Subscribe to Updates
Get the latest creative news from FooBar about art, design and business.
Author: kannadanewsnow57
ಬೆಂಗಳೂರು : ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳ ತಡೆಗೆ ರಾಜ್ಯ ಸರ್ಕಾರವು ಮಹತ್ವದ ಕ್ರಮ ಕೈಗೊಂಡಿದ್ದು, ಸಿಬ್ಬಂದಿಗಳು ಕಿರುಕುಳ ನೀಡಿದ್ರೆ ಈ ಸಂಖ್ಯೆಗೆ ಸಾರ್ವಜನಿಕರು ಕರೆ ಮಾಡಿ ದೂರು ನೀಡಬಹುದು ಎಂದು ಸೂಚನೆ ನೀಡಲಾಗಿದೆ. ಬಡಜನರ ಅವಶ್ಯಕತೆಯನ್ನು ಬಂಡವಾಳ ಮಾಡಿಕೊಳ್ಳುವ ಕೆಲವು ವ್ಯಕ್ತಿಗಳು,ಅನಧಿಕೃತ ಲೇವಾದೇವಿದಾರರು ಜನರ ತುರ್ತು ಅವಶ್ಯಕತೆಗೆ ಹಣ ನೀಡಿ, ಹೆಚ್ಚು ಬಡ್ಡಿ ವಿಧಿಸಿ ಶೋಷಣೆ ಮಾಡುತ್ತಾರೆ. ಅಂತಹ ವ್ಯಕ್ತಿಗಳು ಅಥವಾ ಸಂಸ್ಥೆಗಳ ವಿರುದ್ಧ ಸಾರ್ವಜನಿಕರು ಸಹಾಯವಾಣಿ 112 ಅಥವಾ 1902 ಸಂಖ್ಯೆಗೆ ದೂರು ನೀಡಬಹುದು.
ಬೆಂಗಳೂರು : ಸರ್ಕಾರಿ ನೌಕರರ ನಕಲಿ ದಾಖಲೆ ಸೃಷ್ಟಿಸಿ ಸುಮಾರು 7 ಕೋಟಿಗೂ ಅಧಿಕ ಹಣ ಪಡೆದು ವಂಚನೆ ಎಸಗಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಮಾಜಿ ಸಚಿವ ಕೃಷ್ಣಯ್ಯ ಶೆಟ್ಟಿಯನ್ನು ದೋಷಿ ಎಂದು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶ ಹೊರಡಿಸಿದ್ದು, ಮೂರು ವರ್ಷ ಜೈಲು ಶಿಕ್ಷೆ ನೀಡಿದೆ. ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಈ ಪ್ರಕರಣದ ಕುರಿತು ವಿಚಾರಣೆ ನಡೆಸಿದ ನ್ಯಾಯಾಧೀಶರು, ಬ್ಯಾಂಕ್ ವಂಚನೆ ಕೇಸ್ ನಲ್ಲಿ ಕೃಷ್ಣಯ್ಯ ಶೆಟ್ಟಿ ದೋಷಿ ಎಂದು ಆದೇಶ ಹೊರಡಿಸಿದರು. ಸಿಬಿಐ ಪ್ರಕರಣದಲ್ಲಿ ಮಾಜಿ ಸಚಿವ ಕೃಷ್ಣ ಶೆಟ್ಟಿ ದೋಷಿ ಎಂದು ಇದೀಗ ಕೋರ್ಟ್ ಆದೇಶ ಹೊರಡಿಸಿದೆ. 2008ರಲ್ಲಿ ಎಸ್‌ಬಿಎಂ ಬ್ಯಾಂಕ್ ದಾಖಲಿಸಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ, ವಂಚನೆ, ಫೋರ್ಜರಿ ಪ್ರಕರಣದಲ್ಲಿ ಮಾಜಿ ಸಚಿವ ಕೃಷ್ಣಯ್ಯ ಶೆಟ್ಟಿ ದೋಷಿ ಎಂದು ಆದೇಶ ನೀಡಿದೆ. ಇದೀಗ ಬ್ಯಾಂಕ್ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಕೃಷ್ಣ ಶಟ್ಟಿ ಅವರಿಗೆ ಜೈಲು ಶಿಕ್ಷೆ ವಿಧಿಸಿ ಜನಪ್ರತಿನಿಧಿಗಳ ಕೋರ್ಟ್ ತೀರ್ಪು ಪ್ರಕಟಿಸಿದೆ.…
SHOCKING : ದೇಶದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ : ಶಿಕ್ಷಕರಿಂದಲೇ ಅಪ್ರಾಪ್ತ ವಿದ್ಯಾರ್ಥಿನಿ ಮೇಲೆ `ಗ್ಯಾಂಗ್ ರೇಪ್.!
ಚೆನ್ನೈ : ದೇಶದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯವೊಂದು ನಡೆದಿದ್ದು, ಸರ್ಕಾರಿ ಶಾಲೆಯಲ್ಲಿ ಓದುತ್ತಿರುವ 13 ವರ್ಷದ ವಿದ್ಯಾರ್ಥಿನಿಯ ಮೇಲೆ ಮೂವರು ಶಿಕ್ಷಕರು ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ತಮಿಳುನಾಡಿನಲ್ಲಿ ನಡೆದಿದೆ. ಈ ದುರದೃಷ್ಟಕರ ಹುಡುಗಿ ಗರ್ಭಿಣಿಯಾದಳು. ಈ ಬಗ್ಗೆ ಯಾರಿಗೂ ಹೇಳಲಾಗದೆ ಅಸಹಾಯಕಳಾಗಿದ್ದ ಬಾಲಕಿಯ ತಾಯಿ, ಒಂದು ತಿಂಗಳ ಕಾಲ ಆಕೆಯನ್ನು ಶಾಲೆಯಿಂದ ಕರೆದುಕೊಂಡು ಹೋಗಿ ಗರ್ಭಪಾತ ಮಾಡಲು ಪ್ರಯತ್ನಿಸಿದಾಗ ಈ ಭಯಾನಕ ಘಟನೆ ಬೆಳಕಿಗೆ ಬಂದಿದೆ. ಈ ಭೀಕರ ಘಟನೆ ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯ ಪೋಚಂಪಲ್ಲಿ ಗ್ರಾಮದಲ್ಲಿ ನಡೆದಿದೆ. ಹುಡುಗಿಯ ತಾಯಿ ಹೇಳಿದ ಮಾತುಗಳಿಂದ ಕೋಪಗೊಂಡ ಮುಖ್ಯೋಪಾಧ್ಯಾಯರು, ತಕ್ಷಣವೇ ಮಕ್ಕಳ ಕಲ್ಯಾಣ ಅಧಿಕಾರಿಗಳಿಗೆ ದೂರು ನೀಡಿದರು. ಶಾಲೆಯಲ್ಲಿ ಕೆಲಸ ಮಾಡುತ್ತಿದ್ದ ಇಬ್ಬರು ಮಾಧ್ಯಮಿಕ ದರ್ಜೆಯ ಶಿಕ್ಷಕರು ಮತ್ತು ಪದವಿ ಶಿಕ್ಷಕರು ತನ್ನ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ಬಾಲಕಿ ಹೇಳಿದ್ದಾಳೆ. ಮಕ್ಕಳ ಕಲ್ಯಾಣ ಅಧಿಕಾರಿಗಳು ಬರಗೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪೊಲೀಸರು ಪೋಕ್ಸೋ ಕಾಯ್ದೆಯಡಿ ಪ್ರಕರಣ…
ಜೈಪುರ: ಜೈಪುರದ ರಾಷ್ಟ್ರೀಯ ಹೆದ್ದಾರಿ 48 ರಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಮಹಾಕುಂಭಮೇಳಕ್ಕೆ ತೆರಳುತ್ತಿದ್ದ 8 ಭಕ್ತರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಜೈಪುರದ ಮೊಖಂಪುರ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚರಿಸುವ ವೇಳೆ ಕಾರಿನ ಟೈರ್ ಸ್ಪೋಟಗೊಂಡ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿದ ಕಾರು ಬಸ್ ಗೆ ಡಿಕ್ಕಿಯಾಗಿ ಎಂಟು ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ ಹಲವರು ಗಾಯಗೊಂಡಿದ್ದು, ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಪೊಲೀಸರು ಸ್ಥಳಕ್ಕೆ ಧಾವಿಸಿ ಮೃತದೇಹಗಳನ್ನು ಆಸ್ಪತ್ರೆಗೆ ಸಾಗಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ. ಮೃತಪಟ್ಟವರ ವಿವರ ಇನ್ನಷ್ಟೇ ಲಭ್ಯವಾಗಬೇಕಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
ಶಿವಮೊಗ್ಗ : ಗೃಹಲಕ್ಷ್ಮಿ ಯೋಜನೆಯಡಿ ಫಲಾನುಭವಿಗಳ ಖಾತೆಗೆ ನೇರವಾಗಿ ಜಮೆಯಾಗುವ ಹಣವನ್ನು ಬ್ಯಾಂಗಳ ವ್ಯವಸ್ಥಾಪಕರು ಸಾಲದ ಖಾತೆಗೆ ಜಮಾ ಮಾಡಿಕೊಳ್ಳದಂತೆ ಸಚಿವ ಮಧು ಬಂಗಾರಪ್ಪ ಸೂಚನೆ ನೀಡಿದ್ದಾರೆ. ಅವರು ಇಂದು ಶಿಕಾರಿಪುರದ ತಾಲೂಕು ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ತಾಲೂಕು ಅಭಿವೃದ್ಧಿ ಚಟುವಟಿಕೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಗೃಹಲಕ್ಷ್ಮಿ ಯೋಜನೆಯಡಿ ಫಲಾನುಭವಿಗಳ ಖಾತೆಗೆ ನೇರವಾಗಿ ಜಮೆಯಾಗುವ ಹಣವನ್ನು ಬ್ಯಾಂಗಳ ವ್ಯವಸ್ಥಾಪಕರು ಸಾಲದ ಖಾತೆಗೆ ಜಮಾ ಮಾಡಿಕೊಳ್ಳದಂತೆ ಸೂಚಿಸಿದರು. ಸೌಲಭ್ಯಕ್ಕಾಗಿ ಬಂದ ಅರ್ಜಿಗಳನ್ನು ತ್ವರಿತವಾಗಿ ವಿಲೇ ಮಾಡುವಂತೆ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳಿಗೆ ಸೂಚಿಸಿದರು. ಪ್ರಸಕ್ತ ಸಾಲಿನಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷಾ ಪಲಿತಾಂಶ ಉತ್ತಮವಾಗಿರುವಂತೆ ನೋಡಿಕೊಳ್ಳಲು ಆಯಾ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ವಿಶೇಷ ಗಮನಹರಿಸುವಂತೆ ಸೂಚಿಸಲಾಗಿದೆ. ಅಲ್ಲದೆ ಪರೀಕ್ಷಾ ಪೂರ್ವ ತರಬೇತಿ ಹಾಗೂ ವಿಶೇಷ ತರಗತಿಗಳನ್ನು ನಡೆಸಲಾಗುತ್ತಿದೆ ಎಂದರು. ಪರೀಕ್ಷೆಗಳನ್ನು ನಿಯಮಾನಸಾರ ಕಟ್ಟುನಿಟ್ಟಾಗಿ ನಡೆಸಲು ಸೂಚಿಸಲಾಗಿದೆ ವಿದ್ಯಾರ್ಥಿಗಳು ಯಾವುದೇ ಆತಂಕವಿಲ್ಲದೆ…
ಬೆಂಗಳೂರು : ತಿರುಪತಿ ದೇವಾಲಯದ ರೀತಿಯಲ್ಲಿ ಯಲ್ಲಮ್ಮನ ಗುಡ್ಡ ಅಭಿವೃದ್ಧಿ ಮಾಡಲಾಗುವುದು ಎಂದು ಪ್ರವಾಸೋದ್ಯಮ ಸಚಿವರಾದ ಎಚ್. ಕೆ. ಪಾಟೀಲ್ ಅವರು ತಿಳಿಸಿದ್ದಾರೆ. ಸವದತ್ತಿ ಶ್ರೀ ರೇಣುಕಾ ಯಲ್ಲಮ್ಮ ದೇವಿ ಪವಿತ್ರಗುಡ್ಡದ ಅಭಿವೃದ್ಧಿಗೆ ತಿರುಪತಿ ತಿರುಮಲ ದೇವಸ್ಥಾನ (ಟಿಟಿಡಿ) ಅಭಿವೃದ್ಧಿಯನ್ನು ಮಾದರಿಯಾಗಿ ಇಟ್ಟುಕೊಂಡು ಯೋಜನೆ ರೂಪಿಸಲಾಗುವುದು. ಈ ಬಾರಿ ಭಾರತ ಹುಣ್ಣಿಮೆ ವೇಳೆ ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿ ಜಿಲ್ಲಾಡಳಿತ ವತಿಯಿಂದ ಜನಸಂದಣಿ ನಿರ್ವಹಣೆ, ಪಾರ್ಕಿಂಗ್, ಶೌಚಾಲಯ, ಎಲ್‌ಇಡಿ ಸ್ರ್ಕೀನ್ ಅಳವಡಿಕೆ ಸೇರಿ ಕಾಮಗಾರಿ ಆರಂಭಿಸಲಾಗಿದೆ. ದಾಸೋಹ ಭವನ ಮತ್ತು ಮೇವು ದಾಸೋಹ ಭವನ ನಿರ್ಮಾಣಕ್ಕೆ ಒಂದು ತಿಂಗಳಿನಲ್ಲಿ ಶಂಕು ಸ್ಥಾಪನೆ ಮಾಡಲು ಪ್ರಯತ್ನಿಸಲಾಗುತ್ತಿದೆ ಎಂದು ಹೇಳಿದ್ದಾರೆ.
ಶಿವಮೊಗ್ಗ : ಪ್ರಸಕ್ತ ಸಾಲಿನಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷಾ ಪಲಿತಾಂಶ ಉತ್ತಮವಾಗಿರುವಂತೆ ನೋಡಿಕೊಳ್ಳಲು ಆಯಾ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ವಿಶೇಷ ಗಮನಹರಿಸುವಂತೆ ಸೂಚಿಸಲಾಗಿದೆ ಎಂದು ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. ಅವರು ಇಂದು ಶಿಕಾರಿಪುರದ ತಾಲೂಕು ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ತಾಲೂಕು ಅಭಿವೃದ್ಧಿ ಚಟುವಟಿಕೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಪ್ರಸಕ್ತ ಸಾಲಿನಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷಾ ಪಲಿತಾಂಶ ಉತ್ತಮವಾಗಿರುವಂತೆ ನೋಡಿಕೊಳ್ಳಲು ಆಯಾ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ವಿಶೇಷ ಗಮನಹರಿಸುವಂತೆ ಸೂಚಿಸಲಾಗಿದೆ. ಅಲ್ಲದೆ ಪರೀಕ್ಷಾ ಪೂರ್ವ ತರಬೇತಿ ಹಾಗೂ ವಿಶೇಷ ತರಗತಿಗಳನ್ನು ನಡೆಸಲಾಗುತ್ತಿದೆ ಎಂದರು. ಪರೀಕ್ಷೆಗಳನ್ನು ನಿಯಮಾನಸಾರ ಕಟ್ಟುನಿಟ್ಟಾಗಿ ನಡೆಸಲು ಸೂಚಿಸಲಾಗಿದೆ ವಿದ್ಯಾರ್ಥಿಗಳು ಯಾವುದೇ ಆತಂಕವಿಲ್ಲದೆ ನಿರ್ಭೀತಿಯಿಂದ ಪರೀಕ್ಷೆಗೆ ಹಾಜರಾಗುವಂತೆ ಸೂಚಿಸಿದ ಅವರು ಅನುತ್ತೀರ್ಣ ವಿದ್ಯಾರ್ಥಿಗಳಿಗಾಗಿ ಪೂರಕ ಪರೀಕ್ಷೆಗಳನ್ನು ಕೂಡ ಏರ್ಪಡಿಸಲಾಗಿದೆ ಎಂದವರು ನುಡಿದರು. ಶಿಕಾರಿಪುರ, ಶಿರಾಳಕೊಪ್ಪ ಮತ್ತು…
ಶಿವಮೊಗ್ಗ : ರೈತರ ಕೃಷಿ ಚಟುವಟಿಕೆಗಳಿಗೆ ವಿದ್ಯುತ್ ವ್ಯತ್ಯಯವಾಗದಂತೆ ಈಗಾಗಲೇ ಸರ್ಕಾರ ನಿಗಧಿಡಿಸಿದ ಸಮಯನುಸಾರ ನಿರಂತರವಾಗಿ ವಿದ್ಯುತ್ ಸರಬರಾಜು ಮಾಡುವಂತೆ ಸಚಿವ ಎಸ್. ಮಧು ಬಂಗಾರಪ್ಪ ಅವರು ಮೆಸ್ಕಾಂ ಅಭಿಯಂತರರಿಗೆ ಸೂಚಿಸಿದರು. ಅವರು ಇಂದು ಶಿಕಾರಿಪುರದ ತಾಲೂಕು ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ತಾಲೂಕು ಅಭಿವೃದ್ಧಿ ಚಟುವಟಿಕೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಶಿಕಾರಿಪುರ, ಶಿರಾಳಕೊಪ್ಪ ಮತ್ತು ಸೊರಬ ಭಾಗಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ನಿರಂತರ ವ್ಯತ್ಯಾಯವಾಗುತ್ತಿರುವ ಕಾರಣ ಕೃಷಿ ಚಟುವಟಿಕೆಗಳಿಗೆ ತೀವ್ರ ಅಡಚಣೆ ಆಗುತ್ತಿರುವ ಬಗ್ಗೆ ಸಾರ್ವಜನಿಕರಿಂದ ಸಾಕಷ್ಟು ದೂರುಗಳು ಕೇಳಿ ಬರುತ್ತಿದ್ದು ಅದನ್ನು ಗಂಭೀರವಾಗಿ ಪರಿಗಣಿಸಲಾಗಿದೆ. ಇದರ ವ್ಯವಸ್ಥಿತ ನಿರ್ವಹಣೆಯ ಜವಾಬ್ದಾರಿ ಹೊತ್ತ ಅಧಿಕಾರಿಗಳು ವಿದ್ಯುತ್ ನ್ನು ಒದಗಿಸುವಂತೆ ಹಾಗೂ ಯಾವುದೇ ದೂರಗಳು ಬಾರದಂತೆ ನೋಡಿಕೊಳ್ಳಬೇಕು. ಮಾತ್ರವಲ್ಲ ಈ ಸಂಬಂಧ ಬರುವ ಸಾರ್ವಜನಿಕರ ಅಹವಾಲುಗಳಿಗೆ ಸಕಾಲಿಕವಾಗಿ ಸ್ಪಂದಿಸುವಂತೆ ಸೂಚಿಸಿದರು. ತಾಲೂಕಿನ ಆಯ್ದ ಭಾಗಗಳಲ್ಲಿ ಟ್ರಾನ್ಸ್ಫರ್ಮರ್ ಗಳು ಹಾಳಾಗಿದ್ದು ದುರಸ್ತಿ ಮಾಡುವ ಬಗ್ಗೆ ಹಾಗೂ ಅಗತ್ಯವಿರುವೆಡೆಗಳಲ್ಲಿ ಹೊಸ ಟ್ರಾನ್ಸ್ಫರ್ಮರ್ ಗಳನ್ನು…
ಇತ್ತೀಚಿನ ದಿನಗಳಲ್ಲಿ, ಮಾರುಕಟ್ಟೆಯಲ್ಲಿ ಅನೇಕ ಆಹಾರ ಪದಾರ್ಥಗಳು ವ್ಯಾಪಕವಾಗಿ ಕಲಬೆರಕೆಯಾಗುತ್ತಿವೆ. ಹಾಲು, ತುಪ್ಪ, ಬೇಳೆಕಾಳುಗಳು, ಅಕ್ಕಿ, ಹಿಟ್ಟು, ಅರಿಶಿನ ಮುಂತಾದ ವಿವಿಧ ಆಹಾರ ಪದಾರ್ಥಗಳು ಕಲಬೆರಕೆಯಾಗುತ್ತಿವೆ. ಈ ಕಲಬೆರಕೆ ವಸ್ತುಗಳನ್ನು ಸೇವಿಸುವುದರಿಂದ, ನೀವು ಅನೇಕ ರೀತಿಯ ಆರೋಗ್ಯ ಸಮಸ್ಯೆಗಳನ್ನು ಎದುರಿಸಬೇಕಾಗಬಹುದು. ಕಲಬೆರಕೆಯನ್ನು ನಿಲ್ಲಿಸಲು ಕಾಲಕಾಲಕ್ಕೆ ಅನೇಕ ಸ್ಥಳಗಳಲ್ಲಿ ದಾಳಿಗಳನ್ನು ನಡೆಸಲಾಗುತ್ತದೆ. ಆದಾಗ್ಯೂ, ಇದರ ನಂತರವೂ ಆಹಾರ ಪದಾರ್ಥಗಳಲ್ಲಿ ನಿರಂತರವಾಗಿ ಕಲಬೆರಕೆ ಮಾಡಲಾಗುತ್ತಿದೆ. ನಮ್ಮಲ್ಲಿ ಹೆಚ್ಚಿನವರು ಪ್ರತಿದಿನ ಹಾಲು ಕುಡಿಯುತ್ತೇವೆ. ಹಾಲಿನಲ್ಲಿ ಉತ್ತಮ ಪ್ರಮಾಣದ ಪ್ರೋಟೀನ್ ಇರುತ್ತದೆ. ಅದೇ ರೀತಿ, ಹಾಲನ್ನು ಸಹ ಯೂರಿಯಾ ಅಥವಾ ನೀರಿನಿಂದ ಕಲಬೆರಕೆ ಮಾಡಿ ಮಾರಾಟ ಮಾಡಲಾಗುತ್ತದೆ. ಈ ಸಂಬಂಧವಾಗಿ, ಇಂದು ನಾವು ಕಲಬೆರಕೆ ಹಾಲನ್ನು ಗುರುತಿಸಲು ಕೆಲವು ವಿಶೇಷ ವಿಧಾನಗಳ ಬಗ್ಗೆ ನಿಮಗೆ ಹೇಳಲಿದ್ದೇವೆ. ನಿಜವಾದ ಹಾಲು ದಪ್ಪವಾಗಿರುತ್ತದೆ. ಅದರ ದಪ್ಪದಿಂದಾಗಿ ಅದು ನಿಧಾನವಾಗಿ ಹರಿಯುತ್ತದೆ. ಅದೇ ಸಮಯದಲ್ಲಿ, ಹಾಲಿನಲ್ಲಿ ನೀರನ್ನು ಬೆರೆಸಿದರೆ, ಅದು ತೆಳುವಾಗುತ್ತದೆ, ಇದರಿಂದಾಗಿ ಅದು ವೇಗವಾಗಿ ಹರಿಯುತ್ತದೆ. ನಿಮ್ಮ ಬೆರಳಿಗೆ ಒಂದು…
ಮಂಡ್ಯ : ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆ.ಶೆಟ್ಟಿಹಳ್ಳಿ ಅರಣ್ಯದಲ್ಲಿ ಕಾಡ್ಗಿಚ್ಚಿನಿಂದ ಬೆಂಕಿ ಕಾಣಿಸಿಕೊಂಡಿದ್ದು, ದಟ್ಟ ಹೊಗೆಯಿಂದ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ವಾಹನ ಸವಾರರು ಪರದಾಟ ನಡೆಸುತ್ತಿದ್ದಾರೆ. ಶ್ರೀರಂಗಪಟ್ಟಣ ತಾಲೂಕಿನ ಕೆ.ಶೆಟ್ಟಿಹಳ್ಳಿ ಅರಣ್ಯದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಬೆಂಗಳೂರು-ಮೈಸೂರು ಹೆದ್ದಾರಿವರೆಗೂ ದಟ್ಟ ಹೊಗೆ ಹಬ್ಬಿದೆ. ದಟ್ಟ ಹೊಗೆಯಿಂದ ವಾಹನ ಸವಾರರು ಪರದಾಟ ನಡೆಸಿದ್ದಾರೆ. ಕಾಡ್ಗಿಚ್ಚಿನಿಂದ ಸುಮಾರು 10 ಹೆಕ್ಟರ್ ಅರಣ್ಯ ನಾಶವಾಗಿದೆ. ಅಗ್ನಿ ಶಾಮಕದಳದ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸು ಕಾರ್ಯಾಚರಣೆ ನಡೆಸುತ್ತಿದ್ದಾರೆ. ಶ್ರೀರಂಗಪಟ್ಟಣ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.














