Subscribe to Updates
Get the latest creative news from FooBar about art, design and business.
Author: kannadanewsnow57
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಮುಂಜಾಗ್ರತೆ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ. ಎಲ್ಲ ಅಂಗನವಾಡಿ, ಪ್ರಾಥಮಿಕ – ಪ್ರೌಢ ಶಾಲೆಗಳ ಮಕ್ಕಳಿಗೆ ರಜೆ ಘೋಷಿಸಿ ಆದೇಶ ಹೊರಡಿಸಲಾಗಿದೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಮುಂಜಾಗ್ರತೆ ಕ್ರಮ ಕೈಗೊಳ್ಳಲು ಸೂಚಿಸಿಸಲಾಗಿದೆ. ಎಲ್ಲ ಅಂಗನವಾಡಿ, ಪ್ರಾಥಮಿಕ – ಪ್ರೌಢ ಶಾಲೆಗಳ ಮಕ್ಕಳಿಗೆ ರಜೆ ಘೋಷಿಸಲಾಗಿದೆ. ಹೆಚ್ಚಿನ ಮಳೆ ದಾಖಲಾದ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಆರೆಂಜ್ ಅಲರ್ಟ್ ಘೋಷಣೆಯಾಗಿದೆ. ತಗ್ಗು ಪ್ರದೇಶ, ನದಿ, ಸಮುದ್ರತೀರಕ್ಕೆ ಮಕ್ಕಳು ಹೋಗದಂತೆ ಪಾಲಕರು ಜಾಗ್ರತೆ ವಹಿಸುವುದು ಅಗತ್ಯ. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಿದೆ. ಅಧಿಕಾರಿಗಳು ಕಡ್ಡಾಯವಾಗಿ ಕೇಂದ್ರ ಸ್ಥಾನದಲ್ಲಿದ್ದು, ಮಳೆ ಹಾನಿ ಕುರಿತ ಸಾರ್ವಜನಿಕ ದೂರುಗಳಿಗೆ ತಕ್ಷಣ ಸ್ಪಂದಿಸುವಂತೆ ಸೂಚನೆ ನೀಡಿದ್ದೇನೆ ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮಳೆಯಾಗುತ್ತಿದ್ದು. ಕಳೆದ 24 ತಾಸುಗಳಲ್ಲಿ ಅತೀ ಹೆಚ್ಚಿನ ಮಳೆ ದಾಖಲಾಗಿರುತ್ತದೆ. ಇದೇ ಹವಾಮಾನ ವರಿಸ್ಥಿತಿಯ ಮುಂದುವರಿಯುವ…
ಮಂಗಳೂರು : ಮಂಗಳೂರು ಸಮೀಪದ ಉಳ್ಳಾಲದಲ್ಲಿ ಗುಡ್ಡ ಕುಸಿತ ಸಂಭವಿಸಿದ್ದು, ಓರ್ವ ಮಹಿಳೆ ಸಾವನ್ನಪ್ಪಿದ್ದು, ಮೂವರು ಮಣ್ಣಿನಡಿ ಸಿಲುಕಿದ್ದು, ರಕ್ಷಣೆ ಕಾರ್ಯಾಚರಣೆ ನಡೆಸಲಾಗುತ್ತಿದೆ. ಮೋಂಟೆಪದವು ಬಳಿ ಗುಡ್ಡ ಕುಸಿದು ಸಿಲುಕಿದ್ದವರಲ್ಲಿ ಪ್ರೇಮಾ ಪೂಜಾರಿ (52) ಸಾವನ್ನಪ್ಪಿದ್ದಾರೆ. ಮಂಗಳೂರು ಸುತ್ತಾಮುತ್ತಾ ಭಾರಿ ಮಳೆಯಾಗಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಮಳೆ ಹಿನ್ನೆಲೆ ಗುಡ್ಡ ಕುಸಿದಿದ್ದು, ಘಟನಾ ಸ್ಥಳಕ್ಕೆ ಎನ್ ಡಿ ಆರ್ ಎಫ್ ಸಿಬ್ಬಂದಿಗಳು ಧಾವಿಸಿ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಮಣ್ಣಿನಡಮೂವರು ಸಿಲುಕಿರುವ ಶಂಕೆ ವ್ಯಕ್ತವಾಗಿದ್ದು, ಇಬ್ಬರನ್ನು ರಕ್ಷಣೆ ಮಾಡಲಾಗಿದೆ. ಮೊಂಟೆಪದವು ಬಳಿ ಗುಡ್ಡ ಕುಸಿದು ಐವರು ಸಿಲುಕಿದವರಲ್ಲಿ ಪ್ರೇಮಾ ಪೂಜಾರಿ ಎಂಬವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಮೂವರು ಗುಡ್ಡದಡಿ ಸಿಲುಕಿದ್ದು, ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ.
ಬೆಂಗಳೂರು : ರಾಜ್ಯದಲ್ಲಿ ಪ್ರತಿ ತಿಂಗಳು ಸುಮಾರು 40,000 ನಾಯಿ ಕಡಿತ ಪ್ರಕರಣಗಳು ವರದಿಯಾಗುತ್ತಿವೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದ್ದು, ರಾಜ್ಯದಲ್ಲಿ ಮುಂದಿನ 3 ತಿಂಗಳವರೆಗೆ ಆಂಟಿ ರೇಬಿಸ್ ಲಸಿಕೆ ಮತ್ತು ರೇಬೀಸ್ ಇಮ್ಯುನೊಗ್ಲೋಬ್ಯುಲಿನ್ ಔಷಧಿಯ ಕೊರತೆಯಿಲ್ಲ ಎಂಬುದಾಗಿ ಸರ್ಕಾರ ಸ್ಪಷ್ಟ ಪಡಿಸಿದೆ. ಈ ಬಗ್ಗೆ ರಾಜ್ಯ ಆರೋಗ್ಯ ಇಲಾಖೆಯಿಂದ ಮಾಧ್ಯಮ ಪ್ರಕಟಣೆಯನ್ನು ಬಿಡುಗಡೆ ಮಾಡಿದ್ದು, ಕರ್ನಾಟಕದಲ್ಲಿ ‘ರೇಬೀಸ್’ ಅನ್ನು ‘ಅಧಿಸೂಚಿತ ರೋಗ'(‘notifiable disease) ಎಂದು ಗುರುತಿಸಲಾಗಿದೆ. ರಾಜ್ಯದಲ್ಲಿ ಪ್ರತಿ ತಿಂಗಳು ಐಎಚ್ಐಪಿ (ಇಂಟಿಗ್ರೇಟೆಡ್ ಹೆಲ್ತ್ ಇನ್ಸಾರ್ಮೇಶನ್ ಪ್ಲಾಟಾರ್ಮ್) ನಲ್ಲಿ ಸುಮಾರು 40,000 ನಾಯಿ ಕಡಿತದ ಪ್ರಕರಣಗಳು ವರದಿಯಾಗುತ್ತದೆ, ಈ ಎಲ್ಲಾ ಪುಕರಣಗಳಿಗೆ ಮಾರ್ಗಸೂಚಿಗಳ ಪ್ರಕಾರ ಜೀವ ಉಳಿಸುವ ಆಂಟಿ ರೇಬಿಸ್ ಲಸಿಕೆ ಮತ್ತು ರೇಬೀಸ್ ಇಮ್ಯುನೊಗ್ಲೋಬ್ಯುಲಿನ್ ಒದಗಿಸುವುದು ಕಷ್ಟಸಾದ್ಯವಾಗಿರುತ್ತದೆ ಎಂದಿದೆ. ರಾಜ್ಯದ ಎಲ್ಲಾ ಆರೋಗ್ಯ ಸಂಸ್ಥೆಗಳಿಗೆ ಎಲ್ಲಾ ಔಷಧಿಗಳು ಮತ್ತು ಬಳಕೆಯ ವಸ್ತುಗಳನ್ನು ಒದಗಿಸಲು ಕೆಎಸ್ಎಂಎಸ್ಎಲ್ ನೋಡಲ್ ಏಜೆನ್ಸಿಯಾಗಿದೆ. ಎಆರ್ವಿ ಮತ್ತು ರೇಬೀಸ್ ಇಮ್ಯುನೊಗ್ಲೋಬುಲಿನ್ ರಾಜ್ಯದಲ್ಲಿ (“Essential Drug…
ಧಾರವಾಡ: : ರಾಜ್ಯದಲ್ಲಿ ಮತ್ತೊಂದು ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ನಿಂತಿದ್ದ ಲಾರಿಗೆ ಕಾರು ಡಿಕ್ಕಿಯಾಗಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಧಾರವಾಡ ಜಿಲ್ಲೆ ಅಣ್ಣಿಗೇರಿ ತಾಲೂಕಿನ ಭದ್ರಾಪುರ ಗ್ರಾಮದ ಬಳಿ ಗದಗ- ಹುಬ್ಬಳ್ಳಿ ನಡುವಿನ ರಾಷ್ಟ್ರೀಯ ಹೆದ್ದಾರಿ 63 ರಲ್ಲಿ ಘಟನೆ ನಡೆದಿದೆ. ಹುಬ್ಬಳ್ಳಿಗೆ ಹೊರಟಿದ್ದ ಕಾರು ರಸ್ತೆ ಬದಿ ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದಿದೆ. ಲಾರಿಗೆ ಡಿಕ್ಕಿ ಹೊಡೆದ ರಭಸಕ್ಕೆ ಕಾರ್ ನಜ್ಜುಗುಜ್ಜಾಗಿದ್ದು, ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅಪಘಾತ ನಡೆದ ಸ್ಥಳಕ್ಕೆ ಅಣ್ಣಿಗೇರಿ ಠಾಣೆ ಪೋಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಪಂಜಾಬ್ : ಪಂಜಾಬ್ ನಲ್ಲಿ ತಡರಾತ್ರಿ ಘೋರ ದುರಂತವೊಂದು ಸಂಭವಿಸಿದ್ದು, ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಪೋಟಗೊಂಡು ನಾಲ್ವರು ಸಜೀವ ದಹನಗೊಂಡಿದ್ದು, 27 ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಲಂಬಿ ವಿಭಾಗದ ಫತುಹಿವಾಲಾ ಗ್ರಾಮದ ಪಟಾಕಿ ಕಾರ್ಖಾನೆಯಲ್ಲಿ ಶುಕ್ರವಾರ ತಡರಾತ್ರಿ ಸಂಭವಿಸಿದ ಸ್ಫೋಟದಲ್ಲಿ ನಾಲ್ವರು ಸಾವನ್ನಪ್ಪಿ, 27 ಮಂದಿ ಗಾಯಗೊಂಡಿದ್ದಾರೆ. ಕಾರ್ಖಾನೆಯಲ್ಲಿ ಸುಮಾರು 40 ಕಾರ್ಮಿಕರು ಇದ್ದರು. ತಡರಾತ್ರಿ 1 ಗಂಟೆ ಸುಮಾರಿಗೆ ಸ್ಫೋಟ ಸಂಭವಿಸಿದೆ. ರಕ್ಷಣಾ ಕಾರ್ಯ ಮುಂದುವರೆದಿದ್ದು, ಸ್ಫೋಟದ ಕಾರಣ ಇನ್ನೂ ತಿಳಿದುಬಂದಿಲ್ಲ. ಹಲವಾರು ಜನರು ಗಾಯಗೊಂಡಿದ್ದಾರೆ ಮತ್ತು ಕೆಲವರು ಇನ್ನೂ ಸಿಲುಕಿಕೊಂಡಿರುವ ಶಂಕೆ ಇದೆ ಎಂದು ಸ್ಥಳೀಯ ಅಧಿಕಾರಿಗಳು ತಿಳಿಸಿದ್ದಾರೆ. ನಾಲ್ಕು ಶವಗಳನ್ನು ಅವಶೇಷಗಳಿಂದ ಹೊರತೆಗೆಯಲಾಗಿದೆ ಮತ್ತು 27 ಗಾಯಾಳುಗಳನ್ನು ಬಟಿಂಡಾದ ಏಮ್ಸ್ಗೆ ಕಳುಹಿಸಲಾಗಿದೆ ಎಂದು ಲಂಬಿ ಡಿಎಸ್ಪಿ ಜಸ್ಪಾಲ್ ಸಿಂಗ್ ಹೇಳಿದ್ದಾರೆ.
ಮಂಗಳೂರು : ಮಂಗಳೂರು ಸಮೀಪದ ಉಳ್ಳಾಲದಲ್ಲಿ ಗುಡ್ಡ ಕುಸಿತ ಸಂಭವಿಸಿದ್ದು, ಓರ್ವ ಮಹಿಳೆ ಸಾವನ್ನಪ್ಪಿದ್ದು, ಮೂವರು ಮಣ್ಣಿನಡಿ ಸಿಲುಕಿದ್ದು, ರಕ್ಷಣೆ ಕಾರ್ಯಾಚರಣೆ ನಡೆಸಲಾಗುತ್ತಿದೆ. ಮೋಂಟೆಪದವು ಬಳಿ ಗುಡ್ಡ ಕುಸಿದು ಸಿಲುಕಿದ್ದವರಲ್ಲಿ ಪ್ರೇಮಾ ಪೂಜಾರಿ (52) ಸಾವನ್ನಪ್ಪಿದ್ದಾರೆ. ಮಂಗಳೂರು ಸುತ್ತಾಮುತ್ತಾ ಭಾರಿ ಮಳೆಯಾಗಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಮಳೆ ಹಿನ್ನೆಲೆ ಗುಡ್ಡ ಕುಸಿದಿದ್ದು, ಘಟನಾ ಸ್ಥಳಕ್ಕೆ ಎನ್ ಡಿ ಆರ್ ಎಫ್ ಸಿಬ್ಬಂದಿಗಳು ಧಾವಿಸಿ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಮಣ್ಣಿನಡಮೂವರು ಸಿಲುಕಿರುವ ಶಂಕೆ ವ್ಯಕ್ತವಾಗಿದ್ದು, ಇಬ್ಬರನ್ನು ರಕ್ಷಣೆ ಮಾಡಲಾಗಿದೆ. ಮೊಂಟೆಪದವು ಬಳಿ ಗುಡ್ಡ ಕುಸಿದು ಐವರು ಸಿಲುಕಿದವರಲ್ಲಿ ಪ್ರೇಮಾ ಪೂಜಾರಿ ಎಂಬವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಮೂವರು ಗುಡ್ಡದಡಿ ಸಿಲುಕಿದ್ದು, ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ.
ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕಿನ ಆರ್ಭಟ ಮುಂದುವರೆದಿದೆ. ಮೇ.29 ರ ನಿನ್ನೆ ಕೋವಿಡ್ ನಿಂದಾಗಿ ಮತ್ತೊಬ್ಬರು ಸಾವನ್ನಪ್ಪಿದ್ದಾರೆ. ಅಲ್ಲದೇ ರಾಜ್ಯಾಧ್ಯಂತ 42 ಜನರಿಗೆ ಕೊರೋನಾ ಪಾಸಿಟಿವ್ ಎಂಬುದಾಗಿ ವರದಿಯಿಂದ ದೃಢಪಟ್ಟಿದೆ. ನಿನ್ನೆ ರಾಜ್ಯ ಆರೋಗ್ಯ ಇಲಾಖೆಯಿಂದ ಕೋವಿಡ್ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದ್ದು, ಕಳೆದ 24 ಗಂಟೆಯಲ್ಲಿ 42 ಜನರಿಗೆ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ. ಹೀಗಾಗಿ ಸೋಂಕಿತರ ಸಂಖ್ಯೆ 253ಕ್ಕೆ ಏರಿಕೆಯಾಗಿದೆ. 19 ಮಂದಿ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ಅಲ್ಲದೇ ಕೋವಿಡ್ ಸೋಂಕಿನಿಂದ ಒಬ್ಬರು ಸಾವನ್ನಪ್ಪಿರುವುದಾಗಿ ತಿಳಿಸಿದೆ. ಕಳೆದ 24 ಗಂಟೆಯಲ್ಲಿ ಆರ್ ಟಿ ಪಿಸಿಆರ್ ಮೂಲಕ 463, ರಾಟ್ ಮೂಲಕ 50 ಸೇರಿದಂತೆ 513 ಜನರನ್ನು ಕೊರೋನಾ ಪತ್ತೆ ಪರೀಕ್ಷೆಗೆ ಒಳಪಡಿಸಲಾಗಿದೆ. ಇವರಲ್ಲಿ 42 ಜನರಿಗೆ ಪಾಸಿಟಿವ್ ಬಂದಿದೆ. ಸದ್ಯ 42 ಆಕ್ಟೀವ್ ಕೇಸ್ ಇದ್ದಾವೆ. 33 ಮಂದಿ ಹೋಂ ಐಸೋಲೇಷನ್ ನಲ್ಲಿ ಇದ್ದರೇ, ಮೂವರು ಸರ್ಕಾರಿ, ಆರು ಮಂದಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದಿದೆ. https://kannadanewsnow.com/kannada/breaking-state-governments-move-to-withdraw-43-criminal-cases-suffers-setback-high-court-quashes-order/ https://kannadanewsnow.com/kannada/from-now-on-a-break-on-communal-violence-in-karnataka-state-government-orders-the-formation-of-a-special-task-force/
ಮಂಗಳೂರು : ರಾಜ್ಯಾದ್ಯಂತ ಮಳೆಯ ಅರ್ಭಟ ಮುಂದುವರೆದಿದ್ದು, ಭಾರಿ ಮಳೆಗೆ ಕಾಂಪೌಂಡ್ ಕುಸಿದು ಬಾಲಕಿ ಸಾವನ್ನಪ್ಪಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ದೇರಳಕಟ್ಟೆ ಸಮೀಪದ ಬೆಳ್ಮ ಗ್ರಾಮದ ಕಾನಕೆರೆ ಎಂಬಲ್ಲಿ ನಡೆದಿದೆ. ಮನೆಗೆ ಹಿಂಬದಿಯ ತಡೆಗೋಡೆ ಕುಸಿದು ಬಿದ್ದಿದ್ದು, ಬಾಲಕಿ ನಯಿಮ (10) ಮೃತಪಟ್ಟಿದ್ದಾರೆ. ಮನೆಯ ಕೊಠಡಿಯ ಕಿಟಕಿ ಮಗುವಿನ ಮೇಲೆ ಬಿದ್ದು ಈ ದುರಂತ ಸಂಭವಿಸಿದೆ. ಗಂಭೀರವಾಗಿ ಗಾಯಗೊಂಡು ನಯಿಮ ಆಸ್ಪತ್ರೆಗೆ ದಾಖಲಾಗಿದ್ದಳು. ಆದರೆ ಚಿಕಿತ್ಸೆ ಫಲಿಸದೇ ಅವರು ಮೃತಪಟ್ಟಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.
ನವದೆಹಲಿ: ಭಾರತೀಯ ರಿಸರ್ವ್ ಬ್ಯಾಂಕ್ ( Reserve Bank of India-RBI) ಬ್ಯಾಂಕ್ ವಂಚನೆಗಳಲ್ಲಿ ಗಮನಾರ್ಹ ಏರಿಕೆಯನ್ನು ವರದಿ ಮಾಡಿದೆ. ಮಾರ್ಚ್ 2025ಕ್ಕೆ ಕೊನೆಗೊಂಡ ವರ್ಷದಲ್ಲಿ ಈ ಮೊತ್ತವು ಶೇ. 194 ರಷ್ಟು ಅಂದರೆ ಸುಮಾರು ಮೂರು ಪಟ್ಟು ಹೆಚ್ಚಾಗಿ 36,014 ಕೋಟಿ ರೂ.ಗಳಿಗೆ ತಲುಪಿದೆ. ಇದು ಹಿಂದಿನ ವರ್ಷಕ್ಕಿಂತ ರೂ. 12,230 ಕೋಟಿಯಷ್ಟು ಹೆಚ್ಚಾದಂತೆ ಆಗಿದೆ. ವಂಚನೆ ಪ್ರಕರಣಗಳ ಸಂಖ್ಯೆ 2024-25ರಲ್ಲಿ ಹಿಂದಿನ ವರ್ಷಕ್ಕಿಂತ 36,060 ರಿಂದ 23,953 ಕ್ಕೆ ಇಳಿದಿದೆ ಮತ್ತು ಖಾಸಗಿ ಬ್ಯಾಂಕುಗಳು ಪ್ರಕರಣಗಳಲ್ಲಿ ಶೇ. 59.42 ರಷ್ಟಿವೆ ಎಂದು ಆರ್ ಬಿ ಐ ಮಾಹಿತಿ ನೀಡಿದೆ. ಇದರಲ್ಲಿ, ಸಾರ್ವಜನಿಕ ವಲಯದ ಬ್ಯಾಂಕುಗಳಿಂದ ರೂ. 25,667 ಕೋಟಿ ಮೌಲ್ಯದ ವಂಚನೆಗಳು ವರದಿಯಾಗಿವೆ. ಇದು ಒಂದು ವರ್ಷದ ಹಿಂದೆ ರೂ. 9,254 ಕೋಟಿಗಿಂತ ದೊಡ್ಡ ಏರಿಕೆಯಾಗಿದೆ ಎಂದು 2024-25 ರ RBI ನ ವಾರ್ಷಿಕ ವರದಿ ತಿಳಿಸಿದೆ. ಕುತೂಹಲಕಾರಿಯಾಗಿ, ಖಾಸಗಿ ಬ್ಯಾಂಕುಗಳು 14,233 ವಂಚನೆಗಳನ್ನು (ಕಳೆದ ವರ್ಷ 24,207…
ಬೆಂಗಳೂರು : ರಾಜ್ಯದಲ್ಲಿ ಮುಂಗಾರು ಮಳೆಯ ಆರ್ಭಟ ಮುಂದುವರೆದಿದ್ದು, ಹಲವು ಜಿಲ್ಲೆಗಳಲ್ಲಿ ಅಂಗನವಾಡಿ, ಶಾಲೆ,ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಭಾರೀ ಮಳೆಯ ಹಿನ್ನೆಲೆಯಲ್ಲಿ ಮೇ.30 ರ ಇಂದು ದಕ್ಷಿಣ ಕನ್ನಡ, ಉಡುಪಿ, ಕೊಡಗು, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಧಾರಾಕಾರ ಮಳೆಯಾಗುತ್ತಿದೆ. ಹೀಗಾಗಿ ಜಿಲ್ಲೆಯಾದ್ಯಂತ ಎಲ್ಲಾ ಶಾಲೆಯಗಳಿಗೆ ಇಂದು ರಜೆ ಘೋಷಿಸಲಾಗಿದೆ. ಜಿಲ್ಲೆಯಲ್ಲಿ ಮಳೆಯ ಆರ್ಭಟ ಮುಂದುವರಿದ ಹಿನ್ನೆಲೆ ಮೇ 30ರಂದು ಎಲ್ಲಾ ಶಾಲೆ ಹಾಗೂ ಅಂಗನವಾಡಿ ಕೇಂದ್ರಗಳಿಗೆ ರಜೆ ಘೋಷಿಸಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ. ಮಂಗಳೂರು ಸೇರಿದಂತೆ ಜಿಲ್ಲೆಯಾದ್ಯಂತ ರಾತ್ರಿಯಿಡಿ ಸುರಿದ ಭಾರೀ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತವಾಗಿದ್ದು, ಮಳೆ ಆರ್ಭಟ ಮುಂದುವರಿದಿದೆ. ಉತ್ತರ ಕನ್ನಡದಲ್ಲಿ ಅಂಗನವಾಡಿಗಳಿಗೆ ರಜೆ: ಜಿಲ್ಲೆಯಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಇಂದು (ಮೇ 30) ಅಂಗನವಾಡಿಗಳಿಗೆ ರಜೆ ಘೋಷಿಸಲಾಗಿದೆ. ಉಡುಪಿ ಜಿಲ್ಲೆಯಲ್ಲಿ ಅಂಗನವಾಡಿ, ಪ್ರೌಢಶಾಲೆಗಳಿಗೆ ರಜೆ ಘೋಷಣೆ ಜಿಲ್ಲೆಯಾದ್ಯಂತ ಭಾರೀ ಮಳೆ ಆಗುತ್ತಿರುವ…