Author: kannadanewsnow57

ಬೆಂಗಳೂರು : ರಾಜ್ಯದಲ್ಲಿ ಕಳೆದ ಒಂದೇ ವರ್ಷದಲ್ಲಿ 21,881 ಮಂದಿಗೆ ಕ್ಯಾನ್ಸರ್ ಚಿಕಿತ್ಸೆಗೆ ನೋಂದಣಿಯಾಗಿದ್ದು ಈ ಪೈಕಿ 674 ಮಕ್ಕಳು ಸೇರಿದ್ದಾರೆ. ಇದು ಮಕ್ಕಳಲ್ಲಿ ಕ್ಯಾನ್ಸರ್ ಹೆಚ್ಚಾಗುತ್ತಿರುವ ಕುರಿತ ಎಚ್ಚರಿಕೆ ಗಂಟೆ ಎಂದು ವೈದ್ಯರು ಎಚ್ಚರಿಕೆ ನೀಡಿದ್ದಾರೆ.  ವಿಶ್ವದಲ್ಲಿ ಪ್ರತಿವರ್ಷ 3 ಲಕ್ಷ ಮಕ್ಕಳು ಹಾಗೂ ಯುವಕರಲ್ಲಿ ಕ್ಯಾನ್ಸರ್ ಪತ್ತೆಯಾ ಗುತ್ತಿದೆ. ಅನುವಂಶಿಕತೆ, ಅನಾರೋಗ್ಯಕರ ಜೀವನಶೈಲಿ ಮುಂತಾದ ಕಾರಣದಿಂದ ರಾಜ್ಯದಲ್ಲೂ ಇತ್ತೀಚೆಗೆ ಮಕ್ಕಳಲ್ಲಿ ಕ್ಯಾನ್ಸರ್ ಪ್ರಕರಣ ಹೆಚ್ಚಾಗುತ್ತಿದೆ. ಅದರಲ್ಲೂ ರಕ್ತ ಕ್ಯಾನ್ಸರ್, ಮಿದುಳು ಮತ್ತು ಕ್ಯಾನ್ಸರ್ ಗಡ್ಡೆ ಪ್ರಕರಣ ಹೆಚ್ಚಾಗುತ್ತಿವೆ. ಕಳೆದ ಒಂದೇ ವರ್ಷ 674 ಮಕ್ಕಳಲ್ಲಿ ಕ್ಯಾನ್ಸರ್ ಪತ್ತೆಯಾಗಿದ್ದು, ಆತಂಕಕ್ಕೆ ಕಾರಣವಾಗಿದೆ. ಅಂತರರಾಷ್ಟ್ರೀಯ ಬಾಲ್ಯ ಕ್ಯಾನ್ಸರ್ ದಿನವನ್ನು ಆಚರಿಸುವ ಉದ್ದೇಶವೆಂದರೆ ಬಾಲ್ಯದ ಕ್ಯಾನ್ಸರ್ ಬಗ್ಗೆ ಜಾಗೃತಿ ಮೂಡಿಸುವುದು ಮತ್ತು ಆರಂಭಿಕ ಪತ್ತೆಯ ಮಹತ್ವವನ್ನು ವಿವರಿಸುವುದು. ಕ್ಯಾನ್ಸರ್ ಒಂದು ಗಂಭೀರ ಕಾಯಿಲೆಯಾಗಿದೆ, ಆದರೆ ಆರಂಭಿಕ ಹಂತಗಳಲ್ಲಿ ಪತ್ತೆಯಾದರೆ, ಅದರ ಯಶಸ್ವಿ ಚಿಕಿತ್ಸೆ ಸಾಧ್ಯ. ಬಾಲ್ಯದ ಕ್ಯಾನ್ಸರ್‌ಗಳಲ್ಲಿ ಸಾಮಾನ್ಯ ವಿಧಗಳೆಂದರೆ ರಕ್ತ ಕ್ಯಾನ್ಸರ್…

Read More

ಮಂಡ್ಯ : ಮಂಡ್ಯ ಜಿಲ್ಲೆಯಲ್ಲಿ ಘೋರ ದುರಂತವೊಂದು ಸಂಭವಿಸಿದ್ದು, ಕಾವೇರಿ ನದಿಯಲ್ಲಿ ಮುಳುಗಿ ಇಬ್ಬರು ಯುವತಿಯರು ಸಾವನ್ನಪ್ಪಿದ ಘಟನೆ ನಡೆದಿದೆ. ಮಂಡ್ಯ ಜಿಲ್ಲೆಯ ಮುತ್ತತ್ತಿಯಲ್ಲಿ ಮುತ್ತತ್ತಿಗೆ ದೇವರ ಕಾರ್ಯಕ್ಕೆಂದು ಬಂದಿದ್ದ ಇಬ್ಬರು ಯುವತಿಯರು ಕಾವೇರಿ ನದಿಯಲ್ಲಿ ಸ್ನಾನ ಮಾಡಲು ಹೋಗಿ ಮುಳುಗಿ ಮೃತಪಟ್ಟಿದ್ದಾರೆ. ಹಲಗೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.  ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Read More

ಮಂಡ್ಯ : ಮಂಡ್ಯದಲ್ಲಿ ಮನೆಯ ಟರೇಸ್ ಮೇಲೆಯೇ ಗಾಂಜಾ ಬೆಳೆದ ವ್ಯಕ್ತಿಯೊಬ್ಬನನ್ನು ಭರ್ಜರಿ ಕಾರ್ಯಾಚರಣೆ ನಡೆಸುವ ಮೂಲಕ ಪೊಲೀಸರು ಬಂಧಿಸಿದ್ದಾರೆ. ಮದ್ದೂರು ತಾಲೂಕಿನ ಕೊಪ್ಪ ಪೋಲೀಸ್ ಠಾಣಾ ವ್ಯಾಪ್ತಿಯ ಹಳೇಹಳ್ಳಿ ಗ್ರಾಮದ ಕರಿಯಪ್ಪ ಬಿನ್ ನಿಂಗೇಗೌಡ ಎಂಬುವವರು ಮನೆಯ ಮೇಲಿನ ಪ್ಲಾಸ್ಟಿಕ್ ಪಾಟ್ ಗಳಲ್ಲಿ ಅಕ್ರಮವಾಗಿ ಗಾಂಜಾ ಗಿಡಗಳನ್ನು ಬೆಳೆಸಲಾಗಿದೆ ಎಂಬ ಖಚಿತ ಮಾಹಿತಿ ಮೇರೆಗೆ ಮದ್ದೂರು ಗ್ರಾಮಾಂತರ ವೃತ್ತ ನಿರೀಕ್ಷಕ ವೆಂಕಟೇಗೌಡ ಅವರ ಮಾರ್ಗದರ್ಶನದಲ್ಲಿ ಕೊಪ್ಪ ಪೋಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಹಾಗೂ ಸಿಬ್ಬಂದಿಗಳು ದಾಳಿ ಮಾಡಿ 3 ಕೆಜಿ 664 ಗ್ರಾಂನಷ್ಟು ಗಾಂಜಾ ಸೊಪ್ಪನ್ನು ಪೋಲೀಸರು ವಶಪಡಿಸಿಕೊಂಡಿದ್ದಾರೆ. ಆರೋಪಿ ವಿರುದ್ಧ ಕಲಂ 20(ಎ)(i) ಎನ್ಡಿಪಿಸಿ ಕಾಯ್ದೆ ಅನ್ವಯ ಪ್ರಕರಣ ದಾಖಲಾಗಿದ್ದು, ಕೊಪ್ಪ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಮುಂದಿನ ಕ್ರಮ ಕೈಗೊಂಡಿದ್ದಾರೆ. ವರದಿ : ಗಿರೀಶ್ ರಾಜ್, ಮಂಡ್ಯ

Read More

ಬೆಂಗಳೂರು : 2025-26ನೇ ಸಾಲಿಗೆ ಎಲ್ಲಾ ತಾಲ್ಲೂಕುಗಳ ರಕ್ತ ಶೇಖರಣಾ ಘಟಕಗಳಲ್ಲಿ Cryoprecipitate/ Fresh Frozen Plasma (FFP) ಅಗತ್ಯವಿರುವ ಉಪಕರಣಗಳನ್ನು ಖರೀದಿಸುವ ಬಗ್ಗೆ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಮೇಲೆ ಓದಲಾದ ಕ್ರಮಾಂಕ (1) ರ ಆದೇಶದಲ್ಲಿ ರಾಜ್ಯಾದ್ಯಂತ ಉತ್ತರ ಕರ್ನಾಟಕ ಜಿಲ್ಲೆಗಳನ್ನು ಒಳಗೊಂಡಂತೆ First Referral Unitಗಳಲ್ಲಿ ರಕ್ತ ಶೇಖರಣಾ ಘಟಕಗಳಲ್ಲಿ ಲಭ್ಯವಿಲ್ಲದ 50 ಆಸ್ಪತ್ರೆಗಳಲ್ಲಿ ರಕ್ತ ಶೇಖರಣಾ ಘಟಕಗಳ ಸ್ಥಾಪನೆಗೆ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ. ಮೇಲೆ ಓದಲಾದ ಕ್ರಮಾಂಕ (2) ರ ಏಕ-ಕಡತದಲ್ಲಿ ವಾರ್ಷಿಕವಾಗಿ ಸುಮಾರು 518 ತಾಯಿಂದಿರು ಮರಣ ಹೊಂದುತ್ತಿದ್ದು, ಶೇಖಡ 20 ಪ್ರತಿಶತ ಮಹಿಳೆಯರು ಪ್ರಸೂತಿ ರಕ್ತಸ್ರಾವದಿಂದ ಮರಣ ಹೊಂದುತ್ತಿದಾರೆ. ಪ್ರಸೂತಿಯಿಂದ ಆಗುವ ಮರಣಗಳನ್ನು ಕಡಿಮೆ ಮಾಡಲು ರಾಷ್ಟ್ರೀಯ ಆರೋಗ್ಯ ಅಭಿಯಾನದಡಿಯಲ್ಲಿ ಹಲವಾರು ಹಂತಗಳಲ್ಲಿ ಕ್ರಮ ಕೈಗೊಳ್ಳಲಾಗಿದೆ. ಈ ಪ್ರಯತ್ನಗಳ ಹೊರತಾಗಿಯು ರಕ್ತ ಸಂಗ್ರಹಣೆ ಮತ್ತು ಲಭತೆಯು ಪ್ರಸೂತಿ ರಕ್ತಸ್ರಾವವನ್ನು ತಡೆಗಟ್ಟುವಲ್ಲಿ ಪ್ರಮುಖ ಪಾತ್ರವನ್ನು ವಹಿಸುತ್ತದೆ. ಭಾರತ ದೇಶದಲ್ಲಿ ರಕ್ತ ಹೀನತೆಯು ಹೆಚ್ಚಾಗಿದ್ದು…

Read More

ಬೆಂಗಳೂರು : ನರೇಗಾ ಯೋಜನೆಯಿಂದ ವಲಸೆ ತಡೆಗಟ್ಟುವಿಕೆ, ಮಹಿಳಾ ಸಬಲೀಕರಣ, ಕುಟುಂಬ ಕಲ್ಯಾಣ, ಗ್ರಾಮೀಣ ಆರ್ಥಿಕತೆಯ ಸುಧಾರಣೆಗಳು ಸಾಧ್ಯವಾಗುತ್ತಿದೆ. ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಹಲವು ಗುರಿ ಮತ್ತು ಉದ್ದೇಶಗಳನ್ನು ಯಶಸ್ವಿಯಾಗಿ ಸಾಧಿಸುತ್ತಿರುವುದು ಹೆಮ್ಮೆಯ ಸಂಗತಿ ಎಂದು ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ. ನರೇಗಾ ಯೋಜನೆ ಮೂಲಕ ಗ್ರಾಮೀಣ ಭಾಗದ ಮಹಿಳೆಯರು ಪುರುಷರಿಗೆ ಸರಿಸಮಾನವಾದ ದುಡಿಮೆ ಮೂಲಕ ಆರ್ಥಿಕವಾಗಿ ಸ್ವಾವಲಂಬಿಗಳಾಗುತ್ತಿದ್ದಾರೆ. ಮಹಿಳಾ ಸಬಲೀಕರಣದ ಕನಸು ಈ ಮೂಲಕ ಸಾಕಾರಗೊಳ್ಳುತ್ತಿದೆ. ಅಭಿವೃದ್ಧಿಯುಕ್ತ ಗ್ರಾಮ ಭಾರತದ ನಿರ್ಮಾಣದೆಡೆಗಿನ ಹೆಜ್ಜೆಯೂ ದೃಢವಾಗುತ್ತಿದೆ ಎಂದು ಹೇಳಿದ್ದಾರೆ. ನರೇಗಾ ಯೋಜನೆ ಲಾಭವನ್ನು ಪಡೆಯುವುದರಲ್ಲಿ ಮಹಿಳೆಯರು ಮುಂದಿದ್ದು, ಒಟ್ಟು 24.95 ಲಕ್ಷಕ್ಕೂ ಅಧಿಕ ನರೇಗಾ ಉದ್ಯೋಗ ಕಾರ್ಡ್ ಹೊಂದಿದ್ದಾರೆ. ಶೇಕಡಾ 53.51 ರಷ್ಟು ಮಹಿಳೆಯರು ನರೇಗಾ ಯೋಜನೆಯಲ್ಲಿ ತೊಡಗಿಸಿಕೊಂಡಿದ್ದು ಮೇಲುಗೈ ಸಾಧಿಸಿದ್ದಾರೆ. ಮಹಿಳೆಯರಿಗೆ ನರೇಗಾ ಯೋಜನೆಯು ಆರ್ಥಿಕ ಹಾಗೂ ಸ್ವಾವಲಂಬನೆಯ ಸಾಮಾಜಿಕ ಬಲ ನೀಡುತ್ತಿರುವುದಕ್ಕೆ ಇದು ಸಾಕ್ಷಿ ಎಂದರು. ಹೆಣ್ಣುಮಕ್ಕಳಿಗೆ ದುಡಿಯುವ ಅವಕಾಶಗಳನ್ನು ಒದಗಿಸಿದರೆ ಅವರು…

Read More

ಬೆಂಗಳೂರು: ಈವರೆಗೆ ಗ್ರಾಮ ಪಂಚಾಯ್ತಿ ಸೇವೆಗಳಿಗೆ ( Gramapanchayat Service ) ಸಂಬಂಧಿಸಿದಂತೆ ಕಚೇರಿಗೆ ತೆರಳಿ ಅರ್ಜಿಸಲ್ಲಿಸಬೇಕಾಗಿತ್ತು. ಆದ್ರೇ ಈಗ ಗ್ರಾಮ ಪಂಚಾಯ್ತಿ ಸೇವೆಗಳಿಗೆ ಅರ್ಜಿ ಸಲ್ಲಿಕೆ ಮತ್ತಷ್ಟು ಸರಳಗೊಳಿಸಲಾಗಿದೆ. ಅದೇನು ಅಂದ್ರೇ ಜಸ್ಟ್ ಈ ನಂಬರ್ ಗೆ ವಾಟ್ಸಾಪ್ ( WhatsApp ) ಮಾಡಿ ಸಾಕು. ಅದು ಹೇಗೆ ಅಂತ ಮುಂದೆ ಓದಿ. ರಾಜ್ಯ ಸರ್ಕಾರದಿಂದ ಸಾರ್ವಜನಿಕರಿಗೆ ಗ್ರಾಮ ಪಂಚಾಯ್ತಿ ಸೇವೆಗಳು ಕುಳಿತಲ್ಲೇ ಸಿಗುವಂತೆ ಮಾಡುವ ನಿಟ್ಟಿನಲ್ಲಿ ಪಂಚಮಿತ್ರ ವಾಟ್ಸಾಪ್ ಚಾಟ್ ಆರಂಭಿಸಲಾಗಿದೆ. ಇನ್ಮುಂದೆ ವಾಟ್ಸ್ ಆಪ್ ನಲ್ಲಿ ಗ್ರಾಮ ಪಂಚಾಯ್ತಿಯ ಅನೇಕ ಸೇವೆಗಳಿಗೆ ಅರ್ಜಿಯನ್ನು ಸಲ್ಲಿಸಿ, ಪಡೆಯಬಹುದಾಗಿದೆ. ಜನತೆ ತಮ್ಮ ಸಮಸ್ಯೆಗಳಿಗೆ ಪರಿಹಾರ ಪಡೆಯಲು ಅಹವಾಲು ದಾಖಲಿಸುವುದು ಅತಿ ಮುಖ್ಯವಾಗುತ್ತದೆ, ಜನರು ಅಹವಾಲು ಸಲ್ಲಿಸುವುದಕ್ಕಾಗಿ ಸರಳ, ಸುಲಭ ಹಾಗೂ ಸಮರ್ಥ ವ್ಯವಸ್ಥೆಯನ್ನು ಗ್ರಾಮೀಣಾಭಿವೃದ್ಧಿ ಇಲಾಖೆ ಕೈಗೊಂಡಿದೆ. ಕುಂದು–ಕೊರತೆಗಳನ್ನು ಹಾಗೂ ಸಮಸ್ಯೆಗಳನ್ನು ದಾಖಲಿಸಲು ಇದ್ದ ಪ್ರತ್ಯೇಕ ಕರೆ ಸಂಖ್ಯೆಗಳನ್ನು ಒಗ್ಗೂಡಿಸಿ ಪಂಚಮಿತ್ರ ಸಹಾಯವಾಣಿ ಕೇಂದ್ರವನ್ನು ಸ್ಥಾಪಿಸಲಾಗಿದೆ. ಗ್ರಾಮೀಣ ಜನತೆ ತಮ್ಮೆಲ್ಲಾ…

Read More

ಬೆಂಗಳೂರು : ಬೆಂಗಳೂರಿನಲ್ಲಿ ಮತ್ತೊಂದು ಮರ್ಡರ್ ಆಗಿದ್ದು, ಮನೆ ನಿರ್ಮಾಣ ವಿಚಾರಕ್ಕೆ ವ್ಯಕ್ತಿಯೊಬ್ಬರನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ನಡೆದಿದೆ. ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ ವಿಟ್ಟಸಂದ್ರದ ಬಳಿ ವೇಣುಗೋಪಾಲ್ ಎಂಬುವರನ್ನು ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ನಡೆದಿದೆ. ಮನೆ ನಿರ್ಮಾಣ ವಿಚಾರವಾಗಿ ವೇಣುಗೋಪಾಲ್-ರಾಧಾಕೃಷ್ಣ ನಡುವೆ ಗಲಾಟೆ ಆಗಿದ್ದು, ಈ ವೇಳೆ ರಾಧಾಕೃಷ್ಣ ಎಂಬುವರು ವೇಣುಗೋಪಾಲ್ ರನ್ನು ಮಚ್ಚಿನಿಂದ ಹೊಡೆದು ಕೊಲೆ ಮಾಡಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.

Read More

ಬೆಂಗಳೂರು : ಮಂಡಳಿಯು ನೋಂದಾಯಿತ ಕಾರ್ಮಿಕರ ಆಧಾರ್ ಕಾರ್ಡ್ ಸಂಖ್ಯೆ, ಬ್ಯಾಂಕ್ ಖಾತೆ ವಿವರ, ಒಟಿಪಿ ಸೇರಿದಂತೆ ಇತರ ಮಾಹಿತಿಗಳನ್ನು ದೂರವಾಣಿ ಕರೆಗಳ ಮೂಲಕ ಕೇಳುವುದಿಲ್ಲ. ಈ ಕುರಿತು ಎಚ್ಚರವಹಿಸಿ, ಮೋಸದ ಕರೆಗಳಿಗೆ ಬಲಿಯಾಗದಿರಿ. ಕಾರ್ಮಿಕ ಇಲಾಖೆ ಮಂಡಳಿಯುವ ಯಾವುದೇ ನೋಂದಾಯಿತ ಕಾರ್ಮಿಕರ ಈ ಕೆಳಗಿನ ದಾಖಲೆಗಳನ್ನು ಕೇಳುವುದಿಲ್ಲ 1.ಆಧಾರ್ ಕಾರ್ಡ್ ಸಂಖ್ಯೆ 2. ಬ್ಯಾಂಕ್ ಖಾತೆ ವಿವರ 3. ಒಟಿಪಿ ಸೇರಿದಂತೆ ಇತರ ಮಾಹಿತಿಗಳನ್ನು ದೂರವಾಣಿ ಕರೆಗಳ ಮೂಲಕ ಕೇಳುವುದಿಲ್ಲ. ಇಂತಹ ಕರೆಗಳು ಬಂದಲ್ಲಿ ತಕ್ಷಣವೇ ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತರುವಂತೆ ಸೂಚನೆ ನೀಡಲಾಗಿದೆ.

Read More

ಬೆಂಗಳೂರು : ಗ್ಯಾರಂಟಿ ಯೋಜನೆಯಾದ ಯುವನಿಧಿ ಯೋಜನೆಯಡಿಯಲ್ಲಿ 2022-23ನೇ ಸಾಲಿನಲ್ಲಿ ತೇರ್ಗಡೆಯಾದ ಫಲಾನುಭವಿಗಳಿಗೆ ಡಿ.ಬಿ.ಟಿ. ಮೂಲಕ ಹಣ ಸಂದಾಯ ಮಾಡಲಾಗುತ್ತಿದೆ. ಅದೇ ರೀತಿ 2023-24ನೇ ಸಾಲಿನಲ್ಲಿ ತೇರ್ಗಡೆಯಾದ ಪದವಿ, ಸ್ನಾತಕೋತ್ತರ ಹಾಗೂ ಡಿಪ್ಲಮೋ ಅರ್ಹತೆ ಹೊಂದಿದವರು ಯುವನಿಧಿ ಯೋಜನೆಯ ನಿರುದ್ಯೋಗಿ ಭತ್ಯೆ ಪಡೆಯಲು ಅರ್ಜಿ ಸಲ್ಲಿಸಲು ಫೆಬ್ರವರಿ 15 ರ ಇಂದು ಕೊನೆಯ ದಿನವಾಗಿದೆ. ಯುವನಿಧಿ ಯೋಜನೆಗೆ ಅರ್ಜಿ ಸಲ್ಲಿಸಲು ಇದೇ ಫೆ.15 ರವರೆಗೆ ವಿಶೇಷ ನೋಂದಣಿ ಅಭಿಯಾನ ಹಮ್ಮಿಕೊಂಡಿದ್ದು, ಜಿಲ್ಲೆಯಾದ್ಯಂತ ಇರುವ ಪದವಿ ಕಾಲೇಜುಗಳು ಹಾಗೂ ಡಿಪ್ಲಮೋ ಕಾಲೇಜುಗಳು ಮತ್ತು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ವಿಶೇಷ ನೋಂದಣಿ ಕೌಂಟರ್ ತೆರೆಯಲಾಗಿದೆ. ಅಲ್ಲದೇ ಗ್ರಾಮ ಒನ್, ಕರ್ನಾಟಕ ಒನ್, ಬಾಪೂಜಿ ಕೇಂದ್ರಗಳಲ್ಲೂ ನಿರಂತರವಾಗಿ ಯುವನಿಧಿ ನೋಂದಣಿ ಮಾಡಿಕೊಳ್ಳಲಾಗುತ್ತಿದೆ. ನಿರುದ್ಯೋಗಿ ಯುವಕ-ಯುವತಿಯರು ಈ ವಿಶೇಷ ನೋಂದಣಿ ಅಭಿಯಾನದ ಸದುಪಯೋಗವನ್ನು ಪಡೆದುಕೊಂಡು, ಯುವನಿಧಿ ನೋಂದಣಿ ಮಾಡಿಸಿಕೊಳ್ಳಲು ಈ ಮೂಲಕ ಕೋರಲಾಗಿದೆ.

Read More

ಬೆಂಗಳೂರು : ಕೆಎಎಸ್ 384 ಹುದ್ದೆಗಳ ನೇಮಕಾತಿ ಮುಖ್ಯ ಪರೀಕ್ಷೆಗೆ ಅರ್ಹತೆ ಗಿಟ್ಟಿಸಲು ಪೂರ್ವಭಾವಿ ಪರೀಕ್ಷೆಯಲ್ಲಿನ ಕಟ್ ಆಫ್ ಅಂಕಗಳ ಬಿಡುಗಡೆಗೆ ಮೊದಲೇ ಮುಖ್ಯ ಪರೀಕ್ಷೆಗೆ ಅರ್ಹ ಅಭ್ಯರ್ಥಿಗಳಿಂದ ಕೆಪಿಎಸ್ ಸಿ ಅರ್ಜಿ ಆಹ್ವಾನಿಸಿದೆ. ಕರ್ನಾಟಕ ಗೆಜೆಟೆಡ್ ಪ್ರೊಬೇಷನರ್ಸ್ (ಸ್ಪರ್ಧಾತ್ಮಕ ಪರೀಕ್ಷೆ ಮೂಲಕ ನೇಮಕಾತಿ) ನಿಯಮಗಳು, 1997 ಮತ್ತು ಕಾಲಾಕಾಲಕ್ಕೆ ತಿದ್ದುಪಡಿಯಾದ ನಿಯಮಗಳನ್ವಯ ಅಧಿಸೂಚನೆ ಸಂಖ್ಯೆ:ಪಿಎಸ್‌ಸಿ 509 ಇ(1)/2023-24, ದಿನಾಂಕ:26-02-2024ರಂದು ಅಧಿಸೂಚಿಸಲಾದ 2023-24ನೇ ಸಾಲಿನ ಗೆಜೆಟೆಡ್ ಪ್ರೊಬೇಷನರ್ ಗ್ರೂಪ್ – ಎ ಮತ್ತು ಗ್ರೂಪ್ – ಬಿ ವೃಂದದ 384 ಹುದ್ದೆಗಳಿಗೆ ದಿನಾಂಕ:29-12-2024ರಂದು ಪೂರ್ವಭಾವಿ ಮರುಪರೀಕ್ಷೆಯನ್ನು ನಡೆಸಲಾಗಿರುತ್ತದೆ, ಆಯೋಗವು ಸದರಿ ಪೂರ್ವಭಾವಿ ಪರೀಕ್ಷೆಯಿಂದ ಮುಖ್ಯ ಪರೀಕ್ಷೆಗೆ 1:15 ಅನುಪಾತದಲ್ಲಿ ಅರ್ಹರಾದ ಅಭ್ಯರ್ಥಿಗಳ ಅರ್ಹತಾ ಪಟ್ಟಿಯನ್ನು ದಿನಾಂಕ:10-02-2025ರಂದು ಪ್ರಕಟಿಸಲಾಗಿರುತ್ತದೆ, ಪ್ರಸ್ತುತ ಮುಖ್ಯ ಪರೀಕ್ಷೆಗೆ ಆನ್‌ಲೈನ್ ಮೂಲಕ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. 1. ಅರ್ಜಿ ಸಲ್ಲಿಸಲು ಕಾಲಮಿತಿ: 2. ಸಹಾಯವಾಣಿ ಸಂಖ್ಯೆ: ಅರ್ಜಿ ಸಲಿಸುವುದಕ್ಕೆ ಸಂಬಂಧಿಸಿದಂತೆ ತೊಂದರೆಗಳು ಎದುರಾದಲ್ಲಿ ಅಭ್ಯರ್ಥಿಗಳು ಈ HELP…

Read More