Subscribe to Updates
Get the latest creative news from FooBar about art, design and business.
Author: kannadanewsnow57
ಹಾಪುರ: ಲಾರೆನ್ಸ್ ಬಿಷ್ಣೋಯಿ ಗ್ಯಾಂಗ್ ನ ಶಾರ್ಪ್ ಶೂಟರ್ ನವೀನ್ ಕುಮಾರ್ ಪೊಲೀಸರ ಎನ್ ಕೌಂಟರ್ ಗೆ ಬಲಿಯಾಗಿದ್ದಾನೆ. ಉತ್ತರ ಪ್ರದೇಶದ ಕೊತ್ವಾಲಿ ಪ್ರದೇಶದಲ್ಲಿ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ಶಾರ್ಪ್ ಶೂಟರ್ ನವೀನ್ ಕುಮಾರ್ ನನ್ನು ಹತ್ಯೆ ಮಾಡಲಾಗಿದೆ ಎಂದು ಪೊಲೀಸ್ ಅಧಿಅಧಿಕಾರಿಗಳು ತಿಳಿಸಿದ್ದಾರೆ. ಉತ್ತರ ಪ್ರದೇಶ ವಿಶೇಷ ಕಾರ್ಯಪಡೆ ಮತ್ತು ದೆಹಲಿ ಪೊಲೀಸರ ಜಂಟಿ ಕಾರ್ಯಾಚಾರಣೆಯಲ್ಲಿ ಎನ್ ಕೌಂಟರ್ ನಡೆದಿತ್ತು.ಶಾರ್ಪ್ ಶೀಟರ್ ನವೀನ್ ವಿರುದ್ಧ ದೆಹಲಿ, ಮಹಾರಾಷ್ಟ್ರ ಹಾಗೂ ಉತ್ತರ ಪ್ರದೇಶದಲ್ಲಿ ಸುಮಾರು 20ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿದ್ದವು. ಕೊತ್ವಾಲಿ ಪ್ರದೇಶದಲ್ಲಿ ನವೀನ್ ಹಾಗೂ ಆತನ ಗ್ಯಾಂಗ್ ಇರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ಪೊಲೀಸರು ಕಾರ್ಯಾಚರಣೆ ನಡೆಸಿದ್ದರು. ನವೀನ್ ಗ್ಯಾಂಗ್ ಪೊಲೀಸರ ಮೇಲೆ ದಾಳಿ ನಡೆಸಿದೆ. ಈ ವೇಳೆ ಪೊಲೀಸರು ಪ್ರತಿ ದಾಳಿ ನಡೆಸಿದ್ದಾರೆ. ಗುಂಡೇಟಿನಿಂದ ಗಾಯಗೊಂದಿದ್ದ ನವೀನ್ ನನ್ನು ಆಸ್ಪತ್ರೆಗೆ ಸಾಗಿಸಲಾಗಿತ್ತು. ಈ ವೇಳೆ ಮಾರ್ಗಮಧ್ಯೆಯೇ ಆತ ಸಾವನ್ನಪ್ಪಿದ್ದಾನೆ.
ಚಿಕ್ಕಮಗಳೂರು : ಹೆರಿಗೆಯಾದ 2 ದಿನಕ್ಕೆ ಹೆಣ್ಣು ಮಗು ಮಾರಾಟ ಮಾಡಿದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಎನ್ ಆರ್ ಪುರ ತಾಲೂಕಿನ ಕೊಪ್ಪದಲ್ಲಿ ನಡೆದಿದೆ. ಕಾರ್ಕಳ ಮೂಲದ ರಾಘವೇಂದ್ರ ಎಂಬುವವರಿಗೆ 5 ಸಾವಿರ ಅಡ್ವಾನ್ಸ್ ಪಡೆದು 1 ಲಕ್ಷಕ್ಕೆ ಮಗು ಮಾರಾಟ ಮಾಡಲಾಗಿದೆ,ಕೊಪ್ಪ ಸರ್ಕಾರಿ ಆಸ್ಪತ್ರೆಯಲ್ಲಿ ರತ್ನ ಎಂಬುವವರಿಗೆ ಹೆರಿಗೆ ಆಗಿತ್ತು, ಹೆರಿಗೆ ಆದ 2 ದಿನಕ್ಕೆ 5 ಸಾವಿರ ಅಡ್ವಾನ್ಸ್ ಪಡೆದು 1 ಲಕ್ಷಕ್ಕೆ ಮಗು ಮಾರಾಟ ಮಾಡಲಾಗಿದೆ. ನಿವೃತ್ತ ನರ್ಸ್ ಕುಸುಮಾ ಸಹೋದರ ರಾಘವೇಂದ್ರ ಎಂಬುವವರಿಗೆ ಮಗು ಮಾರಾಟ ಮಾಡಿದ್ದಾರೆ ಎನ್ನಲಾಗಿದೆ. ಸದ್ಯ ಮಗುವನ್ನು ರಕ್ಷಣೆ ಮಾಡಲಾಗಿದೆ,
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯಲ್ಲಿ ಅಬ್ದುಲ್ ರಹೀಂ ಹತ್ಯೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷದ ಹಲವು ಮುಖಂಡರು ವಿವಿಧ ಹುದ್ದೆಗಳಿಗೆ ಸಾಮೂಹಿಕ ರಾಜೀನಾಮೆ ನೀಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋಮು ಹಿಂಸಾಚಾರ ತಡೆಯುವಲ್ಲಿ ರಾಜ್ಯ ಕಂಗ್ರೆಸ್ ಸರ್ಕಾರ ವಿಫಲವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿರುವ ಸ್ಥಳೀಯ ಕಾಂಗ್ರೆಸ್ ಮುಖಂಡರು, ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕಗಳ ವಿವಿಧ ಹುದ್ದೆಗಳಿಗೆ ಸಾಮೂಹಿಕ ರಾಜೀನಾಮೆ ನೀಡಿದ್ದಾರೆ. ಸಮುದಾಯದಲ್ಲಿ ಆಕ್ರೋಶ ಹೆಚ್ಚಾದ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲ ಕಂಗ್ರೆಸ್ ಉಪಾಧ್ಯಕ್ಷ ಕೆ.ಅಶ್ರಫ್ ರಾಜೀನಾಮೆ ನೀಡಿದ್ದಾರೆ. ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅಶ್ರಫ್, ಇಂದು ಮಧ್ಯಹ್ನ ಮಂಗಳೂರಿನಲ್ಲಿ ನಮ್ಮ ಮುಖಂಡರ ಸಭೆ ನಡೆಯಲಿದ್ದು, ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು. ಗೃಹ ಇಲಾಖೆ ಸಂಪೂರ್ಣ ವಿಫಲಾವಾಗಿದೆ. ನಮಗೆ ನ್ಯಾಯ ಸಿಗುವವರೆಗೂ ಪಕ್ಷದ ಯಾವುದೇ ಚಟುವಟಿಕೆಗಳಲ್ಲಿ ನಾವು ಭಾಗಿಯಾಗಲ್ಲ ಎಂದಿದ್ದಾರೆ.
ಬೆಂಗಳೂರು: ಇಂದು ಸಿಎಂ ಸಿದ್ದರಾಮಯ್ಯ ಅವರು ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ವಿಧಾನ ಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್ ಅವರ ನಿವಾಸಕ್ಕೆ ಭೇಟಿ ನೀಡಿದ್ದಾರೆ. ಇಂದು ಬೆಳಿಗ್ಗೆ ಸಿಎಂ ಸಿದ್ದರಾಮಯ್ಯ, ಬೆಂಗಳೂರಿನ ಸದಾಶಿವನಗರದಲ್ಲಿರುವ ಬಿ.ಕೆ.ಹರಿಪ್ರಸಾದ್ ಅವರ ನಿವಾಸದಲ್ಲಿ ಹರಿಪ್ರಸಾದ್ ಅವರನ್ನು ಭೇಟಿಯಾದರು. ಹರಿಪ್ರಸಾದ್ ಜೊತೆ ಮಹತ್ವದ ಸಮಾಲೋಚನೆ ನಡೆಸಿದ್ದಾರೆ. ಬಿ.ಕೆ.ಹರಿಪ್ರಸಾದ್ ನಿವಾಸದಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ನಾಯಕರು ಬ್ರೇಕ್ ಫಾಸ್ಟ್ ಸವಿದು, ಮಹತ್ವದ ಚರ್ಚೆ ನಡೆಸಿದ್ದಾರೆ. ಹರಿಪ್ರಸಾದ್ ನಿವಾಸದಲ್ಲಿ ಸಿಎಂ ಹಾಗೂ ಕಾಂಗ್ರೆಸ್ ನಾಯಕರ ಬ್ರೇಕ್ ಫಾಸ್ಟ್ ಮೀಟಿಂಗ್ ತೀವ್ರ ಕುತೂಹಲ ಮೂಡಿಸಿದೆ.
ಬೆಂಗಳೂರು : ಮೇ.26 ರಿಂದ ರಾಜ್ಯದ ಉಪ ನೋಂದಣಾಧಿಕಾರಿ ಕಚೇರಿಗಳಲ್ಲಿ ಆಸ್ತಿ ಮತ್ತು ಇತರೆ ನೋಂದಣಿ ಪ್ರಕ್ರಿಯೆ ಸಂಪೂರ್ಣ ಡಿಜಿಟಲೀಕರಣಗೊಳ್ಳಲಿದೆ. ಹೌದು, ಇನ್ನು ಮುಂದೆ ಆಸ್ತಿ ನೋಂದಾಣಿಗೆ ಇ-ಸಹಿ ಕಡ್ಡಾಯವಾಗಿರಲಿದೆ.ಇಂದಿನಿಂದ ಆಸ್ತಿ ಅಥವಾ ಇತರ ನೋಂದಣಿ ಪ್ರಕ್ರಿಯೆಗಳಿಗೆ ವಿದ್ಯುನ್ಮಾನ ಸಹಿ ಕಡ್ಡಾಯವಾಗಿದೆ. ಈ ನಿಟ್ಟಿನಲ್ಲಿ ಕರ್ನಾಟಕ ಸ್ಟಾಂಪು ತಿದ್ದುಪಡಿ ಕಾಯ್ದೆ ಜಾರಿಗೊಳಿಸಿ ಕಂದಾಯ ಇಲಾಖೆ ಆದೇಶ ಹೊರಡಿಸಿದೆ. ಬ್ಯಾಂಕ್ ಚಲನ್ಗಳ ಮೂಲಕ ಸ್ಟಾಂಪುಗಳ ದುರುಪಯೋಗ ತಡೆಯಲು ಇದು ಸಹಕಾರಿಯಾಗಲಿದೆ. ವಿದ್ಯುನ್ಮಾನ ಸಹಿಗಳಿಗೆ ಕಾನೂನಾತ್ಮಕ ಬೆಂಬಲ ನೀಡಲಾಗಿದೆ. ವಿದ್ಯನ್ಮಾನ ವಿಧಾನಗಳ ಮೂಲಕ ಸ್ಟಾಂಪ್ ಶುಲ್ಕ ಪಾವತಿಸಬೇಕಾಗಿದೆ. ಇನ್ನು ಮಂದೆ ಸ್ವತ್ತು ಮತ್ತು ಇತರ ನೋಂದಣಿಗಳಲ್ಲಿ ಡಿಜಿಟಲ್ ಸಹಿ, ಡಿಜಿಟಲ್ ಇ–ಸ್ಟಾಂಪ್ ಬಳಕೆ ಜಾರಿ ಕಡ್ಡಾಯವಾಗಲಿದೆ. ಈ ಹಿಂದಿನಂತೆ ಅಂಟಿಸುವ ಅಥವಾ ಮುದ್ರೆ ಹಾಕುವ ಸ್ಟಾಂಪ್ಗಳ ಬಳಕೆಯನ್ನು ನಿಲ್ಲಿಸಲಾಗುತ್ತದೆ. ಇ–ಸ್ಟಾಂಪ್ ದುರುಪಯೋಗವನ್ನು ತಡೆಯಲು ಸ್ಟಾಂಪ್ ಮೊತ್ತವನ್ನು ವಿದ್ಯುನ್ಮಾನ ಪಾವತಿ ಮಾಡಬೇಕಿದೆ. ಸಿಬ್ಬಂದಿ ಮೂಲಕ (ಮ್ಯಾನ್ಯುವಲ್) ಸ್ಟಾಂಪ್ ವಿತರಿಸುವುದು ಸಂಪೂರ್ಣ ಸ್ಥಗಿತವಾಗಲಿದೆ. ಸಿಬ್ಬಂದಿ ಮೂಲಕ ಸ್ಟಾಂಪ್ ವಿತರಣೆಗೆ ಸಂಪೂರ್ಣ…
ಜಗತ್ತು ಈಗ ಮತ್ತೆ ಕೊರೊನಾ ಸೋಂಕಿನ ವಿರುದ್ಧ ಹೋರಾಡುತ್ತಿದೆ. ಕೇವಲ ಒಂದು ದೇಶವಲ್ಲ, ಹಲವು ದೇಶಗಳು ಈ ವೈರಸ್ ನಿಂದ ಪ್ರಭಾವಿತವಾಗಿವೆ. ಭಾರತದಲ್ಲಿಯೂ ಸಹ 1000 ಕ್ಕೂ ಹೆಚ್ಚು ಪ್ರಕರಣಗಳು ದೃಢಪಟ್ಟಿವೆ, ಇದು ಪ್ರಸ್ತುತ ಕಳವಳಕಾರಿ ವಿಷಯವಲ್ಲ.ಆದರೆ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳದಿದ್ದರೆ, ಅಪಾಯ ಮತ್ತು ಸೋಂಕಿತರ ಪ್ರಮಾಣ ಹೆಚ್ಚಾಗಬಹುದು. ಆದಾಗ್ಯೂ, ಈ ಸಮಯದಲ್ಲಿ ದೇಶದಲ್ಲಿ ಜ್ವರ ಮತ್ತು ಶೀತ-ಕೆಮ್ಮಿನ ಋತುಮಾನ ನಡೆಯುತ್ತಿದೆ. ಹೌದು, ನಿಮಗೆ ಜ್ವರ, ಶೀತ ಅಥವಾ ಕೆಮ್ಮು ಪದೇ ಪದೇ ಬರುತ್ತಿದ್ದರೆ, ಅದು ಪ್ರತಿ ಬಾರಿಯೂ ಕೊರೊನಾ ಆಗುವ ಅಗತ್ಯವಿಲ್ಲ. ಇದು ಹವಾಮಾನ ಬದಲಾವಣೆಯಿಂದ ಉಂಟಾಗುವ ಕಾಲೋಚಿತ ಜ್ವರವೂ ಆಗಿರಬಹುದು. ಇದರ ಬಗ್ಗೆ ವೈದ್ಯರ ಅಭಿಪ್ರಾಯವನ್ನು ತಿಳಿದುಕೊಳ್ಳೋಣ. ವೈದ್ಯರು ಏನು ಹೇಳುತ್ತಾರೆ? ಜಾರ್ಖಂಡ್ನ ಸಾರ್ವಜನಿಕ ಆರೋಗ್ಯ ಸೇವೆಯಲ್ಲಿ ಕೆಲಸ ಮಾಡುತ್ತಿರುವ ವೈದ್ಯ ಅನುಜ್ ಕುಮಾರ್, ಕೊರೊನಾ ಹೊರತುಪಡಿಸಿ, ಇತ್ತೀಚಿನ ದಿನಗಳಲ್ಲಿ ಜನರು ವೈರಲ್ ಜ್ವರಕ್ಕೂ ಬಲಿಯಾಗುತ್ತಿದ್ದಾರೆ ಎಂದು ಹೇಳುತ್ತಾರೆ. ಇದು ಹವಾಮಾನದಲ್ಲಿನ ಬದಲಾವಣೆಯಿಂದ ಬರುವ ಸಾಮಾನ್ಯ ಜ್ವರ. ಆದಾಗ್ಯೂ, ಜ್ವರ…
ಬೆಳಗಾವಿ: ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿಗೆ ಮತ್ತೊಂದು ಬಲಿಯಾಗಿದ್ದು, ಜಿಲ್ಲೆ ಬೆಳಗಾವಿಯಲ್ಲಿ ಮಹಾಮಾರಿ ಕೊರೊನಾ ಸೋಂಕಿಗೆ ವ್ಯಕ್ತಿಯೊಬ್ಬರು ಬಲಿಯಾಗಿದ್ದಾರೆ. ಬೆಳಗಾವಿಯ ಬಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೇ ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ. ಬೆಳಗಾವಿ ತಾಲೂಕಿನ ಬೆನಕನಹಳ್ಳಿ ನಿವಾಸಿ 70 ವರ್ಷದ ವೃದ್ಧರೊಬ್ಬರಲಿ ಕೊರೊನಾ ಸೋಂಕು ಕಾಣಿಸಿಕೊಂಡಿತ್ತು.ಅವರನ್ನು ಬಿಮ್ಸ್ ಆಸ್ಪತ್ರೆಗೆ ದಾಖಲಿಸಿ ಪ್ರತ್ಯೇಕ ವಾರ್ಡ್ ನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ತಡರಾತ್ರಿ ಸೋಂಕಿತ ವ್ಯಕ್ತಿ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ.
ಬೆಳಗಾವಿ: ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿಗೆ ಮತ್ತೊಂದು ಬಲಿಯಾಗಿದ್ದು, ಜಿಲ್ಲೆ ಬೆಳಗಾವಿಯಲ್ಲಿ ಮಹಾಮಾರಿ ಕೊರೊನಾ ಸೋಂಕಿಗೆ ವ್ಯಕ್ತಿಯೊಬ್ಬರು ಬಲಿಯಾಗಿದ್ದಾರೆ ಎನ್ನಲಾಗಿದೆ. ಬೆಳಗಾವಿಯ ಬಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೇ ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ ಎನ್ನಲಾಗಿದೆ. ಬೆಳಗಾವಿ ತಾಲೂಕಿನ ಬೆನಕನಹಳ್ಳಿ ನಿವಾಸಿ 70 ವರ್ಷದ ವೃದ್ಧರೊಬ್ಬರಲಿ ಕೊರೊನಾ ಸೋಂಕು ಕಾಣಿಸಿಕೊಂಡಿತ್ತು.ಅವರನ್ನು ಬಿಮ್ಸ್ ಆಸ್ಪತ್ರೆಗೆ ದಾಖಲಿಸಿ ಪ್ರತ್ಯೇಕ ವಾರ್ಡ್ ನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ತಡರಾತ್ರಿ ಸೋಂಕಿತ ವ್ಯಕ್ತಿ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ.
ಮಡಿಕೇರಿ: ಕೊಡಗು ಜಿಲ್ಲೆಯ ಪೊನ್ನಂಪೇಟೆಯಲ್ಲಿ ರಾಯಚೂರು ಮೂಲದ ಎಂಜಿನಿಯರಿಂಗ್ ವಿದ್ಯಾರ್ಥಿನಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. 6 ಸಬ್ಜೆಕ್ಟ್ ಬ್ಯಾಕ್ಲಾಗ್ ಇರುವ ಕಾರಣ ರಾಯಚೂರು ಮೂಲದ ವಿದ್ಯಾರ್ಥಿನಿ ಕಾಲೇಜು ಹಾಸ್ಟೆಲ್ನಲ್ಲಿ ಆತ್ಮಹತ್ಯೆಗೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಹಳ್ಳಿಗಟ್ಟು ಕಾಲೇಜುವೊಂದರಲ್ಲಿ ಪ್ರಥಮ ವರ್ಷದ ಎಐಎಂಎಲ್ ವ್ಯಾಸಂಗ ಮಾಡುತ್ತಿದ್ದ ತೇಜಸ್ವಿನಿ (19) ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಈಕೆ ರಾಯಚೂರಿನ ಮಹಾಂತಪ್ಪ ಎಂಬವರ ಏಕೈಕ ಪುತ್ರಿಯಾಗಿದ್ದು, ಮೂರು ದಿನಗಳ ಹಿಂದೆ ತನ್ನ ಹುಟ್ಟುಹಬ್ಬ ಆಚರಿಸಿಕೊಂಡಿದ್ದಳು. ಆತ್ಮಹತ್ಯೆಗೂ ಮುನ್ನ ಡೆತ್ ನೋಟ್ ಪತ್ತೆಯಾಗಿದೆ. ಆರು ವಿಷಯ ಬ್ಯಾಕ್ಲಾಗ್ ಇರುವ ಕಾರಣ ತನಗೆ ಮುಂದೆ ಓದಲು ಇಷ್ಟವಿಲ್ಲದ ಕಾರಣ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ ಎಂದು ಡೆತ್ ನೋಟ್ ಬರೆದಿದ್ದಾಳೆ. ಘಟನೆಗೆ ಸಂಬಂಧಿಸಿದಂತೆ ಪೋನ್ನಂಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಆಗಿದೆ.
ಬೆಳಗಾವಿ: ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿಗೆ ಮತ್ತೊಂದು ಬಲಿಯಾಗಿದ್ದು, ಜಿಲ್ಲೆ ಬೆಳಗಾವಿಯಲ್ಲಿ ಮಹಾಮಾರಿ ಕೊರೊನಾ ಸೋಂಕಿಗೆ ವ್ಯಕ್ತಿಯೊಬ್ಬರು ಬಲಿಯಾಗಿದ್ದಾರೆ. ಬೆಳಗಾವಿಯ ಬಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೇ ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ. ಬೆಳಗಾವಿ ತಾಲೂಕಿನ ಬೆನಕನಹಳ್ಳಿ ನಿವಾಸಿ 70 ವರ್ಷದ ವೃದ್ಧರೊಬ್ಬರಲಿ ಕೊರೊನಾ ಸೋಂಕು ಕಾಣಿಸಿಕೊಂಡಿತ್ತು.ಅವರನ್ನು ಬಿಮ್ಸ್ ಆಸ್ಪತ್ರೆಗೆ ದಾಖಲಿಸಿ ಪ್ರತ್ಯೇಕ ವಾರ್ಡ್ ನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ತಡರಾತ್ರಿ ಸೋಂಕಿತ ವ್ಯಕ್ತಿ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ.