Subscribe to Updates
Get the latest creative news from FooBar about art, design and business.
Author: kannadanewsnow57
ರಾಯಚೂರು : ರಾಜ್ಯದಲ್ಲಿ ಮತ್ತೊಂದು ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಕ್ರೂಷರ್ ವಾಹನದ ಟೈರ್ ಬ್ಲಾಸ್ಟ್ ಆಗಿ ಚಾಲಕ ಸೇರಿ ನಾಲ್ವರು ವಿದ್ಯಾರ್ಥಿಗಳು ಸಾವನ್ನಪ್ಪಿರುವ ಘಟನೆ ಮಂಗಳವಾರ ರಾತ್ರಿ ರಾಯಚೂರು ಜಿಲ್ಲೆಯಲ್ಲಿ ನಡೆದಿದೆ. ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನ ಹರಗಿನಮರ ಕ್ಯಾಂಪ್ ಸಮೀಪ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಕ್ರೂಷರ್‌ವಾಹನದ ಟೈರ್‌ಬ್ಲಾಸ್ಟ್ ಆಗಿ ಚಾಲಕ ಸೇರಿ ಮಂತ್ರಾಲಯದ ಮಠದ ಸಾಂಸ್ಕೃತಿಕ ವಿದ್ಯಾಪೀಠದ 3 ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ. ವಾಹನ ಚಾಲಕ ಶಿವು, ಮಂತ್ರಾಲಯದ ಸಂಸ್ಕೃತ ವಿದ್ಯಾಪೀಠದ ವಿದ್ಯಾರ್ಥಿಗಳಾದ ಹೈವಧನ ಕಟ್ಟಿ, ಸುಜಯೀಂದ್ರ, ಅಭಿಲಾಶ ಮೃತ ವಿದ್ಯಾರ್ಥಿಗಳು, ವಿದ್ಯಾರ್ಥಿ ಜಯಸಿಂಹ ಸ್ಥಿತಿ ಚಿಂತಾಜನಕವಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು ಪರಿಶೀಲನೆ ನಡೆಸಿದ್ದಾರೆ.
ಮೈಸೂರು: ಮೈಸೂರು ಜಿಲ್ಲೆಯಲ್ಲಿ ಘೋರ ಕೃತ್ಯವೊಂದು ನಡೆದಿದ್ದು, ಪತ್ನಿ ತವರಿಗೆ ಹೋಗಿದಕ್ಕೆ ಪುತ್ರನ ಎದುರಲ್ಲೇ ಪೆಟ್ರೋಲ್ ಸುರಿದು ಪಾಪಿ ಪತಿ ಬೆಂಕಿ ಹಚ್ಚಿರುವ ಘಟನೆ ನಡೆದಿದೆ. ಮೈಸೂರು ಜಿಲ್ಲೆಯ ಹೆಚ್.ಡಿ. ಕೋಟೆಯಲ್ಲಿ ಈ ಘಟನೆ ನಡೆದಿದೆ. ಪತ್ನಿ ಮಧುರಾ ತವರು ಮನೆಗೆ ಹೋಗಿದ್ದಕ್ಕೆ ಸಿಟ್ಟಾದ ಪತಿ ಮಲ್ಲೇಶ್ ನಾಯ್ಕ್ ಮನೆಗೆ ಬರುತ್ತಿದ್ದಂತೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾನೆ. ಗಂಭೀರವಾಗಿ ಗಾಯಗೊಂಡಿರುವ ಮಧುರಾ ಅವರನ್ನು ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮಲ್ಲೇಶ್ ನಾಯ್ಕ್ ವಿಜಯನಗರ ಜಿಲ್ಲೆ ಕೂಡ್ಲಗಿ ತಾಲೂಕಿನ ಬಿ.ಬಿ. ತಾಂಡಾ ನಿವಾಸಿಯಾಗಿದ್ದು, ಎಂಟು ವರ್ಷದ ಹಿಂದೆ ಮದುವೆಯಾಗಿತ್ತು. ಅದೇ ಗ್ರಾಮದ ಮಧುರಾ ಮದುವೆಯಾಗಿದ್ದ ಮಲ್ಲೇಶ್ ಹೆಚ್.ಡಿ. ಕೋಟೆ ಕೆಎಸ್ಆರ್ ಟಿಸಿ ಡಿಪೋದಲ್ಲಿ ಮೆಕಾನಿಕ್ ಆಗಿ ಕೆಲಸ ಮಾಡುತ್ತಿದ್ದಾನೆ. ಹೆಚ್.ಡಿ. ಕೋಟೆಯ ಹನುಮಂತನಗರದಲ್ಲಿದ್ದ ಮಲ್ಲೇಶ್ ಪತ್ನಿಗೆ ವರದಕ್ಷಿಣೆ ಕಿರುಕುಳ ನೀಡುತ್ತಿದ್ದ ಎನ್ನಲಾಗಿದೆ. ನಿತ್ಯ ಕುಡಿದು ಬಂದು ಪತ್ನಿಯ ಮೇಲೆ ಹಲ್ಲೆ ಮಾಡುತ್ತಿದ್ದ ಎನ್ನಲಾಗಿದೆ. ಇದರಿಂದ ನೊಂದ ಪತ್ನಿ ಮಧುರಾ ಕೆಲದ…
ಉತ್ತರ ಕನ್ನಡ : ರಾಜ್ಯದಲ್ಲಿ ಬೆಳ್ಳಂಬೆಳಗ್ಗೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ತರಕಾರಿ ತುಂಬಿದ ಲಾರಿ ಪಲ್ಟಿಯಾಗಿ 9 ಮಂದಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಉತ್ತರ ಕನ್ನಡ ಜಿಲ್ಎಲಯ ಯಲ್ಲಾಪುರ ತಾಲೂಕಿನ ಗುಳ್ಳಾಪುರ ಗ್ರಾಮದಲ್ಲಿ ತರಕಾರಿ ತುಂಬಿದ ಲಾರಿ ಪಲ್ಟಿಯಾಗಿ 9 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದು, 15 ಕ್ಕೂ ಹೆಚ್ಚು ಮಂದಿ ಗಾಐಗೊಂಡಿದ್ದಾರೆ. ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ತರಕಾರಿ ತುಂಬಿದ ಲಾರಿ ಸವಣೂರಿನಿಂದ ಕುಮಟಾಗೆ ತೆರಳುತ್ತಿತ್ತು. ಈ ವೇಳೆ ಗುಳ್ಳಾಪುರ ಗ್ರಾಮದ ಬಳಿ ಲಾರಿ ಪಲ್ಟಿಯಾಗಿದೆ. ಲಾರಿಯಲ್ಲಿ 25 ಜನರು ಪ್ರಯಾಣಿಸುತ್ತಿದ್ದರು. ಈ ಪೈಕಿ 9 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮೃತರು ಹಾವೇರಿ ಜಿಲ್ಲೆಯ ಸವಣೂರು ಮೂಲದವರೆಂಬ ಮಾಹಿತಿ ಲಭ್ಯವಾಗಿದೆ.
ಉತ್ತರ ಕನ್ನಡ : ರಾಜ್ಯದಲ್ಲಿ ಬೆಳ್ಳಂಬೆಳಗ್ಗೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ತರಕಾರಿ ತುಂಬಿದ ಲಾರಿ ಪಲ್ಟಿಯಾಗಿ 9 ಮಂದಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಉತ್ತರ ಕನ್ನಡ ಜಿಲ್ಎಲಯ ಯಲ್ಲಾಪುರ ತಾಳೂಕಿನ ಗುಳ್ಳಾಪುರ ಗ್ರಾಮದಲ್ಲಿ ತರಕಾರಿ ತುಂಬಿದ ಲಾರಿ ಪಲ್ಟಿಯಾಗಿ 9 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದು, 15 ಕ್ಕೂ ಹೆಚ್ಚು ಮಂದಿ ಗಾಐಗೊಂಡಿದ್ದಾರೆ. ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ತರಕಾರಿ ತುಂಬಿದ ಲಾರಿ ಸವಣೂರಿನಿಂದ ಕುಮಟಾಗೆ ತೆರಳುತ್ತಿತ್ತು. ಈ ವೇಳೆ ಗುಳ್ಳಾಪುರ ಗ್ರಾಮದ ಬಳಿ ಲಾರಿ ಪಲ್ಟಿಯಾಗಿದೆ. ಲಾರಿಯಲ್ಲಿ 25 ಜನರು ಪ್ರಯಾಣಿಸುತ್ತಿದ್ದರು. ಈ ಪೈಕಿ 9 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮೃತರು ಹಾವೇರಿ ಜಿಲ್ಲೆಯ ಸವಣೂರು ಮೂಲದವರೆಂಬ ಮಾಹಿತಿ ಲಭ್ಯವಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
ಬೆಂಗಳೂರು : ಭಾರತ ಸರ್ಕಾರವು ಸಾರ್ವಜನಿಕರಿಗಾಗಿ ಅನೇಕ ಯೋಜನೆಗಳನ್ನು ನಡೆಸುತ್ತದೆ, ಪ್ರಮುಖ ಯೋಜನೆಗಳಲ್ಲಿ ಒಂದು ರೇಷನ್ ಕಾರ್ಡ್. ಇಂದಿಗೂ ಸಹ ಸರಿಯಾದ ಚಿಕಿತ್ಸೆ ಅಥವಾ ಆಹಾರ ವ್ಯವಸ್ಥೆ ಮಾಡಲು ಸಾಧ್ಯವಾಗದ ಅನೇಕ ಜನರಿದ್ದಾರೆ. ಈ ನಿರ್ಗತಿಕರಿಗೆ, ಭಾರತ ಸರ್ಕಾರವು ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಡಿಯಲ್ಲಿ ಉಚಿತ ಪಡಿತರವನ್ನು ಒದಗಿಸುತ್ತದೆ. ಇದಲ್ಲದೇ ಹಲವರಿಗೆ ಅತ್ಯಂತ ಕಡಿಮೆ ದರದಲ್ಲಿ ಪಡಿತರವನ್ನೂ ನೀಡಲಾಗುತ್ತದೆ. ಪಡಿತರ ಚೀಟಿಯ ಪ್ರಯೋಜನಗಳು ಪಡಿತರ ಚೀಟಿಯು ಉಚಿತವಾಗಿ ಅಥವಾ ಕಡಿಮೆ ದರದಲ್ಲಿ ಪಡಿತರವನ್ನು ಪಡೆಯುವ ಮಾಧ್ಯಮ ಮಾತ್ರವಲ್ಲ, ಅದರ ಮೂಲಕ ಹಲವಾರು ಸೌಲಭ್ಯಗಳನ್ನು ಸಹ ಪಡೆಯಬಹುದು. ಪಡಿತರ ಚೀಟಿದಾರರು ಈ ಕೆಳಗಿನ 8 ಪ್ರಯೋಜನಗಳನ್ನು ಪಡೆಯುತ್ತಾರೆ: ಉಚಿತ ಪಡಿತರ: ನಿರ್ಗತಿಕರಿಗೆ ವಿವಿಧ ರೀತಿಯ ಆಹಾರ ಪದಾರ್ಥಗಳ ಉಚಿತ ವಿತರಣೆ. ಕೈಗೆಟುಕುವ ದರದಲ್ಲಿ ಪಡಿತರ: ಪಡಿತರ ಚೀಟಿದಾರರಿಗೆ ಸರ್ಕಾರ ನಿಗದಿಪಡಿಸಿದ ಕೈಗೆಟುಕುವ ದರದಲ್ಲಿ ಆಹಾರ ಪದಾರ್ಥಗಳು ಸಿಗುತ್ತವೆ. ಸರ್ಕಾರದ ಯೋಜನೆಗಳಲ್ಲಿ ಭಾಗಿ: ಪಡಿತರ ಚೀಟಿ ಮೂಲಕ ಸರ್ಕಾರದ ವಿವಿಧ ಯೋಜನೆಗಳ ಲಾಭ ಪಡೆಯಬಹುದು. ಗುರುತಿನ…
ನವದೆಹಲಿ : ಭಾರತ ವಿರೋಧಿ ಜೈಶ್-ಎ-ಮೊಹಮ್ಮದ್ ಮತ್ತು ಲಷ್ಕರ್-ಎ-ತೈಬಾ ಭಯೋತ್ಪಾದಕ ಸಂಘಟನೆಗಳ ಲಾಂಚ್ ಪ್ಯಾಡ್ ಕಮಾಂಡರ್ ಫಾರೂಖ್ ಅನ್ಸಾರಿಯನ್ನು ನಿಯಂತ್ರಣ ರೇಖೆಯ ಬಳಿ ಅಪರಿಚಿತ ವ್ಯಕ್ತಿಗಳು ಗುಂಡಿಕ್ಕಿ ಕೊಂದಿದ್ದಾರೆ ಎಂದು ವರದಿಯಾಗಿದೆ. ಕೋಟ್ಲಿ ಉಡಾವಣಾ ಪ್ಯಾಡ್‌ನ ಕಮಾಂಡರ್ ಆಗಿದ್ದ ಫಾರೂಖ್ ಅನ್ಸಾರಿಯನ್ನು ಅಪರಿಚಿತರು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ ಎಂದು ವರದಿಯಾಗಿದ್ದು, ಪಾಕಿಸ್ತಾನ ಸೇನೆಯ ಹಿರಿಯ ಅಧಿಕಾರಿಗಳು ಕೂಡ ಅವರ ಅಂತ್ಯಕ್ರಿಯೆಯಲ್ಲಿ ಭಾಗವಹಿಸಿದ್ದರು. ಭಾರತ-ಪಾಕಿಸ್ತಾನ ನಿಯಂತ್ರಣ ರೇಖೆಯ ಬಳಿ, ಪಾಕಿಸ್ತಾನದ ಕಡೆಯಿಂದ ಮೋಟಾರ್ ಸೈಕಲ್‌ನಲ್ಲಿ ಕುಳಿತಿದ್ದ ಕೆಲವು ಅಪರಿಚಿತ ವ್ಯಕ್ತಿಗಳು ಯುವಕನೊಬ್ಬನನ್ನು ಗುಂಡಿಕ್ಕಿ ಕೊಂದರು. ತನಿಖೆಯ ಸಮಯದಲ್ಲಿ ಈ ವ್ಯಕ್ತಿ ಪಾಕಿಸ್ತಾನದ ಕೋಟ್ಲಿ ನಿವಾಸಿ ಫಾರೂಕ್ ಅನ್ಸಾರಿ ಎಂದು ತಿಳಿದುಬಂದಿದೆ. ಭಯೋತ್ಪಾದಕರ ಲಾಂಚ್ ಪ್ಯಾಡ್ ಆಗಿದ್ದ ಕೋಟ್ಲಿಯ ಲಾಂಚಿಂಗ್ ಕಮಾಂಡರ್ ಫಾರೂಕ್ ಅನ್ಸಾರಿ ಆಗಿದ್ದನು ಎಂದು ತಿಳಿದುಬಂದಿದೆ. ಫಾರೂಕ್ ಅನ್ಸಾರಿ ಮೇಲೆ ಗುಂಡಿನ ದಾಳಿ ನಡೆದ ಸುದ್ದಿ ಕೇಳಿ ಪಾಕಿಸ್ತಾನ ಸೇನೆಯ ಉನ್ನತ ಅಧಿಕಾರಿಗಳು ಮತ್ತು ಪಾಕಿಸ್ತಾನ ಗುಪ್ತಚರ ಸಂಸ್ಥೆ ಐಎಸ್‌ಐನ ಉನ್ನತ…
ನವದೆಹಲಿ : ನವೆಂಬರ್ 2016ರಲ್ಲಿ, ಸರ್ಕಾರವು 500 ಮತ್ತು 1000 ರೂ.ಗಳ ನೋಟುಗಳನ್ನ ಚಲಾವಣೆಯಿಂದ ಹಿಂತೆಗೆದುಕೊಳ್ಳುವ ಯೋಜನೆಯನ್ನ ಘೋಷಿಸಿತು. ಅಪನಗದೀಕರಣ ಪ್ರಕ್ರಿಯೆಯ ಭಾಗವಾಗಿ, ಹಿಂತೆಗೆದುಕೊಂಡ ನೋಟುಗಳ ಬದಲಿಗೆ ಸರ್ಕಾರ ಹೊಸ 500 ಮತ್ತು 2000 ರೂಪಾಯಿ ನೋಟುಗಳನ್ನು ಪರಿಚಯಿಸಿತು. ಮಹಾತ್ಮ ಗಾಂಧಿ (ಹೊಸ) ಸರಣಿಯಲ್ಲಿ ಪ್ರಸ್ತುತ 500 ರೂಪಾಯಿ ನೋಟುಗಳು ಬಣ್ಣ, ಗಾತ್ರ, ಥೀಮ್, ಭದ್ರತಾ ವೈಶಿಷ್ಟ್ಯಗಳ ಸ್ಥಳ ಮತ್ತು ವಿನ್ಯಾಸ ಅಂಶಗಳಲ್ಲಿ ವಿಭಿನ್ನವಾಗಿವೆ. 500 ರೂಪಾಯಿ ನೋಟಿನ ವೈಶಿಷ್ಟ್ಯಗಳು.! ಮಹಾತ್ಮ ಗಾಂಧಿ (ಹೊಸ) ಸರಣಿಯ 500 ರೂಪಾಯಿ ಮುಖಬೆಲೆಯ ನೋಟುಗಳು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದ ಗವರ್ನರ್ ಅವರ ಸಹಿಯನ್ನು ಹೊಂದಿವೆ. ನೋಟಿನ ಹಿಂಭಾಗದಲ್ಲಿ ‘ಕೆಂಪು ಕೋಟೆ’ ಎಂಬ ಅಂಶವಿದ್ದು, ಇದು ದೇಶದ ಸಾಂಸ್ಕೃತಿಕ ಪರಂಪರೆಯನ್ನು ಚಿತ್ರಿಸುತ್ತದೆ. ನೋಟಿನ ಮೂಲ ಬಣ್ಣ ಕಲ್ಲಿನ ಬೂದು. ನೋಟಿನ ಮುಂಭಾಗ ಮತ್ತು ಹಿಂಭಾಗದಲ್ಲಿ ಒಟ್ಟಾರೆ ಬಣ್ಣದ ಸ್ಕೀಮ್’ಗೆ ಹೊಂದಿಕೆಯಾಗುವ ಇತರ ವಿನ್ಯಾಸಗಳು ಮತ್ತು ಜ್ಯಾಮಿತೀಯ ಮಾದರಿಗಳನ್ನ ಹೊಂದಿದೆ. ನೋಟಿನ ಗಾತ್ರ 66mm x…
ಬೆಂಗಳೂರು : ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದು ಬೆಂಗಳೂರು ಸೇರಿ ರಾಜ್ಯದ ವಿವಿಧ ಭಾಗದಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ತುಮಕೂರು, ಮಂಡ್ಯ, ಮೈಸೂರು, ಹಾಸನ, ರಾಮನಗರ, ಚಿಕ್ಕಮಗಳೂರು, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಕೋಲಾರ, ಕೊಡಗು, ಚಾಮರಾಜನಗರದಲ್ಲಿ ಮಳೆಯಾಗಲಿದೆ. ಇನ್ನು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎರಡು ದಿನ ಮಳೆ ಇರಲಿದ್ದು, ಉತ್ತರ ಒಳನಾಡು ಜಿಲ್ಲೆಗಳ ಕೆಲ ಕಡೆ ಮೋಡ ಕವಿದ ವಾತಾವರಣ ಹಾಗೂ ಒಣ ಹವೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರು : ರಾಜ್ಯದಲ್ಲಿ ದಿನದಿಂದ ದಿನಕ್ಕೆ ಚಳಿಯ ತೀವ್ರತೆ ಹೆಚ್ಚಾಗುತ್ತಿದ್ದು, ಫೆಬ್ರವರಿವರೆಗೆ ಚಳಿ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕರ್ನಾಟಕ ಭಾಗದ ಜಿಲ್ಲೆಗಳಿಗಿಂದ ಕಲ್ಯಾಣ ಕರ್ನಾಟಕ ಹಾಗೂ ಮಧ್ಯ ಕರ್ನಾಟಕ ವ್ಯಾಪ್ತಿಯ ಜಿಲ್ಲೆಗಳಲ್ಲಿ ಚಳಿ ಹೆಚ್ಚಾಗಿದೆ. ಬೀದರ್, ವಿಜಯಪುರ, ಗದಗ, ರಾಯಚೂರು, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ ಚಿಕ್ಕಬಳ್ಳಾಪುರ, ಮೈಸೂರು, ಮಂಡ್ಯ ಹಾಗೂ ಶಿವಮೊಗ್ಗದಲ್ಲಿ ಮಂಗಳವಾರ ಕನಿಷ್ಠ ತಾಪಮಾನದಲ್ಲಿ ವಾಡಿಕೆಗಿಂತ 2-3 ಡಿಗ್ರಿ ಸೆಲ್ಸಿಯಸ್ ಗಿಂತ ಕಡಿಮೆ ಉಷ್ಣಾಂಶ ದಾಖಲಾಗಿದೆ. ಇನ್ನು ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ತುಮಕೂರು, ರಾಮನಗರ, ಕೋಲಾರ, ಬಾಗಲಕೋಟೆ, ಕೊಪ್ಪಳ, ಹಾವೇರಿ, ಉಡುಪಿ ಮತ್ತು ದಕ್ಷಿಣ ಕನ್ನಡ ಸೇರಿ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನದಲ್ಲಿ ವಾಡಿಕೆಯಂತೆ ಉಷ್ಣಾಂಶ ದಾಖಲಾಗುತ್ತಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಬೆಂಗಳೂರು: ರಾಜ್ಯದ ಬಿಪಿಎಲ್ ಕಾರ್ಡ್ ದಾರರಿಗೆ ಮತ್ತೊಂದು ಗುಡ್ ನ್ಯೂಸ್ ನೀಡಲಾಗಿದೆ. ಅದೇ ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಯೋಜನೆಯಡಿ ಈಗ ಆಸ್ತಿಮಜ್ಜೆ ಕಸಿಗೆ ಉಚಿತ ಚಿಕಿತ್ಸೆ ನೀಡಲು ಸರ್ಕಾರ ನಿರ್ಧರಿಸಿದೆ. ಹೀಗಾಗಿ ರಾಜ್ಯ ಸರ್ಕಾರಕ್ಕೆ ಸಂಸದ ಡಾ.ಸಿಎನ್ ಮಂಜುನಾಥ್ ಧನ್ಯವಾದಗಳನ್ನು ಅರ್ಪಿಸಿದ್ದಾರೆ. ಈ ಕುರಿತಂತೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಯೋಜನೆಯಡಿ ಅಸ್ಥಿಮಜ್ಜೆ ಕಸಿ ಈಗ ಉಚಿತವಾಗಿದೆ ಎಂದಿದ್ದಾರೆ. ಈ ಸಂಬಂಧ ರಾಜ್ಯದ ಆರೋಗ್ಯ ಇಲಾಖೆಯ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದು ತಿಳಿಸಿರುವಂತ ಅವರು, ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ / ಜೀವನ್ ಸಾರ್ಥಕತೆ ಯೋಜನೆಯಡಿ ಅಸ್ಥಿಮಜ್ಜೆ ಕಸಿಯನ್ನು ಕೋಡ್ ಮಾಡಲಾದ ಕಾರ್ಯವಿಧಾನವಾಗಿ ಸೇರಿಸಲು ನಾನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಮೂಲಕ ರಾಜ್ಯ ಸರ್ಕಾರವನ್ನು ವಿನಂತಿಸಿದ್ದೆ ಮತ್ತು ನಿರಂತರವಾಗಿ ಅನುಸರಿಸುತ್ತಿದೆ ಎಂದಿದ್ದಾರೆ. ಮೂಳೆ ಕ್ಯಾನ್ಸರ್, ಥಲಸ್ಸೆಮಿಯಾ, ಅಪ್ಲಾಸ್ಟಿಕ್ ರಕ್ತಹೀನತೆ ಮತ್ತು ಇತರ ಎಂಟೋಲಾಜಿಕಲ್ ಸಂಬಂಧಿತ ಅಸ್ವಸ್ಥತೆಗಳಿಂದ ಬಳಲುತ್ತಿರುವ ರೋಗಿಗಳಿಗೆ ಮೂಳೆ…













