Author: kannadanewsnow57

ಇತ್ತೀಚಿನ ದಿನಗಳಲ್ಲಿ ಅನೇಕ ಚಿಕ್ಕ ಮಕ್ಕಳು ಮೊಬೈಲ್ ಫೋನ್‌ಗಳಿಗೆ ವ್ಯಸನಿಯಾಗಿದ್ದಾರೆ ಮತ್ತು ಮೊಬೈಲ್ ಇಲ್ಲದೆ ಅವರು ಸರಿಯಾಗಿ ಊಟ ಮಾಡಲು ಸಹ ಸಾಧ್ಯವಿಲ್ಲ.ಅವರಿಗೆ ಪ್ರತಿಯೊಂದು ಕೆಲಸಕ್ಕೂ ಮೊಬೈಲ್ ಬೇಕು. ಆದರೆ ಮಕ್ಕಳು ತಿಳಿಯದೆಯೇ ತಮ್ಮ ಪೋಷಕರಿಂದ ಮೊಬೈಲ್ ಫೋನ್ ಬಳಸುವ ಅಭ್ಯಾಸವನ್ನು ಪಡೆಯುತ್ತಾರೆ ಎಂಬುದೂ ಸತ್ಯ. ಈ ಅಭ್ಯಾಸ ಮಕ್ಕಳ ಜೀವನವನ್ನು ಹಾಳುಮಾಡಬಹುದು. ಅತಿಯಾದ ಮೊಬೈಲ್ ಬಳಕೆಯಿಂದಾಗಿ ಮಕ್ಕಳು ತಮ್ಮ ಸುತ್ತ ಏನು ನಡೆಯುತ್ತಿದೆ ಎಂಬುದನ್ನು ಅರ್ಥಮಾಡಿಕೊಳ್ಳಲು ಸಾಧ್ಯವಾಗುವುದಿಲ್ಲ. ಇದೇ ಅಭ್ಯಾಸ ಅವರನ್ನು ತಪ್ಪು ದಾರಿಗೆ ಕೊಂಡೊಯ್ಯುತ್ತದೆ. ಈ ಸಮಯದಲ್ಲಿ, ಸಾಮಾಜಿಕ ಮಾಧ್ಯಮದಲ್ಲಿ ಆಘಾತಕಾರಿ ವೀಡಿಯೊವೊಂದು ವೈರಲ್ ಆಗುತ್ತಿದೆ, ಇದರಲ್ಲಿ ಮಗುವೊಂದು ಮಲಗಿರುವಾಗ ಗೊಣಗುತ್ತಿರುವುದು ಕಂಡುಬರುತ್ತದೆ. ಈ ವೀಡಿಯೊವನ್ನು @anil_karandekar ಅವರು Instagram ನಲ್ಲಿ ಹಂಚಿಕೊಂಡಿದ್ದಾರೆ, ಇದರಲ್ಲಿ ಒಂದು ಪುಟ್ಟ ಮಗು ನಿದ್ದೆ ಮಾಡುವಾಗ ಏನೋ ಗೊಣಗುತ್ತಿದೆ. ಸುತ್ತಮುತ್ತಲಿನ ಅನೇಕ ಜನರು ಅವನನ್ನು ಶಾಂತಗೊಳಿಸಲು ಅವನ ಕೈಗಳನ್ನು ಉಜ್ಜುತ್ತಾ ಮತ್ತು ತಲೆಯನ್ನು ಸವರುತ್ತಾ ಇರುವುದನ್ನು ಕಾಣಬಹುದು, ಆದರೆ ಮಗು ಮಾತನಾಡುವುದನ್ನು ನಿಲ್ಲಿಸುವುದಿಲ್ಲ.…

Read More

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್ ಎನ್ನುವಂತೆ ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆ ಉತ್ತೀರ್ಣದ ಅವಧಿಯನ್ನು ಡಿಸೆಂಬರ್ 31, 2025ರವರೆಗೆ ಸರ್ಕಾರ ವಿಸ್ತರಿಸಿ ಆದೇಶಿಸಿದೆ. ಹೀಗಾಗಿ ಸರ್ಕಾರಿ ನೌಕರರು  ಈ ಅವಧಿಯೊಳಗೆ ಪರೀಕ್ಷೆ ಉತ್ತೀರ್ಣರಾಗದೇ ಇದ್ದಲ್ಲಿ ವಾರ್ಷಿಕ ಬಡ್ತಿಗೆ ಅನರ್ಹವಾಗಲಿದ್ದಾರೆ. ಈ ಪರೀಕ್ಷೆಯು ಸರ್ಕಾರಿ ನೌಕರರ ಪರಿವೀಕ್ಷಣಾ ಅವಧಿ,ಮುಂಬಡ್ತಿ ಹಾಗೂ ವಾರ್ಷಿಕ ವೇತನ ಬಡ್ತಿಗೆ ಒಂದು ಅರ್ಹತಾ ಮಾನದಂಡವಾಗಿರುತ್ತದೆ. ಈ ಪರೀಕ್ಷೆಯಲ್ಲಿ ಉತ್ತೀರ್ಣರಾಗಲು ಅವಧಿ 31-12-24 ರವರೆಗೆ ಅವಕಾಶ ನೀಡಲಾಗಿತ್ತು‌. ಇದೀಗ ಸದರಿ ಪರೀಕ್ಷೆ ಪಾಸ್ ಮಾಡಲು ಡಿಸೆಂಬರ್ 31 2025 ರವರೆಗೆ ವಿಸ್ತರಿಸಲಾಗಿದೆ. ಈ ಅವಧಿಯೊಳಗೆ ಕಂಪ್ಯೂಟರ್ ಪರೀಕ್ಷೆಯಲ್ಲಿ ಉತ್ತೀರ್ಣರಾಗದೇ ಇದ್ದಲ್ಲಿ ವಾರ್ಷಿಕ ಬಡ್ತಿ ಯಲ್ಲಿ ಅರ್ಹನಾಗತಕ್ಕದ್ದಲ್ಲ ಎಂದು ನಿಯಮಗಳಲ್ಲಿ ಸ್ಪಷ್ಟಪಡಿಸಲಾಗಿದೆ. ರಾಜ್ಯ ಸರ್ಕಾರಿ ನೌಕರರಿಗೆ ಕಂಪ್ಯೂಟರ್ ಬಳಕೆಯ ಸಾಮಾನ್ಯ ಜ್ಞಾನವನ್ನು ಕಡ್ಡಾಯಗೊಳಿಸುವ ನಿಟ್ಟಿನಲ್ಲಿ ಕರ್ನಾಟಕ ಸಿವಿಲ್ ಸೇವಾ ನಿಯಮಗಳು 2012 ನ್ನು ರೂಪಿಸಲಾಗಿದೆ. ಈ ನಿಯಮಾವಳಿಗಳ ನಿಯಮ 1(3) ರಲ್ಲಿ ನಿರ್ಧಿಷ್ಟಪಡಿಸಿರುವ ಕೆಲವೊಂದು ಹುದ್ದೆಗಳನ್ನು ಹೊರತುಪಡಿಸಿ ಉಳಿದ ಸರ್ಕಾರಿ…

Read More

ಬಳ್ಳಾರಿ : ಮಹಿಳೆಯರನ್ನು ಪ್ರಮುಖ ಫಲಾನುಭವಿಗಳನ್ನಾಗಿ ಕೇಂದ್ರೀಕರಿಸಿ ರಾಜ್ಯದಲ್ಲಿ ಜಾರಿಗೊಳಿಸಿರುವ ಐದು ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಮೂಲಕ ಕರ್ನಾಟಕ ಸಾಧಿಸಿರುವ ಲಿಂಗ ಸಮಾನತೆಯ ಉಪಕ್ರಮಗಳಿಗೆ ವಿಶ್ವಸಂಸ್ಥೆ ಸಾಮಾನ್ಯ ಸಭೆಯ ಅಧ್ಯಕ್ಷ ಕ್ಯಾಮರೂನ್ನ ಫಿಲೆಮನ್ ಯಾಂಗ್ ಮೆಚ್ಚುಗೆ ಸೂಚಿಸಿದ್ದಾರೆ. ಅವರು ಶುಕ್ರವಾರ ಬೆಂಗಳೂರಿಗೆ ಭೇಟಿ ನೀಡಿದ ಸಂದರ್ಭದಲ್ಲಿ ನಗರದ ಖಾಸಗಿ ಹೋಟೆಲ್ ತಾಜ್ ವೆಸ್ಟೆಂಡ್ನಲ್ಲಿ ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್ ಅವರು ಸ್ವಸಹಾಯ ಗುಂಪಿನ ಮಹಿಳೆಯರು ರೇಷ್ಮೆ ಗೂಡುಗಳಿಂದ ತಯಾರಿಸಿದ ಪುಷ್ಪಗುಚ್ಛದೊಂದಿಗೆ ಸ್ವಾಗತಿಸಿದರು. ಒಂದು ಜಗತ್ತು ಹಲವು ಸಾಧ್ಯತೆಗಳನ್ನು ಬಿಂಬಿಸುವ ಕರ್ನಾಟಕ ಕುರಿತಾದ ಪುಸ್ತಕವನ್ನು ನೀಡಿದರು. ಸುಸ್ಥಿರ ಅಭಿವೃದ್ಧಿ ಗುರಿಗಳ (SDG) ಸಾಧನೆಯಲ್ಲಿ ಕರ್ನಾಟಕವು ಉನ್ನತ ಸ್ಥಾನ ಪಡೆಯಲು ಸಾಧ್ಯವಾಗಿರುವ ಬಗ್ಗೆ ವಿಶ್ವಸಂಸ್ಥೆಯ ಅಧ್ಯಕ್ಷರು ಆಸಕ್ತಿಯಿಂದ ಹೆಚ್ಚು ಮಾಹಿತಿ ಹಾಗೂ ವಿವರಗಳನ್ನು ಬಯಸಿದರು. ಗ್ಯಾರಂಟಿ ಯೋಜನೆಗಳಲ್ಲಿ ಮಹಿಳೆಯರ ಕೈಗೆ ನಗದು ಹಣ ನೀಡುವ ಗೃಹಲಕ್ಷ್ಮಿ, ಮಹಿಳೆಯರಿಗೆ ಉಚಿತ ಬಸ್ ಪ್ರಯಾಣದ ಅವಕಾಶ ನೀಡುವ ಶಕ್ತಿ, ಕಾರ್ಮಿಕ ಕ್ಷೇತ್ರದಲ್ಲಿ ಮಹಿಳೆಯರ ಭಾಗವಹಿಸುವಿಕೆಯ…

Read More

ಬೆಂಗಳೂರು : ಎಸ್ಎಸ್ಎಲ್ ಸಿ ಮುಖ್ಯ ಪರೀಕ್ಷೆ ನಡೆಸುವ ರೀತಿಯಲ್ಲೇ ಶಿಸ್ತುಬದ್ಧವಾಗಿ ಹಾಗೂ ಪಾರದರ್ಶಕವಾಗಿ  ಪೂರ್ವಸಿದ್ಧತಾ ಪರೀಕ್ಷೆ ನಡೆಸಬೇಕೆಂದು ಶಿಕ್ಷಕರು ಹಾಗೂ ಅಧಿಕಾರಿಗಳಿಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಮಹತ್ವದ ಸೂಚನೆ ನೀಡಿದೆ.  ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಈ ಕುರಿತು ಮಾರ್ಗಸೂಚಿ ಹೊರಡಿಸಿದ್ದು, ಪ್ರಶ್ನೆ ಪತ್ರಿಕೆ ಸೋರಿಕೆ, ನಕಲು ಮಾಡುವುದು, ವಾಟ್ಸಪ್ ಸೇರಿ ಜಾಲತಾಣಗಳಲ್ಲಿ ಪತ್ರಿಕೆಯನ್ನು ಹಂಚುವುದು, ಪರೀಕ್ಷಾ ಕೇಂದ್ರಕ್ಕೆ ಚೀಟಿಗಳನ್ನು ಹಂಚುವುದು ಸೇರಿ ಯಾವುದೇ ರೀತಿಯ ಅಕ್ರಮ ನಡೆಸಿದರೆ ಅವರ ವಿರುದ್ಧ ಕರ್ನಾಟಕ ಶಿಕ್ಷಣ ಕಾಯ್ದೆ ಅನುಸಾರ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಎಚ್ಚರಿಕೆ ನೀಡಿದೆ. ಹೀಗಿದೆ SSLC ಪೂರ್ವ ಸಿದ್ಧತಾ ಪರೀಕ್ಷೆ ವೇಳಾಪಟ್ಟಿ

Read More

ಮೈಸೂರು: ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿನ ಮಹಾ ಕುಂಭಮೇಳದ ಬೆನ್ನಲ್ಲೇ ಕರ್ನಾಟಕದಲ್ಲೂ ನಾಳೆಯಿಂದ 3 ದಿನ ಕುಂಭಮೇಳ ನಡೆಯಲಿದೆ. ಭಕ್ತರಿಗೆ ಪುಣ್ಯ ಸ್ನಾನ ಮಾಡಲು 5 ಕಡೆ ಸ್ಥಳ ಗುರುತು ಮಾಡಲಾಗಿದೆ. ಮೈಸೂರು ಜಿಲ್ಲಾಡಳಿತ ಹಾಗೂ ಕುಂಭಮೇಳ ಆಚರಣಾ ಸಮಿತಿ ಸಹಯೋಗದೊಂದಿಗೆ 13ನೇ ಕುಂಭಮೇಳವನ್ನು ಫೆ.10, 11 ಮತ್ತು 12 ರಂದು ಜಿಲ್ಲೆಯ ಟಿ. ನರಸೀಪುರದ ಶ್ರೀ ಕ್ಷೇತ್ರ ತಿರುಮಕೂಡಲು ತ್ರಿವೇಣಿ ಸಂಗಮದಲ್ಲಿ ಆಯೋಜಿಸಲಾಗಿದೆ. ಫೆ.10ರ ಬೆಳಗ್ಗೆ 8.30ಕ್ಕೆ ಶ್ರೀ ಅಗಸ್‌ತ್ಯೇಶ್ವರ ಸ್ವಾಮಿ ಸನ್ನಿಧಿಯಲ್ಲಿ ಅನುಜ್ಞಾ ಕಾರ್ಯಕ್ರಮ, ಅಂಕುರಾರ್ಪಣೆ ಮತ್ತು ಧ್ವಜಾರೋಹಣ ನೆರವೇರಲಿದೆ. ಸಮಾಜ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್ .ಸಿ.ಮಹದೇವಪ್ಪ ಧ್ವಜಾರೋಹಣನೆರವೇರಿಸಿ, ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಫೆ.11ರಬೆಳಗ್ಗೆ 11ಕ್ಕೆಧಾರ್ಮಿಕಸಭೆಯನ್ನು ಏರ್ಪಡಿಸಲಾಗಿದ್ದು, ಪಶುಸಂಗೋಪನೆ ಮತ್ತು ರೇಷ್ಮೆ ಸಚಿವ ಕೆ. ವೆಂಕಟೇಶ್ ಉದ್ಘಾಟಿಸುವರು. ಸಚಿವರಾದ ಮಹದೇವಪ್ಪ, ಎಂ.ಬಿ.ಪಾಟೀಲ್, ದಿನೇಶ್ ಗುಂಡೂರಾವ್, ಡಾ.ಎಂ.ಸಿ.ಸುಧಾಕ‌ರ್ ಭಾಗವಹಿಸುವರು. ಫೆ.12ರ ಮಧ್ಯಾಹ್ನ 12ಕ್ಕೆ ಧರ್ಮಸಭೆಯನ್ನು ಏರ್ಪಡಿಸಲಾಗಿದ್ದು, ಜಿಲ್ಲಾ ಉಸ್ತುವಾರಿ ಸಚಿವ ಮಹದೇವಪ್ಪ ಸಮಾರೋಪ ಭಾಷಣ ಮಾಡುವರು.

Read More

ಬೆಂಗಳೂರು : ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ಎಸ್‌ಎಸ್‌ಎಲ್‌ಸಿ ಪೂರ್ವ ಸಿದ್ಧತಾ ಪರೀಕ್ಷೆ ವೇಳಾಪಟ್ಟಿಯನ್ನು ಪ್ರಕಟಿಸಿದ್ದು, ಫೆ.25 ರಿಂದ ಮಾ. 4ರವರೆಗೆ ಪರೀಕ್ಷೆ ನಡೆಯಲಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ಈ ಬಾರಿಯೂ ಏಕ ರೂಪದ ಪ್ರಶ್ನೆ ಪತ್ರಿಕೆ ಸಿದ್ದಪಡಿಸಿ ನೀಡಲು ನಿರ್ಧರಿಸಿದೆ. ಪ್ರಶ್ನೆ ಪತ್ರಿಕೆಗಳನ್ನು ಮಂಡಳಿಯು ಎಲ್ಲಾ ಜಿಲ್ಲಾ ಉಪ ನಿರ್ದೇಶಕರಿಗೆ ಆನ್‌ಲೈನ್‌ ಮೂಲಕ ಕಳುಹಿಸಲಿದೆ. SSLC ಪೂರ್ವ ಸಿದ್ಧತಾ ಪರೀಕ್ಷೆ ವೇಳಾಪಟ್ಟಿ ಹೀಗಿದೆ ಫೆ.25- ಪ್ರಥಮ ಭಾಷೆ ಫೆ.27- ಗಣಿತ ಫೆ.28 – ದ್ವಿತೀಯ ಭಾಷೆ ಮಾ.1- ತೃತೀಯ ಭಾಷೆ, ಮಾ.3 – ವಿಜ್ಞಾನ ಮಾ.4-ಸಮಾಜ ವಿಜ್ಞಾನ ಎಲ್ಲ ಪರೀಕ್ಷೆಗಳೂ ಬೆಳಗ್ಗೆ 10ಕ್ಕೆ ಆರಂಭವಾಗಲಿದ್ದು, ದ್ವಿತೀಯ ಮತ್ತು ತೃತೀಯ ಭಾಷಾ ಪರೀಕ್ಷೆಗಳು ಮಧ್ಯಾಹ್ನ -1 ಗಂಟೆವರೆಗೆ, ಉಳಿದ ಪರೀಕ್ಷೆಗಳು ಮಾಧ್ಯಾಹ್ನ 1.15ರವರೆಗೆ ನಡೆಯಲಿವೆ.

Read More

ಬೆಂಗಳೂರು : ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಡಿ ಜಿಲ್ಲಾ ಸಾರ್ವಜನಿಕ ಆಸ್ಪತ್ರೆಗಳಲ್ಲಿ ಪಿಪಿಪಿ ಮಾದರಿಯಲ್ಲಿ ಒದಗಿಸಲಾಗುತ್ತಿರುವ CT Scan ಮತ್ತು MRI Scan ಸೇವೆಗಳಿಗೆ ಶುಲ್ಕ ನಿಗಧಿಪಡಿಸುವ ಬಗ್ಗೆ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಆದೇಶದಲ್ಲಿ ಏನಿದೆ? ಮೇಲೆ ಓದಲಾದ ಕ್ರಮ ಸಂಖ್ಯೆ (1) ರ ಆದೇಶದಲ್ಲಿ 2016-17 ನೇ ಸಾಲಿನ ಆಯವ್ಯಯ ಭಾಷಣದ ಖಂಡಿಕೆ-125 ರಲ್ಲಿ ಘೋಷಿಸಿರುವಂತೆ ಉಚಿತ ರೋಗ ಪತ್ತೆ ಮತ್ತು ಸೇವೆಗಳನ್ನು ಅನುಷ್ಠಾನಗೊಳಿಸಲು CT & MRI Scan ಸೇವೆಗಳನ್ನು ಸರ್ಕಾರಿ ಹಾಗೂ ಖಾಸಗಿ ಸಹಭಾಗಿತ್ವದಲ್ಲಿ (PPP) ಮಾದರಿಯಲ್ಲಿ ಪಡೆಯಲು ಅನುಮೋದನೆ ನೀಡಲಾಗಿದೆ. ಮೇಲೆ ಓದಲಾದ ಕ್ರಮ ಸಂಖ್ಯೆ (2) ರ ಆದೇಶದಲ್ಲಿ 14 ಜಿಲ್ಲಾ ಆಸ್ಪತ್ರೆಗಳಲ್ಲಿ CT Scan ಅನ್ನು PPP ಮಾದರಿಯಲ್ಲಿ ಪ್ರತಿ Scan ಗೆ ರೂ. 1,550/- ದರದಲ್ಲಿ ಹಾಗೂ 5 ಜಿಲ್ಲಾ ಆಸ್ಪತ್ರೆಗಳಲ್ಲಿ MRI Scan ಅನ್ನು ಪ್ರತಿ Scan ಗೆ ರೂ. 3,000/- ದರದಲ್ಲಿ ಕೈಗೊಳ್ಳಲು ಅನುಮೋದನೆ…

Read More

ದಾವಣಗೆರೆ : ಶಿಕ್ಷಕ ಹುದ್ದೆ ಆಕಾಂಕ್ಷಿಗಳಿಗೆ ರಾಜ್ಯ ಸರ್ಕಾರವು ಭರ್ಜರಿ ಸಿಹಿಸುದ್ದಿ ನೀಡಿದ್ದು, ಶೀಘ್ರವೇ 25,000 ಶಿಕ್ಷಕರ ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಎಂದು ಶಿಕ್ಷಣ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್.ಮಧು ಬಂಗಾರಪ್ಪ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 2025-26 ನೇ ಸಾಲಿನಲ್ಲಿ ಸರ್ಕಾರಿ, ಅನುದಾನಿತ ಹಾಗೂ ಕಲ್ಯಾಣ ಕರ್ನಾಟಕ ಭಾಗದಲ್ಲಿ 25 ಸಾವಿರ ಶಿಕ್ಷಕರ ಹುದ್ದೆಗಳನ್ನು ಭರ್ತಿ ಮಾಡಲು ಬಜೆಟ್ ಅನುಮೋದನೆ ನೀಡಲು ಪ್ರಸ್ತಾವನೆ ಸಿದ್ಧಪಡಿಸಲಾಗಿದೆ. ಶಿಕ್ಷಕರ ಕೊರತೆ ನೀಗಿಸಲು ಈಗಾಗಲೇ 13500 ಶಿಕ್ಷಕರ ನೇಮಕಾತಿಗೆ ಆದೇಶ ನೀಡಲಾಗಿದೆ. ಆದರೂ 50 ಸಾವಿರ ಶಿಕ್ಷಕರ ಹುದ್ದೆಗಳು ಖಾಲಿ ಇರುವುದರಿಂದ ಹಂತ ಹಂತವಾಗಿ ಖಾಲಿ ಹುದ್ದೆಗಳನ್ನು ಭರ್ತಿಗೆ ಕ್ರಮ ವಹಿಸಲಾಗುತ್ತದೆ ಎಂದರು. ಕಲ್ಯಾಣ ಕರ್ನಾಟಕ ಸೇರಿದಂತೆ ರಾಜ್ಯಾದ್ಯಂತ 25,000 ಶಿಕ್ಷಕರು ಸರ್ಕಾರಿ ಶಾಲೆಗಳಲ್ಲಿ ಖಾಲಿ ಹುದ್ದೆಗಳು ತೀವ್ರವಾಗಿ ಕಡಿಮೆಯಾಗುತ್ತವೆ. ಕಲ್ಯಾಣ-ಕರ್ನಾಟಕದ ವಿದ್ಯಾರ್ಥಿಗಳಿಗೆ ಶಿಕ್ಷಣ ನೀಡುವ ಬಗ್ಗೆ ವಿಶೇಷ ಒತ್ತು ನೀಡಲಾಗುವುದು ಎಂದು ತಿಳಿಸಿದ್ದಾರೆ.

Read More

ಬೆಂಗಳೂರು :ಸಾರಿಗೆ ಬಸ್ ಪ್ರಯಾಣ ದರ ಏರಿಕೆ ಬೆನ್ನಲ್ಲೇ ಇದೀಗ ನಮ್ಮ ಮೆಟ್ರೋ ರೈಲು ಪ್ರಯಾಣ ದರವನ್ನು ಶೇ.40ರಿಂದ 50ರಷ್ಟು ಹೆಚ್ಚಳ ಮಾಡಲಾಗಿದ್ದು, ನೂತನ ದರ ಇಂದಿನಿಂದಲೇ ಜಾರಿಗೆ ಬರಲಿದೆ. ಮೊದಲ 2ಕಿ.ಮೀ.ಸಂಚಾರಕ್ಕೆ ಯಾವುದೇ ಹೆಚ್ಚಳ ಮಾಡಿಲ್ಲ. ನಂತರದ ಪ್ರಯಾಣ ದರವನ್ನು ಭಾರೀ ಏರಿಕೆ ಮಾಡಲಾಗಿದೆ. ಅದರಲ್ಲೂ ಅಂತಿಮ ಹಂತದ ಪ್ರಯಾಣ ದರವನ್ನು ಶೇ.50ರಷ್ಟು ಹೆಚ್ಚಿಸಲಾಗಿದೆ. ದರ ಪರಿಷ್ಕರಣೆ ಸಮಿತಿಯ ಶಿಫಾರಸ್ಸಿನಂತೆ, ಇದೇ ಫೆಬ್ರವರಿ 9/2025 ರಿಂದ ನಮ್ಮ ಮೆಟ್ರೋ ದಲ್ಲಿ ಪರಿಷ್ಕೃತ ದರ ಜಾರಿಯಾಗಲಿದೆ. ಸ್ಮಾರ್ಟ್ ಕಾರ್ಡ್‌ಗಳ ಮೇಲೆ ಶೇ. 5 ರಷ್ಟು ರಿಯಾಯಿತಿ ಮುಂದುವರಿಯುತ್ತದೆ ಎಂದು ಬಿಎಂಆರ್‌ಸಿಎಲ್‌ ಮಾಹಿತಿ ನೀಡಿದೆ. ಹೀಗಿದೆ ನೂತನ ದರ 0-2 ಕಿ.ಮೀ ಪ್ರಯಾಣಕ್ಕೆ 10 ರೂ ಟಿಕೆಟ್ ದರ ಹೆಚ್ಚಳ 2-4 ಕಿ.ಮೀ ಪ್ರಯಾಣಕ್ಕೆ 20 ರೂ ಟಿಕೆಟ್ ದರ ಹೆಚ್ಚಳ 4-6 ಕಿ.ಮೀ ಪ್ರಯಾಣಕ್ಕೆ 30 ರೂ ಟಿಕೆಟ್ ದರ ಹೆಚ್ಚಳ 6-8 ಕಿ.ಮೀ ಪ್ರಯಾಣಕ್ಕೆ 40 ರೂ ಟಿಕೆಟ್ ದರ…

Read More

ಬೆಂಗಳೂರು: 66/11 kV ನಂದಿನಿ ಲೇಔಟ್ ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ ಈ ಕೆಳಕಂಡ ಪ್ರದೇಶಗಳಲ್ಲಿ ದಿನಾಂಕ 09.02.2025 (ಭಾನುವಾರ) ರಂದು ಬೆಳಗ್ಗೆ 10:00 ರಿಂದ ಸಂಜೆ 01:00 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ. ಈ ಪ್ರದೇಶಗಳಲ್ಲಿ ಭಾನುವಾರ ವಿದ್ಯುತ್ ವ್ಯತ್ಯಯ ಕೃಷ್ಣಾನಂದ ನಗರ, RMC ಯಾರ್ಡ್, ಮಾರಪ್ಪನ ಪಾಳ್ಯ, ಯಶವಂತಪುರ ಕೈಗಾರಿಕಾ ಪ್ರದೇಶ, ದೂರವಾಣಿ ವಿನಿಮಯ ಕೇಂದ್ರ, ಶಂಕರ್ ನಗರ, ಶ್ರೀಕಂಠೇಶ್ವರ ನಗರ, ಸೋಮೇಶ್ವರ ನಗರ, ಆಪ್ಮಾ ಯಾರ್ಡ್, ಮಹಾಲಕ್ಷ್ಮಿ ಲೇಔಟ್, ಗಣೇಶ ಬ್ಲಾಕ್, ಆಂಜನೇಯ ಟೆಂಪಲ್‌ರೋಡ್, ಸರಸ್ವತಿ ಪುರಂ, ದಾಸನಾಯಕ ಲೇಔಟ್, ದಾಸನಾಯಕ ಲೇಔಟ್, ದಾಸನಾಯಕ ಲೇಔಟ್ ಕೈಗಾರಿಕಾ ಪ್ರದೇಶ, ಜೆ.ಎಸ್.ನಗರ, ಜೆ.ಸಿ.ನಗರ, ಕುರುಬರಹಳ್ಳಿ, 60 ಅಡಿ ರಸ್ತೆ, 9ನೇ, 10ನೇ, 11ನೇ, 12ನೇ, 13ನೇ, 14ನೇ ಮತ್ತು 15ನೇ ಮುಖ್ಯ, ಜೆ.ಸಿ.ನಗರ, ಸಾರ್ವಜನಿಕ ರಸ್ತೆ, ಇವ್ಸ್, ರಾಜ್‌ಕುಮಾರ್ ಸಮಾಧಿ ರಸ್ತೆಗಳು, ಕ್ವಾಟ್ರಸ್ ಸುತ್ತಮುತ್ತ ಪ್ರದೇಶಗಳು̤

Read More