Author: kannadanewsnow57

ಬೆಂಗಳೂರು : ಆದರ್ಶ ವಿದ್ಯಾಲಯದಲ್ಲಿ 2025-26ನೇ ಸಾಲಿನ ಪ್ರವೇಶ ಪರೀಕ್ಷೆಗೆ 6 ನೇ ತರಗತಿ ಪ್ರವೇಶಕ್ಕೆ ಅರ್ಜಿ ಸ್ವೀಕರಿಸುವ ಪ್ರಕ್ರಿಯೆ 14ನೇ ಫೆಬ್ರವರಿ 2025 ರಿಂದ ಪ್ರಾರಂಭವಾಗಲಿದೆ. ಆಸಕ್ತ ವಿದ್ಯಾರ್ಥಿಗಳು 28-02-2025 ಸಮಯದೊಳಗೆ ಅರ್ಜಿಯನ್ನು ಸಲ್ಲಿಸಬೇಕು. 2025-26ನೇ ಸಾಲಿನ ಆದರ್ಶ ವಿದ್ಯಾಲಯದ 6ನೇ ತರಗತಿಯ ಪ್ರವೇಶ ಪರೀಕ್ಷೆಗೆ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಲು ಅನುಸರಿಸಬೇಕಾದ ಸೂಚನೆಗಳು:- ಸಾಮಾನ್ಯ ಸೂಚನೆಗಳು : 1. ಆನ್ ಲೈನ್‌ನ ಮೂಲಕ ಅರ್ಜಿ ಸಲ್ಲಿಸುವ ಪೂರ್ವದಲ್ಲಿ ಅಭ್ಯರ್ಥಿಗಳು ಜಾಹಿರಾತು, ಸೂಚನೆಗಳನ್ನು ಅರ್ಥೈಸಿಕೊಂಡು ಅರ್ಹ ಮಾನದಂಡಗಳು ತೃಪ್ತಿಕರವಾಗಿರುವ ಬಗ್ಗೆ ಖಾತ್ರಿ ಪಡಿಸಿಕೊಳ್ಳುವುದು. 2. 5ನೇ ತರಗತಿ ಓದುತ್ತಿರುವ ಕರ್ನಾಟಕ ರಾಜ್ಯದ ನಿವಾಸಿ ವಿದ್ಯಾರ್ಥಿಗಳಿಗೆ ಮಾತ್ರ ಈ ಅರ್ಜಿಯನ್ನು ಸಲ್ಲಿಸಲು ಅರ್ಹರಾಗಿದ್ದು, ಇತರೆ ರಾಜ್ಯಗಳಲ್ಲಿ 5ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅಧಿಸೂಚನೆಯಲ್ಲಿ ತಿಳಿಸಲಾದ ಅರ್ಹತೆ ಹೊಂದಿರುವುದು ಮತ್ತು ಅಗತ್ಯ ದಾಖಲೆಗಳನ್ನು ಸಲ್ಲಿಸಬೇಕು. 3. ಆದರ್ಶ ವಿದ್ಯಾಲಯಗಳಿರುವ ಬ್ಲಾಕ್‌ಗಳಲ್ಲಿ ವಾಸಿಸುವ ಅಥವಾ ಅಧ್ಯಯನ ಮಾಡುವ ಅಭ್ಯರ್ಥಿಗಳಿಗೆ ಮಾತ್ರ…

Read More

ಬೆಂಗಳೂರು : ಬೆಂಗಳೂರಿನ ಯಲಹಂಕದ ವಾಯುನೆಲೆಯಲ್ಲಿ ನಡೆಯುತ್ತಿರುವ ಏರ್ ಶೋಗೆ ಇಂದು ಕೊನೆಯ ದಿನವಾಗಿದೆ. ಈ ಹಿನ್ನೆಲೆಯಲ್ಲಿ ನಗರದಲ್ಲಿ ಭಾರಿ ಟ್ರಾಫಿಕ್ ಜಾಮ್ ಉಂಟಾಗಿದ್ದು, ವಾಹನಗಳು ಕಿಮೀಗಟ್ಟಲೆ ಸಾಲುಗಟ್ಟಿ ನಿಂತಿದೆ. ಹೌದು, ಏರ್ ಶೋ ಹಿನ್ನೆಲೆಯಲ್ಲಿ ಬೆಂಗಳೂರಿನಿಂದ ಯಲಹಂಕದಲ್ಲಿ ಭಾರಿ ಟ್ರಾಫಿಕ್ ಜಾಮ್ ಉಂಟಾಗಿದ್ದು, ವಾಹನಗಳು ಕಿಮೀಗಟ್ಟಲೇ ಸಾಲುಗಟ್ಟಿ ನಿಂತಿದೆ. ಈ ಹಿನ್ನೆಲೆ ವಾಹನ ಸವಾರರು ಪರದಾಟ ನಡೆಸಿದ್ದಾರೆ. ಬೆಂಗಳೂರಿನಲ್ಲಿ ಏರ್ ಶೋ ಆರಂಭವಾಗಿದ್ದು, ರ್ ಶೋ ಹಿನ್ನೆಲೆ ಯಲಹಂಕ ಫ್ಲೈ ಓವರ್ ನಲ್ಲಿ ಭಾರಿ ಟ್ರಾಫಿಕ್ ಜಾಮ್ ಉಂಟಾಗಿದೆ. ಬೆಳಗ್ಗೆ ಕೆಲಸಕ್ಕೆ ಹೋಗುವ ಜನರು ಪರದಾಟ ನಡೆಸಿದ್ದಾರೆ. ಸರ್ವೀಸ್ ರಸ್ತೆಯಲ್ಲೇ ವಾಹನ ಸವಾರರು ಸಿಲುಕಿಕೊಂಡಿದ್ದಾರೆ. ಜೊತೆಗೆ ಆಂಬ್ಯುಲೆನ್ಸ್ ಸಹ ಟ್ರಾಫಿಕ್ ನಲ್ಲಿ ಸಿಲುಕಿಕೊಂಡಿದೆ.

Read More

ನವದೆಹಲಿ : ಅದು ಕಾರು ಆಗಿರಲಿ ಅಥವಾ ಯಾವುದೇ ವಾಹನವಾಗಲಿ, ಫಾಸ್ಟ್‌ಟ್ಯಾಗ್ ಈಗ ಎಷ್ಟು ಮುಖ್ಯವಾಗಿದೆ ಎಂದು ಹೇಳಬೇಕಾಗಿಲ್ಲ. ಫೆಬ್ರವರಿ 17 ರಿಂದ ಫಾಸ್ಟ್ಯಾಗ್ ನಿಯಮಗಳಲ್ಲಿ ರಾಷ್ಟ್ರೀಯ ಪಾವತಿ ನಿಗಮ (ಎನ್‌ಪಿಸಿಐ) ದೊಡ್ಡ ಬದಲಾವಣೆ ಮಾಡಿದೆ. ನೀವು ಫಾಸ್ಟ್‌ಟ್ಯಾಗ್ ಬಳಸುತ್ತಿದ್ದರೆ ಮತ್ತು ಹೊಸ ನಿಯಮ ತಿಳಿದಿಲ್ಲದಿದ್ದರೆ, ನಿಮ್ಮ ಟ್ಯಾಗ್ ಅನ್ನು ಟೋಲ್ ಬೂತ್‌ನಲ್ಲಿ ಕಪ್ಪುಪಟ್ಟಿಗೆ ಸೇರಿಸಲಾಗುತ್ತದೆ ಮತ್ತು ನೀವು ದುಪ್ಪಟ್ಟು ಮೊತ್ತವನ್ನು ಪಾವತಿಸಬೇಕಾಗುತ್ತದೆ. ಫಾಸ್ಟ್‌ಟ್ಯಾಗ್ ನಿಯಮಗಳಲ್ಲಿ ಎನ್‌ಪಿಸಿಐ ಇನ್ನೂ ಹಲವು ಬದಲಾವಣೆಗಳನ್ನು ಮಾಡಿದೆ. NPCI ಪ್ರಕಾರ, ಈಗ ನೀವು ಟೋಲ್ ಬೂತ್ ತಲುಪಿದ ನಂತರ ನಿಮ್ಮ ಫಾಸ್ಟ್‌ಟ್ಯಾಗ್ ಅನ್ನು ರೀಚಾರ್ಜ್ ಮಾಡಿದರೆ, ಅದನ್ನು ಕಪ್ಪುಪಟ್ಟಿಗೆ ಸೇರಿಸಲಾಗುತ್ತದೆ ಮತ್ತು ನೀವು ಬೂತ್‌ನಲ್ಲಿ ದುಪ್ಪಟ್ಟು ಟೋಲ್ ಪಾವತಿಸಬೇಕಾಗುತ್ತದೆ. ಫಾಸ್ಟ್‌ಟ್ಯಾಗ್ ರೀಚಾರ್ಜ್ ನಿಯಮಗಳಲ್ಲಿನ ಈ ಬದಲಾವಣೆಗಳು ಫೆಬ್ರವರಿ 17 ರ ಸೋಮವಾರದಿಂದ ಜಾರಿಗೆ ಬರಲಿವೆ. ಇದರ ಅಡಿಯಲ್ಲಿ, ಬೂತ್ ತಲುಪುವ ಮೊದಲು ಕನಿಷ್ಠ ಒಂದು ಗಂಟೆ ಅಂದರೆ 60 ನಿಮಿಷಗಳ ಮೊದಲು ರೀಚಾರ್ಜ್ ಮಾಡಬೇಕು, ಆಗ…

Read More

ವಿಜಯಪುರ : ಭೀಮಾತೀರದ ಹಂತಕ ಬಾಗಪ್ಪ ಹರಿಜನ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ವಿಜಯಪುರದ ಗಾಂಧಿಚೌಕ್ ನ ಪೊಲೀಸರು ಪಿಂಟ್ಯಾ ಸೇರಿದಂತೆ ನಾಲ್ವರು ಅರೋಪಿಗಳನ್ನು ಬಂಧಿಸಿದ್ದು, ವಿಚಾರಣೆ ನಡೆಸುತ್ತಿದ್ದಾರೆ. ಮದೀನಾ ನಗರದಲ್ಲಿ ಬಾಗಪ್ಪ ಹರಿಜನ ಭೀಕರ ಹತ್ಯೆಯಾಗಿತ್ತು. ಕೊಡಲಿ ಸೇರಿ ಮಾರಕಾಸ್ತ್ರಗಳಿಂದ ಬರ್ಬರವಾಗಿ ಹತ್ಯೆಗೈಯಲಾಗಿದೆ. ಬಾಡಿಗೆ ಮನೆ ಮಾಡಿ ನಗರದ ಹೊರ ವಲಯದ ರೇಡಿಯೋ ಕೇಂದ್ರದ ಬಳಿ ಬಾಗಪ್ಪ ವಾಸವಿದ್ದ. ಇನ್ನು ಫೆಬ್ರವರಿ 19 ರಂದು ವಿಜಯಪುರ ಕೋರ್ಟ್‌ಗೆ ಹಾಜರಾಗಿ, ಪ್ರಮುಖ ಸಾಕ್ಷಿ ಹೇಳುವವನಿದ್ದ ಆದ್ರೆ ಅಷ್ಟರಲ್ಲೇ ಇದೀಗ ಈ ಒಂದು ಕೊಲೆ ನಡೆದಿದೆ. ಇನ್ನು ರಾತ್ರಿ ಬಾಗಪ್ಪ ಊಟ ಮಾಡಿ ವಾಕಿಂಗ್‌ಗೆ ಹೊರಬಂದಿದ್ದ ವೇಳೆ ಕರೆಂಟ್ ಕಟ್ ಮಾಡಿ, ಟಂಟಂನಲ್ಲಿ ಬಂದು ಅಟ್ಯಾಕ್ ಮಾಡಿದ್ದಾರೆ ಎನ್ನುವ ಮಾಹಿತಿ ಸದ್ಯ ಲಭ್ಯವಾಗಿದೆ. ಅಷ್ಟೇ ಅಲ್ಲದೆ, ಸ್ಥಳದಲ್ಲಿ ಮೂರು ಸುತ್ತು ಗುಂಡಿನ ಸದ್ದು ಕೂಡ ಕೇಳಿಬಂದಿದ್ದು, ಕೊಡಲಿಯಿಂದ ಕೊಚ್ಚಿ ಬಾಗಪ್ಪ‌ನ ಹತ್ಯೆ ಮಾಡಲಾಗಿದೆ. ಈ ಸಂದರ್ಭದಲ್ಲಿ ಎಡಗೈ…

Read More

ಚಿಕ್ಕಮಗಳೂರು: ಮೂಡಿಗೆರೆ ಸರ್ವೆ ಅಧಿಕಾರಿ ಶಿವಕುಮಾರ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಸರ್ವೇ ಅಧಿಕಾರಿ ಬರೆದಿಟ್ಟಿರುವ ಡೆತ್ ನೋಟ್ ಪತ್ತೆಯಾಗಿದೆ. ಸರ್ವೆ ಅಧಿಕಾರಿ ಶಿವಕುಮಾರ್ ಅವರು ಸಾವಿಗೂ ಮುನ್ನ ಬರೆದಿಟ್ಟಿದ್ದ ಡೆತ್ ನೋಟ್ ನಲ್ಲಿ ತನ್ನ ಸಾವಿಗೆ ಮೂವರು ಕಾರಣ ಎಂದು ಬರೆದಿಟ್ಟಿದ್ದಾರೆ. ಡೆತ್ ನೋಟ್ ನಲ್ಲಿ ಹನಿಟ್ರ್ಯಾಪ್ ಜಾಲದಲ್ಲಿ ಸಿಲುಕಿದ್ದಾಗಿ ಬರೆದಿದ್ದಾರೆ. ಹನಿಟ್ರ್ಯಾಪ್, ಕಿರುಕುಳ, ಬ್ಲ್ಯಾಕ್ ಮೇಲ್ ಗೆ ಒಳಗಾಗಿ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ಉಲ್ಲೇಖಿಸಿದ್ದಾರೆ. ತನ್ನ ಸಾವಿಗೆ ಮೂವರು ಕಾರಣ ಎಂದು ಬರೆದಿದ್ದಾರೆ ಎಂದು ತಿಳಿದುಬಂದಿದೆ. ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ನಗರದಲ್ಲಿ ಸರ್ವೇ ಅಧಿಕಾರಿ ಶಿವಕುಮಾರ್(45) ಎಂಬುವರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಮೂಡಿಗೆರೆಯ ಕೆ ಎಸ್ ಆರ್ ಟಿಸಿ ಬಸ್ ನಿಲ್ದಾಣದ ಸಮೀಪದ ಬಾಡಿಗೆ ಮನೆಯಲ್ಲಿ ನೇಣು ಬಿಗಿದುಕೊಂಡು ಗುಬ್ಬಿ ಮೂಲದ ಶಿವಕುಮಾರ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೂಡಿಗೆರೆಯಲ್ಲಿ ಸರ್ವೆ ಅಧಿಕಾರಿಯಾಗಿ ಮೃತ ಶಿವಕುಮಾರ್ ಕರ್ತವ್ಯ ನಿರ್ವಹಿಸುತ್ತಿದ್ದರು. ಅಲ್ಲದೇ ಚಿಕ್ಕಮಗಳೂರು ನೌಕರರ ಸಂಘದ ನಿರ್ದೇಶಕರಾಗಿದ್ದರು. ಸರ್ವೆ ಅಧಿಕಾರಿ ಶಿವಕುಮಾರ್ ಆತ್ಮಹತ್ಯೆಗೆ…

Read More

ಬೆಂಗಳೂರು : ರಾಜ್ಯ ರಾಜಕೀಯದಲ್ಲಿ ಭಾರಿ ಆರೋಪ-ಪ್ರತ್ಯಾರೋಪಕ್ಕೆ ಕಾರಣವಾಗಿದ್ದ ಕೋವಿಡ್ ಹಗರಣದ ತನಿಖೆಯನ್ನು ಅಪರಾಧ ತನಿಖಾ ಇಲಾಖೆಗೆ (CID) ವಹಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ರಾಜ್ಯ ಸರ್ಕಾರವು ಕೋವಿಡ್ ಪ್ರಕರಣದ ತನಿಖೆ ಸಿಐಡಿಗೆ ವಹಿಸಿ ಆದೇಶ ಹೊರಡಿಸಿದೆ. ಡಿ.13 ರಂದು ವಿಧಾನಸೌಧದ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿತ್ತು, ಎಫ್ ಐ ಆರ್ ದಾಖಲಾದ 2 ತಿಂಗಳ ಬಳಿಕ ಕೋವಿಡ್ ಪ್ರಕರಣದ ತನಿಖೆ ಸಿಐಡಿಗೆ ವಹಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ಮೊದಲು ಹಗರಣದ ತನಿಖೆಗೆ ವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸುವ ಬಗ್ಗೆ ಸಂಪುಟ ಸಭೆಯಲ್ಲಿ ನಿರ್ಣಯಿಸಿತ್ತು. ಆದರೆ ಎಸ್ ಐಟಿ ಮುಖ್ಯಸ್ಥರಾಗಲು ಕೆಲ ಹಿರಿಯ ಐಪಿಎಸ್ ಅಧಿಕಾರಿ ಗಳು ಹಿಂದೇಟು ಹಾಕಿದ ಕಾರಣಕ್ಕೆ ಎಫ್‌ಐಆರ್‌ದಾಖಲಾದ 2 ತಿಂಗಳ ತರುವಾಯ ಪ್ರಕರಣವನ್ನು ಸಿಐಡಿ ತನಿಖೆಗೆ ಸರ್ಕಾರ ವಹಿಸಿದೆ ಎನ್ನಲಾಗಿದೆ.

Read More

ಬೆಂಗಳೂರು : ರಾಜ್ಯ ಸರ್ಕಾರವು ಕೋವಿಡ್ ಪ್ರಕರಣದ ತನಿಖೆ ಸಿಐಡಿಗೆ ವಹಿಸಿ ಆದೇಶ ಹೊರಡಿಸಿದೆ. ಡಿ.13 ರಂದು ವಿಧಾನಸೌಧದ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿತ್ತು, ಎಫ್ ಐ ಆರ್ ದಾಖಲಾದ 2 ತಿಂಗಳ ಬಳಿಕ ಕೋವಿಡ್ ಪ್ರಕರಣದ ತನಿಖೆ ಸಿಐಡಿಗೆ ವಹಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ರಾಜ್ಯ ರಾಜಕೀಯದಲ್ಲಿ ಭಾರಿ ಆರೋಪ-ಪ್ರತ್ಯಾರೋಪಕ್ಕೆ ತುತ್ತಾಗಿದ್ದ ಕೋವಿಡ್ ಹಗರಣದ ತನಿಖೆಯನ್ನು ಅಪರಾಧ ತನಿಖಾ ಇಲಾಖೆಗೆ (ಸಿಐಡಿ) ವಹಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ಮೊದಲು ಹಗರಣದ ತನಿಖೆಗೆ ವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸುವ ಬಗ್ಗೆ ಸಂಪುಟ ಸಭೆಯಲ್ಲಿ ನಿರ್ಣಯಿಸಿತ್ತು. ಆದರೆ ಎಸ್ ಐಟಿ ಮುಖ್ಯಸ್ಥರಾಗಲು ಕೆಲ ಹಿರಿಯ ಐಪಿಎಸ್ ಅಧಿಕಾರಿ ಗಳು ಹಿಂದೇಟು ಹಾಕಿದ ಕಾರಣಕ್ಕೆ ಎಫ್‌ಐಆರ್‌ದಾಖಲಾದ 2 ತಿಂಗಳ ತರುವಾಯ ಪ್ರಕರಣವನ್ನು ಸಿಐಡಿ ತನಿಖೆಗೆ ಸರ್ಕಾರ ವಹಿಸಿದೆ ಎನ್ನಲಾಗಿದೆ.

Read More

ಬೆಂಗಳೂರು: ಸ್ಟೇಜ್ ಬೈ ಸ್ಟೇಜ್ ನಮ್ಮ ಮೆಟ್ರೋ ಪ್ರಯಾಣದ ದರದಲ್ಲಿ ಶೇ.100ರಷ್ಟು ಹೆಚ್ಚಳವಾಗಿದ್ದನ್ನು ಕಡಿಮೆ ಮಾಡಲು ಬಿ ಎ ಆರ್ ಸಿ ಎಲ್ ನಿರ್ಧರಿಸಿದೆ. ನಮ್ಮ ಮೆಟ್ರೋ ಪ್ರಯಾಣದ ಗರಿಷ್ಠ ದರ ಹೆಚ್ಚಳ ಶೇ.70ಕ್ಕೆ ಇಳಿಕೆ ಮಾಡಲು ತೀರ್ಮಾನಿಸಲಾಗಿದ್ದು, ಇಂದಿನಿಂದ ಪರಿಷ್ಕೃತ ಪ್ರಯಾಣದ ಇಳಿಕೆ ದರಗಳು ಜಾರಿಯಾಗಿವೆ. ಬಿಎಂಆರ್ಸಿಎಲ್ ವ್ಯವಸ್ಥಾಪಕ ನಿರ್ದೇಶಕ ಎಂ.ಮಹೇಶ್ವರ ರಾವ್ ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಮೆಟ್ರೋ ದರದ ಗರಿಷ್ಠ ಹೆಚ್ಚಳವನ್ನು ಶೇಕಡಾ 70 ಕ್ಕೆ ನಿಗದಿಪಡಿಸಲಾಗಿದೆ. ಈ ಬದಲಾವಣೆಗಳು ಫೆಬ್ರವರಿ 14ರಿಂದ ಜಾರಿಗೆ ಬರಲಿವೆ ಎಂದು ಘೋಷಿಸಿದರು. ಇತ್ತೀಚೆಗೆ ಮೆಟ್ರೋ ಪ್ರಯಾಣ ದರ ಏರಿಕೆ ಮಿತಿಮೀರಿದೆ ಎಂಬ ದೂರುಗಳ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಧ್ಯಪ್ರವೇಶಿಸಿದ್ದರು. ಮೆಟ್ರೋ ರೈಲು ದರದಲ್ಲಿನ ಅಸಂಗತತೆಗಳನ್ನು ಸರಿಪಡಿಸಲು ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತಕ್ಕೆ ನಿರ್ದೇಶನ ನೀಡಿದ್ದೇನೆ ಎಂದು ಅವರು ಎಕ್ಸ್ ನಲ್ಲಿ ಹೇಳಿದರು. ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (ಬಿಎಂಆರ್ಸಿಎಲ್) ಬೆಂಗಳೂರು ಮೆಟ್ರೋ ಪ್ರಯಾಣ ದರ ಪರಿಷ್ಕರಣೆಯನ್ನು ಜಾರಿಗೆ ತಂದಿರುವ…

Read More

ಜೇಬಿನಲ್ಲಿ ಮೊಬೈಲ್ ಏಕಾಏಕಿ ಸ್ಪೋಟಗೊಂಡು ಬೆಂಕಿ ತಗುಲಿರುವ ಘಟನೆಯ ವಿಡಿಯೋವೊಂದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಹೌದು, ಸೂಪರ್ ಮಾರ್ಕೆಟ್ ಗೆ ಬಂದಿದ್ದ ಮಹಿಳೆಯ ಜೇಬಿನಲ್ಲಿದ್ದ ಮೊಬೈಲ್ ಸ್ಪೋಟಗೊಂಡು ಬೆಂಕಿ ತಗುಲಿರುವ ಘಟನೆ ನಡೆದಿದೆ. ಬ್ರೆಜಿಲ್ ನಲ್ಲಿ ಈ ಘಟನೆ ನಡೆದಿದೆ. ಮಹಿಳೆಯೊಬ್ಬರು ಬ್ರೆಜಿಲ್ ನ ಅನಾಪೊಲಿಸ್ ಪ್ರದೇಶದ ಸೂಪರ್ಮಾರ್ಕೆಟ್ ಗೆ ಹೋಗಿದ್ದ ವೇಳೆ ಹಿಂಭಾಗದ ಜೇಬಿನಲ್ಲಿದ್ದ ಮೊಬೈಲ್ ಏಕಾಏಕಿ ಮೊಬೈಲ್ ಸ್ಫೋಟಗೊಂಡಿದೆ. ಇದ್ದಕ್ಕಿದ್ದಂತೆ ಡೆನಿಮ್ ಪ್ಯಾಂಟ್ನಿಂದ ಹೊಗೆ ಹೊರಬಂದಿತು. ಮಾರ್ಟ್ನಲ್ಲಿ ಆಕೆಯ ಪಕ್ಕದಲ್ಲಿ ನಿಂತಿದ್ದ ಆಕೆಯ ಪತಿ ಮೊಬೈಲ್ಗೆ ಬೆಂಕಿ ತಗುಲಿದ್ದನ್ನು ನೋಡಿ ಆಘಾತಕ್ಕೊಳಗಾಗಿದ್ದಾನೆ. ನಂತರ ಬೆಂಕಿ ನಂದಿಸಲು ಯತ್ನಿಸಿದ್ದಾನೆ. ಘಟನೆಯಲ್ಲಿ ಯುವತಿಗೆ ಸುಟ್ಟ ಗಾಯಗಳಾಗಿದೆ ಎಂದು ವರದಿಯಾಗಿದೆ.. ವರದಿಗಳ ಪ್ರಕಾರ ಮಹಿಳೆ ಮೊಟೊರೊಲಾ ಮೋಟೋ ಇ 32 ಅನ್ನು ಬಳಸುತ್ತಿದ್ದಳು, ಅದು ಅವಳ ಹಿಂಭಾಗದ ಜೇಬಿನಲ್ಲಿ ಸ್ಫೋಟಗೊಂಡು ಬೆಂಕಿ ಹೊತ್ತಿಕೊಂಡಿದೆ. ಸೂಪರ್ಮಾರ್ಕೆಟ್’ನ ಸಿಸಿಟಿವಿಯಲ್ಲಿ ಘಟನೆಯ ದೃಶ್ಯಾವಳಿಗಳು ವೈರಲ್ ಆಗುತ್ತಿದೆ. https://twitter.com/svsnewsagency/status/1889608920223580356

Read More

ಬೆಂಗಳೂರು : ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ 3-4 ದಿನ ಭಾರೀಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದಾಗಿ ಫೆಬ್ರವರಿಯಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಇದರ ಪರಿಣಾಮ ಬೆಂಗಳೂರು ಸೇರಿದಂತೆ ಕರಾವಳಿ ಜಿಲ್ಲೆಗಳಲ್ಲಿ ಮುಂದಿನ 3-4 ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮ ಬೆಂಗಳೂರು, ಉಡುಪಿ, ದಕ್ಷಿಣ ಕನ್ನಡ, ಮೈಸೂರು, ಚಿಕ್ಕಮಗಳೂರು, ಚಾಮರಾಜನಗರ, ಹಾಸನ, ಕೊಡಗು ಸೇರಿ ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ರಾಜ್ಯದಲ್ಲಿ ಬೇಸಿಗೆ ಸಾಮಾನ್ಯಕ್ಕಿಂತ ಮುಂಚಿತವಾಗಿ ಬರಬಹುದು. ಉತ್ತರ ಕನ್ನಡ ಮತ್ತು ಗದಗ ಸೇರಿದಂತೆ ಕರ್ನಾಟಕದ ಹಲವಾರು ಪ್ರದೇಶಗಳಲ್ಲಿ ಶೀತ ಅಲೆಗಳು ಮತ್ತು ಒಣ ಹವಾಮಾನವನ್ನು ನಿರೀಕ್ಷಿಸಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ https://twitter.com/i/status/1889494962468954220

Read More