Author: kannadanewsnow57

ತಮಕೂರು : ರಾಜ್ಯದ ಹಲವಡೆ ಮೈಕ್ರೋ ಫೈನಾನ್ಸ್ ಕಿರುಕುಳ ನಡೆಸುತ್ತಿರುವ ಕುರಿತು ದೂರುಗಳು ಬರುತ್ತಿವೆ. ಸಂತ್ರಸ್ತರು ದೂರು ನೀಡಿದ್ರೆ ಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ. ತುಮಕೂರಿನ ಸಿದ್ದಗಂಗಾಮಠದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೈಕ್ರೋ ಫೈನಾನ್ಸ್ ವಿರುದ್ಧ ಈಗಾಗಲೇ ಕ್ರಮ ಕೈಗೊಳ್ಳಲಾಗುತ್ತಿದೆ. ಹಲವಡೆ ಮೈಕ್ರೋ ಫೈನಾನ್ಸ್ ಕಂಪನಿಗಳು ಗೈಡ್ ಲೈನ್ಸ್ ಉಲ್ಲಂಘನೆ ಮಾಡುತ್ತಿದ್ದಾರೆ. ಫೈನಾನ್ಸ್ ಕಂಪನಿಗಳ ಕಡಿವಾಣ ಹಾಕಲು ಕ್ರಮ ಕೈಗೊಳ್ಳಲಾಗುತ್ತದೆ. ಲೈಸೆನ್ಸ್ ಇಲ್ಲದವರ ಬಗ್ಗೆ ಹಣಕಾಸು ಇಲಾಖೆ ಸರ್ವೆ ಮಾಡಬೇಕು ಎಂದರು. ರಾಜ್ಯದಲ್ಲಿ ಎಲ್ಲಿಯಾದರೂ ಮೈಕ್ರೋ ಫೈನಾನ್ಸ್ ಕಂಪನಿಯವರು ಕಿರುಕುಳ ನೀಡಿದ್ರೆ ಸಂತ್ರಸ್ತರು ದೂರು ನೀಡಿದ್ರೆ ಮೈಕ್ರೋ ಫೈನಾನ್ಸ್ ಕಂಪನಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

Read More

ಬೆಂಗಳೂರು : ರಾಜ್ಯದಲ್ಲಿ ಎರಡು ಪ್ರತ್ಯೇಕ ಅಪಘಾತದಲ್ಲಿ 14 ಮಂದಿ ಸಾವನ್ನಪ್ಪಿದ್ದು, ಈ ಘಟನೆ ಬಗ್ಗೆ ಸಿಎಂ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದು, ಪರಿಹಾರ ನೀಡಲಾಗುವುದು ಎಂದು ತಿಳಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ, ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ಹಾಗೂ ರಾಯಚೂರು ಜಿಲ್ಲೆಯ ಸಿಂಧನೂರಿನಲ್ಲಿ ಸಂಭವಿಸಿದ ಎರಡು ಪ್ರತ್ಯೇಕ ಅಪಘಾತಗಳಲ್ಲಿ ಒಟ್ಟು 14 ಜನ ಸಾವನ್ನಪ್ಪಿರುವ ಸುದ್ದಿ ತಿಳಿದು ಸಂಕಟವಾಯಿತು. ಮೃತರ ಆತ್ಮಗಳಿಗೆ ಚಿರಶಾಂತಿ ಕೋರುತ್ತೇನೆ. ಈ ದುರ್ಘಟನೆಗಳಲ್ಲಿ ತಮ್ಮವರನ್ನು ಕಳೆದುಕೊಂಡು ದುಃಖದಲ್ಲಿರುವ ನೊಂದ ಜನರಿಗೆ ನನ್ನ ಸಂತಾಪಗಳು. ಮೃತರ ಕುಟುಂಬಗಳಿಗೆ ಸರ್ಕಾರದಿಂದ ಸೂಕ್ತ ಪರಿಹಾರ ನೀಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. https://twitter.com/CMofKarnataka/status/1881925034496631195

Read More

ಉತ್ತರ ಕನ್ನಡ : ರಾಜ್ಯದಲ್ಲಿ ಬೆಳ್ಳಂಬೆಳಗ್ಗೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ತರಕಾರಿ ತುಂಬಿದ ಲಾರಿ ಪಲ್ಟಿಯಾಗಿ 9 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಇದೀಗ ಗಂಭೀರವಾಗಿ ಗಾಯಗೊಂಡಿದ್ದ ಮತ್ತೊಬ್ಬರು ಸಾವನ್ನಪ್ಪಿದ್ದು, ಈ ಮೂಲಕ ಸಾವಿನ ಸಂಖ್ಯೆ 10 ಕ್ಕೆ ಏರಿಕೆಯಾಗಿದೆ. ಉತ್ತರ ಕನ್ನಡ ಜಿಲ್ಎಲಯ ಯಲ್ಲಾಪುರ ತಾಲೂಕಿನ ಗುಳ್ಳಾಪುರ ಗ್ರಾಮದಲ್ಲಿ ತರಕಾರಿ ತುಂಬಿದ ಲಾರಿ ಪಲ್ಟಿಯಾಗಿ 10 ಮಂದಿ ಸಾವನ್ನಪ್ಪಿದ್ದು, 15 ಕ್ಕೂ ಹೆಚ್ಚು ಮಂದಿ ಗಾಯ ಗೊಂಡಿದ್ದಾರೆ. ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ತರಕಾರಿ ತುಂಬಿದ ಲಾರಿ ಸವಣೂರಿನಿಂದ ಕುಮಟಾಗೆ ತೆರಳುತ್ತಿತ್ತು. ಈ ವೇಳೆ ಗುಳ್ಳಾಪುರ ಗ್ರಾಮದ ಬಳಿ ಲಾರಿ ಪಲ್ಟಿಯಾಗಿದೆ. ಲಾರಿಯಲ್ಲಿ 25 ಜನರು ಪ್ರಯಾಣಿಸುತ್ತಿದ್ದರು. ಈ ಪೈಕಿ 10 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮೃತರು ಹಾವೇರಿ ಜಿಲ್ಲೆಯ ಸವಣೂರು ಮೂಲದವರೆಂಬ ಮಾಹಿತಿ ಲಭ್ಯವಾಗಿದೆ. ಮೃತಪಟ್ಟ ದುರ್ದೈವಿಗಳು ಫಯಾಜ್ ಜಮಖಂಡಿ (45) ವಾಸಿಂ ಮುಡಗೇರಿ (45) ಇಜಾಜ್ ಮುಲ್ಲಾ (20) ಸಾದಿಕ್ ಬಾಷಾ (30) ಗುಲಾಮ್…

Read More

ನವದೆಹಲಿ : ಡಿಸಿಎಂ ಡಿ.ಕೆ.ಶಿವಕುಮಾರ್‌ ವಿರುದ್ಧದ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅರ್ಜಿ ವಿಚಾರಣೆಯನ್ನು ಜನವರಿ 22 ರ ಇಂದು ಸುಪ್ರೀಂಕೋರ್ಟ್ ನಡೆಸಲಿದೆ. ಶಾಸಕ ಯತ್ನಾಳ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ಇಂದು ನಡೆಯಲಿದೆ. ಪ್ರಕರಣದ ತನಿಖೆಯನ್ನು ಸಿಬಿಐಗೆ ನೀಡಿರುವುದನ್ನು ಹಿಂಪಡೆದಿದ್ದನ್ನು ಪ್ರಶ್ನಿಸಿ ಬಿಜೆಪಿ ಶಾಸಕ ಬಸನಗೌದ ಪಾಟೀಲ್ ಯತ್ನಾಳ್ ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಯಲಿದೆ. ಡಿಸೆಂಬರ್ 16 ರಂದು ಸುಪ್ರೀಂ ಕೋರ್ಟ್‌, ಶಾಸಕ ಬಸನಗೌಡ ಪಾಟೀಲ್ ಯತ್ನಾಳ್‌ ಅರ್ಜಿ ವಿಚಾರಣೆ ನಡೆಸಿತು. ವಿಚಾರಣೆ ವೇಳೆ, ಕೌಂಟರ್‌ ಅಫಿಡವಿಟ್‌ ಸಲ್ಲಿಸಲು ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ ಸೂಚಿಸಿದ್ದು, ಜನವರಿ 22 ಕ್ಕೆ ವಿಚಾರಣೆ ಮುಂದೂಡಲಾಗಿತ್ತು. ಡಿಕೆಶಿ ಮೇಲಿನ ಸಿಬಿಐ ತನಿಖೆಯನ್ನು ರಾಜ್ಯ ಸರ್ಕಾರ ವಾಪಸ್‌ ಪಡೆದಿತ್ತು. ಸರ್ಕಾರದ ನಿರ್ಧಾರ ಪ್ರಶ್ನಿಸಿ ಯತ್ನಾಳ್‌ ಹಾಗೂ ಸಿಬಿಐ ಇಬ್ಬರೂ ಹೈಕೋರ್ಟ್‌ ಮೊರೆ ಹೋಗಿದ್ದರು. ಆದರೆ, ಅರ್ಜಿಯನ್ನು ಹೈಕೋರ್ಟ್‌ ವಜಾಗೊಳಿಸಿತ್ತು.

Read More

ಬೆಂಗಳೂರು : ಬೆಂಗಳೂರಿನಲ್ಲಿ ಪ್ರತಿಷ್ಟಿತ ಕಾಲೇಜೊಂದರ ವಿದ್ಯಾರ್ಥಿಗಳು ಪುಂಡಾಟ ನಡೆಸಿದ್ದು, ವೇಗವಾಗಿ ಕಾರು ಚಲಾಯಿಸಿ ಬೈಕ್ ಸವಾರನಿಗೆ ಡಿಕ್ಕಿ ಹೊಡೆದಿರುವ ಘಟನೆ ನಡೆದಿದೆ. ಬೆಂಗಳೂರು ನಗರ ಜಿಲ್ಲೆಯ ಅನೇಕಲ್-ಚಂದಾಪುರ ರಸ್ತೆಯ ಮರಸೂರಿನಲ್ಲಿ ಘಟನೆ ನಡೆದಿದೆ. ಕುಡಿದ ಮತ್ತಿನಲ್ಲಿ ವಿದ್ಯಾರ್ಥಿಗಳು ರಸ್ತೆಯಲ್ಲಿ ಕಾರಿನ ಸನ್ ರೂಫ್ ಓಪನ್ ಮಾಡಿ ರ್ಯಾಶ್ ಡ್ರೈವಿಂಗ್ ಮಾಡಿದ್ದಾರೆ. ವೇಗವಾಗಿ ಕಾರು ಚಲಾಯಿಸಿ ಬೈಕ್ ಸವಾರನಿಗೆ ಡಿಕ್ಕಿ ಹೊಡೆದಿದ್ದಾರೆ. ನಂತರ ಹಳ್ಳಕ್ಕೆ ಕಾರು ಪಲ್ಟಿಯಾಗಿದೆ. ಕಾರು ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡಿದ್ದಾರೆ. ಬೆಂಗಳೂರಿನ ಪ್ರತಿಷ್ಟಿತ ಕಾಲೇಜೊಂದರ ವಿದ್ಯಾರ್ಥಿಗಳು ಕುಡಿದು ಗಾಡಿ ಚಲಾಯಿಸಿ ಅಪಘಾತ ಮಾಡಿದ್ದಾರೆ. ವಿದ್ಯಾರ್ಥಿಗಳ ವರ್ತನೆಗೆ ಸಾರ್ವಜನಿಕರು ಆಕ್ರೋಶ ಹೊರ ವ್ಯಕ್ತಪಡಿಸಿದ್ದಾರೆ.

Read More

ಉತ್ತರ ಪ್ರದೇಶದ ಇಟಾ ಜಿಲ್ಲೆಯ ಜಿಜಿಐಸಿ ಕಾಲೋನಿಯಲ್ಲಿ 9 ವರ್ಷದ ಮಗು ಸಾವನ್ನಪ್ಪಿದ ಆಘಾತಕಾರಿ ಘಟನೆ ನಡೆದಿದೆ. ಸಾವಿಗೆ ಕಾರಣವೆಂದರೆ ದೊಡ್ಡ ಶಬ್ದದಿಂದ ಉಂಟಾದ ಭಯ, ಅದು ಹೃದಯಾಘಾತಕ್ಕೆ ಕಾರಣವಾಯಿತು. ಘಟನೆಯ ಸಮಯದಲ್ಲಿ, ಮಗು ತನ್ನ ಕುಟುಂಬದೊಂದಿಗೆ ಮನೆಯಲ್ಲಿತ್ತು ಮತ್ತು ವೈದ್ಯರು ಕೂಡ ಈ ಅಪಘಾತದಿಂದ ಆಶ್ಚರ್ಯಚಕಿತರಾಗಿದ್ದಾರೆ. ವರದಿಗಳ ಪ್ರಕಾರ, ಜಿಜಿಐಸಿ ಕಾಲೋನಿಯ ನಿವಾಸಿ ರಾಜು ಅವರ ಮಗ ಆರ್ಯನ್ ಸಂಜೆ ಮನೆಯಲ್ಲಿ ಊಟ ಮಾಡುತ್ತಿದ್ದ. ಅವನು ಬ್ರೆಡ್ ತುಂಡನ್ನು ತೆಗೆದುಕೊಂಡು ಇನ್ನೊಂದು ಕೋಣೆಯಲ್ಲಿ ಆಟವಾಡುತ್ತಿದ್ದ ಮಕ್ಕಳ ಬಳಿಗೆ ಹೋಗಿ ಅವರೊಂದಿಗೆ ಆಟವಾಡಲು ಪ್ರಾರಂಭಿಸಿದನು. ಸ್ವಲ್ಪ ಸಮಯದ ನಂತರ, ಇತರ ಎಲ್ಲಾ ಮಕ್ಕಳು ಹೊರಟುಹೋದರು, ಆದರೆ 6 ವರ್ಷದ ಹುಡುಗಿ ಬಾಗಿಲನ್ನು ಸ್ವಲ್ಪ ಮುಚ್ಚಿ ಅವನನ್ನು ಹೆದರಿಸಲು ಜೋರಾಗಿ ಶಬ್ದ ಮಾಡಿದಳು. ಈ ಶಬ್ದ ಕೇಳಿದ ತಕ್ಷಣ ಆರ್ಯನ್ ನೆಲಕ್ಕೆ ಬಿದ್ದು ಪ್ರಜ್ಞೆ ತಪ್ಪಿದನು. https://twitter.com/madanjournalist/status/1881235567968506363?ref_src=twsrc%5Etfw%7Ctwcamp%5Etweetembed%7Ctwterm%5E1881235567968506363%7Ctwgr%5E2fab4a8d27aa7178d874bd4d5621710085e7a325%7Ctwcon%5Es1_&ref_url=https%3A%2F%2Fhindi.asianetnews.com%2Fstate%2Futtar-pradesh%2Fetah-child-heart-attack-due-to-loud-noise-9-year-old-death-ggic-colony-incident%2Farticleshow-kxmabgn ಕುಟುಂಬವು ತಕ್ಷಣ ಆರ್ಯನ್ ನನ್ನು ಹತ್ತಿರದ ಆಸ್ಪತ್ರೆಗೆ ಸಾಗಿಸಿತು, ಆದರೆ ವೈದ್ಯರು ಅವನು ಮೃತಪಟ್ಟಿದ್ದಾನೆಂದು…

Read More

ಉತ್ತರ ಕನ್ನಡ/ರಾಯಚೂರು : ರಾಜ್ಯದಲ್ಲಿ ಬೆಳ್ಳಂಬೆಳಗ್ಗೆ ಭೀಕರ ರಸ್ತೆ ಅಪಘಾತಕ್ಕೆ 14 ಮಂದಿ ಸಾವನ್ನಪ್ಪಿರುವ ಘಟನೆ ಉತ್ತರ ಕನ್ನಡ ಜಿಲ್ಲೆ ಹಾಗೂ ರಾಯಚೂರು ಜಿಲ್ಲೆಯಲ್ಲಿ ನಡೆದಿದೆ. ತರಕಾರಿ ತುಮಬಿದ ಲಾರಿ ಪಲ್ಟಿಯಾಗಿ 10 ಮಂದಿ ಸಾವನ್ನಪ್ಪಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಗುಳ್ಳಾಪುರ ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿ 63ರ ಗುಳ್ಳಾಪುರ ಘಟ್ಟ ಭಾಗದಲ್ಲಿ ನಡೆದಿದೆ. ರಾಯಚೂರಿನಲ್ಲಿ ಟೈರ್ ಸ್ಪೋಟಗೊಂಡು ವಾಹನ ಪಲ್ಟಿಯಾಗಿ ಮೂವರು ವಿದ್ಯಾರ್ಥಿಗಳು ಸೇರಿದಂತೆ ನಾಲ್ವರು ಸಾವನ್ನಪ್ಪಿದ್ದಾರೆ. ತರಕಾರಿ ತುಂಬಿದ ಲಾರಿ ಪಲ್ಟಿಯಾಗಿ 10 ಮಂದಿ ಸಾವು ಗುಳ್ಳಾಪುರ ಗ್ರಾಮದಲ್ಲಿ ತರಕಾರಿ ತುಂಬಿದ ಲಾರಿ ಪಲ್ಟಿಯಾಗಿ 10 ಮಂದಿ ಸಾವನ್ನಪ್ಪಿದ್ದು, 15 ಕ್ಕೂ ಹೆಚ್ಚು ಮಂದಿ ಗಾಯ ಗೊಂಡಿದ್ದಾರೆ. ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ತರಕಾರಿ ತುಂಬಿದ ಲಾರಿ ಸವಣೂರಿನಿಂದ ಕುಮಟಾಗೆ ತೆರಳುತ್ತಿತ್ತು. ಈ ವೇಳೆ ಗುಳ್ಳಾಪುರ ಗ್ರಾಮದ ಬಳಿ ಲಾರಿ ಪಲ್ಟಿಯಾಗಿದೆ. ಲಾರಿಯಲ್ಲಿ 25 ಜನರು ಪ್ರಯಾಣಿಸುತ್ತಿದ್ದರು. ಈ ಪೈಕಿ 10…

Read More

ಉತ್ತರ ಕನ್ನಡ : ರಾಜ್ಯದಲ್ಲಿ ಬೆಳ್ಳಂಬೆಳಗ್ಗೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ತರಕಾರಿ ತುಂಬಿದ ಲಾರಿ ಪಲ್ಟಿಯಾಗಿ 9 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಇದೀಗ ಗಂಭೀರವಾಗಿ ಗಾಯಗೊಂಡಿದ್ದ ಮತ್ತೊಬ್ಬರು ಸಾವನ್ನಪ್ಪಿದ್ದು, ಈ ಮೂಲಕ ಸಾವಿನ ಸಂಖ್ಯೆ 10 ಕ್ಕೆ ಏರಿಕೆಯಾಗಿದೆ. ಉತ್ತರ ಕನ್ನಡ ಜಿಲ್ಎಲಯ ಯಲ್ಲಾಪುರ ತಾಲೂಕಿನ ಗುಳ್ಳಾಪುರ ಗ್ರಾಮದಲ್ಲಿ ತರಕಾರಿ ತುಂಬಿದ ಲಾರಿ ಪಲ್ಟಿಯಾಗಿ 10 ಮಂದಿ ಸಾವನ್ನಪ್ಪಿದ್ದು, 15 ಕ್ಕೂ ಹೆಚ್ಚು ಮಂದಿ ಗಾಯ ಗೊಂಡಿದ್ದಾರೆ. ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ತರಕಾರಿ ತುಂಬಿದ ಲಾರಿ ಸವಣೂರಿನಿಂದ ಕುಮಟಾಗೆ ತೆರಳುತ್ತಿತ್ತು. ಈ ವೇಳೆ ಗುಳ್ಳಾಪುರ ಗ್ರಾಮದ ಬಳಿ ಲಾರಿ ಪಲ್ಟಿಯಾಗಿದೆ. ಲಾರಿಯಲ್ಲಿ 25 ಜನರು ಪ್ರಯಾಣಿಸುತ್ತಿದ್ದರು. ಈ ಪೈಕಿ 10 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮೃತರು ಹಾವೇರಿ ಜಿಲ್ಲೆಯ ಸವಣೂರು ಮೂಲದವರೆಂಬ ಮಾಹಿತಿ ಲಭ್ಯವಾಗಿದೆ.

Read More

ಬೆಂಗಳೂರು: ಬಿಪಿಎಲ್, ಎಪಿಎಲ್ ಕಾರ್ಡ್ ನಲ್ಲಿನ ತಪ್ಪುಗಳ ತಿದ್ದುಪಡಿ, ಹೊಸ ಸದಸ್ಯರ ಸೇರ್ಪಡೆ ಸೇರಿದಂತೆ ಇತರೆ ತಿದ್ದುಪಡಿಗಾಗಿ ಜನವರಿ.31, 2025ರವರೆಗೆ ಮಾತ್ರವೇ ಅವಕಾಶ ನೀಡಲಾಗಿದೆ. ಆ ನಂತರ ಅವಕಾಶವಿಲ್ಲ ಎಂಬುದಾಗಿ ಸುದ್ದಿಯೊಂದು ವೈರಲ್ ಆಗಿದೆ. ಈ ಕಾರಣಕ್ಕೆ ಓನ್ ಕೇಂದ್ರಗಳ ಬಳಿಯಲ್ಲಿ ಜನರು ಸಾಲುಗಟ್ಟಿಯೂ ಕೆಲವೆಡೆ ನಿಂತಿದ್ದಾರೆ. ಆದರೇ ವೈರಲ್ ಸುದ್ದಿ ಹಿಂದಿನ ಅಸಲಿ ಸತ್ಯವೇನು ಅಂತ ಮುಂದೆ ಓದಿ. ಬೆಂಗಳೂರಿನ ರಾಜಾಜಿನಗರ ಸೇರಿದಂತೆ ರಾಜ್ಯದ ಇತರೆಡೆಗಳಲ್ಲಿ ಜನವರಿ.31 ರೇಷನ್ ಕಾರ್ಡ್ ನಲ್ಲಿನ ತಪ್ಪುಗಳನ್ನು ತಿದ್ದುಪಡಿ ಮಾಡೋದಕ್ಕೆ ಕೊನೆಯ ದಿನ. ಅಂದಿನ ಟೋಕನ್ ಇಂದೇ ಕೊಡ್ತೀದ್ದಾರೆ. ತಿದ್ದುಪಡಿ ಮಾಡ್ತಿದ್ದಾರೆ ಎನ್ನುವ ವದಂತಿಯಿಂದಾಗಿ ಜನರು ಕ್ಯೂ ನಿಂತು, ಸರಿ ಪಡಿಸಿಕೊಳ್ಳೋದಕ್ಕೆ ಮುಂದಾಗಿದ್ದಾರೆ. ಆದರೇ ಆಹಾರ ಇಲಾಖೆಯಿಂದ ಪಡಿತರ ಚೀಟಿಯಲ್ಲಿನ ತಪ್ಪುಗಳ ತಿದ್ದುಪಡಿಗೆ ಮಾತ್ರ ಯಾವುದೇ ಕಾಲಮಿತಿಯನ್ನು ನಿಗದಿ ಪಡಿಸಿಲ್ಲ. ಈ ಬಗ್ಗೆ ಪತ್ರಿಕಾ ಪ್ರಕಟಣೆಯನ್ನು ಹೊರಡಿಸಿರುವಂತ ಆಹಾರ ಇಲಾಖೆಯು, ರೇಷನ್ ಕಾರ್ಡ್ ತಿದ್ದುಪಡಿಗಾಗಿ ಜನವರಿ.31, 2025 ಕೊನೆಯ ದಿನ ಎಂಬುದು ಸುಳ್ಳು. ಇಲಾಖೆಯಿಂದ…

Read More

ರಾಯಚೂರು : ರಾಜ್ಯದಲ್ಲಿ ಮತ್ತೊಂದು ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಕ್ರೂಷರ್ ವಾಹನದ ಟೈರ್ ಬ್ಲಾಸ್ಟ್ ಆಗಿ ಚಾಲಕ ಸೇರಿ ನಾಲ್ವರು ವಿದ್ಯಾರ್ಥಿಗಳು ಸಾವನ್ನಪ್ಪಿರುವ ಘಟನೆ ಮಂಗಳವಾರ ರಾತ್ರಿ ರಾಯಚೂರು ಜಿಲ್ಲೆಯಲ್ಲಿ ನಡೆದಿದೆ. ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನ ಹರಗಿನಮರ ಕ್ಯಾಂಪ್ ಸಮೀಪ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಕ್ರೂಷರ್‌ವಾಹನದ ಟೈರ್‌ಬ್ಲಾಸ್ಟ್ ಆಗಿ ಚಾಲಕ ಸೇರಿ ಮಂತ್ರಾಲಯದ ಮಠದ ಸಾಂಸ್ಕೃತಿಕ ವಿದ್ಯಾಪೀಠದ ನಾಲ್ವರು ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ. ವಾಹನ ಚಾಲಕ ಶಿವು, ಮಂತ್ರಾಲಯದ ಸಂಸ್ಕೃತ ವಿದ್ಯಾಪೀಠದ ವಿದ್ಯಾರ್ಥಿಗಳಾದ ಹೈವಧನ ಕಟ್ಟಿ, ಸುಜಯೀಂದ್ರ, ಅಭಿಲಾಶ ಮೃತ ವಿದ್ಯಾರ್ಥಿಗಳು, ವಿದ್ಯಾರ್ಥಿ ಜಯಸಿಂಹ ಸ್ಥಿತಿ ಚಿಂತಾಜನಕವಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು ಪರಿಶೀಲನೆ ನಡೆಸಿದ್ದಾರೆ.

Read More