Subscribe to Updates
Get the latest creative news from FooBar about art, design and business.
Author: kannadanewsnow57
ಬೆಂಗಳೂರು : ದಶಕಗಳ ಹಿಂದೆ ಜಮೀನು ಮಂಜೂರು ಆಗಿದ್ದರೂ ಸಹ ಸರಿಯಾದ ದಾಖಲೆ ಇಲ್ಲದವರಿಗೆ ಜಮೀನಿನ ಮಾಲೀಕತ್ವದ ಗ್ಯಾರಂಟಿ ನೀಡುವ ಸಲುವಾಗಿ ದರ್ಖಾಸ್ತು ಪೋಡಿ ಕಾರ್ಯಕ್ರಮವನ್ನು ಅಭಿಯಾನ ಮಾದರಿಯಲ್ಲಿ ಜಾರಿಗೊಳಿಸಲಾಗಿದೆ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಡಿಸೆಂಬರ್ ಮೊದಲ ವಾರದಿಂದಲೇ ದರ್ಖಾಸ್ತು ಪೋಡಿ ಅಭಿಯಾನ ಶುರುವಾಗಿದ್ದು, 26ಸಾವಿರ ಮಂಜೂರಿದಾರರ ಜಮೀನುಗಳನ್ನು ಸರ್ವೇಗೆ ಅಂಕಿತ ಹಾಕಲಾಗಿದೆ. ಈ ಪೈಕಿ 5 ಸಾವಿರ ಜನರಿಗೆ ಈಗಾಗಲೇ ಸರ್ವೇ ಮುಗಿಸಿದ್ದೇವೆ. ಈ ಎಲ್ಲರಿಗೂ ಹೊಸ ಆರ್ಟಿಸಿ, ಪಹಣಿ ಹಾಗೂ ನಕ್ಷೆ ನೀಡಲಾಗುವುದು. ಇದು ಜಮೀನಿನ ಮಾಲೀಕತ್ವದ ಗ್ಯಾರಂಟಿಯಾಗಿದ್ದು, ಈ ಅಭಿಯಾನಕ್ಕೆ “ನನ್ನ ಭೂಮಿ” ಎಂದು ಹೆಸರಿಡಲಾಗಿದೆ ಎಂದು ಮಾಹಿತಿ ನೀಡಿದರು. ಕಳೆದ ಮೂರು ವರ್ಷದಲ್ಲಿ 5 ಸಾವಿರ ಜನರಿಗೆ ಪೋಡಿ ಮಾಡಿಕೊಡಲಾಗಿತ್ತು. ಆದರೆ, ಕಾಂಗ್ರೆಸ್ ಸರ್ಕಾರದ ಕಳೆದ ಎರಡು ತಿಂಗಳಲ್ಲಿ 5 ಸಾವಿರ ಜನರಿಗೆ ಪೋಡಿ ದುರಸ್ಥಿ ಮಾಡಲಾಗಿದೆ. ನಮ್ಮ ಗುರಿ ದೊಡ್ಡದಿದೆ. ಕನಿಷ್ಟ 5 ರಿಂದ 7…
ಬೆಂಗಳೂರು : ಮೈಕ್ರೋ ಫೈನಾನ್ಸ್ ಕಂಪೆನಿಗಳು ಸಾಲ ಮರುಪಾವತಿ ವಿಚಾರದಲ್ಲಿ ಜನರಿಗೆ ಕಿರುಕುಳ ನೀಡುವುದು ಕಂಡುಬಂದರೆ ಕ್ರಿಮಿನಲ್ ಪ್ರಕರಣ ದಾಖಲಿಸಿ ಎಂದು ಎಲ್ಲಾ ಜಿಲ್ಲಾಧಿಕಾರಿಗಳಿಗೆ ಸಚಿವ ಕೃಷ್ಣ ಬೈರೇಗೌಡ ಅವರು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ವಿಕಾಸಸೌಧದಲ್ಲಿ ಸೋಮವಾರ ಜಿಲ್ಲಾಧಿಕಾರಿಗಳ ಮಾಸಿಕ ಪ್ರಗತಿ ಪರಿಶೀಲನಾ ಸಭೆಯ ನಂತರ ಪತ್ರಿಕಾಗೋಷ್ಠಿ ನಡೆಸಿ ಮಾಹಿತಿ ನೀಡಿದ ಅವರು, “ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಂಪೆನಿಗಳು 59 ಸಾವಿರ ಕೋಟಿ ರೂ. ಸಾಲ ನೀಡಿವೆ. ಅಲ್ಲದೆ, ತಮ್ಮ ಸಾಮರ್ಥ್ಯ ವಿಸ್ತರಿಸಿಕೊಳ್ಳುವ ಸಲುವಾಗಿ ಆರ್ಬಿಐ ಗೈಡ್ಲೈನ್ಸ್ ಉಲ್ಲಂಘಿಸಿ ಸಾಲ ನೀಡುತ್ತಿವೆ. ಸಾಲ ನೀಡುವಾಗ ಸಾಲ ಪಡೆದವರ ಆರ್ಥಿಕ ಸಾಮರ್ಥ್ಯವನ್ನು ಕಡೆಗಣಿಸಲಾಗುತ್ತಿರುವುದು ಅಹಿತಕರ ಪ್ರಸಂಗಗಳಿಗೆ ಕಾರಣವಾಗುತ್ತಿದೆ” ಎಂದು ಆತಂಕ ವ್ಯಕ್ತಪಡಿಸಿದರು. ಓರ್ವ ವ್ಯಕ್ತಿಗೆ 2ಲಕ್ಷಕ್ಕಿಂತ ಹೆಚ್ಚು ಸಾಲ ನೀಡಬಾರದು ಎಂದು ಆರ್ಬಿಐ ಗೈಡ್ಲೈನ್ಸ್ ಇದೆ. ಇದನ್ನು ಯಾರೂ ಅನುಸರಿಸುತ್ತಿಲ್ಲ. ಓರ್ವ ವ್ಯಕ್ತಿಗೆ 5-6 ಲಕ್ಷ ರೂ. ಸಾಲ ನೀಡಲಾಗುತ್ತಿದೆ. ಈ ಮೂಲಕ ಬಡವರನ್ನು ಸಾಲದ ಸುಳಿಗೆ ಸಿಲುಕಿಸಲಾಗುತ್ತಿದೆ. ಸಾಲ ಮರುಪಾವತಿ ಮಾಡದಿದ್ದರೆ…
ಬೆಂಗಳೂರು : ರಾಜ್ಯದ ಎಲ್ಲಾ ಪಡಿತರ ಚೀಟಿದಾರರು ತಮ್ಮ ಕುಟುಂಬದ ಎಲ್ಲಾ ಸದಸ್ಯರ ಇ-ಕೆವೈಸಿ ಮತ್ತು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಫಲಾನುಭವಿಗಳು ಮ್ಯಾಪಿಂಗ್ ಮಾಡಿಸಬೇಕು ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಉಪ ನಿರ್ದೇಶಕರು ತಿಳಿಸಿದ್ದಾರೆ. ಆರ್ಥಿಕವಾಗಿ ದುರ್ಬಲರಿರುವ ಕುಟುಂಬಗಳಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರ ನೀಡುತ್ತಿರುವ ಬಿಪಿಎಲ್ ಪಡಿತರವನ್ನು ಆಹಾರ ಭದ್ರತಾ ಕಾಯ್ದೆ ನಿಯಮಗಳನ್ನು ಪಾಲಿಸುವ ನಿಟ್ಟಿನಲ್ಲಿ ಜಿಲ್ಲೆಯ ಎಲ್ಲಾ ಪಡಿತರ ಚೀಟಿದಾರರು ಕಡ್ಡಾಯವಾಗಿ ತಮ್ಮ ಕುಟುಂಬದ ಎಲ್ಲಾ ಸದಸ್ಯರ ಇ-ಕೆವೈಸಿ ಮತ್ತು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಫಲಾನುಭವಿಗಳ ಮ್ಯಾಪಿಂಗ್ ಕಾರ್ಯ ಚಾಲ್ತಿಯಲ್ಲಿದ್ದು, ಜಾತಿವಾರು ಮ್ಯಾಪಿಂಗ್ ಮಾಡಿಸಬೇಕು. ಜಿಲ್ಲೆಯಲ್ಲಿ ಬಿಪಿಎಲ್ ಹಾಗೂ ಎಪಿಎಲ್ ಪಡಿತರ ಚೀಟಿದಾರರು ಈಗಾಗಲೇ ಕುಟುಂಬ ಪಡಿತರ ಚೀಟಿಯಲ್ಲಿನ ಎಲ್ಲಾ ಸದಸ್ಯರು ತಮ್ಮ ವ್ಯಾಪ್ತಿಯ ನ್ಯಾಯಬೆಲೆ ಅಂಗಡಿ ಮಟ್ಟದಲ್ಲಿಯೇ ಕುಟುಂಬದ ಎಲ್ಲಾ ಸದಸ್ಯರು ಕಡ್ಡಾಯವಾಗಿ ತಮ್ಮ ಬೆರಳಚ್ಚು ನೀಡಿ (ಇ-ಕೆವೈಸಿ) ನವೀಕರಿಸಿಕೊಳ್ಳಬೇಕು. ಇ-ಕೈವೈಸಿ ಆಗದ ಮತ್ತು ಪರಿಶಿಷ್ಠ ಜಾತಿ, ಪರಿಶಿಷ್ಠ…
ಬೆಂಗಳೂರು: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಚಳಿ ಹೆಚ್ಚಾಗಿದ್ದು, ಜನವರಿ 30 ರಿಂದ ಮೂರು ದಿನ ಬೆಂಗಳೂರು ಸೇರಿದಂತೆ ರಾಜ್ಯದ ಹಲವಡೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜನವರಿ 30ರಂದು ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ಚಾಮರಾಜನಗರ, ರಾಮನಗರ, ಜನವರಿ 31 ಹಾಗೂ ಫೆಬ್ರವರಿ 1ರಂದು ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಬಾಗಲಕೋಟೆ, ಗದಗ, ಧಾರವಾಡ, ವಿಜಯಪುರ, ಹಾವೇರಿ, ಮೈಸೂರು, ಮಂಡ್ಯ, ಶಿವಮೊಗ್ಗ, ಚಿಕ್ಕಮಗಳೂರು, ತುಮಕೂರು, ಕೊಡಗು, ಕೋಲಾರ, ಬೆಂಗಳೂರು, ಚಾಮರಾಜನಗರ, ರಾಮನಗರ ಜಿಲ್ಲೆಗಳಲ್ಲಿ ಹಗುರದಿಂದ ಕೂಡಿದ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಪ್ರಸ್ತುತ ಒಳನಾಡಿನಲ್ಲಿ ಚಳಿಯ ಪ್ರಮಾಣ ಹೆಚ್ಚುತ್ತಿದೆ. ಉತ್ತರ ಒಳನಾಡಿನ ವಿಜಯಪುರದಲ್ಲಿ ಕಳೆದ 24 ಗಂಟೆಗಳಲ್ಲಿ 11.8 ಡಿಗ್ರಿ ಕನಿಷ್ಠ ಉಷ್ಣಾಂಶ ದಾಖಲಾಗಿತ್ತು. ಇದನ್ನು ಹೊರತುಪಡಿಸಿದರೆ ಉತ್ತರ ಒಳನಾಡಿನ ಹಾವೇರಿ 12, ಬೀದರ್ 13, ಗದಗ 13.4, ಬೆಂಗಳೂರು 14, ರಾಯಚೂರು 15, ಬೆಳಗಾವಿ ವಿಮಾನ ನಿಲ್ದಾಣ 15 ಕನಿಷ್ಠ…
ಬೆಂಗಳೂರು : ಬೆಂಗಳೂರಿನ ಯಲಹಂಕ ಏರ್ ಫೋರ್ಸ್ ಸ್ಟೇಷನ್ ನಲ್ಲಿ ನಡೆಯಲಿರುವ ಏರೋ ಇಂಡಿಯಾ ವೈಮಾನಿಕ ಪ್ರದರ್ಶನಕ್ಕೆ ನೋಂದಣಿ ಆರಂಭವಾಗಿದ್ದು, ವೀಕ್ಷಣೆಗೆ 1 ಸಾವಿರ ರೂ. ಪ್ರವೇಶ ಶುಲ್ಕ ನಿಗದಿಪಡಿಸಲಾಗಿದೆ. ಹೌದು, ಫೆಬ್ರವರಿ 10ರಿಂದ 14 ರವರೆಗೆ ವೈಮಾನಿಕ ಪ್ರದರ್ಶನ ಏರೋ ಇಂಡಿಯಾ ಶೋ ನಡೆಯಲಿದ್ದು, ಏರೋ ಇಂಡಿಯಾ ವೈಮಾನಿಕ ಪ್ರದರ್ಶನ ವೀಕ್ಷಿಸಲು ಸಾರ್ವಜನಿಕರಿಗೆ 1 ಸಾವಿರ ರೂಪಾಯಿ ಶುಲ್ಕ ನಿಗದಿಪಡಿಸಲಾಗಿದ್ದು, ಆನ್ಲೈನ್ ನಲ್ಲಿ ನೋಂದಣಿ ಪ್ರಕ್ರಿಯೆ ಆರಂಭಿಸಲಾಗಿದೆ. ಫೆಬ್ರವರಿ 10ರಂದು ಉದ್ಘಾಟನಾ ಸಮಾರಂಭ ಇರುವುದರಿಂದ ಸಾರ್ವಜನಿಕರಿಗೆ ಪ್ರವೇಶ ಇರುವುದಿಲ್ಲ. ಶುಲ್ಕ ಪಾವತಿಸಿ ಟಿಕೆಟ್ ಖರೀದಿಸಿದವರು ಫೆಬ್ರವರಿ 11 ರಿಂದ 14ರ ವರೆಗೆ ನಾಲ್ಕು ದಿನಗಳಲ್ಲಿ ಯಾವುದಾದರೂ ಒಂದು ದಿನ ಏರ್ ಡಿಸ್ ಪ್ಲೇ ಏರಿಯಾಗೆ ತೆರಳಿ ಪ್ರದರ್ಶನ ವೀಕ್ಷಿಸಬಹುದು. ಬೆಳಗ್ಗೆ ಮತ್ತು ಮಧ್ಯಾಹ್ನದ ಅವಧಿ ಸೇರಿ ನಿತ್ಯ ಎರಡು ಬಾರಿ ಪ್ರದರ್ಶನ ಇರುತ್ತದೆ. ವಿದೇಶಿಯರಿಗೆ 50 ಯುಎಸ್ ಡಾಲರ್ ಶುಲ್ಕ ನಿಗದಿಪಡಿಸಲಾಗಿದೆ. ಏರೋ ಇಂಡಿಯಾದಲ್ಲಿ 140ಕ್ಕೂ ಅಧಿಕ ವಿದೇಶಿ ರಕ್ಷಣಾ…
ನವದೆಹಲಿ: ವಿವಾಹೇತರ ಅಪ್ಲಿಕೇಶನ್ ಗ್ಲೀಡೆನ್ ನಲ್ಲಿ 3 ಮಿಲಿಯನ್ ಭಾರತೀಯರು ಸಕ್ರಿಯರಾಗಿದ್ದಾರೆ. ಬೆಂಗಳೂರಲ್ಲಿ ಹೆಚ್ಚು ಬಳಕೆದಾರರು ಗ್ಲೀಡೆನ್ ಬಳಕೆ ಮಾಡುವ ಮೂಲಕ ಅಗ್ರಸ್ಥಾನದಲ್ಲಿದೆ ಎಂಬುದಾಗಿ ವರದಿಯೊಂದು ತಿಳಿಸಿದೆ. ಈ ಬಗ್ಗೆ ಕಂಪನಿಯೊಂದು ಮಾಹಿತಿ ಬಿಡುಗಡೆ ಮಾಡಿದ್ದು, ‘ಸಂತೋಷದ ನಂತರ’ ಏಕೈಕ ಮಾರ್ಗ ಎಂದು ನಾವು ಭಾವಿಸಿದಾಗ, ವಿವಾಹೇತರ ಅಪ್ಲಿಕೇಶನ್ ಗ್ಲೀಡೆನ್ ಭಾರತೀಯ ಬಳಕೆದಾರರ ಡೇಟಾದೊಂದಿಗೆ ನಮ್ಮನ್ನು ಆಶ್ಚರ್ಯಗೊಳಿಸಿತು. ಗ್ಲೀಡೆನ್ ಭಾರತದಲ್ಲಿ 3 ಮಿಲಿಯನ್ ಬಳಕೆದಾರರನ್ನು ದಾಖಲಿಸಿದೆ. ದೊಡ್ಡ ಅದ್ಧೂರಿ ಮದುವೆಗಳ ಭೂಮಿಯಾದ ಭಾರತದಲ್ಲಿ ವಿವಾಹೇತರ ಡೇಟಿಂಗ್ ಅಪ್ಲಿಕೇಶನ್ನಲ್ಲಿ ಅನೇಕ ವಿವಾಹಿತರು ಇರುವುದು ವಿಪರ್ಯಾಸವಲ್ಲವೇ? ಎಂದಿದೆ. 2024 ರಲ್ಲಿ ಅಪ್ಲಿಕೇಶನ್ ತನ್ನ ಬಳಕೆದಾರರ ಸಂಖ್ಯೆಯಲ್ಲಿ ಶೇಕಡಾ 270 ರಷ್ಟು ಏರಿಕೆ ಕಂಡಿದೆ ಎಂದು ಗ್ಲೀಡೆನ್ ಹೇಳಿಕೆಯಲ್ಲಿ ಹಂಚಿಕೊಂಡಿದೆ. ಇದು ಮಹಿಳಾ ಬಳಕೆದಾರರಲ್ಲಿ ಶೇಕಡಾ 128 ರಷ್ಟು ಹೆಚ್ಚಳವನ್ನು ಕಂಡಿದೆ. ಗ್ಲೀಡೆನ್ ಬಳಕೆದಾರರಲ್ಲಿ ಮಹಿಳೆಯರು ಈಗ ಶೇಕಡಾ 58 ರಷ್ಟಿದ್ದಾರೆ ಎಂದು ವರದಿ ಬಹಿರಂಗಪಡಿಸಿದೆ. ಅವರಲ್ಲಿ 40 ಪ್ರತಿಶತದಷ್ಟು ಜನರು ಪ್ರತಿದಿನ 45 ನಿಮಿಷಗಳವರೆಗೆ…
ಬೆಂಗಳೂರು : ರಾಜ್ಯದಲ್ಲಿ ವಿದ್ಯುತ್ ಪರಿವರ್ತಕಗಳಿಗೆ ಕೊರತೆ ಇಲ್ಲ. ವಿದ್ಯುತ್ ಪರಿವರ್ತಕಗಳ ಬ್ಯಾಂಕ್ ಸ್ಥಾಪನೆ ಮಾಡಿ ದಾಸ್ತಾನು ಮಾಡಲಾಗಿದೆ ಎಂದು ಇಂಧನ ಸಚಿವರಾದ ಕೆ.ಜೆ ಜಾರ್ಜ್ ತಿಳಿಸಿದ್ದಾರೆ. ಈ ಕುರಿತು ಮಾಹಿತಿ ನೀಡಿರುವ ಸಚಿವರು, ಸಮಸ್ಯೆ ಉಂಟಾದಲ್ಲಿ ಟೋಲ್ ಫ್ರೀ ನಂಬರ್ 1912ಗೆ ಕರೆ ಮಾಡಿದಲ್ಲಿ ಕರೆ ರೆಕಾರ್ಡ್ ಆಗಲಿದೆ. 72 ಗಂಟೆಗಳೊಳಗೆ ವಿದ್ಯುತ್ ಪರಿವರ್ತಕಗಳ ಅಳವಡಿಕೆಗೆ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಹೇಳಿದರು. ರಾಜ್ಯದಲ್ಲಿ ದಿನೇದಿನೆ ವಿದ್ಯುತ್ ಬೇಡಿಕೆ ಹೆಚ್ಚಾಗುತ್ತಿದೆ. ಪ್ರತಿ ದಿನ 17,500 ಮೆಗಾವ್ಯಾಟ್ ವಿದ್ಯುತ್ ಬೇಡಿಕೆ ಇದೆ. ವಿದ್ಯುತ್ ಸಮರ್ಪಕ ಪೂರೈಕೆ ಹಿನ್ನೆಲೆಯಲ್ಲಿ ಕುಸುಮ್ ಬಿ ಹಾಗೂ ಕುಸುಮ್ ಸಿ ಯೋಜನೆಯಡಿ ಸೌರ ವಿದ್ಯುತ್ ಉತ್ಪಾದಿಸಲು ಖಾಸಗಿ ಸಹಭಾಗಿತ್ವದಲ್ಲಿ ಸೌರ ವಿದ್ಯುತ್ ಉತ್ಪಾದನೆ ಮಾಡಲು ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.
ಬೆಂಗಳೂರು : ಇ.ಇ.ಡಿ.ಎಸ್. ತಂತ್ರಾಂಶದಲ್ಲಿ ಶಿಕ್ಷಕರ/ಅಧಿಕಾರಿಗಳ/ಬೋಧಕೇತರ ನೌಕರರ ಸೇವಾ ವಿವರಗಳನ್ನು ಗಣಕೀಕರಿಸಿ ಅಂತಿಮಗೊಳಿಸುವ ಬಗ್ಗೆ ರಾಜ್ಯ ಸರ್ಕಾರವು ಮಹತ್ವದ ಆದೇಶ ಹೊರಡಿಸಿದೆ. ವಿಷಯಕ್ಕೆ ಸಂಬಂದಿಸಿದಂತೆ ಈಗಾಗಲೇ ರಾಜ್ಯದಲ್ಲಿನ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲಾ ಸಹಶಿಕ್ಷಕರ ಮತ್ತು ಮುಖ್ಯ ಶಿಕ್ಷಕರ ಹಾಗೂ ತತ್ಸಮಾನ ವೃಂದದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವವರ, ಮಾಹಿತಿಯನ್ನು ಇಂದೀಕರಣಕ್ಕೆ ಸಂಬಂಧಿಸಿದಂತೆ, ಉಲ್ಲೇಖ-1ರಲ್ಲಿ ಕ್ರಸಂ 1 ರಿಂದ 19 ರವರೆಗಿನ ಅಂಶಗಳನ್ನು ಒಳಗೊಂಡಿರುವ ನಿಖರವಾದ ಸೇವಾ ವಿವರಗಳನ್ನು ಇ.ಇ.ಡಿ.ಎಸ್ ತಂತ್ರಾಂಶದಲ್ಲಿ ಗಣಕೀಕರಣ ಮಾಡಿ ಅಂತಿಮಗೊಳಿಸುವ ಬಗ್ಗೆ ಆಯಾ ಬಟವಾಡ ಅಧಿಕಾರಿಗಳಿಗೆ ಸೂಚಿಸಲಾಗಿತ್ತು. ಮುಂದುವರೆದು ಉಲ್ಲೇಖ-2ರಲ್ಲಿ ಜೂಮ್ ಸಭೆಯಲ್ಲಿ ಇ.ಇ.ಡಿ.ಎಸ್ ತಂತ್ರಾಂಶದಲ್ಲಿ ಗಣಕೀಕರಣ ಮಾಡಿ ಅಂತಿಮಗೊಳಿಸುವ ಬಗ್ಗೆ ಸಭೆ ಕೈಗೊಂಡು ಸದರಿ ಪ್ರಕ್ರಿಯೆಯನ್ನು ತುರ್ತಾಗಿ ಪೂರ್ಣಗೊಳಿಸುವಂತೆ ನಿರ್ದೇಶಿಸಲಾಗಿದೆ. ಆದರೆ, ಇದುವರೆವಿಗೂ ಉಲ್ಲೇಖಿತ ಸುತ್ತೋಲೆಯಲ್ಲಿ ಸೂಚಿಸಿರುವ 19 ಅಂಶಗಳನ್ನು ಇ.ಇ.ಡಿ.ಎಸ್ ತಂತ್ರಾಂಶದಲ್ಲಿ ಗಣಕೀಕರಣ ಮಾಡಿ ಅಂತಿಮಗೊಳಿಸಿಲ್ಲದಿರುವುದು ಕಂಡುಬಂದಿರುತ್ತದೆ. ಈ ಸಂಬಂಧ ಉಲ್ಲೇಖಿತ ಪತ್ರಗಳ ಸೂಚನೆಗಳನ್ನಯ ಇಲಾಖೆಯ ಬಟವಾಡೆ ಅಧಿಕಾರಿಗಳು ತಮ್ಮ ವ್ಯಾಪ್ತಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಶಿಕ್ಷಕರ/ಅಧಿಕಾರಿಗಳ/ಸಿಬ್ಬಂದಿ…
ಬೆಂಗಳೂರು : ರಾಜ್ಯ ಸರ್ಕಾರವು ಆಡಳಿತ ಯಂತ್ರಕ್ಕೆ ಮತ್ತೊಮ್ಮೆ ಸರ್ಜರಿ ಮಾಡಿದ್ದು, ಇಬ್ಬರು ಕೆಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಕರ್ನಾಟಕ ಆಡಳಿತ ಸೇವೆಗೆ ಸೇರಿದ ಈ ಕೆಳಕಂಡ ಅಧಿಕಾರಿಗಳನ್ನು ಸಾರ್ವಜನಿಕ ಹಾಗೂ ಆಡಳಿತಾತ್ಮಕ ಹಿತದೃಷ್ಠಿಯಿಂದ ಈ ಕೂಡಲೇ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಅವರುಗಳ ಹೆಸರಿನ ಮುಂದೆ ನಮೂದಿಸಿರುವ ಹುದ್ದೆಗಳಿಗೆ ವರ್ಗಾಯಿಸಿ / ಸ್ಥಳ ನಿಯುಕ್ತಿಗೊಳಿಸಿ ಆದೇಶಿಸಿದೆ. ವರ್ಗಾವಣೆಗೊಂಡ `KAS’ ಅಧಿಕಾರಿಗಳು 1. ಎಸ್ ಎಂ ಶಿವಕುಮಾರ್ ಕೆ.ಎ.ಎಸ್ (ಹಿರಿಯ ಶ್ರೇಣಿ) ಅಧಿಕಾರಿ ಸ್ಥಳ ನಿರೀಕ್ಷಣೆ 2. ಡಾ. ಮಧು ಎನ್ ಎನ್. ಕೆ.ಎ.ಎಸ್ (ಹಿರಿಯ ಶ್ರೇಣಿ) ಅಧಿಕಾರಿ ಮುಖ್ಯ ಜಾಗೃತಾಧಿಕಾರಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಬೆಂಗಳೂರು
ಬೆಂಗಳೂರು : ಜಲಜೀವನ್ ಮಿಷನ್ ಯೋಜನೆಯಡಿ ಮನೆ ಮನೆಗೆ ಕಾರ್ಯಾತ್ಮಕ ಗೃಹನಳ ಸಂಪರ್ಕ ಕಲ್ಪಿಸಲಾಗುತ್ತಿದ್ದು, ಶೇ.100 ರಷ್ಟು ಯಶಸ್ವಿಯಾಗಿ ಅನುಷ್ಠಾನಗೊಂಡಿರುವ ಗ್ರಾಮ/ಗ್ರಾ.ಪಂಗಳಲ್ಲಿ ʼಹರ್ ಘರ್ ಜಲ್ʼ ಎಂದು ಘೋಷಿಸಲಾಗುತ್ತದೆ. ಹಾಗೂ ಇದಕ್ಕಾಗಿ ವಿಶೇಷ ಗ್ರಾಮ ಸಭೆ ಕರೆದು ಗ್ರಾಮಸ್ಥರ ಒಪ್ಪಿಗೆ ಪಡೆಯಲಾಗುತ್ತದೆ. ʼಹರ್ ಘರ್ ಜಲ್ʼ ಗ್ರಾಮ ಘೋಷಣೆಗೆ ಗ್ರಾಮ ಪಂಚಾಯಿತಿಯು ಈ ಕೆಳಗಿನ ಮಾನದಂಡಗಳನ್ನು ಕಡ್ಡಾಯವಾಗಿ ಅನುಸರಿಸಬೇಕು. ಈ ಮೂಲಕ ಜಲಜೀವನ್ ಮಿಷನ್ ಯೋಜನೆಯನ್ನು ಯಶಸ್ವಿವಾಗಿ ಅನುಷ್ಠಾನಗೊಳಿಸಲು ಸಾಧ್ಯ. ಅನುಸರಿಸಬೇಕಾದ ಮಾನದಂಡಗಳು: 1. ಗ್ರಾಮದ ಪ್ರತಿ ಮನೆಗೂ ಕಾರ್ಯಾತ್ಮಕ ಗೃಹನಳ ಸಂಪರ್ಕ ಒದಗಿಸುವುದು 2. ಕಾಮಗಾರಿಯ ಪ್ರಗತಿಯನ್ನು ಯೋಜನೆಯ IMIS ದಾಖಲಿಸುವುದು 3.ಗ್ರಾಮದಲ್ಲಿರುವ ಅಂಗನವಾಡಿ, ಸರ್ಕಾರಿ ಶಾಲೆ, ಸಮುದಾಯ ಭವನಗಳ ಅಗತ್ಯತೆಗೆ ತಕ್ಕಂತೆ ನಳ ಸಂಪರ್ಕ ನೀಡಿ ಶುದ್ಧ ನೀರು ಒದಗಿಸುವುದು










