Subscribe to Updates
Get the latest creative news from FooBar about art, design and business.
Author: kannadanewsnow57
ಪ್ರಯಾಗ್ ರಾಜ್ : ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳವು ಇತಿಹಾಸವನ್ನು ಸೃಷ್ಟಿಸಿದೆ. ಇದು ಕೇವಲ 24 ದಿನಗಳಲ್ಲಿ ವಿಶ್ವ ಇತಿಹಾಸದ ಎಲ್ಲಾ ದಾಖಲೆಗಳನ್ನು ಮುರಿಯಿತು. ಹೌದು, 144 ವರ್ಷಗಳಿಗೊಮ್ಮೆ ಬರುವ ಈ ಮಹಾ ಕುಂಭಮೇಳವು ಜನವರಿ 13 ರಂದು ಪ್ರಾರಂಭವಾಯಿತು. ಈ ಕುಂಭಮೇಳಕ್ಕೆ ಎಲ್ಲಾ ರಾಜ್ಯಗಳು ಮತ್ತು ಪ್ರಮುಖ ನಗರಗಳಿಂದ ಪ್ರತಿದಿನ ವಿಶೇಷ ರೈಲುಗಳು ಚಲಿಸುತ್ತಿವೆ. ಇದರಿಂದಾಗಿ ನಿರೀಕ್ಷೆಗಿಂತ ಹೆಚ್ಚಿನ ಸಂಖ್ಯೆಯ ಜನರು ಕುಂಭಮೇಳಕ್ಕೆ ಹೋಗುತ್ತಿದ್ದರು. ಆದರೆ, ಹಿಂದಿನ ಕುಂಭಮೇಳದಲ್ಲಿ 20 ಕೋಟಿಗೂ ಹೆಚ್ಚು ಜನರು ಭಾಗವಹಿಸಿದ್ದರು. ಈ ವರ್ಷ ಮಹಾ ಕುಂಭಮೇಳ ನಡೆಯುವುದರಿಂದ ಸುಮಾರು 40 ರಿಂದ 50 ಕೋಟಿ ಜನರು ಪ್ರಯಾಗ್‌ರಾಜ್‌ಗೆ ತಲುಪಿ ಪವಿತ್ರ ಸ್ನಾನ ಮಾಡುತ್ತಾರೆ ಎಂದು ಸ್ಥಳೀಯ ಉತ್ತರ ಪ್ರದೇಶ ಸರ್ಕಾರ ಅಂದಾಜಿಸಿದೆ. ಅದಕ್ಕೆ ತಕ್ಕಂತೆ ಬೃಹತ್ ವ್ಯವಸ್ಥೆಗಳನ್ನು ಮಾಡಲಾಗಿದೆ. ಇದರ ಭಾಗವಾಗಿ, ಯುಪಿ ಸರ್ಕಾರವು ಪ್ರಯಾಗ್‌ರಾಜ್ ಸುತ್ತಮುತ್ತಲ ಪ್ರದೇಶದಲ್ಲಿ ವಿಶ್ವದ ಅತಿದೊಡ್ಡ ಟೆಂಟ್ ಸಿಟಿಯನ್ನು ನಿರ್ಮಿಸಿದೆ. ಇದರೊಂದಿಗೆ, ಪ್ರತಿದಿನ ಲಕ್ಷಾಂತರ ಜನರು…
ಧಾರವಾಡ : 2024-25 ನೇ ಸಾಲಿನ ಎಸ್.ಎಸ್.ಎಲ್.ಸಿ. ಮಕ್ಕಳ ಫಲಿತಾಂಶ ಸುಧಾರಣೆಗಾಗಿ ಫೆಬ್ರವರಿ 10, 2025 ರಿಂದ ಫೆಬ್ರವರಿ 28, 2025 ರವರೆಗೆ ಜ್ಞಾನ ಸಿಂಚನ ನೇರ ಫೋನ್-ಇನ್ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಕರೆ ಮಾಡಲು ಟೋಲ್ ಪ್ರೀ ನಂ: 18004256758 ಸಂಖ್ಯೆಯನ್ನು ಬಳಸಬಹುದು. ಫೆ.10, 12, 15, 17, 19, 21, 24, 27 ಹಾಗೂ ಫೆ. 28 ರಂದು ಮಧ್ಯಾಹ್ನ 3 ರಿಂದ 5 ಗಂಟೆಯವರೆಗೆ ಕರೆ ಮಾಡಬಹುದು ಮತ್ತು ಎಲ್ಲ ಮಕ್ಕಳು ಈ ಕಾರ್ಯಕ್ರಮದ ಉಪಯೋಗವನ್ನು ಪಡೆಯಬೇಕೆಂದು ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನವದೆಹಲಿ : ಕೇಂದ್ರ ಸರ್ಕಾರ ದೇಶದಲ್ಲಿ ನಿಗದಿತ ಬೆಲೆಯಲ್ಲಿ ರೋಗಿಗಳಿಗೆ ಔಷಧಿಗಳನ್ನು ಒದಗಿಸಲು ಕಟ್ಟುನಿಟ್ಟಿನ ನಿರ್ಧಾರವನ್ನು ತೆಗೆದುಕೊಂಡಿದೆ. ಶೀಘ್ರದಲ್ಲೇ ಔಷಧಿಗಳ ಬೆಲೆ ಪಟ್ಟಿಯು ಇ-ಫಾರ್ಮಸಿಯಲ್ಲಿ ಸಗಟು ವ್ಯಾಪಾರಿಗಳೊಂದಿಗೆ ಗೋಚರಿಸುತ್ತದೆ. ಔಷಧಿಗಳನ್ನು ಉತ್ಪಾದಿಸುವ ಔಷಧ ಕಂಪನಿಗಳು ಈ ಪಟ್ಟಿಯನ್ನು ಮಾರಾಟಗಾರರಿಗೆ ಲಭ್ಯವಾಗುವಂತೆ ಮಾಡಬೇಕು ಇದರಿಂದ ನಿಗದಿತ ಬೆಲೆಗಿಂತ ಹೆಚ್ಚಿನ ಬೆಲೆಗೆ ರೋಗಿಗಳಿಗೆ ಮಾರಾಟ ಮಾಡಲಾಗುವುದಿಲ್ಲ. ಇದರಲ್ಲಿ ಸರ್ಕಾರವು ಗರಿಷ್ಠ ಬೆಲೆಯನ್ನು ನಿಗದಿಪಡಿಸಿದ ಎಲ್ಲಾ ಔಷಧಿಗಳು ಸೇರಿವೆ. ಪ್ರತಿಯೊಂದು ವೈದ್ಯಕೀಯ ಅಂಗಡಿಯಲ್ಲಿ ಅಂಟಿಸಲಾಗುವ ಈ ಪಟ್ಟಿಯಲ್ಲಿ, ರೋಗಿ ಅಥವಾ ಸಹಾಯಕ ಯಾವುದೇ ಸಮಯದಲ್ಲಿ ತಮ್ಮ ಔಷಧಿಯ ಬೆಲೆಯನ್ನು ಪರಿಶೀಲಿಸಲು ಸಾಧ್ಯವಾಗುತ್ತದೆ. NPPA ಆದೇಶ ಹೊರಡಿಸಿ ಮಾಹಿತಿ ನೀಡಿತು ಸೋಮವಾರ ಹೊರಡಿಸಿದ ಆದೇಶದಲ್ಲಿ, ನವದೆಹಲಿ ಮೂಲದ ರಾಷ್ಟ್ರೀಯ ಔಷಧ ಬೆಲೆ ಪ್ರಾಧಿಕಾರ (NPPA), ಔಷಧಗಳ (ಬೆಲೆ ನಿಯಂತ್ರಣ) ಆದೇಶ- 2013 ರ ಅಡಿಯಲ್ಲಿ, ಪ್ರತಿ ಔಷಧ ತಯಾರಕರು ಬೆಲೆ ಪಟ್ಟಿಯನ್ನು ನೀಡುವುದು ಕಡ್ಡಾಯವಾಗಿದೆ ಎಂದು ಹೇಳಿದೆ. ಮಾರಾಟಗಾರರಲ್ಲದೆ, ಅವರು ಈ ಪಟ್ಟಿಯನ್ನು ರಾಜ್ಯ ಔಷಧ ನಿಯಂತ್ರಣ…
ಮೈಸೂರು : ಮೈಸೂರಿನಲ್ಲಿ ವ್ಯಕ್ತಿಯೊಬ್ಬ ಮಾಡಿದ ಅವಹೇಳನಕಾರಿ ಪೋಸ್ಟ್ ವಿಚಾರ ಸಂಬಂಧ ಪೊಲೀಸರು ಇದೀಗ ಕಲ್ಯಾಣಿಗಿರಿ ನಿವಾಸಿ ಸುರೇಶ್ ನನ್ನು ಬಂಧಿಸಿದ್ದಾರೆ. ಮೈಸೂರಿನ ಕಲ್ಯಾಣಿಗಿರಿ ನಿವಾಸಿ ಸುರೇಶ್ ಎಂಬಾತ ಅವಹೇಳನಕಾರಿ ಪೋಸ್ಟ್ ಹಂಚಿಕೊಂಡಿದ್ದು, ಇದರಿಂದ ಉದ್ರಿಗ್ತಗೊಂಡ ರಾತ್ರಿ ಸಾವಿರಾರು ಮಂದಿ ದಿಢೀರ್ ಪ್ರತಿಭಟನೆ ನಡೆಸಿದ್ದು, ಈ ವೇಳೆ ಕಲ್ಲು ತೂರಾಟ ನಡೆದಿದೆ. ಪೊಲೀಸರು ಲಾಠಿ ಪ್ರಹಾರ ನಡೆಸಿ, ಅಶ್ರುವಾಯು ಪ್ರಯೋಗ ಮಾಡಿದ್ದಾರೆ. ಸಂಸದ ರಾಹುಲ್ ಗಾಂಧಿ, ಉತ್ತರ ಪ್ರದೇಶದ ಮಾಜಿ ಸಿಎಂ ಅಖಿಲೇಶ್ ಯಾದವ್ ಹಾಗೂ ದೆಹಲಿ ಮಾಜಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರ ಫೋಟೋಗಳನ್ನು ವಿವಸ್ತ್ರಗೊಳಿಸಿ ತಲೆ ಮೇಲೆ ಸಮುದಾಯವೊಂದರ ವೇಷ ಭೂಷಣ, ಕೆಲ ಆಕ್ಷೇಪಾರ್ಹ ಪದಗಳನ್ನು ಬರೆದು ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದಕ್ಕೆ ಆಕ್ರೋಶಗೊಂಡ ಒಂದು ಸಮುದಾಯದ ಜನರು ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಿದ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿತ್ತು. ಸದ್ಯ ಉದಯಗಿರಿ ಠಾಣಾ ವ್ಯಾಪ್ತಿಯಲ್ಲಿ ಬೂದಿ ಮುಚ್ಚಿದ ಕೆಂಡದಂತಿದ್ದು, ನರಸಿಂಹರಾಜ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಾದ್ಯಂತ ತೀವ್ರ ಕಟ್ಟೆಚ್ಚರ ವಹಿಸಲಾಗಿದೆ.
ಬೆಂಗಳೂರು : ರಾಜ್ಯ ಸರ್ಕಾರವು ತೊಗರಿ ಬೆಳೆಗಾರರಿಗೆ ಮತ್ತೊಂದು ಸಿಹಿಸುದ್ದಿ ನೀಡಿದ್ದು, 450 ರೂ. ಪ್ರೋತ್ಸಾಹಧನ ಘೋಷಣೆ ಮಾಡಲಾಗಿದೆ. 2024-25ನೇ ಸಾಲಿನಲ್ಲಿ ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ ಎಫ್.ಎ.ಕ್ಯೂ ಗುಣಮಟ್ಟದ ತೊಗರಿ ಖರೀದಿಗೆ ಸಂಬAಧಿಸಿದAತೆ, ಕೇಂದ್ರ ಸರ್ಕಾರದ ಬೆಂಬಲ ಬೆಲೆ ರೂ.7,550/- ರ ಜೊತೆಗೆ ರಾಜ್ಯ ಸರ್ಕಾರದ ಪ್ರೋತಾಹ ಧನ ರೂ.450/- ಪ್ರತಿ ಕ್ವಿಂಟಾಲ್ ಗೆ, ಸೇರಿ ಒಟ್ಟು ರೂ.8,000/- ಪ್ರತಿ ಕ್ವಿಂಟಾಲ್ ರಂತೆ ತೊಗರಿ ಖರೀದಿಸಲು ಜವಳಿ, ಕಬ್ಬು ಅಭಿವೃಧಿ, ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರು ಶಿವಾನಂದ ಪಾಟೀಲ್ ಅವರು ಕಳೆದ ಜನವರಿ ಮಾಹೆಯಲ್ಲಿ ಭರವಸೆ ನೀಡಿದ್ದರು. ಈ ಸಂಬಂಧ ಮಾನ್ಯ ಮುಖ್ಯ ಮಂತ್ರಿಗಳು ಅನುಮೋದನೆ ನೀಡಿದ್ದು, ಆರ್ಥಿಕ ಇಲಾಖೆಯೂ ಸಹ ಸಹಮತಿ ನೀಡಿದೆ. ಈ ಕುರಿತು ಸಂಭದಿಸಿದ ಇಲಾಖೆಗೆ ತಕ್ಷಣದಿಂದ ಅನುಷ್ಠಾನಗೊಳಿಸಲು ಸೂಕ್ತ ನಿರ್ದೇಶನ ನೀಡಲಾಗಿದೆ. ರಾಜ್ಯದ ಪ್ರಮುಖ ತೊಗರಿ ಬೆಳೆಯುವ ಜಿಲ್ಲೆಗಳಾದ ಕಲಬುರಗಿ, ಯಾದಗಿರಿ, ಬೀದರ್, ರಾಯಚೂರು, ವಿಜಯಪುರ, ಕೊಪ್ಪಳ, ಬಳ್ಳಾರಿ, ವಿಜಯನಗರ, ಬಾಗಲಕೋಟೆ,…
ನವದೆಹಲಿ : ಉದ್ಯೋಗಾಕಾಂಕ್ಷಿಗಳಿಗೆ ಸಿಹಿ ಸುದ್ದಿ ಸಿಕ್ಕಿದ್ದು, ಭಾರತೀಯ ರೈಲ್ವೆ ಹೊಸ ಉದ್ಯೋಗಿಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ. 12ನೇ ತರಗತಿ ಉತ್ತೀರ್ಣರಾದವರಿಗೆ ರೈಲ್ವೆಯಲ್ಲಿ ಉದ್ಯೋಗ ಸಿಗಲಿದೆ. ಈ ಬಗ್ಗೆ ಭಾರತೀಯ ರೈಲ್ವೆ ಅಧಿಕೃತ ಹೇಳಿಕೆ ಬಿಡುಗಡೆ ಮಾಡಿದ್ದು, ಖಾಲಿ ಇರುವ ಹಲವಾರು ಹುದ್ದೆಗಳಿಗೆ ನೇಮಕಾತಿ ಮಾಡಲಾಗುತ್ತಿದೆ. ಕೆಲಸದ ವಿವರಣೆ.! ಇತ್ತೀಚೆಗೆ, ಆರ್ಆರ್ಬಿ ನೇಮಕಾತಿಗಳಿಗೆ ಸಂಬಂಧಿಸಿದಂತೆ ಅಧಿಸೂಚನೆಯನ್ನ ಬಿಡುಗಡೆ ಮಾಡಿದೆ. ಇಂದಿನ ವರದಿಯಲ್ಲಿ ಎಷ್ಟು ಜನರನ್ನು ಯಾವ ಹುದ್ದೆಗಳಿಗೆ ನೇಮಕ ಮಾಡಲಾಗುತ್ತಿದೆ, ಸಂಬಳ ಎಷ್ಟು, ಆ ಹುದ್ದೆ ಎಂದು ಏನೆಂದು ಕರೆಯಲಾಗುತ್ತದೆ ಎಂಬಂತಹ ವಿವರಗಳು ಮುಂದಿದೆ. ಅಧಿಕೃತ ವೆಬ್ಸೈಟ್.! ಈ ಅಧಿಸೂಚನೆಯು ಪ್ರಕಟಿತ ವೆಬ್ಸೈಟ್ಗೆ indianrailways.gov.in. ರೈಲ್ವೆ ನೇಮಕಾತಿ ಮಂಡಳಿ (RRB) ರೈಲ್ವೆ ಟಿಕೆಟ್ ಕಲೆಕ್ಟರ್ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ. ಖಾಲಿ ಹುದ್ದೆಗಳ ಸಂಖ್ಯೆ.! RRB ಇತ್ತೀಚೆಗೆ ಹೊರಡಿಸಿದ ಅಧಿಸೂಚನೆಯ ಪ್ರಕಾರ, 2025ರಲ್ಲಿ ಟಿಕೆಟ್ ಕಲೆಕ್ಟರ್ ಹುದ್ದೆಗೆ ಒಟ್ಟು 11,250 ಅರ್ಹ ವ್ಯಕ್ತಿಗಳನ್ನು ನೇಮಿಸಲಾಗುವುದು. ಸಂಬಳ : RRB ಅಥವಾ ರೈಲ್ವೆ…
ಬೆಂಗಳೂರು: ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳ ತಪ್ಪಿಸಲು ಸುಗ್ರೀವಾಜ್ಞೆ ಜಾರಿಗೊಳಿಸುವಂತ ನಿರ್ಧಾರವನ್ನು ಸರ್ಕಾರ ಕೈಗೊಂಡಿತ್ತು. ಅದರಂತೆ ಮೈಕ್ರೋ ಫೈನಾನ್ಸ್ ಸುಗ್ರೀವಾಜ್ಞೆಗೆ ಸಂಪುಟ ಒಪ್ಪಿಗೆ ಸೂಚಿಸಿ ರಾಜ್ಯಪಾಲರ ಅಂಕಿತಕ್ಕೆ ಕಳುಹಿಸಲಾಗಿತ್ತು. ರಾಜ್ಯಪಾಲರು ಮಸೂದೆಯನ್ನು ವಾಪಾಸ್ ಕಳುಹಿಸಿದ್ದರು. ಈ ಮಸೂದೆಯ ಅಂಶಗಳಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಸ್ಪಷ್ಟನೆಯ ಜೊತೆಗೆ ರಾಜ್ಯಪಾಲರಿಗೆ ಅಂಕಿತಕ್ಕೆ ಮೈಕ್ರೋ ಫೈನಾನ್ಸ್ ಕಿರುಕುಳ ತಡೆ ಕಾಯ್ದೆಯನ್ನು ಮರು ರವಾನೆ ಮಾಡಲಾಗಿದೆ. ರಾಜ್ಯ ಸರ್ಕಾರದಿಂದ ರಾಜ್ಯಪಾಲರು ವಾಪಾಸ್ಸು ಕಳುಹಿಸಿದ್ದಂತ ಮೈಕ್ರೋ ಫೈನಾನ್ಸ್ ಕಿರುಕುಳ ತಡೆಯ ಸುಗ್ರೀವಾಜ್ಞೆಗೆ ಎಲ್ಲಾ ಆಕ್ಷೇಪಣೆಗಳಿಗೆ ಕಾನೂನು ಇಲಾಖೆಯಿಂದ ಸೂಕ್ತ ಸ್ಪಷ್ಟೀಕರಣ ಸಿದ್ಧಪಡಿಸಲಾಗಿದೆ. ಈ ಸ್ಪಷ್ಟೀಕರಣದೊಂದಿಗೆ ಕರ್ನಾಟಕ ಮೈಕ್ರೋ ಫೈನಾನ್ಸ್ ಸುಗ್ರೀವಾಜ್ಞೆ ಕರಡನ್ನು ಸಿಎಂ ಕಚೇರಿಯಿಂದ ರಾಜ್ಯಪಾಲರಿಗೆ ಮರು ರವಾನೆ ಮಾಡಲಾಗಿತ್ತು. ಈಗಾಗಲೇ ಸಿಎಂ ಕಚೇರಿಗೆ ಕಾನೂನು ಇಲಾಖೆಯು ಮೈಕ್ರೋ ಫೈನಾನ್ಸ್ ತಡೆ ಸುಗ್ರೀವಾಜ್ಞೆಗೆ ಸ್ಪಷ್ಟೀಕರಣ ಸಿದ್ಧಪಡಿಸಿ ಸಿದ್ಧರಾಮಯ್ಯ ಅವರ ಅವಗಾಹನೆಗೆ ಕಳುಹಿಸಲಾಗಿತ್ತು. ಈ ಕರಡನ್ನು ಸಿಎಂ ಕಚೇರಿಯಿಂದ ಅಂತಿಮಗೊಳಿಸಿ, ಇಂದು ರಾಜ್ಯಪಾಲರಿಗೆ ಕಳುಹಿಸಲಾಗಿದೆ. ಈ ಸುಗ್ರೀವಾಜ್ಞೆಗೆ ರಾಜ್ಯಪಾಲರು ಅಂಕಿತ…
ಮೈಸೂರು : ಮೈಸೂರಿನಲ್ಲಿ ವ್ಯಕ್ತಿಯೊಬ್ಬ ಮಾಡಿದ ಅವಹೇಳನಕಾರಿ ಚಿತ್ರವುಳ್ಳ ಪೋಸ್ಟ್ ನಿಂದಾಗ ತಡರಾತ್ರಿ ಸಾವಿರಾರು ಮಂದಿ ಪ್ರತಿಭಟನೆ ನಡೆಸಿರುವ ಘಟನೆ ನಡೆದಿದೆ. ಮೈಸೂರಿನ ಉದಯಗಿರಿ ಪ್ರದೇಶದಲ್ಲಿ ವ್ಯಕ್ತಿಯೊಬ್ಬ ಅವಹೇಳನಕಾರಿ ಪೋಸ್ಟ್ ಮಾಡಿದ್ದು, ಇದರಿಂದ ಉದ್ರಿಗ್ತಗೊಂಡ ರಾತ್ರಿ ಸಾವಿರಾರು ಮಂದಿ ದಿಢೀರ್ ಪ್ರತಿಭಟನೆ ನಡೆಸಿದ್ದು, ಈ ವೇಳೆ ಕಲ್ಲು ತೂರಾಟ ನಡೆದಿದೆ. ಪೊಲೀಸರು ಲಾಠಿ ಪ್ರಹಾರ ನಡೆಸಿ, ಅಶ್ರುವಾಯು ಪ್ರಯೋಗ ಮಾಡಿದ್ದಾರೆ. ಸಂಸದ ರಾಹುಲ್ ಗಾಂಧಿ, ಉತ್ತರ ಪ್ರದೇಶದ ಮಾಜಿ ಸಿಎಂ ಅಖಿಲೇಶ್ ಯಾದವ್ ಹಾಗೂ ದೆಹಲಿ ಮಾಜಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರ ಫೋಟೋಗಳನ್ನು ವಿವಸ್ತ್ರಗೊಳಿಸಿ ತಲೆ ಮೇಲೆ ಸಮುದಾಯವೊಂದರ ವೇಷ ಭೂಷಣ, ಕೆಲ ಆಕ್ಷೇಪಾರ್ಹ ಪದಗಳನ್ನು ಬರೆದು ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದಕ್ಕೆ ಆಕ್ರೋಶಗೊಂಡ ಒಂದು ಸಮುದಾಯದ ಜನರು ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಿದ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿತ್ತು. ಸದ್ಯ ಉದಯಗಿರಿ ಠಾಣಾ ವ್ಯಾಪ್ತಿಯಲ್ಲಿ ಬೂದಿ ಮುಚ್ಚಿದ ಕೆಂಡದಂತಿದ್ದು, ನರಸಿಂಹರಾಜ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಾದ್ಯಂತ ತೀವ್ರ ಕಟ್ಟೆಚ್ಚರ ವಹಿಸಲಾಗಿದೆ.
ಬೆಂಗಳೂರು: ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶ ಇನ್ವೆಸ್ಟ್ ಕರ್ನಾಟಕ 2025ಕ್ಕೆ ಆತಿಥ್ಯ ವಹಿಸಲು ಕರ್ನಾಟಕ ರಾಜ್ಯ ಸರ್ಕಾರವು ಸಜ್ಜಾಗಿದ್ದು, ಫೆ.11 ರ ಮಧ್ಯಾಹ್ನ ನಡೆಯಲಿರುವ ಭವ್ಯ ಉದ್ಘಾಟನಾ ಸಮಾರಂಭವು ನಾಲ್ಕು ದಿನಗಳ ಹೂಡಿಕೆ ಉತ್ಸವಕ್ಕೆ ಮುನ್ನುಡಿ ಬರೆಯಲಿದೆ. ʼಈ ಹೂಡಿಕೆದಾರರ ಸಮಾವೇಶವು, ಕರ್ನಾಟಕವನ್ನು ಜಾಗತಿಕ ಬಂಡವಾಳ ಹೂಡಿಕೆಯ ಶಕ್ತಿಕೇಂದ್ರವನ್ನಾಗಿ ಅಭಿವೃದ್ಧಿಪಡಿಸಲು ನೆರವಾಗಲಿದೆ. ನಾವೀನ್ಯತೆ, ಕೈಗಾರಿಕಾ ಪ್ರಗತಿ ಮತ್ತು ಜಾಗತಿಕ ಪಾಲುದಾರಿಕೆಗೆ ರಾಜ್ಯದಲ್ಲಿನ ಸೌಲಭ್ಯಗಳನ್ನು ಇಡೀ ವಿಶ್ವಕ್ಕೆ ಪರಿಚಯಿಸಲಿದೆʼ ಎಂದು ಕೈಗಾರಿಕಾ ಸಚಿವ ಎಂ. ಬಿ. ಪಾಟೀಲ ಅವರು ಹೇಳಿದ್ದಾರೆ. ಉದ್ದಿಮೆ, ನೀತಿ ನಿರೂಪಣೆ ಹಾಗೂ ನಾವೀನ್ಯತೆ ಕ್ಷೇತ್ರದ ದಿಗ್ಗಜರ ಸಮಾಗಮಕ್ಕೆ, ಚಿಂತನ ಮಂಥನಕ್ಕೆ ಇದು ವೇದಿಕೆ ಒದಗಿಸಲಿದೆ. ವಿವಿಧ ಕ್ಷೇತ್ರಗಳ ದಿಗ್ಗಜರು ಕರ್ನಾಟಕದಲ್ಲಿನ ಬಂಡವಾಳ ಹೂಡಿಕೆ ಮತ್ತು ಕೈಗಾರಿಕಾ ಪ್ರಗತಿಯ ಭವಿಷ್ಯ ರೂಪಿಸಲು ತಮ್ಮ ಒಳನೋಟಗಳನ್ನು ನೀಡಲಿದ್ದಾರೆ. ಸಮಾವೇಶದ ವಿವಿಧ ಕಾರ್ಯಕ್ರಮಗಳ ವಿವರ ಹೀಗಿದೆ: ಮೊದಲ ದಿನ. ಫೆಬ್ರುವರಿ 12: * ಬೆಳಿಗ್ಗೆ 10:35 – 11:05 | ಸಭಾಂಗಣ ಎ…
ಬೆಂಗಳೂರು : ರಾಜ್ಯ ಸರ್ಕಾರವು ವಿವಿಧ ತಾಲ್ಲೂಕು ಪಂಚಾಯತಿಗಳ ಹಾಗೂ ಅವುಗಳ ವ್ಯಾಪ್ತಿಯ ಇಲಾಖೆಗಳಲ್ಲಿ ಪ್ರಸಕ್ತ ಸಾಲಿನ ವೇತನ ವೇತನೇತರ ಹೊರಗುತ್ತಿಗೆ ನೌಕರರ ವೇತನ ದಿನಗೂಲಿ ನೌಕರರ ಉಪದಾನ ಮತ್ತು ವೈದ್ಯಕೀಯ ವೆಚ್ಚ ಮರುಪಾವತಿಗಾಗಿ ಅನುದಾನವನ್ನು ಬಿಡುಗಡೆಗೊಳಿಸಿ ಆದೇಶ ಹೊರಡಿಸಿದೆ. ರಾಜ್ಯ ಸರ್ಕಾರದ ಆದೇಶದಲ್ಲಿ ಏನಿದೆ? ವಿವಿಧ ತಾಲ್ಲೂಕು ಪಂಚಾಯಿತಿಗಳ ಹಾಗೂ ಅವುಗಳ ವ್ಯಾಪ್ತಿಯ ಇಲಾಖೆಗಳಲ್ಲಿ ವೇತನ, ವೇತನೇತರ, ಹೊರಗುತ್ತಿಗೆ ನೌಕರರ ವೇತನ, ದಿನಗೂಲಿ ನೌಕರರ ಉಪದಾನ ಮತ್ತು ವೈದ್ಯಕೀಯ ವೆಚ್ಚ ಮರುಪಾವತಿಗಾಗಿ ಹೆಚ್ಚುವರಿ ಅನುದಾನವನ್ನು ಪ್ರಧಾನ ಲೆಕ್ಕ ಶೀರ್ಷಿಕೆ 2202, 2210, 2225, 2403, 2435 ಮತ್ತು 2515ರಡಿ ಬಿಡುಗಡೆಗೊಳಿಸಲು ಪ್ರಸ್ತಾಪಿಸಿದೆ. ಪ್ರಸ್ತಾವನೆಯನ್ನು ಪರಿಶೀಲಿಸಿ, ತಾಲ್ಲೂಕು ಪಂಚಾಯತ್ ಕಾರ್ಯಕ್ರಮದಡಿ ರೂ.4899.39 ಲಕ್ಷಗಳನ್ನು ಲೆಕ್ಕ ಶೀರ್ಷಿಕೆ 2515-00-197-1-10-300ರಿಂದ ಬಿಡುಗಡೆಗೊಳಿಸಲು ನಿರ್ಣಯಿಸಿ ಈ ಕೆಳಕಂಡಂತೆ ಆದೇಶಿಸಿದೆ. ಪ್ರಸ್ತಾವನೆಯಲ್ಲಿ ವಿವರಿಸಿರುವಂತೆ ಈ ಆದೇಶಕ್ಕೆ ಲಗತ್ತಿಸಿರುವ ಅನುಬಂಧದ ಕಾಲಂ 2ರ ತಾಲ್ಲೂಕು ಪಂಚಾಯತಿಗೆ ಕಾಲಂ 3 ಕಾರ್ಯಕ್ರಮದಡಿ ವೇತನ, ವೇತನೇತರ, ಹೊರಗುತ್ತಿಗೆ ನೌಕರರ ವೇತನ, ದಿನಗೂಲಿ…













