Author: kannadanewsnow57

ಬೆಂಗಳೂರು : ರಾಜ್ಯದಲ್ಲಿ ಕೋಮುಗಲಭೆ, ಹತ್ಯೆಗಳು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಹೊಸದಾಗಿ ವಿಶೇಷ ಕಾರ್ಯಪಡೆ ರಚನೆಗೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಕೋಮುಗಲಭೆ, ಹತ್ಯೆಗಳು ಹೆಚ್ಚಳವಾಗಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವು ಶಿವಮೊಗ್ಗ, ದಕ್ಷಿಣ ಕನ್ನಡ, ಉಡುಪಿಯಲ್ಲಿ ವಿಶೇಷ ಕಾರ್ಯಪಡೆ ರಚನೆಗೆ ಆದೇಶ ಹೊರಡಿಸಿದೆ.

Read More

ಹಾಸನ : ಯುವಜನರಲ್ಲಿ ಹೃದಯಾಘಾತದ ಪ್ರಕರಣಗಳು ಹೆಚ್ಚಳವಾಗುತ್ತಿದ್ದು,ಕಳೆದ ಒಂದು ವಾರದಲ್ಲಿ ರಾಜ್ಯದಲ್ಲಿ ಹೃದಯಾಘಾತಕ್ಕೆ ಮೂವರು ಬಲಿಯಾಗಿದ್ದಾರೆ. 1.ಹಾಸನದಲ್ಲಿ ಪದವಿ ವಿದ್ಯಾರ್ಥಿ ಹೃದಯಾಘಾತದಿಂದ ಸಾವು. ಅಂತಿಮ ವರ್ಷದ ಪದವಿ ವಿದ್ಯಾರ್ಥಿನಿ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಹಾಸನ ತಾಲೂಕಿನ ಕೆಲವತ್ತಿ ಗ್ರಾಮದಲ್ಲಿ ನಡೆದಿದೆ. ಕೆಲವತ್ತಿ ಗ್ರಾಮದ ಪಾಪಣ್ಣ ಹಾಗೂ ಗಾಯತ್ರಿ ದಂಪತಿ ಪುತ್ರಿ ಕವನ ಕೆ.ವಿ (21) ಮೃತ ವಿದ್ಯಾರ್ಥಿನಿ. ಮನೆಗೆ ನೀರು ತಂದ ಕವನಗೆ ದಿಢೀರ್ ಎದೆನೋವು ಕಾಣಿಸಿಕೊಂಡಿದೆ. ಈ ವೇಳೆ ಕವನ ತಾಯಿ ಬಳಿ ಕುಡಿಯಲು ನೀರು ಕೇಳಿದ್ದಾಳೆ. ತಾಯಿ ನೀರು ತಂದು ಕೊಡುವಷ್ಟರಲ್ಲಿ ಕವನ ಮನೆಯಲ್ಲಿಯೇ ಕುಸಿದು ಬಿದ್ದಿದ್ದಳು. ಕೂಡಲೇ ಪೋಷಕರು ಆಕೆಯನ್ನು ಹಾಸನದ ಖಾಸಗಿ ಆಸ್ಪತ್ರೆಗೆ ಕರೆತಂದಿದ್ದಾರೆ. ಅಷ್ಟರಲ್ಲಾಗಲೇ ಕವನ ಮೃತಪಟ್ಟಿದ್ದರು. 2.ಹಾಸನದಲ್ಲಿ ಕುಸಿದುಬಿದ್ದು ಯುವತಿ ಸಾವು ಹಾಸನ : ಬಾತ್ ರೂಂನಲ್ಲೇ ಕುಸಿದುಬಿದ್ದು ಹೃದಯಾಘಾತದಿಂದ ಯುವತಿ ಸಾವನ್ನಪ್ಪಿದ ಘಟನೆ ಹೊಳೆನರಸೀಪುರ ಪಟ್ಟಣದಲ್ಲಿ ನಡೆದಿದೆ. ಮೃತಳನ್ನು ಸಂಧ್ಯಾ (19) ಎಂದು ಗುರುತಿಸಲಾಗಿದೆ. ಮಡಿವಾಳ ಬಡಾವಣೆ ನಿವಾಸಿಯಾದ ವೆಂಕಟೇಶ್ ಹಾಗೂ…

Read More

ಬೆಂಗಳೂರು: ಕನ್ನಡ ಹುಟ್ಟಿದ್ದು ತಮಿಳಿನಿಂದ ಎಂದು ಹೇಳಿಕೆ ನೀಡಿರುವ ನಟ ಕಮಲ್ ಹಾಸನ್ ಅವರ ಸಿನಿಮಾಗಳನ್ನು ಕರ್ನಾಟಕದಲ್ಲಿ ನಿಷೇಧಿಸುವಂತೆ ವಾಣಿಜ್ಯ ಮಂಡಳಿಗೆ ಪತ್ರ ಬರೆಯಲಾಗುವುದು ಎಂದು ಸಚಿವ ಶಿವರಾಜ್ ತಂಗಡಗಿ ಹೇಳಿದ್ದಾರೆ. ಈ ಕುರಿತು ಮಾತನಾಡಿರುವ ಅವರು, ಕನ್ನಡದ ನೆಲ, ಜಲ, ಭಾಷೆ ವಿಚಾರದಲ್ಲಿ ಯಾವುದೇ ದೊಡ್ಡ ವ್ಯಕ್ತಿ ಇದ್ದರೂ ಅದನ್ನು ಸಹಿಸುವ ಪ್ರಶ್ನೆಯೇ ಇಲ್ಲ. ಕಮಲ್ ಹಾಸನ್ ಅವರು ಕೂಡಲೇ ರಾಜ್ಯದ ಜನರ ಕ್ಷಮೆಯಾಚಿಸಬೇಕು. ಕನ್ನಡದ ಹಲವು ಚಿತ್ರಗಳಲ್ಲಿ ಕಮಲ್‌ ಹಾಸನ್‌ ಅವರು ನಟನೆ ಮಾಡಿದ್ದಾರೆ.  ಓರ್ವ ಹಿರಿಯ ನಟ ಈ ರೀತಿ ಹೇಳಿಕೆ ನೀಡುವುದು ಸರಿಯಲ್ಲ. ಅವರ ಚಿತ್ರಗಳಿಗೆ ರಾಜ್ಯದಲ್ಲಿ ಬಿಡುಗಡೆಗೆ ನಿಷೇಧ ಏರುವಂತೆ ಚಲನಚಿತ್ರ ವಾಣಿಜ್ಯ ಮಂಡಳಿಗೆ ಪತ್ರ ಬರೆಯಲಾವುದು. ನಟನೆ ಮಾಡಲು ಹಾಗೂ ಹಣ ಸಂಪಾದನೆ ಮಾಡಲು ನಮ್ಮ ಭಾಷೆ ಬೇಕು. ಇದೀಗ ಪುಕ್ಕಟೆ ಪ್ರಚಾರಕ್ಕೆ ಮಾತನಾಡುವುದೇ ? ಈ ಹಿಂದೆ ಸೋನು ನಿಗಮ್‌ಗೆ ಅವರು ಇದೇ ರೀತಿ ಕನ್ನಡಿಗರ ಬಗ್ಗೆ ಮಾತನಾಡಿ, ಬಳಿಕ ಎಚ್ಚೆತ್ತು…

Read More

ಬೆಂಗಳೂರು : ಮೈಸೂರು ರಾಜಮನೆತನಕ್ಕೆ 3,011 ಕೋಟಿ ರೂ. TDR ನೀಡುವ ವಿಚಾರಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ನಲ್ಲಿ ರಾಜ್ಯ ಸರ್ಕಾರಕ್ಕೆ ತಾತ್ಕಾಲಿಕ ರಿಲೀಫ್ ಸಿಕ್ಕಿದೆ. ರಾಜ್ಯ ಸರ್ಕಾರ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್, ಟಿಡಿಆರ್ ಬಳಕೆಗೆ ತಡೆ, ಯಾರಿಗೂ ಮಾರಾಟ ಮಾಡುವಂತಿಲ್ಲ ಎಂದು ನ್ಯಾ.ಸೂರ್ಯಕಾಂತ್ ನೇತೃತ್ವದ ತ್ರಿಸದಸ್ಯ ಪೀಠ ಆದೇಶ ಹೊರಡಿಸಿದೆ. ಆಗಸ್ಟ್ 18ಕ್ಕೆ ಅರ್ಜಿ ವಿಚಾರಣೆ ಮುಂದೂಡಿದೆ.

Read More

ಹಾಪುರ: ಲಾರೆನ್ಸ್ ಬಿಷ್ಣೋಯಿ ಗ್ಯಾಂಗ್ ನ ಶಾರ್ಪ್ ಶೂಟರ್ ನವೀನ್ ಕುಮಾರ್ ಪೊಲೀಸರ ಎನ್ ಕೌಂಟರ್ ಗೆ ಬಲಿಯಾಗಿದ್ದಾನೆ. ಉತ್ತರ ಪ್ರದೇಶದ ಕೊತ್ವಾಲಿ ಪ್ರದೇಶದಲ್ಲಿ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ಶಾರ್ಪ್ ಶೂಟರ್ ನವೀನ್ ಕುಮಾರ್ ನನ್ನು ಹತ್ಯೆ ಮಾಡಲಾಗಿದೆ ಎಂದು ಪೊಲೀಸ್ ಅಧಿಅಧಿಕಾರಿಗಳು ತಿಳಿಸಿದ್ದಾರೆ. ಉತ್ತರ ಪ್ರದೇಶ ವಿಶೇಷ ಕಾರ್ಯಪಡೆ ಮತ್ತು ದೆಹಲಿ ಪೊಲೀಸರ ಜಂಟಿ ಕಾರ್ಯಾಚಾರಣೆಯಲ್ಲಿ ಎನ್ ಕೌಂಟರ್ ನಡೆದಿತ್ತು.ಶಾರ್ಪ್ ಶೀಟರ್ ನವೀನ್ ವಿರುದ್ಧ ದೆಹಲಿ, ಮಹಾರಾಷ್ಟ್ರ ಹಾಗೂ ಉತ್ತರ ಪ್ರದೇಶದಲ್ಲಿ ಸುಮಾರು 20ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿದ್ದವು. ಕೊತ್ವಾಲಿ ಪ್ರದೇಶದಲ್ಲಿ ನವೀನ್ ಹಾಗೂ ಆತನ ಗ್ಯಾಂಗ್ ಇರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ಪೊಲೀಸರು ಕಾರ್ಯಾಚರಣೆ ನಡೆಸಿದ್ದರು. ನವೀನ್ ಗ್ಯಾಂಗ್ ಪೊಲೀಸರ ಮೇಲೆ ದಾಳಿ ನಡೆಸಿದೆ. ಈ ವೇಳೆ ಪೊಲೀಸರು ಪ್ರತಿ ದಾಳಿ ನಡೆಸಿದ್ದಾರೆ. ಗುಂಡೇಟಿನಿಂದ ಗಾಯಗೊಂದಿದ್ದ ನವೀನ್ ನನ್ನು ಆಸ್ಪತ್ರೆಗೆ ಸಾಗಿಸಲಾಗಿತ್ತು. ಈ ವೇಳೆ ಮಾರ್ಗಮಧ್ಯೆಯೇ ಆತ ಸಾವನ್ನಪ್ಪಿದ್ದಾನೆ.

Read More

ಚಿಕ್ಕಮಗಳೂರು : ಹೆರಿಗೆಯಾದ 2 ದಿನಕ್ಕೆ ಹೆಣ್ಣು ಮಗು ಮಾರಾಟ ಮಾಡಿದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಎನ್ ಆರ್ ಪುರ ತಾಲೂಕಿನ ಕೊಪ್ಪದಲ್ಲಿ ನಡೆದಿದೆ. ಕಾರ್ಕಳ ಮೂಲದ ರಾಘವೇಂದ್ರ ಎಂಬುವವರಿಗೆ 5 ಸಾವಿರ ಅಡ್ವಾನ್ಸ್ ಪಡೆದು 1 ಲಕ್ಷಕ್ಕೆ ಮಗು ಮಾರಾಟ ಮಾಡಲಾಗಿದೆ,ಕೊಪ್ಪ ಸರ್ಕಾರಿ ಆಸ್ಪತ್ರೆಯಲ್ಲಿ ರತ್ನ ಎಂಬುವವರಿಗೆ ಹೆರಿಗೆ ಆಗಿತ್ತು, ಹೆರಿಗೆ ಆದ 2 ದಿನಕ್ಕೆ 5 ಸಾವಿರ ಅಡ್ವಾನ್ಸ್ ಪಡೆದು 1 ಲಕ್ಷಕ್ಕೆ ಮಗು ಮಾರಾಟ ಮಾಡಲಾಗಿದೆ. ನಿವೃತ್ತ ನರ್ಸ್ ಕುಸುಮಾ ಸಹೋದರ ರಾಘವೇಂದ್ರ ಎಂಬುವವರಿಗೆ ಮಗು ಮಾರಾಟ ಮಾಡಿದ್ದಾರೆ ಎನ್ನಲಾಗಿದೆ. ಸದ್ಯ ಮಗುವನ್ನು ರಕ್ಷಣೆ ಮಾಡಲಾಗಿದೆ,

Read More

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯಲ್ಲಿ ಅಬ್ದುಲ್ ರಹೀಂ ಹತ್ಯೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷದ ಹಲವು ಮುಖಂಡರು ವಿವಿಧ ಹುದ್ದೆಗಳಿಗೆ ಸಾಮೂಹಿಕ ರಾಜೀನಾಮೆ ನೀಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋಮು ಹಿಂಸಾಚಾರ ತಡೆಯುವಲ್ಲಿ ರಾಜ್ಯ ಕಂಗ್ರೆಸ್ ಸರ್ಕಾರ ವಿಫಲವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿರುವ ಸ್ಥಳೀಯ ಕಾಂಗ್ರೆಸ್ ಮುಖಂಡರು, ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕಗಳ ವಿವಿಧ ಹುದ್ದೆಗಳಿಗೆ ಸಾಮೂಹಿಕ ರಾಜೀನಾಮೆ ನೀಡಿದ್ದಾರೆ. ಸಮುದಾಯದಲ್ಲಿ ಆಕ್ರೋಶ ಹೆಚ್ಚಾದ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲ ಕಂಗ್ರೆಸ್ ಉಪಾಧ್ಯಕ್ಷ ಕೆ.ಅಶ್ರಫ್ ರಾಜೀನಾಮೆ ನೀಡಿದ್ದಾರೆ. ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅಶ್ರಫ್, ಇಂದು ಮಧ್ಯಹ್ನ ಮಂಗಳೂರಿನಲ್ಲಿ ನಮ್ಮ ಮುಖಂಡರ ಸಭೆ ನಡೆಯಲಿದ್ದು, ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು. ಗೃಹ ಇಲಾಖೆ ಸಂಪೂರ್ಣ ವಿಫಲಾವಾಗಿದೆ. ನಮಗೆ ನ್ಯಾಯ ಸಿಗುವವರೆಗೂ ಪಕ್ಷದ ಯಾವುದೇ ಚಟುವಟಿಕೆಗಳಲ್ಲಿ ನಾವು ಭಾಗಿಯಾಗಲ್ಲ ಎಂದಿದ್ದಾರೆ.

Read More

ಬೆಂಗಳೂರು: ಇಂದು ಸಿಎಂ ಸಿದ್ದರಾಮಯ್ಯ ಅವರು ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ವಿಧಾನ ಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್ ಅವರ ನಿವಾಸಕ್ಕೆ ಭೇಟಿ ನೀಡಿದ್ದಾರೆ. ಇಂದು ಬೆಳಿಗ್ಗೆ ಸಿಎಂ ಸಿದ್ದರಾಮಯ್ಯ, ಬೆಂಗಳೂರಿನ ಸದಾಶಿವನಗರದಲ್ಲಿರುವ ಬಿ.ಕೆ.ಹರಿಪ್ರಸಾದ್ ಅವರ ನಿವಾಸದಲ್ಲಿ ಹರಿಪ್ರಸಾದ್ ಅವರನ್ನು ಭೇಟಿಯಾದರು. ಹರಿಪ್ರಸಾದ್ ಜೊತೆ ಮಹತ್ವದ ಸಮಾಲೋಚನೆ ನಡೆಸಿದ್ದಾರೆ. ಬಿ.ಕೆ.ಹರಿಪ್ರಸಾದ್ ನಿವಾಸದಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ನಾಯಕರು ಬ್ರೇಕ್ ಫಾಸ್ಟ್ ಸವಿದು, ಮಹತ್ವದ ಚರ್ಚೆ ನಡೆಸಿದ್ದಾರೆ. ಹರಿಪ್ರಸಾದ್ ನಿವಾಸದಲ್ಲಿ ಸಿಎಂ ಹಾಗೂ ಕಾಂಗ್ರೆಸ್ ನಾಯಕರ ಬ್ರೇಕ್ ಫಾಸ್ಟ್ ಮೀಟಿಂಗ್ ತೀವ್ರ ಕುತೂಹಲ ಮೂಡಿಸಿದೆ.

Read More

ಬೆಂಗಳೂರು : ಮೇ.26 ರಿಂದ  ರಾಜ್ಯದ ಉಪ ನೋಂದಣಾಧಿಕಾರಿ ಕಚೇರಿಗಳಲ್ಲಿ ಆಸ್ತಿ ಮತ್ತು ಇತರೆ ನೋಂದಣಿ ಪ್ರಕ್ರಿಯೆ ಸಂಪೂರ್ಣ ಡಿಜಿಟಲೀಕರಣಗೊಳ್ಳಲಿದೆ. ಹೌದು, ಇನ್ನು ಮುಂದೆ ಆಸ್ತಿ ನೋಂದಾಣಿಗೆ ಇ-ಸಹಿ ಕಡ್ಡಾಯವಾಗಿರಲಿದೆ.‌ಇಂದಿನಿಂದ ಆಸ್ತಿ ಅಥವಾ ಇತರ ನೋಂದಣಿ ಪ್ರಕ್ರಿಯೆಗಳಿಗೆ ವಿದ್ಯುನ್ಮಾನ ಸಹಿ ಕಡ್ಡಾಯವಾಗಿದೆ. ಈ ನಿಟ್ಟಿನಲ್ಲಿ ಕರ್ನಾಟಕ ಸ್ಟಾಂಪು ತಿದ್ದುಪಡಿ ಕಾಯ್ದೆ ಜಾರಿಗೊಳಿಸಿ ಕಂದಾಯ ಇಲಾಖೆ ಆದೇಶ ಹೊರಡಿಸಿದೆ. ಬ್ಯಾಂಕ್ ಚಲನ್‌‌ಗಳ ಮೂಲಕ ಸ್ಟಾಂಪುಗಳ ದುರುಪಯೋಗ ತಡೆಯಲು ಇದು ಸಹಕಾರಿಯಾಗಲಿದೆ. ವಿದ್ಯುನ್ಮಾನ ಸಹಿಗಳಿಗೆ ಕಾನೂನಾತ್ಮಕ ಬೆಂಬಲ ನೀಡಲಾಗಿದೆ. ವಿದ್ಯನ್ಮಾನ ವಿಧಾನಗಳ ಮೂಲಕ ಸ್ಟಾಂಪ್ ಶುಲ್ಕ ಪಾವತಿಸಬೇಕಾಗಿದೆ. ಇನ್ನು ಮಂದೆ ಸ್ವತ್ತು ಮತ್ತು ಇತರ ನೋಂದಣಿಗಳಲ್ಲಿ ಡಿಜಿಟಲ್‌ ಸಹಿ, ಡಿಜಿಟಲ್‌ ಇ–ಸ್ಟಾಂಪ್‌ ಬಳಕೆ ಜಾರಿ ಕಡ್ಡಾಯವಾಗಲಿದೆ. ಈ ಹಿಂದಿನಂತೆ ಅಂಟಿಸುವ ಅಥವಾ ಮುದ್ರೆ ಹಾಕುವ ಸ್ಟಾಂಪ್‌ಗಳ ಬಳಕೆಯನ್ನು ನಿಲ್ಲಿಸಲಾಗುತ್ತದೆ. ಇ–ಸ್ಟಾಂಪ್‌ ದುರುಪಯೋಗವನ್ನು ತಡೆಯಲು ಸ್ಟಾಂಪ್‌ ಮೊತ್ತವನ್ನು ವಿದ್ಯುನ್ಮಾನ ಪಾವತಿ ಮಾಡಬೇಕಿದೆ. ಸಿಬ್ಬಂದಿ ಮೂಲಕ (ಮ್ಯಾನ್ಯುವಲ್) ಸ್ಟಾಂಪ್‌ ವಿತರಿಸುವುದು ಸಂಪೂರ್ಣ ಸ್ಥಗಿತವಾಗಲಿದೆ. ಸಿಬ್ಬಂದಿ ಮೂಲಕ ಸ್ಟಾಂಪ್‌ ವಿತರಣೆಗೆ ಸಂಪೂರ್ಣ…

Read More

ಜಗತ್ತು ಈಗ ಮತ್ತೆ ಕೊರೊನಾ ಸೋಂಕಿನ ವಿರುದ್ಧ ಹೋರಾಡುತ್ತಿದೆ. ಕೇವಲ ಒಂದು ದೇಶವಲ್ಲ, ಹಲವು ದೇಶಗಳು ಈ ವೈರಸ್ ನಿಂದ ಪ್ರಭಾವಿತವಾಗಿವೆ. ಭಾರತದಲ್ಲಿಯೂ ಸಹ 1000 ಕ್ಕೂ ಹೆಚ್ಚು ಪ್ರಕರಣಗಳು ದೃಢಪಟ್ಟಿವೆ, ಇದು ಪ್ರಸ್ತುತ ಕಳವಳಕಾರಿ ವಿಷಯವಲ್ಲ.ಆದರೆ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳದಿದ್ದರೆ, ಅಪಾಯ ಮತ್ತು ಸೋಂಕಿತರ ಪ್ರಮಾಣ ಹೆಚ್ಚಾಗಬಹುದು. ಆದಾಗ್ಯೂ, ಈ ಸಮಯದಲ್ಲಿ ದೇಶದಲ್ಲಿ ಜ್ವರ ಮತ್ತು ಶೀತ-ಕೆಮ್ಮಿನ ಋತುಮಾನ ನಡೆಯುತ್ತಿದೆ. ಹೌದು, ನಿಮಗೆ ಜ್ವರ, ಶೀತ ಅಥವಾ ಕೆಮ್ಮು ಪದೇ ಪದೇ ಬರುತ್ತಿದ್ದರೆ, ಅದು ಪ್ರತಿ ಬಾರಿಯೂ ಕೊರೊನಾ ಆಗುವ ಅಗತ್ಯವಿಲ್ಲ. ಇದು ಹವಾಮಾನ ಬದಲಾವಣೆಯಿಂದ ಉಂಟಾಗುವ ಕಾಲೋಚಿತ ಜ್ವರವೂ ಆಗಿರಬಹುದು. ಇದರ ಬಗ್ಗೆ ವೈದ್ಯರ ಅಭಿಪ್ರಾಯವನ್ನು ತಿಳಿದುಕೊಳ್ಳೋಣ. ವೈದ್ಯರು ಏನು ಹೇಳುತ್ತಾರೆ? ಜಾರ್ಖಂಡ್‌ನ ಸಾರ್ವಜನಿಕ ಆರೋಗ್ಯ ಸೇವೆಯಲ್ಲಿ ಕೆಲಸ ಮಾಡುತ್ತಿರುವ ವೈದ್ಯ ಅನುಜ್ ಕುಮಾರ್, ಕೊರೊನಾ ಹೊರತುಪಡಿಸಿ, ಇತ್ತೀಚಿನ ದಿನಗಳಲ್ಲಿ ಜನರು ವೈರಲ್ ಜ್ವರಕ್ಕೂ ಬಲಿಯಾಗುತ್ತಿದ್ದಾರೆ ಎಂದು ಹೇಳುತ್ತಾರೆ. ಇದು ಹವಾಮಾನದಲ್ಲಿನ ಬದಲಾವಣೆಯಿಂದ ಬರುವ ಸಾಮಾನ್ಯ ಜ್ವರ. ಆದಾಗ್ಯೂ, ಜ್ವರ…

Read More