Subscribe to Updates
Get the latest creative news from FooBar about art, design and business.
Author: kannadanewsnow57
ಬೆಂಗಳೂರು : ಎಐಸಿಸಿ ಒಬಿಸಿ ರಾಷ್ಟ್ರೀಯ ಘಟಕಕ್ಕೆ ನೇಮಕ ವಿಚಾರಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನೇಮಕದ ಬಗ್ಗೆ ನನಗೆ ಗೊತ್ತಿಲ್ಲ. ಎಐಸಿಸಿಯವರ ಜೊತೆಗೆ ಮಾತನಾಡುತ್ತೇನೆ. ಜುಲೈ 15 ರಂದು ಒಂದು ಸಭೆ ಮಾಡಿ ಅಂತಾ ನನಗೆ ಹೇಳಿದ್ದರು. ಒಬಿಸಿ ಅಧ್ಯಕ್ಷರು ಕರ್ನಾಟಕದಲ್ಲಿ ಸಭೆ ಮಾಡಿ ಅಂತಾ ಹೇಳಿದ್ದರು. ಸಂಚಾಲಕರನ್ನಾಗಿ ಮಾಡಿದ್ದಾರೋ, ಚೇರ್ಮನ್ ಮಾಡಿದ್ದಾರೋ ಗೊತ್ತಿಲ್ಲ. ಹೈಕಮಾಂಡ್ ಜೊತೆಗೆ ಮಾತನಾಡುತ್ತೇನೆ. ನಾನು ಕೇಳಿಲ್ಲ, ಅವರು ಘೋಷಣೆ ಮಾಡಿದ್ದಾರೆ, ಮಾತನಾಡುತ್ತೇನೆ. ರಾಷ್ಟ್ರ ರಾಜಕಾರಣ ಅಲ್ಲ, ೇನು ಅಂತಾ ಘೋಷಣೆ ಮಾಡಿದ್ದಾರೆ ಗೊತ್ತಿಲ್ಲ ಎಂದು ಹೇಳಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರಿಗೆ ಎಐಸಿಸಿ ಮಹತ್ವದ ಜವಾಬ್ದಾರಿ ನೀಡಿದೆ. ಹಿಂದುಳಿದ ವರ್ಗಗಳ ರಾಷ್ಟ್ರೀಯ ಸಲಹಾ ಮಂಡಳಿ ಅಧ್ಯಕ್ಷರನ್ನಾಗಿ ನೇಮಕ ಮಾಡಿದೆ.ನಾಲ್ವರು ಮಾಜಿ ಮುಖ್ಯಮಂತ್ರಿಗಳು, 24 ಸದಸ್ಯರ ಸಲಹಾ ಮಂಡಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ. ಈ ಮೂಲಕ ಸಿಎಂ ಸಿದ್ದರಾಮಯ್ಯ ರಾಷ್ಟ್ರ ಮಟ್ಟದ ಹುದ್ದೆಯನ್ನೂ ನಿಭಾಯಿಸಲಿದ್ದಾರೆ.
ಬೆಂಗಳೂರು : ಸಿಎಂ ಸಿದ್ದರಾಮಯ್ಯ ಅವರನ್ನು ಎಐಸಿಸಿ ಒಬಿಸಿ ರಾಷ್ಟ್ರೀಯ ಘಟಕಕ್ಕೆ ನೇಮಕ ವಿಚಾರಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಅವರು ರಾಷ್ಟ್ರ ರಾಜಕಾರಣಕ್ಕೆ ಹೋಗ್ತಾರೆ ಅಂತೇನಿಲ್ಲ. ಹಿಂದಿನಿಂದಲೂ ಹಿಂದುಳಿದ ಕ್ಷೇಮಾಭಿವೃದ್ಧಿ ಕೆಲಸ ಮಾಡಿದ್ದಾರೆ. ಹೀಗಾಗಿ ಸಿಎಂ ಸಿದ್ದರಾಮಯ್ಯಗೆ ಜವಾಬ್ದಾರಿ ಕೊಟ್ಟಿದ್ದಾರೆ. ಅನೇಕ ವೇಳೆ ಕೆಲವರು ರಾಷ್ಟ್ರ ರಾಜಕಾರಣಕ್ಕೆ ಹೋಗಿದ್ದಾರೆ. ಹಾಗಂತ ಸಿದ್ದರಾಮಯ್ಯ ಹೋಗಬೇಕು ಅಂತೇನಿಲ್ಲ ಎಂದರು. ಸಿಎಂ ಸಿದ್ದರಾಮಯ್ಯ ಅವರಿಗೆ ಎಐಸಿಸಿ ಮಹತ್ವದ ಜವಾಬ್ದಾರಿ ನೀಡಿದೆ. ಹಿಂದುಳಿದ ವರ್ಗಗಳ ರಾಷ್ಟ್ರೀಯ ಸಲಹಾ ಮಂಡಳಿ ಅಧ್ಯಕ್ಷರನ್ನಾಗಿ ನೇಮಕ ಮಾಡಿದೆ.ನಾಲ್ವರು ಮಾಜಿ ಮುಖ್ಯಮಂತ್ರಿಗಳು, 24 ಸದಸ್ಯರ ಸಲಹಾ ಮಂಡಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ. ಈ ಮೂಲಕ ಸಿಎಂ ಸಿದ್ದರಾಮಯ್ಯ ರಾಷ್ಟ್ರ ಮಟ್ಟದ ಹುದ್ದೆಯನ್ನೂ ನಿಭಾಯಿಸಲಿದ್ದಾರೆ.
ಚಿಕ್ಕಬಳ್ಳಾಪುರ: ಬೆಂಗಳೂರಿಗರ ನಿದ್ದೆ ಕೆಡಿಸಿದ್ದ ಚಡ್ಡಿಗ್ಯಾಂಗ್ ಇದೀಗ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಪ್ರತ್ಯಕ್ಷವಾಗಿದೆ. ಹೌದು, ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರಿನಲ್ಲಿ ಚಡ್ಡಿಗ್ಯಾಂಗ್ ದರೋಡೆಗೆ ಸಂಚು ಹಾಕುತ್ತಿದ್ದ ಘಟನೆ ಬೆಳಕಿಗೆ ಬಂದಿದೆ. ಹಲವೆಡೆ ದರೋಡೆಗೆ ಸಂಚು ಹಾಕುತ್ತಿದ್ದ ಬಗ್ಗೆ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಗೌರಿಬಿದನೂರು ನಗರದ ರೈಲ್ವೆ ನಿಲ್ದಾಣದ ಬಳಿ ಜುಲೈ 5ರಂದು ಮುಂಜಾನೆ 2:25ರ ಸುಮಾರಿಗೆ ಅಪರಿಚಿತ ಗ್ಯಾಂಗ್ವೊಂದು ಓಡಾಡಿದೆ. ನಾಲ್ವರ ಗ್ಯಾಂಗ್ ಚಡ್ಡಿ ಧರಿಸಿದ್ದು, ಮುಖಕ್ಕೆ ಬಟ್ಟೆ ಸುತ್ತಿಕೊಂಡು, ಸೊಂಟದಲ್ಲಿ ಮಾರಕಾಸ್ತ್ರಗಳನ್ನು ಕಟ್ಟಿಕೊಂಡು ದರೋಡೆಗೆ ಯತ್ನಿಸುತ್ತಿರುವ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿವೆ. ಗೌರಿಬಿದನೂರು ನಗರ ಪೊಲೀಸ್ ಸಿಬ್ಬಂದಿ ತಡರಾತ್ರಿ ಗಸ್ತಿನಲ್ಲಿದ್ದಾಗ ಅಪರಿಚಿತ ವ್ಯಕ್ತಿಗಳು ಓಡಾಡುತ್ತಿರುವ ಬಗ್ಗೆ ಸುಳಿವು ಸಿಕ್ಕಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡುವ ವೇಳೆಗೆ ಚಡ್ಡಿ ಗ್ಯಾಂಗ್ ಪರಾರಿಯಾಗಿತ್ತು. ಸಾರ್ವಜನಿಕರು ಎಚ್ಚರದಿಂದ ಇರುವಂತೆ ಪೊಲೀಸರು ಮನವಿ ಮಾಡಿದ್ದಾರೆ.
ನವದೆಹಲಿ : ಐಬಿಪಿಎಸ್ ಪ್ರೊಬೇಷನರಿ ಆಫೀಸರ್/ ಮ್ಯಾನೇಜ್ಮೆಂಟ್ ಟ್ರೈನಿ ನೇಮಕಾತಿಗೆ ಅಧಿಸೂಚನೆ ಹೊರಡಿಸುವ ಮೂಲಕ ಅರ್ಜಿ ಸಲ್ಲಿಸುವ ಪ್ರಕ್ರಿಯೆಯನ್ನು ಪ್ರಾರಂಭಿಸಿದೆ. ಅಭ್ಯರ್ಥಿಗಳು ಅಧಿಕೃತ ವೆಬ್ಸೈಟ್ ibps.in ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಜುಲೈ 21. ನೇಮಕಾತಿಗೆ ಸಂಬಂಧಿಸಿದ ವಿಶೇಷ ದಿನಾಂಕಗಳು: ಅರ್ಜಿ ಶುಲ್ಕ/ಮಾಹಿತಿ ಶುಲ್ಕ ಪಾವತಿ: ಜುಲೈ 1 ರಿಂದ 21 ಪರೀಕ್ಷಾ ಪೂರ್ವ ತರಬೇತಿ: ಆಗಸ್ಟ್ 2025 IBPS PO ಪ್ರಿಲಿಮ್ಸ್ ಪ್ರವೇಶ ಪತ್ರ: ಆಗಸ್ಟ್ 2025 IBPS PO ಪ್ರಿಲಿಮ್ಸ್ ಪರೀಕ್ಷೆ: ಆಗಸ್ಟ್ 2025 IBPS PO ಪ್ರಿಲಿಮ್ಸ್ ಫಲಿತಾಂಶ: ಸೆಪ್ಟೆಂಬರ್ 2025 ಮುಖ್ಯ ಪರೀಕ್ಷೆಯ ಪ್ರವೇಶ ಪತ್ರ: ಸೆಪ್ಟೆಂಬರ್/ಅಕ್ಟೋಬರ್ 2025 ಮುಖ್ಯ ಪರೀಕ್ಷೆ: ಅಕ್ಟೋಬರ್ 2025 ಮುಖ್ಯ ಪರೀಕ್ಷೆ: ನವೆಂಬರ್ 2025 ವ್ಯಕ್ತಿತ್ವ ಪರೀಕ್ಷೆ: ನವೆಂಬರ್/ಡಿಸೆಂಬರ್ 2025 ಸಂದರ್ಶನ: ಡಿಸೆಂಬರ್ 2025/ಜನವರಿ 2026 ಈ ಬ್ಯಾಂಕುಗಳಲ್ಲಿ ನೇಮಕಾತಿ: ಬ್ಯಾಂಕ್ ಆಫ್ ಬರೋಡಾ ಬ್ಯಾಂಕ್ ಆಫ್ ಇಂಡಿಯಾ ಬ್ಯಾಂಕ್ ಆಫ್…
ಚಿಕ್ಕಬಳ್ಳಾಪುರ : ರಾಜ್ಯದಲ್ಲಿ ದಿನದಿಂದ ದಿನಕ್ಕೆ ಹೃದಯಾಘಾತದ ಪ್ರಕರಣಗಳು ಹೆಚ್ಚಳವಾಗುತ್ತಿದ್ದು, ಇದೀಗ ಪಶ್ಚಿಮ ಬಂಗಾಳದಲ್ಲಿ ಕರ್ತವ್ಯದಲ್ಲಿದ್ದ ಯೋಧರೊಬ್ಬರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಹೃದಯಾಘಾತದಿಂದ ಯೋಧ ಗಂಗಾಧರಪ್ಪ (54) ಸಾವವನ್ನಪ್ಪಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲೂಕಿನ ತೊಂಡೇಬಾವಿ ಗ್ರಾಮದ ಗಂಗಾಧರಪ್ಪ, ಪಶ್ಚಿಮ ಬಂಗಾಳದಲ್ಲಿ ಇಂಡೋ ಟಿಬೇಟಿಯನ್ ಬಾರ್ಡರ್ ಪೋರ್ಸ್ ನಲ್ಲಿ ಹವಾಲ್ದಾರ್ ಆಗಿದ್ದರು. ನಿನ್ನೆ ಬೆಳಗ್ಗೆ ಹೃದಯಾಘಾತದಿಂದ ಯೋಧ ಗಂಗಾಧರಪ್ಪ ಮೃತಪಟ್ಟಿದ್ದಾರೆ. ತೊಂಡೇಬಾವಿ ಗ್ರಾಮಕ್ಕೆ ಐಟಿಬಿಪಿ ಪಡೆ ಪಾರ್ಥಿವ ಶರೀರ ತರುತ್ತಿದ್ದು, ಇಂದು ಸ್ವಗ್ರಾಮದಲ್ಲಿ ಅಂತ್ಯಕ್ರಿಯೆ ನಡೆಯಲಿದೆ.
ನವದೆಹಲಿ : ಸಾಮಾನ್ಯ ಜನರಿಗೆ ಸಿಹಿಸುದ್ದಿಯೊಂದು ಸಿಕ್ಕಿದ್ದು, ಅಡುಗೆ ಎಣ್ಣೆಗಳ ಬೆಲೆಗಳು ಕಡಿಮೆಯಾಗಲಿವೆ. ಶನಿವಾರ ಮಾರುಕಟ್ಟೆಯಲ್ಲಿ ಸಾಸಿವೆ ಎಣ್ಣೆ ಮತ್ತು ಎಳ್ಳೆಣ್ಣೆಯ ಬೆಲೆಗಳನ್ನು ಕಡಿಮೆ ಮಾಡಲು ಸರ್ಕಾರ ಪ್ರಮುಖ ನಿರ್ಧಾರ ತೆಗೆದುಕೊಂಡಿದೆ. ಇದು ಗ್ರಾಹಕರಿಗೆ ದೊಡ್ಡ ಪರಿಹಾರವಾಗಲಿದೆ. ಆದಾಗ್ಯೂ, ಕಡಲೆಕಾಯಿ ಎಣ್ಣೆ ಮತ್ತು ಎಳ್ಳೆಣ್ಣೆಯ ಬೇಡಿಕೆ ಹೆಚ್ಚಾದ ಕಾರಣ, ಅವುಗಳ ಬೆಲೆಗಳು ಸ್ವಲ್ಪ ಹೆಚ್ಚಾಗಿದೆ. ಚಿಕಾಗೋ ವಿನಿಮಯ ಕೇಂದ್ರ ಮುಚ್ಚಿದಾಗಿನಿಂದ, ಸೋಯಾಬೀನ್ ಎಣ್ಣೆ, ಕಚ್ಚಾ ಪಾಮ್ ಎಣ್ಣೆ, ಪಾಮೋಲಿನ್ ಮತ್ತು ಹತ್ತಿ ಬೀಜದ ಎಣ್ಣೆಯ ಬೆಲೆಗಳು ಸ್ಥಿರವಾಗಿವೆ. ಸೋಮವಾರ ಚಿಕಾಗೋ ವಿನಿಮಯ ಕೇಂದ್ರ ತೆರೆದ ನಂತರವೇ ಮಾರುಕಟ್ಟೆ ಮಾದರಿ ಸ್ಪಷ್ಟವಾಗುತ್ತದೆ ಎಂದು ತಜ್ಞರು ಹೇಳುತ್ತಾರೆ. ಸಾಸಿವೆ ಎಣ್ಣೆ ಬೆಲೆಗಳು ಏಕೆ ಇಳಿದಿವೆ? ಸರ್ಕಾರವು 2025 ರ ಹೊಸ, ಉತ್ತಮ ಗುಣಮಟ್ಟದ ಸಾಸಿವೆ ಬೆಳೆಯನ್ನು ಮಾರಾಟಕ್ಕೆ ಇಟ್ಟಿದೆ. ಈ ನಿರ್ಧಾರವು ಮಾರುಕಟ್ಟೆಯಲ್ಲಿ ಸಾಸಿವೆ ಮತ್ತು ಇತರ ಎಣ್ಣೆಕಾಳುಗಳ ಬೆಲೆಗಳ ಮೇಲೆ ಒತ್ತಡ ಹೇರಿದೆ. ಪರಿಣಾಮವಾಗಿ, ಸಾಸಿವೆ ಎಣ್ಣೆ ಬೆಲೆಗಳು ಇಳಿದಿವೆ. ಇದು ಸಾಮಾನ್ಯ…
ಮೈಸೂರು: ಮುಖ್ಯಮಂತ್ರಿ ಸ್ಥಾನಕ್ಕೆ ಶೀಘ್ರವೇ ಸಿದ್ದರಾಮಯ್ಯ ರಾಜೀನಾಮೆ ನೀಡಲಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಹೊಸ ಬಾಂಬ್ ಸಿಡಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಅವರ ರಾಜೀನಾಮೆ ಪಡೆದುಕೊಂಡು ದೆಹಲಿಗೆ ವರ್ಗಾವಣೆ ಮಾಡಲು ಪ್ಲಾನ್ ಮಾಡಿಕೊಳ್ಳಲಾಗಿದೆ. ಸಿದ್ದರಾಮಯ್ಯ ಸ್ಥಾನ ಪಲ್ಲಟ ಆಗುವುದು ನಿಶ್ಚಿತವಾಗಿದೆ ಎಂದರು. ಸಿಎಂ ಸಿದ್ದರಾಮಯ್ಯ ಅವರ ರಾಜೀನಾಮೆ ಪಡೆಯಲು ಭೂಮಿಕೆ ಸಜ್ಜಾಗಿದೆ. ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ ಅವರು ಬೆಂಗಳೂರಿಗೆ ಬಂದು ಶಾಸಕರ ಅಭಿಪ್ರಾಯ ಪಡೆದುಕೊಂಡಿದ್ದಾರೆ. ಎಐಸಿಸಿ ಒಬಿಸಿ ವಿಭಾಗಕ್ಕೆ ಸಿದ್ಧರಾಮಯ್ಯ ಅವರನ್ನು ನೇಮಕ ಮಾಡಲಾಗಿದ್ದು, ಅವರ ರಾಜೀನಾಮೆ ಪಡೆದು ದೆಹಲಿಗೆ ವರ್ಗಾವಣೆ ಮಾಡಲು ಪ್ಲಾನ್ ಮಾಡಲಾಗಿದ್ದು, ಸಿದ್ದರಾಮಯ್ಯ ಸ್ಥಾನ ಪಲ್ಲಟವಾಗುವುದು ನಿಶ್ಚಿತವಾಗಿದೆ ಎಂದು ಹೇಳಿದ್ದಾರೆ.
ಮೃತಪಟ್ಟ ರೈತರ ಹೆಸರಿನಲ್ಲಿರುವ ಜಮೀನು ಇ-ಪೌತಿ ಮಾಡಿಸಿಕೊಳ್ಳದೇ ಹಾಗೆಯೇ ಬಿಟ್ಟರೇ ಆ ಕುಟುಂಬ ಸರಕಾರದ ಸೌಲಭ್ಯಗಳಿಂದ ವಂಚಿತವಾಗಲಿದೆ. ಹೌದು, ಇ-ಪೌತಿ ಮಾಡಿಸಿಕೊಳ್ಳದೇ ಇದ್ದರೆ ಪಿಎಂ ಕಿಸಾನ್ ಸಮ್ಮಾನ, ಫಸಲ್ ವಿಮಾ ಯೋಜನೆ ಸೇರಿ ಹಲವು ಸರಕಾರಿ ಸೌಲಭ್ಯಗಳು ಕಳೆದುಕೊಳ್ಳಬೇಕಾಗುತ್ತದೆ. ಹೀಗಾಗಿ ಸಂಬಂಧಪಟ್ಟ ಕುಟುಂಬದ ವಾರಸುದಾರರು ಇ-ಪೌತಿ ಆಂದೋಲನದಲ್ಲಿ ಭಾಗವಹಿಸಿ ತಮ್ಮ ಜಮೀನನ್ನು ವರ್ಗಾಯಿಸಿಕೊಳ್ಳಲು ಅವಕಾಶವಿದೆ. ಹೀಗಾಗಿ ರೈತರು ಯಾವುದೇ ಕಾರಣಕ್ಕೂ ಇದನ್ನು ತಪ್ಪಿಸಿಕೊಳ್ಳಬೇಡಿ ಎಂದು ಜಿಲ್ಲಾಧಿಕಾರಿಗಳು ಮನವಿ ಮಾಡಿದ್ದಾರೆ. ರೈತರು ತಮ್ಮ ಜಮೀನುಗಳನ್ನು ಪೌತಿ ಮಾಡಿಸಿಕೊಳ್ಳಲು ಇನ್ಮುಂದೆ ಕಂದಾಯ ಇಲಾಖೆ ಕಚೇರಿವರೆಗೂ ಅಲೆಯಬೇಕಿಲ್ಲ. ಸರಕಾರವೇ ಇ-ಪೌತಿ ಆಂದೋಲನದ ಮೂಲಕ ನಿಮ್ಮ ಮನೆ ಬಾಗಿಲಿಗೆ ಬರಲಿದೆ ಇದರ ಸದುಪಯೋಗಪಡೆಸಿಕೊಳ್ಳುವಂತೆ ಜಿಲ್ಲಾಧಿಕಾರಿ ಪ್ರಶಾಂತ್ಕುಮಾರ್ ಮಿಶ್ರಾ ಅವರು ಮನವಿ ಮಾಡಿದ್ದಾರೆ. ಜಿಲ್ಲೆಯಲ್ಲಿ ಮೃತಪಟ್ಟ ಜಮೀನು ಮಾಲೀಕರ ಹೆಸರಿನಲ್ಲಿರುವ ಪಹಣಿಗಳನ್ನು ವಾರಸುದಾರರ ಹೆಸರಿಗೆ ನೋಂದಣಿ ಮಾಡಿಕೊಡಲು ಈ ಹಿಂದಿನಿಂದಲೂ ಅಭಿಯಾನಗಳು ನಡೆದಿವೆ. ಹೋಬಳಿ, ಗ್ರಾಮ ಮಟ್ಟದಲ್ಲಿ ಅಭಿಯಾನ ನಡೆದಿವೆ. ಆದರೂ ಇನ್ನು ಕೆಲವು ಪ್ರಕರಣ ಬಾಕಿ ಇದ್ದು,…
ರೈತರು ತಮ್ಮ ಜಮೀನುಗಳನ್ನು ಪೌತಿ ಮಾಡಿಸಿಕೊಳ್ಳಲು ಇನ್ಮುಂದೆ ಕಂದಾಯ ಇಲಾಖೆ ಕಚೇರಿವರೆಗೂ ಅಲೆಯಬೇಕಿಲ್ಲ. ಸರಕಾರವೇ ಇ-ಪೌತಿ ಆಂದೋಲನದ ಮೂಲಕ ನಿಮ್ಮ ಮನೆ ಬಾಗಿಲಿಗೆ ಬರಲಿದೆ ಇದರ ಸದುಪಯೋಗಪಡೆಸಿಕೊಳ್ಳುವಂತೆ ಜಿಲ್ಲಾಧಿಕಾರಿ ಪ್ರಶಾಂತ್ಕುಮಾರ್ ಮಿಶ್ರಾ ಅವರು ಮನವಿ ಮಾಡಿದ್ದಾರೆ. ಜಿಲ್ಲೆಯಲ್ಲಿ ಮೃತಪಟ್ಟ ಜಮೀನು ಮಾಲೀಕರ ಹೆಸರಿನಲ್ಲಿರುವ ಪಹಣಿಗಳನ್ನು ವಾರಸುದಾರರ ಹೆಸರಿಗೆ ನೋಂದಣಿ ಮಾಡಿಕೊಡಲು ಈ ಹಿಂದಿನಿಂದಲೂ ಅಭಿಯಾನಗಳು ನಡೆದಿವೆ. ಹೋಬಳಿ, ಗ್ರಾಮ ಮಟ್ಟದಲ್ಲಿ ಅಭಿಯಾನ ನಡೆದಿವೆ. ಆದರೂ ಇನ್ನು ಕೆಲವು ಪ್ರಕರಣ ಬಾಕಿ ಇದ್ದು, ಕಂದಾಯ ಇಲಾಖೆ ಸಚಿವರ ನಿರ್ದೇಶನದ ಮೇರೆಗೆ ಮನೆ ಬಾಗಿಲಿಗೆ ಕಂದಾಯ ಸೇವೆಗಳ ‘ಇ-ಪೌತಿ’ ಆಂದೋಲನ ಆರಂಭಿಸಲಾಗಿದೆ. ಈ ಯೋಜನೆಯಡಿ ಕಂದಾಯ ನಿರೀಕ್ಷಕರು ಮತ್ತು ಗ್ರಾಮ ಅಭಿವೃದ್ಧಿ ಅಧಿಕಾರಿಗಳು ರೈತರ ಮನೆ ಬಾಗಿಲಿಗೆ ತೆರಳಿ, ವಾರಸುದಾರರಿಗೆ ಮೊಬೈಲ್ ಮೂಲಕ ಪೌತಿ ಖಾತೆಯನ್ನು ನೋಂದಾಯಿಸಲಿದ್ದಾರೆ. ಈ ಪ್ರಕ್ರಿಯೆಯಲ್ಲಿ ಆಧಾರ್ ಸೀಡಿಂಗ್ನ ಮೂಲಕ ಭೂಮಿ ಹಿಡುವಳಿಯ ನಿಖರ ಮಾಹಿತಿಯನ್ನು ಸಂಗ್ರಹಿಸಲಾಗುತ್ತದೆ ಎಂದು ಹೇಳಿದ್ದಾರೆ. ಜಿಲ್ಲೆಯಲ್ಲಿ ಮೃತಪಟ್ಟ 75,000 ಜಮೀನುಗಳ ಮಾಲೀಕರ ಪಹಣಿಗಳನ್ನು ವಾರಸುದಾರರ…
ತುಮಕೂರು : ತುಮಕೂರಿನ ಲಾಡ್ಜ್ ವೊಂದರಲ್ಲಿ ದಾವಣಗೆರೆಯ ಪಿಎಸ್ ಐ ಡೆತ್ ನೋಟ್ ಬರೆದಿಟ್ಟು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. ದಾವಣಗೆರೆ ಬಡಾವಣೆಯ ಠಾಣೆಯ ಪಿಎಸ್ ಐ ತುಮಕೂರಿನ ದ್ವಾರಕ ಹೋಟೆಲ್ ಲಾಡ್ಜ್ ನಲ್ಲಿ ಡೆತ್ ನೋಟ್ ಬರೆದಿಟ್ಟು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. 58 ವರ್ಷದ ನಾಗರಾಜು ಆತ್ಮಹತ್ಯೆಗೆ ಶರಣಾದ ಪಿಎಸ್ ಐ ಆಗಿದ್ದು, ಜುಲೈ 1 ರಂದು ದ್ವಾರಕ ಹೋಟೆಲ್ ಲಾಡ್ಜ್ ನಲ್ಲಿ ರೂಂ ಬುಕ್ ಮಾಡಿದ್ದರು. ಇಂದು ಲಾಡ್ಜ್ ನಲ್ಲಿ ದುರ್ವಾಸನೆ ಬಂದಿದ್ದು, ಸಿಬ್ಬಂದಿ ನೋಡಿದಾಗ ಪ್ರಕರಣ ಬೆಳಕಿಗೆ ಬಂದಿದೆ.ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.