Subscribe to Updates
Get the latest creative news from FooBar about art, design and business.
Author: kannadanewsnow57
ದಾವಣಗೆರೆ : ದೇಶದ ಹಿರಿಯ ರಾಜಕಾರಣಿ, ದಾವಣಗೆರೆ ದಕ್ಷಿಣ ಕ್ಷೇತ್ರದ ಕಾಂಗ್ರೆಸ್ ಶಾಸಕ ಶಾಮನೂರು ಶಿವಶಂಕರಪ್ಪ (95) ಭಾನುವಾರ ಸಂಜೆ ನಿಧನರಾಗಿದ್ದು, ದಾವಣಗೆರೆಯಲ್ಲಿ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರು ಅಂತಿಮ ದರ್ಶನ ಪಡೆದಿದ್ದಾರೆ. ಶಾಸಕರು ಹಾಗೂ ವೀರಶೈವ ಮಹಾಸಭಾ ಅಧ್ಯಕ್ಷರಾದ ಶಾಮನೂರು ಶಿವಶಂಕರಪ್ಪ ಅವರ ಪಾರ್ಥಿವ ಶರೀರಕ್ಕೆ ಪುಷ್ಪ ನಮನ ಸಲ್ಲಿಸಿ ಬಿ.ಎಸ್. ಯಡಿಯೂರಪ್ಪ ಹಾಗೂ ಮಾಜಿ ಸಚಿವ ರೇಣುಕಾಚಾರ್ಯ ಅವರು ಅಂತಿಮ ದರ್ಶನ ಪಡೆದಿದ್ದಾರೆ. ಇಂದು ಸಂಜೆ ಕಲ್ಲೇಶ್ವರ ಮಿಲ್ ಆವರಣದಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಹಿರಿಯ ಕಾಂಗ್ರೆಸ್ ಶಾಸಕ ಶಾಮನೂರು ಶಿವಶಂಕರಪ್ಪ ಅಂತ್ಯಕ್ರಿಯೆ ನಡೆಯಲಿದೆ.ವೀರಶೈವ ಲಿಂಗಾಯತ ಸಂಪ್ರದಾಯದಂತೆ ಅಂತ್ಯಕ್ರಿಯೆ ನಡೆಯಲಿದೆ.
ನವದೆಹಲಿ : ದೆಹಲಿ ಮತ್ತು ರಾಷ್ಟ್ರೀಯ ರಾಜಧಾನಿ ಪ್ರದೇಶದಲ್ಲಿ (NCR) ದಟ್ಟವಾದ ಹೊಗೆಯ ನಡುವೆ ಗೋಚರತೆ ಕಡಿಮೆಯಾದ ಕಾರಣ ಸೋಮವಾರ 100 ಕ್ಕೂ ಹೆಚ್ಚು ವಿಮಾನಗಳು ರದ್ದಾಗಿದ್ದು, ಇನ್ನೂ ಹಲವಾರು ವಿಮಾನಗಳು ವಿಳಂಬವನ್ನು ಎದುರಿಸಿದವು. ನಗರವು ಉಸಿರುಗಟ್ಟಿಸುವುದನ್ನು ಮುಂದುವರೆಸಿದ್ದರಿಂದ ಸಂಭವನೀಯ ಅಡಚಣೆಗಳು ಮತ್ತು ರದ್ದತಿಗಳ ಬಗ್ಗೆ ಪ್ರಯಾಣಿಕರಿಗೆ ತಿಳಿಸಲು ಏರ್ ಇಂಡಿಯಾ ಮತ್ತು ಇಂಡಿಗೋ ಸೇರಿದಂತೆ ವಿವಿಧ ವಿಮಾನಯಾನ ಸಂಸ್ಥೆಗಳು ಪ್ರಯಾಣ ಸಲಹೆಗಳನ್ನು ನೀಡಿವೆ. ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿಯ (CPCB) ಸಮೀರ್ ಅಪ್ಲಿಕೇಶನ್ನಲ್ಲಿ ಲಭ್ಯವಿರುವ ಮಾಹಿತಿಯ ಪ್ರಕಾರ, ರಾಷ್ಟ್ರ ರಾಜಧಾನಿಯಲ್ಲಿ ವಾಯು ಗುಣಮಟ್ಟ ಸೂಚ್ಯಂಕ (AQI) ಓದುವಿಕೆ ಬೆಳಿಗ್ಗೆ 7:05 ಕ್ಕೆ ‘ಗಂಭೀರ’ 454 ರಷ್ಟಿತ್ತು. ಇಂದು ರದ್ದಾದ ಏರ್ ಇಂಡಿಯಾ ವಿಮಾನಗಳ ಪೂರ್ಣ ಪಟ್ಟಿ X ನಲ್ಲಿನ ಪೋಸ್ಟ್ನಲ್ಲಿ, ದೆಹಲಿಯಲ್ಲಿ ಇಂದು ಬೆಳಿಗ್ಗೆ ದಟ್ಟವಾದ ಮಂಜಿನಿಂದಾಗಿ ಎಲ್ಲಾ ವಿಮಾನಯಾನ ಸಂಸ್ಥೆಗಳ ವಿಮಾನ ಕಾರ್ಯಾಚರಣೆಗಳು ಕಳಪೆ ಗೋಚರತೆಯ ಕಾರಣದಿಂದಾಗಿ ತೊಂದರೆಗೊಳಗಾಗಿವೆ ಎಂದು ಏರ್ ಇಂಡಿಯಾ ಘೋಷಿಸಿತು. ವಿಮಾನಯಾನ ಸಂಸ್ಥೆಯ ಪ್ರಯಾಣ…
ಬೆಂಗಳೂರು : ಡಿಸೆಂಬರ್ 18 ರಂದು ರಾಜ್ಯ ಸರ್ಕಾರದ ಮಹತ್ವದ ಸಚಿವ ಸಂಪುಟ ಸಭೆ ನಿಗದಿಯಾಗಿದೆ. ದಿನಾಂಕ: 18.12.2025, ಗುರುವಾರ ಸಂಜೆ 7:00 ಗಂಟೆಗೆ ಸಚಿವ ಸಂಪುಟದ 2025ನೇ ಸಾಲಿನ 30ನೇ ಸಭೆಯನ್ನು ಬೆಳಗಾವಿಯ ಸುವರ್ಣ ವಿಧಾನಸೌಧದ 3ನೇ ಮಹಡಿಯಲ್ಲಿರುವ ಸಚಿವ ಸಂಪುಟ ಸಭಾಮಂದಿರದಲ್ಲಿ ಕರೆಯಲಾಗಿದೆ. ಸಭೆಯ ಕಾರ್ಯಸೂಚಿಯನ್ನು ಪ್ರತ್ಯೇಕವಾಗಿ ಕಳುಹಿಸಲಾಗುವುದು ಎಂದು ಸರ್ಕಾರದ ಅಪರ ಕಾರ್ಯದರ್ಶಿ ಆರ್. ಚಂದ್ರಶೇಖರ್ ಸುತ್ತೋಲೆ ಹೊರಡಿಸಿದ್ದಾರೆ.
ದಾವಣಗೆರೆ :ದಾವಣಗೆರೆ ಜಿಲ್ಲೆ ಸಾಮಾಜಿಕವಾಗಿ, ಆರ್ಥಿಕವಾಗಿ ಹಾಗೂ ಶೈಕ್ಷಣಿಕವಾಗಿ ಅಭಿವೃದ್ಧಿಯಾಗಿದ್ದಾರೆ ಅದಕ್ಕೆ ಶಾಮನೂರು ಶಿವಶಂಕರಪ್ಪ ಅವರು ಕಾರಣ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. -ಹಿರಿಯ ಶಾಸಕರಾದ ಶಾಮನೂರು ಶಿವಶಂಕರಪ್ಪ ಅವರ ನಿಧನದ ಹಿನ್ನೆಲೆಯಲ್ಲಿ ವಿಧಾನಸಭೆಯಲ್ಲಿ ಇಂದು ಸಂತಾಪ ಸೂಚಿಸಿ, ಮಾತನಾಡಿದ ಸಿಎಂ ಸಿದ್ದರಾಮಯ್ಯ,ಶಾಮನೂರು ಶಿವಶಂಕರಪ್ಪ ಅವರು ತಮ್ಮ 63ನೇ ವಯಸ್ಸಿನಲ್ಲಿ ವಿಧಾನಸಭೆ ಪ್ರವೇಶಿಸಿ ಆರು ಬಾರಿ ಶಾಸಕರಾದವರು. ಒಮ್ಮೆ ಸಂಸತ್ ಸದಸ್ಯರಾಗಿದ್ದರು. ದೀರ್ಘ ಕಾಲದ ರಾಜಕೀಯದಲ್ಲಿದ್ದರು. ಅಖಿಲ ಭಾರತ ವೀರಶೈವ ಮಹಾಸಭಾ ಅಧ್ಯಕ್ಷರಾಗಿದ್ದರು. 1969ರಲ್ಲಿ ದಾವಣಗೆರೆ ಪುರಸಭೆ ಸದಸ್ಯರಾಗಿ ನಂತರ ನಗರಸಭೆ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು. ದಾವಣಗೆರೆಯಲ್ಲಿ ಬಾಪೂಜಿ ವಿದ್ಯಾ ಕೇಂದ್ರದ ಮೂಲಕ ಇಂಜಿನಿಯರಿಂಗ್, ವೈದ್ಯಕೀಯ ಕಾಲೇಜುಗಳು ಸೇರಿದಂತೆ ಅನೇಕ ಸಂಸ್ಥೆಗಳನ್ನು ಕಟ್ಟಿ ಜಿಲ್ಲೆಯನ್ನು ವಿದ್ಯಾಕಾಶಿಯಾಗಿಸಿದರು. ಉದ್ಯಮಿಯಾಗಿ ಸಾಮಾಜಿಕ, ಆರ್ಥಿಕ ಹಾಗೂ ಶೈಕ್ಷಣಿಕ ಕ್ಷೇತ್ರಗಳಲ್ಲಿ ತಮ್ಮದೇ ಛಾಪು ಮೂಡಿಸಿದ್ದಾರೆ. ಜವಳಿ ಕ್ಷೇತ್ರದ ಅವನತಿ ಪ್ರಾರಂಭವಾದಾಗ ದಾವಣಗೆರೆಗೆ ಒಂದು ಬ್ರಾಂಡ್ ಹೆಸರನ್ನು ಶಿವಶಂಕರಪ್ಪ ಅವರು ತಂದುಕೊಟ್ಟರು. ದೀರ್ಘಕಾಲ ಎಐಸಿಸಿ ಖಜಾಂಚಿ ಆಗಿದ್ದರು. ಎಲ್ಲರೊಂದಿಗೂ…
* ಅವಿನಾಶ್ ಆರ್ ಭೀಮಸಂದ್ರ ಬೆಂಗಳೂರು: ಕರ್ನಾಟದಲ್ಲಿ ಮತ್ತೆ ಎರಡು ವಿಧಾನಸಭಾ ಕ್ಷೇತ್ರಗಳಿಗೆ ಮರು ಚುನಾವಣೆ ನಡೆಲಿದೆ. ಕಾಂಗ್ರೆಸ್ ಶಾಸಕರಾಗಿದ್ದ ಬಾಗಲಕೋಟೆ ಶಾಸಕ ಎಚ್.ವೈ.ಮೇಟಿ ಮತ್ತು ದಾವಣಗೆರೆ ಶಾಸಕ ಶಾಮನೂರು ಶಿವಶಂಕರಪ್ಪನವರ ನಿಧನದಿಂದ ತೆರುವಾಗಿರುವ ಸ್ಥಾನಕ್ಕೆ ರಾಜ್ಯ ಚುನಾವಣಾ ಆಯೋಗ ಚುನಾವಣೆಯನ್ನು ನಡೆಸಲಿದೆ. ಬಾಗಲಕೋಟೆ ಶಾಸಕ ಎಚ್.ವೈ.ಮೇಟಿ ಅವರು ನವೆಂ 3, 2025ರಂದು ನಿಧರಾಗಿದ್ದರು, ಹಾಗೂ ದಾವಣಗೆರೆ ಶಾಸಕ ಶಾಮನೂರು ಶಿವಶಂಕರಪ್ಪನವರರು ಡಿಸೆಂಬರ್ ರಂದು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ವಿಧಿವಶರಾಗಿದ್ದಾರೆ. ಉಪ ಚುನಾವಣೆ ಬಗ್ಗೆ ಶೀಘ್ರದಲ್ಲಿ ಗೆಜೆಟ್ ಅನ್ನು ಭಾರತ ಚುನಾವಣಾ ಆಯೋಗ ಹೊರಡಿಸಲಿದೆ ಎನ್ನಲಾಗಿದೆ. ಉಪ ಚುನಾವಣೆ ಸಾಮಾನ್ಯವಾಗಿ ಶಾಸಕರು ಅಥವಾ ಸಂಸದರು ನಿಧರಾಗಿದ್ದ ಸಮಯದಲ್ಲಿ, ಇಲ್ಲವೇ ರಾಜೀನಾಮೆ, ಕ್ರಿಮಿನಲ್ ಪ್ರಕರಣಗಳಲ್ಲಿ ಶಿಕ್ಷೆ ಅಥವಾ ಇತರ ಕಾರಣಗಳಿಂದಾಗಿ ಶಾಸಕರು/ಸಂಸದರನ್ನು ಅನರ್ಹಗೊಳಿಸಿದಾಗ. ಚುನಾವಣೆಗಳಲ್ಲಿ ಅಕ್ರಮಗಳು ನಡೆದಿದೆ ಎಂದು ಸಾಬೀತಾದಾಗ, ಆ ಚುನಾವಣೆಯನ್ನು ರದ್ದುಪಡಿಸಿ ಮತ್ತೆ ಚುನಾವಣೆ ನಡೆಸಲಾಗುತ್ತದೆ. ಸಾರ್ವತ್ರಿಕ ಚುನಾವಣೆಗಳ ನಂತರ ತೆರವಾದ ಸ್ಥಾನಕ್ಕೆ ಹೊಸ ಪ್ರತಿನಿಧಿಯನ್ನು ಆಯ್ಕೆ…
ಹರಿಯಾಣದ ಪಂಚಕುಲದಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ಚಂಡಿಮಂದಿರ ಕಂಟೋನ್ಮೆಂಟ್ ಪ್ರದೇಶದಲ್ಲಿ ಗುತ್ತಿಗೆ ಕೊಲೆಗಾರರನ್ನು ನೇಮಿಸಿಕೊಂಡು ಮಹಿಳೆಯೊಬ್ಬಳು ಬೀದಿ ನಾಯಿಯನ್ನು ಕೊಂದಿದ್ದಾಳೆ ಎಂದು ಆರೋಪಿಸಲಾಗಿದೆ. ಬೀದಿ ನಾಯಿ ಕಳೆದ ಒಂಬತ್ತು ವರ್ಷಗಳಿಂದ ಈ ಪ್ರದೇಶದಲ್ಲಿ ವಾಸಿಸುತ್ತಿತ್ತು ಮತ್ತು ನಿವಾಸಿಗಳು ಅದನ್ನು ಕುಟುಂಬ ಸದಸ್ಯರಂತೆ ಸ್ಥಳದ ಭಾಗವೆಂದು ಪರಿಗಣಿಸಿದ್ದರು. ಡಿಸೆಂಬರ್ 5 ರಂದು, ನಾಯಿಯ ಶವವನ್ನು ಸಮಾಧಿ ಮಾಡುವುದು ಕಂಡುಬಂದಿದೆ. ತನಿಖೆಯ ನಂತರ, ಮಹಿಳೆ ತನ್ನ ಸಾಕು ನಾಯಿಯನ್ನು ಬೊಗಳಿದ್ದರಿಂದ ನಾಯಿಯನ್ನು ಕೊಂದಿದ್ದಾಳೆ ಎಂದು ತಿಳಿದುಬಂದಿದೆ. ಮಹಿಳೆ ಇಬ್ಬರು ವ್ಯಕ್ತಿಗಳನ್ನು ನೇಮಿಸಿಕೊಂಡಿದ್ದಾಳೆ ಎಂದು ವರದಿಯಾಗಿದೆ, ಅವರು ಮೊದಲು ನಾಯಿಯನ್ನು ಅಪಹರಿಸಿದರು ಮತ್ತು ನಂತರ ಅದನ್ನು ಕತ್ತು ಹಿಸುಕಿ ಕೊಂದರು. ಮಹಿಳೆಯನ್ನು ಸೇನಾಧಿಕಾರಿಯ ಪತ್ನಿ ದೇಬ್ಮಿತ್ರಾ ಅಭಿಷೇಕ್ ಪಾಲ್ ಎಂದು ಗುರುತಿಸಲಾಗಿದೆ. ಭಾರತದಲ್ಲಿ ನಾಯಿಯನ್ನು ಕೊಲ್ಲುವುದು ಭಾರತೀಯ ದಂಡ ಸಂಹಿತೆ (ಐಪಿಸಿ) ಅಡಿಯಲ್ಲಿ ಗಂಭೀರ ಅಪರಾಧವಾಗಿದೆ. ಸೆಕ್ಷನ್ 428 ಮತ್ತು 429 ಪ್ರಾಣಿಗಳ ಮೇಲಿನ ಕ್ರೌರ್ಯಕ್ಕೆ ಸಂಬಂಧಿಸಿದ್ದು, ಎರಡು ಅಥವಾ ಐದು ವರ್ಷಗಳವರೆಗೆ ಜೈಲು…
ಮಡಿಕೇರಿ : ಪ್ರವಾಸಿ ಬಸ್ಸೊಂದು ನಡು ರಸ್ತೆಯಲ್ಲೇ ಹೊತ್ತಿ ಉರಿದ ಘಟನೆ ವಿರಾಜಪೇಟೆಯ ಮಾಕುಟ್ಟ ಬಳಿಯ ಮಗಡಿಪಾರೆ ಆಂಜನೇಯ ದೇವಾಲಯದ ಬಳಿ ನಡೆದಿದೆ. ಪ್ರವಾಸಿಗರನ್ನು ಮೈಸೂರಿನಲ್ಲಿ ಇಳಿಸಿ ವಾಪಸ್ ತೆರಳುವಾಗ ಈ ಅವಘಡ ಸಂಭವಿಸಿದೆ. ಬಸ್ನದಲ್ಲಿ ಚಾಲಕ ಮತ್ತು ನಿರ್ವಾಹಕ ಇಬ್ಬರೇ ಇದ್ದರು. ಯಾವುದೇ ಪ್ರಾಣಪಾಯ ಸಂಭವಿಸಿಲ್ಲ ಎನ್ನಲಾಗುತ್ತಿದೆ. ಅಕಸ್ಮಾತ್ ಪ್ರವಾಸಿಗರಿದ್ದಿದ್ದರೆ ಭಾರೀ ಅನಾಹುತ ಸಂಭವಿಸುವ ಸಾಧ್ಯತೆ ಇತ್ತು. ಕೇರಳ ನೋಂದಣಿಯ ಖಾಸಗಿ ಬಸ್ ಎಂದು ತಿಳಿದುಬಂದಿದೆ.ಘಟನಾ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ತೆರಳಿ ಬೆಂಕಿ ನಂದಿಸಿದ್ದಾರೆ. ವಿರಾಜಪೇಟೆ ಗ್ರಾಮಾಂತರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
2025 ರಲ್ಲಿ ಪ್ರಪಂಚದಾದ್ಯಂತದ ಅನೇಕ ಟೆಕ್ ಕಂಪನಿಗಳು ವಜಾಗೊಳಿಸಿದವು, ಇದರ ಪರಿಣಾಮವಾಗಿ 120,000 ಕ್ಕೂ ಹೆಚ್ಚು ಉದ್ಯೋಗಗಳು ನಷ್ಟವಾದವು. ಜಾಗತಿಕ ತಂತ್ರಜ್ಞಾನ ಉದ್ಯಮದಾದ್ಯಂತ ಬೃಹತ್ ಉದ್ಯೋಗಿಗಳ ಕಡಿತದಿಂದ ಇದು ಗುರುತಿಸಲ್ಪಟ್ಟ ವರ್ಷವಾಗಿತ್ತು. ಕಂಪನಿಗಳು ವೆಚ್ಚಗಳನ್ನು ಕಡಿತಗೊಳಿಸಿದವು, ಕೆಲಸದ ಮಾದರಿಗಳನ್ನು ಪುನರ್ರಚಿಸಿದವು ಮತ್ತು ಕೃತಕ ಬುದ್ಧಿಮತ್ತೆಯ ಮೇಲೆ ಕೇಂದ್ರೀಕರಿಸಿದವು. ಚಿಪ್ ತಯಾರಕರಿಂದ ಹಿಡಿದು ಐಟಿ ಸೇವಾ ಸಂಸ್ಥೆಗಳವರೆಗೆ ಮತ್ತು ಕ್ಲೌಡ್ ಮತ್ತು ಟೆಲಿಕಾಂ ಕಂಪನಿಗಳವರೆಗೆ ವಿವಿಧ ಕ್ಷೇತ್ರಗಳಲ್ಲಿ ಪಾತ್ರಗಳನ್ನು ಕಡಿಮೆ ಮಾಡಲಾಯಿತು. ಇಂಟೆಲ್ ಹೆಚ್ಚಿನವರನ್ನು ವಜಾಗೊಳಿಸಿತು ಇಂಟೆಲ್ ಹೆಚ್ಚಿನ ಉದ್ಯೋಗಿಗಳನ್ನು ವಜಾಗೊಳಿಸಿತು. ಸೆಮಿಕಂಡಕ್ಟರ್ ಕಂಪನಿ ಇಂಟೆಲ್ ವೆಚ್ಚಗಳನ್ನು ಕಡಿಮೆ ಮಾಡಲು ಮತ್ತು ಅದರ ಫೌಂಡ್ರಿ-ಕೇಂದ್ರಿತ ವ್ಯವಹಾರ ಮಾದರಿಯನ್ನು ಪರಿವರ್ತಿಸಲು ಸುಮಾರು 24,000 ಜನರನ್ನು ವಜಾಗೊಳಿಸಿತು. ಟಾಟಾ ಕನ್ಸಲ್ಟೆನ್ಸಿ ಸರ್ವೀಸಸ್ (TCS) ನಂತರ, ಸುಮಾರು 20,000 ಸಿಬ್ಬಂದಿಯನ್ನು ವಜಾಗೊಳಿಸಿತು. ಕೌಶಲ್ಯ ಕೊರತೆ ಮತ್ತು AI-ಆಧಾರಿತ ವಿತರಣಾ ಮಾದರಿಗಳ ಹೆಚ್ಚಿದ ಅಳವಡಿಕೆ ಇದಕ್ಕೆ ಕಾರಣಗಳಾಗಿವೆ. ಇದರರ್ಥ ಈ ವರ್ಷ ಈ ಎರಡು ಕಂಪನಿಗಳು ಗಮನಾರ್ಹ ಉದ್ಯೋಗ…
ನವದೆಹಲಿ : ಕಳೆದ ಕೆಲವು ದಿನಗಳಿಂದ ಇಂಡಿಗೋ ವಿಮಾನ ಹರಾಟದಲ್ಲಿ ತೀವ್ರ ಸಮಸ್ಯೆ ಎದುರಾಗಿತ್ತು. ಇದೀಗ ನವದೆಹಲಿಯಲ್ಲಿ ಮತ್ತೆ ಇಂಡಿಗೋ ವಿಮಾನ ಹಾರಾಟದಲ್ಲಿ ಸಮಸ್ಯೆ ಆಗಿದ್ದು, ಹವಾಮಾನ ವೈಪರಿತ್ಯ ಹಿನ್ನೆಲೆಯಲ್ಲಿ ಇಂಡಿಗೋ ವಿಮಾನ ಹಾರಾಟಕ್ಕೆ ತಡವಾಗಿದೆ. ಹಾಗಾಗಿ ದೆಹಲಿಯಲ್ಲಿಯೇ ಕಾಂಗ್ರೆಸ್ ನಾಯಕರು ಲಾಕ್ ಆಗಿದ್ದಾರೆ ಹವಾಮಾನ ವೈಪರೀತ್ಯ ಹಿನ್ನೆಲೆಯಲ್ಲಿ ಇಂಡಿಗೋ ವಿಮಾನ ತಡವಾಗಿದೆ. ಶಾಮನೂರು ಶಿವಶಂಕರಪ್ಪ ಅಂತಿಮ ದರ್ಶನಕ್ಕೆ ನಾಯಕರು ಹೊರಟಿದ್ದರು. ಸುಮಾರು 20 ಕ್ಕೂ ಹೆಚ್ಚು ಶಾಸಕರು ಇಂಡಿಗೋ ವಿಮಾನದಲ್ಲಿ ಲಾಕ್ ಆಗಿದ್ದಾರೆ. ಇಂದು ಬೆಳಿಗ್ಗೆ 6:45 ಕ್ಕೆ ಇಂಡಿಗೋ ವಿಮಾನ ಟೇಕ್ ಆಫ್ ಆಗಬೇಕಾಗಿತ್ತು. ಆದರೆ ಇನ್ನೂ ಆಗಿಲ್ಲ. ವಿಮಾನದಲ್ಲಿ ಕೋನರೆಡ್ಡಿ, ಬಸನಗೌಡ ಬಾದರ್ಲಿ, ಆನಂದ್ ಗಡದೇವರಮಠ, ಹೆಚ್ಕೆ ಪಾಟೀಲ್, ಲಕ್ಷ್ಮೀ ಹೆಬಾಳ್ಕರ್, ಶರಣ ಪ್ರಕಾಶ್ ಪಾಟೀಲ್, ರಾಜು ಗೌಡ, ಸಲೀಂ ಅಹಮದ್, ತನ್ವೀರ್ ಸೇಠ್, ಸತೀಶ್ ಜಾರಕಿಹೊಳಿ, ಜಿ ಎಸ್ ಪಾಟೀಲ್, ಮಾಲೀಕಯ್ಯ ಗುತ್ತೇದಾರ್, ಈಶ್ವರ್ ಖಂಡ್ರೆ, ಜೆ ಟಿ ಪಾಟೀಲ್, ತಿಪ್ಪಣ್ಣ ಕಾಮಕನೂರ್, ನಾಗೇಂದ್ರ, ಎಂ…
ಬೆಂಗಳೂರು: ಕಾಂಗ್ರೆಸ್ ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪ(94) ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದು, ದಾವಣಗೆರೆಯಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಶಾಮನೂರು ಶಿವಶಂಕರಪ್ಪ, ಮಾನ್ಯ ಶಾಸಕರು ಹಾಗೂ ಮಾಜಿ ಸಚಿವರು,, ಇವರು ದಿನಾಂಕ:14.12.2025ರಂದು ನಿಧನರಾಗಿರುತ್ತಾರೆ. ಸದರಿಯವರ ನಿಧನಕ್ಕೆ ಸರ್ಕಾರವು ತೀವ್ರ ಸಂತಾಪವನ್ನು ವ್ಯಕ್ತಪಡಿಸುತ್ತದೆ. ಮೃತರ ಗೌರವಾರ್ಥ ಅಂತ್ಯಕ್ರಿಯೆಯನ್ನು ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲು ಆದೇಶಿಸಿದೆ. ಮಧ್ಯಾಹ್ನ 12.30ಕ್ಕೆ ಪಿ.ಜೆ.ಬಡಾವಣೆಯಲ್ಲಿರುವ ಹೈಸ್ಕೂಲ್ ಮೈದಾನಕ್ಕೆ ಶಾಮನೂರು ಶಿವಶಂಕರಪ್ಪ ಪಾರ್ಥಿವ ಶರೀರ ಶಿಫ್ಟ್ ಮಾಡಲಾಗುತ್ತದೆ. ಬಳಿಕ ಸಂಜೆ 4.30ರ ವರೆಗೆ ಸಾರ್ವಜನಿಕರಿಗೆ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಶಾಮನೂರು ಶಿವಶಂಕರಪ್ಪ ನಿಧನ ಹಿನ್ನಲೆ: ಇಂದು ಎಲ್ಲಾ ಶಾಲೆ – ಕಾಲೇಜುಗಳಿಗೆ ರಜೆ ಘೋಷಣೆ.! ಕಾಂಗ್ರೆಸ್ ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪ ನಿಧನ ಹಿನ್ನಲೆಯಲ್ಲಿ ದಾವಣಗೆರೆ ಜಿಲ್ಲೆಯಾದ್ಯಂತ ಶಾಲಾ ಕಾಲೇಜುಗಳಿಗೆ ಸೋಮವಾರ ರಜೆ ಘೋಷಣೆ ಮಾಡಲಾಗಿದೆ.ದಾವಣಗೆರೆ ವಿವಿಯ ಎಲ್ಲಾ ಪರೀಕ್ಷೆಗಳನ್ನು ಮುಂದೂಡಿಕೆ ಮಾಡಲಾಗಿದೆ. ದಾವಣಗೆರೆ ವಿಶ್ವ ವಿದ್ಯಾಲಯಕ್ಕೆ ರಜೆಯನ್ನು ಘೋಷಣೆ…














