Subscribe to Updates
Get the latest creative news from FooBar about art, design and business.
Author: kannadanewsnow57
ದಾವಣಗೆರೆ : ಜಿಲ್ಲಾ ನ್ಯಾಯಾಲಯ ಸೇರಿದಂತೆ ಎಲ್ಲಾ ತಾಲ್ಲೂಕಿನ ನ್ಯಾಯಾಲಯಗಳಲ್ಲಿ ಮಾರ್ಚ್ 8 ರಂದು ರಾಷ್ಟ್ರೀಯ ಲೋಕ ಅದಾಲತ್ ನಡೆಯಲಿದ್ದು ಇಲ್ಲಿ ರಾಜೀಯಾಗಬಲ್ಲ ಎಲ್ಲ ಪ್ರಕರಣಗಳನ್ನು ಸಂಧಾನದ ಮೂಲಕ ಶೀಘ್ರವಾಗಿ ಇತ್ಯರ್ಥಪಡಿಸಿಕೊಳ್ಳಬಹುದಾಗಿದೆ. ಸಾರ್ವಜನಿಕರು ಇದರ ಸದುಪಯೋಗ ಪಡೆಯಬೇಕೆಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ರಾಜೇಶ್ವರಿ.ಎನ್ ಹೆಗಡೆ ತಿಳಿಸಿದರು. ಮಂಗಳವಾರ(ಫೆ.18) ರಂದು ನ್ಯಾಯಾಲಯದ ಆವರಣದಲ್ಲಿನ ವಕೀಲರ ಭವನದಲ್ಲಿ ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸಹಯೋಗದಲ್ಲಿ ಜಿಲ್ಲೆಯ ಎಲ್ಲಾ ನ್ಯಾಯಾಲಯಗಳಲ್ಲಿ ನಡೆಯುವ ರಾಷ್ಟ್ರೀಯ ಲೋಕ್ ಅದಾಲತ್ ಪೂರ್ವಭಾವಿ ಸಭೆಯನ್ನು ಉದ್ದೇಶಿಸಿ ಮಾತಾನಾಡಿದರು. ರಾಷ್ಟ್ರೀಯ ಲೋಕ್ ಅದಾಲತ್ ಮೂಲಕ ಅತಿ ಹೆಚ್ಚು ಪ್ರಕರಣಗಳನ್ನು ವಿಲೇವಾರಿ ಮಾಡಿ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡಬೇಕೆಂದು ಉದ್ದೇಶಿಸಲಾಗಿದೆ. ಇದರ ಅಂಗವಾಗಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ವತಿಯಿಂದ ಜಿಲ್ಲೆಯಲ್ಲಿರುವ ಎಲ್ಲಾ ನ್ಯಾಯಾಲಯಗಳ ವ್ಯಾಪ್ತಿಯಲ್ಲಿ ಲೋಕ್ ಅದಾಲತ್ ನಡೆಯಲಿದೆ. ಈ ಲೋಕ್ ಅದಾಲತ್‍ನಲ್ಲಿ ರಾಜಿಯಾಗಬಲ್ಲ ಎಲ್ಲಾ ಸಿವಿಲ್ ಹಾಗೂ ಕ್ರಿಮಿನಲ್ ಪ್ರಕರಣಗಳು, ಮೋಟಾರ್ ವಾಹನ…
ರಾಜ್ಯದ ಎಲ್ಲಾ ಮಹಾನಗರ ಪಾಲಿಕೆ ಮತ್ತು ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಮೇ 10ರ ವರೆಗೆ ಇ-ಖಾತಾ ಅಭಿಯಾನ ಆರಂಭಿಸಲಾಗಿದೆ. ಸಂಬಂಧಪಟ್ಟ ದಾಖಲೆಗಳೊಂದಿಗೆ ನಗರ ಸ್ಥಳೀಯ ಸಂಸ್ಥೆಗಳಿಗೆ ಭೇಟಿ ನೀಡಿ ಇ-ಖಾತೆ ಪಡೆದುಕೊಳ್ಳಬಹುದು. ಇ-ಖಾತಾ ಪಡೆಯಲು ಸರಳ ವಿಧಾನಗಳು 1 ಸರ್ಕಾರದಿಂದ ವಿತರಿಸಿದ ಯಾವುದೇ ಬಗೆಯ ಗುರುತಿನ ಚೀಟಿ 2 ಆಸ್ತಿ ಮಾಲೀಕರ ಫೋಟೋ 3 ಮಾಲೀಕತ್ವ ದೃಢೀಕರಿಸುವ ನೋಂದಾಯಿತ ದಾಖಲೆಗಳು 4. ಸ್ವತ್ತಿನ ಋಣಭಾರ ಪ್ರಮಾಣ ಪತ್ರ 5 ಸ್ವತ್ತಿನ ಛಾಯಾಚಿತ್ರ 6 ಆಸ್ತಿ ತೆರಿಗೆ ಪಾವತಿಸಿದ ರಶೀದಿ ಈ ಮೇಲಿನ ದಾಖಲೆಗಳೊಂದಿಗೆ ಸಂಬಂಧಪಟ್ಟ ನಗರ ಸ್ಥಳೀಯ ಸಂಸ್ಥೆಗಳಿಗೆ ಭೇಟಿ ನೀಡಿ ಇ-ಖಾತೆ ದಾಖಲೆಯನ್ನು ಪಡೆದುಕೊಳ್ಳಬಹುದು. ಈಗಾಗಲೇ ಇರುವ ಕೈಬರಹ ಖಾತೆಗೆ ಇ-ಖಾತಾ ಪಡೆಯಿರಿ. ಶ್ರೀ ಐ.ಎಸ್. ಸುರೇಶ, ಮಾನ್ಯ ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವರು maar dro ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿರುವುದು. ಯಾವುದಾದರೂ ಸಮಸ್ಯೆ ಇದ್ದಲ್ಲಿ ಸಂಪರ್ಕಿಸಿ: ಸಹಾಯವಾಣಿ : 080-23003100 ವಾಟ್ಸಾಪ್ : 6366674001
ನವದೆಹಲಿ : ಮುಂದಿನ ಮುಂದಿನ 5-6 ತಿಂಗಳಲ್ಲಿ ಮಹಿಳೆಯರಿಗೆ ಕ್ಯಾನ್ಸರ್ ಲಸಿಕೆ ಲಭ್ಯವಾಗಲಿದೆ ಎಂದು ಕೇಂದ್ರ ಸಚಿವ ‘ಜಾಧವ್’ ಹೇಳಿದ್ದಾರೆ. ಛತ್ರಪತಿ ಸಂಭಾಜಿನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಜಾಧವ್, ಲಸಿಕೆಯ ಸಂಶೋಧನೆ ಬಹುತೇಕ ಪೂರ್ಣಗೊಂಡಿದೆ, ಪ್ರಸ್ತುತ ಪ್ರಯೋಗಗಳು ನಡೆಯುತ್ತಿವೆ ಎಂದು ಹೇಳಿದರು. “ದೇಶದಲ್ಲಿ ಕ್ಯಾನ್ಸರ್ ರೋಗಿಗಳ ಸಂಖ್ಯೆ ಹೆಚ್ಚಾಗಿದ್ದು, ಕೇಂದ್ರ ಸರ್ಕಾರವು ಈ ಸಮಸ್ಯೆಯನ್ನು ಪರಿಹರಿಸಲು ಕ್ರಮಗಳನ್ನು ಪ್ರಾರಂಭಿಸಿದೆ. 30 ವರ್ಷಕ್ಕಿಂತ ಮೇಲ್ಪಟ್ಟ ಮಹಿಳೆಯರು ಆಸ್ಪತ್ರೆಗಳಲ್ಲಿ ತಪಾಸಣೆಗೆ ಒಳಗಾಗುತ್ತಾರೆ ಮತ್ತು ರೋಗವನ್ನು ಮುಂಚಿತವಾಗಿ ಪತ್ತೆಹಚ್ಚಲು ಡೇಕೇರ್ ಕ್ಯಾನ್ಸರ್ ಕೇಂದ್ರಗಳನ್ನು ಸ್ಥಾಪಿಸಲಾಗುವುದು” ಎಂದು ಅವರು ಹೇಳಿದರು. ಲಸಿಕೆಯು ಸ್ತನ, ಬಾಯಿ ಮತ್ತು ಗರ್ಭಕಂಠದ ಕ್ಯಾನ್ಸರ್ಗಳನ್ನು ಗುರಿಯಾಗಿಸುತ್ತದೆ ಎಂದು ಸಚಿವರು ದೃಢಪಡಿಸಿದರು. ಹೆಚ್ಚುವರಿಯಾಗಿ, ಕ್ಯಾನ್ಸರ್ ಚಿಕಿತ್ಸೆಯಲ್ಲಿ ಬಳಸುವ ಔಷಧಿಗಳ ಮೇಲಿನ ಕಸ್ಟಮ್ಸ್ ಸುಂಕವನ್ನು ಸರ್ಕಾರ ಮನ್ನಾ ಮಾಡಿದೆ. ಸಾಂಪ್ರದಾಯಿಕ ಔಷಧವನ್ನು ಆರೋಗ್ಯ ರಕ್ಷಣೆಯಲ್ಲಿ ಸಂಯೋಜಿಸುವ ಸರ್ಕಾರದ ಪ್ರಯತ್ನಗಳನ್ನು ಜಾಧವ್ ಉಲ್ಲೇಖಿಸಿದರು. ರಾಷ್ಟ್ರವ್ಯಾಪಿ ಆಸ್ಪತ್ರೆಗಳಲ್ಲಿ ಆಯುಷ್ ವಿಭಾಗಗಳನ್ನು ಸ್ಥಾಪಿಸಲಾಗಿದೆ, ಅಂತಹ 12,500 ಸೌಲಭ್ಯಗಳು ಪ್ರಸ್ತುತ ಕಾರ್ಯನಿರ್ವಹಿಸುತ್ತಿವೆ ಮತ್ತು…
ಭಾಲ್ಕಿ : ಶಿವಮೊಗ್ಗ ಜಿಲ್ಲೆ ಸಾಗರ ಅರಣ್ಯ ವಿಭಾಗದ, ಬೈರಾಪುರ ಗ್ರಾಮದ ಅಂಬಲಿಗೋಳ ಜಲಾಶಯದ ಹಿನ್ನೀರಿನಲ್ಲಿ ಸೋಮವಾರ ಸಂಜೆ 7-8 ವರ್ಷದ ಗಂಡು ಹುಲಿಯ ಮೃತದೇಹ ಪತ್ತೆಯಾಗಿದ್ದು, ಈ ಬಗ್ಗೆ ಕೂಲಂಕಷ ತನಿಖೆ ನಡೆಸಿ ವರದಿ ಸಲ್ಲಿಸಲು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಸೂಚನೆ ನೀಡಿದ್ದಾರೆ. ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಹಾಗೂ ಮುಖ್ಯ ವನ್ಯ ಜೀವಿ ಪರಿಪಾಲಕರಿಗೆ ಸೂಚನೆ ನೀಡಿರುವ ಸಚಿವರು, ಹುಲಿಗೆ ಗುಂಡು (ಪೆಲೆಟ್ಸ್) ಹೊಡೆದ ಗಾಯವೂ ಇರುವುದಾಗಿ ಮಾಧ್ಯಮಗಳಲ್ಲಿ ಸಚಿತ್ರ ವರದಿಗಳು ಪ್ರಕಟವಾಗಿದ್ದು ಈ ಬಗ್ಗೆ ತನಿಖೆ ನಡೆಸಿ 10 ದಿನಗಳ ಒಳಗಾಗಿ ವಾಸ್ತವ ವರದಿ ಸಲ್ಲಿಸಲು ತಿಳಿಸಿದ್ದಾರೆ. ಹುಲಿಯ ಮೃತ ದೇಹ ಪತ್ತೆಯಾಗಿರುವ ಪ್ರದೇಶದಲ್ಲಿ ಯಾವತ್ತೂ ಹುಲಿಯ ದರ್ಶನವೇ ಆಗಿಲ್ಲ. ಹೀಗಾಗಿ ಬೇರೆ ಕಡೆ ಹುಲಿ ಕೊಂದು ಇಲ್ಲಿ ಹಾಕಿರಬಹುದು ಎಂಬ ಅನುಮಾನವನ್ನು ಸ್ಥಳೀಯರು ವ್ಯಕ್ತಪಡಿಸಿರುವುದಾಗಿಯೂ ವರದಿಯಲ್ಲಿ ಉಲ್ಲೇಖಿಸಲಾಗಿದ್ದು, ಈ ಬಗ್ಗೆಯೂ ತನಿಖೆ ನಡೆಸಲು ಸೂಚಿಸಿದ್ದಾರೆ.
ಬೆಂಗಳೂರು: ರಾಜ್ಯ ಸರ್ಕಾರದಿಂದ ಇ-ಖಾತಾ ವಿತರಣೆ ಸಂಬಂಧ ಮಹತ್ವದ ನಿರ್ಧಾರವನ್ನು ಕೈಗೊಳ್ಳಲಾಗಿದೆ. 3 ತಿಂಗಳಲ್ಲಿ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಇ-ಖಾತಾ ಪಡೆಯಲು ಬಾಕಿ ಇರುವ ಎಲ್ಲಾ ಆಸ್ತಿಗಳಿಗೆ 3 ತಿಂಗಳ ಗಡುವು ನೀಡಲಾಗಿದೆ. ಇದಕ್ಕಾಗಿ SOP ಜಾರಿಗೊಳಿಸಿದೆ. ಈ ಮೂಲಕ ರಾಜ್ಯದ ಆಸ್ತಿ ಮಾಲೀಕರಿಗೆ ಸರ್ಕಾರ ಗುಡ್ ನ್ಯೂಸ್ ನೀಡಿದೆ. ಈ ಸಂಬಂಧ ಪೌರಾಡಳಿತ ನಿರ್ದೇಶನಾಲಯದ ನಿರ್ದೇಶಕರು ಇ-ಆಸ್ತಿ ತಂತ್ರಾಂಶದ ಮೂಲಕ ಇ-ಖಾತಾ ನೀಡುವ ಪ್ರಮಾಣಿಕ ಕಾರ್ಯವಿಧಾನವನ್ನು ಜಾರಿಗೊಳಿಸಿದ್ದಾರೆ. ಅದರಲ್ಲಿ ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಇ-ಖಾತಾ ಪಡೆಯಲು ಬಾಕಿ ಇರುವ ಎಲ್ಲಾ ಆಸ್ತಿಗಳಿಗೆ 03 ತಿಂಗಳೊಳಗಾಗಿ ನೀಡಲು ಉದ್ದೇಶಿಸಲಾಗಿರುತ್ತದೆ. ಆದ್ದರಿಂದ, ಇ-ಖಾತಾ ನೀಡಲು ಅಭಿಯಾನ ಕೈಗೊಂಡು ಕೆಳಕಂಡ ಕಾರ್ಯವಿಧಾನವನ್ನು ಅನುಸರಿಸುವುದು ಅಂತ ಹೇಳಿದ್ದಾರೆ. 1) ನಗರ ಸ್ಥಳೀಯ ಸಂಸ್ಥೆಗಳಲ್ಲಿ ಇ-ಖಾತಾ ನೀಡಲು ಬಾಕಿಯಿರುವ ಆಸ್ತಿಗಳ ಗುರುತಿಸುವುದು. ಇ- ಖಾತಾ ಪಡೆಯಲು ಗುರುತಿಸಲಾದ ಆಸ್ತಿಗಳ ಮಾಲೀಕರು ಇ-ಖಾತಾ ಪಡೆಯಲು ಬೇಕಾದ ದಾಖಲೆಗಳನ್ನು ಸಲ್ಲಿಸಲು ಮಾಹಿತಿ ನೀಡುವುದು. 2) ನಗರ…
ಬೆಂಗಳೂರು: ರಾಜ್ಯದಲ್ಲಿ ಜಾತಿ ಗಣತಿ ವರದಿಯು ವೈಜ್ಞಾನಿಕವಾಗಿ ನಡೆದಿದ್ದು ಅದನ್ನು ನಮ್ಮ ಸರ್ಕಾರ ಖಂಡಿತವಾಗಿಯೂ ಜಾರಿಗೊಳಿಸುತ್ತದೆ ಇದರಲ್ಲಿ ಯಾವುದೇ ಸಂಶಯ ಬೇಡ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಹಿಂದುಳಿದ ವರ್ಗಗಳ ಮುಖಂಡರು ಹಾಗೂ ಹಿಂದುಳಿದ ವರ್ಗಗಳ ಸಂಘ ಸಂಸ್ಥೆಗಳ ಪ್ರತಿನಿಧಿಗಳೊಂದಿಗೆ ವಿಧಾನಸೌಧದಲ್ಲಿ ನಡೆದ ಬಜೆಟ್ ಪೂರ್ವಭಾವಿ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಜಾತಿ ಗಣತಿ ಅನುಷ್ಠಾನಕ್ಕೆ ಸಭೆಯಲ್ಲಿ ಒಕ್ಕೊರಲಿನಿಂದ ಒತ್ತಾಯ ಬಂದ ಸಂದರ್ಭದಲ್ಲಿ ಅದಕ್ಕೆ ಮುಖ್ಯಮಂತ್ರಿಗಳು ಪ್ರತಿಕ್ರಿಯೆ ನೀಡಿದರು. ಸರ್ಕಾರ ಜಾತಿ ಗಣತಿ ಪರವಾಗಿದೆ . ನಮ್ಮ ಸರ್ಕಾರ ಜಾತಿ ಗಣತಿ ವರದಿಯನ್ನು ಸ್ವೀಕರಿಸಿದೆ. ಮುಂದಿನ ದಿನಗಳಲ್ಲಿ ಅದನ್ನು ಖಂಡಿತವಾಗಿಯೂ ಜಾರಿ ಮಾಡಲಾಗುತ್ತದೆ ಅದರ ಬಗ್ಗೆ ಅನುಮಾನ ಬೇಡ ಎಂದು ತಿಳಿಸಿದರು. ತಮಿಳು ನಾಡು ಮಾದರಿಯಲ್ಲಿ ಮೀಸಲಾತಿ ಹೆಚ್ಚಳಕ್ಕೆ ಸಭೆ ಆಗ್ರಹಿಸಿದಾಗ 1992 ರ ಇಂದಿರಾ ಸಹಾನಿ ಕೇಸನ್ನು ಉಲ್ಲೇಖಿಸಿ ಮೀಸಲಾತಿ ಶೇಕಡ 50ರಷ್ಟು ಮೀರಬಾರದು ಎನ್ನುವ ಅಂಶವನ್ನು ಸಭೆಗೆ ತಿಳಿಸುತ್ತಾ, ಕಳೆದ ಸರ್ಕಾರದಲ್ಲಿ ಆರ್ಥಿಕವಾಗಿ ಹಿಂದುಳಿದವರಿಗೆ ಎಂದು ( EWS) ಮೀಸಲಾತಿ…
ನವದೆಹಲಿ : ಐಸಿಸಿ ಚಾಂಪಿಯನ್ಸ್ ಟ್ರೋಫಿ ಇಂದಿನಿಂದ ಆರಂಭವಾಗಲಿದೆ. ಟೂರ್ನಿಯ ಮೊದಲ ಪಂದ್ಯ ಆತಿಥೇಯ ಪಾಕಿಸ್ತಾನ ಮತ್ತು ನ್ಯೂಜಿಲೆಂಡ್ ನಡುವೆ ನಡೆಯಲಿದೆ. ಈ ಪಂದ್ಯವು ಕರಾಚಿಯ ರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯಲಿದೆ. ಈ ಪಂದ್ಯ ಮಧ್ಯಾಹ್ನ 2.30 ರಿಂದ ನಡೆಯಲಿದೆ. ಪಾಕಿಸ್ತಾನ ಮತ್ತು ನ್ಯೂಜಿಲೆಂಡ್ ತಂಡಗಳು ಟೂರ್ನಿಯ ‘ಎ’ ಗುಂಪಿನಲ್ಲಿ ಸ್ಥಾನ ಪಡೆದಿವೆ. ಪಾಕಿಸ್ತಾನ 29 ವರ್ಷಗಳ ನಂತರ ಐಸಿಸಿ ಟೂರ್ನಿಯನ್ನು ಆಯೋಜಿಸುತ್ತಿದೆ. ಪಂದ್ಯಾವಳಿಯಲ್ಲಿ 8 ತಂಡಗಳಿವೆ. ಗ್ರೂಪ್ ಎ ನಲ್ಲಿ ಭಾರತ, ಪಾಕಿಸ್ತಾನ, ಬಾಂಗ್ಲಾದೇಶ ಮತ್ತು ನ್ಯೂಜಿಲೆಂಡ್ ತಂಡಗಳಿವೆ. ಬಿ ಗುಂಪಿನಲ್ಲಿ ಆಸ್ಟ್ರೇಲಿಯಾ, ಇಂಗ್ಲೆಂಡ್, ದಕ್ಷಿಣ ಆಫ್ರಿಕಾ ಮತ್ತು ಅಫ್ಘಾನಿಸ್ತಾನ ತಂಡಗಳಿವೆ. ಪ್ರತಿಯೊಂದು ತಂಡವು ತನ್ನ ಗುಂಪಿನಲ್ಲಿ 3 ಪಂದ್ಯಗಳನ್ನು ಆಡಲಿದೆ. ಒಂದು ಗುಂಪಿನಲ್ಲಿ ಮೂರು ತಂಡಗಳು ತಲಾ ಎರಡು ಪಂದ್ಯಗಳನ್ನು ಗೆಲ್ಲುವ ಮತ್ತು ಒಂದು ತಂಡ ಪ್ರತಿ ಪಂದ್ಯವನ್ನು ಸೋತಿರುವ ಸಾಧ್ಯತೆಯಿದೆ. ಇದು ಸಂಭವಿಸಿದಲ್ಲಿ, ರನ್ ರೇಟ್ ಟಾಪ್-2 ತಂಡಗಳು ಯಾವುದು ಎಂಬುದನ್ನು ನಿರ್ಧರಿಸುತ್ತದೆ. ಒಂದು ತಂಡವು ರನ್ ರೇಟ್…
ಬೆಂಗಳೂರು : ಆರ್ಥಿಕ ಸಾಕ್ಷರತಾ ಸಪ್ತಾಹ” ಅಂಗವಾಗಿ ಶಿಕ್ಷಣ ಇಲಾಖೆಯ ಸರ್ಕಾರಿ ಮಹಿಳಾ ಶಿಕ್ಷಕಿಯರಿಗೆ ರಸಪ್ರಶ್ನೆ ಸ್ಪರ್ಧೆಯನ್ನು ಹಮ್ಮಿಕೊಳ್ಳುವ ಬಗ್ಗೆ ಶಿಕ್ಷಣ ಇಲಾಖೆ ಮಹತ್ವದ ಆದೇಶ ಹೊರಡಿಸಿದೆ. ಆರ್ಥಿಕ ಸೇರ್ಪಡೆ ಮತ್ತು ಆರ್ಥಿಕ ಸಾಕ್ಷರತೆಯನ್ನು ಉತ್ತೇಜಿಸಲು ಭಾರತೀಯ ರಿಸರ್ವ್ ಬ್ಯಾಂಕ್ ಹಲವಾರು ಉಪಕ್ರಮಗಳನ್ನು ತೆಗೆದುಕೊಳ್ಳುತ್ತಿದೆ. ಪ್ರತಿ ವರ್ಷ, ಒಂದು ವಾರವನ್ನು ‘ಆರ್ಥಿಕ ಸಾಕ್ಷರತಾ ಸಪ್ತಾಹ (FLW)’ ಎಂದು ಗುರುತಿಸಿ, ಆರ್ಥಿಕ ಸಾಕ್ಷರತೆಯ ಬಗ್ಗೆ ಸಮಾಜದ ಜನರಿಗೆ ಜಾಗೃತಿ ಮೂಡಿಸಿ, ದೇಶದ ಸಮಗ್ರ ಬೆಳವಣಿಗೆ ಮತ್ತು ಅಭಿವೃದ್ಧಿಯನ್ನು ಉತ್ತೇಜಿಸುತ್ತಿದೆ. ಪ್ರಸ್ತುತ ದಿನಾಂಕ:24.02.2025 ರಿಂದ 28.02.2025ರ ಅವಧಿಯನ್ನು ‘ಆರ್ಥಿಕ ಸಾಕ್ಷರತೆ – ಮಹಿಳಾ ‘ (Financial literacy for women) ಎಂದು ಗುರುತಿಸಿ, ಮಹಿಳೆಯರಿಗೆ ಆರ್ಥಿಕ ಸಾಕ್ಷರತೆಯ ಬಗ್ಗೆ ಅರಿವು ಮೂಡಿಸಲು 2024-25ನೇ ಸಾಲಿನಲ್ಲಿ ರಾಜ್ಯದ ಶಿಕ್ಷಣ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಎಲ್ಲಾ ಸರ್ಕಾರಿ ಮಹಿಳಾ ಶಿಕ್ಷಕಿಯರಿಗೆ ರಸಪ್ರಶ್ನೆ (Quiz Competition) ಸ್ಪರ್ಧೆಯನ್ನು ಆಯೋಜಿಸಿದೆ. ಉದ್ದೇಶಗಳು: ‘ವಿದ್ಯಾರ್ಥಿಗಳಲ್ಲಿ ಆರ್ಥಿಕ ಸಾಕ್ಷರತೆಯ ಬಗ್ಗೆ, ಅರಿವು ಮೂಡಿಸುವುದು.…
ಬೆಂಗಳೂರು : ರಾಜ್ಯ ಸರ್ಕಾರದ ಅನ್ನಭಾಗ್ಯ ಯೋಜನೆಯಡಿ ಕೆಲ ಅಂತ್ಯೋದಯ, ಬಿಪಿಎಲ್ ಕಾರ್ಡ್ ದಾರರಿಗೆ ಹೆಚ್ಚುವರಿ 5 ಕೆಜಿ ಅಕ್ಕಿಯ ಹಣ ಬ್ಯಾಂಕ್ ಖಾತೆಗಳಿಗೆ ಕಳೆದ 3 ತಿಂಗಳಿಂದ ಜಮೆಯಾಗಿಲ್ಲ. ಹೀಗಾಗಿ ಫಲಾನುಭವಿಗಳ ಆಕ್ರೋಶಕ್ಕೆ ಕಾರಣವಾಗಿದೆ. ನಿಗದಿತ ಸಮಯಕ್ಕೆ ಡಿಬಿಟಿ ಮೂಲಕ ಫಲಾನುಭವಿಗಳ ಖಾತೆಗೆ ಪಡಿತರದ ಅಕ್ಕಿ ಹಣ ಜಮಾ ಮಾಡುತ್ತಿಲ್ಲ. ಕೆಲವು ತಿಂಗಳು ತಾಂತ್ರಿಕತೆಯ ಸಮಸ್ಯೆ ನೆಪವೊಡ್ಡಿ ವಿಳಂಬ ಆಗಿದೆ. ಇದೀಗ ಹಣದ ಬದಲಿಗೆ ಅಕ್ಕಿ ಕೊಡಲು ಚಿಂತನೆ ನಡೆದಿದೆ. ಆದರೆ ಅಕ್ಕಿ, ಹಣ ಎರಡು ಕೂಡ ಫಲಾನುಭವಿಗಳಿಗೆ ಸಿಗದೇ ತೊಂದರೆಯಾಗಿದೆ. ಇದನ್ನು ಮನಗಂಡು ಹೆಚ್ಚುವರಿ ಐದು ಕೆಜಿ ಅಕ್ಕಿಯನ್ನೇ ನೀಡಲು ಸರ್ಕಾರ ಚಿಂತನೆ ನಡೆಸಿದೆ ಅನ್ನಭಾಗ್ಯ ಯೋಜನೆಯಡಿ ಬಿಪಿಎಲ್ ಮತ್ತು ಅಂತ್ಯೋದಯ ಕಾರ್ಡ್ ದಾರರಿಗೆ ಹಣದ ಬದಲು ಅಕ್ಕಿ ವಿತರಿಸುವ ಸಾಧ್ಯತೆ ಇದೆ. ಅಕ್ಕಿ ಪಡೆಯಲು ಆಹಾರ ಇಲಾಖೆ ಪ್ರಯತ್ನಿಸಿದ್ದು, ಇದೇ ಕಾರಣಕ್ಕೆ ಹಣದ ವರ್ಗಾವಣೆ ಸ್ಥಗಿತವಾಗಿದೆ ಎನ್ನುವ ಮಾತುಗಳು ಕೇಳಿ ಬಂದಿವೆ.
ಬೆಂಗಳೂರು : ರಾಜ್ಯದಲ್ಲಿನ ಅನಧಿಕೃತ ಬಡಾವಣೆಗಳಲ್ಲಿನ ಆಸ್ತಿಗಳಿಂದ ತೆರಿಗೆ ಸಂಗ್ರಹಕ್ಕಾಗಿ ಒಂದು ಬಾರಿಯ ಕ್ರಮವಾಗಿ ಬಿ-ಖಾತಾ ನೀಡಲು ಬಿ-ಖಾತಾ ಅಭಿಯಾನ ಆರಂಭಿಸುವಂತೆ ಎಲ್ಲಾ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ಮುಖ್ಯಂಂತ್ರಿಗಳ ಅಧಿಕೃತ ನಿವಾಸ ಕಾವೇರಿಯಲ್ಲಿ ಮಂಗಳವಾರ ವಿಡಿಯೋ ಕಾನ್ಫರೆನ್ಸ್ ಮೂಲಕ ಜಿಲ್ಲಾಧಿಕಾರಿಗಳು ಸೇರಿದಂತೆ ವಿವಿಧ ಅಧಿಕಾರಿಗಳ ಜೊತೆಗೆ ಸಭೆ ನಡೆಸಿದ ಸಿಎಂ ಸಿದ್ದರಾಮಯ್ಯ, ರಾಜ್ಯಾದ್ಯಂತ ಅನಧಿಕೃತ ಬಡಾವಣೆಗಳ ನಿರ್ಮಾಣಕ್ಕೆ ಅವಕಾಶ ನೀಡಬಾರದು. ಜೊತೆಗೆ ಅನಧಿಕೃತ ಬಡಾವಣೆಗಳಲ್ಲಿನ ಆಸ್ತಿಗಳಿಂದ ತೆರಿಗೆ ವಸೂಲಿ ಮಾಡುವ ಸಂಬಂಧ ಬಿ-ಖಾತಾ ನೀಡುವ ಪ್ರಕ್ರಿಯೆಗೆ ಚಾಲನೆ ನೀಡಬೇಕೆಂದು ಸೂಚನೆ ನೀಡಿದ್ದಾರೆ. ಅರಣ್ಯ ಸಚಿವರ ನೇತೃತ್ವದಲ್ಲಿ ರಚಿಸಲಾಗಿದ್ದ ಸಮಿತಿಯ ವರದಿಯಾಧರಿಸಿ ಕಾನೂನು ರೂಪಿಸಲಾಗಿದ್ದು, ಬೆಂಗಳೂರು ಮಹಾನಗರ ಪಾಲಿಕೆ ಸೇರಿದಂತೆ ರಾಜ್ಯದ ಮಹಾನಗರ ಪಾಲಿಕೆ ಹಾಗೂ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಗೆ ಬರುವ ಅನಧಿಕೃತ, ರೆವಿನ್ಯೂ ಬಡಾವಣೆಗಳು ಹಾಗೂ ಆಸ್ತಿಗಳಿಗೆ ನಾಗರೀಕ ಸೌಲಭ್ಯಗಳನ್ನು ಒದಗಿಸಲಾಗಿದ್ದು, ಸರ್ಕಾರದಕ್ಕೆ ತೆರಿಗೆ ಸಂದಾಯವಾಗಬೇಕು. ಈ ದಿಸೆಯಲ್ಲಿ ಅನಧಿಕೃತ, ರೆವಿನ್ಯೂ ಬಡಾವಣೆಗಳಲ್ಲಿ…












