Subscribe to Updates
Get the latest creative news from FooBar about art, design and business.
Author: kannadanewsnow57
ಬೆಂಗಳೂರು: ಇಂದಿನಿಂದ ಬೆಂಗಳೂರಿನಲ್ಲಿ ಏರೋ ಇಂಡಿಯಾ 2025ರ ಪ್ರದರ್ಶನ ಆರಂಭಗೊಳ್ಳಲಿದೆ. ಬಾನಂಗಳದಲ್ಲಿ ಬಗೆ ಬಗೆಯ ಲೋಹದ ಹಕ್ಕಿಗಳು ತಮ್ಮ ಆಕರ್ಷಕ ಪ್ರದರ್ಶನವನ್ನು ನೀಡಲಿದ್ದಾವೆ. ಈ ಹಿನ್ನಲೆಯಲ್ಲಿ ಬೆಂಗಳೂರಿನ ವಾಹನ ಸವಾರರಿಗೆ ಸಂಚಾರ ಪೊಲೀಸರು ಮಹತ್ವದ ಅಪ್ ಡೇಟ್ ನೀಡಿದ್ದಾರೆ. ಅದೇನು ಅಂತ ಮುಂದೆ ಓದಿ. ಈ ಬಗ್ಗೆ ಪತ್ರಿಕಾ ಪ್ರಕಟಣೆಯಲ್ಲಿ ಬೆಂಗಳೂರು ನಗರ ಸಂಚಾರ ಪೊಲೀಸರು ಮಾಹಿತಿ ಹಂಚಿಕೊಂಡಿದ್ದು, ಬೆಂಗಳೂರು ನಗರ ಯಲಹಂಕ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ ಯಲಹಂಕ ವಾಯುಸೇನಾ ನೆಲೆಯಲ್ಲಿ ದಿನಾಂಕ: 10-02-2025 ರಿಂದ ದಿನಾಂಕ:14-02-2025 ರವರೆಗೆ ಪ್ರತಿಷ್ಠಿತ ಏರೋ ಇಂಡಿಯಾ- 2025 ವೈಮಾನಿಕ ಪ್ರದರ್ಶನವನ್ನು ಹಮ್ಮಿಕೊಳ್ಳಲಾಗಿರುತ್ತದೆ ಎಂದು ತಿಳಿಸಿದೆ. ದಿನಾಂಕ:10-02-2025 ರ ಬೆಳಿಗ್ಗೆ ಸದರಿ ಕಾರ್ಯಕ್ರಮದ ಉದ್ಘಾಟನಾ ಸಮಾರಂಭ ನಡೆಯಲಿದ್ದು, ಈ ಕಾರ್ಯಕ್ರಮಕ್ಕೆ ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಟ್ಟದ ಹಲವಾರು ಗಣ್ಯರು ಹಾಗು ಸಹಸ್ರಾರು ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಲಿದ್ದಾರೆ. ಈ ಕಾರ್ಯಕ್ರಮ ನಡೆಯುವ ಸ್ಥಳವು ಯಲಹಂಕ ವಾಯುಸೇನಾ ನೆಲೆಯು ಬೆಂಗಳೂರು-ಬಳ್ಳಾರಿ ರಾಷ್ಟ್ರೀಯ ಹೆದ್ದಾರಿ-44 (ಅಂತರಾಷ್ಟ್ರೀಯ ಏರ್‌ಮೊರ್ಟ್ ರಸ್ತೆ)…
ಬೆಂಗಳೂರು : ಫೆಬ್ರವರಿ 10ರಿಂದ 14 ರವರೆಗೆ ಬೆಂಗಳೂರಿನಲ್ಲಿ ಏರ್ ಶೋ ಕಾರ್ಯಕ್ರಮ ನಡೆಯಲಿದ್ದು, ಟಿಕೆಟ್ ದರ, ಟಿಕೆಟ್ ಬುಕ್ ಮಾಡುವ ಕುರಿತು ಇಲ್ಲಿದೆ ಸಂಪೂರ್ಣ ಮಾಹಿತಿ ಏರ್ ಶೋ 2025 ಫೆಬ್ರವರಿ 10ರಿಂದ ಫೆಬ್ರವರಿ 14ರ ವರೆಗೆ ಪ್ರತಿದಿನವೂ ಬೆಳಿಗ್ಗೆ 9ರಿಂದ ಸಂಜೆ 6ರವರೆಗೆ ನಡೆಯಲಿದೆ. ಫೆಬ್ರವರಿ 13 ಹಾಗೂ 14ರಂದು ಸಾರ್ವಜನಿಕರಿಗೆ ಅವಕಾಶ ಇರಲಿದೆ. ಟಿಕೆಟ್ ದರ ಎಷ್ಟು? ಭಾರತೀಯರಿಗೆ 2,500 ರೂಪಾಯಿ ಇದ್ದರೆ, ವಿದೇಶಿಗರಿಗೆ 50 ಯುಎಸ್ ಡಾಲರ್ ಇರಲಿದೆ. ಎಡಿವಿಎ ಪಾಸ್: ಭಾರತೀಯರಿಗೆ 1,000 ರೂ ವಿದೇಶಿಗರಿಗೆ 50 ಯುಎಸ್ ಡಾಲರ್ ವ್ಯಾಪಾರ ಪಾಸ್ : ಭಾರತೀಯರಿಗೆ 5,000 ರೂ. ವಿದೇಶಿಗರಿಗೆ : 50 ಯುಎಸ್ ಡಾಲರ್ ಇರಲಿದೆ. ಏರ್ ಶೋ 2025ರ ಟಿಕೆಟ್ ಬುಕ್ ಮಾಡುವುದು ಹೇಗೆ? ನೀವು ಮೊದಲು ಏರೋ ಇಂಡಿಯಾದ ವೆಬ್‌ಸೈಟ್ aeroindia.gov.in ಅನ್ನು ಓಪನ್ ಮಾಡಬೇಕು ವೆಬ್‌ಸೈಟ್‌ನ ಹೋಮ್ ಪೇಜ್‌ನಲ್ಲಿ ಟಿಕೆಟ್ಸ್ ಅಂತ ಕಾಣಿಸುತ್ತೆ. ಅಲ್ಲಿ ವಿಸಿಟರ್ಸ್ ರಿಜಿಸ್ಟ್ರೇಶನ್ ಎಂಬ…
ಬೆಂಗಳೂರು: ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳ ತಪ್ಪಿಸಲು ಸುಗ್ರೀವಾಜ್ಞೆ ಜಾರಿಗೊಳಿಸುವಂತ ನಿರ್ಧಾರವನ್ನು ಸರ್ಕಾರ ಕೈಗೊಂಡಿತ್ತು. ಅದರಂತೆ ಮೈಕ್ರೋ ಫೈನಾನ್ಸ್ ಸುಗ್ರೀವಾಜ್ಞೆಗೆ ಸಂಪುಟ ಒಪ್ಪಿಗೆ ಸೂಚಿಸಿ ರಾಜ್ಯಪಾಲರ ಅಂಕಿತಕ್ಕೆ ಕಳುಹಿಸಲಾಗಿತ್ತು. ರಾಜ್ಯಪಾಲರು ಮಸೂದೆಯನ್ನು ವಾಪಾಸ್ ಕಳುಹಿಸಿದ್ದರು. ಹೀಗಾಗಿ ಇಂದು ರಾಜ್ಯ ಸರ್ಕಾರದಿಂದ ಮೈಕ್ರೋ ಫೈನಾನ್ಸ್ ಕಿರುಕುಳ ತಡೆ ಕಾಯ್ದೆಯನ್ನು ರಾಜ್ಯಪಾಲರ ಅಂಕಿತಕ್ಕೆ ಮರು ರವಾನೆ ಮಾಡಲಾಗುತ್ತಿದೆ. ರಾಜ್ಯ ಸರ್ಕಾರದಿಂದ ರಾಜ್ಯಪಾಲರು ವಾಪಾಸ್ಸು ಕಳುಹಿಸಿದ್ದಂತ ಮೈಕ್ರೋ ಫೈನಾನ್ಸ್ ಕಿರುಕುಳ ತಡೆಯ ಸುಗ್ರೀವಾಜ್ಞೆಗೆ ಎಲ್ಲಾ ಆಕ್ಷೇಪಣೆಗಳಿಗೆ ಕಾನೂನು ಇಲಾಖೆಯಿಂದ ಸೂಕ್ತ ಸ್ಪಷ್ಟೀಕರಣ ಸಿದ್ಧಪಡಿಸಲಾಗಿದೆ. ಈ ಸ್ಪಷ್ಟೀಕರಣದೊಂದಿಗೆ ಇಂದು ಕರ್ನಾಟಕ ಮೈಕ್ರೋ ಫೈನಾನ್ಸ್ ಸುಗ್ರೀವಾಜ್ಞೆ ಕರಡನ್ನು ಸಿಎಂ ಕಚೇರಿಯಿಂದ ರಾಜ್ಯಪಾಲರಿಗೆ ಮರು ರವಾನೆ ಮಾಡಲಾಗುತ್ತಿದೆ. ಈಗಾಗಲೇ ಸಿಎಂ ಕಚೇರಿಗೆ ಕಾನೂನು ಇಲಾಖೆಯು ಮೈಕ್ರೋ ಫೈನಾನ್ಸ್ ತಡೆ ಸುಗ್ರೀವಾಜ್ಞೆಗೆ ಸ್ಪಷ್ಟೀಕರಣ ಸಿದ್ಧಪಡಿಸಿ ಸಿದ್ಧರಾಮಯ್ಯ ಅವರ ಅವಗಾಹನೆಗೆ ಕಳುಹಿಸಲಾಗಿದೆ. ಈ ಕರಡನ್ನು ಸಿಎಂ ಕಚೇರಿಯಿಂದ ಅಂತಿಮಗೊಳಿಲಿ, ಇಂದು ರಾಜ್ಯಪಾಲರಿಗೆ ಕಳುಹಿಸಲಾಗುತ್ತದೆ. ಈ ಸುಗ್ರೀವಾಜ್ಞೆಗೆ ರಾಜ್ಯಪಾಲರು ಅಂಕಿತ ಹಾಕುತ್ತಾರೋ ಅಥವಾ ಮತ್ತೆ…
ನವದೆಹಲಿ: ಇಂದು ಪ್ರಧಾನಿ ನರೇಂದ್ರ ಮೋದಿಯವರ ಸಂವಾದ ಕಾರ್ಯಕ್ರಮ ‘ಪರೀಕ್ಷಾ ಪೇ ಚರ್ಚಾ’ದ ಭಾಗವಾಗಿ ದೀಪಿಕಾ ಪಡುಕೋಣೆ, ಮೇರಿ ಕೋಮ್ ಮತ್ತು ಇತರ ಅನೇಕ ಗಣ್ಯರು ಭಾಗವಹಿಸಲಿದ್ದಾರೆ. ಪರೀಕ್ಷಾ ಪೇ ಚರ್ಚಾ ಕಾರ್ಯಕ್ರಮದಲ್ಲಿ ದೀಪಿಕಾ ಪಡುಕೋಣೆ, ಮೇರಿ ಕೋಮ್, ಅವನಿ ಲೇಖಾರಾ, ರುಜುತಾ ದಿವೇಕರ್, ಸೋನಾಲಿ ಸಬರ್ವಾಲ್, ಫುಡ್ ಫಾರ್ಮರ್, ವಿಕ್ರಾಂತ್ ಮಾಸ್ಸಿ, ಭೂಮಿ ಪೆಡ್ನೇಕರ್, ಟೆಕ್ನಿಕಲ್ ಗುರೂಜಿ ಮತ್ತು ರಾಧಿಕಾ ಗುಪ್ತಾ ಅವರು ವಿದ್ಯಾರ್ಥಿಗಳನ್ನು ಸಬಲೀಕರಣಗೊಳಿಸುವ ಪ್ರಯಾಣದ ಭಾಗವಾಗಲಿದ್ದಾರೆ. ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ಪರೀಕ್ಷಾ ಪೇ ಚರ್ಚಾ 2025 ರ ಎಂಟನೇ ಆವೃತ್ತಿಯಲ್ಲಿ ಭಾಗವಹಿಸಲು ಸಜ್ಜಾಗಿದ್ದಾರೆ, ಇದು ಹಿಂದಿನ ಆವೃತ್ತಗಿಂತ ಹೆಚ್ಚು ಆಕರ್ಷಕ ಮತ್ತು ಬಹಳ ವಿಭಿನ್ನವಾಗಿರುತ್ತದೆ ಎಂದು ನಿರೀಕ್ಷಿಸಲಾಗಿದೆ.ಪಿಎಂ ಮೋದಿಯವರ ಈ ಮೆಗಾ ಸಂವಾದವು ವಿದ್ಯಾರ್ಥಿಗಳಿಗೆ ಪರೀಕ್ಷಾ ಒತ್ತಡವನ್ನು ನಿವಾರಿಸಲು ಮತ್ತು ಅಗತ್ಯ ಜೀವನ ಕೌಶಲ್ಯಗಳನ್ನು ಅಭಿವೃದ್ಧಿಪಡಿಸಲು ಸಹಾಯ ಮಾಡುತ್ತದೆ. ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ವಾರ್ಷಿಕವಾಗಿ ಆಯೋಜಿಸುವ ಈ ಕಾರ್ಯಕ್ರಮ ರಾಷ್ಟ್ರ ರಾಜಧಾನಿಯ…
ಗುಂಡ್ಲುಪೇಟೆ : ರಾಜ್ಯದಲ್ಲಿ ಗೋವುಗಳ ಮೇಲಿನ ದೌರ್ಜನ್ಯ ಮುಂದುವರೆದಿದ್ದು, ಗುಂಡ್ಲುಪೇಟೆಯಲ್ಲಿ ಬೀಡಾಡಿ ಕರುವಿನ ಬಾಲ ಕತ್ತರಿಸಿ ವಿಕೃತಿ ಮೆರೆದಿರುವ ಘಟನೆ ನಡೆದಿದೆ. ಗುಂಡ್ಲುಪೇಟೆ ಪಟ್ಟಣದ ಕಾಂಗ್ರೆಸ್ ಕಾರ್ಯಾಲಯದ ಬಳಿ ಗಲ್ಲಿಯಲ್ಲಿ ಕಿಡಿಗೇಡಿಗಳು ಕರುವಿನ ಬಾಲ ಕತ್ತರಿಸಿದ್ದು, ಕರು ನಿತ್ರಾಣಗೊಂಡು ಬಿದ್ದಿರುವುದು ಕಂಡುಬಂದಿದೆ. ಕೂಡಲೇ ಸಾರ್ವಜನಿಕರು ಕರುವಿಗೆ ನೀರು ಕುಡಿಸಿದ್ದಾರೆ. ಜಾನುವಾರ ಮೇಲೆ ದೌರ್ಜನ್ಯ ನಡೆದಿರುವುದು ಖಂಡನೀಯ, ಕರುವಿನ ಬಾಲ ಕತ್ತರಿಸಿದ ಆರೋಪಿಗಳ ಪತ್ತೆ ಹಚ್ಚಿ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಇಲ್ಲಿನ ಜನರು ಒತ್ತಾಯಿಸಿದ್ದಾರೆ. ಇನ್ನು ಬೆಂಗಳೂರಿನ ಚಾಮರಾಜಪೇಟೆಯಲ್ಲಿ ಹಸುವಿನ ಕೆಚ್ಚಲು ಕತ್ತರಿಸಿದ ಪ್ರಕರಣ, ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ಬಳಿ ಹಸು ಕತ್ತರಿಸಿ ಹೊಟ್ಟೆಯಲ್ಲಿದ್ದ ಕರು ಬಿಸಾಡಿ ಹೋದ ಪ್ರಕರಣಗಳ ಬೆನ್ನಲ್ಲೇ ಕರುವಿನ ಬಾಲ ಕತ್ತರಿಸಿರುವುದು ಸಾರ್ವಜನಿಕರ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.
ಬೆಂಗಳೂರು: ಸರ್ಕಾರಿ ಸೇವೆಗೆ ಸೇರ್ಪಡೆಗೊಂಡಿರುವ ಎಲ್ಲಾ ಅಧಿಕಾರಿ/ನೌಕರರ ಸೇವಾ ವಹಿಯನ್ನು Electronic Service Register (ESR) ನಲ್ಲಿಯೇ ಅನುಷ್ಠಾನಗೊಳಿಸುವ ಕುರಿತು ಆದೇಶವನ್ನು ಹೊರಡಿಸಿದೆ. ಆದೇಶದಲ್ಲಿ ಏನಿದೆ? ಮೇಲಿನ ವಿಷಯಕ್ಕೆ ಸಂಬಂಧಿಸಿದಂತೆ, ಹೆಚ್.ಆರ್.ಎಮ್.ಎಸ್.2.0 ತಂತ್ರಾಂಶವನ್ನು ಅನುಷ್ಠಾನಗೊಳಿಸುವ ಸಂಬಂಧ ಹೆಚ್.ಆರ್.ಎಮ್.ಎಸ್.2.0 ತಂತ್ರಾಂಶದ ಅಂಗವಾದ ವಿದ್ಯುನ್ಮಾನ್ ಸೇವಾ ವಹಿಯನ್ನು (Electronic Service Register- ESR) ಯನ್ನು ಸಿದ್ಧಪಡಿಸಲಾಗಿದೆ. 2021-22 ನೇ ಸಾಲಿನಿಂದ ಜಾರಿಗೆ ಬರುವಂತೆ ಕರ್ನಾಟಕ ರಾಜ್ಯ ಸರ್ಕಾರಿ ಸೇವೆಗೆ ಈಗಾಗಲೇ ನೇಮಕಗೊಂಡಿರುವ ಮತ್ತು ನೇಮಕಗೊಳ್ಳುವ ಎಲ್ಲಾ ಅಧಿಕಾರಿಗಳು / ನೌಕರರುಗಳ ಸೇವಾ ವಹಿಯನ್ನು ಹೆಚ್.ಆರ್.ಎಮ್.ಎಸ್.2.0 ತಂತ್ರಾಂಶದ “ವಿದ್ಯುನ್ಮಾನ ಸೇವಾವಹಿ” ಯಲ್ಲಿಯೇ ನಿರ್ವಹಿಸುವಂತೆ ಉಲ್ಲೇಖದ 1,2,3 ಮತ್ತು 4 ರ ಸರ್ಕಾರದ ಆದೇಶಗಳಲ್ಲಿ ತಿಳಿಸಲಾಗಿರುತ್ತದೆ. ಈ ಸಂಬಂಧ ಈ ಕಚೇರಿಯ ಉಲ್ಲೇಖ 5ರಲ್ಲಿನ ಸುತ್ತೋಲೆಗಳಲ್ಲಿ ವಿದ್ಯುನ್ಮಾನ್ ಸೇವಾ ವಹಿಯನ್ನು (ಇ.ಎಸ್.ಆರ್) ಅನುಷ್ಠಾನಗೊಳಿಸುವಂತೆ ಎಲ್ಲಾ ಸಕ್ಷಮ ಪ್ರಾಧಿಕಾರಿಗಳಿಗೆ / ಕಚೇರಿಯ ಮುಖ್ಯಸ್ಥರಿಗೆ ತಿಳಿಸಲಾಗಿರುತ್ತದೆ. ಮತ್ತು ಈ ಸಂಬಂಧ ದಿನಾಂಕ : 04-09-2024 ರಂದು ನಡೆದ ಸಭೆಯಲ್ಲಿ ಈ…
ಮೈಸೂರು: ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿನ ಮಹಾ ಕುಂಭಮೇಳದ ಬೆನ್ನಲ್ಲೇ ಕರ್ನಾಟಕದಲ್ಲೂ ಇಂದಿನಿಂದ 3 ದಿನ ಕುಂಭಮೇಳ ನಡೆಯಲಿದೆ. ಭಕ್ತರಿಗೆ ಪುಣ್ಯ ಸ್ನಾನ ಮಾಡಲು 5 ಕಡೆ ಸ್ಥಳ ಗುರುತು ಮಾಡಲಾಗಿದೆ. ಮೈಸೂರು ಜಿಲ್ಲಾಡಳಿತ ಹಾಗೂ ಕುಂಭಮೇಳ ಆಚರಣಾ ಸಮಿತಿ ಸಹಯೋಗದೊಂದಿಗೆ 13ನೇ ಕುಂಭಮೇಳವನ್ನು ಫೆ.10, 11 ಮತ್ತು 12 ರಂದು ಜಿಲ್ಲೆಯ ಟಿ. ನರಸೀಪುರದ ಶ್ರೀ ಕ್ಷೇತ್ರ ತಿರುಮಕೂಡಲು ತ್ರಿವೇಣಿ ಸಂಗಮದಲ್ಲಿ ಆಯೋಜಿಸಲಾಗಿದೆ. ಫೆ.10ರ ಬೆಳಗ್ಗೆ 8.30ಕ್ಕೆ ಶ್ರೀ ಅಗಸ್‌ತ್ಯೇಶ್ವರ ಸ್ವಾಮಿ ಸನ್ನಿಧಿಯಲ್ಲಿ ಅನುಜ್ಞಾ ಕಾರ್ಯಕ್ರಮ, ಅಂಕುರಾರ್ಪಣೆ ಮತ್ತು ಧ್ವಜಾರೋಹಣ ನೆರವೇರಲಿದೆ. ಸಮಾಜ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್ .ಸಿ.ಮಹದೇವಪ್ಪ ಧ್ವಜಾರೋಹಣನೆರವೇರಿಸಿ, ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಫೆ.11ರಬೆಳಗ್ಗೆ 11ಕ್ಕೆಧಾರ್ಮಿಕಸಭೆಯನ್ನು ಏರ್ಪಡಿಸಲಾಗಿದ್ದು, ಪಶುಸಂಗೋಪನೆ ಮತ್ತು ರೇಷ್ಮೆ ಸಚಿವ ಕೆ. ವೆಂಕಟೇಶ್ ಉದ್ಘಾಟಿಸುವರು. ಸಚಿವರಾದ ಮಹದೇವಪ್ಪ, ಎಂ.ಬಿ.ಪಾಟೀಲ್, ದಿನೇಶ್ ಗುಂಡೂರಾವ್, ಡಾ.ಎಂ.ಸಿ.ಸುಧಾಕರ್ ಭಾಗವಹಿಸುವರು. ಫೆ.12ರ ಮಧ್ಯಾಹ್ನ 12ಕ್ಕೆ ಧರ್ಮಸಭೆಯನ್ನು ಏರ್ಪಡಿಸಲಾಗಿದ್ದು, ಜಿಲ್ಲಾ ಉಸ್ತುವಾರಿ ಸಚಿವ ಮಹದೇವಪ್ಪ ಸಮಾರೋಪ ಭಾಷಣ ಮಾಡುವರು.…
ಬೆಂಗಳೂರು: ಬೆಂಗಳೂರಿನ ಯಲಹಂಕ ವಾಯುಪಡೆ ನೆಲೆಯಲ್ಲಿ ಇಂದಿನಿಂದ 5 ದಿನಗಳ ಕಾಲ ಏರೋ ಇಂಡಿಯಾ ಶೋ ನಡೆಯಲಿದ್ದು, ಏಷ್ಯಾದ ಅತಿದೊಡ್ಡ ವೈಮಾನಿಕ ಪ್ರದರ್ಶನಕ್ಕೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಚಾಲನೆ ನೀಡಲಿದ್ದಾರೆ. ಏರೋ ಇಂಡಿಯಾದಲ್ಲಿ ಒಟ್ಟು 90 ದೇಶಗಳು ಪಾಲ್ಗೊಳ್ಳುತ್ತಿದ್ದು, ಏರ್ ಶೋದಲ್ಲಿ 70 ಕ್ಕೂ ಹೆಚ್ಚು ಪ್ರದರ್ಶನ ನೀಡಲಿರುವ ಯುದ್ದ ವಿಮಾನ, ಸರಕು ,ತರಬೇತಿ ವಿಮಾನಗಳು. ಏರ್ ಶೋ ನೋಡಲು 5 ದಿನಗಳಲ್ಲಿ 7 ಲಕ್ಷ ಜರು ಆಗಮಿಸುವ ನಿರೀಕ್ಷೆ ಇದೆ. ಏರ್ ಶೋ 2025 ಫೆಬ್ರವರಿ 10ರಿಂದ ಫೆಬ್ರವರಿ 14ರ ವರೆಗೆ ಪ್ರತಿದಿನವೂ ಬೆಳಿಗ್ಗೆ 9ರಿಂದ ಸಂಜೆ 6ರವರೆಗೆ ನಡೆಯಲಿದೆ. ಫೆಬ್ರವರಿ 13 ಹಾಗೂ 14ರಂದು ಸಾರ್ವಜನಿಕರಿಗೆ ಅವಕಾಶ ಇರಲಿದೆ. ಟಿಕೆಟ್ ದರ ಎಷ್ಟು? ಭಾರತೀಯರಿಗೆ 2,500 ರೂಪಾಯಿ ಇದ್ದರೆ, ವಿದೇಶಿಗರಿಗೆ 50 ಯುಎಸ್ ಡಾಲರ್ ಇರಲಿದೆ. ಎಡಿವಿಎ ಪಾಸ್: ಭಾರತೀಯರಿಗೆ 1,000 ರೂ ವಿದೇಶಿಗರಿಗೆ 50 ಯುಎಸ್ ಡಾಲರ್ ವ್ಯಾಪಾರ ಪಾಸ್ : ಭಾರತೀಯರಿಗೆ 5,000…
ದೇಶದ ಪ್ರಗತಿ ಮತ್ತು ಸಮೃದ್ಧಿಯಲ್ಲಿ ಮಹಿಳೆಯರ ಭಾಗವಹಿಸುವಿಕೆ ಬಹಳ ಮುಖ್ಯ. ಇದನ್ನು ಗಮನದಲ್ಲಿಟ್ಟುಕೊಂಡು, ಸ್ವಾತಂತ್ರ್ಯದ ನಂತರ, ಮಹಿಳೆಯರಿಗೆ ಆರ್ಥಿಕ ಮತ್ತು ಸಾಮಾಜಿಕ ಮಟ್ಟದಲ್ಲಿ ಅವರನ್ನು ಬಲಪಡಿಸಲು ಅನೇಕ ಸಾಂವಿಧಾನಿಕ ಹಕ್ಕುಗಳನ್ನು ನೀಡಲಾಗಿದೆ. ಇವುಗಳಲ್ಲಿ ಒಂದು ಪ್ರಮುಖ ಅಂಶವೆಂದರೆ ಆಸ್ತಿಯ ಮೇಲೆ ಮಹಿಳೆಯರ ಹಕ್ಕುಗಳು. ಮಹಿಳೆಯರ ಆಸ್ತಿಯ ಹಕ್ಕು ಅವರನ್ನು ಆರ್ಥಿಕವಾಗಿ ಸಬಲಗೊಳಿಸುವುದಲ್ಲದೆ, ಕುಟುಂಬದ ನಿರ್ಧಾರಗಳನ್ನು ತೆಗೆದುಕೊಳ್ಳುವಲ್ಲಿಯೂ ಸಹಾಯ ಮಾಡುತ್ತದೆ. 2005 ರಲ್ಲಿ, ಮಹಿಳೆಯರಿಗೆ ಪೂರ್ವಜರ ಆಸ್ತಿಯಲ್ಲಿ ಸಮಾನ ಹಕ್ಕುಗಳನ್ನು ನೀಡಲು ಹಿಂದೂ ಉತ್ತರಾಧಿಕಾರ ನಿಯಮಗಳಲ್ಲಿ ಪ್ರಮುಖ ತಿದ್ದುಪಡಿಗಳನ್ನು ಮಾಡಲಾಯಿತು. ಇದು ಭಾರತದ ಸಾಮಾಜಿಕ ಮತ್ತು ಆರ್ಥಿಕ ಅಭಿವೃದ್ಧಿಯತ್ತ ಒಂದು ಪ್ರಮುಖ ಹೆಜ್ಜೆಯಾಗಿತ್ತು. ಆದಾಗ್ಯೂ, ಮಹಿಳೆಯರಿಗೆ ಯಾವ ಆಸ್ತಿ ಹಕ್ಕುಗಳನ್ನು ಹೆಚ್ಚಾಗಿ ನೀಡಲಾಗುತ್ತದೆ? ಈ ಬಗ್ಗೆ ಸಾಕಷ್ಟು ಗೊಂದಲಗಳಿವೆ. ಅನೇಕ ಜನರಿಗೆ ಈ ಪ್ರಶ್ನೆ ಇರುತ್ತದೆ. ಗಂಡನು ತನ್ನ ಹೆಂಡತಿಯ ಆಸ್ತಿಯನ್ನು ಅವಳ ಅನುಮತಿಯಿಲ್ಲದೆ ಮಾರಾಟ ಮಾಡಬಹುದೇ? ನೀವು ಸಹ ಇದರ ಬಗ್ಗೆ ತಿಳಿದುಕೊಳ್ಳಲು ಬಯಸಿದರೆ, ಇಂದು ನಾವು ಇದರ ಬಗ್ಗೆ ನಿಮಗೆ…
ಹುಬ್ಬಳ್ಳಿ : ನಟೋರಿಯಸ್ ಆರೋಪಿ ಮಂಜುನಾಥ್ ಅಲಿಯಾಸ್ ಸೈಂಟಿಸ್ಟ್ ಮಂಜ್ಯಾ ಸೇರಿದಂತೆ ಮೂವರನ್ನು ಹುಬ್ಬಳ್ಳಿ ಪೊಲೀಸರು ಬಂಧಿಸಿದ್ದಾರೆ. ಕೊಲೆ, ಸುಲಿಗೆ, ದರೋಡೆ ಸೇರಿದಂತೆ ವಿವಿಧ ಪ್ರಕರಣದಲ್ಲಿ ಬೇಕಾಗಿದ್ದ ಕುಖ್ಯಾತ ಆರೋಪಿ ಸೈಂಟಿಸ್ಟ್ ಮಂಜ್ಯಾ, ಪತ್ನಿ ಮುಸ್ಕಾನ್, ಮಗಳು ಮಾಲಾ ಸೇರಿದಂತೆ ಮೂವರನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಆಯುಕ್ತ ಎನ್.ಶಶಿಕುಮಾರ ತಿಳಿಸಿದರು. ಗೋಪನಕೊಪ್ಪದ ಶಿವಕಾಲೋನಿಯ ಕುಖ್ಯಾತ ಆರೋಪಿ ಮಂಜುನಾಥ ಸೈಂಟಿಸ್ಟ್ ಮಂಜ್ಯಾ ಬಂಡಾರಿಯನ್ನು ಕೊಲೆಗೆ ಯತ್ನಿಸಿದ ಪ್ರಕರಣದಲ್ಲಿ ಬಂಧಿಸಲಾಗಿದೆ. ಅಬ್ದುಲಖಾದರ ಕುಂದಗೋಳ ಎಂಬುವರ ಮೇಲೆ ಕೊಲೆಗೆ ಯತ್ನದ ಆರೋಪದ ಮೇಲೆ ಬಂಧಿಸಲಾಗಿದೆ. ಈತನು ಈ ಹಿಂದೆ ಕೊಲೆ, ಕೊಲೆ ಯತ್ನ, ಧರೋಡೆ, ಮನೆಗಳ್ಳತನ, ಹಲ್ಲೆ ಪ್ರಕರಣ, ಎನ್‌ಡಿಪಿಎಸ್ ಪ್ರಕರಣಗಳಲ್ಲಿ ಭಾಗಿಯಾಗಿದ್ದರಿಂದ ಈತನ ಮೇಲೆ ಬೇರೆ ಬೇರೆ ಪೊಲೀಸ್ ಠಾಣೆಗಳಲ್ಲಿ 30 ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿವೆ ಎಂದು ಮಾಹಿತಿ ನೀಡಿದ್ದಾರೆ.














