Author: kannadanewsnow57

ಬೆಂಗಳೂರು : ಬೆಂಗಳೂರಿನಲ್ಲಿ ಮತ್ತೊಂದು ಬೆಚ್ಚಿ ಬೀಳಿಸುವ ಘಟನೆಯೊಂದು ನಡೆದಿದ್ದು, ಬಸ್ ಗಾಗಿ ಕಾಯುತ್ತಿದ್ದ ಮಹಿಳೆ ಮೇಲೆ ಇಬ್ಬರು ಕಾಮುಕರು ಸಾಮೂಹಿಕ ಅತ್ಯಾಚಾರ ಎಸಗಿದ ಘಟನೆಗೆ ಸಂಬಂಧಿಸಿದಂತೆ ಇದೀಗ ಪೊಲೀಸರು ಓರ್ವನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ. ಕೆ.ಆರ್. ಮಾರ್ಕೆಟ್ ನಲ್ಲಿ ಬಸ್ ಗಾಗಿ ಕಾಯುತ್ತಿದ್ದ ಮಹಿಳೆ ಮೇಲೆ ಇಬ್ಬರು ಅಪರಿಚಿತ ವ್ಯಕ್ತಿಗಳು ಬಸ್ ತೋರಿಸುವುದಾಗಿ ಕರೆದೊಯ್ದು ಅತ್ಯಾಚಾರ ಎಸಗಿ ಮೊಬೈಲ್, ನಗದು ಹಾಗೂ ಚಿನ್ನಾಭರಣ ದೋಚಿದ್ದಾರೆ ಎಂದು ಕೇಂದ್ರ ವಿಭಾಗದ ಮಹಿಳಾ ಠಾಣೆಗೆ ದೂರು ನೀಡಿದ್ದಾರೆ. ಭಾನುವಾರ ರಾತ್ರಿ 11.39ಕ್ಕೆ ಕೆ.ಆರ್.ಮಾರ್ಕೆಟ್ ಬಳಿಯ ಗೋಡೌನ್ ಸ್ಟ್ರೀಟ್ ನಲ್ಲಿ ಈ ಘಟನೆ ನಡೆದಿದ್ದು, ಮಹಿಳೆ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಘಟನೆ ಸಂಬಂಧ ಓರ್ವನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Read More

ನವದೆಹಲಿ : ಸರ್ಕಾರದಿಂದ ನೀಡಲಾದ 8 ಪ್ರಮುಖ ಕಾರ್ಡ್‌ಗಳ ಮೂಲಕ ನೀವು ಸರ್ಕಾರಿ ಯೋಜನೆಗಳ ಪ್ರಯೋಜನಗಳನ್ನು ಪಡೆಯಬಹುದು-ಆಧಾರ್, ಕಿಸಾನ್, ಎಬಿಸಿ, ಶ್ರಮಿಕ್, ಸಂಜೀವನಿ, ಅಭಾ, ಗೋಲ್ಡನ್ ಮತ್ತು ಇ-ಶ್ರಮ್. ಇತ್ತೀಚಿನ ದಿನಗಳಲ್ಲಿ, ಸರ್ಕಾರದಿಂದ ಅನೇಕ ರೀತಿಯ ಕಾರ್ಡ್‌ಗಳನ್ನು ನೀಡಲಾಗುತ್ತಿದೆ, ಇದು ಸಾರ್ವಜನಿಕರಿಗೆ ಅನೇಕ ಪ್ರಯೋಜನಕಾರಿ ಯೋಜನೆಗಳಿಗೆ ಬಾಗಿಲು ತೆರೆಯುತ್ತದೆ. ನೀವು ಈ ಕಾರ್ಡ್‌ಗಳನ್ನು ಹೊಂದಿದ್ದರೆ, ನೀವು ಸರ್ಕಾರದ ವಿವಿಧ ಯೋಜನೆಗಳ ಪ್ರಯೋಜನಗಳನ್ನು ಪಡೆಯಬಹುದು. ಈ ಲೇಖನದಲ್ಲಿ, ಆ ಏಳು ಪ್ರಮುಖ ಕಾರ್ಡ್‌ಗಳ ಕುರಿತು ನಾವು ನಿಮಗೆ ಮಾಹಿತಿಯನ್ನು ನೀಡುತ್ತೇವೆ, ಅದರ ಮೂಲಕ ನೀವು ವಿವಿಧ ಸರ್ಕಾರಿ ಪ್ರಯೋಜನಗಳನ್ನು ಪಡೆಯಬಹುದು. 1. ಕಿಸಾನ್ ಕಾರ್ಡ್ ವಿಶೇಷವಾಗಿ ರೈತರಿಗೆ ಕಿಸಾನ್ ಕಾರ್ಡ್ ನೀಡಲಾಗುತ್ತದೆ. ಈ ಕಾರ್ಡ್‌ನಲ್ಲಿ ರೈತರ ಜಮೀನು ಮಾಹಿತಿ, ಖಾಸ್ರಾ ಸಂಖ್ಯೆ, ವಿಸ್ತೀರ್ಣ ಮುಂತಾದ ಎಲ್ಲ ಮಾಹಿತಿಗಳನ್ನು ನೀಡಲಾಗಿದೆ. ಈ ಕಾರ್ಡ್ ಮೂಲಕ, ರೈತರು ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆ ಮತ್ತು ಕೃಷಿ ಪರಿಹಾರದಂತಹ ಸರ್ಕಾರದ ಯೋಜನೆಗಳ ಪ್ರಯೋಜನಗಳನ್ನು ಸುಲಭವಾಗಿ ಪಡೆಯಬಹುದು.…

Read More

ಬೆಂಗಳೂರು: ರಾಜ್ಯ ಸರ್ಕಾರದಿಂದ ಬಿಯರ್ ಪ್ರಿಯರಿಗೆ ಶಾಕ್ ನೀಡಲಾಗಿದೆ. ಜನವರಿ 20 ರಿಂದ ಜಾರಿಗೆ ಬರುವಂತೆ ಬಿಯರ್ ದರವನ್ನು ರೂ.10ರಿಂದ 45 ರೂ.ವರೆಗೆ ಏರಿಕೆ ಮಾಡಿ ಆದೇಶಿಸಿದೆ. ಕರ್ನಾಟಕದಲ್ಲಿ ಮದ್ಯಪ್ರಿಯರಿಗೆ ಕಾಂಗ್ರೆಸ್ ಸರ್ಕಾರ ಶಾಕ್ ನೀಡಿದೆ. ಬಜೆಟ್ ಮಂಡನೆಯಾದ ನಂತ್ರ ಏರಿಕೆಯಾಗುತ್ತಿದಂತ ಬಿಯರ್ ಬೆಲೆಯನ್ನು, ಸತತ ಎರಡನೇ ಬಾರಿಗೆ ಅದಕ್ಕೂ ಮೊದಲೇ ಏರಿಕೆ ಮಾಡಿದೆ. ಕಳೆದ 6 ತಿಂಗಳ ಹಿಂದಷ್ಟೇ ಆಮದು ವಸ್ತುಗಳ ಮೇಲಿನ ಬೆಲೆ ಹೆಚ್ಚಳ ಮಾಡಲಾಗಿತ್ತು. ಈಗ ಸುಂಕವನ್ನು ರಾಜ್ಯ ಸರ್ಕಾರ ಹೆಚ್ಚಳ ಮಾಡಿದೆ. ಹೀಗಾಗಿ 10 ರೂ ನಿಂದ 45 ರೂಪಾಯಿಯವರೆಗೆ ಬಿಯರ್ ಬೆಲೆ ಏರಿಕೆಯಾದಂತೆ ಆಗಿದೆ. ಆದರೇ ದುಬಾರಿ ಬೆಲೆಯ ಬಿಯರ್ ದರ ಏರಿಕೆಯಾಗಿಲ್ಲ. ಯಾವ ಬಿಯರ್ ಬೆಲೆ ಎಷ್ಟು ಹೆಚ್ಚಳ? ಲೆಜೆಂಡ್ ಬಿಯರ್ ಬೆಲೆಯನ್ನು ರೂ.100 ಇದ್ದದ್ದು ರೂ.145ಕ್ಕೆ ಏರಿಕೆಯಾಗಲಿದೆ. ಪವರ್ ಕೂಲ್ ಬಿಯರ್ ಬೆಲೆ ರೂ.130ರಿಂದ ರೂ.155ಕ್ಕೆ ಏರಿಕೆ ಬ್ಲ್ಯಾಕ್ ಪೋರ್ಟ್ ಬಿಯರ್ ಬೆಲೆ ರೂ.145ರಿಂದ ರೂ.160ಕ್ಕೆ ಏರಿಕೆ ಹಂಟರ್ ಬಿಯರ್ ಬೆಲೆ…

Read More

ಬೆಳಗಾವಿ : ಗಾಂಧಿ ಭಾರತ ಸಮಾವೇಶದ ಹಿನ್ನೆಲೆಯಲ್ಲಿ ಇಂದು ಬೆಳಗಾವಿ ಗ್ರಾಮೀಣ, ನಗರ ಶೈಕ್ಷಣಿಕ ವಲಯದ ಸರ್ಕಾರಿ, ಅನುದಾನಿತ, ಅನುದಾನ ರಹಿತ ಶಾಲೆ, ಪ್ರೌಢ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಮಹಾತ್ಮ ಗಾಂಧೀಜಿಯವರು 1924ನೇ ಸಾಲಿನ ಸ್ವಾತಂತ್ರ್ಯ ಸಂಗ್ರಾಮದ ಐತಿಹಾಸಿಕ ಬೆಳಗಾವಿ ಕಾಂಗ್ರೆಸ್ ಅಧಿವೇಶನದಲ್ಲಿ ಅಧ್ಯಕ್ಷತೆ ವಹಿಸಿರುವ ಶತಮಾನೋತ್ಸವದ ಅಂಗವಾಗಿ ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ ಕರ್ನಾಟಕ ಸರ್ಕಾರ ಹಾಗೂ ಜಿಲ್ಲಾಡಳಿತ ಬೆಳಗಾವಿ ಇವರ ಸಂಯುಕ್ತ ಆಶ್ರಯದಲ್ಲಿ 21-01-2025 ಬೆಳಗ್ಗೆ 10.30ಗಂಟೆಗೆ ಮಹತ್ಮಾ ಗಾಂಧೀಜಿ ಅವರ ಪುತ್ತಳಿ ಅನಾವರಣ ಸಮಾರಂಭವನ್ನು ಆಯೋಜಿಸಲಾಗಿರುತ್ತದೆ ಪ್ರಯುಕ್ತ ಸದರಿ ಕಾರ್ಯಕ್ರಮಗಳಲ್ಲಿ ಗಣಾ ಮಾನ್ಯರು, ಸ್ವಾತಂತ್ರ ಹೋರಾಟಗಾರರು ಸಾರ್ವಜನಿಕರು, ಮಹಿಳೆಯರು ಹಾಗೂ ವೈದ್ಯರು ಹೀಗೆ ಲಕ್ಷಾಂತರ ಜನ ಭಾಗವಹಿಸುವ ಸಂಭವವಿರುತ್ತದೆ. ಅಲ್ಲದೇ ವಾಹನ ಸಂಚಾರ ದಟ್ಟಣೆ ಹೆಚ್ಚಾಗುವ ಸಂಭವವಿರುವ ಕಾರಣ ಶಾಲಾಮಕ್ಕಳ ಸುರಕ್ಷತಾ ಹಿತದೃಷ್ಟಿಯಿಂದ ಮುಂಜಾಗೃತಾ ಕ್ರಮವಾಗಿ ಭಾರತೀಯ ನಾಗರಿಕ ಸುರಕ್ಷಾ ಸಂಹಿತಾ (22) 2023 50 163 2 ( & ) ದ ಎಲ್ಲಾ ಸರಕಾರಿ ಅನುದಾನಿತ…

Read More

ಬೆಂಗಳೂರು :  ಮೈಸೂರು ಚಾಮರಾಜನಗರ ಜಿಲ್ಲೆಗಳ ಗ್ರಾಮೀಣ ಭಾಗದಲ್ಲಿ ಮೈಕ್ರೋ ಫೈನಾನ್ಸ್ ದಂಧೆ ಹೆಚ್ಚಿದ್ದು, ಜನರಿಗೆ ಕಿರುಕುಳ ನೀಡುತ್ತಿರುವ ಬಗ್ಗೆ, ಜನರಿಗೆ ಕಿರುಕುಳ ನೀಡುವ ಮೈಕ್ರೋ ಫೈನಾನ್ಸ್ ದಂಧೆ ನಡೆಸುತ್ತಿರುವ ಸಂಸ್ಥೆಯ ವಿರುದ್ಧ ಕಾನೂನು ರೀತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ಜನರನ್ನು ಹೆದರಿಸಿ ಕಿರುಕುಳ ನೀಡುವುದನ್ನು ನಾವು ಸಹಿಸುವುದಿಲ್ಲ. ಕೇವಲ ಮೈಸೂರು ಮಾತ್ರವಲ್ಲ. ಎಲ್ಲೇ ಮಾಡಿದರೂ ಅದು ತಪ್ಪೇ. ಜನರಿಗೆ ಕಿರುಕುಳ ನೀಡುವ ಮೈಕ್ರೋ ಫೈನಾನ್ಸ್ ವ್ಯವಹಾರಗಳ ಮೇಲೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ. ಇನ್ನು ಮುಡಾ ಹಗರಣದ ಬಗ್ಗೆ ಇಡಿಯವರು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಬಗ್ಗೆ ಪ್ರತಿಕ್ರಿಯೆ ವ್ಯಕ್ತಪಡಿಸುತ್ತಾ, ಇಡಿಯವರ ಪತ್ರಿಕಾ ಪ್ರಕಟಣೆಗೂ ನನಗೂ ಸಂಬಂಧವಿಲ್ಲ. ಬಿಜೆಪಿಯವರು ಈ ಪತ್ರಿಕಾ ಪ್ರಕಟಣೆಯನ್ನು ಅನಗತ್ಯವಾಗಿ ಇಡಿಯವರ ಮೂಲಕ ಬಿಡುಗಡೆ ಮಾಡಿಸಿದ್ದಾರೆ ಎಂದರು.

Read More

ನವದೆಹಲಿ : ಬ್ರಿಟಿಷ್ ವಸಾಹತು ಅವಧಿಯಲ್ಲಿ 1767 ಮತ್ತು 1900 ರ ನಡುವೆ ಭಾರತವೊಂದರಿಂದಲೇ ಬರೋಬ್ಬರಿ 5,609 ಲಕ್ಷ ಕೋಟಿ ರೂ.ಗಳನ್ನು ಬ್ರಿಟನ್ ಲೂಟಿ ಹೊಡೆದಿತ್ತು ಎಂದು ಆಕ್ಷ್ ಫಾಮ್ ಬಿಡುಗಡೆ ಮಾಡಿರುವ ವರದಿಯಲ್ಲಿ ತಿಳಿಸಿದೆ. ಭಾರತವನ್ನು ವಸಾಹತುವನ್ನಾಗಿ ಮಾಡಿದ ನಂತರ ಬ್ರಿಟನ್ ಅಲ್ಲಿಂದ ಹೊರತೆಗೆದ ಸಂಪತ್ತು ಅಪಾರವಾಗಿತ್ತು. 1767 ಮತ್ತು 1900 ರ ನಡುವೆ, ಬ್ರಿಟನ್ ಭಾರತದಿಂದ ಒಟ್ಟು 64.82 ಟ್ರಿಲಿಯನ್ ಅಮೆರಿಕನ್ ಡಾಲರ್ ಸಂಪತ್ತನ್ನು ಹೊರತೆಗೆದಿತು. ಇದರಲ್ಲಿ ಬಹುಪಾಲು ಶೇಕಡಾ 10 ರಷ್ಟು ಶ್ರೀಮಂತರಿಗೆ ಹೋಯಿತು, ಇದು ಸುಮಾರು US$33.8 ಟ್ರಿಲಿಯನ್ ಆಗಿತ್ತು. ಆ ಹಣ ಎಷ್ಟು ಅಗಾಧವಾಗಿತ್ತೆಂದರೆ, ಅದನ್ನು 50 ಬ್ರಿಟಿಷ್ ಪೌಂಡ್ ನೋಟುಗಳಲ್ಲಿ ಎಣಿಸಿದರೆ, ಲಂಡನ್‌ನ ಮೇಲ್ಮೈ ವಿಸ್ತೀರ್ಣ ನಾಲ್ಕು ಪಟ್ಟು ಹೆಚ್ಚಾಗಬಹುದು. ಆಕ್ಸ್‌ಫ್ಯಾಮ್ ವರದಿ ಏನು ಹೇಳುತ್ತದೆ? ಈ ಮಾಹಿತಿಯನ್ನು ಆಕ್ಸ್‌ಫ್ಯಾಮ್ ಇಂಟರ್‌ನ್ಯಾಷನಲ್‌ನ ವರದಿಯಲ್ಲಿ ನೀಡಲಾಗಿದೆ, ಇದು ಪ್ರತಿ ವರ್ಷ ವಿಶ್ವ ಆರ್ಥಿಕ ವೇದಿಕೆಯ ವಾರ್ಷಿಕ ಸಭೆಯ ಮೊದಲು ಬಿಡುಗಡೆಯಾಗುತ್ತದೆ. “ತೆಗೆದುಕೊಳ್ಳುವವರು, ತಯಾರಕರಲ್ಲ” ಎಂಬ…

Read More

ಬೆಂಗಳೂರು : ಬೆಂಗಳೂರಿನಲ್ಲಿ ಮತ್ತೊಂದು ಬೆಚ್ಚಿ ಬೀಳಿಸುವ ಘಟನೆಯೊಂದು ನಡೆದಿದ್ದು, ಬಸ್ ಗಾಗಿ ಕಾಯುತ್ತಿದ್ದ ಮಹಿಳೆ ಮೇಲೆ ಇಬ್ಬರು ಕಾಮುಕರು ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ನಡೆದಿದೆ. ಕೆ.ಆರ್. ಮಾರ್ಕೆಟ್ ನಲ್ಲಿ ಬಸ್ ಗಾಗಿ ಕಾಯುತ್ತಿದ್ದ ಮಹಿಳೆ ಮೇಲೆ ಇಬ್ಬರು ಅಪರಿಚಿತ ವ್ಯಕ್ತಿಗಳು ಬಸ್ ತೋರಿಸುವುದಾಗಿ ಕರೆದೊಯ್ದು ಅತ್ಯಾಚಾರ ಎಸಗಿ ಮೊಬೈಲ್, ನಗದು ಹಾಗೂ ಚಿನ್ನಾಭರಣ ದೋಚಿದ್ದಾರೆ ಎಂದು ಕೇಂದ್ರ ವಿಭಾಗದ ಮಹಿಳಾ ಠಾಣೆಗೆ ದೂರು ನೀಡಿದ್ದಾರೆ. ಭಾನುವಾರ ರಾತ್ರಿ 11.39ಕ್ಕೆ ಕೆ.ಆರ್.ಮಾರ್ಕೆಟ್ ಬಳಿಯ ಗೋಡೌನ್ ಸ್ಟ್ರೀಟ್ ನಲ್ಲಿ ಈ ಘಟನೆ ನಡೆದಿದ್ದು, ಮಹಿಳೆ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಘಟನೆ ಸಂಬಂಧ ಓರ್ವನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Read More

ಬೆಂಗಳೂರು : ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮ ಕರ್ನಾಟಕದ 16 ಜಿಲ್ಲೆಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದು ಬೆಂಗಳೂರು ಸೇರಿ ರಾಜ್ಯದ ವಿವಿಧ ಭಾಗದಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ತುಮಕೂರು, ಮಂಡ್ಯ, ಮೈಸೂರು, ಹಾಸನ, ರಾಮನಗರ, ಚಿಕ್ಕಮಗಳೂರು, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಕೋಲಾರ, ಕೊಡಗು, ಚಾಮರಾಜನಗರದಲ್ಲಿ ಮಳೆಯಾಗಲಿದೆ. ಇನ್ನು ದಕ್ಷ ಿಣಕನ್ನಡ ಜಿಲ್ಲೆಯಲ್ಲಿ ಎರಡು ದಿನ ಮಳೆ ಇರಲಿದ್ದು, ಉತ್ತರ ಒಳನಾಡು ಜಿಲ್ಲೆಗಳ ಕೆಲ ಕಡೆ ಮೋಡ ಕವಿದ ವಾತಾವರಣ ಹಾಗೂ ಒಣ ಹವೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Read More

ಬೆಂಗಳೂರು: 66/11ಕೆವಿ ಪುರ್ವಾಂಕರ್ ಪಾಮ್ ಬೀಚ್ ಕೇಂದ್ರದಲ್ಲಿ ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ ಈ ಕೆಳಕಂಡ ಪ್ರದೇಶಗಳಲ್ಲಿ ದಿನಾಂಕ 21.01.2025 (ಮಂಗಳವಾರ) ರಂದು ಬೆಳಗ್ಗೆ 11:00 ಯಿಂದ ಮಧ್ಯಾಹ್ನ 15:30 ಗಂಟೆವರೆಗೆ ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ. ಇಂದು ನಗರದ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ “ಹಳೆಹಳ್ಳಿ, ಮಾರ್ಗೊಂಡಣ ಹಳ್ಳಿ, ಕಲ್ಕೆರೆ ರಸ್ತೆ, ಬೈರತಿ ಗ್ರಾಮ, ಕನಕಶ್ರೀ ಲೇಔಟ್, ಅಥಮ ವಿದ್ಯಾನಗರ, ಕೆ.ಆರ್.ಸಿ ಬಸ್ ನಿಲ್ದಾಣ, ಬೈರತಿ, ಗುಬ್ಬಿ ಅಡ್ಡ ರಸ್ತೆ, ಬೈರತಿ ಬಂಡೆ, ಕ್ಯಾಲಸನಹಳ್ಳಿ, ಪೂರ್ವಾಂಕರ ಅಪಾರ್ಟ್ಮೆಂಟ್,ಕಲ್ಕೇರೆ ರೋಡ,ಪೂರ್ಣ ಪ್ರಜ್ನಾ, ಮಾರಗೊಂಡನಹಳ್ಳಿ, ಗವಿಗುಡಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕರೆಂಟ್ ಇರೋದಿಲ್ಲ. ಇನ್ನೂ ಬೆಂಗಳೂರಿನ 66/11ಕೆವಿ ಸ್ಟಿನ್ ಟೌನ್ ಕೇಂದ್ರದಲ್ಲಿ ಈ ಕೆಳಕಂಡ ಪ್ರದೇಶಗಳಲ್ಲಿ ದಿನಾಂಕ 21.01.2025 (ಮಂಗಳವಾರ) ರಂದು ಬೆಳಗ್ಗೆ 10:00 ಯಿಂದ ಮಧ್ಯಾಹ್ನ 15:00 ಗಂಟೆವರೆಗೆ ಈ ಕೆಳಗಿನ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ. ಬ್ರೆಂಟನ್ ರಸ್ತೆ, ಶೋಭಾ ಪರ್ಲ್,…

Read More

ನವದೆಹಲಿ : ದೇಶವನ್ನೇ ಬೆಚ್ಚಿ ಬೀಳಿಸಿದ್ದ ಕೋಲ್ಕತ್ತಾದ ಆರ್ ಜಿ ಕಾರ್ ಆಸ್ಪತ್ರೆಯ ವೈದ್ಯೆಯ ಅತ್ಯಾಚಾರ ಮತ್ತು ಹತ್ಯೆ ಪ್ರಕರಣದ ಬಗ್ಗೆ ಇಂದು ಸಿಯಾಲ್ಡಾ ನ್ಯಾಯಾಲಯದ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ಕೋರ್ಟ್ ಅಪರಾಧಿ ಸಂಜಯ್ ರಾಯ್ ಗೆ ಜೀವಾವಧಿ ಶಿಕ್ಷೆಯನ್ನು ವಿಧಿಸಿ ಆದೇಶಿಸಿದ್ದಾರೆ. ಸಂಜಯ್ ರಾಯ್ ಅವರು 9 ಆಗಸ್ಟ್ 2024 ರಂದು ಆರ್‌ಜಿ ಕರ್ ವೈದ್ಯಕೀಯ ಕಾಲೇಜಿನಲ್ಲಿ ಟ್ರೈನಿ ವೈದ್ಯೆಯೊಬ್ಬರ ಮೇಲೆ ಅತ್ಯಾಚಾರ ಮತ್ತು ಕೊಲೆ ಮಾಡಿದ್ದು, ಇದೀಗ ಅಪರಾಧಿ ಸಂಜಯ್ ರಾಯ್ ಗೆ ಶಿಕ್ಷೆ ವಿಧಿಸಿ ಸಿಯಾಲ್ಡಾ ನ್ಯಾಯಾಲಯದ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ಕೋರ್ಟ್ ತೀರ್ಪು ನೀಡಿದೆ. ಆರ್ ಜಿ ಕರ್ ಪ್ರಕರಣವು ಪಶ್ಚಿಮ ಬಂಗಾಳವನ್ನು ಮಾತ್ರವಲ್ಲದೆ ಇಡೀ ದೇಶವನ್ನೇ ಬೆಚ್ಚಿಬೀಳಿಸಿತ್ತು. ಇಂದು ಈ ಪ್ರಕರಣದ ಅಪರಾಧಿಗೆ ಶಿಕ್ಷೆ ಪ್ರಕಟಿಸಲಾಗಿದೆ. ಆಗಸ್ಟ್ 9, 2024 ರಂದು, 36 ಗಂಟೆಗಳ ಪಾಳಿಯ ನಂತರ ವಿಶ್ರಾಂತಿ ಪಡೆಯಲು ಆಸ್ಪತ್ರೆಯ ಸೆಮಿನಾರ್ ಹಾಲ್‌ನಲ್ಲಿ ಮಲಗಿದ್ದ ಯುವ ತರಬೇತಿ ವೈದ್ಯೆ ಅಭಯ,…

Read More