Subscribe to Updates
Get the latest creative news from FooBar about art, design and business.
Author: kannadanewsnow57
ಕೇಂದ್ರ ಸರಕಾರ ದೇಶದಲ್ಲಿ ಹಲವು ಯೋಜನೆಗಳನ್ನು ಜಾರಿಗೊಳಿಸುತ್ತಿದೆ. ಇದು ಹಿಂದಿನಿಂದಲೂ ಮಹಿಳಾ ಸಬಲೀಕರಣಕ್ಕಾಗಿ ಪ್ರಯತ್ನಗಳನ್ನು ಮಾಡುತ್ತಿದೆ. ಇದಲ್ಲದೇ ಎಲ್ಲ ಕ್ಷೇತ್ರಗಳಲ್ಲಿಯೂ ಮಹಿಳೆಯರನ್ನು ಪ್ರೋತ್ಸಾಹಿಸಲು ನಾನಾ ಯೋಜನೆಗಳನ್ನು ರೂಪಿಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರವು ಮಹಿಳೆಯರನ್ನು ಆರ್ಥಿಕವಾಗಿ ಮತ್ತು ಪರಿಣಾಮಕಾರಿಯಾಗಿ ಸಬಲೀಕರಣಗೊಳಿಸಲು “ಲಖಪತಿ ದೀದಿ ಯೋಜನೆ”ಯನ್ನು ಜಾರಿಗೆ ತರುತ್ತಿದೆ. ಮಹಿಳೆಯರು ವ್ಯವಹಾರಗಳನ್ನು ಹೇಗೆ ಸ್ಥಾಪಿಸುತ್ತಾರೆ? ಈ ಯೋಜನೆಯ ಮೂಲಕ ಸರ್ಕಾರ ಮಹಿಳೆಯರಿಗೆ ರೂ.5 ಲಕ್ಷದವರೆಗೆ ಬಡ್ಡಿ ರಹಿತ ಸಾಲ ನೀಡುತ್ತದೆ. ಆದರೆ ಮಹಿಳೆಯರು ಈ ಯೋಜನೆಯ ಲಾಭವನ್ನು ಹೇಗೆ ಪಡೆಯಬಹುದು? ಅವರ ವ್ಯಾಪಾರವನ್ನು ಹೇಗೆ ಹೊಂದಿಸುವುದು ಎಂದು ತಿಳಿಯಿರಿ. ಮಹಿಳೆಯರನ್ನು ಆರ್ಥಿಕವಾಗಿ ಸಬಲೀಕರಣಗೊಳಿಸುವುದು ಮತ್ತು ಉದ್ಯಮಗಳನ್ನು ಸ್ಥಾಪಿಸಲು ಸಹಾಯ ಮಾಡುವುದು ಯೋಜನೆಯ ಉದ್ದೇಶವಾಗಿದೆ. ಈ ಯೋಜನೆಯ ಲಾಭ ಪಡೆಯಲು ಮಹಿಳೆಯರು ಸ್ವಸಹಾಯ ಸಂಘಗಳಿಗೆ ಸೇರಬೇಕು. ಇವುಗಳನ್ನು ಹೆಚ್ಚಾಗಿ ಗ್ರಾಮೀಣ ಪ್ರದೇಶಗಳಲ್ಲಿ ವಾಸಿಸುವ ಮಹಿಳೆಯರಿಗಾಗಿ ವಿನ್ಯಾಸಗೊಳಿಸಲಾಗಿದೆ. ಈ ಗುಂಪಿನಲ್ಲಿರುವ ಮಹಿಳೆ ತನ್ನ ಸ್ವಂತ ಉದ್ಯಮವನ್ನು ಪ್ರಾರಂಭಿಸಲು ಬಯಸಿದರೆ, ಅವಳು ತನ್ನ ವ್ಯವಹಾರ ಯೋಜನೆಯೊಂದಿಗೆ ಸ್ವ-ಸಹಾಯ…
ಬೆಂಗಳೂರು : ರಾಜ್ಯದ ಎಲ್ಲಾ ಸರ್ಕಾರಿ ಪದವಿ ಕಾಲೇಜುಗಳಲ್ಲಿ : “ಜಾನಪದ ಉತ್ಸವ -2025” ವನ್ನು ಆಚರಿಸುವ ಬಗ್ಗೆ ಕಾಲೇಜು ಶಿಕ್ಷಣ ಇಲಾಖೆ ಮಹತ್ವದ ಆದೇಶ ಹೊರಡಿಸಿದೆ. ಇಂದಿನ ಪಾಶ್ಚಾತ್ಯ ಶೈಲಿಯ ಆಧುನಿಕ ಜೀವನದಲ್ಲಿ ದೇಸೀ ಸಂಸ್ಕೃತಿಯು ತನ್ನ ಹಿಂದಿನ ವೈಭವವನ್ನು ಸ್ವಲ್ಪಮಟ್ಟಿಗೆ ಕಳೆದುಕೊಂಡಿವೆ ಎಂದೆನಿಸಿದರೂ ತನ್ನ ಮೂಲನೆಲೆಯಾದ ಹಳ್ಳಿಗಳಲ್ಲಿ ಇನ್ನೂ ತನ್ನ ನೆಲೆಯನ್ನು ಭದ್ರವಾಗಿ ಉಳಿಸಿಕೊಂಡಿರುವುದು ಸಮಾಧಾನ ತರುವ ಸಂಗತಿಯಾಗಿದೆ. ಜನಪದ ಸಾಹಿತ್ಯ, ಪರಿಸರ, ಭಾಷೆ, ಸಂಸ್ಕೃತಿ, ಕಲೆ, ಸಾಹಿತ್ಯ, ಪಾರಂಪರಿಕ ಕರಕುಶಲ ವಸ್ತುಗಳ ತಯಾರಿಕೆ, ಜನಾಂಗೀಯ ಪಾಕಪದ್ಧತಿ (ದೇಸೀ ಆಹಾರ), ದೇಸೀ ಉಡುಗೆ-ತೊಡುಗೆ, ದೇಸೀ ನೃತ್ಯ-ಸಂಗೀತ, ಆಟ, ಈ ಎಲ್ಲವನ್ನು ಒಳಗೊಂಡಿರುವುದೇ ಜಾನಪದವೆಂದು ಹೇಳಬಹುದು. ಈ ದೇಸೀ ಸಂಸ್ಕೃತಿಯನ್ನು ಸಂರಕ್ಷಿಸುವ ಹಾಗೂ ಮನುಷ್ಯನ ಬದುಕಿನೊಂದಿಗೆ ಅವಿನಾಭಾವ ಸಂಬಂಧವನ್ನು ಹೊಂದಿ ತಲೆ-ತಲೆಮಾರುಗಳಿಂದ ಬಂದಿರುವ ಆಯಾ ಪ್ರಾದೇಶಿಕ/ಗ್ರಾಮೀಣ ವ್ಯಾಪ್ತಿಯಲ್ಲಿ ಆಚರಣೆಯಲ್ಲಿರುವ ಈ ಮೌಖಿಕ ಪರಂಪರೆಯ ಜಾನಪದ ಸಂಸ್ಕೃತಿ / ಸೊಗಡುಗಳ ಬಗ್ಗೆ, ವಿದ್ಯಾರ್ಥಿಗಳಲ್ಲಿ ಅರಿವನ್ನು ಮೂಡಿಸುವ ಹಾಗೂ ತನ್ನ ಸುತ್ತಲಿನ ಪರಿಸರ…
BIG NEWS : `ರಾಜ್ಯ ಸರ್ಕಾರಿ ನೌಕರರೇ’ ಗಮನಿಸಿ : `ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆ’ ನೋಂದಣಿ ಕುರಿತು ಇಲ್ಲಿದೆ ಮಾಹಿತಿ
ಬೆಂಗಳೂರು : ಕರ್ನಾಟಕ ನಾಗರಿಕ ಸೇವಾ (ಕಂಪ್ಯೂಟರ್ ಸಾಕ್ಷರತಾ) ಪರೀಕ್ಷೆ ನಿಯಮಗಳು 2012ರ ನಿಯಮ 3(ಬಿ)ಕ್ಕೆ ಮಾಡಿರುವ ತಿದ್ದುಪಡಿಯನ್ವಯ ದಿನಾಂಕವನ್ನು “31-12-2025 ರವರೆಗೆ” ರಾಜ್ಯದ ಸರ್ಕಾರಿ ಅಧಿಕಾರಿಗಳು ಮತ್ತು ನೌಕರರಿಗೆ ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯನ್ನು ತೆಗೆದುಕೊಳ್ಳಲು ಅವಕಾಶ ನೀಡಲಾಗಿರುತ್ತದೆ. ಸುತ್ತೋಲೆ ಸಂಖ್ಯೆ: ಸಿಆಸುಇ 29 ಸೇವೆನೆ 2020, ದಿನಾಂಕ: 03-04-2023ರಲ್ಲಿ ದಿನಾಂಕ: 31-12-2023ರೊಳಗೆ ಅಥವಾ ತಮ್ಮ ಪರಿವೀಕ್ಷಣಾ ಅವಧಿಯೊಳಗೆ ಯಾವುದು ನಂತರವೋ ಅದರೊಳಗಾಗಿ ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯಲ್ಲಿ ಉತ್ತೀರ್ಣರಾಗುವುದು ಕಡ್ಡಾಯವಾಗಿರುತ್ತದೆ. ಸದರಿ ಅವಧಿಯೊಳಗಾಗಿ ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯಲ್ಲಿ ಉತ್ತೀರ್ಣರಾಗದ ನೌಕರರು ಪರಿವೀಕ್ಷಣಾ ಅವಧಿ, ಮುಂಬಡ್ತಿ ಹಾಗೂ ವಾರ್ಷಿಕ ವೇತನ ಬಡ್ತಿ ಇತ್ಯಾದಿಗಳನ್ನು ಪಡೆಯಲು ಅನರ್ಹರಾಗಿರುತ್ತಾರೆ. ಆದುದರಿಂದ, ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯಲ್ಲಿ ಉತ್ತೀರ್ಣರಾಗದೆ ಇರುವ ಸರ್ಕಾರಿ ನೌಕರರು ದಿನಾಂಕ: 31-12-2025 ರ ಒಳಗೆ ಪರೀಕ್ಷೆ ತೆಗೆದುಕೊಂಡು ಉತ್ತೀರ್ಣರಾಗಲು ಸೂಚಿಸಲಾಗಿರುತ್ತದೆ. ಆದುದರಿಂದ, ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯನ್ನು ತೆಗೆದುಕೊಳ್ಳುವ / https://clt.karnataka.gov.in ಹಾಗೂ ನಿಗಮದ ವೆಬ್ ಸೈಟ್ / https://nkclt.clt.karnataka.gov.in ವಿವರಗಳನ್ನು ನೋಂದಾಯಿಸಿ ಪರೀಕ್ಷೆಯನ್ನು ತೆಗೆದುಕೊಳ್ಳಬಹುದು.…
ಬೆಂಗಳೂರು : ರಾಜ್ಯ ಸರ್ಕಾರದಿಂದ ನೇರವಾಗಿ/ ಪರೋಕ್ಷವಾಗಿ ನೇಮಕಗೊಂಡಿರುವ ವಿವಿದ ಉದ್ಯೋಗಿಗಳಿಗೆ ಸಾಮಾಜಿಕ ಭದ್ರತಾ ವ್ಯವಸ್ತೆಯನ್ನು ಜಾರಿಗೆ ತರುವ ಅಥವಾ ವಿಸ್ತರಿಸುವ ಬಗ್ಗೆ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ, ದಿನಾಂಕ:30.01.2025 ರಂದು ನಡೆದ ಸಚಿವ ಸಂಪುಟದ ಸಭೆಯಲ್ಲಿ ತಿರ್ಮಾನಿಸಿದಂತೆ, ಅಧಿಕಾರಿಗಳು/ನೌಕರರ ಮತ್ತು ಅವಲಂಬಿತ ಕುಟುಂಬ ಸದಸ್ಯರ ಹಿತಾಸಕ್ತಿಗಳನ್ನು ರಕ್ಷಿಸುವ ಸಲುವಾಗಿ, ಈ ಕೆಳಗಿನಂತೆ ಆದೇಶಿಸಲಾಗಿದೆ: a) ವಿವಿಧ ಬ್ಯಾಂಕುಗಳು ಒದಗಿಸುವ “ಸಂಬಳ ಪ್ಯಾಕೇಜ್‌ಗಳ* ಅಡಿಯಲ್ಲಿ ಖಾತೆಗಳನ್ನು ತೆರೆಯುವುದು/ಆಯ್ಕೆ ಮಾಡಿಕೊಳ್ಳುವುದನ್ನು ಎಲ್ಲಾ ಅಧಿಕಾರಿಗಳು / ನೌಕರರಿಗೆ (ಸರ್ಕಾರಿ /ಸರ್ಕಾರಿ ಸಂಸ್ಥೆಗಳು, ಇತ್ಯಾದಿ) ಕಡ್ಡಾಯಗೊಳಿಸುವುದು. b) ಬ್ಯಾಂಕ್‌ಗಳು/ಅಂಚೆ ಕಚೇರಿಗಳು ನೀಡುವ PMJJBY ಮತ್ತು PMSBY ಯೋಜನೆಗಳ ಅಡಿಯಲ್ಲಿ ಸ್ವಯಂಪ್ರೇರಿತ ಆಧಾರದ ಮೇಲೆ ವಿಮಾ ರಕ್ಷಣೆಯನ್ನು ಪಡೆಯಲು ಅಧಿಕಾರಿಗಳು / ನೌಕರರನ್ನು ಪ್ರೋತ್ಸಾಹಿಸುವುದು. c) ಬ್ಯಾಂಕ್‌ಗಳು ನೀಡುವ ವಿವಿಧ ಯೋಜನೆಗಳ ಅಡಿಯಲ್ಲಿ ಸ್ವಯಂಪ್ರೇರಿತ ಆಧಾರದ ಮೇಲೆ ವೈಯಕ್ತಿಕ ಅಪಘಾತ ವಿಮಾ ರಕ್ಷಣೆಯನ್ನು ಪಡೆಯಲು ಅಧಿಕಾರಿಗಳು / ನೌಕರರನ್ನು ಪ್ರೋತ್ಸಾಹಿಸುವುದು. ಈ…
ಕಂದಾಯ ಆಯುಕ್ತರು, ಅಟಲ್ ಜೀ ಜನಸ್ನೇಹಿ ನಿರ್ದೇಶನಾಲಯ, ಬೆಂಗಳೂರು ರವರು ಕರ್ನಾಟಕ ರಾಜ್ಯದ ವಿದ್ಯಾರ್ಥಿ/ವಿದ್ಯಾರ್ಥಿನಿಯರಿಗೆ ವಿವಿಧ ಪ್ರವೇಶ ಪರೀಕ್ಷೆಗಳಿಗೆ ಜಾತಿ ಮತ್ತು ಆದಾಯ ಪ್ರಮಾಣ ಪತ್ರವನ್ನು ಸಕಾಲದಲ್ಲಿ ಅರ್ಜಿ ಸಲ್ಲಿಸಲು ಅಡಚಣೆ ಉಂಟಾಗುತ್ತಿರುವ ಹಿನ್ನಲೆಯಲ್ಲಿ ಪ್ರಸ್ತುತ ಗ್ರಾಮ ಆಡಳಿತ ಅಧಿಕಾರಿಗಳ ಲಾಗಿನ್ ನಲ್ಲಿ ಕ್ಷೇತ್ರ ಪರಿಶೀಲನೆಗೆ ಬಾಕಿ ಇರುವ ಜಾತಿ ಮತು ಆದಾಯ ಪ್ರಮಾಣ ಪತ್ರಗಳ ಅರ್ಜಿಗಳನ್ನು ಹಾಗೂ ಮುಂದೆ ಸ್ವೀಕೃತವಾಗುವ ಹೊಸ ಅರ್ಜಿಗಳನ್ನು ಒಳಗೊಂಡಂತೆ ಎಜೆಎಸ್‍ಕೆ ದತ್ತಾಂಶ ಮಟ್ಟದಲ್ಲಿ ಗ್ರಾಮ ಆಡಳಿತ ಅಧಿಕಾರಿಗಳ ಲಾಗಿನ್ನಿಂದ ರಾಜಸ್ವ ನಿರೀಕ್ಷಕರವರ ಲಾಗಿನ್ ಗೆ ವರ್ಗಾಯಿಸಲಾಗಿದೆ. ಈ ಹಿನ್ನೆಲೆಯಲ್ಲಿ, ರಾಜಸ್ವ ನಿರೀಕ್ಷಕರವರ ಲಾಗಿನ್ನಲ್ಲಿ ಸ್ವೀಕೃತವಾಗಿರುವ ಜಾತಿ ಮತ್ತು ಆದಾಯ ಪ್ರಮಾಣ ಪತ್ರಗಳ “FIELD VERIFICATION IS PENDING” ಎಂದು ಷರಾ ನಮೂದಾಗಿದ್ದಲ್ಲಿ ರಾಜಸ್ವ ನಿರೀಕ್ಷಕರು ಕ್ಷೇತ್ರ ಪರಿಶೀಲನೆ ಮಾಡಬೇಕಾಗಿರುತ್ತದೆ. ಎಜೆಎಸ್‍ಕೆ ದತ್ತಾಂಶದಲ್ಲಿನ ಸದರಿ ಬದಲಾವಣೆಗಳನ್ನು ಸದ್ಭಳಕೆ ಮಾಡಿಕೊಂಡು, ಜಾತಿ ಮತ್ತು ಆದಾಯ ಪ್ರಮಾಣ ಪತ್ರಗಳನ್ನು ಸಕಾಲದಲ್ಲಿ ವಿತರಿಸಿ ಸಾರ್ವಜನಿಕರ ಹಿತದೃಷ್ಟಿಯನ್ನು ಕಾಪಾಡಲು ತಿಳಿಸಿದ್ದಾರೆ. ಅದರಂತೆ…
ರೈತರನ್ನು ಬೆಂಬಲಿಸಲು ಕೇಂದ್ರ ಸರ್ಕಾರ ಮತ್ತೊಂದು ಪ್ರಮುಖ ನಿರ್ಧಾರ ತೆಗೆದುಕೊಂಡಿದೆ. ಈಗಾಗಲೇ ಹಲವಾರು ಯೋಜನೆಗಳನ್ನು ಪರಿಚಯಿಸಿರುವ ಕೇಂದ್ರವು ಇತ್ತೀಚೆಗೆ ರೈತರಿಗೆ ಪಿಂಚಣಿ ನೀಡುವ ಕಾರ್ಯಕ್ರಮವನ್ನು ಪ್ರಾರಂಭಿಸಿದೆ. ಇದರಿಂದ ಹಲವು ರೈತರಿಗೆ ಅನುಕೂಲವಾಗಲಿದೆ. ವಿಳಂಬ ಏಕೆ? ಆ ಯೋಜನೆ ಏನು? ರೈತರಿಗೆ ಪಿಂಚಣಿ ಹೇಗೆ ನೀಡಲಾಗುತ್ತದೆ? ಈ ಯೋಜನೆಯ ಸಂಪೂರ್ಣ ಪ್ರಯೋಜನಗಳನ್ನು ತಿಳಿದುಕೊಳ್ಳೋಣ. ಕೇಂದ್ರ ಸರ್ಕಾರವು ಈಗಾಗಲೇ ರೈತರಿಗಾಗಿ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆ ಯೋಜನೆಯನ್ನು ಜಾರಿಗೆ ತರುತ್ತಿರುವುದು ತಿಳಿದಿದೆ. ಪ್ರಕೃತಿ ವಿಕೋಪಗಳ ಸಂದರ್ಭದಲ್ಲಿ ರೈತರನ್ನು ಬೆಂಬಲಿಸಲು ಹಲವಾರು ಯೋಜನೆಗಳನ್ನು ಜಾರಿಗೆ ತರಲಾಗುತ್ತಿದೆ. ಕೇಂದ್ರವು ಇತ್ತೀಚೆಗೆ ಮತ್ತೊಂದು ಯೋಜನೆಯನ್ನು ಪ್ರಾರಂಭಿಸಿದೆ. ಈ ಯೋಜನೆಯ ಮೂಲಕ ರೈತರಿಗೆ ಹೆಚ್ಚಿನ ಪ್ರಯೋಜನಗಳನ್ನು ಒದಗಿಸುವ ಉದ್ದೇಶದಿಂದ ಕೇಂದ್ರವು ಈ ನಿರ್ಧಾರವನ್ನು ತೆಗೆದುಕೊಂಡಿತು. ಸಣ್ಣ ಮತ್ತು ಅತಿ ಸಣ್ಣ ರೈತರು ಎದುರಿಸುತ್ತಿರುವ ತೊಂದರೆಗಳು ಇಷ್ಟೇ ಅಲ್ಲ. ನಿರಂತರವಾಗಿ ಕೃಷಿ ಕೆಲಸದಲ್ಲಿ ತೊಡಗಿಸಿಕೊಳ್ಳುವ ಈ ಜನರು ವಯಸ್ಸಾದ ನಂತರ ಏನೂ ಮಾಡಲು ಸಾಧ್ಯವಾಗದ ಪರಿಸ್ಥಿತಿಯಲ್ಲಿ ತಮ್ಮ ಸಮಯವನ್ನು ಕಳೆಯಬೇಕಾಗಿದೆ.…
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ, ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ ಸಂಸ್ಥೆಯಿಂದ ಕೊಪ್ಪಳ ಜಿಲ್ಲೆಯ ಗ್ರಾಮೀಣ ಭಾಗದ ಆಸಕ್ತರಿಗೆ ಸ್ವಯಂ ಉದ್ಯೋಗ ತರಬೇತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. 10 ದಿನಗಳ ಕುರಿ-ಮೇಕೆ ಸಾಕಾಣಿಕೆ ತರಬೇತಿ, 30 ದಿನಗಳ ಮೊಬೈಲ್ ರಿಪೇರಿ ಮತ್ತು ಸರ್ವಿಸ್ ತರಬೇತಿ ಹಾಗೂ ಮಹಿಳಾ ಹೊಲೆಗೆ ತರಬೇತಿಗಾಗಿ ಫೆಬ್ರವರಿ 22 ರಂದು ಸಂದರ್ಶನ ನಡೆಯಲಿದ್ದು, ಫೆ. 24 ರಿಂದ ತರಬೇತಿಗಳು ಪ್ರಾರಂಭವಾಗಲಿವೆ. ಅರ್ಜಿ ಸಲ್ಲಿಸಲು ಅರ್ಜಿದಾರರು 18 ರಿಂದ 45 ವರ್ಷ ಒಳಗಿನವರಾಗಿರಬೇಕು. ಕನಿಷ್ಠ ಎಂಟನೇ ತರಗತಿ ಪಾಸ್ ಆಗಿರಬೇಕು. ಕೊಪ್ಪಳ ಜಿಲ್ಲೆಯ ಗ್ರಾಮೀಣ ಭಾಗದವರಾಗಿರಬೇಕು. ಸ್ವಯಂ ಉದ್ಯೋಗದಲ್ಲಿ ಆಸಕ್ತಿ ಹೊಂದಿರಬೇಕು. ಅರ್ಜಿ ಸಲ್ಲಿಸಲಿಚ್ಛೀಸುವ ಆಸಕ್ತರು ತಮ್ಮ ಆಧಾರ ಕಾರ್ಡ ಜೆರಾಕ್ಸ್ ಪ್ರತಿ, ರೇಶನ್ ಕಾರ್ಡ ಜೆರಾಕ್ಸ್ ಪ್ರತಿ, ಪಾಸ್‌ಪೋರ್ಟ್ ಸೈಜ್ ಮೂರು ಫೋಟೋ, ಮಾರ್ಕ್ಸಕಾರ್ಡ ಜೆರಾಕ್ಸ್ ಪ್ರತಿಯೊಂದಿಗೆ ಅರ್ಜಿಯನ್ನು ನಿರ್ದೇಶಕರು, ಸ್ಟೇಟ ಬ್ಯಾಂಕ್ ಆಫ್ ಇಂಡಿಯಾ, ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ ಸಂಸ್ಥೆ, ಜಿಲ್ಲಾ ಕೈಗಾರಿಕಾ ಕೇಂದ್ರ ಆವರಣ,…
ಪ್ರವಾಸೋದ್ಯಮ ಇಲಾಖೆಯ ವತಿಯಿಂದ 2024-25 ನೇ ಸಾಲಿನಲ್ಲಿ ಎಸ್‍ಸಿಎಸ್‍ಪಿ/ ಟಿಎಸ್‍ಪಿ ಯೋಜನೆ ಅಡಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸಣ್ಣ ಉದ್ಯಮಿದಾರರನ್ನು ಉತ್ತೇಜಿಸಲು ಎಂಟರ್‍ಪ್ರನರ್‍ಶಿಪ್ ಪ್ರೋಗ್ರಾಮ್ ಬಗ್ಗೆ ಒಂದು ತಿಂಗಳ ಕೌಶಲ್ಯಾಭಿವೃದ್ಧಿ ತರಬೇತಿ ನೀಡಲು ಹಾಗೂ ತರಬೇತಿ ಪಡೆದ ಅಭ್ಯರ್ಥಿಗಳಿಗೆ ಪ್ರವಾಸಿ ತಾಣದಲ್ಲಿ ಮೊಬೈಲ್ ಕ್ಯಾಂಟೀನ್ ವಾಹನವನ್ನು ಖರೀದಿಸಲು ಸಹಾಯಧನ ನೀಡಲು ಉದ್ದೇಶಿಸಲಾಗಿದೆ. ಈ ತರಬೇತಿ ಹಾಗೂ ಸಹಾಯಧನಕ್ಕೆ ಕೊಡಗು ಜಿಲ್ಲೆಯ ಪರಿಶಿಷ್ಟ ಜಾತಿಗೆ ಸೇರಿದ ಅಭ್ಯರ್ಥಿಗಳಿಗೆ ಹಾಗೂ ಪರಿಶಿಷ್ಟ ಪಂಗಡಕ್ಕೆ ಸೇರಿದ ಅಭ್ಯರ್ಥಿಗಳಿಗೆ ಪ್ರಸ್ತುತ ಸಾಲಿನಲ್ಲಿ ನಿಗಧಿಪಡಿಸಿದೆ. ತರಬೇತಿಯನ್ನು ವಸತಿ ಸಹಿತ ರಾಜ್ಯ ಹಾಗೂ ಕೇಂದ್ರ ಸರ್ಕಾರದ ಅತಿಥ್ಯ ಕ್ಷೇತ್ರದ ಸಂಸ್ಥೆಗಳ ಮೂಲಕ ಕಾರ್ಯಕ್ರಮ ಜಾರಿಗೊಳಿಸಲು ಸಹ ಉದ್ದೇಶಿಸಲಾಗಿದೆ. ತರಬೇತಿ ಕಾರ್ಯಕ್ರಮಗಳ ವಿವರ/ ಅಭ್ಯರ್ಥಿಗಳ ವಿದ್ಯಾರ್ಹತೆಯ ವಿವರ ಇಂತಿದೆ. ಎಂಟರ್‍ಪ್ರೆನರ್‍ಶಿಪ್ ಪ್ರೋಗ್ರಾಮ್(ಇಪಿ)(ಎಸ್‍ಸಿ/ಎಸ್‍ಟಿ ಅಭ್ಯರ್ಥಿ) 10ನೇ ತರಗತಿ ಪಾಸಾಗಿರಬೇಕು. 1 ತಿಂಗಳ ತರಬೇತಿ, 20 ರಿಂದ 45 ವರ್ಷದೊಳಗಿರಬೇಕು. 2 ಪರಿಶಿಷ್ಟ ಜಾತಿ ಅಭ್ಯರ್ಥಿಗಳು, 01 ಪರಿಶಿಷ್ಟ ಪಂಗಡದ ಅಭ್ಯರ್ಥಿಯಾಗಿರಬೇಕು.…
ಬೆಂಗಳೂರು : ಮೆಟ್ರಿಕ್-ನಂತರದ ಕೋರ್ಸುಗಳಲ್ಲಿ ಒದುತ್ತಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು, 2024-25ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ ನೀಡಲಾಗುತ್ತಿರುವ “ಶುಲ್ಕ ಮರುಪಾವತಿ” ಕಾರ್ಯಕ್ರಮದ ಸೌಲಭ್ಯಕ್ಕಾಗಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, 15.02.2025ಕ್ಕೆ ಅರ್ಜಿ ಸಲ್ಲಿಸುವ ಅಂತಿಮ ದಿನಾಂಕವನ್ನು ನಿಗದಿಪಡಿಸಲಾಗಿದ್ದು, ವಿದ್ಯಾರ್ಥಿಗಳು ಮತ್ತು ಶೈಕ್ಷಣಿಕ ಸಂಸ್ಥೆಗಳಿಂದ ಅರ್ಜಿ ಸಲ್ಲಿಕೆಯ ದಿನಾಂಕವನ್ನು ವಿಸ್ತರಿಸಲು ಮನವಿ ಮಾಡಿಕೊಂಡಿರುತ್ತಾರೆ ಹಾಗೂ ಮಾನ್ಯ ಹೈ ಕೋರ್ಟ್ ಮದ್ಯಂತರ ಆದೇಶದಂತೆ ವೃತ್ತಿಪರ ಪದವಿ, ಸ್ನಾತಕೋತ್ತರ ಪದವಿ, ವೃತ್ತಿಪರ ಸ್ನಾತಕೋತ್ತರ ಪದವಿ ಮತ್ತು ನರ್ಸಿಂಗ್ ಕೋರ್ಸುಗಳಿಗೆ ಮಾತ್ರ ಶುಲ್ಕ ಮರುಪಾವತಿ” ಕಾರ್ಯಕ್ರಮಕ್ಕೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವನ್ನು 10.03.2025ರ ವರೆಗೆ ವಿಸ್ತರಿಸಲಾಗಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 10.03.2025 ವಿಳಾಸ: https://ssp.postmatric.karnataka.gov.in/ ಕಾರ್ಯಕ್ರಮಗಳ ವಿವರ, ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳು ಹಾಗೂ ವಿದ್ಯಾರ್ಥಿವೇತನಕ್ಕೆ 2 3 ಭೇಟಿ ನೀಡಬೇಕಾದ ವೆಬ್ ಸೈಟ್ ವಿಳಾಸ: https://bcwd.karnataka.gov.in ಇಲಾಖಾ ಸಹಾಯವಾಣಿ ದೂರವಾಣಿ ಸಂಖ್ಯೆ: 8050770005 ಇಮೇಲ್: bcwdhelpline@gmail.com ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶದ ಸಹಾಯವಾಣಿ ಇಮೇಲ್: postmatrichelp@karnataka.gov.in…
ಬೆಂಗಳೂರು : ಕರ್ನಾಟಕ ಸರ್ಕಾರ ಘೋಷಿಸಿರುವ ಹೊಸ ಕೈಗಾರಿಕಾ ನೀತಿಯಿಂದಾಗಿ ಮುಂದಿನ ಐದು ವರ್ಷಗಳಲ್ಲಿ 20 ಲಕ್ಷ ಕ್ಕೂ ಅಧಿಕ ಉದ್ಯೋಗಗಳನ್ನು ಸೃಷ್ಟಿಸುವ ಗುರಿಯನ್ನು ಹೊಂದಲಾಗಿದ್ದು, ₹7.5 ಲಕ್ಷ ಕೋಟಿ ಹೂಡಿಕೆಗಳನ್ನು ಆಕರ್ಷಿಸುತ್ತಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶದಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರದ 30ಕ್ಕೂ ಹೆಚ್ಚು ಇಲಾಖೆಗಳ ಮೂಲಕ 150ಕ್ಕೂ ಹೆಚ್ಚಿನ ವ್ಯಾಪಾರ ವೇದಿಕೆ ಸೃಷ್ಟಿಗೊಳ್ಳಲಿದ್ದು ಉದ್ದಿಮೆಗಳನ್ನು ಪ್ರೋತ್ಸಾಹಿಸುವ ಸಲುವಾಗಿ ಏಕ ಗವಾಕ್ಷಿ ಸೇವೆಯನ್ನು ಪರಿಚಯಿಸಲಾಗುವುದು. ನವೋದ್ಯಮಗಳ ಸ್ಥಾಪನೆಯಲ್ಲಿ ಕರ್ನಾಟಕ ಇಡೀ ರಾಷ್ಟ್ರದಲ್ಲಿಯೇ ಅತ್ಯುನ್ನತ ಸ್ಥಾನದಲ್ಲಿದ್ದು, ಜೈವಿಕ ತಂತ್ತಜ್ಞಾನ, ನಾವೀನ್ಯತೆ, ಎಂಜನಿಯರಿಂಗ್, ಗೆಫೆಕ್ಸ್, ಹೆಲ್ತ್‌ಕೇರ್ ಮುಂತಾದ ಕ್ಷೇತ್ರಗಳಲ್ಲಿ ಕರ್ನಾಟಕ ಮುಂದಿದೆ. ಜಾಗತಿಕ ಹೂಡಿಕೆದಾರರಿಗೆ ಕರ್ನಾಟಕದಲ್ಲಿ ಎಲ್ಲಾ ಅನುಕೂಲತೆಗಳೂ ಇದ್ದು, ಉದ್ದಿಮೆಗಳ ಸ್ಥಾಪನೆಗೆ ರಾಜ್ಯ ಎಲ್ಲಾ ರೀತಿಯಲ್ಲಿ ವ್ಯವಸ್ಥೆ ಮಾಡುತ್ತದೆ. ನಮ್ಮಲ್ಲಿ ಸಂಪನ್ಮೂಲಗಳು ಮಾತ್ರವಲ್ಲದೆ, ಕೌಶಲ್ಯವೂ ಸೇರಿ ಹೂಡಿಕೆದಾರರಿಗೆ ಉತ್ತಮ ವಾತಾವರಣ ಕಲ್ಪಿಸುತ್ತದೆ ಎಂದು ಹೇಳಿದ್ದಾರೆ.











