಗಂಟೆ…
ಚಿತ್ರದುರ್ಗ : ರೈತರ ಕೃಷಿ ಪಂಪ್‍ಸೆಟ್‍ಗಳಿಗೆ ನಿತ್ಯವೂ 7 ಗಂಟೆಗಳ ಸಮರ್ಪಕವಾಗಿ ತ್ರಿಫೇಸ್ ವಿದ್ಯುತ್ ಪೂರೈಕೆ ಮಾಡಬೇಕು. ಇದರಲ್ಲಿ ಯಾವುದೇ ರಾಜಿ ಇಲ್ಲ, ಇದಕ್ಕೆ ಬೇಕಾದ ಎಲ್ಲ ಅಗತ್ಯ ವ್ಯವಸ್ಥೆಗಳನ್ನು ಮಾಡಿಕೊಳ್ಳಬೇಕು ಎಂದು ಇಂಧನ ಸಚಿವರಾದ ಕೆ.ಜೆ.ಜಾರ್ಜ್ ಅಧಿಕಾರಿಗಳಿಗೆ ಸೂಚನೆ ನೀಡಿದರು. ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಮಂಗಳವಾರ ಇಂಧನ ಇಲಾಖೆ ವಿಷಯಗಳ ಕುರಿತು ಜಿಲ್ಲೆಯ ಚುನಾಯಿತ ಜನಪ್ರತಿನಿಧಿಗಳೊಂದಿಗೆ ಹಮ್ಮಿಕೊಂಡಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ರಾಜ್ಯದಲ್ಲಿ ಪ್ರಸ್ತುತ ಯಾವುದೇ ಲೋಡ್ ಶೆಡ್ಡಿಂಗ್ ಇರುವುದಿಲ್ಲ. ರಾಜ್ಯದಲ್ಲಿ 19500 ಮೆಗಾವ್ಯಾಟ್ ವಿದ್ಯುತ್ ಬೇಡಿಕೆ ಇದ್ದು, ಇದಕ್ಕಾಗಿ ಸಬ್ ಸ್ಟೇಷನ್‍ಗಳು ಹಾಗೂ ಟ್ರಾನ್ಸ್‍ಮಿಷನ್ ಕೇಂದ್ರಗಳು ಸಮರ್ಪಕವಾಗಿರಬೇಕು. ಚಿತ್ರದುರ್ಗ ಜಿಲ್ಲೆಗೆ 100 ಸಬ್ ಸ್ಟೇಷನ್‍ಗಳನ್ನು ಕೊಡಲಾಗುತ್ತಿದ್ದು, ಈ ವರ್ಷ 50 ಸಬ್ ಸ್ಟೇಷನ್‍ಗಳು ಪೂರ್ಣಗೊಳ್ಳಲಿದ್ದು, ಮುಂದಿನ ವರ್ಷ ಬಾಕಿ 50 ಸಬ್ ಸ್ಟೇಷನ್‍ಗಳು ಕಾರ್ಯಾರಂಭ ಮಾಡಲಿವೆ. ಪ್ರಸ್ತುತ ರೈತರಿಗೆ 7 ಗಂಟೆಗಳ ವಿದ್ಯುತ್ ಪೂರೈಕೆ ಮಾಡುವಂತೆ ಈಗಾಗಲೇ ಸಿಎಂ ಸಿದ್ದರಾಮಯ್ಯ ಅವರು ಆದೇಶ ಮಾಡಿದ್ದಾರೆ.…
ಬೆಂಗಳೂರು : ದ್ವಿತೀಯ ಪಿಯುಸಿ ಹಾಗೂ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆಗಳಿಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಕೆಎಸ್ ಆರ್ ಟಿಸಿ ಬಸ್‌ಗಳಲ್ಲಿ ಪರೀಕ್ಷಾ ದಿನಗಳಂದು ಉಚಿತವಾಗಿ ಪ್ರಯಾಣಿಸಲು ಅವಕಾಶ ನೀಡಿದೆ. ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ದಿನಾಂಕ:01.03.2025 ರಿಂದ ಕರ್ನಾಟಕ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಹಾಗೂ ದಿನಾಂಕ:21.03.2025 ರಿಂದ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗೆ ವಾರ್ಷಿಕ ಪರೀಕ್ಷೆಗಳು ಪ್ರಾರಂಭವಾಗಲಿವೆ. ಈ ಸಂಬಂಧ ವಿದ್ಯಾರ್ಥಿಗಳಿಗೆ ಅವರ ವಿದ್ಯಾಸಂಸ್ಥೆಯ ಹೊರತಾಗಿ ಇತರೆ ವಿದ್ಯಾಸಂಸ್ಥೆಗಳಿಗೆ ಪರೀಕ್ಷಾ ಕೇಂದ್ರಗಳ ನಿಯೋಜನೆಯಾಗಿರುವುದರಿಂದ, ಪರೀಕ್ಷಾ ಅವಧಿಯಲ್ಲಿ ವಿದ್ಯಾರ್ಥಿಗಳಿಗೆ ವಾಸಸ್ಥಳದಿಂದ ಪರೀಕ್ಷಾ ಕೇಂದ್ರಗಳವರೆಗೆ ನಿಗಮದ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅನುಮತಿಸಿರುವ ಕುರಿತು ಮುಖ್ಯ ಸಂಚಾರ ವ್ಯವಸ್ಥಾಪಕರು(ವಾ), ಕರಾರಸಾ ನಿಗಮ ಬೆಂಗಳೂರು ರವರು ಉಲ್ಲೇಖ-1 ರನ್ವಯ ಸುತ್ತೋಲೆಯನ್ನು ಹೊರಡಿಸಿರುತ್ತಾರೆ. ಅದರಂತೆ ಸೂಕ್ತಾಧಿಕಾರಿಗಳಾದ ಮಾನ್ಯ ವ್ಯವಸ್ಥಾಪಕ ನಿರ್ದೇಶಕರು ಉಲ್ಲೇಖ-2 ರನ್ವಯ ಅನುಮೋದನೆ ನೀಡಿರುತ್ತಾರೆ. ಅದರನ್ವಯ ಕ.ಕ.ರ.ಸಾ ನಿಗಮವು, ದ್ವಿತೀಯ ಪಿಯುಸಿ ಪರೀಕ್ಷೆ ನಡೆಯುವ ದಿನಾಂಕಗಳಂದು ಅಂದರೆ, ದಿನಾಂಕ:01.03.2025 ರಿಂದ 20.03.2025 ರವರೆಗೆ ಹಾಗೂ ಎಸ್.ಎಸ್.ಎಲ್.ಸಿ ಪರೀಕ್ಷೆ ನಡೆಯುವ ದಿನಾಂಕಗಳಂದು ಅಂದರೆ, ದಿನಾಂಕ:21.03.2025…
BIG NEWS : ರಾಜ್ಯ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್ : ನಾಳೆ `ವಿಶೇಷ ಸಾಂದರ್ಭಿಕ ರಜೆ’ ಮಂಜೂರು ಮಾಡಿ ಸರ್ಕಾರ ಆದೇಶ.!
ಬೆಂಗಳೂರು : ಬೆಂಗಳೂರು ನಗರದ ಅರಮನೆ ಆವರಣದಲ್ಲಿ “ಸಮ್ಮಿಲನ ಸಮಾವೇಶ, ಕಾರ್ಯಾಗಾರ ಹಾಗೂ ಉಪನ್ಯಾಸ” ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು, ಸದರಿ ಕಾರ್ಯಕ್ರಮದಲ್ಲಿ ಭಾಗವಹಿಸುವ ಸಂಘದ ಚುನಾಯಿತ ನಿರ್ದೇಶಕರು, ಬೆಂಗಳೂರು ನಗರ ರಾಜ್ಯ ಪರಿಷತ್ ಸದಸ್ಯರು ಹಾಗೂ ಪದಾಧಿಕಾರಿಗಳಿಗೆ ಫೆಬ್ರವರಿ 20 ರಂದು ವಿಶೇಷ ಸಾಂದರ್ಭಿಕ ರಜೆ ಮಂಜೂರು ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘವು ದಿನಾಂಕ: 20.02.2025 ರಂದು ಬೆಂಗಳೂರು ನಗರದ ಅರಮನೆ ಆವರಣದಲ್ಲಿ “ಸಮ್ಮಿಲನ ಸಮಾವೇಶ, ಕಾರ್ಯಾಗಾರ ಹಾಗೂ ಉಪನ್ಯಾಸ” ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಸದರಿ ಕಾರ್ಯಕ್ರಮದಲ್ಲಿ ಭಾಗವಹಿಸುವ ಸಂಘದ ಚುನಾಯಿತ ನಿರ್ದೇಶಕರು, ಬೆಂಗಳೂರು ನಗರ ರಾಜ್ಯ ಪರಿಷತ್ ಸದಸ್ಯರು ಹಾಗೂ ಪದಾಧಿಕಾರಿಗಳಿಗೆ ದಿನಾಂಕ: 20.02.2025 ರಂದು ಒಂದು ದಿನದ ವಿಶೇಷ ಸಾಂದರ್ಭಿಕ ರಜೆಯನ್ನು ಈ ಕೆಳಕಂಡ ಷರತ್ತಿಗೊಳಪಟ್ಟು ಮಂಜೂರು ಮಾಡಲಾಗಿದೆ. “2024-29ನೇ ಅವಧಿಗೆ ಆಯ್ಕೆಯಾದ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಚುನಾಯಿತ ನಿರ್ದೇಶಕರು, ಬೆಂಗಳೂರು ನಗರ ರಾಜ್ಯ ಪರಿಷತ್ ಸದಸ್ಯರು ಹಾಗೂ ಪದಾಧಿಕಾರಿಗಳು…













