Subscribe to Updates
Get the latest creative news from FooBar about art, design and business.
Author: kannadanewsnow57
ಬೆಂಗಳೂರು : ಕಡಿಮೆ ಹಾಜರಾತಿ ಹೊಂದಿರುವ ವಿದ್ಯಾರ್ಥಿಗಳಿಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಶಾಕ್ ನೀಡಿದ್ದು, ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಗೆ ನೋಂದಾಯಿಸಿದ ವಿದ್ಯಾರ್ಥಿಗಳ ಪೈಕಿ ಶೇಕಡ 75 ಕ್ಕಿಂತ ಕಡಿಮೆ ಹಾಜರಾತಿ ಹೊಂದಿದ ವಿದ್ಯಾರ್ಥಿಗಳ ಮಾಹಿತಿ ನೀಡುವಂತೆ ಎಲ್ಲಾ ಪಿಯು ಕಾಲೇಜುಗಳ ಪ್ರಾಂಶುಪಾಲರಿಗೆ ಸೂಚನೆ ನೀಡಿದೆ. ಪರೀಕ್ಷೆಗೆ ಕಾಲೇಜು ವಿದ್ಯಾರ್ಥಿಗಳು, ಖಾಸಗಿ, ಪುನಾವರ್ತಿತ ವಿದ್ಯಾರ್ಥಿಗಳ ನೋಂದಣಿ ಪೂರ್ಣಗೊಂಡಿದ್ದರೂ ತರಗತಿ ವಿದ್ಯಾರ್ಥಿಗಳಿಗೆ ನಿಯಮಾನುಸಾರ ಪರೀಕ್ಷೆಗೆ ಹಾಜರಾಗಲು ಶೇಕಡ 75 ರಷ್ಟು ತರಗತಿ ಹಾಜರಾತಿ ಕಡ್ಡಾಯವಾಗಿದೆ. ಹೀಗಾಗಿ ಪರೀಕ್ಷೆ ಬರೆಯಲು ಅರ್ಹರಿಲ್ಲದೆ ತರಗತಿ ಹಾಜರಾತಿ ಶೇಕಡ 75 ಕಿಂತ ಕಡಿಮೆ ಇರುವ ವಿದ್ಯಾರ್ಥಿಗಳ ಮಾಹಿತಿ ನೀಡಿದಲ್ಲಿ ಅಂತಹ ವಿದ್ಯಾರ್ಥಿಗಳ ಪರೀಕ್ಷಾ ಪ್ರವೇಶ ಪತ್ರ ತಡೆಹಿಡಿಯಲಾಗುವುದು. ಹಾಗೆಯೇ ಪ್ರವೇಶ ಪತ್ರಗಳಲ್ಲಿ ತಿದ್ದುಪಡಿ ಅಗತ್ಯವಿದ್ದಲ್ಲಿ ಪ್ರಾಂಶುಪಾಲರು ಅಗತ್ಯ ಕ್ರಮವಹಿಸಬೇಕು ಎಂದು ತಿಳಿಸಲಾಗಿದೆ. ಈಗಾಗಲೇ ಪ್ರಕಟಿಸಲಾದ ಅಂತಿಮ ವೇಳಾಪಟ್ಟಿಯಂತೆ ರಾಜ್ಯಾದ್ಯಂತ ಮಾರ್ಚ್ 1ರಿಂದ 20ರವರೆಗೆ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ಒಂದು…
ಧಾರವಾಡ : ಹುಬ್ಬಳ್ಳಿ- ಧಾರವಾಡ ಮಹಾನಗರ ಪಾಲಿಕೆ ವಿಭಜಿಸಿ ಧಾರವಾಡ ಮತ್ತು ಹುಬ್ಬಳ್ಳಿ ಪ್ರತ್ಯೇಕ ಮಹಾನಗರ ಪಾಲಿಕೆ ರಚನೆ ಅಧಿಸೂಚನೆಯನ್ನು ರಾಜ್ಯ ಪತ್ರದಲ್ಲಿ ಪ್ರಕಟಿಸಲಾಗಿದೆ. ಜನವರಿ 2ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಧಾರವಾಡಕ್ಕೆ ಪ್ರತ್ಯೇಕ ಮಹಾನಗರ ಪಾಲಿಕೆ ರಚನೆಗೆ ಅನುಮೋದನೆ ನೀಡಲಾಗಿದ್ದು,ಇದೀಗ ಧಾರವಾಡ ಮಹಾನಗರ ಪಾಲಿಕೆ ಮತ್ತು ಹುಬ್ಬಳ್ಳಿ ಮಹಾನಗರ ಪಾಲಿಕೆಯ ವ್ಯಾಪ್ತಿ, ಗಡಿ ಪರಿಮಿತಿ ನಿಗದಿಪಡಿಸಲಾಗಿದೆ. ಈ ಅಧಿಸೂಚನೆಯನ್ನು ಸಾರ್ವಜನಿಕರ ಮಾಹಿತಿಗಾಗಿ ಪ್ರಕಟಿಸಲಾಗಿದೆ. ಈ ಬಗ್ಗೆ ಯಾವುದೇ ಆಕ್ಷೇಪಣೆ/ಸಲಹೆಗಳನ್ನು ಸಲ್ಲಿಸಲು ಇಚ್ಛಿಸುವ ಎಲ್ಲಾ ವ್ಯಕ್ತಿಗಳು ಅದನ್ನು ಲಿಖಿತದಲ್ಲಿ ಕಾರಣಸಹಿತವಾಗಿ ಅಧಿಸೂಚನೆಯನ್ನು ಸರ್ಕಾರಿ ರಾಜ್ಯಪತ್ರದಲ್ಲಿ ಪ್ರಕಟಿಸಿದ ದಿನಾಂಕದಿಂದ ಮೂವತ್ತು ದಿನಗಳೊಳಗಾಗಿ ನಿರ್ದೇಶಕರು, ಪೌರಾಡಳಿತ ನಿರ್ದೇಶನಾಲಯ, 9ನೇ ಮಹಡಿ, ವಿ.ವಿ.ಗೋಪುರ, ಬೆಂಗಳೂರು ಇವರಿಗೆ ಸಲ್ಲಿಸಬೇಕೆಂದು ಹಾಗೂ ಅಧಿಸೂಚನೆಯನ್ನು ಸದರಿ ಅವಧಿಯ ತರುವಾಯ ತೆಗೆದುಕೊಳ್ಳಲಾಗುವುದೆಂದು ಈ ಮೂಲಕ ತಿಳಿಸಲಾಗಿದೆ.
ನವದೆಹಲಿ: ಭಾರತ ಸರ್ಕಾರ, ರೈಲ್ವೆ ಸಚಿವಾಲಯ, ರೈಲ್ವೆ ನೇಮಕಾತಿ ಮಂಡಳಿ (ಆರ್ಆರ್ಬಿ) ಪಾಯಿಂಟ್ಸ್ಮನ್, ಅಸಿಸ್ಟೆಂಟ್, ಟ್ರ್ಯಾಕ್ ಮೆಂಟೇನರ್ ಮತ್ತು ಇತರ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ. ಖಾಲಿ ಹುದ್ದೆಯ ವಿವರಗಳಲ್ಲಿ ಆಸಕ್ತಿ ಹೊಂದಿರುವ ಮತ್ತು ಎಲ್ಲಾ ಅರ್ಹತಾ ಮಾನದಂಡಗಳನ್ನು ಪೂರ್ಣಗೊಳಿಸಿದ ಅಭ್ಯರ್ಥಿಗಳು ಅಧಿಸೂಚನೆಯನ್ನು ಓದಿ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ಪ್ರಮುಖ ದಿನಾಂಕಗಳು: ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಆರಂಭ ದಿನಾಂಕ: 23-01-2025 ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 22-02-2025 ರೈಲ್ವೆ ಗ್ರೂಪ್ ಡಿ ಹುದ್ದೆಗಳ ವಿವರ ಹೀಗಿದೆ ಟ್ರ್ಯಾಕ್ ಮೇಂಟೆನರ್ ಗ್ರೇಡ್ IV ತಾಂತ್ರಿಕ ವಿಭಾಗದ ಸಹಾಯಕ ಅಸಿಸ್ಟಂಟ್ ಪಾಯಿಂಟ್ಸ್‌ಮನ್ ಟ್ರ್ಯಾಕ್ ಮನ್ ಅಸಿಸ್ಟಂಟ್ ಬ್ರಿಡ್ಜ್ ಇತರೆ ಹಲವು ವಿಭಾಗಗಳ ಲೆವೆಲ್ 1 ಪೋಸ್ಟ್‌ಗಳು: ಆರ್ಆರ್ಬಿ ಗ್ರೂಪ್ ಡಿ ಅರ್ಹತಾ 2025 ಎನ್ಸಿವಿಟಿ / ಎಸ್ಸಿವಿಟಿಯಿಂದ ಮಾನ್ಯತೆ ಪಡೆದ ಸಂಸ್ಥೆಯಿಂದ ಪ್ರೌಢಶಾಲಾ (10 ನೇ ತರಗತಿ) ಪೂರ್ಣಗೊಳಿಸಿದ ಅಥವಾ ಎನ್ಸಿವಿಟಿ ಒದಗಿಸಿದ ರಾಷ್ಟ್ರೀಯ ಅಪ್ರೆಂಟಿಸ್ಶಿಪ್ ಪ್ರಮಾಣಪತ್ರ (ಎನ್ಎಸಿ) ಹೊಂದಿರುವ…
ಟರ್ಕಿ : ಟರ್ಕಿಯ ಜನಪ್ರಿಯ ಸ್ಕೀ ರೆಸಾರ್ಟ್ನ ಹೋಟೆಲ್ನಲ್ಲಿ ಸಂಭವಿಸಿದ ಬೆಂಕಿಯಲ್ಲಿ ಕನಿಷ್ಠ 76 ಜನರು ಸಾವನ್ನಪ್ಪಿದ್ದಾರೆ ಎಂದು ಟರ್ಕಿಯ ಆಂತರಿಕ ಸಚಿವರು ತಿಳಿಸಿದ್ದಾರೆ. ಮಂಗಳವಾರ ಮುಂಜಾನೆ ಸಂಭವಿಸಿದ ದುರಂತದಲ್ಲಿ ಕನಿಷ್ಠ 51 ಜನರು ಗಾಯಗೊಂಡಿದ್ದಾರೆ ಎಂದು ಅಲಿ ಯೆರ್ಲಿಕಾಯಾ ಹೇಳಿದರು. ನಾವು ತೀವ್ರ ನೋವಿನಲ್ಲಿದ್ದೇವೆ. ದುರದೃಷ್ಟವಶಾತ್ ಈ ಹೋಟೆಲ್ನಲ್ಲಿ ಸಂಭವಿಸಿದ ಬೆಂಕಿಯಲ್ಲಿ ನಾವು 76 ಜೀವಗಳನ್ನು ಕಳೆದುಕೊಂಡಿದ್ದೇವೆ ಎಂದು ಯೆರ್ಲಿಕಾಯ ಸ್ಥಳವನ್ನು ಪರಿಶೀಲಿಸಿದ ನಂತರ ಸುದ್ದಿಗಾರರಿಗೆ ತಿಳಿಸಿದರು. ಬೋಲು ಪ್ರಾಂತ್ಯದ ಕರ್ತಾಲ್ಕಾಯ ರೆಸಾರ್ಟ್ನಲ್ಲಿರುವ 12 ಅಂತಸ್ತಿನ ಗ್ರ್ಯಾಂಡ್ ಕಾರ್ತಾಲ್ ಹೋಟೆಲ್’ನ ರೆಸ್ಟೋರೆಂಟ್’ನಲ್ಲಿ ಮುಂಜಾನೆ 3: 30 ರ ಸುಮಾರಿಗೆ ಹೋಟೆಲ್ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿ ಅವಘಡಕ್ಕೆ ಕಾರಣ ತಿಳಿದುಬಂದಿಲ್ಲ. ಮೃತರಲ್ಲಿ ಇಬ್ಬರು ಭಯಭೀತರಾಗಿ ಕಟ್ಟಡದಿಂದ ಹಾರಿ ಸಾವನ್ನಪ್ಪಿದ್ದಾರೆ. ಕೆಲವು ಜನರು ಹಾಳೆಗಳು ಮತ್ತು ಕಂಬಳಿಗಳನ್ನ ಬಳಸಿ ತಮ್ಮ ಕೋಣೆಗಳಿಂದ ಕೆಳಗಿಳಿಯಲು ಪ್ರಯತ್ನಿಸಿದರು. ಹೋಟೆಲ್ನಲ್ಲಿ 234 ಅತಿಥಿಗಳು ತಂಗಿದ್ದರು ಎಂದು ಗವರ್ನರ್ ಅಬ್ದುಲ್ ಅಜೀಜ್ ಐದಿನ್ ಸರ್ಕಾರಿ ಸ್ವಾಮ್ಯದ ಅನಾಡೋಲು ಏಜೆನ್ಸಿಗೆ…
ಉತ್ತರಕನ್ನಡ : ಕಳೆದ ಎರಡು ದಿನಗಳ ಹಿಂದೆ ಉತ್ತರಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನಲ್ಲಿ ಗರ್ಭ ಧರಿಸಿದಂತಹ ಹಸುವಿನ ತಲೆಕೆಡಿದು ಮಾಂಸ ಕದ್ದು ದುರುಳರು ವಿಕೃತಿ ಮೇರಿದಿದ್ದರು. ಇದೀಗ ಈ ಒಂದು ಪ್ರಕರಣಕ್ಕೆ ಸಂಬಂಧಪಟ್ಟಂತೆ ಪೊಲೀಸರು ಐವರು ಆರೋಪಿಗಳನ್ನು ಬಂಧಿಸಿದ್ದಾರೆ. ಹೌದು ಉತ್ತರ ಕನ್ನಡದಲ್ಲಿ ಈ ಒಂದು ಘಟನೆಯಿಂದ ಜನರು ಬೆಚ್ಚಿಬಿದ್ದಿದ್ದಾರೆ. ಇದೆ ವೇಳೆ ಉತ್ತರ ಕನ್ನಡ ಎಸ್ಪಿ ಜತೆ ಗೃಹಸಚಿವ ಪರಮೇಶ್ವರ್ ನಿನ್ನೆ ಪ್ರತ್ಯೇಕ ಸಭೆ ಮಾಡಿದ್ದಾರೆ. ಗೋ ಹತ್ಯೆಯನ್ನ ಸರ್ಕಾರ ಯಾವುದೇ ಕಾರಣಕ್ಕೂ ಬೆಂಬಲಿಸಲ್ಲ. ಗೋ ಹಂತಕರು ಯಾರೇ ಆಗಿದ್ದರೂ ಮುಲಾಜಿಲ್ಲದೆ ಕ್ರಮ ಕೈಗೊಳ್ಳಿ. ಗೋ ಮಾಂಸ ಸಾಗಾಟದ ಜಾಲ ಇದರೆ ಸಂಪೂರ್ಣ ಕಲೆ ಹಾಕುವಂತೆ ಗೃಹ ಸಚಿವ ಪರಮೇಶ್ವರ್ ಸಭೆಯಲ್ಲಿ ಸೂಚನೆ ನೀಡಿದ್ದರು. ಕೂಡಲೇ ಕಾರ್ಯಪ್ರವೃತ್ತರಾದ ಉತ್ತರ ಕನ್ನಡ ಜಿಲ್ಲೆಯ ಎಸ್ಪಿ ನಾರಾಯಣ್ ಅವರು, ನಾಲ್ಕು ತಂಡಗಳನ್ನು ರಚಿಸಿ ಗೋ ಹಂತಕರನ್ನು ಬಂಧಿಸಲು ಕಾರ್ಯಚರಣೆ ನಡೆಸಿ ಇದುವರೆಗೂ ಒಟ್ಟು ಐದು ಆರೋಪಿಗಳನ್ನು ಬಂಧಿಸಿದ್ದಾರೆ. ಅಲ್ಲದೆ ಕಳೆದ ಒಂದು ತಿಂಗಳಲ್ಲಿ…
ರಾಯಚೂರು : ರಾಜ್ಯದಲ್ಲಿ ಮತ್ತೊಂದು ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಕ್ರೂಷರ್ ವಾಹನದ ಟೈರ್ ಬ್ಲಾಸ್ಟ್ ಆಗಿ ಚಾಲಕ ಸೇರಿ ಮೂವರು ವಿದ್ಯಾರ್ಥಿಗಳು ಸಾವನ್ನಪ್ಪಿರುವ ಘಟನೆ ಮಂಗಳವಾರ ರಾತ್ರಿ ರಾಯಚೂರು ಜಿಲ್ಲೆಯಲ್ಲಿ ನಡೆದಿದೆ. ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನ ಹರಗಿನಮರ ಕ್ಯಾಂಪ್ ಸಮೀಪ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಕ್ರೂಷರ್‌ವಾಹನದ ಟೈರ್‌ಬ್ಲಾಸ್ಟ್ ಆಗಿ ಚಾಲಕ ಸೇರಿ ಮಂತ್ರಾಲಯದ ಮಠದ ಸಾಂಸ್ಕೃತಿಕ ವಿದ್ಯಾಪೀಠದ ಮೂವರು ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ. ವಾಹನ ಚಾಲಕ ಶಿವು, ಮಂತ್ರಾಲಯದ ಸಂಸ್ಕೃತ ವಿದ್ಯಾಪೀಠದ ವಿದ್ಯಾರ್ಥಿಗಳಾದ ಹೈವಧನ ಕಟ್ಟಿ, ಸುಜಯೀಂದ್ರ, ಅಭಿಲಾಶ ಮೃತ ವಿದ್ಯಾರ್ಥಿಗಳು, ವಿದ್ಯಾರ್ಥಿ ಜಯಸಿಂಹ ಸ್ಥಿತಿ ಚಿಂತಾಜನಕವಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು ಪರಿಶೀಲನೆ ನಡೆಸಿದ್ದಾರೆ.
ಚಿತ್ರದುರ್ಗ : ಪ್ರಸಕ್ತ ಸಾಲಿನ ಎಸ್.ಎಸ್.ಎಲ್.ಸಿ ಉನ್ನತೀಕರಣದ ಹಿನ್ನಲೆಯಲ್ಲಿ ನುರಿತ ವಿಷಯ ತಜ್ಞರಿಂದ ವಿಷಯವಾರು ಪರೀಕ್ಷೆಗೆ ಸಂಬಂಧಿಸಿದ ಮಾಹಿತಿ ನೀಡಲು ಮತ್ತು ಮಕ್ಕಳ ಪ್ರಶ್ನೆಗಳಿಗೆ ಉತ್ತರಿಸಲು ನೇರ ಫೋನ್ ಇನ್ ಕಾರ್ಯಕ್ರಮ ರೂಪಿಸಲಾಗಿದೆ. ಇದೇ ಜ.24ರಂದು ಬೆಳಿಗ್ಗೆ 10ಕ್ಕೆ ಚಿತ್ರದುರ್ಗ ಆಕಾಶವಾಣಿಯ ನೇರ ಫೋನ್ ಇನ್ ಕಾರ್ಯಕ್ರಮದ ಚರ್ಚೆಯಲ್ಲಿ ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಎಂ.ಆರ್.ಮಂಜುನಾಥ್, ಶಿಕ್ಷಣಾಧಿಕಾರಿ ಬಿ.ಸಿ.ಸಿದ್ದಪ್ಪ, ಎಸ್.ಎಸ್.ಎಲ್.ಸಿ ನೋಡಲ್ ಅಧಿಕಾರಿ ಎನ್.ಆರ್. ತಿಪ್ಪೇಸ್ವಾಮಿ, ಶಿಕ್ಷಣ ಉಪಯೋಜನ ಸಮನ್ವಯಾಧಿಕಾರಿ ಸಿ. ವೆಂಕಟೇಶ್ ಹಾಗೂ ವಿಷಯ ಪರಿವೀಕ್ಷಕ ಕೆ.ಜಿ.ಪ್ರಶಾಂತ್ ಕೆ.ಜಿ ಭಾಗವಹಿಸುವರು. 2025ನೇ ಮಾರ್ಚ್ ಮಾಹೆಯಲ್ಲಿ ನಡೆಯುವ ಎಸ್‍ಎಸ್‍ಎಲ್‍ಸಿ ಪರೀಕ್ಷೆಗೆ ಜಿಲ್ಲೆಯ ಎಲ್ಲಾ ಮಕ್ಕಳನ್ನು ಉತ್ತಮವಾಗಿ ತಯಾರಿ ಮಾಡಲು ಆಕಾಶವಾಣಿ ಮೂಲಕ ಎಸ್‍ಎಸ್‍ಎಲ್‍ಸಿ ಪೂರ್ವಭಾವಿ ಪರೀಕ್ಷಾ ಸಿದ್ಧತೆ, ಪ್ರಾಯೋಜಿತ ನೇರ ಫೋನ್ ಇನ್ ಸರಣಿ ಕಾರ್ಯಕ್ರಮ ಪ್ರತಿ ಬುಧವಾರ ಬೆಳಿಗ್ಗೆ 10 ರಿಂದ 11 ರವರೆಗೆ ಪ್ರಸಾರವಾಗುವುದು. ಈ ಸರಣಿ ಕಾರ್ಯಕ್ರಮವು ಇದೇ ಜನವರಿ 29 ರಿಂದ ಆರಂಭವಾಗಿ ಮಾರ್ಚ್…
ಬೆಂಗಳೂರು: ರಾಜ್ಯದ ಎಲ್ಲಾ ಸರ್ಕಾರಿ ಹಾಗೂ ಅನುದಾನಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ರಾಷ್ಟ್ರೀಯ ಹಾಗೂ ನಾಡಹಬ್ಬಗಳಂದು ಬಿಸಿಯೂಟ ನೀಡುವಂತೆ ಸರ್ಕಾರ ಆದೇಶ ಹೊರಡಿಸಿದೆ. ಈ ಸಂಬಂಧ ಶಾಲಾ ಶಿಕ್ಷಣ ಇಲಾಖೆಯ ಪಿಎಂ ಪೋಷಣ್ ನಿರ್ದೇಶಕರು ನೆನಪೋಲೆಯನ್ನು ರಾಜ್ಯ ಎಲ್ಲಾ ಶಿಕ್ಷಣಾಧಿಕಾರಿಗಳಿಗೆ ಹೊರಡಿಸಿದ್ದಾರೆ. ಅದರಲ್ಲಿ ಪ್ರತಿ ವರ್ಷದಂತ ಪಿ ಎಂ ಪೋಷಣ್ (ಮಧ್ಯಾಹ್ನ ಬಿಸಿಯೂಟ ಯೋಜನ) ವಾರ್ಷಿಕ ಕ್ರಿಯಾ ಯೋಜನೆಯಲ್ಲಿ ಪ್ರತಿ ಶೈಕ್ಷಣಿಕ ವರ್ಷದ ಕೆಲಸದ ದಿನಗಳನ್ನು ಲೆಕ್ಕಿಸುವ ಸಂದರ್ಭದಲ್ಲಿ ರಾಷ್ಟ್ರೀಯ ಹಾಗೂ ನಾಡಹಬ್ಬಗಳನ್ನು(ಕನ್ನಡ ರಾಜ್ಯೋತ್ಸವ) ಶಾಲಾ ಕೆಲಸದ ದಿನಗಳೆಂದು ಪರಿಗಣಿಸಲಾಗಿರುತ್ತದೆ ಹಾಗೂ ಪಿ ಎಂ ಪೋಷಣ್ ಯೋಜನ ಅಡಿಯಲ್ಲಿ ಬಿಸಿಯೂಟ ಯೋಜನೆಯನ್ನು ಅನುಷ್ಠಾನ ಮಾಡಲು (ಯೋಜನಾ ಅನುಮೋದನಾ ಮಂಡಳಿ) ಪಿಎಬಿ ಯಿಂದ ಅನುಮೋದನೆಯನ್ನು ಪಡೆಯಲಾಗಿರುತ್ತದೆ ಎಂದಿದ್ದಾರೆ. ಆದ್ದರಿಂದ ಎಲ್ಲಾ ರಾಷ್ಟ್ರೀಯ ಹಾಗೂ ನಾಡಹಬ್ಬಗಳಂದು ರಾಜ್ಯದ ಎಲ್ಲಾ ಸರ್ಕಾರಿ ಹಾಗೂ ಅನುದಾನಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಮಕ್ಕಳಿಗೆ ಕಡ್ಡಾಯವಾಗಿ ಬಿಸಿಯೂಟ ಕಾರ್ಯಕ್ರಮವನ್ನು ಅನುಷ್ಠಾನ ಮಾಡಲು ಸೂಚಿಸಲಾಗಿರುತ್ತದ. ಆದ್ದರಿಂದ 2025 ಜನವರಿ 26 ಗಣರಾಜ್ಯೋತ್ಸವ…
ಬೆಂಗಳೂರು : ರಾಜ್ಯ ಸರ್ಕಾರವು ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ ಮಾಡಿದ್ದು, 6 ಮಂದಿ ಡಿವೈಎಸ್‌ಪಿ (ಸಿವಿಲ್) ರವರುಗಳ ವರ್ಗಾವಣೆ/ ಸ್ಥಳ ನಿಯುಕ್ತಿಗೊಳಿಸಿ ಆದೇಶ ಹೊರಡಿಸಿದೆ. ಉಲ್ಲೇಖಿತ ದಿನಾಂಕದಂದು ನಡೆದ ಪೊಲೀಸ್ ಸಿಬ್ಬಂದಿ ಮಂಡಳಿಯ ಸಭೆಯ ನಿರ್ಣಯದಂತೆ, ಈ ಕೆಳಕಂಡ ಡಿವೈಎಸ್‌ಪಿ (ಸಿವಿಲ್) ರವರುಗಳನ್ನು ಅವರ ಹೆಸರಿನ ಮುಂದೆ ತೋರಿಸಿರುವ ಸ್ಥಳಕ್ಕೆ ಈ ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾಯಿಸಿ ಆದೇಶಿಸಲಾಗಿದೆ. 1. ಮೋಹನ್ ಕುಮಾರ್ ಆರ್. 2 ಮಹೇಶ್ ಕುಮಾರ್ 3 ಕುಮಾರ್ ಎಸ್ 4 ಕುಮಾರಸ್ವಾಮಿ 5 ಲೋಕೇಶ್ವರಪ್ಪ ಎಸ್ 6 ಪಾಂಡುರಂಗಯ್ಯ ಎಂ ಸಂಬಂಧಪಟ್ಟ ಘಟಕಾಧಿಕಾರಿಗಳು, ಮೇಲ್ಕಂಡ ಅಧಿಕಾರಿಗಳನ್ನು ಕರ್ತವ್ಯದಿಂದ ಬಿಡುಗಡೆಗೊಳಿಸಿ. ಯಾವುದೇ ಸೇರುವಿಕೆ ಕಾಲವನ್ನು ಉಪಯೋಗಿಸಿಕೊಳ್ಳದೆ ವರ್ಗಾಯಿಸಲಾದ ಸ್ಥಳದಲ್ಲಿ ಕರ್ತವ್ಯಕ್ಕೆ ವರದಿ ಮಾಡಿಕೊಳ್ಳುವಂತೆ ಸೂಚಿಸುವುದು ಹಾಗೂ ಸದರಿ ಅಧಿಕಾರಿಗಳು ಬಿಡುಗಡೆಗೊಂಡ ಮತ್ತು ವರದಿ ಮಾಡಿದ ಬಗ್ಗೆ ಈ ಕಛೇರಿಗೆ ಪಾಲನಾ ವರದಿ ಸಲ್ಲಿಸುವುದು. ಮೇಲ್ಕಂಡ ವರ್ಗಾವಣಾ ಆದೇಶದಲ್ಲಿ ಸ್ಥಳ ನಿಯುಕ್ತಿಗೊಳಿಸದಿರುವ ಡಿವೈಎಸ್‌ಪಿ ವೃಂದದ ಅಧಿಕಾರಿಗಳು ಮುಂದಿನ ಸ್ಥಳ…
ಬೆಂಗಳೂರು : ರಾಜರಾಜೇಶ್ವರಿ ನಗರ 66/11 ಕೆವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೈ ಮಾಸಿಕ ನಿರ್ವಹಣೆ ಕಾಮಗಾರಿ ಕೈಗೊಳ್ಳಲಿರುವ ಹಿನ್ನೆಲೆಯಲ್ಲಿ ಜನವರಿ 22 ರ ಇಂದು ನಗರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಇಂದು ನಗರದ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಪಟ್ಟಣಗೆರೆ, ಕೃಷ್ಣ ಗಾರ್ಡನ್, ಬಿಎಚ್ ಇಎಲ್ ಲೇಔಟ್, ಭೂಮಿಕಾ ಲೇಔಟ್, ಬಿಇಎಂಎಲ್ ಒಂದನೇ 2ನೇ ಹಾಗೂ 10ನೇ ಹಂತ, ಮೈಲಸಂದ್ರ, ಉತ್ತರಹಳ್ಳಿ ಮೇನ್ ರೋಡ್, ಕಾನ್ ಕಾರ್ಡ್ ಲೇಔಟ್, ಓಂಕಾರ್ ನಗರ, ಕೋಡಿಪಾಳ್ಯ, ಕೋನಸಂದ್ರ, ಹೆಮ್ಮಿಗೆಪುರ, ಜೆಟ್ಟಿ ಪಾಳ್ಯ, ಚೂಡೇನಪುರ, ಕಾಟ ನಾಯಕನಪುರ, ಬಿಜಿಎಸ್ ಹಾಸ್ಪಿಟಲ್, ಗಾಣಕಲ್, ಶ್ರೀನಿವಾಸ್‌ಪುರ ಕಾಲೋನಿ, ಎಂಎಲ್ ಲೇಔಟ್, ಬಿಡಿಎ ಲೇಔಟ್, ಸಚ್ಚಿದಾನಂದ ನಗರ, ಒಲಂಪಸ್ ಹಾಸ್ಪಿಟಲ್, ಹಲಗೇವಡೇರಹಳ್ಳಿ, ದ್ವಾರಕಾನಗರ, ಐಡಿಯಲ್ ಹೋಮ್ಸ್, ಸ್ವಾಮಿ ವಿವೇಕಾ ನಂದ ರೋಡ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.












