Subscribe to Updates
Get the latest creative news from FooBar about art, design and business.
Author: kannadanewsnow57
ಮನೆಯಲ್ಲಿ ಸೊಳ್ಳೆ ಹೊಗಲಾಡಿಸಲು ಸೊಳ್ಳೆ ಕಾಯಿಲ್ ಬಳಸುತ್ತಾರೆ .ಈ ಸೊಳ್ಳೆ ಸುರುಳಿಯ ಹೊಗೆ ಸೊಳ್ಳೆಗಳನ್ನು ಹಿಮ್ಮೆಟ್ಟಿಸುತ್ತದೆ. ಆದರೆ ಈ ಸೊಳ್ಳೆ ಸುರುಳಿಯ ಹೊಗೆ ನಮ್ಮ ಆರೋಗ್ಯಕ್ಕೂ ಹಾನಿಕರ ಎನ್ನುತ್ತಾರೆ ಆರೋಗ್ಯ ತಜ್ಞರು. ಈ ಹೊಗೆಯನ್ನು ಆಘ್ರಾಣಿಸಿದರೆ ಸಿಗರೇಟು ಸೇದಿದಂತಾಗುತ್ತದೆ. ಈ ಕಾಯಿಲ್ ನಲ್ಲಿ ಹಲವು ಬಗೆಯ ರಾಸಾಯನಿಕಗಳನ್ನು ಏಕೆ ಬೆರೆಸಲಾಗಿದೆ. ಆದರೆ ಈ ಹೊಗೆ ನೇರವಾಗಿ ಶ್ವಾಸಕೋಶವನ್ನು ಪ್ರವೇಶಿಸುತ್ತದೆ ಮತ್ತು ನಮ್ಮ ದೇಹಕ್ಕೆ ದೊಡ್ಡ ಹಾನಿ ಉಂಟುಮಾಡುತ್ತದೆ. ಈ ಸೊಳ್ಳೆ ಸುರುಳಿಯ ಹೊಗೆಯನ್ನು ಉಸಿರಾಡುವುದರಿಂದ ಶ್ವಾಸಕೋಶದ ಹಾನಿಯೂ ಉಂಟಾಗುತ್ತದೆ. ಅಲ್ಲದೆ ಈ ಸೊಳ್ಳೆ ಸುರುಳಿಗಳಲ್ಲಿನ ಸಂಯುಕ್ತಗಳು ತಲೆನೋವಿಗೆ ಕಾರಣವಾಗಬಹುದು. ಅದಕ್ಕಾಗಿಯೇ ಸೊಳ್ಳೆ ನಿವಾರಕ ವಾಸನೆ ಬಂದಾಗ ಹಲವರಿಗೆ ತಕ್ಷಣ ತಲೆನೋವು ಬರುತ್ತದೆ. ಇದು ಉಸಿರಾಟದ ತೊಂದರೆಯನ್ನೂ ಉಂಟುಮಾಡುತ್ತದೆ. ಸೊಳ್ಳೆ ಸುರುಳಿಯ ಹೊಗೆಯಿಂದಲೂ ಅಸ್ತಮಾ ಸಮಸ್ಯೆ ಎದುರಾಗುವ ಸಾಧ್ಯತೆ ಇದೆ. ಈ ಹೊಗೆ ಹೆಚ್ಚು ವಿಷಕಾರಿಯಾಗಿದ್ದು ಮೆದುಳಿಗೆ ಹಾನಿಯುಂಟು ಮಾಡುತ್ತದೆ ಎಂದು ಆರೋಗ್ಯ ತಜ್ಞರು ಕೂಡ ಹೇಳುತ್ತಾರೆ. ಇದು ಚರ್ಮದ ಅಲರ್ಜಿಯನ್ನು ಸಹ…
ಪುಣೆ : ಪುಣೆಯಲ್ಲಿ ಗುಯಿಲಿನ್-ಬಾರೆ ಸಿಂಡ್ರೋಮ್ (GBS) ನ ಆರು ಶಂಕಿತ ಪ್ರಕರಣಗಳು ಪತ್ತೆಯಾಗುವುದರೊಂದಿಗೆ, ನಗರದಲ್ಲಿ ಒಟ್ಟು ಸೋಂಕುಗಳ ಸಂಖ್ಯೆ 73 ಕ್ಕೆ ತಲುಪಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಆರಂಭದಲ್ಲಿ 24 ಶಂಕಿತ ಪ್ರಕರಣಗಳು ಪತ್ತೆಯಾದ ನಂತರ, ಈ ರೋಗನಿರೋಧಕ ನರ ಅಸ್ವಸ್ಥತೆಯ ಪ್ರಕರಣಗಳಲ್ಲಿ ಹಠಾತ್ ಏರಿಕೆಗೆ ಕಾರಣವನ್ನು ತನಿಖೆ ಮಾಡಲು ಮಂಗಳವಾರ ರಾಜ್ಯ ಆರೋಗ್ಯ ಇಲಾಖೆಯಿಂದ ತ್ವರಿತ ಪ್ರತಿಕ್ರಿಯೆ ತಂಡ (RRT) ಸ್ಥಾಪಿಸಲಾಯಿತು. “ಒಟ್ಟು GBS ಪ್ರಕರಣಗಳ ಸಂಖ್ಯೆ 73 ಕ್ಕೆ ಏರಿತು, ಇದರಲ್ಲಿ 47 ಪುರುಷರು ಮತ್ತು 26 ಮಹಿಳೆಯರು ಸೇರಿದ್ದಾರೆ. ಇವುಗಳಲ್ಲಿ 14 ವೆಂಟಿಲೇಟರ್ ಬೆಂಬಲದಲ್ಲಿವೆ” ಎಂದು ರಾಜ್ಯ ಆರೋಗ್ಯ ಇಲಾಖೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಪುಣೆ ಮುನ್ಸಿಪಲ್ ಕಾರ್ಪೊರೇಷನ್ ವ್ಯಾಪ್ತಿಯಲ್ಲಿ ಸುಮಾರು 2,000 ಮನೆಗಳು ಮತ್ತು ಚಿಂಚ್‌ವಾಡ್ ಮುನ್ಸಿಪಲ್ ಕಾರ್ಪೊರೇಷನ್ ವ್ಯಾಪ್ತಿಯಲ್ಲಿ 1,750 ನಿವಾಸಗಳು ಮತ್ತು ಗ್ರಾಮೀಣ ಪ್ರದೇಶಗಳಲ್ಲಿ 3,522 ಮನೆಗಳೊಂದಿಗೆ, ನಗರದಲ್ಲಿ 7,000 ಕ್ಕೂ ಹೆಚ್ಚು ಮನೆಗಳನ್ನು ಇಲ್ಲಿಯವರೆಗೆ ಸಮೀಕ್ಷೆ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಗದಗ: ರಾಜ್ಯದಲ್ಲಿ ಮೀಟರ್ ಬಡ್ಡಿ ದಂಧೆಕೋರರು ಅಟ್ಟಹಾಸ ಮೆರೆದಿದ್ದು, ಗದಗದಲ್ಲಿ ಸಾಲ ಪಡೆದಿದ್ದ ವ್ಯಕ್ತಿಯನ್ನು ಅರೆಬೆತ್ತಲೆಗೊಳಿಸಿ ಮಾರಣಾಂತಿಕವಾಗಿ ಹಲ್ಲೆ ಮಾಡಿರುವ ಘಟನೆ ನಡೆದಿದೆ. ವ್ಯಕ್ತಿಯನ್ನು ರೂಮ್ ನಲ್ಲಿ ಕೂಡಿಹಾಕಿ ಇಡೀ ರಾತ್ರಿ ಹಲ್ಲೆ ನಡೆಸಿದ್ದಾರೆ. ಗದಗ -ಬೆಟಗೇರಿ ಅವಳಿ ನಗರದಲ್ಲಿ ಅಮಾನುಷ ಕೃತ್ಯ ನಡೆದಿದೆ. ಸಾಲ ಪಡೆದ ಗದಗ ನಗರದ ಡಿಸಿ ಮಿಲ್ ನಿವಾಸಿ ದಶರಥ ಬಳ್ಳಾರಿ ಅವರ ಮೇಲೆ ಹಲ್ಲೆ ನಡೆಸಲಾಗಿದೆ ರೌಡಿಶೀಟರ್ ಡಿಸ್ಕವರಿ ಮಂಜು, ಮಂಜುನಾಥ ಹಂಸನೂರು, ಮಹೇಶ ಹಂಸನೂರು, ಹನುಮಂತ ವಿರುದ್ಧ ಹಲ್ಲೆ ಆರೋಪ ಕೇಳಿ ಬಂದಿದ್ದು, ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬೆಂಗಳೂರು : ಜನರನ್ನು ವಂಚಿಸಲು ವಂಚಕರು ಹೊಸ ವಿಧಾನಗಳನ್ನು ಬಳಸುತ್ತಿದ್ದಾರೆ. ಇಂತಹ ವಂಚನೆಗಳು ಹೆಚ್ಚಾಗಿ ಫೋನ್ ಮೂಲಕ ನಡೆಯುತ್ತವೆ. ಸಾಫ್ಟ್‌ವೇರ್ ಕಂಪನಿ ಬೀನ್‌ವೆರಿಫೈಡ್ ಇತ್ತೀಚೆಗೆ ಸ್ಕ್ಯಾಮ್ ಕರೆಗಳಿಗೆ ಸಂಬಂಧಿಸಿದ ಟಾಪ್ 10 ಫೋನ್ ಸಂಖ್ಯೆಗಳನ್ನು ಬಹಿರಂಗಪಡಿಸುವ ವರದಿಯನ್ನು ಹಂಚಿಕೊಂಡಿದೆ. ನೀವು ವಂಚನೆಗಳಿಂದ ಸಿಲುಕಿಕೊಳ್ಳುವುದನ್ನು ತಪ್ಪಿಸಲು ಬಯಸಿದರೆ ಈ ಸಂಖ್ಯೆಗಳಿಂದ ಬರುವ ಕರೆಗಳಿಗೆ ಉತ್ತರಿಸುವುದನ್ನು ತಪ್ಪಿಸಿ. ವಿವಿಧ ರೀತಿಯ ವಂಚನೆಗಳಿಗೆ ಬಳಸಲಾಗುವ ಈ 10 ಸಂಖ್ಯೆಗಳು ಯಾವುವು ಎಂಬುದನ್ನು ವಿವರವಾಗಿ ತಿಳಿದುಕೊಳ್ಳಿ. 1. (865) 630-4266 ಈ ಸಂಖ್ಯೆಯಿಂದ ವಂಚನೆ ಕರೆಗಳಿಗೆ ಒಳಗಾದ ಬಲಿಪಶುಗಳು ತಮ್ಮ ವೆಲ್ಸ್ ಫಾರ್ಗೋ ಖಾತೆಗಳನ್ನು ತಾತ್ಕಾಲಿಕವಾಗಿ ಲಾಕ್ ಮಾಡಲಾಗಿದೆ ಎಂದು ಹೇಳುವ ಸಂದೇಶಗಳನ್ನು ಸ್ವೀಕರಿಸುತ್ತಿದ್ದಾರೆ ಮತ್ತು ತ್ವರಿತ “ಅನ್‌ಲಾಕ್” ಗಾಗಿ ಬ್ಯಾಂಕ್‌ಗೆ ಕರೆ ಮಾಡುವಂತೆ ವಿನಂತಿಸಲಾಗಿದೆ ಎಂದು ವರದಿ ಮಾಡಿದ್ದಾರೆ. 2. (469) 709-7630 ವಿಫಲವಾದ ವಿತರಣಾ ಪ್ರಯತ್ನಕ್ಕೆ ಸಂಬಂಧಿಸಿದಂತೆ ಬಳಕೆದಾರರು ತಮ್ಮ ಹೆಸರು ಅಥವಾ ಪ್ರೀತಿಪಾತ್ರರ ಹೆಸರನ್ನು ಉಲ್ಲೇಖಿಸಿ, ಪರಿಹಾರಕ್ಕಾಗಿ ಈ ಸಂಖ್ಯೆಗೆ ಸಂದೇಶ ಕಳುಹಿಸಲು…
ಬೆಂಗಳೂರು : ಬೆಂಗಳೂರಿನಲ್ಲಿ ಮನೆ ಕೆಲಸ ಮಾಡಿಕೊಂಡಿದ್ದ ಬಾಂಗ್ಲಾದೇಶದ ಮೂಲದ ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಭೀಕರವಾಗಿ ಕೊಲೆ ಮಾಡಿರುವ ಘಟನೆ ಬೆಂಗಳೂರಿನ ಕಲ್ಕೆರೆ ಅಪಾರ್ಟ್ಮೆಂಟ್ ಬಳಿ ಈ ಒಂದು ಘಟನೆ ನಡೆದಿದೆ. ಹೌದು ಬೆಂಗಳೂರಲ್ಲಿ ಮನೆ ಕೆಲಸ ಮಾಡುತ್ತಿದ್ದ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಬಳಿಕ ಬರ್ಬರವಾಗಿ ಕೊಲೆ ಮಾಡಲಾಗಿದೆ. ರಾಮಮೂರ್ತಿ ನಗರ ಬಳಿಯ ಕಲ್ಕೆರೆ ಅಪಾರ್ಟ್ಮೆಂಟ್ ಬಳಿ ಇದೀಗ ಮಹಿಳೆಯ ಮೃತದೇಹ ಪತ್ತೆಯಾಗಿದೆ. ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯಾ ಎಸಗೆ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗುತ್ತಿದೆ. ಮೂಲತಃ ಬಾಂಗ್ಲಾದೇಶದ ನಿವಾಸಿಯಾಗಿದ್ದ ನಜ್ಮಾ ಎನ್ನುವ ಮಹಿಳೆ, ಅಪಾರ್ಟ್ಮೆಂಟ್ನಲ್ಲಿ ನಜ್ಮಾ ಎನ್ನುವ ಮಹಿಳೆ ಕೆಲಸ ಮಾಡುತ್ತಿದ್ದಳು. ಈಕೆಗೆ ಮೂರು ಮಕ್ಕಳಿದ್ದು ಸದ್ಯ ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದು ಅಲ್ಲದೆ ಭೀಕರವಾಗಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗುತ್ತಿದೆ ಘಟನೆ ಸ್ಥಳಕ್ಕೆ ರಾಮಮೂರ್ತಿನಗರ ಠಾಣೆ ಪೊಲೀಸ್ರು ಭೇಟಿ ನೀಡಿದ್ದು ಪರಿಶೀಲನೆ ನಡೆಸುತ್ತಿದ್ದಾರೆ.
ಬೆಂಗಳೂರು: ನಗರದಲ್ಲಿ ಪ್ರಯಾಣಿಕರ ಅನುಕೂಲಕ್ಕಾಗಿ ಜನವರಿ 26ರಂದು ಗಣರಾಜ್ಯೋತ್ಸವದ ಪ್ರಯುಕ್ತ ನಮ್ಮ ಮೆಟ್ರೋ ( Namma Metro ) ಸಂಚಾರವನ್ನು ಬೆಳಿಗ್ಗೆ 6 ಗಂಟೆಯಿಂದಲೇ ಆರಂಭಿಸಲಾಗುತ್ತಿದೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಬಿಎಂಆರ್ ಸಿಎಲ್ ತಿಳಿಸಿದ್ದು,ಗಣರಾಜ್ಯೋತ್ಸವದ ಅಂಗವಾಗಿ, ಜನವರಿ 26, 2025ರ ಭಾನುವಾರದಂದು, ಮೆಟ್ರೋ ರೈಲು ಸೇವೆಗಳು ಬೆಳಿಗ್ಗೆ 07:00 ಗಂಟೆಯ ಬದಲಿಗೆ 06:00 ಗಂಟೆಗೆ ಎಲ್ಲಾ ನಾಲ್ಕು ಟರ್ಮಿನಲ್‌ಗಳಿಂದ ಮತ್ತು ನಾಡಪ್ರಭು ಕೆಂಪೇಗೌಡ ನಿಲ್ದಾಣ ಮೆಜೆಸ್ಟಿಕ್‌ನನಿಂದ ಪ್ರಾರಂಭವಾಗಲಿದೆ ಎಂಬುದಾಗಿ ತಿಳಿಸಿದೆ. ಲಾಲ್‌ಬಾಗ್ ಪುಷ್ಪ ಪ್ರದರ್ಶನ ಮತ್ತು ಮಾದಾವರದ ಬಿಐಇಸಿನಲ್ಲಿ ನಡೆಯುವ ವಿಶೇಷ ಕಾರ್ಯಕ್ರಮಕ್ಕೆ ಪ್ರಯಾಣಿಸುವ ಪ್ರಯಾಣಿಕರ ಅನುಕೂಲಕ್ಕಾಗಿ ಮಟೋ ನಿಗಮವು ಈ ದಿನ ಹಸಿರು ಮತ್ತು ನೇರಳೆ ಮಾರ್ಗಗಳಲ್ಲಿ 20 ಹೆಚ್ಚುವರಿ ಟ್ರಿಪ್‌ಗಳನ್ನು ನಡೆಸಲಾಗುತ್ತದೆ ಎಂದಿದೆ. ಸಾರ್ವಜನಿಕರು ಲಾಲ್‌ಬಾಗ್ ಮೆಟ್ರೋ ನಿಲ್ದಾಣಕ್ಕೆ ಟೋಕನ್‌ಗಳು, ಸ್ಮಾರ್ಟ್ ಕಾರ್ಡ್ (ಸಿಎಸ್‌ಸಿ), ರಾಷ್ಟ್ರೀಯ ಸಾಮಾನ್ಯ ಮೊಬಿಲಿಟಿ ಕಾರ್ಡ್ (ಎನ್‌ಸಿಎಂಸಿ) ಮತ್ತು ಕ್ಯೂಆರ್ ಟಿಕೆಟ್‌ಗಳನ್ನು ಬಳಸಿ ಹಿಂತಿರುಗಬಹುದು. ಲಾಲ್‌ಬಾಗ್ ಮೆಟ್ರೋ ನಿಲ್ದಾಣದಲ್ಲಿ, ನಿಗಮವು ಟೋಕನ್‌ಗಳ ಬದಲಿಗೆ…
ಬೆಂಗಳೂರು: ಅನಾರೋಗ್ಯದ ಕಾರಣ ಅಮೇರಿಕಾದಲ್ಲಿನ ಆಸ್ಪತ್ರೆಯಲ್ಲಿ ಶಸ್ತ್ರ ಚಿಕಿತ್ಸೆಗೆ ದಾಖಲಾಗಿದ್ದ ನಟ ಶಿವರಾಜ್ ಕುಮಾರ್ ಅವರು ಗುಣಮುಖರಾಗಿದ್ದು, ನಾಳೆಯೇ ಬೆಂಗಳೂರಿಗೆ ವಾಪಸ್ ಆಗಲಿದ್ದಾರೆ. ಹೌದು, ಸ್ಯಾಂಡಲ್ ವುಡ್ ನಟ ಶಿವರಾಜ್ ಕುಮಾರ್ ಅವರು ಅನಾರೋಗ್ಯದ ಕಾರಣ ಅಮೇರಿಕಾದ ಪ್ಲೋರಿಡಾದಲ್ಲಿರುವಂತ ಮಿಯಾಮಿ ಕ್ಯಾನ್ಸರ್ ಇನ್ಟಿಟ್ಯೂಟ್ ಗೆ ಶಸ್ತ್ರ ಚಿಕಿತ್ಸೆಗಾಗಿ ದಾಖಲಾಗಿದ್ದರು. ಅವರಿಗೆ ವೈದ್ಯರು ಶಸ್ತ್ರಚಿಕಿತ್ಸೆ ನಡೆಸಿಸಿದ್ದರು. ಇದೀಗ ಸರ್ಜರಿ ಬಳಿಕ ಗುಣಮುಖರಾಗಿದ್ದು, ನಾಳೆಯೆ ಬೆಂಗಳೂರಿಗೆ ವಾಪಸ್ ಆಗಲಿದ್ದಾರೆ. ಹೀಗಾಗಿ ಅವರ ಅಭಿಮಾನಿಗಳ ಪೂಜಾಫಲ ಫಲಿಸಿದೆ. ನಟ ಶಿವರಾಜ್ ಕುಮಾರ್ ಅವರಿಗೆ ವೈದ್ಯರು ಶಸ್ತ್ರ ಚಿಕಿತ್ಸೆ ನಡೆಸಿದ್ದು, ಆ ಬಳಿಕ ಅವರು ಆಸ್ಪತ್ರೆಯಲ್ಲೇ ಒಂದು ತಿಂಗಳ ಕಾಲ ವಿಶ್ರಾಂತಿಯನ್ನು ಪಡೆದಿದ್ದಾರೆ. ನಟ ಶಿವರಾಜ್ ಕುಮಾರ್ ಅವರು ಶಸ್ತ್ರಚಿಕಿತ್ಸೆ ಪಡೆದು ಗುಣಮುಖರಾಗಿ ಬರಲಿ ಅಂತ ದೂರವಾಣಿ ಕರೆ ಮಾಡಿ ಸಿಎಂ ಸಿದ್ಧರಾಮಯ್ಯ ಅವರು ಶುಭ ಹಾರೈಸಿದ್ದರು. ಶಿವಣ್ಣ ಅಭಿಮಾನಿಗಳು ಕೂಡ ದೇವಸ್ಥಾನದಲ್ಲಿ ಪೂಜೆ, ಪುರಸ್ಕಾರದಲ್ಲಿ ತೊಡಗಿದ್ದು, ಬೇಗ ಗುಣಮುಖರಾಗಿ ಬರಲಿ ಅಂತ ಬೇಡಿಕೊಂಡಿದ್ದಾರೆ.
ವಿಜಯಪುರ : ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ 2.5 ಲಕ್ಷ ಅಕ್ರಮ ಪಂಪ್ ಸೆಟ್ ಗಳನ್ನು ಸಕ್ರಮಗೊಳಿಸಲಾಗಿದ್ದು, ಬಾಕಿ ಇರುವ 2 ಲಕ್ಷ ಪಂಪ್ ಸೆಟ್ ಗಳನ್ನು ಇನ್ನೊಂದು ವರ್ಷದಲ್ಲಿ ಸಕ್ರಮಗೊಳಿಸಲಾಗುವುದು ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್ ಹೇಳಿದ್ದಾರೆ. ಈ ಕುರಿತು ಮಾಹಿತಿ ನೀಡಿದ ಅವರು, “ಅಕ್ರಮ ಪಂಪ್ ಸೆಟ್ ಗಳ ಸಕ್ರಮ ಯೋಜನೆ 2004ರಿಂದಲೇ ಜಾರಿಯಲ್ಲಿದ್ದು, ನಮ್ಮ ಸರ್ಕಾರ ಅಧಿಕಾರಕ್ಕೆ ಬಂದಾಗ ಈ ಯೋಜನೆಯಡಿ 4.5 ಲಕ್ಷ ಅರ್ಜಿಗು ಬಾಕಿ ಇದ್ದವು. ಪ್ರಸ್ತುತ 2.5 ಲಕ್ಷ ಪಂಪ್ ಸೆಟ್ ಗಳನ್ನು ಅಕ್ರಮಗೊಳಿಸಲಾಗಿದೆ. ಬಾಕಿ ಉಳಿದ ಅರ್ಜಿಗಳನ್ನು ಇತ್ಯರ್ಥಗೊಳಿಸಿದ ಬಳಿಕ ಹೊಸದಾಗಿ ಬಂದ ಅರ್ಜಿಗಳ ಕುರಿತು ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ತೀರ್ಮಾ ಕೈಗೊಳ್ಳಲಾಗುವುದು,” ಎಂದರು. “ರೈತರಿಗೆ ನಿರಂತರ 7 ಗಂಟೆ ಸೇರಿದಂತೆ ರಾಜ್ಯದ ಜನರಿಗೆ ದಿನದ 24 ಗಂಟೆಗಳ ಕಾಲ ವಿದ್ಯುತ್ ಪೂರೈಸಲಾಗುತ್ತಿದೆ.ವಿಜಯಪುರ ಜಿಲ್ಲೆಯಲ್ಲಿ 353 ಕೃಷಿ ಮಾರ್ಗಗಳಿಗೆ ಹಗಲು ವೇಳೆ 7 ಗಂಟೆ 3…
ಬೆಂಗಳೂರು : ಯಶಸ್ವಿನಿ ಆರೋಗ್ಯ ರಕ್ಷಣಾ ಯೋಜನೆಗೆ ಹೊಸದಾಗಿ ಹಾಗೂ ನವೀಕರಣಕ್ಕಾಗಿ ಸರ್ಕಾರ ಹಾಗೂ ಸಹಕಾರ ಇಲಾಖೆ ಪ್ರಕಟಣೆ ಹೊರಡಿಸಿದ್ದು ನೋಂದಣಿ ಮಾಡಿಸಲು ದಿನಾಂಕ:-31-01-2025 ಕೋನೆಯ ದಿನಾಂಕವಾಗಿರುತ್ತದೆ. ಬೇಕಾದ ಅಗತ್ಯ ದಾಖಲೆಗಳು ನವೀಕರಣ ಮಾಡಲು 1.ಯಶಸ್ವಿನಿ ಐಡಿ ಕಾರ್ಡು, 2.ಆಧಾರ್ ಕಾರ್ಡ್ ಜೆರಾಕ್ಸ್ (ನೋಂದಣಿ ಮಾಡಿಸುವ ಪ್ರತಿಯೋಬ್ಬ ಸದಸ್ಯರದ್ದು) 3.ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಢದವರಿಗೆ ಜಾತಿ ಪ್ರಮಾಣ ಪತ್ರದ ನಕಲು.(ಕುಟುಂಬದ ಒಬ್ಬರದ್ದು) ಹೋಸದಾಗಿ ನೋದಾಯಿಸಲು:- 1.ಸಹಕಾರ ಸಂಘದಲ್ಲಿ ಸದಸ್ಯತ್ವ ಹೋದಿರಬೇಕು. 2.ಕುಟುಂಬದ ರೇಷನ್ ಕಾರ್ಡ್ ಪ್ರತಿ ಜೆರಾಕ್ಸ್, 3.ಆಧಾರ್ ಕಾರ್ಡ್ ಜೆರಾಕ್ಸ್ (ನೋದವಣಿ ಮಾಡಿಸುವ ಪ್ರತಿಯೋಬ್ಬ ಸದಸ್ಯರದ್ದು) 4.ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಢದವರಿಗೆ ಜಾತಿ ಪ್ರಮಾಣ ಪತ್ರದ ನಕಲು. (ಕುಟುಂಬದ ಒಬ್ಬರದ್ದು) 5. ಪ್ರತಿಯೊಬ್ಬರದ್ದು 2 ಕಾಪೀ ಪೋಟೊ. ಸಹಕಾರ ಇಲಾಖೆ ವತಿಯಿಂದ ರಾಜ್ಯದ ಯಶಸ್ವನಿ ನೆಟ್‌ವರ್ಕ್ ಆಸ್ಪತ್ರೆಗಳಲ್ಲಿ ಸಹಕಾರಿಗಳಿಗೆ ಯಶಸ್ವಿನಿ ಯೋಜನೆಯ ಚಿಕಿತ್ಸಾ ಸೌಲಭ್ಯಗಳನ್ನು ಒದಗಿಸಲಾಗುವುದು. ದಿ: 1/1/2024 ರಿಂದ ಯಶಸ್ವಿನಿ ನೋಂದಣಿ ಆರಂಭಗೊಂಡಿದ್ದು, ದಿ: 01-04-2025 ರಿಂದ 31/3/2026 ರವರೆಗೆ ಚಿಕಿತ್ಸಾ…
ಬೆಂಗಳೂರು: ರಾಜ್ಯದ ಸರ್ಕಾರಿ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವಂತ ಅಧಿಕಾರಿ, ನೌಕರರು ಕಚೇರಿಯ ವೇಳೆಯಲ್ಲಿ ಈ ಮುಖ್ಯ ಸೂಚನೆಗಳನ್ನು ಪಾಲನೆ ಮಾಡಬೇಕು ಎಂಬುದಾಗಿ ಸರ್ಕಾರ ಖಡಕ್ ಆದೇಶ ಮಾಡಿದೆ. ಈ ಸಂಬಂಧ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಆಯುಕ್ತರು ಆದೇಶ ಹೊರಡಿಸಿದ್ದು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಅಧಿಕಾರಿ ಮತ್ತು ಸಿಬ್ಬಂದಿಗಳು ಸಮಯ ಪಾಲನ ಮಾಡದಿರುವುದು, ಚಲನ-ವಲನ ವಹಿಯನ್ನು ನಿರ್ವಹಿಸದಿರುವುದು, ಕರ್ತವ್ಯದ ಅವಧಿಯಲ್ಲಿ ಗುರುತಿನ ಚೀಟಿಯನ್ನು ಧರಿಸದಿರುವುದು, ಅಧಿಕಾರಿ/ಸಿಬ್ಬಂದಿಗಳ ಹೆಸರು ಮತ್ತು ಹುದ್ದೆಯ ನಾಮ ಫಲಕಗಳನ್ನು ಅಳವಡಿಸದಿರುವ ಬಗ್ಗೆ ದೂರುಗಳು ಸ್ವೀಕೃತವಾಗಿರುವುದರಿಂದ ಇಲಾಖೆಯ ಅಧಿಕಾರಿ ಮತ್ತು ಸಿಬ್ಬಂದಿಗಳು ಈ ಕಳಕಂಡ ಸೂಚನಗಳನ್ನು ಪಾಲಿಸಲು ಸೂಚಿಸಿದ್ದಾರೆ. 1. ನಿಯಮಗಳ ಪುಕಾರ ಕಛೇರಿಗೆ ಬರುವ ವೇಳೆ ಹಾಗೂ ಕಛೇರಿಯಿಂದ ಹೊರಡುವ ವೇಳೆಯನ್ನು ಪಾಲನೆ ಮಾಡುವುದು. 2. ಕಛೇರಿ ಅವಧಿ ಪೂರ್ಣವಾಗುವವರೆಗೆ ತಮಗೆ ನಿಗದಿಪಡಿಸಿದ ಸ್ಥಾನದಲ್ಲಿ ಇದ್ದು ಕರ್ತವ್ಯ ನಿರ್ವಹಿಸತಕ್ಕದ್ದು. 3. ಕಛೇರಿ ಸಮಯದಲ್ಲಿ ನೌಕರರು/ಅಧಿಕಾರಿಗಳು ಕಛೇರಿ ಕೆಲಸದ ನಿಮಿತ್ತ…













