Author: kannadanewsnow57

ವಿಜಯಪುರ : ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ 2.5 ಲಕ್ಷ ಅಕ್ರಮ ಪಂಪ್ ಸೆಟ್ ಗಳನ್ನು ಸಕ್ರಮಗೊಳಿಸಲಾಗಿದ್ದು, ಬಾಕಿ ಇರುವ 2 ಲಕ್ಷ ಪಂಪ್ ಸೆಟ್ ಗಳನ್ನು ಇನ್ನೊಂದು ವರ್ಷದಲ್ಲಿ ಸಕ್ರಮಗೊಳಿಸಲಾಗುವುದು ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್ ಹೇಳಿದ್ದಾರೆ. ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಬುಧವಾರ ಇಂಧನ ಇಲಾಖೆಗೆ ಸಂಬಂಧಿಸಿದಂತೆ ಜಿಲ್ಲೆಯ ಜನಪ್ರತಿಧಿಗಳು ಹಾಗೂ ಇಲಾಖೆ ಅಧಿಕಾರಿಗಳೊಂದಿಗಿನ ಸಭೆಯಲ್ಲಿ ಮಾತನಾಡಿದ ಅವರು, “ಅಕ್ರಮ ಪಂಪ್ ಸೆಟ್ ಗಳ ಸಕ್ರಮ ಯೋಜನೆ 2004ರಿಂದಲೇ ಜಾರಿಯಲ್ಲಿದ್ದು, ನಮ್ಮ ಸರ್ಕಾರ ಅಧಿಕಾರಕ್ಕೆ ಬಂದಾಗ ಈ ಯೋಜನೆಯಡಿ 4.5 ಲಕ್ಷ ಅರ್ಜಿಗು ಬಾಕಿ ಇದ್ದವು. ಪ್ರಸ್ತುತ 2.5 ಲಕ್ಷ ಪಂಪ್ ಸೆಟ್ ಗಳನ್ನು ಅಕ್ರಮಗೊಳಿಸಲಾಗಿದೆ. ಬಾಕಿ ಉಳಿದ ಅರ್ಜಿಗಳನ್ನು ಇತ್ಯರ್ಥಗೊಳಿಸಿದ ಬಳಿಕ ಹೊಸದಾಗಿ ಬಂದ ಅರ್ಜಿಗಳ ಕುರಿತು ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ತೀರ್ಮಾ ಕೈಗೊಳ್ಳಲಾಗುವುದು,” ಎಂದರು. “ರೈತರಿಗೆ ನಿರಂತರ 7 ಗಂಟೆ ಸೇರಿದಂತೆ ರಾಜ್ಯದ ಜನರಿಗೆ ದಿನದ 24 ಗಂಟೆಗಳ ಕಾಲ ವಿದ್ಯುತ್‌…

Read More

ಬೆಂಗಳೂರು: ಭಾರತ ಚುನಾವಣಾ ಆಯೋಗ (Election Commission of India) ಅತ್ಯುತ್ತಮ ಚುನಾವಣಾ ಅಭ್ಯಾಸಗಳನ್ನು ಪ್ರೋತ್ಸಾಹಿಸಲು ಪ್ರತಿವರ್ಷ ರಾಷ್ಟ್ರೀಯ ಮತದಾರರ ದಿನಾಚರಣೆ (Voter’s Day) ಅಂಗವಾಗಿ ನೀಡುವ ರಾಜ್ಯ ಪ್ರಶಸ್ತಿ ಗೆ ಮಂಡ್ಯ ಜಿಲ್ಲಾಧಿಕಾರಿ ಭಾಜನರಾಗಿದ್ದಾರೆ. ಮಂಡ್ಯ ಜಿಲ್ಲಾಧಿಕಾರಿ ಡಾ.ಕುಮಾರ ಐಎಎಸ್ ಅವರು ಅತ್ಯುತ್ತಮ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿಯಾಗಿ ಅತ್ಯುತ್ತಮ ಕಾರ್ಯನಿರ್ವಹಣೆಗಾಗಿ ಚುನಾವಣಾ ಆಯೋಗದ ಪ್ರತಿಷ್ಠಿತ ರಾಜ್ಯ ಪ್ರಶಸ್ತಿ ನೀಡಿ ಗೌರವಿಸಿದೆ.

Read More

ಬೆಂಗಳೂರು : 2025 ನೇ ಸಾಲಿನ ಬಿಎಂಟಿಸಿ  ನೌಕರರ ಸಾರ್ವತ್ರಿಕ ವರ್ಗಾವಣೆ ಕುರಿತು ರಾಜ್ಯ ಸರ್ಕಾರವು ಮಹತ್ವದ ಆದೇಶ ಹೊರಡಿಸಿದೆ. ಮೇಲ್ಕಂಡ ವಿಷಯ ಹಾಗೂ ಉಲ್ಲೇಖಕ್ಕೆ ಸಂಬಂಧಿಸಿದಂತೆ, ಸಂಸ್ಥೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ನೌಕರರ ಸಾರ್ವತ್ರಿಕ ವರ್ಗಾವಣೆಗೆ ಸಂಬಂಧಿಸಿದಂತೆ ಸಂಸ್ಥೆಯಲ್ಲಿ ಉಲ್ಲೇಖಿತ ಸುತ್ತೋಲೆಯನ್ವಯ ವರ್ಗಾವಣೆ ನೀತಿಯು ಜಾರಿಯಲ್ಲಿರುತ್ತದೆ. ಅದರಂತೆ, ಸಂಸ್ಥೆಯ ದರ್ಜೆ-3 ಮೇಲ್ವಿಚಾರಕ, ದರ್ಜೆ-3 ಮೇಲ್ವಿಚಾರಕೇತರ ಹಾಗೂ ದರ್ಜೆ-4ರ ವರ್ಗದ ನೌಕರರುಗಳಿಗೆ 2025 ನೇ ಸಾಲಿನ ಸಾರ್ವತ್ರಿಕ ವರ್ಗಾವಣೆಯನ್ನು ಸ್ಥಾನಗಳ ಲಭ್ಯತೆ ಹಾಗೂ ಸಂಸ್ಥೆಯ ಅವಶ್ಯಕತೆಗನುಗುಣವಾಗಿ ಸಂಪೂರ್ಣವಾಗಿ ಆನ್-ಲೈನ್ ಮೂಲಕ ಮಾಡಲು ಉದ್ದೇಶಿಸಲಾಗಿರುತ್ತದೆ. ಪ್ರಸ್ತುತ ಸಾರ್ವತ್ರಿಕ ವರ್ಗಾವಣೆಗೆ ಸಂಬಂಧಿಸಿದಂತೆ ಈ ಕೆಳಗಿನ ಷರತ್ತುಗಳನ್ನು ನಿಗಧಿಪಡಿಸಲಾಗಿದೆ. I ವರ್ಗಾವಣೆ ಅರ್ಜಿಯನ್ನು ಸಲ್ಲಿಸಲು ಕನಿಷ್ಟ ಅರ್ಹತೆಗಳು:- 1. ವರ್ಗಾವಣೆ ಅರ್ಜಿ ಸಲ್ಲಿಸಲು ಬಯಸುವ ನೌಕರ ಸೇವೆಯಲ್ಲಿ ಖಾಯಂಗೊಂಡಿರತಕ್ಕದ್ದು. 2. ಸಾಮಾನ್ಯ ವರ್ಗಾವಣೆ: ಪ್ರಸ್ತುತ ಕಾರ್ಯಸ್ಥಳದಲ್ಲಿ ಪರೀಕ್ಷಣಾರ್ಥಿ ದಿನಾಂಕದಿಂದ ಅಥವಾ ಕಾರ್ಯಸ್ಥಳಕ್ಕೆ ವರ್ಗಾವಣೆಗೊಂಡ ದಿನಾಂಕದಿಂದ ಕನಿಷ್ಟ 02(ಎರಡು) ವರ್ಷ ಸೇವೆ ಸಲ್ಲಿಸಿರಬೇಕು. 3. ಪರಸ್ಪರ ವರ್ಗಾವಣೆ: ಅರ್ಜಿ ಸಲ್ಲಿಸುವ…

Read More

ರಾಯಚೂರು : ರಾಯಚೂರು ಜಿಲ್ಲೆಯಲ್ಲಿ ಮತ್ತೊಂದು ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಬಸ್-ಟ್ರ್ಯಾಕ್ಟರ್ ನಡುವೆ ಡಿಕ್ಕಿಯಾಗಿ ಯುವತಿ ಸಾವನ್ನಪ್ಪಿರುವ ಘಟನೆ ನಡೆದಿದೆ. ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿನ ಬನ್ನಿಹಾಳ ಗ್ರಾಮದಲ್ಲಿ ಬಸ್ ಹಾಗೂ ಟ್ರ್ಯಾಕ್ಟರ್ ನಡುವೆ ಡಿಕ್ಕಿಯಾಗಿ ಟ್ರ್ಯಾಕ್ಟರ್ ನಲ್ಲಿದ್ದ ಯುವತಿ ಸ್ಥಳದಲ್ಲೇ ಸಾವನ್ನಪ್ಪಿದ್ದು, 10 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಗಾಯಗೊಂಡವರನ್ನು ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದ್ದು, ಮುದಗಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Read More

ಚಿಕ್ಕಮಗಳೂರು : ಮಲೆನಾಡು ಭಾಗದಲ್ಲಿ ಇದೀಗ ಮಂಗನ ಕಾಯಿಲೆ ಭೀತಿ ಮತ್ತೆ ಆರಂಭವಾಗಿದ್ದು, ಇದೀಗ ಇಬ್ಬರಲ್ಲಿ ಮಂಗನ ಕಾಯಿಲೆ ರೋಗ ದೃಢವಾಗಿರುವುದು ವರದಿಯಾಗಿದೆ. ಹೌದು, ಕೊಪ್ಪದ ಕೆಸವೆ ಹಾಗೂ ಎನ್.ಆರ್.ಪುರ ತಾಲೂಕಿನ ಬಾಳೆಹೊನ್ನೂರಿನ ಮಸೀದಿ ಕೆರೆಯಲ್ಲಿ ತಲಾ ಒಂದು ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಜಿಲ್ಲೆಯಲ್ಲಿ ಜನವರಿಯಲ್ಲಿ ಒಟ್ಟು 4 ಪ್ರಕರಣಗಳು ದಾಖಲಾಗಿವೆ. ಮಂಗನಕಾಯಿಲೆ ಪ್ರರಕರಣ ದೃಢಪಟ್ಟ ಹಿನ್ನೆಲೆಯಲ್ಲಿ ಜ್ವರದಿಂದ ಬಳಲುತ್ತಿರುವವರು ಆಸ್ಪತ್ರೆಗೆ ಚಿಕಿತ್ಸೆಗೆ ಆಗಮಿಸುವ ಸಂದರ್ಭದಲ್ಲಿ ರಕ್ತ ಪರೀಕ್ಷೆ ಮಾಡಲಾಗುತ್ತಿದೆ. ಇದೀಗ ಮಂಗನ ಕಾಯಿಲೆಯಿಂದ ಜನರು ಭಯ ಭೀತರಾಗಿದ್ದಾರೆ.

Read More

ಜಲ್ಗಾಂವ್ : ಮಹಾರಾಷ್ಟ್ರದ ಜಲ್ಗಾಂವ್’ನಲ್ಲಿ ಬುಧವಾರ ಕರ್ನಾಟಕ ಎಕ್ಸ್ಪ್ರೆಸ್ ರೈಲು ಹರಿದು ಸಾವನ್ನಪ್ಪಿದವರ ಸಂಖ್ಯೆ 13 ಕ್ಕೆ ಏರಿಕೆಯಾಗಿದೆ ಎಂದು ವರದಿಯಾಗಿದೆ. ದುರಂತದಲ್ಲಿ 30 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದು, ಗಾಯಾಳುಗಳನ್ನ ಹತ್ತಿರದ ಆಸ್ಪತ್ರೆಗಳಿಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಪುಷ್ಪಕ್ ಎಕ್ಸ್ ಪ್ರೆಸ್ ರೈಲಿಗೆ ಬೆಂಕಿ ತಗುಲಿದೆ ಎನ್ನುವ ವದಂತಿ ಹಬ್ಬಿದ್ದು, ಇದ್ರಿಂದ ಭಯಭೀತರಾದ ಪ್ರಯಾಣಿಕರು ಹಳಿಗೆ ಹಾರಿ ಓಡುತ್ತಿರುವಾಗ ಕರ್ನಾಟಕ ಎಕ್ಸ್ಪ್ರೇಸ್ ಅವರ ಮೇಲೆ ಹರಿದಿದೆ. ಆದಾಗ್ಯೂ, ಬೆಂಕಿಯ ಬಗ್ಗೆ ವದಂತಿಯನ್ನು ಇನ್ನೂ ದೃಢಪಡಿಸಲಾಗಿಲ್ಲ ಎಂದು ಜಲ್ಗಾಂವ್ ಜಿಲ್ಲಾಧಿಕಾರಿ ಹೇಳಿದ್ದಾರೆ. ರೈಲಿನ ಚೈನ್ ಪುಲ್ಲಿಂಗ್ ನಂತ್ರ ಹಳಿಗಳ ಮೇಲೆ ಹೆಜ್ಜೆ ಹಾಕಿದ ಇತರ ರೈಲಿನ ಪ್ರಯಾಣಿಕರ ಮೇಲೆ ರೈಲು ಹರಿದಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

Read More

ಬೆಂಗಳೂರು : ಮನೆ ಮುಂದೆ ಆಟವಾಡುತ್ತಿದ್ದ ಇಬ್ಬರು ಮಕ್ಕಳು ನಾಪತ್ತೆಯಾಗಿರುವ ಘಟನೆ ಬೆಂಗಳೂರಿನ ಜಯನಗರ 3 ನೇ ಹಂತದ ನಕಲು ಬಂಡೆಯಲ್ಲಿ ನಡೆದಿದೆ. ಜನವರಿ 18 ರಂದು ಮನೆ ಬಳಿ ಪ್ರವೀಣ್ ಹಾಗೂ ರವಿ ಆಟವಾಡುತ್ತಿದ್ದರು. ಬಳಿಕ ಮಕ್ಕಳು ನಾಪತ್ತೆಯಾಗಿದ್ದಾರೆ. ವಿದ್ಯಾಶ್ರೀ ಹಾಗೂ ಮಹೇಶ್ ದಂಪತಿಯ ಪುತ್ರ ಪ್ರವೀಣ್ ಜಯನಗರದ ಎಂಇಎಸ್ ಶಾಲೆಯಲ್ಲಿ 7 ನೇ ತರಗತಿ ಓದುತ್ತಿದ್ದ. ಮತ್ತೊಬ್ಬ ಬಾಲಕ ರವಿ 9 ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ. ಮಕ್ಕಳು ಕಾಣೆಯಾಗಿರುವ ಬಗ್ಗೆ ಪೋಷಕರು ತಿಲಕ್ ನಗರ ಪೊಲೀಸ್ ಠಾಣೆಗೆ ಪ್ರಕರನ ದಾಖಲಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಮಕ್ಕಳಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.

Read More

ಮಡಿಕೇರಿ : ಪ್ರಸಕ್ತ (2024-25) ಸಾಲಿನಲ್ಲಿ ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಸ್ನಾತಕೋತ್ತರ ಪದವಿ ಹಾಗೂ ಪಿಎಚ್ಡಿ ಮಾಡುವ ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ ಹಾಗೂ 3ಬಿ ಗಳಿಗೆ ಸೇರಿದ ಅರ್ಹ ವಿದ್ಯಾರ್ಥಿಗಳಿಂದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು ನೀಡುವ ಡಿ. ದೇವರಾಜು ಅರಸು ವಿದೇಶಿ ವ್ಯಾಸಂಗ ವೇತನಕ್ಕೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು ಫೆಬ್ರವರಿ, 05 ರವರೆಗೆ ವಿಸ್ತರಿಸಲಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಪಿ.ಪಿ.ಕವಿತಾ ಅವರು ತಿಳಿಸಿದ್ದಾರೆ. ಅರ್ಜಿಯನ್ನು ವೆಬ್ಸೈಟ್ ವಿಳಾಸ https://bcwd.karnataka.gov.in/ ನಲ್ಲಿ ಸಲ್ಲಿಸಬೇಕು. ವಿದ್ಯಾರ್ಥಿಯ ಪೋಷಕರ ವಾರ್ಷಿಕ ಆದಾಯ ಮಿತಿ ಪ್ರವರ್ಗ -1 ಪ್ರವರ್ಗ-2ಎ, 3ಎ.3ಬಿ ರೂ.8 ಲಕ್ಷ ಆಗಿದೆ. ಹೆಚ್ಚಿನ ಮಾಹಿತಿಗೆ ಹಾಗೂ ಷರತ್ತು ನಿಬಂಧನೆಗಾಗಿ ಸಹಾಯವಾಣಿ ಸಂಖ್ಯೆ 8050770004 ನ್ನು ಸಂಪರ್ಕಿಸಿ ಕಚೇರಿ ವೇಳೆಯಲ್ಲಿ ಮಾಹಿತಿ ಪಡೆಯಬಹುದಾಗಿದೆ.

Read More

ಬೆಂಗಳೂರು: ವಿಕಲ ಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಿಂದ ಪಾಲಿಕೆ ವ್ಯಾಪ್ತಿಯ ವಾರ್ಡ್ ಗಳಲ್ಲಿ ಖಾಲಿಯಿರುವ ನಗರ ಪುನರ್ವಸತಿ ಕಾರ್ಯಕರ್ತರಿಗೆ ಸ್ಥಳ ನಿಯೋಜನೆ ಮಾಡಲು ಕಲ್ಯಾಣ ವಿಭಾಗದ ವಿಶೇಷ ಆಯುಕ್ತರಾದ ಸುರಳ್ಕರ್ ವಿಕಾಸ್ ಕಿಶೋರ್ ರವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಪಾಲಿಕೆಯ ವತಿಯಿಂದ ವಿಶೇಷ ಚೇತನರ ಸಬಲೀಕರಣಕ್ಕಾಗಿ ರೂಪಿಸಲಾಗಿರುವ ಕಾರ್ಯಕ್ರಮಗಳ ಅನುಷ್ಠಾನ, ನಗರ ಪುನರ್ವಸತಿ ಕಾರ್ಯಕರ್ತರ ನಿಯೋಜನೆಗೆ ಸಂಬಂಧಿಸದಂತೆ ಪಾಲಿಕೆ ಕೇಂದ್ರ ಕಛೇರಿಯ ಸಭಾಂಗಣ-01ರಲ್ಲಿ ನಡೆದ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿದರು. ಬಿಬಿಎಂಪಿಯ ಎಲ್ಲಾ 8 ವಲಯಗಳಗಳಲ್ಲಿ ಬರುವ ವಾರ್ಡ್ ಗಳಲ್ಲಿ ನಗರ ಪುನರ್ವಸತಿ ಕಾರ್ಯಕರ್ತ (ವಿ.ಆರ್.ಡಬ್ಲ್ಯೂ) ರುಗಳ ನೇಮಕ ಮಾಡಿಕೊಳ್ಳಬೇಕು. ನಂತರ ವಿಶೇಷ ಚೇತನ ವರ್ಗದವರನ್ನು ಸರ್ವೆ ಮಾಡಿ ಬಿಬಿಎಂಪಿಯ ಕಲ್ಯಾಣ ಕಾರ್ಯಕ್ರಮಗಳ ಎಲ್ಲಾ ಸೌಲಭ್ಯಗಳನ್ನು ಪಡೆದುಕೊಳ್ಳುವಂತೆ ಸೂಚಿಸಿದರು. ಪಾಲಿಕೆಯ ಕಲ್ಯಾಣ ವಿಭಾಗದಿಂದ ವಿಶೇಷ ಚೇತನರ ಸಬಲೀಕರಣಕ್ಕಾಗಿ ಹಲವಾರು ಕಾರ್ಯಕ್ರಮಗಳನ್ನು ರೂಪಿಸಲಾಗಿದ್ದು, ಯಾವೆಲ್ಲಾ ಯೋಜನೆಗಳಿಗೆ ಎಂಬುರ ಕುರಿತು ಸರಿಯಾದ ಮಾಹಿತಿ ನೀಡಬೇಕು. ಜೊತೆಗೆ ಆ ಯೋಜನೆಗಳೆಲ್ಲವೂ ಅರ್ಹ ಫಲಾನುಭವಿಗಳಿಗೆ…

Read More

ಚಿತ್ರದುರ್ಗ : ಬಯಲುಸೀಮೆ ಜನರ ಜೀವನಾಡಿ ವಾಣಿವಿಲಾಸ ಸಾಗರ ಜಲಾಶಯ ಭರ್ತಿಯಾಗಿದ್ದು, ಇಂದು ಮಧ್ಯಾಹ್ನ 3 ಗಂಟೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ವಿ.ವಿ ಸಾಗರ ಜಲಾಶಯಕ್ಕೆ ಬಾಗಿನ ಸಮರ್ಪಣೆ ಮಾಡಲಿದ್ದಾರೆ. 120 ವರ್ಷಗಳಲ್ಲಿ ಮೂರನೇ ಬಾರಿಗೆ ವಾಣಿವಿಲಾಸ ಸಾಗರ ಜಲಾಶಯ ತುಂಬಿದೆ. ಜ.18ರಂದು ಮುಖ್ಯಮಂತ್ರಿಗಳು ಹಾಗೂ ಉಪಮುಖ್ಯಮಂತ್ರಿಗಳು ಆಗಮಿಸಿ, ಜಲಾಶಯಕ್ಕೆ ಬಾಗಿನ ಸಮರ್ಪಣೆ ಮಾಡಲಿದ್ದು, ಸುಮಾರು 20 ರಿಂದ 24 ಸಾವಿರ ಜನ ಪಾಲ್ಗೊಳ್ಳಲಿದ್ದಾರೆ. ಈ ಐತಿಹಾಸಿಕ ಕ್ಷಣಕ್ಕೆ ಜಿಲ್ಲೆಯ ಜನರು ಕುತೂಹಲ ಹಾಗೂ ಕಾತುರರಾಗಿದ್ದು, ಜಿಲ್ಲೆಯ ಪಾಲಿಗೆ ಇದೊಂದು ಸಂಭ್ರಮದ ಕ್ಷಣವಾಗಲಿದೆ. ಕಾರ್ಯಕ್ರಮಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಜನರು ಸೇರುವುದರಿಂದ ಆರೋಗ್ಯ ಇಲಾಖೆ ವತಿಯಿಂದ ತಾತ್ಕಾಲಿಕವಾಗಿ ಆರೋಗ್ಯ ಕ್ಲಿನಿಕ್ ತೆರೆದು ಜನರಿಗೆ ಆರೋಗ್ಯ ಸೇವೆ ನೀಡಬೇಕು. ಇದರ ಜೊತೆಗೆ ಆರೋಗ್ಯ ತಂಡ ನಿಯೋಜನೆ ಹಾಗೂ ಅಂಬುಲೆನ್ಸ್ ವ್ಯವಸ್ಥೆ ಕಲ್ಪಿಸಬೇಕು ಎಂದು ಜಿಲ್ಲಾ ಆರೋಗ್ಯಾಧಿಕಾರಿಗೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಸೂಚನೆ ನೀಡಿದ್ದಾರೆ.

Read More