Author: kannadanewsnow57

ಬೆಂಗಳೂರು: ಬೆಸ್ಕಾಂನ ಗ್ರಾಮಾಂತರ ಪ್ರದೇಶಗಳಲ್ಲಿ (ನಾನ್ ಆರ್ಎಪಿಡಿಆರ್ ಪಿ) ಸಮಗ್ರ ಕಂದಾಯ ನಿರ್ವಹಣಾ ಹೊಸ ತಂತ್ರಾಂಶ ಅಳವಡಿಕೆ ಕಾರ್ಯ ಕೈಗೆತ್ತಿಕೊಂಡ ಹಿನ್ನೆಲೆಯಲ್ಲಿ ದಿನಾಂಕ 30.01.2025 ರಿಂದ 01.02.2025 (3 ದಿನ)ರ ವರೆಗೆ ಬಿಲ್ಲಿಂಗ್, ಹೊಸ ಸಂಪರ್ಕ ಹಾಗೂ ತಂತ್ರಾಂಶ ಆಧಾರಿತ ಸೇವೆಗಳು ಲಭ್ಯವಿರುವುದಿಲ್ಲ. ಗ್ರಾಹಕರು ಸಹಕರಿಸಬೇಕಾಗಿ ಬೆಸ್ಕಾಂ ಪ್ರಕಟಣೆ ತಿಳಿಸಿದೆ. ಬೆಸ್ಕಾಂ ಗ್ರಾಮಾಂತರ ಪ್ರದೇಶಗಳಲ್ಲಿ ಸಮಗ್ರ ಕಂದಾಯ ನಿರ್ವಹಣಾ ಹೊಸ ತಂತ್ರಾಂಶ ಅಳವಡಿಕೆ ಕಾರ್ಯ ಕೈಗೊಳ್ಳಲಾಗಿದೆ. ಈ ಕಾರಣದಿಂದ ಜನವರಿ 30 ರಿಂದ ಫೆಬ್ರವರಿ 1ರವರೆಗೆ ಮೂರು ದಿನಗಳ ಕಾಲ ಬಿಲ್ಲಿಂಗ್, ಹೊಸ ಸಂಪರ್ಕ, ತಂತ್ರಾಂಶ ಆಧಾರಿತ ಸೇವೆಗಳು ಲಭ್ಯ ಇರುವುದಿಲ್ಲ ಎಂದು ಬೆಸ್ಕಾಂ ತಿಳಿಸಿದೆ. ಬೆಂಗಳೂರು ನಗರ ಜಿಲ್ಲೆ ಹೊರತು ಪಡಿಸಿ, ಬೆಸ್ಕಾಂ ವ್ಯಾಪ್ತಿಯ ಉಳಿದ 7 ಜಿಲ್ಲೆಗಳ ಗ್ರಾಮಾಂತರ ಪ್ರದೇಶಗಳಲ್ಲಿ ಕಂದಾಯ ಸಂಗ್ರಹ ಹೊರತು ಪಡಿಸಿ ತಂತ್ರಾಂಶ ಆಧಾರಿತ ಸೇವೆಗಳಲ್ಲಿ ವ್ಯತ್ಯಯ ಆಗಲಿದೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.

Read More

ಬೆಂಗಳೂರು : ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಯುವನಿಧಿ ಯೋಜನೆಯಲ್ಲಿ 2023-24ನೇ ಸಾಲಿನಲ್ಲಿ ಸ್ನಾತಕ ಪದವಿ, ಸ್ನಾತಕೋತ್ತರ ಪದವಿ ಮತ್ತು ಡಿಪ್ಲೋಮಾ ಪದವಿಯಲ್ಲಿ ತೇರ್ಗಡೆಯಾಗಿ ಉದ್ಯೋಗ ಸಿಗದ ಅರ್ಹ ಅಭ್ಯರ್ಥಿಗಳು, ಪದವೀಧರರಿಗೆ ಪ್ರತಿ ತಿಂಗಳಿಗೆ ರೂ.3 ಸಾವಿರ ಹಾಗೂ ಡಿಪ್ಲೋಮಾ ಪದವೀಧರರಿಗೆ ರೂ.1500 ನಿರುದ್ಯೋಗಿ ಭತ್ಯೆಯನ್ನು ನೀಡಲಾಗುತ್ತದೆ. ಫಲಿತಾಂಶದ ನಂತರ ನಿರುದ್ಯೋಗಿಗಳಾಗಿ 180 ದಿನಗಳು ಪೂರೈಸಿ ಹೆಸರನ್ನು ನೋಂದಯಿಸಿಕೊಂಡ ಅಭ್ಯರ್ಥಿಗಳಿಗೆ ನೇರ ನಗದು ವರ್ಗಾವಣೆ ಮಾಡಲಾಗುತ್ತಿದೆ. ಹೆಚ್ಚಿನ ಸಂಖ್ಯೆಯಲ್ಲಿ ಅಭ್ಯರ್ಥಿಗಳು ಯುವನಿಧಿ ಯೋಜನೆಯ ಸೌಲಭ್ಯವನ್ನು ಪಡೆಯಲು ಅನುಕೂಲವಾಗುವಂತೆ ವಿಶೇಷ ನೋಂದಣಿ ಅಭಿಯಾನವನ್ನು ಫೆಬ್ರವರಿ, 15 ರವರೆಗೆ ವಿಸ್ತರಿಸಲಾಗಿದೆ. ವಿಶೇಷ ನೋಂದಣಿ ಅಭಿಯಾನವು ಜಿಲ್ಲೆಯ ಎಲ್ಲಾ ತಾಲ್ಲೂಕು ಪಂಚಾಯಿತಿ ಕಚೇರಿಯ ಆವರಣದಲ್ಲಿ ನಡೆಯಲಿದೆ. ಬೆಂಗಳೂರು ವಿಶ್ವವಿದ್ಯಾಲಯ, ಜ್ಞಾನಭಾರತಿ ಆವರಣ, ಬೆಂಗಳೂರು. ಬೆಂಗಳೂರು ನಗರ ವಿಶ್ವವಿದ್ಯಾಲಯ, ಸೆಂಟ್ರಲ್ ಕಾಲೇಜು ಆವರಣ, ಬೆಂಗಳೂರು. ಸಿಓಇ ಕಟ್ಟಡ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ ಆವರಣ, ತುಮಕೂರು ರಸ್ತೆ, ಪೀಣ್ಯ, ಬೆಂಗಳೂರು ಇಲ್ಲಿ ಕಾರ್ಯನಿರ್ವಹಿಸುತ್ತಿರುವ ಉದ್ಯೋಗ ವಿನಿಮಯ ಕಛೇರಿಗಳು ಮತ್ತು…

Read More

ಫೈನಾನ್ಸ್, ಮೈಕ್ರೋ ಫೈನಾನ್ಸ್ ಮತ್ತು ಫಾನ್ ಬ್ರೋಕರ್‍ಗಳು ಭಾರತೀಯ ರಿಸರ್ವ್ ಬ್ಯಾಂಕ್‍ನ ಮಾರ್ಗಸೂಚಿಯನ್ನು ಕಡ್ಡಾಯವಾಗಿ ಪಾಲಿಸುವಂತೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಸ್ಪಷ್ಟ ನಿರ್ದೇಶನ ನೀಡಿದ್ದಾರೆ. ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ಮೈಕ್ರೋ ಫೈನಾನ್ಸ್ ಮತ್ತು ಫಾನ್ ಬ್ರೋಕರ್‍ಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಆರ್‍ಬಿಐ ಮಾರ್ಗಸೂಚಿ ಪ್ರಕಾರ 2 ಲಕ್ಷ ರೂ.ವರೆಗೆ ಮಾತ್ರ ಸಾಲ ನೀಡಬಹುದಾಗಿದೆ. ಆದರೆ ಸಾಲ ನೀಡುವಾಗ ಸಾಲ ಪಡೆಯುವವರು ಸಾಲ ಮರುಪಾವತಿ ಮಾಡುವ ಸಾಮಥ್ರ್ಯ ಇದೆಯೇ ಎಂದು ಗಮನಿಸಿ ಸಾಲವನ್ನು ನೀಡಬೇಕು. ಅದನ್ನು ಬಿಟ್ಟು ಕಿರುಕುಳ ನೀಡುವುದು ಸರಿಯಲ್ಲ ಎಂದು ಹೇಳಿದರು. ಸಾರ್ವಜನಿಕರಿಗೆ ತೊಂದರೆಯಾಗದಂತೆ ಗಮನಹರಿಸುವುದು ಎಲ್ಲರ ಕರ್ತವ್ಯವಾಗಿದೆ. ಆ ನಿಟ್ಟಿನಲ್ಲಿ ತಾವೂ ಸಹ(ಪೈನಾನ್ಸ್ ಕಂಪನಿಗಳು) ಕಾನೂನು ನಿಯಮಾನುಸಾರ ನಡೆದುಕೊಳ್ಳಬೇಕು. ಅದು ಬಿಟ್ಟು ದೌರ್ಜನ್ಯ ನಡೆಯುವುದು ಕಂಡುಬಂದರೆ ನಿಯಮಾನುಸಾರ ಕ್ರಮ ಜರುಗಿಸಬೇಕಾಗುತ್ತದೆ ಎಂದು ಜಿಲ್ಲಾಧಿಕಾರಿ ಅವರು ಎಚ್ಚರಿಸಿದರು. ಪ್ರತಿಯೊಬ್ಬರಲ್ಲಿಯೂ ಆರ್ಥಿಕ ಶಿಸ್ತು ಇರಬೇಕು. ಅದನ್ನು ಬಿಟ್ಟು ಹೆಚ್ಚುವರಿ ಸಾಲವನ್ನು ನೀಡುವುದು. 5 ಗಂಟೆಯ…

Read More

ವಿಜಯಪುರ : ವಿಜಯಪುರದಲ್ಲಿ ಘೋರ ಘಟನೆಯೊಂದು ನಡೆದಿದ್ದು, ಬಾರ್ ನಲ್ಲಿ ಮದ್ಯ ಸೇವಿಸಲು ಹೋಗಿದ್ದ ವ್ಯಕ್ತಿಯೊಬ್ಬ ನೀರು ಎಂದು ತಿಳಿದು ಆಸಿಡ್ ಮಿಕ್ಸ್ ಮಾಡಿ ಕುಡಿದು ಸಾವನ್ನಪ್ಪಿರುವ ಘಟನೆ ನಡೆದಿದೆ. ವಿಜಯಪುರದ ಉಪ್ಪಲಿ ಬುರುಜ್ ನಿವಾಸಿ ಮೊಹ್ಮದ್ ಶಫೀಕ್ ಮನಿರ್ಯಾ(40) ಬಾರ್ ನಲ್ಲಿ ಕುಡಿಯಲು ಹೋಗಿದ್ದ ವೇಳೆ ಟೇಬಲ್ ಮೇಲಿದ್ದ ಆಸಿಡ್ ಅನ್ನೇ ನೀರು ಎಂದು ತಿಳಿದು ಮದ್ಯಕ್ಕೆ ಮಿಕ್ಸ್ ಮಾಡಿ ಕುಡಿದು ಮೃತಪಟ್ಟಿದ್ದಾನೆ. ವಿಜಯಪುರದ ಎಲ್.ಬಿ.ಎಸ್. ಮಾರುಕಟ್ಟೆಯಲ್ಲಿರುವ ಸಿದ್ದಾರ್ಥ ಬಾರ್ ನಲ್ಲಿ ಈ ಘಟನೆ ನಡೆದಿದೆ. ಆ್ಯಸಿಡ್ ಕುಡಿದ ನಂತರ ಶಫೀಕ್ ಗಂಟಲಲ್ಲಿ ಕಡಿತ ಶುರುವಾಗಿದ್ದು, ಅದನ್ನು ಪರಿಶೀಲಿಸಿದಾಗ ಟೈಲ್ಸ್ ತೊಳೆಯುವ ಆಸಿಡ್ ಎಂದು ಗೊತ್ತಾಗಿದೆ. ಅಷ್ಟರಲ್ಲಿ ಆತ ಕೆಲಸ ಮಾಡುವ ಅಂಗಡಿಗೆ ಹೋಗಿ ಕುಸಿದು ಬಿದ್ದಿದ್ದಾನೆ. ಕೂಡಲೇ ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ. ಬಾರ್ ನವರ ನಿರ್ಲಕ್ಷ್ಯವೇ ಘಟನೆಗೆ ಕಾರಣ ಎಂದು ಆರೋಪಿಸಲಾಗಿದ್ದು, ಸದ್ಯ ಘಟನೆ ಸಂಬಂಧ ಶಫೀಕ್ ಪತ್ನಿ ಗಾಂಧಿ ಚೌಕ ಪೊಲೀಸ್ ಠಾಣೆಗೆ ಬಾರ್…

Read More

ವೆಸ್ಟ್ ಬ್ಯಾಂಕ್ : ಬುಧವಾರ ಆಕ್ರಮಿತ ಪಶ್ಚಿಮ ದಂಡೆಯಲ್ಲಿ ಇಸ್ರೇಲ್ ನಡೆಸಿದ ವಾಯುದಾಳಿಯಲ್ಲಿ ಕನಿಷ್ಠ 10 ಪ್ಯಾಲೆಸ್ಟೀನಿಯನ್ನರು ಸಾವನ್ನಪ್ಪಿದ್ದಾರೆ ಎಂದು ಪ್ಯಾಲೆಸ್ಟೀನಿಯನ್ ಆರೋಗ್ಯ ಸಚಿವಾಲಯ ತಿಳಿಸಿದೆ. ಈ ದಾಳಿಯಲ್ಲಿ ಇಸ್ರೇಲ್ ಸೇನೆಯು ಸಶಸ್ತ್ರ ಉಗ್ರಗಾಮಿಗಳನ್ನು ಗುರಿಯಾಗಿಸಿಕೊಂಡಿದೆ ಎಂದು ಹೇಳಿಕೊಂಡಿದೆ. ಉತ್ತರ ಪಶ್ಚಿಮ ದಂಡೆಯಲ್ಲಿರುವ ತುಬಾಸ್ ಪ್ರದೇಶದಲ್ಲಿ ವಾಯುದಾಳಿ ನಡೆದಿದೆ ಎಂದು ಪ್ಯಾಲೆಸ್ಟೀನಿಯನ್ ರೆಡ್ ಕ್ರೆಸೆಂಟ್ ತಿಳಿಸಿದೆ. ಗಾಜಾದಲ್ಲಿ ಯುದ್ಧ ಆರಂಭವಾದಾಗಿನಿಂದ ಪಶ್ಚಿಮ ದಂಡೆಯಲ್ಲಿ ಹಿಂಸಾಚಾರ ಹೆಚ್ಚಾಗಿದೆ. ನೂರಾರು ಪ್ಯಾಲೆಸ್ಟೀನಿಯನ್ನರು ಕೊಲ್ಲಲ್ಪಟ್ಟಿದ್ದಾರೆ, ಅವರಲ್ಲಿ ಹಲವರು ಶಸ್ತ್ರಸಜ್ಜಿತ ಬಂದೂಕುಧಾರಿಗಳು ಆದರೆ ಕಲ್ಲು ತೂರಾಟ ನಡೆಸುವ ಯುವಕರು ಅಥವಾ ಭಾಗಿಯಾಗದ ನಾಗರಿಕರು ಕೂಡ ಸೇರಿದ್ದಾರೆ ಮತ್ತು ಸಾವಿರಾರು ಜನರನ್ನು ಇಸ್ರೇಲಿ ಪಡೆಗಳು ಬಂಧಿಸಿವೆ.

Read More

ಮುಂಬೈ : ಮಹಾರಾಷ್ಟ್ರದ ಪುಣೆ ನಗರದಿಂದ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇಲ್ಲಿ, ನಗರದ ಹೊರವಲಯದಲ್ಲಿರುವ ದೌಂಡ್‌ನಲ್ಲಿರುವ ಪ್ರಸಿದ್ಧ ಇಂಗ್ಲಿಷ್ ಮಾಧ್ಯಮ ಶಾಲೆಯ 7 ನೇ ತರಗತಿಯ ವಿದ್ಯಾರ್ಥಿಯೊಬ್ಬ, ತನ್ನ ಸಹಪಾಠಿಯೊಬ್ಬಳ ಮೇಲೆ ಅತ್ಯಾಚಾರ ಮಾಡಿ ಕೊಲೆ ಮಾಡಲು 9 ನೇ ತರಗತಿಯ ವಿದ್ಯಾರ್ಥಿಗೆ 100 ರೂ.ಗಳ ಸುಪಾರಿ ನೀಡಿದ್ದಾನೆ. ಆದಾಗ್ಯೂ, ಹಣವನ್ನು ಪಡೆದ ವಿದ್ಯಾರ್ಥಿಯು ಶಾಲಾ ಆಡಳಿತ ಮಂಡಳಿಗೆ ಈ ಬಗ್ಗೆ ತಿಳಿಸಿದ್ದಲ್ಲದೆ, 7 ನೇ ತರಗತಿಯ ವಿದ್ಯಾರ್ಥಿಯ ಸಂಪೂರ್ಣ ಯೋಜನೆಯ ಬಗ್ಗೆಯೂ ತಿಳಿಸಿದ್ದಾನೆ. ಈ ಪ್ರಕರಣದಲ್ಲಿ, ಭಾನುವಾರ, ದೌಂಡ್ ಪೊಲೀಸರು ಶಾಲೆಯ ಪ್ರಾಂಶುಪಾಲರು ಮತ್ತು ಇಬ್ಬರು ಶಿಕ್ಷಕರ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ. ಈ ವಿಷಯಕ್ಕೆ ಸಂಬಂಧಿಸಿದಂತೆ ಬಾಲಕಿಯ ತಂದೆ ಶಾಲೆಯ ವಿರುದ್ಧ ದೂರು ದಾಖಲಿಸಿದ್ದರು. ಕೊಲೆಗಾರನಿಗೆ 100 ರೂ.ಗಳ ಸುಪಾರಿ ನೀಡಿದ್ದ 7 ನೇ ತರಗತಿ ವಿದ್ಯಾರ್ಥಿಯ ವಿರುದ್ಧ ಶಾಲಾ ಆಡಳಿತವು ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಬಾಲಕಿಯ ತಂದೆ ತಮ್ಮ ದೂರಿನಲ್ಲಿ ಆರೋಪಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ…

Read More

ನವದೆಹಲಿ : ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳಕ್ಕೆ ಹೋಗುವವರಿಗೆ ಸಿಹಿಸುದ್ದಿಯೊಂದು ಸಿಕ್ಕಿದ್ದು, ಗಗನಕ್ಕೇರಿದ್ದ ವಿಮಾನ ಟಿಕೆಟ್ ದರಗಳು ಅರ್ಧದಷ್ಟು ಇಳಿಕೆಯಾಗಿವೆ. ಹೌದು, ಪ್ರಯಾಗ್ ರಾಜ್ ಗೆ ಸೇವೆ ನೀಡುತ್ತಿರುವ ವಿಮಾನಯಾನ ಸಂಸ್ಥೆಗಳ ಟಿಕೆಟ್ ದರ ಏರಿಕೆ ಬಗ್ಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ನಾಗರಿಕ ವಿಮಾನಯಾನ ನಿರ್ದೇಶನಾಲಯಕ್ಕೆ ಪತ್ರ ಬರೆದು ಸೂಕ್ತ ಕ್ರಮಕ್ಕೆ ಒತ್ತಾಯಿಸಿದ್ದಾರೆ. ಇದರ ಬೆನ್ನಲ್ಲೇ ನಾಗರಿಕ ವಿಮಾನಯಾನ ನಿರ್ದೇಶನಾಲಯ ಟಿಕೆಟ್ ದರ ಕಡಿತಗೊಳಿಸಲು ವಿಮಾನಯಾನ ಕಂಪನಿಗಳಿಗೆ ಸೂಚನೆ ನೀಡಿದೆ. ಟಿಕೆಟ್ ದರ ಮಿತಿಯಲ್ಲಿಸುವಂತೆ ತಿಳಿಸಿದೆ. ಹೀಗಾಗಿ ಸದ್ಯ ವಿಮಾನಯಾನ ಟಿಕೆಟ್ ದರವನ್ನು 30 ರಿಂದ 50% ರಷ್ಟು ಕಡಿಮೆ ಮಾಡಲಾಗಿದೆ. ಪ್ರಯಾಗ್ ರಾಜ್ ಗೆ ಅಸಂಖ್ಯಾತ ಜನ ತೆರಳುತ್ತಿದ್ದಾರೆ. ಬೇಡಿಕೆ ಹೆಚ್ಚಾಗಿದ್ದರಿಂದ ವಿಮಾನ ಟಿಕೆಟ್ ದರವನ್ನು ಭಾರಿ ಹೆಚ್ಚಳ ಮಾಡಲಾಗಿತ್ತು. ಹೀಗಾಗಿ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ವಿಮಾನಯಾನ ನಿರ್ದೇಶನಾಲಯಕ್ಕೆ ಪತ್ರ ಬರೆದು ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದರು. ಇದರ ಬೆನ್ನಲ್ಲೇ ವಿಮಾನ…

Read More

ಗದಗ: ಪ್ರೀತಿಸಿ ಮದುವೆಯಾದ ಜೋಡಿಯನ್ನು ಯುವತಿಯ ಮನೆಯವರೇ ಹತ್ಯೆ ಮಾಡಿದ ಘಟನೆಗೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳಿಗೆ ಮರಣದಂಡನೆ ವಿಧಿಸಿ ಗದಗ ಜಿಲ್ಲಾ ನ್ಯಾಯಾಲಯ ಆದೇಶ ಹೊರಡಿಸಿದೆ. ಗದಗ ಜಿಲ್ಲೆಯ ಗಜೇಂದ್ರಗಡ ತಾಲೂಕಿನ ಲಕ್ಕಲಕಟ್ಟಿ ಗ್ರಾಮದ ರಮೇಶ ಮಾದರ ಮತ್ತು ಗಂಗಮ್ಮ ಮಾದರ (ರಾಠೋಡ) ಪರಸ್ಪರ ಪ್ರೀತಿಸಿ ಮದುವೆಯಾಗಿದ್ದರು. ಇಬ್ಬರದ್ದೂ ಬೇರೆ ಬೇರೆ ಜಾತಿ ಹಿನ್ನೆಲೆಯಲ್ಲಿ ಅಂತರ್ಜಾತಿ ಮದುವೆಗೆ ಗಂಗಮ್ಮ ಮನೆಯವರಿಂದ ತೀವ್ರ ವಿರೋಧ ಎದುರಾಗಿತ್ತು. ಕುಟುಂಬಸ್ಥರ ವಿರೋಧವಿದ್ದರೂ ಇಬ್ಬರೂ ಮದುವೆ ಆಗಿದ್ದರು. ಇದರಿಂದ ಸಿಟ್ಟಿಗೆದ್ದ ಗಂಗಮ್ಮ ಮನೆಯವರು ಹಾಗೂ ಸಂಬಂಧಿಗಳು 2019ರಲ್ಲಿ ಚಾಕುವಿನಿಂದ ಹಲ್ಲೆ ಮಾಡಿ ಇಬ್ಬರನ್ನು ಕೊಲೆ ಮಾಡಿದ್ದರು. ಪ್ರಕರಣದ ಸುಧೀರ್ಘ ವಿಚಾರಣೆ ನಡೆಸಿದ ಗದಗ ಜಿಲ್ಲಾ ನ್ಯಾಯಾಲಯ ಪ್ರೇಮಿಗಳನ್ನು ಹತ್ಯೆ ಮಾಡಿದ ನಾಲ್ವರು ಆರೋಪಿಗಳಿಗೆ ಮರಣದಂಡನೆ ವಿಧಿಸಿ ಬುಧವಾರ ಆದೇಶ ಹೊರಡಿಸಿದೆ.

Read More

ಬೆಂಗಳೂರು: ರಾಜ್ಯ ಸರ್ಕಾರವು ಬಿಪಿಎಲ್ ಕಾರ್ಡ್ ಹೊಂದಿರುವವರಿಗೆ ಮತ್ತೊಂದು ಸಿಹಿಸುದ್ದಿ ನೀಡಿದ್ದು, ಜೀವ ಸಾರ್ಥಕತೆ ಅಂಗಾಂಗ ಕಸಿ ಯೋಜನೆಯಡಿ ಶ್ವಾಸಕೋಶ, ಹೃದಯ ಮತ್ತು ಮೂಳೆ ಮಜ್ಜೆ ಕಸಿಯನ್ನೂ ಸೇರಿಸಿ ಅಂಗಾಂಗ ಕಸಿ ಯೋಜನೆಯನ್ನು ವಿಸ್ತರಿಸಲು ಆರೋಗ್ಯ ಇಲಾಖೆ ಬುಧವಾರ ಆದೇಶ ಹೊರಡಿಸಿದೆ. ಜನವರಿ 16ರಂದು ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ 2018ರಿಂದ ಬಡತನ ರೇಖೆಗಿಂತ ಕೆಳಗಿರುವ ನಾಗರಿಕರಿಗಾಗಿ (ಆದ್ಯತಾ ವಲಯ) ಜಾರಿಯಲ್ಲಿರುವ ಅಂಗಾಂಗ ಕಸಿ ಯೋಜನೆಗೆ ಶ್ವಾಸಕೋಶ, ಹೃದಯ ಮತ್ತು ಮೂಳೆ ಮಜ್ಜೆ ಕಸಿ ಸೇರಿಸಲು ನಿರ್ಧಾರ ಮಾಡಲಾಗಿತ್ತು. ಇದರಡಿ ಯಲ್ಲಿಯೇ ಯೋಜನೆಯನ್ನು ವಿಸ್ತರಣೆ ಮಾಡಿ ಅಂಗಾಂಗ ಕಸಿ, ಇಮ್ಯುನೋಸಪ್ರೆಶನ್ ಔಷಧಿಗಳ ಖರೀದಿಯನ್ನು ಅತಿ ವಿರಳ ಮತ್ತು ದುಬಾರಿ ವೆಚ್ಚದ ಚಿಕಿತ್ಸಾ ವಿಧಾನಗಳ ಯೋಜನೆಯಲ್ಲಿ ವ್ಯಾಖ್ಯಾನಿಸಲಾದ ಷರತ್ತುಗಳ ಅನ್ವಯ ಅನುಷ್ಠಾನಗೊಳಿಸಲು ಬುಧವಾರ ರಾಜ್ಯ ಸರ್ಕಾರದಿಂದ ಆದೇಶ ಹೊರಡಿಸಿದೆ. ಈ ಮೂಲಕ ಬಿಪಿಎಲ್ ಕಾರ್ಡ್ ದಾರರಿಗೆ ಮತ್ತೊಂದು ಸಿಹಿಸುದ್ದಿ ನೀಡಿದೆ.

Read More

ಬೆಂಗಳೂರು: ರಾಜ್ಯದಲ್ಲಿ ಸಾಲ ವಸೂಲಾತಿ ವೇಳೆ ಸಾಲಗಾರರಿಗೆ ಕಿರುಕುಳ ನೀಡುತ್ತಿರುವ ಮೈಕ್ರೋ ಫೈನಾನ್ಸ್ ಸಂಸ್ಥೆಗಳ ಮೇಲೆ ನಿಯಂತ್ರಣ ಹೇರಲು ಮಸೂದೆ ಕರಡು ಸಿದ್ದವಾಗಿದ್ದು, ಇಂದಿನ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಲಾಗುವುದು ಎಂದು ಕಾನೂನು ಸಚಿವ ಹೆಚ್.ಕೆ. ಪಾಟೀಲ್ ತಿಳಿಸಿದ್ದಾರೆ. ಈ ಕುರಿತು ಮಾಹಿತಿ ನೀಡಿರುವ ಸಚಿವರು, ಮೈಕ್ರೋ ಫೈನಾನ್ಸ್ ಗಳ ವಿರುದ್ಧದ ಸುಗ್ರೀವಾಜ್ಞೆ ಸಿದ್ಧವಾಗಿದ್ದು, ಇಂದು ಸಂಪುಟದ ಮುಂದೆ ಕರಡು ಮಂಡಿಸಲಾಗುವುದು. ಸಂಪುಟ ಒಪ್ಪಿಗೆ ಪಡೆದು ರಾಜ್ಯಪಾಲರಿಗೆ ರವಾನೆ ಮಾಡಲಾಗುತ್ತದೆ. ಸಾಲ ವಸೂಲಾತಿಯ ಸಂದರ್ಭದಲ್ಲಿ ಸಾಲಗಾರರಿಗೆ ಕಿರಕುಳ, ಅಮಾನವೀಯ ವರ್ತನೆ ತೋರುತ್ತಿರುವ ಮೈಕ್ರೋ ಫೈನಾನ್ಸ್ ಗಳಿಗೆ ಕಡಿವಾಣ ಹಾಕಲು ಸುಗ್ರೀವಾಜ್ಞೆ ಜಾರಿ ಬಗ್ಗೆ ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅಧ್ಯಕ್ಷತೆಯಲ್ಲಿ ನಡೆಯಲಿರುವ ಸಂಪುಟ ಸಭೆಯಲ್ಲಿ ಚರ್ಚೆ ನಡೆಸಲಾಗುತ್ತದೆ ಎಂದು ತಿಳಿಸಿದ್ದಾರೆ. ಬುಧವಾರ ವಿಧಾನಸೌಧದಲ್ಲಿ ಮಸೂದೆ ಅಂತಿಮಗೊಳಿಸುವ ಬಗ್ಗೆ ಗೃಹ ಸಚಿವ ಡಾ.ಜಿ. ಪರಮೇಶ್ವರ್ ಅವರೊಂದಿಗೆ ವಿವಿಧ ಇಲಾಖೆಗಳ ಅಧಿಕಾರಿಗಳ ಜೊತೆಗೆ ಕಾನೂನು ಸಚಿವ ಹೆಚ್.ಕೆ. ಪಾಟೀಲ್ ಸಭೆ ನಡೆಸಿ ಚರ್ಚೆ ನಡೆಸಿದ್ದಾರೆ. ಸಾಲ…

Read More