Subscribe to Updates
Get the latest creative news from FooBar about art, design and business.
Author: kannadanewsnow57
ಕಾಬೂಲ್ : ಅಫ್ಘಾನಿಸ್ತಾನದ ಪಕ್ಟಿಕಾ ಪ್ರಾಂತ್ಯದ ಬರ್ಮಾಲ್ ಜಿಲ್ಲೆಯ ಮೇಲೆ ಪಾಕಿಸ್ತಾನದ ಸರಣಿ ವೈಮಾನಿಕ ದಾಳಿಯಲ್ಲಿ ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ ಕನಿಷ್ಠ 15 ಜನರು ಸಾವನ್ನಪ್ಪಿದ್ದಾರೆ, ಸಂಖ್ಯೆ ಹೆಚ್ಚಾಗುವ ನಿರೀಕ್ಷೆಯಿದೆ. ಡಿಸೆಂಬರ್ 24 ರ ರಾತ್ರಿ ನಡೆದ ದಾಳಿಗಳು, ಲಾಮನ್ ಸೇರಿದಂತೆ ಏಳು ಹಳ್ಳಿಗಳನ್ನು ಗುರಿಯಾಗಿಸಿಕೊಂಡವು, ಅಲ್ಲಿ ಒಂದು ಕುಟುಂಬದ ಐವರು ಕೊಲ್ಲಲ್ಪಟ್ಟರು ಎಂದು ಖಾಮಾ ಪ್ರೆಸ್ ವರದಿ ಮಾಡಿದೆ. ಬಾಂಬ್ ದಾಳಿಗೆ ಪಾಕಿಸ್ತಾನದ ಜೆಟ್ಗಳು ಕಾರಣ ಎಂದು ಸ್ಥಳೀಯ ಮೂಲಗಳು ಹೇಳಿವೆ. ವರದಿಗಳ ಪ್ರಕಾರ ಬರ್ಮಾಲ್ನ ಮುರ್ಗ್ ಬಜಾರ್ ಗ್ರಾಮವನ್ನು ನಾಶಪಡಿಸಲಾಗಿದೆ, ಇದು ನಡೆಯುತ್ತಿರುವ ಮಾನವೀಯ ಬಿಕ್ಕಟ್ಟನ್ನು ಉಲ್ಬಣಗೊಳಿಸಿದೆ. ವೈಮಾನಿಕ ದಾಳಿಗಳು ತೀವ್ರವಾದ ನಾಗರಿಕ ಸಾವುನೋವುಗಳಿಗೆ ಮತ್ತು ವ್ಯಾಪಕ ವಿನಾಶಕ್ಕೆ ಕಾರಣವಾಗಿವೆ, ಈ ಪ್ರದೇಶದಲ್ಲಿ ಮತ್ತಷ್ಟು ಉದ್ವಿಗ್ನತೆಯನ್ನು ಹೆಚ್ಚಿಸಿವೆ. ಚೇತರಿಕೆಯ ಪ್ರಯತ್ನಗಳು ಮುಂದುವರಿದಂತೆ, ವಿವರಗಳನ್ನು ಖಚಿತಪಡಿಸಲು ಮತ್ತು ದಾಳಿಯ ಹೊಣೆಗಾರಿಕೆಯನ್ನು ಸ್ಪಷ್ಟಪಡಿಸಲು ಹೆಚ್ಚಿನ ತನಿಖೆಯ ಅಗತ್ಯವಿದೆ ಎಂದು ಖಾಮಾ ಪ್ರೆಸ್ ವರದಿ ಮಾಡಿದೆ. ತಾಲಿಬಾನ್ನ ರಕ್ಷಣಾ ಸಚಿವಾಲಯವು ಬರ್ಮಾಲ್,…
ಬೆಂಗಳೂರು: 2024-25ನೇ ಸಾಲಿಗೆ ಸರ್ಕಾರಿ ಪ್ರೌಢಶಾಲೆಗಳಲ್ಲಿ ವಿಜ್ಞಾನ ಪ್ರಯೋಗಾಲಯ ಸೌಲಭ್ಯವನ್ನು ಅನುಷ್ಠಾನಗೊಳಿಸುವ ಕುರಿತು ಶಿಕ್ಷಣ ಇಲಾಖೆ ಮಹತ್ವದ ಆದೇಶ ಹೊರಡಿಸಿದೆ. ಮೇಲಿನ ವಿಷಯ ಹಾಗೂ ಉಲ್ಲೇಖಗಳಿಗೆ ಸಂಬಂಧಿಸಿದಂತೆ, 2024-25ನೇ ಸಾಲಿಗೆ ಸರ್ಕಾರಿ ಪ್ರೌಢಶಾಲೆಗಳಲ್ಲಿ ವಿಜ್ಞಾನ ಪ್ರಯೋಗಾಲಯ ಸೌಲಭ್ಯವನ್ನು ಅನುಷ್ಠಾನಗೊಳಿಸುವ ಕುರಿತು ಮಾರ್ಗದರ್ಶನವನ್ನು ನೀಡಲಾಗಿರುತ್ತದೆ. ಆದಾಗ್ಯೂ ಶಾಲಾ ಹಂತದಲ್ಲಿ ಅನುಷ್ಠಾನ ಸಂಬಂಧ ನಿರ್ವಹಿಸಬೇಕಾದ ಕ್ರಮಗಳು, ವಿಜ್ಞಾನ ಪ್ರಯೋಗಾಲಯ ಉಪಕರಣಗಳ ಖರೀದಿ ಪ್ರಕ್ರಿಯೆಯನ್ನು ಸಮರ್ಪಕವಾದ ರೀತಿಯಲ್ಲಿ ಅನುಸರಿಸದೇ ಇರುವುದನ್ನು ಗಮನಿಸಲಾಗಿದೆ. ಈ ಕುರಿತು ಡಯಟ್ ನೋಡಲ್ ಅಧಿಕಾರಿಗಳು, ಡಯಟ್ ಪ್ರಾಂಶುಪಾಲರು ಸಂಬಂಧಿಸಿದ ಶಾಲಾ ಮುಖ್ಯ ಶಿಕ್ಷಕರ ಸಭೆ ಕರೆದು ಅಗತ್ಯ ಮಾರ್ಗದರ್ಶನ ನೀಡುವಂತೆ ತಿಳಿಸಿದ. ಪ್ರಯೋಗಾಲಯ ಅನುಷ್ಠಾನದಲ್ಲಿ ಗಮನಿಸಲಾದ ವ್ಯತ್ಯಯಗಳನ್ನು ಈ ಕೆಳಗಿನಂತೆ ಸರಿಪಡಿಸಲು ತಿಳಿಸಿದೆ. ಪಠ್ಯಕ್ರಮದ ಪ್ರಯೋಗಗಳಿಗೆ ಅನುಗುಣವಾಗಿ ಎಲ್ಲಾ ವಿದ್ಯಾರ್ಥಿಗಳು ಪ್ರಯೋಗಗಳಲ್ಲಿ ತೊಡಗಿಕೊಳ್ಳಲು ಅವಕಾಶವಾಗುವಂತೆ ಖರೀದಿಸಬೇಕಾದ ಉಪಕರಣಗಳ ಪಟ್ಟಿಯನ್ನು ಸಿದ್ಧಪಡಿಸದಿರುವುದು ಕಂಡುಬಂದಿರುತ್ತದೆ. ಆದ್ದರಿಂದ ಶಾಲಾ ಹಂತದಲ್ಲಿ 8, 9 ಮತ್ತು 10ನೇ ತರಗತಿಗಳ ವಿಜ್ಞಾನ ವಿಷಯದ ಪಠ್ಯಕ್ರಮದಲ್ಲಿನ ಪ್ರಯೋಗಗಳಿಗೆ ಹೊಂದಿಕೆಯಾಗುವ ಪ್ರಯೋಗಗಳನ್ನು…
ಬೆಂಗಳೂರು : ಉದ್ಯೋಗಿಗಳು ರಜೆ ಪಡೆಯದೆ ಕೆಲಸಕ್ಕೆ ಗೈರುಹಾಜರಾಗುವುದು ದುರ್ನಡತೆಯಾಗುತ್ತದೆ. ಶಿಸ್ತುಕ್ರಮ ಜರುಗಿಸಲು ಅರ್ಹವಾಗುತ್ತದೆ ಎಂದು ಕರ್ನಾಟಕ ಹೈಕೋರ್ಟ್ ಮಹತ್ವದ ಆದೇಶ ನೀಡಿದೆ. ಉದ್ಯೋಗಿಯ ಅನಧಿಕೃತ ರಜೆಯನ್ನು ಕಾರ್ಮಿಕ ನ್ಯಾಯಾಲಯಗಳು ಲಘುವಾಗಿ ಪರಿಗಣಿಸಬಾರದು ಎಂದು ಸೂಚನೆ ನೀಡಿರುವ ಹೈಕೋರ್ಟ್, ಅನಧಿಕೃತವಾಗಿ ಉದ್ಯೋಗಕ್ಕೆ ಗೈರು ಹಾಜರಾದ ಹಿನ್ನೆಲೆಯಲ್ಲಿ ಚಾಲಕ ಕಂ ನಿರ್ವಾಹಕರೊಬ್ಬರನ್ನು ಸೇವೆಯಿಂದ ವಜಾಗೊಳಿಸಿದ ಬಿಎಂಟಿಸಿ ಆದೇಶವನ್ನು ಹೈಕೋರ್ಟ್ ಎತ್ತಿ ಹಿಡಿದಿದೆ. ಅನಧಿಕೃತವಾಗಿ ಕೆಲಸಕ್ಕೆ ಗೈರು ಹಾಜರಾದ ಹಿನ್ನೆಲೆಯಲ್ಲಿ ಚಾಲಕ ಕಂ ನಿರ್ವಾಹಕ ಹುದ್ದೆಯಿಂದ ರಾಯಚೂರಿನ ಟಿ. ದೇವಪ್ಪ ಅವರನ್ನು ವಜಾಗೊಳಿಸಿದ್ದ ತನ್ನ ಕ್ರಮವನ್ನು ರದ್ದುಪಡಿಸಿದ ಕಾರ್ಮಿಕ ನ್ಯಾಯಾಲಯದ ಆದೇಶ ಪ್ರಶ್ನಿಸಿ ಬಿಎಂಟಿಸಿ ಹೈಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದ್ದು, ಈ ಮೇಲ್ಮನವಿಯನ್ನು ನ್ಯಾಯಪೀಠ ಪುರಸ್ಕರಿಸಿದೆ. ಈ ಪ್ರಕರಣದಲ್ಲಿ ರಜೆ ಕೋರಿ ಅರ್ಜಿ ಸಲ್ಲಿಸದೆ ಮತ್ತು ಉನ್ನತ ಅಧಿಕಾರಿಗಳ ಪೂರ್ವಾನುಮತಿ ಇಲ್ಲದೆ ಕೆಲಸಕ್ಕೆ ಗೈರುಹಾಜರಾಗಿದ್ದರೂ ದೇವಪ್ಪನನ್ನು ಸೇವೆಗೆ ಮರು ನಿಯೋಜಿಸಲು ಬಿಎಂಟಿಸಿಗೆ ನಿರ್ದೇಶಿಸಿದ ಕಾರ್ಮಿಕ ನ್ಯಾಯಾಲಯದ ಆದೇಶ ದೋಷಪೂರಿತವಾಗಿದೆ ಎಂದು ಹೈಕೋರ್ಟ್ ತಿಳಿಸಿದೆ.
ಬೆಂಗಳೂರು ಕೇಂದ್ರ ಸರ್ಕಾರವು 5 ಮತ್ತು 8 ನೇ ತರಗತಿಯ ವಾರ್ಷಿಕ ಪರೀಕ್ಷೆ ನಂತರ ಮರು ಪರೀಕ್ಷೆಯಲ್ಲೂ ಫೇಲಾದ ಮಕ್ಕಳನ್ನು ಅದೇ ತರಗತಿಯಲ್ಲಿ ಮತ್ತೊಂದು ವರ್ಷ ತಡೆಯಲು ಜಾರಿಗೊಳಿಸಿರುವ ನಿಯಮವನ್ನು ರಾಜ್ಯದಲ್ಲಿ ಅನುಷ್ಠಾನಗೊಳಿಸದಂತೆ ಶಿಕ್ಷಣ ಮೂಲಭೂತ ಹಕ್ಕಿಗಾಗಿ ಜನಾಂದೋಲನಗಳ ಸಮನ್ವಯ (ಫಾಫ್ರೆ) ರಾಜ್ಯ ಸರ್ಕಾರಕ್ಕೆ ಆಗ್ರಹಿಸಿದೆ. ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿರುವ ಫಾಫ್ರೆ ಪ್ರಧಾನ ಸಂಚಾಲಕ ಹಾಗೂ ಶಿಕ್ಷಣ ತಜ್ಞ ವಿ.ಪಿ. ನಿರಂಜನಾರಾಧ್ಯ, ಯಪಿಎ ಜಾರಿಗೆ ಬಂದ ಆರ್ ಟಿ ನೀತಿ 8 ನೇ ತರಗತಿವರೆಗೆ ಯಾವುದೇ ಮಕ್ಕಳನ್ನು ಒಂದೇ ತರಗತಿಯಲ್ಲಿ ತಡೆಹಿಡಿಯುವುದಾಗಲಿ, ಫೇಲ್ ಮಾಡವುದಾಗಲಿ ನಿಷೇಧಿಸಲಾಗಿತ್ತು. ಮಕ್ಕಳನ್ನು ಶಾಲೆಯಿಂದ ಹೊರಗುಳಿಯುವುದನ್ನು ತಪ್ಪಿಸಲು ಈ ಕಾಯ್ದೆಯನ್ನು ಜಾರಿಗೆ ತರಲಾಗಿತ್ತು. ಈಗ ಕೇಂದ್ರ ಸರ್ಕಾರದ ನೀತಿಯು ಆರ್ ಟಿ ಇ ಮೂಲ ಉದ್ದೇಶಕ್ಕೆ ವಿರುದ್ಧವಾಗುತ್ತದೆ. ಹಾಗಾಗಿ ರಾಜ್ಯ ಸರ್ಕಾರವು ಇದನ್ನು ತಿರಸ್ಕರಿಸಬೇಕು ಎಂದು ಒತ್ತಾಯಿಸಲಾಗಿದೆ.
ಬೆಂಗಳೂರು: ರಾಜ್ಯದ ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನ ಅಲ್ಲಲ್ಲಿ ತುಂತುರು ಮಳೆಯಾಗುವ ಸಂಭವ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ಸೇರಿ ವಿವಿಧ ಭಾಗಗಳಲ್ಲಿ ಮೋಡ ಕವಿದ ವಾತಾವರಣ ಉಂಟಾಗಿದೆ. ಮುಂದಿನ 24 ಗಂಟೆಯಲ್ಲಿ ದಕ್ಷಿಣ ಒಳನಾಡಿನ ತುಮಕೂರು, ಕೋಲಾರ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಉತ್ತರ ಒಳನಾಡಿನ ರಾಯಚೂರು, ಯಾದಗಿರಿ, ಕೊಪ್ಪಳ, ಕಲಬುರಗಿ ಜಿಲ್ಲೆಗಳ ಅಲ್ಲಲ್ಲಿ ಹಗುರದಿಂದ ಕೂಡಿದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಡಿಸೆಂಬರ್ 26, 27ರಂದು ಉತ್ತರ ಒಳನಾಡಿನ ಜಿಲ್ಲೆಗಳು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ತುಂತುರು ಮಳೆಯಾಗುವ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರು : ರಾಜ್ಯದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರವಾಸ ಸಂಬಂಧ ಕನಿಷ್ಠ ಪಕ್ಷ 15 ದಿನಗಳ ಮುಂಚಿತವಾಗಿ ಪ್ರಾಂಶುಪಾಲರು ಪ್ರಸ್ತಾವನೆ ಕಳುಹಿಸಬೇಕೆಂದು ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ರಾಜ್ಯ ಸರ್ಕಾರದ ಆದೇಶದ ಪ್ರಕಾರ, ಪ್ರಾಂಶುಪಾಲರು ತಮ್ಮ ಕಾಲೇಜಿನ ಪ್ರಸ್ತಾವನೆಗಳನ್ನು ಪ್ರವಾಸಕ್ಕೆ ಕೆಲವೇ ದಿನಗಳು ಇರುವಾಗ ಕಳುಹಿಸುತ್ತಿರುವುದರಿಂದ ಕಚೇರಿ ಕಾರ್ಯಕ್ಕೆ ಅಡಚಣೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಇನ್ಮುಂದೆ 15 ದಿನ ಮುಂಚಿತವಾಗಿ ಪ್ರಸ್ತಾವನೆ ಸಲ್ಲಿಸಬೇಕು. ತಪ್ಪಿದರೆ ಅಂಥ ಪ್ರಸ್ತಾವನೆಗಳನ್ನು ಪರಿಗಣಿಸಲಾಗುವುದಿಲ್ಲ. ಮುಂದಿನ ಆಗುಹೋಗುಗಳಿಗೆ ಪ್ರಾಂಶುಪಾಲರೇ ನೇರ ಹೊಣೆ ಆಗುತ್ತಾರೆ ಎಂದು ಎಚ್ಚರಿಕೆ ನೀಡಲಾಗಿದೆ. ಕಾಲೇಜು ಶಿಕ್ಷಣ ಇಲಾಖೆ, ಶೈಕ್ಷಣಿಕ ಪ್ರವಾಸಕ್ಕೆ ಅನುಮತಿ ಕೋರಿ ಅತಿ ಕಡಿಮೆ ಅವಧಿಯಲ್ಲಿ ಅಥವಾ ಕೊನೆ ಕ್ಷಣದಲ್ಲಿ ಇಲಾಖೆಯನ್ನು ಸಂಪರ್ಕಿಸುವ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.
ಬೆಂಗಳೂರು : ಬೆಂಗಳೂರಿನಲ್ಲಿ ತಡರಾತ್ರಿ ಭೀಕರ ಅಗ್ನಿಅವಘಡ ಸಂಭವಿಸಿದ್ದು, ಸತತ 1 ಗಂಟೆಗೂ ಹೆಚ್ಚು ಕಾಲ ಸ್ಪಾ ಹೊತ್ತಿ ಉರಿದ ಘಟನೆ ನಡೆದಿದೆ. ಬೆಂಗಳೂರಿನ ಬಿಟಿಎಂ ಲೇಔಟ್ ನಲ್ಲಿರುವ ಸ್ಪಾದಲ್ಲಿ ತಡರಾತ್ರಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ಸತತ 1 ಗಂಟೆಗಳ ಕಾಲ ಬೆಂಕಿ ಹೊತ್ತಿ ಉರಿದಿದೆ. ಬೆಂಕಿಯ ಜ್ವಾಲೆಗೆ ಸ್ಪಾದಲ್ಲಿರುವ ವಸ್ತುಗಳು ಸುಟ್ಟು ಭಸ್ಮವಾಗಿವೆ. ಘಟನೆ ಕುರಿತು ಮಾಹಿತಿ ತಿಳಿದ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸಿದ್ದಾರೆ.
ಬೆಂಗಳೂರು : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ರನ್ನು ಬಿಜೆಪಿ ಎಂಎಲ್ ಸಿ ಸಿ.ಟಿ ರವಿ ಸದನದಲ್ಲೇ ಅವಚ್ಯವಾಗಿ ನಿಂದಿಸಿದ್ದರು ಎನ್ನಲಾದ ಪ್ರಕರಣ ಹಾಗೂ ಸಚಿವರ ಸಹಚರರ ವಿರುದ್ಧ ಹಲ್ಲೆ ಪ್ರಕರಣಗಳ ತನಿಖೆ ಜವಾಬ್ದಾರಿಯನ್ನು ಸಿಐಡಿಗೆ ವಹಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ರಾಜ್ಯ ಸರ್ಕಾರವು ಪ್ರಕರಣದ ತನಿಖೆಗೆ ಪಿಎಸ್ ಐ ನೇಮಕಾತಿ ಹಗರಣದ ಸಾರಥ್ಯ ವಹಿಸಿದ್ದ ಎಸ್ಪಿ ರಾಘವೇಂದ್ರ ಹೆಗಡೆ ನೇತೃತ್ವದ ತನಿಖಾ ತಂಡವನ್ನು ಸಿಐಡಿ ಡಿಜಿಪಿ ಡಾ.ಎಂ.ಎ.ಸಲೀಂ ರಚಿಸಿದ್ದು, ಡಿವೈ ಎಸ್ಪಿ ಕೇಶವಮೂರ್ತಿ ಅವರನ್ನು ತನಿಖಾಧಿಕಾರಿಯಾಗಿ ನೇಮೀಸಿದ್ದಾರೆ. ಇನ್ನು ಪ್ರಕರಣ ಸಂಬಂಧ ತನಿಖೆ ಕೈಗೆತ್ತಿಕೊಂಡಿರುವ ಸಿಐಡಿ ಅಧಿಕಾರಿಗಳು ಬೆಳಗಾವಿ ಪೊಲೀಸರನ್ನು ಸಂಪರ್ಕಿಸಿ ಪ್ರಾಥಮಿಕ ಮಾಹಿತಿ ಪಡೆದಿದ್ದು, ಇಂದು ಬೆಳಗಾವಿಗೆ ಭೇಟಿ ನೀಡಿ ತನಿಖೆ ನಡೆಸಲಿದ್ದಾರೆ ಎನ್ನಲಾಗಿದೆ.
ಬೆಂಗಳೂರು: ರಾಜ್ಯದ ಸರ್ಕಾರಿ ನೌಕರರು ಬಡ್ತಿ ಸೇರಿದಂತೆ ವಿವಿಧ ಭತ್ಯೆ ಪಡೆಯಲು ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯನ್ನು ತೇರ್ಗಡೆಗೊಳಿಸುವುದು ಕಡ್ಡಾಯವಾಗಿದೆ. ಈ ಪರೀಕ್ಷೆ ಪಾಸ್ ಮಾಡಲು ಸರ್ಕಾರಿ ನೌಕರರಿಗೆ ದಿನಾಂಕ 31-12-2025ರವರೆಗೆ ಅವಧಿಯನ್ನು ವಿಸ್ತರಿಸಿ ಆದೇಶಿಸುವಂತೆ ರಾಜ್ಯ ಸರ್ಕಾರಕ್ಕೆ ಇ-ಆಡಳಿತ ಇಲಾಖೆಯು ಪತ್ರ ಬರೆದಿದೆ. ಈ ಕುರಿತಂತೆ ಇಂದು ಇ-ಆಡಳಿತ ಕೇಂದ್ರದ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳು ಮಾಹಿತಿ ನೀಡಿದ್ದು, ರಾಜ್ಯ ಸರ್ಕಾರಿ ಅಧಿಕಾರಿಗಳು ಮತ್ತು ನೌಕರರುಗಳು ಹಾಗೂ ನಿಗಮ- ಮಂಡಳಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದವರು ಸಹ ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಗಳನ್ನು ತೆಗೆದುಕೊಳ್ಳಲು ಉಲ್ಲೇಖಿತ (1)ರ ಅನ್ವಯ ಸರ್ಕಾರವು ದಿನಾಂಕ: 31-12-2024 ರವರೆಗೆ ಸಮಯಾವಕಾಶ ವಿಸ್ತರಿಸಿ ಅಧಿಸೂಚನೆ ಹೊರಡಿಸಿರುತ್ತದೆ ಎಂದಿದ್ದಾರೆ. ಸರ್ಕಾರಿ ನೌಕರರು ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯಲ್ಲಿ ಉತ್ತೀರ್ಣರಾಗುವುದು ಕಡ್ಡಾಯವಾಗಿದ್ದು, ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯಲ್ಲಿ ಉತ್ತೀರ್ಣರಾಗದ ನೌಕರರು ಪರಿವೀಕ್ಷಣಾ ಅವಧಿ, ಮುಂಬಡ್ತಿ ಹಾಗೂ ವಾರ್ಷಿಕ ವೇತನ ಬಡ್ತಿ ಇತ್ಯಾದಿಗಳನ್ನು ಪಡೆಯಲು ಅನರ್ಹರಾಗುತ್ತಾರೆ. ಆದುದರಿಂದ ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯಲ್ಲಿ ಉತ್ತೀರ್ಣರಾಗದೆ ಇರುವ/ಪರೀಕ್ಷೆ ತೆಗೆದುಕೊಳ್ಳದೆ ಇರುವ…
ನವದೆಹಲಿ: ಜಮ್ಮು-ಕಾಶ್ಮೀರದಲ್ಲಿ ಸೇನಾ ವಾಹನವೊಂದು 160 ಅಡಿ ಆಳದ ಕಂದಕಕ್ಕೆ ಉರುಳಿ ಬಿದ್ದ ಪರಿಣಾಮ, ಐವರು ಯೋಧರು ಹುತಾತ್ಮರಾಗಿದ್ದು, ಇದರಲ್ಲಿ ಬೆಳಗಾವಿ ಜಿಲ್ಲೆಯ ಯೋಧ ಧರ್ಮರಾಜ ಸುಭಾಷ್ ಖೋತ ಅವರು ಹುತಾತ್ಮರಾಗಿದ್ದಾರೆ ಎಂದು ತಿಳಿದು ಬಂದಿದೆ. ಜಮ್ಮು ಮತ್ತು ಕಾಶ್ಮೀರದ ಮೆಂಧಾರ್ನ ನಿಯಂತ್ರಣ ರೇಖೆ (ಎಲ್ಒಸಿ) ಬಳಿ ಮಂಗಳವಾರ ಸಂಜೆ ಯೋಧರನ್ನು ಕರೆದೊಯ್ಯುತ್ತಿದ್ದ ಸೇನಾ ವಾಹನವು ಕಮರಿಗೆ ಬಿದ್ದ ಪರಿಣಾಮ ಐವರು ಯೋಧರು ಹುತಾತ್ಮರಾಗಿದ್ದು, ದುರಂತದಲ್ಲಿ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಕುಪ್ಪನವಾಡಿ ನಿವಾಸಿ ಧರ್ಮರಾಜ ಸುಭಾಷ್ ಖೋತ ಹುತಾತ್ಮರಾಗಿದ್ದಾರೆ. ಜಮ್ಮು ಮತ್ತು ಕಾಶ್ಮೀರದ ಪೂಂಚ್ ಸೆಕ್ಟರ್ನಲ್ಲಿ ಸೇನಾ ವಾಹನವೊಂದು ಅಪಘಾತಕ್ಕೀಡಾಗಿ ಐವರು ಯೋಧರು ಹುತಾತ್ಮರಾಗಿದ್ದಾರೆ. ರಕ್ಷಣಾ ಕಾರ್ಯಾಚರಣೆಗಳು ನಡೆಯುತ್ತಿವೆ, ಮತ್ತು ಗಾಯಗೊಂಡ ಸಿಬ್ಬಂದಿ ವೈದ್ಯಕೀಯ ಆರೈಕೆ ಪಡೆಯುತ್ತಿದ್ದಾರೆ ಎಂದು ತಿಳಿದುಬಂದಿದೆ.