Subscribe to Updates
Get the latest creative news from FooBar about art, design and business.
Author: kannadanewsnow57
ಬೆಳಗಾವಿ : ಬೆಳಗಾವಿ, ಬಾಗಲಕೋಟೆ, ಬೆಳಗಾಗಿ ಸೇರಿದಂತೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ಹಲವು ಮನೆ, ಕಚೇರಿಗಳಲ್ಲಿ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ. ಬಾಗಕೋಟೆ ಜಿಲ್ಲೆಯ ಹೊಲಗೇರಿ ಗ್ರಾಮಪಂಚಾಯಿತಿ ಪಿಡಿಒ ಹಿರೇಮಠ್ ಅವರ ಮನೆ, ಕಚೇರಿ ಸೇರಿದಂತೆ ಹಲವಡೆ ಕಡೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಇಂದು ಲೋಕಾಯುಕ್ತ ಡಿವೈಎಸ್ ಪಿ ನೇತೃತ್ವದಲ್ಲಿ ಬಾಗಲಕೋಟೆಯ ವಿದ್ಯಾಗಿರಿಯಲ್ಲಿ ಪಿಡಿಒ ಎಸ್.ಪಿ. ಹಿರೇಮಠ್ ಮನೆ ಮೇಲೆ ದಾಳಿ ನಡೆಸಲಾಗಿದ್ದು, ದಾಖಲೆಗಳ ಪರಿಶೀಲನೆ ನಡೆಸಲಾಗುತ್ತಿದೆ. ಬೆಳಗಾವಿಯಲ್ಲಿ ಇಬ್ಬರು ಅಧಿಕಾರಿಗಳ ಮನೆ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ. ಬೆಳಗಾವಿಯ ಪ್ರಭಾರಿ ಸಬ್ ರಿಜಿಸ್ಟ್ರಾರ್ ಸಚಿನ್ ಮಂಡೇದ್ ಅವರ ಬೆಳಗಾವಿ ನಗರದ ಆನಗೋಳದಲ್ಲಿರುವ ನಿವಾಸದ ಮೇಲೆ ದಾಳಿ ನಡೆಸಲಾಗಿದೆ. ಮನೆ, ಕಚೇರಿ ಸೇರಿ ಮೂರು ಕಡೆಗಳಲ್ಲಿ ದಾಳಿ ನಡೆಸಲಾಗಿದೆ. ರಾಯಚೂರಿನಲ್ಲಿ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಜಿಲ್ಲಾ ಪಂಚಾಯತಿ ಲೆಕ್ಕಪತ್ರ ಸಹಾಯಕ ಅಧಿಕಾರಿ ನರಸಿಂಗರಾವ್ ಅವರ ಮನೆಯ ಮೇಲೆ ದಾಳಿ ನಡೆಸಲಾಗಿದೆ. ರಾಯಚೂರು ನಗರದ…
ಬಾಗಲಕೋಟೆ : ಬಾಗಲಕೋಟೆಯಲ್ಲಿ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ಹಲವು ಮನೆ, ಕಚೇರಿಗಳಲ್ಲಿ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ. ಬಾಗಕೋಟೆ ಜಿಲ್ಲೆಯ ಹೊಲಗೇರಿ ಗ್ರಾಮಪಂಚಾಯಿತಿ ಪಿಡಿಒ ಹಿರೇಮಠ್ ಅವರ ಮನೆ, ಕಚೇರಿ ಸೇರಿದಂತೆ ಹಲವಡೆ ಕಡೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಇಂದು ಲೋಕಾಯುಕ್ತ ಡಿವೈಎಸ್ ಪಿ ನೇತೃತ್ವದಲ್ಲಿ ಬಾಗಲಕೋಟೆಯ ವಿದ್ಯಾಗಿರಿಯಲ್ಲಿ ಪಿಡಿಒ ಎಸ್.ಪಿ. ಹಿರೇಮಠ್ ಮನೆ ಮೇಲೆ ದಾಳಿ ನಡೆಸಲಾಗಿದ್ದು, ದಾಖಲೆಗಳ ಪರಿಶೀಲನೆ ನಡೆಸಲಾಗುತ್ತಿದೆ.
ಬೆಂಗಳೂರು : ಬಂಗಾಳಕೊಲ್ಲಿಯಲ್ಲಿ ಮಳೆ ಮಾರುತ ಸೃಷ್ಟಿಯಾಗಿದ್ದು, ಬೆಂಗಳೂರು ಸೇರಿದಂತೆ ರಾಜ್ಯದ ಹಲವಡೆ ಫೆಬ್ರವರಿ 1 ರ ನಾಳೆಯಿಂದ ಮತ್ತೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮಳೆ ಮಾರುತ ಪರಿಣಾಮ ರಾಜ್ಯದ ಉತ್ತರ ಒಳನಾಡು, ದಕ್ಷಿಣ ಒಳನಾಡು ಮತ್ತು ಕರಾವಳಿಯ ಕೆಲವು ಕಡೆ ಫೆಬ್ರವರಿ 1 ರಿಂದ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿಯ ಉಡುಪಿ, ದಕ್ಷಿಣ ಕನ್ನಡ, ಉತ್ತರ ಒಳನಾಡಿನ ಧಾರವಾಡ, ಬೆಳಗಾವಿಯಲ್ಲಿ, ದಕ್ಷಿಣ ಒಳನಾಡಿನ ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಶಿವಮೊಗ್ಗದ ಕೆಲವು ಭಾಗಗಳಲ್ಲಿ ಫೆಬ್ರವರಿ 4ರವರೆಗೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜನವರಿ 31 ಹಾಗೂ ಫೆಬ್ರವರಿ 1ರಂದು ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಬಾಗಲಕೋಟೆ, ಗದಗ, ಧಾರವಾಡ, ವಿಜಯಪುರ, ಹಾವೇರಿ, ಮೈಸೂರು, ಮಂಡ್ಯ, ಶಿವಮೊಗ್ಗ, ಚಿಕ್ಕಮಗಳೂರು, ತುಮಕೂರು, ಕೊಡಗು, ಕೋಲಾರ, ಬೆಂಗಳೂರು, ಚಾಮರಾಜನಗರ, ರಾಮನಗರ ಜಿಲ್ಲೆಗಳಲ್ಲಿ…
ಬೆಂಗಳೂರು : 2024-25ನೇ ಸಾಲಿನ ಆರ್.ಟಿ.ಇ. ಶುಲ್ಕ ಮರುಪಾವತಿ ಪ್ರಸ್ತಾವನೆಗಳನ್ನು ಇತ್ಯರ್ಥಪಡಿಸುವ ಬಗ್ಗೆ ಶಿಕ್ಷಣ ಇಲಾಖೆ ಮಹತ್ವದ ಆದೇಶ ಹೊರಡಿಸಿದೆ. ಮೇಲಿನ ವಿಷಯ ಹಾಗೂ ಉಲ್ಲೇಖಗಳಿಗೆ ಸಂಬಂಧಿಸಿದಂತೆ. ಶಿಕ್ಷಣ ಹಕ್ಕು ಕಾಯ್ದೆ 2009ರ ಸೆಕ್ಷನ್ 12(1)(ಸಿ) ಅಡಿ ಖಾಸಗಿ ಅನುದಾನರಹಿತ ಶಾಲೆಗಳಲ್ಲಿ ದಾಖಲಾದ ಮಕ್ಕಳ 2024-25ನೇ ಸಾಲಿನ ಆರ್.ಟಿ.ಇ. ಶುಲ್ಕ ಮರುಪಾವತಿಗೆ ಶಾಲೆಗಳು ಆನ್‌ಲೈನ್ ತಂತ್ರಾಂಶದ ಮೂಲಕ ಬೇಡಿಕೆ ಸಲ್ಲಿಸಲು ದಿನಾಂಕ : 30.10.2024 ರಿಂದ 31.01.2025 ರವರೆಗೆ ತಂತ್ರಾಂಶ ಬಿಡುಗಡೆ ಮಾಡಿ ಶಾಲೆಗಳು ಪ್ರಸ್ತಾವನೆ ಸಲ್ಲಿಸಲು ಅನುಸರಿಸಬೇಕಾದ ಕ್ರಮಗಳು ಮತ್ತು ಈ ಪ್ರಸ್ತಾವನೆಗಳನ್ನು ಕ್ಷೇತ್ರ ಶಿಕ್ಷಣಾಧಿಕಾರಿಗಳು/ಉಪನಿರ್ದೇಶಕರು (ಆಡಳಿತ)/ಆಯುಕ್ತರು/ಅಪರ ಆಯುಕ್ತರ ಕಛೇರಿ ಹಂತಗಳಲ್ಲಿ ಇತ್ಯರ್ಥಪಡಿಸಲು ಪಾಲಿಸಬೇಕಾದ ಕ್ರಮಗಳ/ಜವಾಬ್ದಾರಿಗಳ ಬಗ್ಗೆ ಉಲ್ಲೇಖ (6) ಸುತ್ತೋಲೆಯಲ್ಲಿ ತಿಳಿಸಲಾಗಿದೆ. ಉಲ್ಲೇಖ (6)ರ ಸುತ್ತೋಲೆಯಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಜವಾಬ್ದಾರಿಗಳ ಕ್ರಮ ಸಂಖ್ಯೆ : 03 ರಲ್ಲಿ “2012-13 ರಿಂದ 2015-16 ನೇ ಸಾಲಿನವರೆಗೆ ಶಾಲೆಗಳಿಗೆ ಪಾವತಿಯಾಗಿರುವ ಆರ್.ಟಿ.ಇ. ಶುಲ್ಕ ಮರುಪಾವತಿಗೆ ಸಂಬಂಧಿಸಿದಂತೆ ನಡೆಸಲಾಗಿರುವ ತಪಾಸಣೆಯ ವರದಿಯನ್ವಯ ಶಾಲೆಗಳಿಗೆ…
ದಾವಣಗೆರೆ : ಯಾವುದೇ ವ್ಯಕ್ತಿಯನ್ನು ನಿಂದನೆ ಮಾಡಲು ಅವಕಾಶವಿಲ್ಲ, ಮೈಕ್ರೋ ಫೈನಾನ್ಸ್ ಕಂಪನಿಗಳು ಜನರಿಗೆ ಕಿರುಕುಳ ನೀಡಿದಲ್ಲಿ ಎಫ್‌ಐಆರ್ ದಾಖಲಿಸುವಂತೆ ಜಿಲ್ಲಾಧಿಕಾರಿ ಗಂಗಾಧರಸ್ವಾಮಿ.ಜಿ.ಎಂ ಸೂಚಿಸಿದರು. ಗುರುವಾರ (ಜ.30) ರಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿಯಲ್ಲಿ ಕಿರುಹಣಕಾಸು ಸಂಸ್ಥೆಗಳು, ಬ್ಯಾಂಕೇತರ ಹಣಕಾಸು ಸಂಸ್ಥೆಗಳು, ಸಾಲ ವಿತರಣೆ ಮತ್ತು ಮರುಪಾವತಿ ಪ್ರಕ್ರಿಯೆಗಳಲ್ಲಿ ಕೈಗೊಳ್ಳುವ ಕ್ರಮಗಳ ಕುರಿತು ಸಲಹೆ ಮತ್ತು ಸೂಚನೆಗಳ ಕುರಿತು ಆಯೋಜಿಸಲಾಗಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಮಾತಾನಾಡಿದರು. ಮೈಕ್ರೋ ಫೈನಾನ್ಸ್ ಕಂಪನಿಗಳು ನ್ಯಾಯಬದ್ಧವಾಗಿ ವ್ಯವಹರಿಸಲಿ, ಆದರೆ ಕಿರುಕುಳ ಮರುಕಳಿಸಿದರೆ ಸ್ವಯಂ ಹಿತಾಸಕ್ತಿಯಿಂದ ಎಫ್‌ಐಆರ್ ದಾಖಲಿಸುವಂತೆ ತಿಳಿಸಿದರು. ಸಾಲವನ್ನು ನೀಡುವಾಗ ಸಾಲ ಪಡೆಯುವ ವ್ಯಕ್ತಿಯ ಮತ್ತು ಕುಟುಂಬದ ಒಟ್ಟು ವಾರ್ಷಿಕ ಆದಾಯವನ್ನು ಪರಿಗಣಿಸಬೇಕು. ಮಾಸಿಕ ಒಟ್ಟು ಆದಾಯದ ಶೇ 50 ರಷ್ಟು ಮೊತ್ತವನ್ನು ಮಾತ್ರ ಸಾಲ ಮರುಪಾವತಿ ಸಾಮರ್ಥ್ಯ ಎಂದು ಪರಿಗಣಿಸಬೇಕು. ವ್ಯಕ್ತಿಯು ಬೇರೆಯ ಮೂಲಗಳಿಂದ ಈಗಾಗಲೇ ಪಡೆದಿರುವ ಸಾಲದ ಮರುಪಾವತಿ ಕಂತಿನ ಮೊತ್ತವು. ಆದಾಯದ ಮೂಲಕ್ಕಿಂತ ಶೇ. 50 ರಷ್ಟು ಮೀರುತ್ತಿದ್ದರೆ, ಅಂತಹ…
ನವದೆಹಲಿ : ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಫೆಬ್ರವರಿ 1 ರ ರ ನಾಳೆ ಪ್ರಧಾನಿ ನರೇಂದ್ರ ಮೋದಿ ಸರ್ಕಾರದ 3 ನೇ ಅವಧಿಯ ಎರಡನೇ ಬಜೆಟ್ ಮಂಡಿಸಲಿದ್ದಾರೆ. ಈ ಮೂಲಕ ಅವರು ಸತತವಾಗಿ 8 ನೇ ಬಾರಿ ಬಜೆಟ್ ಮಂಡಿಸಿದ ದಾಖಲೆ ನಿರ್ಮಿಸಲಿದ್ದಾರೆ. ಜನವರಿ 31 ರ ಇಂದು ಅಧ್ಯಕ್ಷ ದ್ರೌಪದಿ ಮುರ್ಮು ಅವರು ಸಂಸತ್ತಿನ ಉಭಯ ಸದನಗಳಾದ ಲೋಕಸಭೆ ಮತ್ತು ರಾಜ್ಯಸಭೆಯ ಜಂಟಿ ಅಧಿವೇಶನವನ್ನುದ್ದೇಶಿಸಿ ಭಾಷಣ ಮಾಡುವ ಮೂಲಕ ಅಧಿವೇಶನ ಪ್ರಾರಂಭವಾಗಲಿದೆ. ನಂತರ ಆರ್ಥಿಕ ಸಮೀಕ್ಷೆ ನಡೆಯಲಿದೆ. ಒಟ್ಟಾರೆಯಾಗಿ ಸಂಸತ್ತಿನ ಬಜೆಟ್ ಅಧಿವೇಶನದ ಮೊದಲ ಭಾಗವು 2025 ರ ಜನವರಿ 31 ರಂದು ಪ್ರಾರಂಭವಾಗಿ ಫೆಬ್ರವರಿ 13 ರಂದು ಕೊನೆಗೊಳ್ಳಲಿದೆ. ಅಧಿವೇಶನದ ಎರಡನೇ ಭಾಗವು ಮಾರ್ಚ್ 10, 2025 ರಂದು ಪ್ರಾರಂಭವಾಗುತ್ತದೆ ಮತ್ತು ಏಪ್ರಿಲ್ 4, 2025 ರಂದು ಕೊನೆಗೊಳ್ಳುತ್ತದೆ. 2019ರಲ್ಲಿ ಮೋದಿ ಸರ್ಕಾರದ ಎರಡನೇ ಅವಧಿಯಲ್ಲಿ ಪೂರ್ಣಾವಧಿ ಹಣಕಾಸು ಸಚಿವೆಯಾಗಿ ನೇಮಕವಾದ ನಿರ್ಮಲಾ ಸೀತಾರಾಮನ್ ಅವರು…
ಇ-ಆಸ್ತಿ ತಂತ್ರಾಂಶದ ಕುರಿತು ಕೊಪ್ಪಳ ನಗರಸಭೆಯಿಂದ ಫೆಬ್ರವರಿ 3 ರಿಂದ 13 ರವರೆಗೆ ನಗರದ ವಿವಿಧ ವಾರ್ಡ್‍ಳಲ್ಲಿ ಶಿಬಿರಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ನಗರಸಭೆ ಪೌರಾಯುಕ್ತರಾದ ಗಣಪತಿ ಪಾಟೀಲ್ ತಿಳಿಸಿದ್ದಾರೆ. ಕೊಪ್ಪಳ ನಗರಸಭೆ ವ್ಯಾಪ್ತಿಯಲ್ಲಿ ಇ-ಆಸ್ತಿ ತಂತ್ರಾಂಶವನ್ನು ಸರಳೀಕರಣಗೊಳಿಸಿ ಪರಿಣಾಮಕಾರಿಯಾಗಿ ಅನುಷ್ಟಾನಗೊಳಿಸಬೇಕಾಗಿರುವುದರಿಂದ ಸಾರ್ವಜನಿಕರಿಂದ ಆಸ್ತಿ ಕಣಜ ತಂತ್ರಾಂಶದಲ್ಲಿ ಅವಶ್ಯವಿರುವ ದಾಖಲೆಗಳ ಪ್ರತಿಗಳನ್ನು ಪಡೆದು ಮುಂಬರುವ ದಿನಗಳಲ್ಲಿ ಸರ್ಕಾರದಿಂದ “ಬಿ” ಖಾತಾ ಉತಾರ ವಿತರಿಸಬೇಕಾಗಿರುವುದರಿಂದ ಕೊಪ್ಪಳ ನಗರಸಭೆ ವ್ಯಾಪ್ತಿಯ ಆಸ್ತಿ ತೆರಿಗೆ ಪಾವತಿದಾರರಿಗೆ ಆಸ್ತಿಗಳ ದಾಖಲೆಗಳನ್ನು ಸಂಗ್ರಹಿಸುವ ಹಾಗೂ ಆಸ್ತಿ ಕಣಜ ತಂತ್ರಾಂಶದಲ್ಲಿ ದಾಖಲೆಗಳನ್ನು ಕಾಲೋಚಿತಗೊಳಿಸಬೇಕಾಗಿರುವುದರಿಂದ ಶಿಬಿರಗಳನ್ನು ಕೊಪ್ಪಳ ನಗರದ ವಿವಿಧ ಸ್ಥಳಗಳಲ್ಲಿ ಆಯೋಜಿಸಲಾಗಿದೆ. ಆಯಾ ವಾರ್ಡಿನ ಸಾರ್ವಜನಿಕರು ಶಿಬಿರ ಸ್ಥಳಕ್ಕೆ ಭೇಟಿ ನೀಡಿ ತಮ್ಮ ತಮ್ಮ ಆಸ್ತಿಗಳ ದಾಖಲಾತಿಗಳನ್ನು ಅಲ್ಲಿ ನಿಯೋಜಿಸಿರುವ ಸಿಬ್ಬಂದಿ ಅಥವಾ ಅಧಿಕಾರಿಗಳಿಗೆ ನೀಡಬೇಕು. ಶಿಬಿರ ದಿನಾಂಕ & ಸ್ಥಳ; 1 ರಿಂದ 3ನೇ ವಾರ್ಡ್‍ಳ ಶಿಬಿರವು ಫೆಬ್ರವರಿ 3 ರಂದು ನಗರದ ಕಾತರಕಿ ರಸ್ತೆಯ ಸಿರಸಪ್ಪಯ್ಯನ ಮಠದ ಹತ್ತಿರದಲ್ಲಿ…
ಪ್ರಯಾಗ್ ರಾಜ್ : ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳದಲ್ಲಿ ಪ್ರಧಾನಿ ನರೇಂದ್ರ ಮೋದಿ ಕೂಡ ಸಂಗಮದಲ್ಲಿ ಸ್ನಾನ ಮಾಡಲಿದ್ದಾರೆ. ಹೌದು, ಪ್ರಧಾನಮಂತ್ರಿ ಅವರು ಫೆಬ್ರವರಿ 5 ರಂದು ಪ್ರಯಾಗ್‌ರಾಜ್‌ಗೆ ಭೇಟಿ ನೀಡಿ ಪವಿತ್ರ ಸ್ನಾನ ಮಾಡಲಿದ್ದಾರೆ. ಮಾಧ್ಯಮ ವರದಿಗಳ ಪ್ರಕಾರ, ಪ್ರಧಾನಿ ಮೋದಿ ಸುಮಾರು 4 ಗಂಟೆಗಳ ಕಾಲ ಮಹಾ ಕುಂಭದಲ್ಲಿ ತಂಗಲಿದ್ದಾರೆ. ಫೆಬ್ರವರಿ 1 ರಂದು ನಡೆಯುವ ಮಹಾಕುಂಭ ಮೇಳದಲ್ಲಿ ಉಪರಾಷ್ಟ್ರಪತಿ ಜಗದೀಪ್ ಧಂಖರ್ ಭಾಗವಹಿಸಲಿದ್ದಾರೆ ಎಂದು ವರದಿಯಾಗಿದೆ. ಇದಲ್ಲದೆ, ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಫೆಬ್ರವರಿ 10 ರಂದು ಪ್ರಯಾಗ್‌ರಾಜ್‌ಗೆ ಭೇಟಿ ನೀಡಿ ಭವ್ಯ ಜಾತ್ರೆಯಲ್ಲಿ ಭಾಗವಹಿಸಲು ಯೋಜಿಸುತ್ತಿದ್ದಾರೆ. ಪ್ರಧಾನ ಮಂತ್ರಿ ನರೇಂದ್ರ ಮೋದಿ ಫೆಬ್ರವರಿ 5 ರಂದು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ ಮಾಡಲು ಆಗಮಿಸಲಿದ್ದಾರೆ. ದೇಶದ ಉನ್ನತ ನಾಯಕರ ಭೇಟಿಗೆ ಉನ್ನತ ಮಟ್ಟದ ಸಿದ್ಧತೆಗಳು ನಡೆಯುತ್ತಿವೆ. ಇತ್ತೀಚೆಗೆ ಗೃಹ ಸಚಿವ ಅಮಿತ್ ಶಾ ಮಹಾ ಕುಂಭಮೇಳದಲ್ಲಿ ಸ್ನಾನ ಮಾಡಿದರು. ಫೆಬ್ರವರಿ 1 ರಂದು ಉಪರಾಷ್ಟ್ರಪತಿ ಜಗದೀಪ್…
ಬೆಂಗಳೂರು : ರಾಜ್ಯಾದ್ಯಂತ ಎಲ್ಲಾ ವ್ಯಾಪಾರ ಉದ್ದಿಮೆ, ಶಿಕ್ಷಣ ಸಂಸ್ಥೆ, ಅಂಗಡಿ ಮುಂಗಟ್ಟುಗಳ ನಾಮಫಲಕದಲ್ಲಿ ಶೇ.60ರಷ್ಟು ಕನ್ನಡ ಅಳವಡಿಕೆಗೆ ಕಠಿಣವಾದ ಅಂತಿಮ ಕರಡು ನಿಯಮ ರೂಪಿಸುವಂತೆ ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಶಿವರಾಜ್ .ಎಸ್.ತಂಗಡಗಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ವಿಕಾಸಸೌಧದ ತಮ್ಮ ಕಚೇರಿಯಲ್ಲಿ ಗುರುವಾರ ಸಚಿವರು ಕನ್ನಡ ಅಭಿವೃದ್ಧಿ ಪ್ರಾಧಿಕಾರ, ಕೈಗಾರಿಕೆ ಇಲಾಖೆ, ಗೃಹ ಇಲಾಖೆ ಹಾಗೂ ಕಾನೂನು, ಶಾಲಾ ಶಿಕ್ಷಣ, ಗ್ರಾಮೀಣಾಭಿವೃದ್ಧಿ ಇಲಾಖೆಯ ಅಧಿಕಾರಗಳ ಜತೆ ಸಭೆ ನಡೆಸಿ ಈ ಸೂಚನೆ ನೀಡಿದ್ದಾರೆ. ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ (ತಿದ್ದುಪಡಿ) ವಿಧೇಯಕ ವನ್ನು ಸಮರ್ಪಕ ಅನುಷ್ಠಾನ ಆಗಲೇ ಬೇಕು. ಕೆಲವೆಡೆ ನಾಮಫಲಕದಲ್ಲಿ ಶೇ. 60ರಷ್ಟು ಕನ್ನಡ ಬಳಕೆ ಆಗಿಲ್ಲ. ಹೀಗಾಗಿ ಕಠಿಣವಾದ ಕ್ರಮ ಆಗಬೇಕು. ಶೀಘ್ರವೇ ನಿಯಮಗಳ ಆದೇಶ ಹೊರಡಿಸಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಪೊಲೀಸರನ್ನೊಳಗೊಂಡ ಟಾಸ್ಕ್ ಫೋರ್ಸ್ ರಚನೆ, ಬಿಬಿಎಂಪಿ ವಲಯಗಳಲ್ಲಿ ಜಾಗೃತ ವಾಹನಗಳ ಬಳಕೆ, ರಾಜ್ಯಾದ್ಯಂತ ಸಾರ್ವಜನಿಕರಲ್ಲಿ ನಾಮ…
ಬೆಂಗಳೂರು: ರಾಜ್ಯದ ಕ್ರೀಡಾಪಟುಗಳಿಗೆ ಭರ್ಜರಿ ಸಿಹಿಸುದ್ದಿ ಎನ್ನುವಂತೆ ಪೊಲೀಸ್ ಇಲಾಖೆಯ ವಿವಿಧ ನೇಮಕಾತಿಯಲ್ಲಿ ಕ್ರೀಡಾಪಟುಗಳಿಗೆ ನೀಡಲಾಗುತ್ತಿದ್ದಂತ ಮೀಸಲಾತಿ ಪ್ರಮಾಣವನ್ನು ಶೇ.2ರಿಂದ 3ಕ್ಕೆ ಹೆಚ್ಚಳ ಮಾಡುವಂತ ನಿರ್ಧಾರವನ್ನು ಸಚಿವ ಸಂಪುಟ ಸಭೆಯಲ್ಲಿ ಅನುಮೋದಿಸಲಾಗಿದೆ. ಗುರುವಾರ ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದಲ್ಲಿ ನಡೆದಂತ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಪೊಲೀಸ್ ಇಲಾಖೆಯ ನೇರ ನೇಮಕಾತಿಯಲ್ಲಿ ಕಾನ್ಸಟೇಬಲ್‌ನಿಂದ ಡಿವೈಎಸ್ಪಿ ವರೆಗೆ ಪ್ರಶಂಸನೀಯ ಕ್ರೀಡಾಪಟುಗಳ ಮೀಸಲಾತಿ ಪ್ರಮಾಣವನ್ನು ಶೇ.2 ರಿಂದ ಶೇ.3ಕ್ಕೆ ಹೆಚ್ಚಿಸಲು ರಾಜ್ಯ ಸಚಿವ ಸಂಪುಟ ಒಪ್ಪಿಗೆ ನೀಡಿದೆ. ಈಗ ಈ ಮೀಸಲಾತಿ ಪ್ರಮಾಣ ಶೇ.2 ರಷ್ಟಿದ್ದು ಇದನ್ನು ಶೇ.3ಕ್ಕೆ ಹೆಚ್ಚಿಸಲು ಪ್ರಸ್ತಾಪಿಸಿದೆ. 2023ರಲ್ಲಿನ ಅನುಸೂಚಿಯ ಕ್ರಮ ಸಂಖ್ಯೆ (3) ರಲ್ಲಿ ಡಿ.ವೈ.ಎಸ್.ಪಿ ಹುದ್ದೆಯ ವಯೋಮಿತಿ ಕಾಲಂನಲ್ಲಿ ಎಸ್‌ಸಿ/ಎಸ್‌ಟಿ ಹಾಗೂ ಕೆಟಗರಿ-1 ರ ಅಭ್ಯರ್ಥಿಗಳ ಗರಿಷ್ಠ ವಯೋಮಿತಿಯನ್ನು 45 ವರ್ಷಗಳಿಗೆ ಹೆಚ್ಚಿಸಲು ನಿಯಮಗಳಿಗೆ ತಿದ್ದುಪಡಿ ತರಲಾಗುತ್ತದೆ. ಕರ್ನಾಟಕ ರಾಜ್ಯ ಪೊಲೀಸ್ ಸೇವೆಗಳು (ಪೊಲೀಸ್ ಕಾನ್ಸ್ ಸ್ಟೇಬಲ್, ಪೊಲೀಸ್ ಸಬ್-ಇನ್ಸ್ ಪೆಕ್ಟರ್ ಮತ್ತು ಪೊಲೀಸ್…








